[16/08, 2:13 PM] Kpcc official: ರಾಜ್ಯ ಕಂಡ ಕಳಪೆ ಸರ್ಕಾರ ಇದು ಎನ್ನಲು ಒಂದಷ್ಟು ಪುರಾವೆಗಳು.
◆ಸಚಿವರು ಕೆಲಸ ಮಾಡ್ತಿಲ್ಲ - ಸಿಎಂ ರಾಜಕೀಯ ಕಾರ್ಯದರ್ಶಿ
◆ಸಹಕಾರ ಸಚಿವರು ಕೆಲಸ ಮಾಡ್ತಿಲ್ಲ - ಮಾಧುಸ್ವಾಮಿ
◆ಕಾನೂನು ಸಚಿವರು ಕೆಲಸ ಮಾಡ್ತಿಲ್ಲ - ಎಸ್.ಟಿ ಸೋಮಶೇಖರ್
◆ಮಾಧುಸ್ವಾಮಿ ರಾಜೀನಾಮೆ ಕೊಡಲಿ - ಮುನಿರತ್ನ
#BJPvsBJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿವೆ!
[16/08, 2:31 PM] Kpcc official: *ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರ ಮಾಧ್ಯಮ ಪ್ರತಿಕ್ರಿಯೆ:*
‘ದೇಶ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು ಎಂದರೆ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು. ಕಟ್ಟುನಿಟ್ಟಿನ ಅಧಿಕಾರಿಗಳನ್ನು ನಿಯೋಜಿಸಬೇಕು. ನಮ್ಮಲ್ಲಿ ಉತ್ತಮ ಅಧಿಕಾರಿಗಳಿದ್ದು, ದಕ್ಷ ಅಧಿಕಾರಿಗಳಿಗೆ ಯಾವುದೇ ಕೊರತೆ ಇಲ್ಲ.
ಈ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಕೋಮುಗಲಭೆ ನಿಯಂತ್ರಿಸಲು ಹೇಳಿದರೆ ಅವರು ನಿಭಾಯಿಸುತ್ತಾರೆ. ಆದರೆ ಬಿಜೆಪಿ ಸರ್ಕಾರ ತಮ್ಮ ಸಂಘಪರಿವಾರದ ಸಂಘಟನೆಗಳಿಗೆ ಯಾವುದೇ ತೊಂದರೆ ಆಗದಂತೆ ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಹೀಗಾಗಿ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡುತ್ತಾರೆ. ಹಿಜಾಬ್, ಹಲಾಲ್ ಕಟ್ ಸೇರಿದಂತೆ ಅನೇಕ ವಿಚಾರವಾಗಿ ಈ ಸಂಘಟನೆಗಳು ಸಾಕಷ್ಟು ಗೊಂದಲ ಸೃಷ್ಟಿಸಿದರು ಸರ್ಕಾರ ಇವರನ್ನು ನಿಯಂತ್ರಿಸುವ ಕೆಲಸ ಮಾಡಲಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಶಾಂತಿಗೆ ಭಂಗ ತರುವ ಹೇಳಿಕೆ ನೀಡುತ್ತಿದ್ದರೆ ಕಾನೂನು ಸುವ್ಯವಸ್ಥೆ ನಾಶವಾಗುತ್ತದೆ. ಇದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ.
ಬಿಜೆಪಿ ವಿರೋಧ ಪಕ್ಷದಲ್ಲಿ ಇದ್ದಾಗ SDPI ನಿಷೇಧ ಆಗಬೇಕು ಎಂದು ಹೇಳುತ್ತಿದ್ದರು, ಈಗ ಅವರದೇ ಸರ್ಕಾರ ಇದ್ದರೂ ನಿಷೇಧ ಮಾಡುತ್ತಿಲ್ಲ. SDPI ಮೂಲಕ ಕಾಂಗ್ರೆಸ್ ಮತ ವಿಭಜನೆ ಮಾಡಬಹುದು ಎಂಬ ಕಾರಣಕ್ಕೆ ಬಿಜೆಪಿಯವರೇ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಯಾವುದೇ ಸಂಘಟನೆ ಇದ್ದರೂ ಅವುಗಳನ್ನು ನಿಷೇಧಿಸಲಿ. ಸರ್ಕಾರ ಈ ಸಂಘಟನೆಗಳನ್ನು ನಿಯಂತ್ರಣದಲ್ಲೂ ಇಟ್ಟುಕೊಳ್ಳುತ್ತಿಲ್ಲ, ನಿಷೇಧಿಸುತ್ತಲೂ ಇಲ್ಲ.
ಈ ಎಲ್ಲ ಸಂಘರ್ಷಕ್ಕೆ ಈ ಸಂಘಟನೆಗಳು ಎಷ್ಟು ಕಾರಣವಾಗಿವೆಯೋ, ಅಷ್ಟೇ ಆರ್ ಎಸ್ಎಸ್ ಸಂಘಪರಿವಾರದ ಸಂಘಟನೆಗಳೂ ಕಾರಣ. ಈ ವಿಚಾರವಾಗಿ ವಿಚಾರವಾಗಿ ನಾನು ಪುಸ್ತಕವನ್ನೇ ಬಿಡುಗಡೆ ಮಾಡಿ, ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದೆ.
