ವಿಧಾನಸಭಾ ಚುನಾವಣೆ ಗೆಲುವಿಗೆ ರೋಡ್ ಮ್ಯಾಪ್ ಕುರಿತ ಚರ್ಚೆ- ಅರುಣ್ ಸಿಂಗ್
ಬೆಂಗಳೂರು: 2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ 150 ಸೀಟುಗಳನ್ನು ಗೆಲ್ಲುವ ಬಗ್ಗ ರಾಜ್ಯ ಕಾರ್ಯಕಾರಣಿಯಲ್ಲಿ ಚರ್ಚೆ ಮಾಡಲಿದ್ದೇವೆ. ಗೆಲುವಿಗೆ ರೋಡ್ ಮ್ಯಾಪ್ ತಯಾರಿಸಲಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.
ನಗರದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಭ್ರಷ್ಟರ ಪಕ್ಷ, ಷಡ್ಯಂತ್ರಗಳ ಪಕ್ಷ ಎಂದು ಟೀಕಿಸಿದರು. ಶಾಸಕ ಯತ್ನಾಳ್ ಹೇಳಿಕೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಯತ್ನಾಳ್ ಇದೇ ಮೊದಲಬಾರಿ ಹೇಳಿಕೆ ನೀಡಿಲ್ಲ. ಯತ್ನಾಳ್ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಅವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಉತ್ತರ ನೀಡಿದರು.
ಕರ್ನಾಟಕದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಯುತ್ತಿದೆ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಆರೋಪ ಮಾಡೋದು ಅವರ ಕೆಲಸ. ಕೇವಲ ಆರೋಪ ಮಾಡಲು ಇಡೀ ಯಾತ್ರೆ ಮಾಡುತ್ತಿದ್ದಾರೆ. ಆದರೂ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಸವರಾಜ ಬೊಮ್ಮಾಯಿ ಅವರು ರೈತರ ಮಕ್ಕಳಿಗೆ ಶಿಕ್ಷಣಕ್ಕೆ ಧನಸಹಾಯ ಮಾಡಿದ್ದಾರೆ. ಬಡವರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ಬಡವರ, ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸಮಗ್ರ ಅಭಿವೃದ್ಧಿಯ ಚಿಂತನೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಬೊಮ್ಮಾಯಿ ಅವರು ರಾಜಕೀಯ ಇತಿಹಾಸದಲ್ಲಿ ಅನೇಕ ಸಚಿವ ಸ್ಥಾನ ನಿಭಾಯಿಸಿದ್ದಾರೆ. ಆದರೆ, ಎಂದೂ ಅವರ ಮೇಲೆ ಆರೋಪ ಬಂದಿಲ್ಲ. ಅವರ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದ ಅವರು, 2023ರ ವೇಳೆಗೆ ಕಾಂಗ್ರೆಸ್ ಸಂಪೂರ್ಣ ನೆಲ ಕಚ್ಚಲಿದೆ ಎಂದು ನುಡಿದರು.
ಆರೆಸ್ಸೆಸ್ ಹಿರಿಯ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿಜಿ ಅವರ ಆಡಳಿತದಲ್ಲಿ ನಿರಂತರವಾಗಿ ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ. ಸ್ಟಾರ್ಟಪ್ ಗಳಿಗೆ ಉತ್ತೇಜನ ಕೊಡಲಾಗುತ್ತಿದೆ. ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ತಿಳಿಸಿದರು.
40% ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಆ ಕುರಿತು ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ದಾಖಲೆ ನೀಡಲಿ. ಲೋಕಾಯುಕ್ತ ಇರುವಾಗ ನ್ಯಾಯಾಂಗ ತನಿಖೆ ಯಾಕೆ.? ಎಂದು ಕೇಳಿದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ವಿಚಾರವು ಆ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಚರ್ಚೆ ಮಾಡಲು ಬಯಸುವುದಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
(
ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಬದ್ಧ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಾಮಾಜಿಕ ನ್ಯಾಯಕ್ಕೆ ಬಿಜೆಪಿ ಬದ್ಧವಾಗಿದೆ. ನಾಗಮೋಹನ್ ದಾಸ್, ಸುಭಾಷ್ ಆಡಿ ವರದಿ ಜಾರಿ, ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಬದ್ಧವಿದೆ. ಈ ಸಂಬಂಧ ಸರ್ವಪಕ್ಷಗಳ ಸಭೆಯಲ್ಲೂ ಚರ್ಚಿಸಲಾಗುವುದು. ಎಲ್ಲ ಶೋಷಿತ- ವಂಚಿತ ವರ್ಗಗಳಿಗೆ ನ್ಯಾಯ ಕೊಡಲು ದಿಟ್ಟ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ನಗರದ ಅರಮನೆ ಮೈದಾನದ ‘ತ್ರಿಪುರ ವಾಸಿನಿ’, ಗೇಟ್ ನಂ.2ರಲ್ಲಿ ಇಂದು ಆರಂಭಗೊಂಡಿತು. ಇದರಲ್ಲಿ ಮಾತನಾಡಿದ ಅವರು, ಜನಪರ ಕಾರ್ಯಕ್ರಮಗಳಿಗೆ ನಾವು ಬದ್ಧರಾಗಿದ್ದೇವೆ. ಚುನಾವಣೆಗೆ ನಮ್ಮ ಕಾರ್ಯತಂತ್ರ ಕುರಿತಂತೆ ಚರ್ಚಿಸಿ ನಿರ್ಧರ ಕೈಗೊಳ್ಳಬೇಕಿದೆ ಎಂದು ಅವರು ತಿಳಿಸಿದರು.
ಇದೊಂದು ಮಹತ್ವದ ಸಭೆ. ರಾಜ್ಯ ಕಾರ್ಯಕಾರಿಣಿಯನ್ನು ಪ್ರತಿ 3 ತಿಂಗಳಿಗೊಮ್ಮೆ ನಡೆಸುವ ಕಾರ್ಯಸೂಚಿಗಳನ್ನು ಕಾರ್ಯಾನುಷ್ಠಾನ ಮಾಡುವ ಜನರಿಗೆ ಹತ್ತಿರ ಇರುವ ಚಲನಶೀಲ ಪಕ್ಷ ನಮ್ಮದು. ಕಾರ್ಯಕ್ರಮಗಳು, ರಾಜಕೀಯ ಸ್ಥಿತಿಗತಿಗಳ ಅವಲೋಕನ ಮಾಡಲಾಗುತ್ತಿದೆ. ಬೇರೆ ಪಕ್ಷಗಳಲ್ಲಿ ಪ್ರಜಾಪ್ರಭುತ್ವ ಇಲ್ಲ. ಚಲನಶೀಲತೆಯೂ ಇಲ್ಲ ಎಂದು ಅವರು ತಿಳಿಸಿದರು.
ನಮ್ಮ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ನಮ್ಮ ಜವಾಬ್ದಾರಿಯೂ ಹೆಚ್ಚಾಗಿದೆ. ಬೇರೆ ಪಕ್ಷಗಳ ನಡವಳಿಕೆಯಿಂದ ಜನರು ಬೇಸತ್ತಿದ್ದಾರೆ. ವಿರೋಧ ಪಕ್ಷಗಳು ಜನರ ವಿಶ್ವಾಸ ಕಳೆದುಕೊಂಡಿವೆ. ಇದು ಮುಂದಿನ ದಿನಗಳಲ್ಲೂ ಸ್ಪಷ್ಟಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಬಲ ಕೇಂದ್ರ, ರಾಜ್ಯಗಳಿಂದ ಉತ್ತಮ ಆಡಳಿತ ಕೊಡಲು ಸಾಧ್ಯವಿದೆ. ವ್ಯಕ್ತಿ ಸ್ವಾತಂತ್ರ್ಯ, ಸಮಾನತೆ, ರಾಜ್ಯ ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಮೇಲೆ ನಾವು ಹೆಚ್ಚಿನ ನಂಬಿಕೆ ಇಟ್ಟಿದ್ದೇವೆ ಎಂದು ಅವರು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 3 ವರ್ಷ ಕಳೆದಿದೆ. 30-32 ಸೀಟುಗಳಿದ್ದ ಪಕ್ಷಕ್ಕೆ ಅಧಿಕಾರ ಕೊಟ್ಟ ಪಕ್ಷ ಕಾಂಗ್ರೆಸ್. ಸರಕಾರ ಜನಮನ್ನಣೆಯಿಂದ ಆಗಬೇಕು. ಜನಮನ್ನಣೆ, ಚುನಾವಣಾ ಫಲಿತಾಂಶ ಧಿಕ್ಕರಿಸಿ, ವಾಮಮಾರ್ಗದ ಸರಕಾರ ಪಾಪದ ನೆಲೆಗಟ್ಟಿನಿಂದ ಕುಸಿದು ಬಿತ್ತು ಎಂದು ವಿವರಿಸಿದರು.
ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಎಲ್ಲ ರಂಗದಲ್ಲಿ ರಾಜ್ಯವು ಅತ್ಯುತ್ತಮ ರೀತಿಯಲ್ಲಿ ಅಭಿವೃದ್ಧಿ ಸಾಧಿಸಿದೆ. ಹಿಂದೆ ಕಾಂಗ್ರೆಸ್‍ನ 5 ವರ್ಷದ ದುರಾಡಳಿತ, ಭ್ರಷ್ಟಾಚಾರ, ಹಗರಣಗಳನ್ನು ಜನರು ಮರೆತಿಲ್ಲ. ಸಣ್ಣ ನೀರಾವರಿ ಇಲಾಖೆಯಲ್ಲೂ ಶೇ 100ರಷ್ಟು ಭ್ರಷ್ಟಾಚಾರ ನಡೆದಿತ್ತು ಎಂದು ತಿಳಿಸಿದರು.
ಒಂದೇ ದಿನದಲ್ಲಿ 36 ಸಾವಿರ ಬೋರ್‍ವೆಲ್ ಕೊರೆಸಿದ ಹಗರಣ ನಡೆದಿದೆ. ದಿಂಬು- ಹಾಸಿಗೆ ಖರೀದಿ, ಪೊಲೀಸ್ ನೇಮಕಾತಿಯಲ್ಲೂ ಕಾಂಗ್ರೆಸ್ ಅವಧಿಯಲ್ಲಿ ಹಗರಣ ನಡೆದಿತ್ತು. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ವಿಚಾರ ಮಾತನಾಡುವ ನೈತಿಕತೆ ಕಳೆದುಕೊಂಡಿದೆ ಎಂದು ತಿಳಿಸಿದರು.
ಪಿಎಫ್‍ಐ ದೇಶದ್ರೋಹಿ ಸಂಘಟನೆ ಮೇಲಿದ್ದ ಕೇಸು ರದ್ದತಿ ಮಾಡಿದ್ದ ಕಾಂಗ್ರೆಸ್ ಸರಕಾರವು ತಮ್ಮ ಶಾಸಕರ ಮನೆಗೆ ಬೆಂಕಿ ಹಾಕಿದರೂ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
50 ಕೋಟಿಗಿಂತ ಹೆಚ್ಚಿನ ಕಾಮಗಾರಿಗೆ ಸಂಬಂಧಿಸಿ ನ್ಯಾಯಾಧೀಶರ ನೇತೃತ್ವದ ವಿಶೇóಷ ಸಮಿತಿ ರಚಿಸಲಾಗಿದೆ. ನೇರ ಬೆನಿಫಿಟ್ ಸ್ಕೀಂ ಜಾರಿ ಮಾಡಲಾಗಿದೆ. 31 ಲಕ್ಷ ರೈತರಿಗೆ ಸಾಲ ಕೊಡಲಾಗಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಕೊಡಲಾಗಿದೆ. ಸಾಮಾಜಿಕ ನ್ಯಾಯ ಕೊಡಲು 100 ಎಸ್ಸಿ/ ಎಸ್‍ಟಿ ಹಾಸ್ಟೆಲ್ ತೆರೆಯಲಾಗುತ್ತಿದೆ ಎಂದು ತಿಳಿಸಿದರು.
