KPCCಬೆಂಗಳೂರಿನ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿಮಾಲೂರಿನಲ್ಲಿವ ಸ್ವಾಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ಭಾಗವಹಿಸಿದ್ದರು

[11/08, 1:17 PM] Ravi Gowda. Kpcc. official: ಬೆಂಗಳೂರಿನ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್,  ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಮಾಜಿ ಸಚಿವ ಕೆ.ಜೆ. ಜಾರ್ಜ್ ಮತ್ತಿತರರು ಭಾಗವಹಿಸಿದ್ದರು.
[11/08, 6:15 PM] Ravi Gowda. Kpcc. official: ಕೋಲಾರದ ಮಾಲೂರಿನಲ್ಲಿ ಗುರುವಾರ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ  ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ಕೆ ವೈ ನಂಜೇಗೌಡ ಮತ್ತಿತರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
[11/08, 9:35 PM] Ravi Gowda. Kpcc. official: *ಮಾಲೂರಿನಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*
ಇಂದು ನನ್ನ ಪಾಲಿಗೆ ಒಂದು ವಿಶೇಷ ದಿನ. ಪುರಂದರದಾಸರು ಒಂದು ಮಾತು ಹೇಳಿದ್ದಾರೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ, ಪದುಭನಾಭನ ಪಾದ ಭಜನೆ ಪರಮ ಸುಖವಯ್ಯ ಎಂದು.

ಅದೇ ರೀತಿ, ಇಂದು ಮಾಲೂರಿನಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಊರಿನಲ್ಲಿ ನಡೆದ 225 ಕಿ.ಮೀ. ಪಾದಯಾತ್ರೆಯ ಭಾಗವಾಗಿರುವುದು ನನ್ನ ಭಾಗ್ಯ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರು ದೇಶದ ಕಾಂಗ್ರೆಸ್ ನಾಯಕರನ್ನು ಕರೆದು ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ವಿಶೇಷವಾಗಿ ಆಚರಿಸಬೇಕು ಎಂದು ಸೂಚಿಸಿದರು. 

ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ, ರಾಷ್ಟ್ರ ಧ್ವಜ, ಸಂವಿಧಾನ, ರಾಷ್ಟ್ರಗೀತೆ, ಹಾಗೂ ಬಡವರಿಗೆ ಭೂಮಿ, ವಸತಿ, ಮೀಸಲಾತಿ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮ ನೀಡಿದೆ. ಹೀಗಾಗಿ ಈ 75ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವವನ್ನು ವಿಶೇಷವಾಗಿ ಆಚರಿಸಬೇಕು ಎಂದು ಸೂಚಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮಗಳು ಜನರಿಗೆ ತಲುಪಬೇಕು. ಯುವ ಪೀಳಿಗೆಗೆ ಕಾಂಗ್ರೆಸ್ ಪಕ್ಷದ ಹೋರಾಟ, ತ್ಯಾಗ, ಬಲಿದಾನ ಹಾಗೂ ಕೊಡುಗೆಗಳನ್ನು ತಿಳಿಸಬೇಕು.

ದೇಶದ ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸುವ ಅವಕಾಶ ನಮಗೆ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಹೀಗಾಗಿ ಈ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಬೇಕು.

ಹೀಗಾಗಿ ಈ ಸ್ವಾತಂತ್ರ್ಯ ಅಮೃತ ಮಹೋತ್ಸವ ದೇಶದ ಹಬ್ಬವಾಗಿದೆ. 

ಇಂದು ನಾವೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೂ ಅಧಿಕಾರ ನಡೆಸುತ್ತಿದ್ದೇವೆ. ಜನ ಕೂಡ ನಮ್ಮನ್ನು ನಂಬಿ ಆಯ್ಕೆ ಮಾಡಿ ಕಳುಹಿಸುತ್ತಾರೆ. ನಾನು ಏಳು ಬಾರಿ ಶಾಸಕನಾಗಿದ್ದೇನೆ. 

ನಾನು ಕೋವಿಡ್ ಸಮಯದಲ್ಲಿ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ. ಈ ಕ್ಷೇತ್ರದ ಆಡಳಿತ, ಅಭಿವೃದ್ಧಿ ಎಲ್ಲವನ್ನೂ ನೋಡಿದ್ದೇನೆ. ಇಲ್ಲಿನ ಶಾಸಕರಾದ ನಂಜೇಗೌಡರು ಇಡೀ ರಾಜ್ಯಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ. 

