[29/08, 11:59 AM] Deepak Karade. CM. Media. office: *ಬೆಂಗಳೂರು* , * *ಆಗಸ್ಟ್. 29 ಮಾನ್ಯ -ಮುಖ್ಯಮಂತ್ರಿ ಶ್ರೀ *ಬಸವರಾಜ*** *ಬೊಮ್ಮಾಯಿ ಅವರು ಇಂದು * ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ* ಕಾವೇರಿ ನಿವಾಸದಲ್ಲಿ ಮಾಧ್ಯಮದವರಿಗೆ* ಪ್ರತಿಕ್ರಿಯೆ ನೀಡಿದರು.
[29/08, 12:50 PM] Deepak Karade. CM. Media. office: ಬೆಂಗಳೂರು, ಆಗಸ್ಟ್ 29: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್ ಗೆ ಚಾಲನೆ ನೀಡಿದರು. ಹಾಗೂ 2020 ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ , ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22 ನೆ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ ಹಾಗೂ ಒಲಂಪಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಾಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[29/08, 12:53 PM] Deepak Karade. CM. Media. office: *ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆಗಳಲ್ಲಿ ರ್ಯಾಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಆಗಸ್ಟ್ 29: ಬಿಜೆಪಿ ರ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು , ಆರು ಕಡೆ ದೊಡ್ಡ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ಮಾಜಿ.ಮುಖ್ಯ ಮಂತ್ರಿ ಬಿ.ಎಆ.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯ ಬಗ್ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದಿಲ್ಲಿಗೆ ಹೋಗಿ ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ. ನಮ್ಮ ಪ್ರಧಾನಮಂತ್ರಿ ಗಳು ಸೆಪ್ಟೆಂಬರ್ 02 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ವಾಗಿ ಚರ್ಚೆ ಮಾಡಿದ್ದೇವೆ. ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಅವರು ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆಯಾಗಿದೆ. ಬರುವ ದಿನಗಳಲ್ಲಿ ಇನ್ನೊಂದು ಸಭೆಯನ್ನು ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಣಯವಾಗಿದೆ. ಸೆಪ್ಟೆಂಬರ್ 08 ರಂದು ದೊಡ್ಡ ಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದನ್ನು ಯಶಸ್ವಿ ಮಾಡಲು ಕೆಲವು ಸೂಚನೆ ಗಳನ್ನು ನೀಡಿದ್ದಾರೆ. ಅದನ್ನು ಕಾರ್ಯಗತ ಮಾಡಲು ಸಂಘಟಕರಿಗೆ ತಿಳಿಸಲಾಗಿದೆ.ಸಚಿವ ಡಾ: ಸುಧಾಕರ್, ಶಾಸಕರು, ಪದಾಧಿಕಾರಿಗಳು ಎಲ್ಲರೂ ಸೇರಿ ಜನೋತ್ಸವ ಯಶಸ್ವಿ ಮಾಡುತ್ತೇವೆ ಎಂದರು.
[29/08, 2:44 PM] Deepak Karade. CM. Media. office: *ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿಗೆ ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು,ಆಗಸ್ಟ್ 29 :
ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್* ಗೆ ಚಾಲನೆ ನೀಡಿ 2020 ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ , ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22 ನೆ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಂಪಿಕ್ಸ್‍ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರ್ಕಾರದ ಗುರಿಯಾಗಿದೆ. ಗ್ರಾಮೀಣ ಮಟ್ಟದಲ್ಲಿಯೂ ಕ್ರೀಡಾ ಸಾಧನೆಗಳಾಗಬೇಕು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ. ಕಬ್ಬಡಿ, ಕೋಕೋ, ಕಂಬಳ, ಎತ್ತಿನಗಾಡಿ ಸ್ಪರ್ಧೇ, ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತದೆ. ಗ್ರಾಮಪಂಚಾಯತಿ, ತಾಲ್ಲೂಕು,ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದರು.
