[11/10, 5:06 PM] +91 99001 58601: *ರಾಯಚೂರು* ಅಕ್ಟೋಬರ್ 11.. *ಮಾನ್ಯ ಮುಖ್ಯಮಂತ್ರಿ* *ಬಸವರಾಜ ಬೊಮ್ಮಾಯಿಯವರು* ಇಂದು *ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ* *ರಾಘವೇಂದ್ರ ಸ್ವಾಮೀಜಿ* *ದರ್ಶನ ಪಡೆದರು. ನಂತರ* *ಮಾಧ್ಯಮಗಳಿಗೆ ಪ್ರತಿಕ್ರಿಯೆ* *ನೀಡಿದರು* .
[11/10, 5:29 PM] +91 99001 58601: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಯಚೂರು ತಾಲೂಕಿನ ಗಿಲೆಸ್ಗೂರು ಗ್ರಾಮದ ದಲಿತ ಕುಟುಂಬದ ಅಯ್ಯಪ್ಪ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಚಹಾ ಕುಡಿದು, ಅವರ ಕುಟುಂಬದ ಜೊತೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜು ಗೌಡ, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಮತ್ತಿತರರು ಹಾಜರಿದ್ದರು.
[11/10, 6:37 PM] +91 99001 58601: ಮಂತ್ರಾಲಯ ಕ್ಷೇತ್ರಕ್ಕೆ ಸಿಎಂ ಭೇಟಿ :
*ನಾಡನ್ನು ಸುಭಿಕ್ಷಗೊಳಿಸಲು ಪ್ರಾರ್ಥನೆ- ಸಿಎಂ ಬೊಮ್ಮಾಯಿ*
ರಾಯಚೂರು, ಅಕ್ಟೋಬರ್ 11:
ಕನ್ನಡ ನಾಡು ಸುಭಿಕ್ಷವಾಗಿರಲು ಹಾಗೂ ನಾಡಿನ ಜನತೆಯ ಬದುಕು ಶಾಂತಿ ನೆಮ್ಮದಿ , ಸೌಹಾರ್ದತೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ರಾಯಚೂರು ಜಿಲ್ಲೆಗೆ ಬಂದಾಗ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡುವ ಪದ್ಧತಿಯಿದ್ದು ಶ್ರೀಮಠಕ್ಕೆ ಆಗಮಿಸಿ ಆರ್ಶೀವಾದವನ್ನು ಪಡೆಯಲಾಗಿದೆ ಎಂದರು.
[11/10, 6:42 PM] +91 99001 58601: *ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು.
ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅಸ್ತಿತ್ವ ಉಳಿಸಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದರು.
'ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮಾಜವಾದಿ ಹಿನ್ನೆಲೆಯಿಂದ ಬಂದಿರುವವರು. ಯಾವಾಗ ಕಾಂಗ್ರೆಸ್ ಸೇರಿದರೋ ಅಂದಿನಿಂದ ಸಮಾಜವಾದವನ್ನು ಮಡಿಚಿ ಮನೆಯಲ್ಲಿಟ್ಟಿದ್ದಾರೆ. ಮರೆತುಬಿಟ್ಟಿದ್ದೀರಿ. ದುಃಖದ ಸಂಗತಿಯೆಂದರೆ ಆ ಸಣ್ಣ ಹುಡುಗನ ಕೈಕೆಳಗೆ ಸೇವೆ ಮಾಡುತ್ತೀರಲ್ಲ. ಅವರು ಓಡು ಎಂದರೆ ಓಡುತ್ತೀರಿ, ಕುಳಿತುಕೋ ಎಂದರೆ ಕುಳಿತುಕೊಳ್ಳುತ್ತೀರಿ. ಇದು ಸ್ವಾಭಿಮಾನದ ಸಂಕೇತವಲ್ಲ."
