ನಾಡಹಬ್ಬ ದಸರಾ ಉದ್ಘಾಟನೆ

     [ನಾಡಹಬ್ಬ ದಸರಾ ಉದ್ಘಾಟನೆಗಾಗಿ ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಡ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
 *ದಸರಾ ಹಬ್ಬದ ಹಿನ್ನೆಲೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಂದ ರಾತ್ರಿ ಮೈಸೂರು ನಗರದ ದೀಪಾಲಂಕಾರ ವೀಕ್ಷಣೆ*

ಮೈಸೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಕುಟುಂಬದ ಸದಸ್ಯರು ಹಾಗೂ ಸಚಿವ ಸಂಪುಟದ ಸಚಿವರು ಮೈಸೂರು ನಗರದ ದೀಪಾಲಂಕಾರ  ವೀಕ್ಷಣೆ ಮಾಡಿದರು.

ದಸರಾ ಮಹೋತ್ಸವಕ್ಕೆ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮರ್ಮು ಅವರು ನಾಳೆ ಬಂದು ಚಾಲನೆ ನೀಡುತ್ತಿರುವುದು ಹೆಮ್ಮೆಯ ವಿಚಾರ. ರಾಷ್ಟ್ರಪತಿಗಳಿಂದ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಕಳೆದ ಬಾರಿ ಹತ್ತು ದಿನಗಳ ಕಾಲ ಮೈಸೂರು ನಗರ ಹಾಗೂ ಅರಮನೆಗೆ ದೀಪಾಲಂಕಾರ ಮಾಡಲಾಗಿತ್ತು. ಈ ಬಾರಿ‌ 124  ಕೀ.ಮಿ ದೀಪಾಲಂಕಾರವನ್ನು ಮಾಡಲಾಗಿದೆ. ನಾಡಿನ ಜನತೆ ಬಹಳ ದೊಡ್ಡ ಸಂಖ್ಯೆಯಲ್ಲಿ ಮೈಸೂರು ದಸರಾ ಹಬ್ಬವನ್ನು ನೋಡಲು ಬರುತ್ತಿದ್ದಾರೆ.‌ ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ದಸರಾ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್,  ಸಚಿವರಾದ ಸುನೀಲ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು..
[ನಾಡಹಬ್ಬ ದಸರಾ ಉದ್ಘಾಟನೆಗಾಗಿ ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಡ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

Post a Comment

Previous Post Next Post