*ಸ್ವಯಂಉದ್ಯೋಗದಿಂದ ಇತರರಿಗೆ ಉದ್ಯೋಗ -ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ :*
ಯುವಜನ ಸಬಲೀಕರಣಕ್ಕಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಬಹಳ ಮುಖ್ಯ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಆಗಸ್ಟ್ 15ಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ಗ್ರಾಮದಲ್ಲಿ 30 ಜನರ ಯುವಜನರ ಸಂಘವನ್ನು ಗುರುತಿಸಿ, 7.5 ಲಕ್ಷದಿಂದ 10 ಲಕ್ಷದವರೆಗೆ ಯೋಜನೆಗಳನ್ನು ನೀಡಿ, ಸಂಘಕ್ಕೆ 1.5 ಲಕ್ಷದ ಅನುದಾನವನ್ನು ಸರ್ಕಾರವೇ ಭರಿಸಿ, ಉತ್ಪನ್ನಗಳ ತಯಾರಿಕೆಗೆ ತರಬೇತಿ, ತಯಾರಿಕೆ ಹಾಗೂ ಮಾರುಕಟ್ಟೆ ಜೋಡಣೆಯನ್ನು ಕಲ್ಪಿಸುವ ಯೋಜನೆಯಾಗಿದೆ. ಸ್ವಯಂಉದ್ಯೋಗ ಮಾಡಿ ಇತರರಿಗೆ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಿಂದ ಒಂದು ವರ್ಷಕ್ಕೆ ಸುಮಾರು 5 ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಸಿದಂತಾಗುತ್ತದೆ. ಇದು ವಿನೂತನವಾದ ಯೋಜನೆ. ಆರ್ಥಿಕವಾಗಿ, ಸಾಮಾಜಿಕವಾಗಿ ಯುವಕರ ಸಾಮಥ್ರ್ಯವನ್ನು ಹೆಚ್ಚಿಸುವಂತಹ ಕೆಲಸವನ್ನು ಸರ್ಕಾರ ನಿರಂತರವಾಗಿ ಮಾಡುತ್ತದೆ ಎಂದರು.
*ಕ್ರೀಡಾ ಕರ್ನಾಟಕವನ್ನಾಗಿಸುವ ಸರ್ಕಾರದ ಗುರಿ:*
ಕರಾವಳಿಯ ಕಂಬಳ, ಉತ್ತರ ಕರ್ನಾಟಕದ ಚಕ್ಕಡಿ ಹೊಡೆಯುವ ಸ್ಪರ್ಧೆ, ಕುಸ್ತಿ, ಸೈಕಲ್, ಮೋಟರ್ ಸೈಕಲ್, ಕಾರ್ ರ್ಯಾಲಿಗಳು, ಗಾಲ್ಫ್, ವಾಲಿಬಾಲ್ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಕನ್ನಡದ ಯುವಕರು ಯಶಸ್ಸಿನ ಉತ್ತುಂಗಕ್ಕೆ ಏರಬೇಕು. ಸೀನಿಯರ್ ಒಲಂಪಿಕ್ಸ್ ಏರ್ಪಡಿಸಲು ರಾಜ್ಯ ಸರ್ಕಾರ 8 ಕೋಟಿ ರೂಗಳನ್ನು ನೀಡಿದೆ. ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಗುರಿ ರಾಜ್ಯ ಸರ್ಕಾರಕ್ಕಿದೆ. ಕ್ರೀಡೆಯ ತರಬೇತುದಾರರಿಗೆ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದರು.
*ಭಾರತದ ಭವಿಷ್ಯ ಯುವಜನತೆಯ ಮೇಲಿದೆ :*
ಧ್ಯಾನ್‍ಚಂದ್ ಅವರು ಒಲಂಪಿಕ್ಸ್ ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದು, ಭಾರತಕ್ಕೆ ಕೀರ್ತಿ ತಂದವರು. ಹಾಕಿಯ ಜಾದೂಗಾರರಾಗಿದ್ದ ಅವರು ಹಾಕಿಯನ್ನು ಅಗ್ರಮಾನ್ಯ ಸ್ಥಾನಕ್ಕೆ ತಂದವರು. ಧ್ಯಾನ್ ಚಂದ್ ಅವರ ಹೆಸರಿನಲ್ಲಿ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ನೀಡಲಾಗುವ ಏಕ¯ವ್ಯ ಪ್ರಶಸ್ತಿ , ಕ್ರೀಡಾರತ್ನ ಪ್ರಶಸ್ತಿ, ನಗದು ಪ್ರಶಸ್ತಿ ನೀಡಲಾಗುತ್ತಿದೆ. ಕ್ರೀಡಾಕ್ಷೇತ್ರದಲ್ಲಿನ ತಮ್ಮ ಶ್ರಮ, ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ನಿಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಭಾರತದಲ್ಲಿ ಶೇ. 46 ರಷ್ಟು ಜನಸಂಖ್ಯೆ ಯುವಜನರಿದ್ದಾರೆ. ಮುಂದಿನ 25 ವರ್ಷಗಳು ಭಾರತದ ಭವಿಷ್ಯ ಈ ಯುವಜನತೆಯ ಮೇಲಿದೆ ಎಂದು ತಿಳಿಸಿದರು.