[16/08, 3:13 PM] Kpcc official: *ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಮಾಧ್ಯಮ ಪ್ರತಿಕ್ರಿಯೆ:*
*ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ:*
‘ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ಪ್ರಚಾರ ಸಮಿತಿ ಅಧ್ಯಕ್ಷರು, ಪರಿಷತ್ ವಿರೋಧ ಪಕ್ಷದ ನಾಯಕರು ಹಾಗೂ ಹಿರಿಯ ನಾಯಕರು ಇಂದು ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ಈ ಸಭೆಯಲ್ಲಿ ಬೊಮ್ಮಾಯಿ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಇದರಿಂದ ರಾಜ್ಯದಲ್ಲಿ ಕಾನೂನು ಉಲ್ಲಂಘನೆ ಹೆಚ್ಚಾಗುತ್ತಿದೆ. ಇಡೀ ದೇಶದಲ್ಲಿ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂದರೆ ಅದು ಕರ್ನಾಟಕ ರಾಜ್ಯದಲ್ಲಿರುವ ಬೊಮ್ಮಾಯಿ ಅವರು.
ಬೊಮ್ಮಾಯಿ ಅವರು 40% ಕಮಿಷನ್ ಸರ್ಕಾರದ ಮುಖಂಡರಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಕಿಡಿಗೇಡಿಗಳು, ಸಮಾಜಘಾತುಕ ಸಂಘಟನೆಗಳು ಜನರನ್ನು ಹಾಡಹಗಲೇ ಹತ್ಯೆ ಮಾಡುತ್ತಿದ್ದಾರೆ. ಬಿಜೆಪಿಯ ಕಾರ್ಯಕರ್ತರೇ ಹತ್ಯೆಯಾಗುತ್ತಿದ್ದರೂ ಈ ಸರ್ಕಾರ ವೈಮರೆತು ಕೂತಿದೆ. ಆ ಮೂ6ಲಕ ಜನರಿಗೆ ದ್ರೋಹ ಬಗೆಯುತ್ತಿದೆ. ಸಮಾಜವನ್ನು ಒಡೆಯಲು ಬಿಜೆಪಿ ಪ್ರಾಯೋಜಿತ ಷಡ್ಯಂತ್ರಗಳ ವಿರುದ್ಧ ಹೋರಾಡಲು ನಮ್ಮ ಪಕ್ಷದ ಎಲ್ಲ ನಾಯಕರು ಪಣ ತೊಟ್ಟಿದ್ದೇವೆ. ಜನರ ಸಹಕಾರದೊಂದಿಗೆ ಈ ಸರ್ಕಾರವನ್ನು ನಾವು ಕಿತ್ತೊಗೆಯುವವರೆಗೂ ನಾವು ವಿರಮಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇವೆ.
ಮಂಗಳೂರಿನಲ್ಲಿನ ಪ್ರಕರಣ, ಶಿವಮೊಗ್ಗದ ಬೆಳವಣಿಗೆಗೆಳು ಮುಖ್ಯಮಂತ್ರಿಗಳ ವೈಫಲ್ಯ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ. ಇದಕ್ಕೆಲ್ಲ ಕಾರಣವಾಗಿರುವ ಸಮಾಜ ಘಾತುಕ ಶಕ್ತಿಗಳಿಗೆ ಬಿಜೆಪಿಯೇ ಪ್ರೋತ್ಸಾಹ ನೀಡುತ್ತಿದೆ.
ಸರ್ಕಾರದ ಕಾನೂನು ಸಚಿವರೇ ಈ ಸರ್ಕಾರ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ. ಒಬ್ಬ ಸಚಿವರು ಮತ್ತೊಬ್ಬ ಸಚಿವರ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಸಚಿವರುಗಳೇ ಸಂಪುಟ ಸದಸ್ಯರ ವಿರುದ್ಧ ಆರೋಪ ಮಾಡುತ್ತಿರುವಾಗ ಈ ಸರ್ಕಾರದ ಸ್ಥಿತಿ ಏನು? ಇಂತಹ ಸರ್ಕಾರ ಯಾವ ಪುರುಷಾರ್ಥಕ್ಕೆ ಮುಂದುವರಿಯಬೇಕು? ಹೀಗಾಗಿ ರಾಜ್ಯದ ಜನರ ಸಹಕಾರದೊಂದಿಗೆ ಈ ಸರ್ಕಾರವನ್ನು ಕಿತ್ತುಹಾಕಬೇಕಿದೆ. ಸರ್ಕಾರ ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆ ಕುಸಿತ ಹಾಗೂ ದುರಾಡಳಿತದ ವಿಚಾರವಾಗಿ ಸರ್ಕಾರ ಉತ್ತರಿಸಬೇಕು.’
*ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ:*
ಮಾಧುಸ್ವಾಮಿ ಅವರು ಬೊಮ್ಮಾಯಿ ಅವರ ಸರ್ಕಾರದಲ್ಲಿ ಹಿರಿಯ ಸಚಿವರು. ಈ ಸರ್ಕಾರದಲ್ಲಿ ಆಡಳಿತ ನಡೆಯುತ್ತಿಲ್ಲ. ಈ ಸರ್ಕಾರವನ್ನು ತಳ್ಳಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ. ಬೊಮ್ಮಾಯಿ ಅವರು ಈ ಸತ್ಯ ಮುಚ್ಚಿಹಾಕಲು ಕೆಲವು ಸಚಿವರನ್ನು ಎತ್ತಿಕಟ್ಟಿದ್ದಾರೆ. ಮುನಿರತ್ನ, ಸೋಮಶೇಖರ್ ಅವರನ್ನು ಎತ್ತಿಕಟ್ಟಿದ್ದಾರೆ. ಮಾಧುಸ್ವಾಮಿ ರಾಜೀನಾಮೆ ನೀಡಬೇಕು ಎಂದು ಮುನಿರತ್ನ ಆಗ್ರಹಿಸುತ್ತಾರೆ. ಇನ್ನು ಮಾಧ್ಸ್ವಾಮಿ ಅವರ ಸಚಿವಾಲಯದ ಪರಿಸ್ಥಿತಿ ಆ ರೀತಿ ಆಗಿರಬಹುದು ಎಂದು ಸೋಮಶಾಖರ್ ಟೀಕೆ ಮಾಡಿದ್ದಾರೆ. ಇದೆಲ್ಲವನ್ನು ಬೊಮ್ಮಾಯಿ ಅವರು ನೋಡಿಕೊಂಡು ಕೂತಿದ್ದಾರೆ. ಈ ಸರ್ಕಾರ ಜೀವಂತವಾಗಿ ಇದೆ ಎಂದು ಕೇಳಬೇಕಾ? ಬೊಮ್ಮಾಯಿ ಅವರು ಈ ಸರ್ಕಾರದ ನೇತೃತ್ವ ವಹಿಸುತ್ತಿದ್ದಾರೆ ಎಂದು ಭಾವಿಸಲು ಸಾಧ್ಯವೇ?
