ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮುಖ್ಯಮಂತ್ರಿ ಕರೆ
ಬೆಂಗಳೂರು, ಆಗಸ್ಟ್ 30- ನಾಡಿನ ಸಮಸ್ತ ಜನತೆಗೆ ಗೌರಿ ಹಾಗೂ ಗಣೇಶ ಹಬ್ಬದ ಶುಭಾಶಯ ಕೋರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಕರೆ ನೀಡಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪನ ಬದಲಿಗೆ ಮಣ್ಣಿನ ಗಣೇಶ ಪ್ರತಿಷ್ಠಾಪಿಸುವ ಮೂಲಕ ಪರಿಸರ ಕಾಳಜಿ ಮೆರೆಯುವಂತೆ ಹಾಗೂ ಗಣೇಶ ವಿಸರ್ಜನೆಗೆ ನಗರ ಸ್ಥಳೀಯ ಸಂಸ್ಥೆಗಳು ನಿಗದಿ ಪಡಿಸಿದ ಸ್ಥಳದಲ್ಲಿಯೇ ವಿಸರ್ಜಿಸುವ ಮೂಲಕ ಸಹಕರಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ವಿಘ್ನ ನಿವಾರಕ ಗಣೇಶನು ನಮ್ಮೆಲ್ಲರ ಬಾಳಿನಲ್ಲಿ ಸಂಕಷ್ಟಗಳನ್ನು ನಿವಾರಿಸಿ ಶಾಂತಿ ನೆಮ್ಮದಿ ತರಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ.
Post a Comment