*ಯಶ ಸಾಧಿಸಲು ಧೃಡ ನಿಶ್ಚಯ ಬೇಕು :*
ಯುವಕರಲ್ಲಿ ಶಿಸ್ತು, ವ್ಯಕ್ತಿತ್ವದಿಂದ ಯಶಸ್ಸು ಬರುತ್ತದೆ. ಕಠಿಣ ಪರಿಶ್ರಮಗಳಿಂದ ಹೆಚ್ಚಿನ ಗುರಿಗಳನ್ನು ಸಾಧಿಸುತ್ತಿರಬೇಕು. ಗೆಲ್ಲಬೇಕೆಂದು ಆಡಬೇಕೇ ಹೊರತು ಸೋಲಬಾರದು ಎಂದು ಆಟವಾಡಬಾರದು. ಗೆಲ್ಲಬೇಕೆಂಬ ಹುರುಪಿನಿಂದ ಸಕಾರಾತ್ಮಕವಾಗಿ ಆಡಬೇಕು ಆತ್ಮವಿಶ್ವಾಸದಿಂದ ನಿಮ್ಮ ಮೇಲೆ ನಂಬಿಕೆಯಿರಿಸಿ. ಯುವಕರು ಸಾಧನೆಗಳನ್ನು ಮಾಡಿದಾಗ ಹುರಿದುಂಬಿಸಿದರೆ, ಇನ್ನಷ್ಟು ಸಾಧನೆಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ. ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್, ಹಿಮಾಲಯದ ತಪ್ಪಲಿನಲ್ಲಿ ಕುರಿ ಕಾಯುವವರ ಜನಾಂಗದಲ್ಲಿ ಕುರಿ ಕಾಯುತ್ತಿದ್ದ ಸಣ್ಣ ಹುಡುಗ ತೇನ್ ಸಿಂಗ್, ತನ್ನ 42ನೇ ವಯಸ್ಸಿನಲ್ಲಿ ಮೌಂಟ್ ಎವರೆಸ್ಟ್ ನ್ನು ಹತ್ತಿ ಭಾರತದ ಧ್ವಜವನ್ನು ನೆಟ್ಟ ಕೀರ್ತಿ ಅವರದು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಂಕಲ್ಪವನ್ನು ಯಶಸ್ವಿಯಾಗಿ ಸಾಕಾರಗೊಳಿಸಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಯಶ ಸಾಧಿಸಲು ಮೊದಲು ಧೃಡ ನಿಶ್ಚಯ, ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ಯುವಕರಿಗೆ ಕಿವಿಮಾತು ಹೇಳಿದರು.
[29/08, 3:02 PM] Deepak Karade. CM. Media. office: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮನಗರ ಹಾಗೂ ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ಸಚಿವ ಆರ್. ಅಶೋಕ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಶಾಸಕ ಹೆಚ್. ಡಿ. ಕುಮಾರಸ್ವಾಮಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಜೊತೆಗಿದ್ದರು.
[29/08, 3:10 PM] Deepak Karade. CM. Media. office: *ರಾಮನಗರ ಪ್ರವಾಹ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಭೇಟಿ*
ರಾಮನಗರ, ಆಗಸ್ಟ್ 29-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮನಗರ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರಾಮನಗರ ಮಾರುತಿ ಬಡಾವಣೆಯಲ್ಲಿ ಭಕ್ಷಿ ಕೆರೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವುದನ್ನು ಪರಿಶೀಲಿಸಿದರು. ನಂತರ ನೇರವಾಗಿ ಸುಮಾರು ಅರ್ಧ ಕಿ.ಮೀ. ಮುಖ್ಯಮಂತ್ರಿಗಳು ರೈಲ್ವೆ ಟ್ರ್ಯಾಕ್ ಮೇಲೆ ಕಾಲ್ನಡಿಗೆಯಲ್ಲಿ ಹೋದರು. ಭಕ್ಷಿ ಕೆರೆ ಒಡೆದಿರುವ ಜಾಗದಿಂದ ರೈತರ ಮನೆಗೆ ಭೇಟಿ ಕೊಟ್ಟು ಪರಿಹಾರ ನೀಡುವ ಭರವಸೆ ನೀಡಿದರು.
ಬಿದ್ದಿರುವ ಮನೆಗಳಿಗೆ ತಕ್ಷಣ 1 ಲಕ್ಷ ರೂ. ಹಾಗೂ ಒಟ್ಟಾರೆ 5 ಲಕ್ಷ ರೂ. ಪರಿಹಾರವನ್ನು ಹಂತ ಹಂತವಾಗಿ ನೀಡಲಾಗುವುದು ಎಂದು ತಿಳಿಸಿದರು.