ಈ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನಾಶವಾಗಿದ್ದು, ಪ್ರವೀಣ್ ಹತ್ಯೆ ಖಂಡಿಸಿ ಅವರ ಪಕ್ಷದವರೇ ಟೀಕೆ ಮಾಡುತ್ತಿದ್ದಾರೆ. ಹೀಗಾಗಿ ಜನ ಚುನಾವಣೆ ಯಾವಾಗ ನಡೆಯಲಿದೆ ಎಂದು ಕಾಯುತ್ತಿದ್ದಾರೆ. ಇದರ ಅರ್ಥ ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲ ಎಂದು ಅರ್ಥವಾಗುತ್ತದೆ. ರಾಜ್ಯದಲ್ಲಿ ಇಷ್ಟೋಂದು ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತ? ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲ, ಬಡವರಿಗೆ ನ್ಯಾಯ ಸಿಗುವುದಿಲ್ಲ. ರೈತರಿಗೆ, ಮಹಿಳೆ ಯುವಕರಿಗೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ಈ ಸರ್ಕಾರ ಕಿತ್ತು ಹಾಕಲು ಜನಾಭಿಪ್ರಾಯ ರೂಪಿಸಬೇಕು ಎಂಬ ವಿಚಾರವಾಗಿ ನಮ್ಮ ನಾಯಕರೆಲ್ಲರೂ ಚರ್ಚೆ ಮಾಡಿದ್ದೇವೆ.
ಶ್ರೀರಾಮುಲು ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಶ್ರೀರಾಮುಲು ಅವರ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಅವರು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದವರು. ಅವರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಹೇಳಿದ್ದರು. ಆದರೆ ಮಾಡಲಿಲ್ಲ. ಇನ್ನು ಪರಿಶಿಷ್ಟರ ಮೀಸಲಾತಿ ಹೆಚ್ಚಿಸಬೇಕು ಹಾಗೂ ನಾಗಮೋಹನ್ ದಾಸ್ ವರದಿ ಜಾರಿಗಳಿಸಬೇಕು ಎಂದು ಆ ಸಮುದಾಯದ ಸ್ವಾಮೀಜಿಗಳು ಆರು ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ. ಎಲ್ಲ ಕಡೆ ಪರಿಶಿಷ್ಟರು ಪ್ರತಿಭಟನೆ ಮಾಡುತ್ತಿದ್ದರೂ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲವಾಗಿದೆ. ಹೀಗಾಗಿ ಅವರು ಭ್ರಮನಿರಸನರಾಗಿದ್ದಾರೆ’ ಎಂದು ತಿಳಿಸಿದರು.
*ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್:*
‘ಯಾರೊಬ್ಬರೂ ಕೂಡ ಪಾಕಿಸ್ತಾನದ ವಿರುದ್ಧ ಘೋ,ಣೆ ಕೂಗಬಾರದು. ಕೆಲವು ಕಿಡಿಗೇಡಿಗಳು ಈ ರೀತಿ ಮಾಡಿರಬಹುದು. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ನಾವು ಎಲ್ಲ ಹಳ್ಳಿ ಹಳ್ಳಿಗಳಲ್ಲಿ ಆಚರಿಸಿದ್ದೇವೆ. ಬಿಜೆಪಿ ಸರ್ಕಾರ ಇದರಲ್ಲೂ ರಾಜಕಾರಣ ಮಾಡುತ್ತಿದೆ. ಸರ್ಕಾರ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರ ಕೈಬಿಟ್ಟು ಸಣ್ಣತನದ ರಾಜಕಾರಣ ಮಾಡಿದೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕಿತ್ತು. ಸ್ವಾತಂತ್ರ್ಯ ಹೋರಾಟಗಾರ, ದೇಶಕ್ಕಾಗಿ 9 ವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದ ನೆಹರೂ ಅವರ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಈ ಸರ್ಕಾರ ಸಂಪೂರ್ಣವಾಗಿ ವಿಫಲರಾಗಿದ್ದು, ಜನ ಭ್ರಮನಿರಸನರಾಗಿದ್ದಾರೆ. ಬೆಲೆ ಏಱಿಕೆ, ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಜನ ರಾಜ್ಯದಲ್ಲಿ ಬದಲಾವಣೆ ಬಯಸಿದ್ದಾರೆ.’
[16/08, 3:27 PM] Kpcc official: ಗೃಹಸಚಿವರಿಗೆ ಬೂಟು ಹಾಕಿಕೊಳ್ಳಲು ಗಾಂಧಿ ಆಸರೆಯೇ?
