ಅಕ್ಟೋಬರ್ 19, 2022 | , | 3:34PM |
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಆಯ್ಕೆಯಾಗಿದ್ದಾರೆ. ಅವರು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರನ್ನು ಸೋಲಿಸಿದರು.
ನವದೆಹಲಿಯಲ್ಲಿ ಫಲಿತಾಂಶ ಪ್ರಕಟಿಸಿದ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು, ಖರ್ಗೆ ಅವರು 7,897 ಮತಗಳನ್ನು ಗಳಿಸಿದ್ದರೆ, ಶಶಿ ತರೂರ್ 1,072 ಮತಗಳನ್ನು ಪಡೆದಿದ್ದಾರೆ.
ಎರಡು ದಿನಗಳ ಹಿಂದೆ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಮತದಾನ ನಡೆದಿತ್ತು. 24 ವರ್ಷಗಳಲ್ಲಿ ನೆಹರೂ-ಗಾಂಧಿ ಕುಟುಂಬಕ್ಕೆ ಸೇರದ ಮೊದಲ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ರೀ.ಖರ್ಗೆ ಹೊರಹೊಮ್ಮಲಿದ್ದಾರೆ.
Post a Comment