ಸ್ಥಳದಲ್ಲಿಯೇ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಭಕ್ಷಿ ಕೆರೆಯನ್ನು ದುರಸ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಂದಾಯ ಸಚಿವ ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು.
[29/08, 3:24 PM] Deepak Karade. CM. Media. office: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮನಗರ ಹಾಗೂ ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ಸಚಿವ ಆರ್. ಅಶೋಕ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಶಾಸಕ ಹೆಚ್. ಡಿ. ಕುಮಾರಸ್ವಾಮಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಜೊತೆಗಿದ್ದರು.
[29/08, 4:02 PM] Deepak Karade. CM. Media. office: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮನಗರದ ಭಕ್ಷಿ ಕೆರೆ ಒಡೆದು ಪ್ರವಾಹ ಪೀಡಿತ ಸಂತ್ರಸ್ತರನ್ನು ಭೇಟಿಯಾಗಿ ಅವರ ಸಂಕಷ್ಟಗಳನ್ನು ಆಲಿಸಿದರು. ಸಚಿವರಾದ ಆರ್. ಅಶೋಕ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಇತರರು ಜೊತೆಗಿದ್ದರು.
[29/08, 4:06 PM] Deepak Karade. CM. Media. office: ರಾಮನಗರ, ಆಗಸ್ಟ್ 29: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭಕ್ಷಿ ಹಾಗೂ ಕ್ಷೇತ್ರಹಳ್ಳಿ ಕೆರೆಗಳು ಒಡೆದು ಹುಣಸನಹಳ್ಳಿ ರಸ್ತೆಯಲ್ಲಿನ ತೀವ್ರವಾಗಿ ಹಾನಿಗೊಳಗಾಗಿರುವ ನೂರಾರು ಮನೆಗಳ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಕೂಡಲೇ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೀರು ನುಗ್ಗಿ ರೇಷ್ಮೆ ನೂಲು ತೆಗೆಯುವ ಘಟಕಗಳಿಗೆ ಹಾನಿಯಾಗಿದ್ದು, ಅಲ್ಲಿಗೂ ಭೇಟಿ ನೀಡಿದ ಮುಖ್ಯಮಂತ್ರಿಗಳು ಹಾನಿಯಾಗಿರುವ ಯಂತ್ರಗಳನ್ನು ಪರಿಶೀಲಿದರು.
ಈ ಸಂದರ್ಭದಲ್ಲಿ ಸಚಿವ ಆರ್. ಅಶೋಕ್, ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್, ಸಂಸದ ಡಿ.ಕೆ.ಸುರೇಶ್ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
--
[29/08, 7:30 PM] Deepak Karade. CM. Media. office: *ರಾಮನಗರ* : ಆಗಸ್ಟ್ 29: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ್ ಬೊಮ್ಮಾಯಿ* ಅವರು *ರಾಮನಗರ ಹಾಗೂ* *ಚನ್ನಪಟ್ಟಣ ತಾಲ್ಲೂಕುಗಳ* *ಪ್ರವಾಹ ಪೀಡಿತ ಪ್ರದೇಶಗಳ* ವೀಕ್ಷಣೆ ನಡೆಸಿ *ಬೆಳೆ *ಹಾನಿ* *ಯನ್ನು* ಪರಿಶೀಲಿಸಿ ನಂತರ* *ಕಾಮತ್ ಯಾತ್ರಿನಿವಾಸ* ಇಲ್ಲಿ *ಪತ್ರಿಕಾ ಗೋಷ್ಠಿ ನಡೆಸಿದರು* .
[29/08, 8:16 PM] Deepak Karade. CM. Media. office: ಹಿರಿಯ ನಟಿ ಲೀಲಾವತಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
[29/08, 8:19 PM] Deepak Karade. CM. Media. office: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಸಭೆ ಜರುಗಿತು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಪೌರಾಡಳಿತ ಇಲಾಖೆ ಸಚಿವ ಎಂ.ಟಿ. ಬಿ.ನಾಗರಾಜ್, ಶಾಸಕ ವೀರಣ್ಣ ಚರಂತಿಮಠ, ಬಾಗಲಕೋಟೆ ಜಿಲ್ಲಾಧಿಕಾರಿ. ಪಿ.ಸುನೀಲ್ ಕುಮಾರ್, ಗದಗ ಜಿಲ್ಲಾಧಿಕಾರಿ ವೈಶಾಲಿ, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಮೊದಲಾದವರು ಉಪಸ್ಥಿತರಿದ್ದರು.
