ಸೆಪ್ಟೆಂಬರ್ 28, 2022 | , | 8:35PM |
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಯೋಜನೆಯನ್ನು ಡಿಸೆಂಬರ್ ವರೆಗೆ ವಿಸ್ತರಿಸಿದ ಸರ್ಕಾರ

ಹೊಸದಿಲ್ಲಿಯಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಈ ನಿರ್ಧಾರದಿಂದ 80 ಕೋಟಿ ಜನರಿಗೆ ಅನುಕೂಲವಾಗಲಿದೆ.
ಮುಂದಿನ ಮೂರು ತಿಂಗಳಲ್ಲಿ 122 ಲಕ್ಷ ಮೆಟ್ರಿಕ್ ಟನ್ ಆಹಾರಧಾನ್ಯಗಳನ್ನು ವಿತರಿಸಲಾಗುವುದು, 7ನೇ ಹಂತದ ಯೋಜನೆಯಡಿ ಒಟ್ಟು 44 ಸಾವಿರ ಕೋಟಿ ರೂ. ಈ ಯೋಜನೆಗೆ ಇದುವರೆಗೆ ಮೂರು ಲಕ್ಷ 45 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದರು. ಮುಂಬರುವ ಹಬ್ಬ ಹರಿದಿನಗಳಲ್ಲಿ ಈ ನಿರ್ಧಾರ ಜನರ ಮುಖದಲ್ಲಿ ಸಂತಸ ತರಲಿದೆ ಎಂದು ಸಚಿವರು ಹೇಳಿದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ, ಅರ್ಹ ಫಲಾನುಭವಿಗಳಿಗೆ ತಿಂಗಳಿಗೆ ಐದು ಕಿಲೋಗ್ರಾಂ ಆಹಾರಧಾನ್ಯವನ್ನು ಉಚಿತವಾಗಿ ನೀಡಲಾಗುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಬಡ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಲು ಈ ಯೋಜನೆಯನ್ನು ಮಾರ್ಚ್ 2020 ರಲ್ಲಿ ಪ್ರಾರಂಭಿಸಲಾಯಿತು
Post a Comment