ಕೋವಿಡ್ ಸಮಯದಲ್ಲಿ ನಿಮ್ಮ ನೋವು, ಸಮಸ್ಯೆಗಳನ್ನು ಆಲಿಸಿದೆ. ನಿಮ್ಮ ಬಳಿ ಹಣ್ಣು, ತರಕಾರಿ ಖರೀದಿ ಮಾಡಿದೆ. ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡಿದೆವು. 

ನಾವು ಬೀದಿ ವ್ಯಾಪಾರಿಗಳು, ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಬಂದಿರುವ ಶ್ರಮಿಕರ ಪರವಾಗಿ ಧ್ವನಿ ಎತ್ತಿ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಹಾಕಿದೆವು.

ನಮ್ಮ ಒತ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿಯವರು 20 ಲಕ್ಷ ಕೋಟಿ ರು. ವಿಶೇಷ ಪ್ಯಾಕೇಜ್ ಘೋಷಿಸಿದರು. ಯಡಿಯೂರಪ್ಪನವರ ಸರ್ಕಾರ 1600 ಕೋಟಿ ರು. ಪ್ಯಾಕೇಜ್ ಘೋಷಿಸಿತು. ಆದರೆ ಈ ಪ್ಯಾಕೇಜ್ ಗಳಿಂದ ಯಾರಿಗಾದರೂ ನೆರವಾಯಿತೆ? ಇಲ್ಲ...

ಬಿಜೆಪಿಯವರು ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿ ಯುವಕರಿಗೆ ಉದ್ಯೋಗ ನೀಡುವುದಾಗಿ ಮಾತು ಕೊಟ್ಟಿದ್ದರು. ಎಲ್ಲರ ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದರು. ಅವರು ಹೇಳಿದ ಮಾತಿನಂತೆ ನಡೆದುಕೊಂಡಿದ್ದಾರಾ?

ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಹಾಗೂ ಬೇರೆ ಪಕ್ಷದವರು ಯಾವ ಮುಖ ಇಟ್ಟುಕೊಂಡು ಮತ ಕೇಳಲು ಬರುತ್ತಾರೆ? 

ಇಲ್ಲಿ 225 km ಪಾದಯಾತ್ರೆ ಮಾಡುತ್ತಿದ್ದೀರಿ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ. ಜನಸೇವೆ ಜನಾರ್ಧನ ಸೇವೆ ಎಂದು ಶಾಸಕ ನಂಜೇಗೌಡರು ನಿಮ್ಮೆಲ್ಲರ ಸಹಕಾರದಿಂದ ಈ ಕಾರ್ಯಕ್ರಮ ಮಾಡುತ್ತಿದ್ದಾರೆ.

ಪಕ್ಷದ ವತಿಯಿಂದ ರಾಜ್ಯದಲ್ಲಿ ಸಮೀಕ್ಷೆ ಮಾಡಿದ್ದು ರಾಜ್ಯದಲ್ಲೆಡೆ ಕಾಂಗ್ರೆಸ್ ಪರವಾದ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇಬ್ಬರನ್ನು ಮುಖ್ಯಮಂತ್ರಿ ಮಾಡಿದೆ. ಅವರು ಎಷ್ಟು ಜನರನ್ನಾದರೂ ಮುಖ್ಯಮಂತ್ರಿ ಮಾಡಿಕೊಳ್ಳಲಿ. ರಾಜ್ಯದಲ್ಲಿ ಉತ್ತಮ ಆಡಳಿತ ಇದ್ದಿದ್ದರೆ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಬದಲಾವಣೆ ಆಗುತ್ತಿತ್ತಾ? ಯಡಿಯೂರಪ್ಪನವರು ಯಾಕೆ ಕಣ್ಣೀರು ಹಾಕಬೇಕಿತ್ತು?

ನೀವೆಲ್ಲರೂ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದೀರಿ. ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ನೀಡುವ ವಿಚಾರವಾಗಿ ಈ ಹೋರಾಟ ಮಾಡಲಾಯಿತು.

ಇಲ್ಲಿನ ನಾಯಕರು ಈ ಭಾಗದಲ್ಲಿ ಅಂತರ್ಜಲ ಹೆಚ್ಚಿಸಬೇಕು, ಕುಡಿಯುವ ನೀರು ಪೂರೈಸಬೇಕು ಎಂದು ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರಮುಖ ಗುರಿ.

ರೈತರ ಬದುಕು ಹಸನಾಗಬೇಕು. ಜನ ಉದ್ಯೋಗ ಆರಿಸಿ ಬೆಂಗಳೂರಿನತ್ತ ವಲಸೆ ಹೋಗುವುದು ನಿಲ್ಲಬೇಕು. ಈ ಭಾಗದ ರೈತರ ಭೂಮಿಗೆ ಉತ್ತಮ ಬೆಲೆ ಬರಬೇಕು. 

ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಬೇಕು. ರೈತರು ಹಾಲು ಉತ್ಪಾದಕರಿಗೆ ಸರಿಯಾದ ಬೆಲೆ ಸಿಗುವಂತೆ ಮಾಡಬೇಕು ಇದು ಕಾಂಗ್ರೆಸ್ ಪಕ್ಷದ ಚಿಂತನೆಯಾಗಿದೆ.

ಇಡೀ ದೇಶ ಕರ್ನಾಟಕದತ್ತ ಗಮನಹರಿಸಿದ್ದು ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈ ರಾಜ್ಯ ಸರ್ಕಾರದಲ್ಲಿ 40% ಕಮಿಷನ್ ನಡೆಯುತ್ತಿದೆ ಎಂದು ಪ್ರಧಾನ ಮಂತ್ರಿಗಳಿಗೆ ದೂರು ನೀಡಿದರು. ಇಷ್ಟೊಂದು ಭ್ರಷ್ಟಾಚಾರದಲ್ಲಿ ಅಭಿವೃದ್ಧಿ ಸಾಧ್ಯವೇ? ಯಾವುದೇ ಸರ್ಕಾರಿ ಕಚೇರಿಗೆ ಹೋಗಿ ಗೋಡೆಯನ್ನು ತಟ್ಟಿದರು ಕಾಸು, ಕಾಸು ಎಂದು ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಪರಿಸ್ಥಿತಿಯನ್ನು ಬದಲಿಸಬೇಕು. ರಾಜ್ಯದಲ್ಲಿ ಉತ್ತಮ ಹಾಗೂ ನ್ಯಾಯ ಬದ್ಧ ಆಡಳಿತ ನೀಡಬೇಕು. ಯುವಕರು ಮಹಿಳೆಯರಿಗೆ ಶಕ್ತಿ ತುಂಬಬೇಕು ಅವರಲ್ಲಿ ಜಾಗೃತಿ ಮೂಡಿಸಬೇಕು.

ಇಂದು ನನಗೆ ನೀವೆಲ್ಲರೂ ಗದೆ ನೀಡಿದ್ದೀರಿ. ಈ ದೇಶ ಹಾಗೂ ರಾಜ್ಯದಲ್ಲಿ ಅನ್ಯಾಯ ಮಾಡುವವರ ವಿರುದ್ಧದ ಹೋರಾಟಕ್ಕೆ ಇದು ಶಕ್ತಿ ತುಂಬಲಿದೆ.

ನೀವೆಲ್ಲರೂ ನಮ್ಮ ಮೇಲೆ ನಂಬಿಕೆ ಇಟ್ಟು ನನಗೆ, ನಂಜೇಗೌಡರಿಗೆ ಹಾಗೂ ಪಕ್ಷಕ್ಕೆ ಆಶೀರ್ವಾದ ಮಾಡಲು ಬಂದಿದ್ದೀರಿ. ಸರ್ವಜ್ಞನವರು ಒಂದು ಮಾತು ಹೇಳಿದ್ದಿದ್ದಾರೆ. ನಿಂಬೆಗಿಂತ ಬೇರೆ ಉಳಿ ಇಲ್ಲ, ದುಂಬಿಗಿಂತ ಬೇರೆ ಕಪ್ಪು ಇಲ್ಲ. ಶಿವನಿಗಿಂತ ದೊಡ್ಡ ದೇವರಿಲ್ಲ. ನಂಬಿಕೆ ಗಿಂತ ದೊಡ್ಡ ಗುಣವಿಲ್ಲ ಎಂದು ಹೇಳಿದ್ದಾರೆ. ಅದೇ ರೀತಿ ಮಾಲೂರಿನ ಜನತೆ ನಂಜೇಗೌಡರನ್ನು ಕನಿಷ್ಠ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸುತ್ತಾರೆ ಎಂಬ ನಂಬಿಕೆ ನನಗಿದೆ.

ಈ ಕ್ಷೇತ್ರದಲ್ಲಿ 50,000ಕ್ಕೂ ಹೆಚ್ಚು ಕಾಂಗ್ರೆಸ್ ಸದಸ್ಯರನ್ನು ನೋಂದಣಿ ಮಾಡಲಾಗಿದೆ. ಸೋನಿಯಾ ಗಾಂಧಿ ಅವರ ಪರವಾಗಿ ನಿಮ್ಮೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಯುವ ಕಾಂಗ್ರೆಸ್ ಮುಖಂಡ ಚೇತನ್ ಅವರು ಒಬ್ಬರೇ 5000ಕ್ಕೂ ಹೆಚ್ಚು ಸದಸ್ಯರನ್ನು ಮಾಡಿದ್ದಾರೆ.  ಹೀಗೆ ಹಲವು ಮಂದಿ ಇದ್ದಾರೆ. ಇವರು ನಮ್ಮ ಆಸ್ತಿ. 