[29/08, 8:22 PM] Deepak Karade. CM. Media. office: *ಹತ್ತು ದಿನದೊಳಗೆ ಜುಲೈ ಮತ್ತು ಆಗಸ್ಟ್ ಮೊದಲನೇ ವಾರದ ಬೆಳೆ ನಾಶಕ್ಕೆ ಪರಿಹಾರ ಪಾವತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ರಾಮನಗರ, ಆಗಸ್ಟ್ 29:
ಜುಲೈ ತಿಂಗಳು ಮತ್ತು ಆಗಸ್ಟ್ ಮೊದಲನೇ ವಾರದಲ್ಲಿ ಆದ ಬೆಳೆ ನಾಶದ ಪರಿಹಾರ ಪಾವತಿಗೆ ಕಂದಾಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇನ್ನು ಹತ್ತು ದಿನಗಳೊಳಗೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಮನಗರ ಮತ್ತು ಚೆನ್ನಪಟ್ಟಣ ತಾಲ್ಲೂಕುಗಳ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿ ಪತ್ರಿಕಾ ಗೋಷ್ಟಿ ನಡೆಸಿದರು.
ಬೆಳೆನಾಶದ ಬಗ್ಗೆ ಕೂಡಲೇ ಜಂಟಿ ಸರ್ವೆ, ದಾಖಲೆಗಳನ್ನು ಅಪಲೋಡ್ ಮಾಡಲಾಗುತ್ತಿದೆ. ಕಳೆದ 3 ದಿನದಿಂದ ಆಗಿರುವ ಹಾನಿಯ ವರದಿ ಸಲ್ಲಿಸಲು ತಿಳಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರದ ಎರಡುಪಟ್ಟು ಹೆಚ್ಚಿಸಿ ಬೆಳೆ ಪರಿಹಾರವನ್ನು ನೀಡಲಾಗುತ್ತಿದೆ. ಒಣಬೇಸಾಯಕ್ಕೆ 13,600 ರೂ., ತೋಟಗಾರಿಕೆ ಬೆಳೆಗೆ 28,000 ರೂ. , ನೀರಾವರಿಗೆ 25, 000 ರೂ. ಪರಿಹಾರ ನೀಡಲಾಗುತ್ತಿದೆ. ಕಳೆದ ಬಾರಿ ನಾಶವಾದ 14 ಲಕ್ಷ ಎಕರೆ ನಾಶಕ್ಕೆ 1100 ಕೋಟಿಗೂ ಹೆಚ್ಚುವರಿ ಪರಿಹಾರವನ್ನು ಕೇವಲ ಒಂದೂವರೆ ತಿಂಗಳಲ್ಲಿ ವಿತರಣೆ ಮಾಡಲಾಗಿದೆ. ಈ ಬಾರಿಯೂ ಒಂದೂವರೆ ತಿಂಗಳಲ್ಲಿ ಬೆಳೆ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.
*ವಿಶೇಷ ಪ್ರಕರಣವೆಂದು ಪರಿಗಣಿಸಿ ರೇಷ್ಮೆ ಬೆಳೆ ನಾಶಕ್ಕೆ ಪರಿಹಾರ :*
ರಾಮನಗರ ಟೌನ್ ನಲ್ಲಿ ಮನೆ ವಸ್ತುಗಳು ನಷ್ಟವಾಗಿರುವ ಜೊತೆಗೆ ರೇಷ್ಮೆ ರೀಲಿಂಗ್ ಕಾರ್ಖಾನೆ, ರೇಷ್ಮೆ ದಾಸ್ತಾನು ನಾಶವಾಗಿದ್ದು, ಸರ್ವೇ ಮಾಡಲು ಸೂಚಿಸಲಾಗಿದೆ. ಸರ್ವೇ ವರದಿ ಬಂದ ನಂತರ ಎನ್ ಡಿ ಆರ್ ಎಫ್ ಮಾರ್ಗಸೂಚಿಯಲ್ಲಿ ಇಲ್ಲವಾದ ಕಾರಣ ವಿಶೇಷ ಪ್ರಕರಣ ಎಂದು ಪರಿಗಣಿಸಿ ಈ ನಷ್ಟವನ್ನು ಭರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
