ಅಕ್ಟೋಬರ್ 04, 2022 | , | 8:12PM |
ಉತ್ತರಕಾಶಿಯ ದ್ರೌಪದಿಯ ದಂಡ-2 ಪರ್ವತ ಶಿಖರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 21 ಮಂದಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
NIM ಪ್ರಕಾರ, 34 ಪ್ರಶಿಕ್ಷಣಾರ್ಥಿಗಳು ಮತ್ತು 7 ಪರ್ವತಾರೋಹಣ ಬೋಧಕರು ಸೇರಿದಂತೆ 41 ಜನರು ಹಿಮಕುಸಿತಕ್ಕೆ ಒಳಗಾಗಿದ್ದಾರೆ. ಮತ್ತೊಂದೆಡೆ, ನೆಹರು ಪರ್ವತಾರೋಹಣ ಸಂಸ್ಥೆಯ ತಂಡದೊಂದಿಗೆ ಜಿಲ್ಲಾಡಳಿತ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ ಮತ್ತು ಐಟಿಬಿಪಿ ಸಿಬ್ಬಂದಿಗಳು ಸಿಕ್ಕಿಬಿದ್ದಿರುವ ಪ್ರಶಿಕ್ಷಣಾರ್ಥಿಗಳನ್ನು ಶೀಘ್ರವಾಗಿ ರಕ್ಷಿಸಲು ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.
ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಕುಸಿತ ಘಟನೆಗೆ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸೇನೆಯ ಸಹಾಯವನ್ನು ತೆಗೆದುಕೊಳ್ಳುವ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದರು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವಂತೆ ರಕ್ಷಣಾ ಸಚಿವರು ವಾಯುಪಡೆಗೆ ಸೂಚನೆ ನೀಡಿದ್ದು, ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.
Post a Comment