"ಅಧಿಕಾರಕ್ಕಾಗಿ ಏನೆಲ್ಲವನ್ನೂ ಮಾಡಲು ಸಿದ್ಧರಾಗಿದ್ಧಿರಿ. ರಾಹುಲ್ ಗಾಂಧಿ ರಾಜಕೀಯದಲ್ಲಿ ಪ್ರಸ್ತುತವಾಗಬೇಕೆಂದು ಪಾದಯಾತ್ರೆ ಮಾಡುತ್ತಿದ್ದಾರೆ. ರೀಲಾಂಚಿಂಗ್ ರಾಹುಲ್ ಗಾಂಧಿ ಕಾರ್ಯಕ್ರಮವಿದು. ಈ ಯಾತ್ರೆ ದೇಶಕ್ಕಾಗಿ, ಜನರಿಗಾಗಿ, ದೀನದಲಿತರಿಗಾಗಿ ಅಲ್ಲ. ಅಂಥ ಭಾರತ್ ಜೋಡೋ ಯಾತ್ರೆಗೆ ನೀವು ಸಾಥ್ ನೀಡುತ್ತಿದ್ದೀರಿ, ನಿಮ್ಮ ಸ್ಥಾನ ಎಲ್ಲಿತ್ತು, ಏನಾಗಿದೆ ಎಂದು ನೀವು ನೋಡಿಕೊಳ್ಳಿ. ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ" ಎಂದರು.
ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅಲ್ಲಿರುವವರು ಸ್ವಲ್ಪ ದಿನಗಳಲ್ಲಿಯೇ ಈ ಕಡೆಗೆ ಬರುವವರಿದ್ದಾರೆ. ಈಗಾಗಲೇ ಸೂಚನೆಗಳು ಬರುತ್ತಿವೆ ಎಂದರು.
ರಾಜ್ಯಶಕ್ತಿ ಮತ್ತು ಜನ ಶಕ್ತಿ ಎರಡೂ ಪ್ರಜಾಪ್ರಭುತ್ವ ನಿರ್ಧಾರ ಮಾಡುತ್ತದೆ. ರಾಜ್ಯ ಶಕ್ತಿ ಜನಪರವಾಗಿದ್ದರೆ ಜನಶಕ್ತಿ ರಾಜ್ಯಪರವಾಗಿರುತ್ತದೆ. ರಾಜ್ಯಶಕ್ತಿ ಜನವಿರೋಧಿ ಕೆಲಸ ಮಾಡಿದಾಗ ಆಗ ಜನಶಕ್ತಿ ರಾಜ್ಯಶಕ್ತಿಯ ಪರವಾಗಿ ನಿಲ್ಲಲು ಸಾಧ್ಯವಿಲ್ಲ. ಕರ್ನಾಟಕ ಕಾಂಗ್ರೆಸ್ನ ಅಗ್ರಗಣ್ಯ ನಾಯಕರು ಹೇಳುವ ಅಹಿಂದದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ದೀನದಲಿತರನ್ನೊಳಗೊಂಡಿದೆ. ಅದರಲ್ಲಿ ಈಗ ಹಿಂದುಳಿದ ವರ್ಗದವದರು, ದೀನದಲಿತರು ಅವರನ್ನು ಬಿಟ್ಟುಹೋಗಿದ್ದಾರೆ. ಕೇವಲ ಅಲ್ಪಸಂಖ್ಯಾತರಿದ್ದಾರೆ ಎಂದರು.