*ಬೆಂಗಳೂರು- ಮೈಸೂರು ರಸ್ತೆ ಬದಲಿಗೆ ಪರ್ಯಾಯ ಸಂಚಾರ ವ್ಯವಸ್ಥೆ:*
ಕಳೆದ ಮೂರು ದಿನಗಳಿಂದ ಅತಿಹೆಚ್ಚುಮಳೆಯಾಗಿ ರಾಜ್ಯದ 16 ಜಿಲ್ಲೆಗಳಲ್ಲಿ ಪ್ರವಾಹ, ಮನೆಗಳಿಗೆ ಹಾನಿ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿ ತೊಂದರೆಯಾಗಿದೆ. ಈ ಬಗ್ಗೆ ನಿನ್ನೆಯೇ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ವಿಶೇಷವಾಗಿ ಬೆಂಗಳೂರು- ಮೈಸೂರು ರಸ್ತೆಯಲ್ಲಿ ನೀರು ನಿಂತಿದ್ದು, ಜಮೀನು, ಮನೆಗಳಗೆ ನೀರು ಹರಿಸಿದೆ. ಮೈಸೂರು, ಮಂಡ್ಯ, ರಾಮನಗರದ ಪರ್ಯಾಯ ಸಂಚಾರ ವ್ಯವಸ್ಥೆಯ ಬಗ್ಗೆ ಕ್ರಮವಹಿಸಲು ಈ ಜಿಲ್ಲೆಗಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
*ನೀರು ನುಗ್ಗಿರುವ ಮನೆಗಳಿಗೆ ಪರಿಹಾರ:*
ಬೇರೆ ಬೇರೆ ಜಿಲ್ಲೆಗಳಲ್ಲಿ ಹಾನಿಯಾಗಿರುವ ಮನೆಗಳಿಗೆ 10 ಸಾವಿರ ರೂ.ಗಳನ್ನು ನೀಡಲು ಆದೇಶ ಮಾಡಲಾಗಿದೆ. ಮನೆ ಹಾನಿಯಾಗಿರುವ ಪ್ರಮಾಣವನ್ನು ಎ, ಬಿ, ಸಿ ಎಂದು ವರ್ಗೀಕರಿಸಿ ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ, ಭಾಗಶಃ ಬಿದ್ದ ಮನೆಗಳಿಗೆ 3 ಲಕ್ಷ, ಸ್ವಲ್ಪ ಹಾನಿಯಾಗಿರುವ ಮನೆಗಳಿಗೆ 50,000 ರೂ.ಗಳನ್ನು ಕೇಂದ್ರಸರ್ಕಾರದ ಮಾರ್ಗಸೂಚಿಯಂತೆ ನೀಡಲಾಗುತ್ತಿದೆ ಎಂದರು.
*ಬೆಳೆನಾಶಕ್ಕೆ ಸರ್ವೆ :*
ರಾಮನಗರ ಜಿಲ್ಲೆ, ಚೆನ್ನಪಟ್ಟಣ, ಮಾಗಡಿಯಲ್ಲಿ ಕೆಲವು ಸೇತುವೆಗಳು ನಷ್ಟವಾಗಿವೆ. ರಾಮನಗರದಲ್ಲಿ
ದೊಡ್ಡ ಕೆರೆ ಒಡೆದು ಊರಿಗೆ ನೀರು ಹರಿದು,ಮನೆಗಳಿಗೆ ನಷ್ಟವಾಗಿದೆ. ಸುಮಾರು ಒಟ್ಟು ಭಾಗಶ: ನಾಶ 2222 ಮನೆಗಳು, ರಾಮನಗರ ನಗರ ಟೌನ್ ನಲ್ಲಿ 133 ಮನೆಗಳು, ಮನೆಗಳಿಗೆ ನೀರು ನುಗ್ಗಿರುವ ಪ್ರಕರಣಗಳು 3863 ಮನೆಗಳು, ಪ್ರಾಣಹಾನಿ ರಾಮನಗರ ಹಾಗೂ ಚೆನ್ನಪಟ್ಟಣ ತಾಲ್ಲೂಕಿನಲ್ಲಿ ತಲಾ ಒಂದು ಪ್ರಾಣಹಾನಿ ಸಂಭವಿಸಿದೆ. ಸಣ್ಣ ಪ್ರಾಣಿಗಳಾದ 459ಕುರಿ,ಮೇಕೆ, 16ಹಸು, 5500 ಕೋಳಿಗಳು ಸಾವಾಗಿದೆ. ಬೆಳೆಹಾನಿ ಸುಮಾರು ಕೃಷಿ ಬೆಳೆ 600 ಎಕರೆಯಷ್ಟು ಬೆಳೆನಾಶ, ತೋಟಗಾರಿಕಾ ಬೆಳೆ 500 ಎಕರೆ ಬೆಳೆನಾಶ, ಸರ್ವೆ ನಂತರ ಹೆಚ್ಚಿನ ವಿವರಗಳು ದೊರೆಯಲಿವೆ ಎಂದರು.
