ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು 17.08.2022ರಂದು ಬುಧವಾರ ರಾತ್ರಿ 10.50 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವರು. ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಇರುವರು.
18.08.2022ರಂದು ಬೆಳಿಗ್ಗೆ ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ಬಳಿಕ ರಾತ್ರಿ ಅವರು ದೆಹಲಿಗೆ ಹಿಂತಿರುಗಲಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
[17/08, 12:37 PM] Bjp Media: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್, ರಾಜ್ಯದ ಮಾಜಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ ಮತ್ತು ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಪ್ರೇಮ್ ಸಿಂಗ್ ಅವರ ಆರೋಗ್ಯವನ್ನು ವಿಚಾರಿಸಿದರು.
[17/08, 2:51 PM] Bjp Media: ಪತ್ರಿಕಾ ಪ್ರಕಟಣೆ
ನಮ್ಮ ಹಿರಿಯ ನಾಯಕ, ಅಪ್ರತಿಮ ಸಂಘಟಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ ಪಕ್ಷವನ್ನು ಚುನಾವಣೆಗೆ ಸಿದ್ಧಪಡಿಸುವ ಮಹತ್ಕಾರ್ಯ ಶ್ರೀ ಯಡಿಯೂರಪ್ಪನಂಥ ಧುರೀಣರ ಹೆಗಲಿಗೇರಿರುವುದು ರಾಜ್ಯದ ಲಕ್ಷಾಂತರ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ. ಶ್ರಮವರಿಯದ ಸೇನಾನಿಯಾಗಿ ಪಕ್ಷಕ್ಕಾಗಿ ಅಂದಿಗೂ-ಇಂದಿಗೂ ಸೇವೆ ಸಲ್ಲಿಸುತ್ತಿರುವ ಶ್ರೀ ಯಡಿಯೂರಪ್ಪನವರ ನಾಯಕತ್ವ ಗುಣ ಹಾಗೂ ಅನುಭವ ಪಕ್ಷದ ಪಾಲಿಗೆ ಅತಿದೊಡ್ಡ ಶಕ್ತಿಯಾಗಿ ಪರಿಣಮಿಸಲಿದೆ. ಸಂಸದೀಯ ಮಂಡಳಿಗೆ ಶ್ರೀ ಬಿ. ಎಸ್. ಯಡಿಯೂರಪ್ಪ ಹಾಗೂ ಶ್ರೀ ಬಿ. ಎಲ್. ಸಂತೋಷ್ ನೇಮಕವಾಗಿರುವ ವಿಚಾರ ವಯಕ್ತಿಕವಾಗಿ ನನಗೆ ಅತ್ಯಂತ ಖುಷಿ ನೀಡಿದ್ದು ಅವರಿಂದ ಮಾರ್ಗದರ್ಶನ ಪಡೆಯಲು ಉತ್ಸುಕನಾಗಿ ಎದುರು ನೋಡುತ್ತಿದ್ದೇನೆ.
- ಸಿ.ಟಿ. ರವಿ
ಶಾಸಕರು ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ.
17-8-2022
ಪ್ರಕಟಣೆಯ ಕೃಪೆಗಾಗಿ
ಯಡಿಯೂರಪ್ಪರಿಗೆ ಡಾ.ಎನ್. ಆರ್.ರಮೇಶ್ ಅಭಿನಂದನೆ, ಕೇಂದ್ರ ನಾಯಕರಿಗೆ ಧನ್ಯವಾದ
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಸಂಘಟನಾ ಚತುರರು ಹಾಗೂ ಹಿರಿಯ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಹಾಗೂ ಚುನಾವಣಾ ಮಂಡಳಿಯಲ್ಲಿ ಸ್ಥಾನ ನೀಡಿರುವುದು ಅತ್ಯಂತ ಸಂತಸವನ್ನುಂಟು ಮಾಡಿದೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಡಾ. ಎನ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
ಮಾನ್ಯ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷವು ಇನ್ನಷ್ಟು ಹೆಚ್ಚು ಸ್ಥಾನಗಳನ್ನು ಮುಂದಿನ ಚುನಾವಣೆಯಲ್ಲಿ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಅವರಿಗೆ ಈ ಪ್ರಮುಖ ಜವಾಬ್ದಾರಿಯನ್ನು ನೀಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ, ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ, ಹಿಂದಿನ ರಾಷ್ಟ್ರೀಯ ಅಧ್ಯಕ್ಷರು ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ಅವರು ತಿಳಿಸಿದ್ದಾರೆ.
ಟಿ.ಎಸ್.ಸುಬ್ರಮಣ್ಯ
ಮಾಧ್ಯಮ ಸಂಚಾಲಕರು
ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ
Post a Comment