*ರಾಜ್ಯಕ್ಕೆ ಕಾಂಗ್ರೆಸ್ ದೌರ್ಭಾಗ್ಯ ನೀಡಿದೆ*
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗದವರು, ದೀನದಲಿತರು ನೆನಪಾಗಲಿಲ್ಲ. ಅವರ ರಾಜಕುಮಾರ ಪಾದಯಾತ್ರೆ ಮಾಡುವರೆಂದು ರಾಯಚೂರಿಗೆ ತಯಾರಿಗೆ ಬಂದಿದ್ದಾರೆ. ಅವರಿಗೆ ರಾಯಚೂರಿನಲ್ಲಿ ಜನ ಸೇರುತ್ತಾರೋ ಇಲ್ಲವೋ ಎಂಬ ಭಯ ಇದೆ. ಅದಕ್ಕೆ ಬಂದಿದ್ದಾರೆ. ಎಸ್.ಸಿ/ ಎಸ್.ಟಿ ಮೀಸಲಾತಿ ಕಾಂಗ್ರೆಸ್ ಕೊಡುಗೆ ಎನ್ನುತ್ತಾರೆ. ಈ ರಾಜ್ಯವನ್ನು 60 ವರ್ಷ ಆಡಳಿತದಲ್ಲಿ 50 ವರ್ಷ ನೀವೇ ಆಳಿದ್ದೀರಿ. ಅಧಿಕಾರದಲ್ಲಿ ಇದ್ದಾಗ ದೀನದಲಿತರ ಜನಸಂಖ್ಯೆ ಹೆಚ್ಚಾಗಿದೆ. ಅವುಗಳಿಗೆ ಹೆಚ್ಚು ಜಾತಿಗಳು ಸೇರ್ಪಡೆಯಾಗಿವೆ. ಅವರ ಮೀಸಲಾತಿ ಹೆಚ್ಚಿಸಬೇಕು, ಅವಮಾನ, ತುಳಿತಕ್ಕೆ ಒಳಗಾಗಿದ್ದಾರೆ. ಸಮಾಜದ ಮುಖ್ಯವಾಹಿನಿಯಿಂದ ದೂರವಿದ್ದಾರೆ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶಿಕ್ಷಣ ಇಲ್ಲ, ಉದ್ಯೋಗವಿಲ್ಲದೆ ಹಿಂದುಳಿದಿದ್ದಾರೆ, ಅವರನ್ನು ಕೈಯೆತ್ತಿ ಹಿಡಿಯಬೇಕೆಂಬ ಜಾನವೂ ಇಲ್ಲದೇ ಇದ್ದರು.
ಈಗ ಭಾಜಪದ ದಿಟ್ಟ ನಿಲುವು, ನಮ್ಮ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಶೀರ್ವಾದದಿಂದ ಮೀಸಲಾತಿ ಹೆಚ್ಚಿಸಿದಾಗ, ಇದು ಕಾಂಗ್ರೆಸ್ ಕೊಡುಗೆ ಎನ್ನುತ್ತಾರೆ. ಹತ್ತು ಹಲವಾರು ಭಾಗ್ಯ ಕೊಡುತ್ತೇವೆ ಎಂದು ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟಿದ್ದಾರೆ. ಕಾಂಗ್ರೆಸ್ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ದೌರ್ಭಾಗ್ಯ ನೀಡಿದ್ದಾರೆ ಎಂದರು.
*ಆರ್.ಎಸ್.ಎಸ್ ಒಂದು ದೇಶಭಕ್ತಿಯ ಸಂಸ್ಥೆ*
ಮುಖ್ಯಮಂತ್ರಿಗಳು ಆರ್ ಎಸ್.ಎಸ್ ಕೈಗೊಂಬೆ ಎಂದಿದ್ದಾರೆ. ಆರ್.ಎಸ್.ಎಸ್ ಒಂದು ದೇಶಭಕ್ತಿಯ ಸಂಸ್ಥೆ ದೇಶವನ್ನು ಒಗ್ಗೂಡಿಸಿ, ಕಟ್ಟಲು ಶ್ರಮಿಸಿದ, ದೀನದಲಿತರ ಸೇವೆ, ಅನಾಥರ ಸೇವೆ ಮಾಡಿ, ತಳಸಮುದಾಯಕ್ಕೆ ಧ್ವನಿಕೊಟ್ಟು ಮುಖ್ಯವಾಹಿನಿಗೆ ತಂದ ಶ್ರೇಷ್ಠ ಸಂಸ್ಥೆ ಆರ್.ಎಸ್.ಎಸ್. ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕು ನಿಮಗಿಲ್ಲ ಎಂದರು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಾಡುತ್ತೇವೆ ಅಂದರು. ಆದರೆ ಈ ಭಾಗದ ಜನ ಆಶಾಭಾವನೆಯಿಂದ ಇದ್ದರು. ಕಲ್ಯಾಣವಾಗುತ್ತದೆ ಎಂದು. ಸ್ಪಷ್ಟ ನೀತಿ ಇಲ್ಲ, ಅನುದಾನ ಉಪಯೋಗಿಸಲಿಲ್ಲ. ಬಿಎಸ್ ವೈ ಅವರು 1800 ಕೋಟಿ ರೂ ಪ್ರತಿ ವರ್ಷ ನೀಡಿದರು. ನಾನು ಮುಖ್ಯಮಂತ್ರಿಯಾದ ನಂತರ ಮುಂದಿನ ವರ್ಷ ಮೂರು ಸಾವಿರ ಕೋಟಿ ರೂ.