*ಎಸ್ ಸಿ ಎಸ್ ಟಿ ಗುಡಿಸಲುಗಳನ್ನು ತೆರವುಗೊಳಿಸಿ ಹೊಸ ಮನೆ ನಿರ್ಮಾಣ :*
ಗಾಂಧಿಗ್ರಾಮದಲ್ಲಿ ಎಸ್ ಸಿ ಎಸ್ ಟಿ ಯವರ ಸುಮಾರು 50ಕ್ಕಿಂತ ಹೆಚ್ಚು ಮನೆ ಹಾಗೂ ಗುಡಿಸಲುಗಳಿಗೆ ನೀರು ನುಗ್ಗಿದೆ. ಗುಡಿಸಲುಗಳನ್ನು ತೆರವುಗೊಳಿಸಿ ಹೊಸ ಮನೆಗಳನ್ನು ಕಟ್ಟಿಸಿಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಮಾಗಡಿ ತಾಲ್ಲೂಕಿನಲ್ಲಿ ಸೇತುವೆ ಹಾಗೂ ಕೆರೆಕಟ್ಟೆಗಳಿಗೆ ಹಾನಿಯಾಗಿದೆ. ಕೆರೆಗಳಿಗೆ ಹಾನಿಯಾಗಿರುವುದಕ್ಕೆ ಬಂಡ್ ಕಟ್ಟಿ ತಾತ್ಕಾಲಿಕವಾಗಿ ನೀರು ನಿಲ್ಲಿಸುವ ವ್ಯವಸ್ಥೆ ಹಾಗೂ ಸಂಪೂರ್ಣವಾಗಿಮಳೆ ನಿಂತ ನಂತರ ಹೊಸ ಬಂಡ್ ನ್ನು ಶಾಶ್ವತವಾಗಿ ನಿರ್ಮಿಸಲು ಸಣ್ಣ ನೀರಾವರಿ ಇಲಾಖೆಗೆ ಆದೇಶ ನೀಡಲಾಗುವುದು. ಮುಖ್ಯ ನಾಲೆಗಳಿಗೆ ಎರಡೂ ಬದಿ ಆರ್ ಸಿ ಸಿ ತಡೆ ಗೋಡೆಗಳನ್ನು ಕಟ್ಟಲು ವ್ಯವಸ್ಥೆ ಮಾಡಲಾಗುವುದು. ಚೆನ್ನಪಟ್ಟಣದ ಮುಖ್ಯಕೆರೆಯಲ್ಲಿ ನೀರು ಉಕ್ಕಿ ಹರಿದಿದೆ. ಮನೆ ಪರಿಹಾರ ಕೊಡುವ ಜೊತೆಗೆ ಈ ಪ್ರದೇಶದಲ್ಲಿ 1. 8 ಕಿ.ಮೀ ಉದ್ದದ ಮುಖ್ಯ ಕಾಲುವೆ ನಿರ್ಮಾಣಗೊಳಿಸಿ ಶಾಶ್ವತ ಪರಿಹಾರ ನೀಡಲಾಗುವುದು. ಮಳೆ ಸುರಿದ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು, ರಸ್ತೆಗಳು, ಯಾವುದೇ ಮೂಲಭೂತ ಸೌಲಭ್ಯ ಹಾನಿಯಾಗಿದ್ದರೆ, ಜಿಲ್ಲಾಧಿಕಾರಿಗಳ ವರದಿ ನೀಡಿದ ಕೂಡಲೇ ದುರಸ್ತಿ ಮಾಡಲಾಗುವುದು. ವಿದ್ಯುತ್ ಕಡಿತಗೊಂಡಿರುವ ಪ್ರದೇಶಗಳಲ್ಲಿ 24 *7 ಕಾರ್ಯನಿರ್ವಹಿಸಿ ವಿದ್ಯುತ್ ವ್ಯವಸ್ಥೆಯನ್ನು ಪುನ:ಸ್ಥಾಪಿಸಲು ಎಸ್ಕಾಂ ಗಳಿಗೆ ಸೂಚಿಸಲಾಗಿದೆ ಎಂದರು.