ಅರ್ಹರಿಗೆ ಉಚಿತ ಕರೆಂಟ್ ಕೊಡಲು ಕಾರ್ಯಕ್ರಮ ರೂಪಿಸಿ ಅನುಷ್ಠಾನಕ್ಕೆ ತಂದಿದ್ದೇವೆ. ಮಹಿಳೆಯರು, ಯುವಕರಿಗೆ ವಿಶೇಷ ಕಾರ್ಯಕ್ರಮ ಆರಂಭಿಸಲಾಗಿದೆ. 5 ಲಕ್ಷ ಮಹಿಳೆಯರು, 5 ಲಕ್ಷ ಯುವಕರಿಗೆ ಉದ್ಯೋಗ ಲಭಿಸಲಿದೆ ಎಂದರು.
8,101 ಶಾಲಾ ಕೊಠಡಿ ನಿರ್ಮಾಣ, 100 ಪಿಎಚ್‍ಸಿ ಗಳ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಹೊಸ ಹೈಸ್ಕೂಲ್ ತೆರೆಯುತ್ತಿದ್ದು, ಶಿಕ್ಷಣ- ಆರೋಗ್ಯ ಸೇರಿ ಎಲ್ಲ ಮೂಲಸೌಕರ್ಯಗಳ ಕ್ಷೇತ್ರದಲ್ಲಿ ಗರಿಷ್ಠ ಅಭಿವೃದ್ಧಿ ಸಾಧಿಸಿದ್ದೇವೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕದ ಅನುದಾನವನ್ನು 1500 ಕೋಟಿಯಿಂದ 3 ಸಾವಿರ ಕೋಟಿಗೆ ಹೆಚ್ಚಿಸಲಾಗಿದೆ. ದಕ್ಷಿಣ ಕರ್ನಾಟಕ, ಕರಾವಳಿ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹತ್ತು ಹಲವು ಯೋಜನೆ ರೂಪಿಸಲಾಗಿದೆ. ದಾವಣಗೆರೆ, ಹಾಸನ ಮತ್ತಿತರ ಕಡೆ ವಿಮಾನನಿಲ್ದಾಣ ಕಾಮಗಾರಿ ವೇಗವಾಗಿ ನಡೆದಿದೆ. ಕೈಗಾರಿಕೀಕರಣ ಭರದಿಂದ ಸಾಗಿದೆ. ಶೇ 38ರಷ್ಟು ಎಫ್‍ಡಿಐ ಕರ್ನಾಟಕಕ್ಕೆ ಬರುತ್ತಿದೆ ಎಂದು ವಿವರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಸಹ ಪ್ರಭಾರಿಗಳಾದ ಶ್ರೀಮತಿ ಡಿ.ಕೆ. ಅರುಣಾ ಹಾಗೂ ಕೋರ್ ಕಮಿಟಿ ಸದಸ್ಯರು, ಕೇಂದ್ರ- ರಾಜ್ಯಗಳ ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುತ್ತಿದ್ದಾರೆ.
(
ಬೆಂಗಳೂರು: ರಾಜ್ಯ ಬಿಜೆಪಿ ನಡೆಯು ಮತ್ತೆ ಅಧಿಕಾರಕ್ಕೆ ಏರುವ ಕಡೆ ಮುನ್ನಡೆಯಲಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ನಗರದ ಅರಮನೆ ಮೈದಾನದ ‘ತ್ರಿಪುರ ವಾಸಿನಿ’, ಗೇಟ್ ನಂ.2ರಲ್ಲಿ ಇಂದು ಆರಂಭವಾದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಯಾರೂ ತಡೆಯಲಾಗದು. ಮಾನ್ಯ ನರೇಂದ್ರ ಮೋದಿಜಿ ಮತ್ತು ರಾಜ್ಯದ ಬಿಜೆಪಿ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಅವರು ತಿಳಿಸಿದರು.