ಗಳ ಯೋಜನೆಯನ್ನು ಬಜೆಟ್ ನಲ್ಲಿ ನೀಡಿ, ಕ್ರಿಯಾಯೋಜನೆ ರೂಪಿಸಿ, ಕಾಮಗಾರಿ ಈಗಾಗಲೇ ಪ್ರಾರಂಭವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಸಹ-ಉಸ್ತುವಾರಿಗಳು ಡಿ.ಕೆ.ಅರುಣಾ, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಗೋವಿಂದ್ ಕಾರಜೋಳ, ಸಚಿವರು. ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಂಸದರಾದ ರಾಜ ಅಮರೇಶ್ವರ ನಾಯ್ಕ್, ಸಂಗಣ್ಣ ಕರಡಿ, ಶಾಸಕರಾದ ಡಾ. ಶಿವರಾಜ್ ಪಾಟೀಲ್, ಶಿವನಗೌಡ ನಾಯ್ಕ್, ರಾಜು ಗೌಡ, ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್,ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಬಿಜೆಪಿ ರಾಯಚೂರು ಜಿಲ್ಲಾಧ್ಯಕ್ಷ ರಮಾನಂದ ಯಾದವ್ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಉಪಸ್ಥಿತರಿದ್ದರು.
[11/10, 6:58 PM] +91 99001 58601: *ಎಸ್.ಸಿ/ ಎಸ್.ಟಿ ಮೀಸಲಾತಿ ಹೆಚ್ಚಳ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 11: ಕರ್ನಾಟಕದ ಇತಿಹಾಸದಲ್ಲಿ ಎಸ್.ಸಿ/ ಎಸ್.ಟಿ ಮೀಸಲಾತಿಯನ್ನು ಹೆಚ್ಚಿಗೆ ಮಾಡುವ ಕೆಲಸವನ್ನು ಯಾವ ಸರ್ಕಾರ ಕೂಡ ಕೈಗೊಂಡಿರಲಿಲ್ಲ. ನಮ್ಮ ಸರ್ಕಾರ ಐತಿಹಾಸಿಕ ತೀರ್ಮಾನವನ್ನು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರು ತಾಲ್ಲೂಕಿನ ಗಿಲ್ಲೆಸಗೂರು ಗ್ರಾಮದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
*ಕಾಂಗ್ರೆಸ್ ಭಯಗೊಂಡಿದೆ*
ಕಳೆದ 50 ವರ್ಷಗಳಿಂದ ಮೀಸಲಾತಿ ಹೆಚ್ವಿಸಲು ಬೇಡಿಕೆ ಇತ್ತು. ಕಾಂಗ್ರೆಸ್ ಅಧಿಕಾರವಿದ್ದಾಗ ಏನೂ ಮಾಡಲಿಲ್ಲ. ನಾನು ಎಲ್ಲಾ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಈ ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ಈಗ ಅವರಿಗೆ ಭಯ ಹುಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಈ ದಿಟ್ಟ ಕ್ರಮ ತೆಗೆದುಕೊಂಡಿರುವುದರಿಂದ ಅವರ ಮತ ಬಿಜೆಪಿ ಗೆ ಹೋಗುತ್ತದೆ ಎಂದು ಭಯಗೊಂಡು ಈ ರೀತಿ ಮಾತನಾಡುತ್ತಿದ್ದಾರೆ ಎಂದರು.