ಮಹಾತ್ಮ ಗಾಂಧಿಯವರಿಗೆ ಈ ರೀತಿಯಲ್ಲಿ ಅವಮಾನಿಸುವ ನಿರ್ದೇಶನ ನಾಗಪುರದಿಂದ ಬಂದಿತ್ತೇ @JnanendraAraga ಅವರೇ?
ಕಾನೂನು ಸುವ್ಯವಸ್ಥೆ ನಿರ್ವಹಿಸುವುದನ್ನೂ ತಿಳಿಯದ, ಮಹನೀಯರಿಗೆ ಗೌರವಿಸುವುದನ್ನೂ ಅರಿಯದ ಸಚಿವರು ದೇಶಭಕ್ತಿಯ ಬಗ್ಗೆ ಭಾಷಣ ಬಿಗಿಯುವುದು ಹಾಸ್ಯಾಸ್ಪದ.
#NakliDeshBhakts
[16/08, 3:45 PM] Kpcc official: ಗೃಹಸಚಿವರ ತವರು ಜಿಲ್ಲೆಯಲ್ಲೇ ನಿರಂತರವಾಗಿ ಗಲಭೆ ನಡೆಯುತ್ತಿದ್ದರೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕನಿಷ್ಠ ಪ್ರಯತ್ನ ಮಾಡದಿರುವುದು ಸಚಿವರ ಅಸಾಮರ್ಥ್ಯವೋ ಅಥವಾ ಕೋಮು ಕಲಹಕ್ಕೆ ನೀಡುತ್ತಿರುವ ಉದ್ದೇಶಪೂರ್ವಕ ಕುಮ್ಮಕ್ಕೊ?
ಬಿಜೆಪಿ ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗಶಾಲೆಯ ಬ್ರಾಂಚ್ ತೆರೆದಿರುವಂತಿದೆ.
[16/08, 4:08 PM] Kpcc official: *ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್ ಅವರ ಪತ್ರಿಕಾಗೋಷ್ಠಿ ಮುಖ್ಯಾಂಶಗಳು:*
ಪಕ್ಷದ ಎಲ್ಲ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ನನಗೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇಂದು ಪ್ರಚಾರ ಸಮಿತಿಯ ಕಾರ್ಯಾಲಯವನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡಿದ್ದೇವೆ.
ನಮ್ಮ ಪದಾಧಿಕಾರಿಗಳ ಪಟ್ಟಿ ಬಹುತೇಕ ಅಂತಿಮವಾಗಿದ್ದು, ಕೆಲವೇ ದಿನಗಳಲ್ಲಿ ಅದನ್ನು ಬಿಡುಗಡೆ ಮಾಡುತ್ತೇವೆ. ಕ್ರಿಯಾಶೀಲರಾಗಿರುವ ಅನೇಕರಿಗೆ ಅವಕಾಶ ನೀಡಲಾಗಿದೆ.
ಪ್ರಚಾರ ಸಮಿತಿ ಅಧ್ಯಕ್ಷನಾಗಿ ನಾನು ಆ.19ರಂದು ಪ್ರಥಮ ಹಂತದ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದೇನೆ. 19ರಂದು ಕಲಬುರ್ಗಿಯಿಂದ ಆರಂಭವಾಗಿ, 20ರಂದು ಹುಬ್ಬಳ್ಳಿ, ಅಂದು ಸಂಜೆ ಧಾರವಾಡ, 23ರಂದು ಚಿತ್ರದುರ್ಗ, 24ರಂದು ಶಿವಮೊಗ್ಗ, 26ರಂದು ಮೈಸೂರು, 27ರಂದು ಚಾಮರಾಜನಗರ, ಸೆ.1ರಂದು ಮಂಗಳೂರು, 2ರಂದು ಉಡುಪಿ, 3ರಂದು ತುಮಕೂರು, 5ರಂದು ಕೊಪ್ಪಳ, 6 ಬಳ್ಳಾರಿ, ವಿಜಯನಗರ, 7ರಂದು ರಾಯಚೂರು, 8ರಂದು ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಪ್ರವಾಸ ಮಾಡುತ್ತಿದ್ದೇನೆ.
ಸೆ.27ರಿಂದ ರಾಜ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಕಾರ್ಯಕ್ರಮ ತಯಾರಿ ಗಮನದಲ್ಲಿಟ್ಟುಕೊಂಡು ಉಳಿದ ಪ್ರವಾಸ ಹಮ್ಮಿಕೊಳ್ಳುತ್ತೇನೆ. ಈ ಪ್ರವಾಸದಲ್ಲಿ ಶಾಸಕರು, ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರು, ಸಂಸದರು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರ ಜತೆ ಸಭೆ ಮಾಡಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತೇವೆ.