ಬಿಜೆಪಿ ಯಾತ್ರೆಗಳ ಮೂಲಕ ಜನರನ್ನು ತಲುಪಲಿದೆ. ಕಿಸಾನ್ ಸಮ್ಮಾನ್ ಯೋಜನೆ ಯಶಸ್ವಿಯಾಗಿದೆ. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 140ರಿಂದ 150 ಸೀಟುಗಳನ್ನು ಗೆದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಧ್ಯವರ್ತಿಗಳಿಲ್ಲದೆ ಈಗ ಕಾರ್ಯಕ್ರಮಗಳು ಜನರನ್ನು ತಲುಪುತ್ತಿವೆ ಎಂದ ಅವರು, ಈ ವಿಚಾರವನ್ನು ಜನರಿಗೆ ತಲುಪಿಸಿ ಎಂದು ಮನವಿ ಮಾಡಿದರು. ಶುದ್ಧ ಕುಡಿಯುವ ನೀರನ್ನು ಮನೆಮನೆಗೆ ತಲುಪಿಸಲಾಗಿದೆ. ಉಜ್ವಲ, ನಳ್ಳಿ ನೀರು ಸೇರಿ ಅನೇಕ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿವೆ ಎಂದು ವಿವರಿಸಿದರು. 6574 ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆಗಳು ಜಾರಿ ಆಗುತ್ತಿವೆ ಎಂದರು.
ಕಾಂಗ್ರೆಸ್ ಪಕ್ಷ ಜನರಿಂದ ತಿರಸ್ಕøತಗೊಂಡಿದೆ. ದೇಶದೆಲ್ಲೆಡೆ ತಿರಸ್ಕಾರಗೊಂಡ ಪಕ್ಷವು ಇಲ್ಲೂ ನೆಲಕಚ್ಚಲಿದೆ. ಕಾಂಗ್ರೆಸ್ ಯಾತ್ರೆ ಯಾವುದೇ ಫಲ ಕೊಡದು ಎಂದು ನುಡಿದರು. ಸಚಿವರು ನಿರಂತರ ಪ್ರವಾಸದಲ್ಲಿದ್ದು, ಕಾರ್ಯಕರ್ತರಲ್ಲಿ ವಿಶ್ವಾಸ- ನಂಬಿಕೆ ಹೆಚ್ಚಿಸಬೇಕು ಎಂದು ತಿಳಿಸಿದರು. ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎಂದರು.
ರಾಜ್ಯದ ಬಿಜೆಪಿ ಸರಕಾರದ ವಿವಿಧ ಸಾಧನೆಗಳನ್ನು ಅವರು ವಿವರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆಯನ್ನು ಉದ್ಘಾಟಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಸಹ ಪ್ರಭಾರಿಗಳಾದ ಶ್ರೀಮತಿ ಡಿ.ಕೆ. ಅರುಣಾ ಹಾಗೂ ಕೋರ್ ಕಮಿಟಿ ಸದಸ್ಯರು, ಕೇಂದ್ರ- ರಾಜ್ಯಗಳ ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುತ್ತಿದ್ದಾರೆ.
(
ಬೆಂಗಳೂರು: ಬಿಜೆಪಿ ಮುಖಂಡರ ಪ್ರವಾಸಕ್ಕೆ ಜನರಿಂದ ಅತ್ಯುತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಫಲಾನುಭವಿಗಳು ಆನಂದದಿಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ನಗರದ ಅರಮನೆ ಮೈದಾನದ ‘ತ್ರಿಪುರ ವಾಸಿನಿ’, ಗೇಟ್ ನಂ.2ರಲ್ಲಿ ಇಂದು ಆರಂಭವಾದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ದೇಶ ಮಾತ್ರವಲ್ಲದೆ, ವೀರಶೈವ ಸಮಾಜವನ್ನೂ ಒಡೆಯಲು ಮುಂದಾದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಭಾರತದಿಂದ ಓಡಲು ಇಟೆಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ. ಇದು ಯಶಸ್ವಿ ಆಗುವುದಿಲ್ಲ ಎಂದು ವಿಶ್ವಾಸದಿಂದ ನುಡಿದರು.