ಪಂಚಾಯತಿ ಹಾಗೂ ಹೋಬಳಿ ಮಟ್ಟದಲ್ಲಿ ಸಮಿತಿ ಹಾಗೂ ಮಂಡಲಗಳನ್ನು ರಚಿಸಬೇಕು.

ಆಗಸ್ಟ್ 15ರಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ ಕಾರ್ಯಕ್ರಮಕ್ಕೆ ಕನಿಷ್ಠ 25,000 ಜನ ನೀವು ಭಾಗಿಯಾಗಿ ಇತಿಹಾಸ ನಿರ್ಮಿಸಬೇಕು. ಆ ಮೂಲಕ ಇಡೀ ದೇಶಕ್ಕೆ ಸಂದೇಶ ರವಾನಿಸಬೇಕು.

ನೀವೆಲ್ಲರೂ ರಾಷ್ಟ್ರಧ್ವಜ ಹಿಡಿದು ದೇಶ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಬೇಕು. ಎಲ್ಲರೂ ಮಹಾತ್ಮ ಗಾಂಧಿ, ನೆಹರು ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಕ್ಕೆ ಸೇರಿದವರು. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು. ಇನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ದೇಶಕ್ಕಾಗಿ ಪ್ರಧಾನ ಮಂತ್ರಿ ಹಾಗೂ ಅಧಿಕಾರವನ್ನು ತ್ಯಾಗ ಮಾಡಿದ್ದಾರೆ. ತಮ್ಮ ಮನೆ ಬಾಗಿಲಿಗೆ ಪ್ರಧಾನಮಂತ್ರಿ ಸ್ಥಾನ ಹುಡುಕಿಕೊಂಡು ಬಂದರು ದೇಶಕ್ಕೆ ಒಬ್ಬ ಆರ್ಥಿಕ ತಜ್ಞನ ಅವಶ್ಯಕತೆ ಇದೆ ಎಂದು ಮನಮೋಹನ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಹುದ್ದೆಯನ್ನು ನೀಡಿದರು. 

ನನ್ನ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಯಾರಾದರೂ ತ್ಯಾಗ ಮಾಡಲು ಸಾಧ್ಯವೇ? ಇಂತಹ ಸಂದರ್ಭದಲ್ಲಿ ನಮ್ಮ ನಾಯಕರು ಪ್ರಧಾನ ಮಂತ್ರಿ ಹುದ್ದೆಯನ್ನು ತ್ಯಾಗ ಮಾಡಿದ್ದಾರೆ. ಅಂತವರ ವಿರುದ್ಧ ಬಿಜೆಪಿಯವರು ವಿನಾಕಾರಣ ಯಾವುದೇ ತಪ್ಪು ಇಲ್ಲದಿದ್ದರೂ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ಇದು ನ್ಯಾಯವೇ?

ನನ್ನನ್ನು ಜೈಲಿಗೆ ಹಾಕಿದಾಗ ನೀವೆಲ್ಲರೂ ಕಣ್ಣೀರಿಟ್ಟು ಹೋರಾಟ ಮಾಡಿದಿರಿ. ನಿಮ್ಮ ಆಶೀರ್ವಾದದಿಂದ ನಾನು ಈಚೆಗೆ ಬಂದಿದ್ದೇನೆ. ನಿಮ್ಮ ಆಶೀರ್ವಾದ ಸದಾ ನಮ್ಮ ಮೇಲೆ ಇರಬೇಕು. ನಂಜೇಗೌಡ ಅವರು ನಾಯಕರಾಗಿ ಕೆಲಸ ಮಾಡುತ್ತಿಲ್ಲ, ನಿಮ್ಮ ಮನೆಯ ಸೇವಕನಾಗಿ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಆಶೀರ್ವಾದ ಸದಾ ಇರಬೇಕು ಎಂದು ಮನವಿ ಮಾಡುತ್ತೇನೆ.
[11/08, 9:52 PM] Ravi Gowda. Kpcc. official: ಬೆಂಗಳೂರಿನ ಕೃಷ್ಣರಾಜಪುರದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ  ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್, ಮಾಜಿ ಎಂಎಲ್ಸಿ ನಾರಾಯಣಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

Post a Comment

Previous Post Next Post