ಇಂದು ಪಕ್ಷದ ನಾಯಕರೆಲ್ಲರೂ ಚರ್ಚೆ ಮಾಡಿ ಕಾಂಗ್ರೆಸ್ ಪಕ್ಷದ ಸಾಧನೆಗಳು, ಪ್ರಥಮ ಪ್ರಧಾನಿ ನೆಹರೂ ಅವರಿಂದ ಮನಮೋಹನ್ ಸಿಂಗ್ ಅವರ ಕಾಲದವರೆಗೂ ಕಾಂಗ್ರೆಸ್ ಸರ್ಕಾರದ ಕೊಡುಗೆಗಳನ್ನು ರಾಜ್ಯದ ಜನರಿಗೆ ತಿಳಿಸಲು ಕಾರ್ಯಕ್ರಮ ರೂಪಿಸುತ್ತೇವೆ. ಇನ್ನು ರಾಜ್ಯದಲ್ಲಿ ಕೆಂಗಲ್ ಹನುಮಂತಯ್ಯ ಅವರ ಸರ್ಕಾರದಿಂದ ಸಿದ್ದರಾಮಯ್ಯ ಅವರ ಸರ್ಕಾರದ ವರೆಗೆ ಕಾಂಗ್ರೆಸ್ ಸರ್ಕಾರದ ಕೊಡುಗೆಗಳನ್ನು ಪ್ರಚಾರ ಮಾಡುತ್ತೇವೆ. ಬಿಜೆಪಿ ಸರ್ಕಾರದ ವೈಫಲ್ಯಗಳು, ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿ ಕೊಟ್ಟಿದ್ದ ಮಾತು, ಅದರ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವಲ್ಲಿ ವಿಫಲ, ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕುವಲ್ಲಿ ವಿಫಲ, ರೈತರ ಆದಾಯ ಡಬಲ್ ಆಗಿಲ್ಲ. ಅವರು ಕೊಟ್ಟ ಮಾತು ನಡೆದಿಲ್ಲ. ಬೆಲೆಏರಿಕೆ, ನಿರುದ್ಯೋಗ ಹೆಚ್ಚಾಗಿದೆ.
ನೋಟುಅಮಾನ್ಯ, ಅವೈಜ್ಞಾನಿಕ ಜಿಎಸ್ ಟಿಯಿಂದ ಜನರಿಗೆ ಆಗುತ್ತಿರುವ ತೊಂದರೆ ಎಲ್ಲ ವಿಚಾರದಲ್ಲೂ ಜನಿರೆಗೆ ಜಾಗೃತಿ ಮೂಡಿಸುತ್ತೇವೆ. ಹಾಲು ಮೊಸರಿನ ಮೇಲೆ ಜಿಎಸ್ ಟಿ ಜತೆ ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೂ ಜಿಎಸ್ ಟಿ ಹಾಕಿದ್ದಾರೆ. ಆ ಮೂಲಕ ಈ ಸರ್ಕಾರ ಬದುಕಲು ಬಿಡುವುದಿಲ್ಲ, ಸತ್ತ ಮೇಲೂ ಬಿಡುವುದಿಲ್ಲ ಎಂಬಂತೆ ಸುಲಿಗೆ ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಪರೇಷನ್ ಕಮಲದ ಮೂಲಕ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದರು. ಅವರು ಕೊಟ್ಟ ಯಾವುದೇ ಭರವಸೆ ನೀಡಿಲ್ಲ.
ಇನ್ನು ಈ ಸರ್ಕಾರದಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದೆ. ಪ್ರಧಾನಿಗಳಿಗೆ ಗುತ್ತಿಗೆದಾರರ ಸಂಘ ಅಧ್ಯಕ್ಷರು ಪತ್ರ ಬರೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಭ್ರಷ್ಟರ ವಿರುದ್ಧ ಆದಾಯ ತೆರಿಗೆ, ಇಡಿ, ಸಿಬಿಐ ದಾಳಿ ಆಗಿಲ್ಲ? ಪ್ರಧಾನಿಗಳು ಮೌನವಾಗಿರುವುದೇಕೆ? ಮೌನಂ ಸಮ್ಮತಿ ಲಕ್ಷಣಂ ಎನ್ನುವಂತಾಗಿದೆ. ಸರ್ಕಾರದ ಮಂತ್ರಿಗಳು ಯಾವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಯುತ್ತಿಲ್ಲ. ಹೀಗಾಗಿ ಇದು ದಿಕ್ಕು ದೆಸೆ ಇಲ್ಲದ ಸರ್ಕಾರವಾಗಿದೆ. ಇದರ ಜತೆಗೆ ಸಚಿವ ಮಾಧುಸ್ವಾಮಿ ಅವರು ಈ ಸರ್ಕಾರ ಕಾಲವನ್ನು ತಳ್ಳಿಕೊಂಡು ಹೋಗುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ.
ಕಾನೂನು ಸಚಿವರೇ ಇದನ್ನು ಒಪ್ಪಿಕೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಹಿಂದೆ ಬೆಂಗಳೂರನ್ನು ವಿಶ್ವವೇ ಐಟಿ ರಾಜಧಾನಿಯಾಗಿ ನೋಡುತ್ತಿತ್ತು. ರಾಜ್ಯ ಅತ್ಯಂತ ಶ್ರೇಷ್ಠ ಮುಖ್ಯಮಂತ್ರಿಗಳನ್ನು ಹೊಂದಿದ್ದು, ದೇಶಕ್ಕೆ ಮಾದರಿಯಾಗಿದ್ದೆವು. ಆದರೆ ಇಂದು ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿ ಜಾರಿಗೆ ತರುವ ಚರ್ಚೆ ಆಗುತ್ತಿದೆ. ಯಾವ ರಾಜ್ಯ ಪ್ರಗತಿ ಕಂಡಿಲ್ಲ, ಅದನ್ನು ಮಾದರಿಯಾಗಿ ಪರಿಗಣಿಸಲಾಗುತ್ತಿದೆ.