ಭಯೋತ್ಪಾದನೆ, ಭ್ರಷ್ಟಾಚಾರವೇ ಕಾಂಗ್ರೆಸ್‍ನ ದೊಡ್ಡ ಕೊಡುಗೆ. 6 ದಶಕಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಸದಾ ಕಾಲ ಹಗರಣಗಳನ್ನೇ ಮಾಡಿತು. ಶಾಸ್ತ್ರೀಜಿ ಹೊರತುಪಡಿಸಿ ಉಳಿದೆಲ್ಲ ಪ್ರಧಾನಿಗಳು ಭ್ರಷ್ಟರಾಗಿದ್ದರು. ಕಾಂಗ್ರೆಸ್ ಮುಖಂಡರೆಲ್ಲರೂ ಭ್ರಷ್ಟಾಚಾರ ಮಾಡಿದವರು ಎಂದು ಟೀಕಿಸಿದರು.
ಹಾಸ್ಟೆಲ್, ಹಾಸಿಗೆ, ಸೋಲಾರ್, ಶಾಲಾ ಮೊಟ್ಟೆ, ನೇಮಕಾತಿಯಲ್ಲೂ ಹಗರಣಗಳನ್ನು ಮಾಡಿದ್ದ, ಜಾತಿ- ಜಾತಿಗಳ ನಡುವೆ ಸಂಘರ್ಷ ತಂದಿಟ್ಟ ಸಿದ್ದರಾಮಣ್ಣನ ಕೊಡುಗೆಯನ್ನು ಜನರು ಮರೆತಿಲ್ಲ. ಅರ್ಕಾವತಿ ರೀಡೂ ಹಗರಣದಲ್ಲಿ ಸಿದ್ದರಾಮಣ್ಣ ಎಲ್ಲಿರುತ್ತಾರೆ ಎಂಬುದನ್ನು ಕಾದುನೋಡಿ ಎಂದು ಮುನ್ಸೂಚನೆ ನೀಡಿದರು. ಕಾಂಗ್ರೆಸ್ ಪಕ್ಷದ ಕೇಂದ್ರದ ಹಾಗೂ ರಾಜ್ಯದ ನಾಯಕರು ಜಾಮೀನಿನಡಿ ಇದ್ದಾರೆ ಎಂದು ಅವರು ಪ್ರಸ್ತಾಪಿಸಿದರು.
ಚುನಾವಣಾ ಪೂರ್ವತಯಾರಿ ನಡೆಯುತ್ತಿದೆ. ಅದ್ಭುತ ಪ್ರತಿಕ್ರಿಯೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಸಂಘಟನೆ ಕುರಿತು ಮೆಚ್ಚುಗೆ ಸೂಚಿಸಿದರು. ಜನರು ಬಿಜೆಪಿ ಕಡೆ ಮೆಚ್ಚುಗೆ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು. ಕೋವಿಡ್ ಉಚಿತ ಲಸಿಕೆ ಮೂಲಕ ಮಾಸ್ಕ್ ತೆಗೆದು ಕುಳಿತುಕೊಳ್ಳಲು ಜನಪರ ಕಾಳಜಿ ಉಳ್ಳ ಪ್ರಧಾನಿ ನರೇಂದ್ರ ಮೋದಿಜಿ ಅವರು ಕಾರಣರಾಗಿದ್ದಾರೆ ಎಂದು ಧನ್ಯವಾದ ಸಲ್ಲಿಸಿದರು.
ಇತರ ಪಕ್ಷಗಳ ಹತ್ತಾರು ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಪಕ್ಷದ ಮುಖಂಡರ ಪ್ರವಾಸ ನಡೆಸಲಾಗುತ್ತಿದೆ. ಚುನಾವಣೆಗೆ ಪಕ್ಷ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು. ಪ್ರಕಾಶನ ಪ್ರಕೋಷ್ಠದ ವತಿಯಿಂದ ಹೊರತಂದ ಸಮಷ್ಟಿ, ಧ್ಯೇಯಪಥ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು.
ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಸಹ ಪ್ರಭಾರಿಗಳಾದ ಶ್ರೀಮತಿ ಡಿ.ಕೆ. ಅರುಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಹಾಗೂ ಕೋರ್ ಕಮಿಟಿ ಸದಸ್ಯರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಭಗವಂತ ಖೂಬಾ, ಕು. ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದ ಸಚಿವರು, ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment