ದೇಶ ವಿಭಜಕ ಶಕ್ತಿಗಳ ನಿಷೇಧ ಸ್ವಾಗತಾರ್ಹ: ಸಿ.ಟಿ.ರವ........ ಪಿಎಫ್‍ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ- ನಳಿನ್‍ಕುಮಾರ್ ಕಟೀಲ್


ದೇಶ ವಿಭಜಕ ಶಕ್ತಿಗಳ ನಿಷೇಧ ಸ್ವಾಗತಾರ್ಹ: ಸಿ.ಟಿ.ರವಿ
ಬೆಂಗಳೂರು: ದೇಶ ವಿಭಜಕ ಶಕ್ತಿಗಳನ್ನು ಸರಕಾರ ನಿಷೇಧ ಮಾಡಿದೆ, ಇನ್ನು ಮುಂದಿನದು ಸಮಾಜದ ಸರದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಪಿಎಫ್‍ಐ ನಿಷೇಧ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಐಸಿಸ್ ಮಾದರಿಯ ಉಗ್ರಗಾಮಿಗಳನ್ನ ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧದ, ದೇಶದ್ರೋಹದ  ಸಂಚನ್ನು ಮಾಡುತ್ತಿದ್ದ ಪಿ ಎಫ್ ಐ ಹಾಗು ಅದರ ಸಹ ಸಂಘಟನೆಗಳನ್ನು ನಿμÉೀಧಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು  ಸ್ವಾಗತಿಸುತ್ತೇನೆ ಹಾಗು ಸರಕಾರವನ್ನು ಅಭಿನಂದಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಸರಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆ, ಇಷ್ಟು ಸಾಕಾಗುವುದಿಲ್ಲ. ಸಮಾಜವು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ. ವಿದ್ರೋಹಿ ಹಾಗು ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ. ನಿμÉೀಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟೀಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯ ರಾಜಕಾರಣ ಮಾಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜಕೀಯವಾಗಿ ನಿಮಗೆ ಲಾಭ ಕೊಟ್ಟರು, ದೇಶದ ಭವಿಷ್ಯದ ದೃಷ್ಟಿಯಿಂದ, ಸಮಾಜವನ್ನು ಈ ದುಷ್ಟ ಶಕ್ತಿಗಳ ಕೈಯಿಂದ ಬಿಡಿಸುವ ಕಾರ್ಯದಲ್ಲಿ ತೊಡಕಾಗಲಿದೆ. ದೇಶದ ಭದ್ರತೆಯ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ, ದೇಶಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯ ಮತ್ತು ರಾಷ್ಟ್ರ ವಿರೋಧಿ ಹಾಗು ಮತಾಂಧತೆಯ ವಿರುದ್ಧ ಅರಿವು  ಮೂಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ನಿμÉೀಧದ ನಂತರ ಪಿ ಎಫ್ ಐ ಸಂಘಟನೆಗೆ ಸೇರಿದ ದುಷ್ಟ ಶಕ್ತಿಗಳು ಭೂಗತರಾಗಿ ಕಾರ್ಯನಿರ್ವಹಿಸುವ, ಸಮಾಜವನ್ನು. ಪ್ರಚೋದಿಸುವ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಇಂತಹ ಯಾವುದೇ ಘಟನೆಗಳು ಗಮನಕ್ಕೆ ಬಂದರೆ  ಕೂಡಲೇ ಪೆÇಲೀಸರಿಗೆ ಮಾಹಿತಿ ನೀಡಿ ಮುಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಕಾನೂನಿನ ಜೊತೆ ಕೈ ಜೋಡಿಸಲು ಅವರು ಮನವಿ ಮಾಡಿದ್ದಾರೆ.


                                                                   
 
ಪಿಎಫ್‍ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ- ನಳಿನ್‍ಕುಮಾರ್ ಕಟೀಲ್ 
ಬೆಂಗಳೂರು: ವಿದೇಶಿ ದೇಣಿಗೆ ಮೂಲಕ ಸಮಾಜವಿದ್ರೋಹಿ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಪಿಎಫ್‍ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ ಮತ್ತು ಇದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದು, ಕೇಂದ್ರ ಸರಕಾರಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ.
ಪಿಎಫ್‍ಐ ನಾಯಕರು ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿದ್ದರು. ಕೇಂದ್ರ ಸರಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ, ಪಿಎಫ್‍ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ ನಿμÉೀಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ನಿμÉೀಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿμÉೀಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಅಲ್ಲದೆ,  ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿμÉೀಧ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಭವಿಷ್ಯದಲ್ಲಿ ವಿದ್ರೋಹಿ ಹಾಗು ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜದ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ನಿμÉೀಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟೀಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ಪ್ರಯತ್ನದ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಸರಕಾರವು ಇಂಥ ಸಮಾಜವಿದ್ರೋಹಿಗಳ ಮೇಲಿನ ಪ್ರಕರಣಗಳನ್ನು ರದ್ದು ಮಾಡಿ ಅವುಗಳ ಬೆಳವಣಿಗೆಗೆ ಸಹಕರಿಸಿತ್ತು. ಇದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ಮುಂದಿನ ದಿನಗಳಲ್ಲಿ ಕೊಡುವುದು ಖಚಿತ ಎಂದು ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

                                                                   
 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ

Post a Comment

Previous Post Next Post