ಕರ್ನಾಟಕ ಎಲ್ಲ ವರ್ಗದ ಜನರ ನೆಚ್ಚಿನ ತಾಣವಾಗಿತ್ತು. ಎಲ್ಲರನ್ನು ಆಕರ್ಷಿಸುತ್ತಿತ್ತು. ಇದು ಕರ್ನಾಟಕ ಸಮೃದ್ಧಿ ರಾಜ್ಯವಾಗಿತ್ತು. ಇದಕ್ಕೆ ಕುವೆಂಪು ಅವರು ನಮ್ಮ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದರು. ಆದರೆ ಈಗ ಇದನ್ನು ನಾಶ ಮಾಡಲಾಗುತ್ತಿದೆ. ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ, ಮತ ವಿಭಜನೆಗಾಗಿ ಹಿಜಾಬ್, ಹಲಾಲ್ ಸೇರಿದಂತೆ ಹಲವು ವಿಚಾರಗಳಲ್ಲಿ ಗೊಂದಲ ಸೃಷ್ಟಿಸಿದರು. ನಂತರ ಚಕ್ರತೀರ್ತ ಅವರ ಪಠ್ಯ ಪರಿಷ್ಕರಣ ಸಮಿತಿ ಮೂಲಕ ಎಲ್ಲ ಸಮಾಜದ ಮಹನೀಯರಿಗೆ ಅಪಮಾನ ಮಾಡಿದರು. ಈ ಸಮಿತಿ ಬಸವಣ್ಣ, ಮಹಾತ್ಮ ಗಾಂಧಿ, ನಾರಾಯಣ ಗುರು, ಸುರಪುರ ನಾಯಕರು, ಶಂಕರಾಚಾರ್ಯರು, ಆದಿ ಚುಂಚನಗಿರಿ ಸ್ವಾಮಿ, ಕುವೆಂಪು, ಸಿದ್ದಗಂಗಾ ಸ್ವಾಮಿ ಸೇರಿದಂತೆ ಎಲ್ಲರ ಇತಿಹಾಸ ತಿರುಚಿ ಅಪಮಾನ ಮಾಡಿದರು. ಇದು ಅವರ ನಿಜವಾದ ಅಜೆಂಡಾವನ್ನು ಪ್ರದರ್ಶಿಸುತ್ತದೆ.
ಆರಂಭದಲ್ಲಿ ಮಾತ್ರ ಅಲ್ಪಸಂಖ್ಯಾತರ ವಿರುದ್ಧ ಹೋರಾಟ ಎಂದು ತೋರಿಸಿ ನಂತರ ಎಲ್ಲ ವರ್ಗಗಳ ವಿರುದ್ಧ ಈ ರೀತಿ ದಾಳಿ ಮಾಡುತ್ತಾರೆ. ಈಗ ಸಾರ್ವಕರ್ ಅವರ ವಿಚಾರದಲ್ಲೂ ಅದೇ ಆಗುತ್ತಿದೆ. ಬ್ರಿಟೀಷರಿಗೆ ಮುಚ್ಚಳಿಕೆ ಪತ್ರ ಬರೆದುಕೊಟ್ಟವರನ್ನು ದೇಶಭಕ್ತ ಎಂದು ಬಿಂಬಿಸಿ, ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ನೆಹರೂ, ದೇಶಕ್ಕಾಗಿ ತ್ಯಾಗ ಮಾಡಿರುವ ಅವರ ಕುಟುಂಬವನ್ನು ಟೀಕಿಸುತ್ತಿದೆ. ನೆಹರೂ ಅವರು ಸಂಮೃದ್ಧ ಹಾಗೂ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸಿದ್ದರು. ಅವರ ಭಾವಚಿತ್ರ ಹಾಕದೆ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ.
ಈ ಎಲ್ಲ ವಿಚಾರ ಚರ್ಚೆ ಮಾಡಿದ್ದು, ಜಿಲ್ಲಾ ಮಟ್ಟದಲ್ಲಿ ನಾಯಕರು, ಮುಖಂಡರಿಗೆ ತಿಳಿಸಬೇಕಾಗುತ್ತದೆ. ಇನ್ನು ಸ್ಥಳೀಯ ಸಮಸ್ಯೆಗಳ ವಿಚಾರವಾಗಿ ಚರ್ಚೆ ಮಾಡಬೇಕಾಗುತ್ತದೆ. ಉದಾಹರಣೆಗೆ ಕಲ್ಯಾಣ ಕರ್ನಾಟಕದಲ್ಲಿ ಆರ್ಟಿಕಲ್ 371 ಮೂಲಕ ವಿಶೇಷ ಸ್ಥಾನಮಾನ ವಿಚಾರ. ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಲಾಲ ಕೃಷ್ಣ ಆಡ್ವಾಣಿ ಅವರು ಸಂಸತ್ತಿನಲ್ಲಿ ಸಾಧ್ಯವಿಲ್ಲ ಎಂದಿದ್ದನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂ ಸಿಂಗ್ ಅವರು ಮಾಡಿ ತೋರಿಸಿದರು. ಇದರಿಂದ ಆ ಭಾಗದ 8-10 ಜಿಲ್ಲೆಗಳ ಯುವಕರಿಗೆ ಕೆಲಸ ಸಿಗುತ್ತಿದೆ, ಆ ಭಾಗ ಅಭಿವೃದ್ಧಿ ಕಾಣುತ್ತಿದೆ. ಇಂತಹ ಸ್ಥಳೀಯ ವಿಚಾರಗಳ ಚರ್ಚೆಗಳು ಆಗಬೇಕಿದೆ. ಅವುಗಳನ್ನು ಪರಿಣಾಮಕಾರಿಯಾಗಿ ಪ್ರಚಾರ ಮಾಡಲಾಗುವುದು.
