lಡೆಮಾಕ್ರಟಿಕ್‌ ಆಜಾದ್‌ ಪಾರ್ಟಿ ಜಮ್ಮು-ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷವಾಗಿ ಅಸ್ತಿತ್ವಕ್ಕೆ

ನಗರ; ಇತ್ತೀಚೆಗೆ ಕಾಂಗ್ರೆಸ್‌ ತೊರೆದಿದ್ದ ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್‌ ಅವರು ಹೊಸ ಪಾರ್ಟಿ ಘೋಷಣೆ ಮಾಡಿದ್ದಾರೆ. ಡೆಮಾಕ್ರಟಿಕ್‌ ಆಜಾದ್‌ ಪಾರ್ಟಿ ಎಂದು ಅದಕ್ಕೆ ಹೆಸರಿಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಇದು ಪ್ರಾದೇಶಿಕ ಪಕ್ಷವಾಗಿ ಕಾರ್ಯನಿರ್ವಹಿಸಲಿದೆ.ಇಂದು ಗುಲಾಂ ನಬಿ ಆಜಾದ್‌ ಅವರು ಪಕ್ಷದ ಹೆಸರು ಘೋಷಣೆ ಮಾಡಿದ್ದು, ಶೀಘ್ರದಲ್ಲೇ ಅದನ್ನು ಅಧಿಕೃತವಾಗಿ ಲಾಂಚ್‌ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಗುಲಾಂ ನಬಿ ಆಜಾದ್‌ ಅವರು ಐದು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದ ಅವರು, ಪಕ್ಷದಲ್ಲೂ ಹಲವು ಹುದ್ದೆಗಳನ್ನು ನಿಭಾಯಿಸಿದ್ದರು.


ರಾಹುಲ್‌ ಗಾಂಧಿಯವರ ಕಾರ್ಯವೈಖರಿಗೆ ಬೇಸತ್ತು ಅವರು ಇದೇ ಆಗಸ್ಟ್‌ 26ರಂದು ಕಾಂಗ್ರೆಸ್‌ನ ಎಲ್ಲಾ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು.

Post a Comment

Previous Post Next Post