*ಹೆದ್ದಾರಿಯಲ್ಲಿ ಸರಾಗವಾಗಿ ನೀರು ಹರಿಯಲು ಕ್ರಮ:*
ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಅಕ್ಕಪಕ್ಕದಲ್ಲಿ ತೊಂದರೆಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈ ಬಾರಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿದೆ. ಪ್ರಾಧಿಕಾರದವರು ಕಳೆದ ಹಲವು ವರ್ಷಗಳ ಸರಾಸರಿ ಮಳೆಪ್ರಮಾಣವನ್ನುಆಧರಿಸಿ ಹೆದ್ದಾರಿಯ ವಿನ್ಯಾಸವನ್ನು ಮಾಡಿರುತ್ತಾರೆ. ಅಲ್ಲಿ ಒಳಚರಂಡಿ ವ್ಯವಸ್ಥೆಯನ್ನು ದೊಡ್ಡದಾಗಿಸಬೇಕು ಹಾಗೂ ಒಳಚರಂಡಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು.ಮಂಡ್ಯ, ರಾಮನಗರ, ಚೆನ್ನಪಟ್ಟಣ ದಲ್ಲಿ ಇದೇ ಸಮಸ್ಯೆ ತಲೆದೋರಿದ್ದು, ಕೇಂದ್ರ ಹೆದ್ದಾರಿ ಪ್ರಾಧಿಕಾರದೊಂದಿಗೆ ಸಭೆ ನಡೆಸಿ, ನೀರು ನಿಲ್ಲುತ್ತಿರುವ ಹೆದ್ದಾರಿಯ ಮರುವಿನ್ಯಾಸ ,ಸರಾಗವಾಗಿ ನೀರು ಹರಿಯುವಿಕೆ ಕಾರ್ಯವನ್ನು ಮಾಡಿಸಲಾಗುವುದು.ಈ ಮಧ್ಯೆ ಹೆದ್ದಾರಿಯಲ್ಲಿ ನಿಂತಿರುವ ನೀರು ಹರಿದುಹೋಗಲು ಅನುಕೂಲವಾಗುವಂತೆ ಮುಚ್ಚಿರುವ ಚರಂಡಿಗಳನ್ನು ತೆರೆಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೇಂದ್ರ ಸಾರಿಗೆ ಸಚಿವರೇ ಸಧ್ಯದಲ್ಲಿಯೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಹೆದ್ದಾರಿಗಳ ಸಮಸ್ಯೆಗಳ ಬಗ್ಗೆ ಖುದ್ದಾಗಿ ಮನವರಿಕೆ ಮಾಡಿಕೊಡಲಾಗುವುದು ಎಂದರು.
*ಆನೆ ದಾಳಿ ತಡೆಯಲು ಕ್ರಮ:*
ರಾಮನಗರ ಜಿಲ್ಲೆಯಲ್ಲಿ ಆನೆ ತುಳಿತಕ್ಕೆ ಸಿಲುಕಿ ಜನರು ಜೀವಕಳೆದುಕೊಳ್ಳುತ್ತಿದ್ದು, ಇದಕ್ಕೆ ಪರಿಹಾರವನ್ನು ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಭಾಗದಲ್ಲಿ ದೊಡ್ಡ ಸಮಸ್ಯೆಯಾಗಿದೆ. ಇತ್ತೀಚೆಗಷ್ಟೇ ಒಂದು ಆನೆಯನ್ನು ಸೆರೆಹಿಡಿಯಲಾಗಿದೆ. ಆನೆಗಳ ದಾಳಿಯನ್ನು ತಡೆಯಲು ರೈಲ್ವೆ ಕಂಬಿಗಳ ತಡೆಗೋಡೆಯನ್ನು ನಿರ್ಮಿಸಲು 100 ಕೋಟಿ ರೂ.ಗಳನ್ನು ನೀಡಲಾಗಿದೆ. ರಾಮನಗರದ ಜನಪ್ರತಿನಿಧಿಗಳು, ಅರಣ್ಯ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಸರ್ಕಾರದಿಂದ ನೀಡಲಾಗುವ ಯಾವುದೇ ಪರಿಹಾರವನ್ನು ತಡಮಾಡದೇ ತಕ್ಷಣವೇ ಬಿಡುಗಡೆ ಮಾಡಲಾಗುತ್ತಿದೆ. 700 ಕ್ಕಿಂತ ಹೆಚ್ಚು ಜನ ಕಾಳಜಿ ಕೇಂದ್ರಗಳಲಿದ್ದಾರೆ. ಉಳಿದವರಿಗೆ ಪಡಿತರ ಇತರ ಸವಲತ್ತುಗಳನ್ನು ನೀಡಲು ಸೂಚಿಸಲಾಗಿದೆ. ಟಿಪ್ಪುನಗರ ಸೇರಿದಂತೆ ಕೆಲವು ನೀರುನುಗ್ಗಿರುವ ಪ್ರದೇಶದ ಮನೆಯವರಿಗೆ ಒಂದು ತಿಂಗಳಿಗಾಗುಷ್ಟು ಪಡಿತರ ಕಿಟ್ ನ್ನು ನೀಡಲು ಸೂಚನೆ ನೀಡಲಾಗಿದೆ ಎಂದರು.
Post a Comment