ಆಮೂಲಕ 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅಧಿಕಾರ ಅನುಭಸುವುದಕ್ಕಿಂತ ರಾಜ್ಯವನ್ನು ನಂ.1 ರಾಜ್ಯವನ್ನಾಗಿ ಮಾಡಲು, ಕುವೆಂಪು ಅವರು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟ ಮಾಡಲು ಅಧಿಕಾರಕ್ಕೆ ಬರಬೇಕು. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಇದನ್ನು ಸುಧಾರಿಸಲು ಕನಿಷ್ಠ 2 ವರ್ಷಗಳ ಕಾಲ ಬೇಕಾಗುತ್ತದೆ. ಈ ಕಾನೂನು ಸುವ್ಯವಸ್ಥೆ ಸರಿಪಡಿಸಲು, ಆಡಳಿತ ಯಂತ್ರ ಸರಿಪಡಿಸಲು ಕಾಲಾವಕಾಶ ಬೇಕು. ಇದಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು.
ಪ್ರಚಾರ ಸಮಿತಿ ಅಧ್ಯಕ್ಷನಾಗಿ ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಸೇರಿದಂತೆ ಎಲ್ಲ ನಾಯಕರ ಜತೆ ಸಹಕಾರ ನೀಡುತ್ತಾ ಕೆಲಸ ಮಾಡುತ್ತೇವೆ.
ಪ್ರವಾಸದಲ್ಲಿ ಬೇರೆ ನಾಯಕರು ಭಾಗವಹಿಸುತ್ತೀರಾ ಎಂಬ ಪ್ರಶ್ನೆಗೆ, ‘ಪ್ರಚಾರ ಸಮಿತಿ ಅಧ್ಯಕ್ಷರಾಗಿ ನಾನು ಪ್ರಚಾರ ಮಾಡುತ್ತಿದ್ದು, ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ನಾಯಕರು ಕೂಡ ಭಾಗವಹಿಸಲಿದ್ದಾರೆ. ಪ್ರಣಾಳಿಕೆ ಆಗಬೇಕು, ಉದಯಪುರ ಸಂಕಲ್ಪ ಸಮಾವೇಶ ಹಾಗೂ ಬೆಂಗಳೂರು ಸಂಕಲ್ಪ ಸಭೆಯ ನಿರ್ಣಯಗಳ ಆಧಾರದ ಮೇಲೆ ಪ್ರಣಾಳಿಕೆ ತಯಾರು ಮಾಡಿ ನಂತರ ರಾಜ್ಯಾದ್ಯಂತ ಚುನಾವಣಾ ಪ್ರಚಾರ ಆರಂಭಿಸಲಾಗುವುದು. ಭಾರತ್ ಜೋಡೋ ಕಾರ್ಯಕ್ರಮ ಮುಗಿದ ಬಳಿಕ ಮತ್ತೆ ನಾವು ಚರ್ಚಿಸಿ ಮುಂದಿನ ಹೆಜ್ಜೆ ತೀರ್ಮಾನಿಸುತ್ತೇವೆ’ ಎಂದರು.
ಕಾಂಗ್ರೆಸ್ ಹಿರಿಯ ನಾಯಕರು ಸುನೀಲ್ ಕುಂದಗೋಳ ಅವರಿಂದ ಸಲಹೆ ಪಡೆಯುವ ಸ್ಥಿತಿ ಬಂದಿದೆಯೇ ಎಂಬ ಪ್ರಶ್ನೆಗೆ, ‘ಸುನೀಲ್ ಅವರು 2018ರಲ್ಲಿ ಬಿಜೆಪಿಗೆ ಚುನಾವಣೆಯಲ್ಲಿ ನೆರವು ನೀಡಿದ್ದಾಗ ಅದಕ್ಕೆ ಯಾರ ಆಕ್ಷೇಪ ಇರಲಿಲ್ಲ. ಈಗ ಯಾಕೆ? ಆಗ ಅವರು ವಾಣಿಜ್ಯ ಉದ್ದೇಶದಿಂದ ಸಲಹೆ ನೀಡಿದ್ದರು. ಆದರೆ ಈಗ ಸುನಿಲ್ ಅವರು ಪಕ್ಷ ಸೇರಿದ್ದಾರೆ, ಅವರು ಕಾಂಗ್ರೆಸಿಗರಾಗಿ ಕೆಲಸ ಮಾಡುತ್ತಿದ್ದಾರೆ’ ಎಂದರು.
