ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಜನೋತ್ಸವಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು
ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಲಿದೆ
ಬಿಜೆಪಿ ಸರ್ಕಾರದ ೩ ವರ್ಷ ಹಾಗೂ ಬೊಮ್ಮಾಯಿ ಸರ್ಕಾರದ ಸರ್ಕಾರದ ಒಂದು ವರ್ಷದ ಸಾಧನೆಯನ್ನು ಜನರ ಮುಂದೆ ಇರಿಸಿ ಸಾಧನೆಗಳನ್ನು ಬಿಂಬಿಸುವ ಕಾರ್ಯಕ್ರಮ ಜನೋತ್ಸವ
ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿಯಾಗಿತ್ತು
ಆದರೆ ಕಾರಣಾಂತರಗಳಿಂದ ಆ ಜನೋತ್ಸವವನ್ನು ರದ್ದುಪಡಿಸಲಾಗಿತ್ತು
ಆಗಸ್ಟ್ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿಯಾಗಿದೆ
ಈ ಜನೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮುಖಂಡರನ್ನು ಆಹ್ವಾನಿಸುವ ಉದ್ದೇಶವಿದೆ
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳ ಬಿಜೆಪಿ ಮುಖಂಡರು ಶಾಸಕರು ಮಾಜಿ ಶಾಸಕರು ಭಾಗವಹಿಸಿದ್ದರು
ಸಚಿವರಾದ ಆರ್ ಅಶೋಕ್, ಮುನಿರತ್ನ ,ಎಸ್ ಟಿ ಸೋಮಶೇಖರ್ , ಡಾ.ಕೆ ಸುಧಾಕರ್, ಬೈರತಿ ಬಸವರಾಜ್, ಶಾಸಕ ಮಸಾಲೆ ಜಯರಾಮ್, ಮಾಜಿ ಶಾಸಕ ಸಂಪಂಗಿ , ಮಂಜುನಾಥಗೌಡ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು
Post a Comment