ನಂತರ ಈ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ‘ಚುನಾವಣೆ ಮಾಡುವ ರೀತಿ ಬದಲಾಗಿದೆ. ಹೊಸ ತಂತ್ರಜ್ಞಾನ ಬಂದಿವೆ, ಅಭಿಪ್ರಾಯ ಸಂಗ್ರಹಿಸಿದೆ. ಅಂತರ್ಜಾಲ, ಮೊಬೈಲ್ ಬಳಕೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿದೆ. ಮಾಧ್ಯಮದಲ್ಲಿ ಮುದ್ರಣ, ವಿದ್ಯುನ್ಮಾನ ಮಾಧ್ಯಮ ಈಗ ಡಿಜಿಟಲ್ ಮಾಧ್ಯಮ ಬಂದಿದೆ. ಅದೇ ರೀತಿ ಚುನಾವಣೆಯಲ್ಲಿ ಹೊಸ ಆವಿಷ್ಕಾರ ಬರುತ್ತಿದೆ. ಕಳೆದ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೇ.4ಕ್ಕೂ ಹೆಚ್ಚು ಜನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಭಾವಿತರಾಗಿದ್ದಾರೆ. ಮತದಾರರ ಅಂಕಿಅಂಶ, ಬೂತ್ ಮಟ್ಟದಲ್ಲಿ ನಿರ್ವಹಣೆ, ಹೊಸ ಮತದಾರರ ಗುರುತಿಸುವುದನ್ನು ವೃತ್ತಿಪರವಾಗಿ ಮಾಡಬೇಕಾಗುತ್ತದೆ. ಯಾವುದೇ ಪಕ್ಷದಲ್ಲಿ ಈ ವಿಚಾರವಾಗಿ ತಜ್ಞರಿಲ್ಲ. ಹೀಗಾಗಿ ಬಿಜೆಪಿಯವರು ಬಿಲಿಯನ್ ಮೈಂಡ್ಸ್ ಎಂಬ ಸಂಸ್ಥೆಯನ್ನು ನೇಮಿಸಿದೆ. ನಮಗೆ ಅರ್ಥವಾಗದ ಕೆಲವು ವಿಚಾರಗಳ ಬಗ್ಗೆ ಜ್ಞರಿಂದ ಸಲಹೆ ಪಡೆಯುತ್ತೇವೆ. ಅವರು ಹೇಳಿದ್ದರಲ್ಲಿ ಏನಾದರೂ ತಪ್ಪಿದ್ದರೆ ನಮ್ಮ ಪಕ್ಷದಲ್ಲಿರುವ ಹಿರಿಯರು ಅದನ್ನು ತಿದ್ದುತ್ತಾರೆ’ ಎಂದು ತಿಳಿಸಿದರು.
*ಈ ಸಂದರ್ಭದಲ್ಲಿ ಮಾತನಾಡಿದ ಸಲೀಂ ಅಹ್ಮದ್ ಅವರು ಹೇಳಿದ್ದಿಷ್ಟು:*
ನಮ್ಮ ಪ್ರಚಾರ ಸಮಿತಿ ಅಧ್ಯಕ್ಷರು ಮೊದಲ ಹಂತದ ಪ್ರವಾಸ ಮಾಡಿ ರಾಜ್ಯ ಮಟ್ಟದ ಪದಾಧಿಕಾರಿಗಳನ್ನು ನೇಮಿಸಿ, ನಂತರ ಜಿಲ್ಲಾ ಮಟ್ಟದ ಪದಾಧಿಕಾರಿ ಆಯ್ಕೆ ಮಾಡಬೇಕಾಗುತ್ತದೆ. ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಲು ಈ ಪ್ರವಾಸ ಮಾಡುತ್ತಿದ್ದಾರೆ. ಮುಂದೆ ಪಕ್ಷ ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುದರ ಬಗ್ಗೆ ಪಕ್ಷದ ಎಲ್ಲ ಹಿರಿಯ ನಾಯಕರು ಚರ್ಚೆ ಮಾಡುತ್ತಿದ್ದಾರೆ. ಇನ್ನು ಕನ್ಯಾಕುಮಾರಿಯಿಂದ ಸೆ.7ರಂದು ಭಾರತ್ ಜೋಡೋ ಕಾರ್ಯಕ್ರಮ ಆರಂಭವಾಗಲಿದ್ದು, ಕಾಶ್ಮೀರದವರೆಗೆ ನಮ್ಮ ನಾಯಕ ರಾಹುಲ್ ಗಾಂಧಿ ಅವರು 3500 ಕಿ.ಮೀ ಪಾದಯಾತ್ರೆ ಮಾಡಲಿದ್ದಾರೆ. ಸೆ.27ರ ನಂತರ ರಾಜ್ಯದಲ್ಲಿ 21ದಿನಗಳ ಕಾಲ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಗುಂಡ್ಲುಪೇಟೆಯಿಂದ ರಾಯಚೂರಿನವರೆಗೂ ಎಲ್ಲೆಡೆ ಪ್ರಚಾರ ಮಾಡಲಾಗುವುದು. ಭಾರತ್ ಜೋಡೋ ಕಾರ್ಯಕ್ರಮದಲ್ಲಿ ಸಮಾವೇಶ ಮಾಡುವ ಬಗ್ಗೆ ಇನ್ನು ಚರ್ಚೆ ಆಗಿಲ್ಲ. ಬಳ್ಳಾರಿಯಲ್ಲಿ ಒಂದು ಸಾರ್ವಜನಿಕ ಸಭೆ ಮಾಡುವ ಆಲೋಚನೆ ಇದೆ.
ಪಕ್ಷದ ಆಂತರಿಕ ಸಮೀಕ್ಷೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಮ್ಮ ಆಂತರಿಕ ಸಮೀಕ್ಷೆ ಪ್ರಕಾರ ನಮಗೆ ಈಗಾಗಲೇ 136 ಸ್ಥಾನಗಳು ಸಿಗಲಿವೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು 150 ಸ್ಥಾನಗಳ ಗುರಿ ನೀಡಿದ್ದು, ಮೊದಲ ಹಂತದ ಸಮೀಕ್ಷೆಯಲ್ಲಿ ನಾವು 136ರಷ್ಟು ತಲುಪಿದ್ದೇವೆ’ ಎಂದು ಉತ್ತರಿಸಿದರು.
[16/08, 5:09 PM] Kpcc official: ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ಎಂ.ಬಿ ಪಾಟೀಲ್ ಅವರು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು.....
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್, ಸಂವಹನ ಮತ್ತು ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಪ್ರಿಯಾಂಕ್ ಖರ್ಗೆ ಹಾಗೂ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ಶ್ರೀ ರಮೇಶ್ ಬಾಬು ಅವರು ಉಪಸ್ಥಿತರಿದ್ದರು....
Post a Comment