*ಯಾರೂ ಅಪಸ್ವರ ಎತ್ತಬಾರದು*
ಎಸ್.ಸಿ/ಎಸ್.ಟಿ ಸಮುದಾಯಕ್ಕೆ ತೆಗೆದುಕೊಂಡಿರುವ ಈ ಕ್ರಮದಲ್ಲಿ ಯಾರೂ ಕೂಡ ಅಪಸ್ವರದ ಮಾತುಗಳನ್ನು ಆಡಬಾರದು. ಕಳೆದ 50-60 ವರ್ಷ ಆ ಜನಾಂಗ ನೊಂದಿದೆ. ಅವರಿಗೆ ಅಧಿಕಾರ, ನ್ಯಾಯ ಸಿಕ್ಕಿಲ್ಲ. ಇಂಥ ಸಂದರ್ಭದಲ್ಲಿ ಈ ಪ್ರಕ್ರಿಯೆ ಪ್ರಾರಂಭವಾಗಿದೆ. ಅದಕ್ಕಾಗಿ ಯಾರೂ ಕೂಡ ಅಪಸ್ವರ ಎತ್ತಬಾರದು. ಯಾರು ಅಪಸ್ವರ ಎತ್ತುತ್ತಾರೋ ಅವರು ಎಸ್.ಸಿ. ಎಸ್..ಟಿ ವಿರೋಧಿಗಳು ಎಂದರು.
*ಸೂಕ್ತ ನಿರ್ಣಯ*
ಹಲವಾರು ಜನಾಂಗಗಳು ವಿವಿಧ ಬೇಡಿಕೆಗಳನ್ನು ಇಟ್ಟಿದ್ದಾರೆ. ಕೆಲವರು ಎಸ್.ಟಿ ಗೆ ಸೇರಿಸಬೇಕೆಂದೂ, ಕೆಲವರು 3ಬಿ ಯಿಂದ 2 ಎ ಗೆ ಸೇರಿಸಬೇಕೆಂತಲೂ, ಕೆಲವರು ಹಿಂದುಳಿದ ವರ್ಗಕ್ಕೆ ಸೇರಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಈಗ ಶಿಕ್ಷಣ ಮತ್ತು ಉದ್ಯೋಗದ ಜಾಗೃತಿಯಾಗಿರುವುದರಿಂದ ಜನರ ಆಶೋತ್ತರಗಳು ಎಲ್ಲಾ ಸಮುದಾಯಗಳಲ್ಲಿ ಹೆಚ್ಚಾಗಿದೆ. ಎಲ್ಲಕ್ಕೂ ಕಾನೂನಿನಡಿ ಆಯೋಗಗಳು ಶಿಫಾರಸ್ಸು ಮಾಡುವುದರನ್ವಯ ಸೂಕ್ತ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
*ಡಿಸೆಂಬರ್ ವರೆಗೆ ಜನಸಂಕಲ್ಪ ಯಾತ್ರೆ*
ಜನಸಂಕಲ್ಪ ಯಾತ್ರೆ ನಿರಂತರವಾಗಿ ಡಿಸೆಂಬರ್ ವರೆಗೆ ನಡೆಯುತ್ತಿದೆ. ಎಲ್ಲ್ಲಾ ಜಿಲ್ಲೆಗಳಲ್ಲಿ 50 ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಹಾಗೂ ಎರಡನೇ ಹಂತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸುವುದು ಮತ್ತು ಬರುವ ದಿನಗಳಲ್ಲಿ ಘೋಷಣೆಯಾಗಿರುವ ಕಾರ್ಯಕ್ರಮಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ಮುಟ್ಟುವ ರೀತಿಯಲ್ಲಿ ಎಲ್ಲರೂ ಸೇರಿ ಸಂಕಲ್ಪವನ್ನು ಮಾಡಿ ಜನರ ಕಲ್ಯಾಣ ಕಾರ್ಯಕ್ರಮವನ್ನು ಮುಂದಿಟ್ಟು ನಾವು ಜನಾದೇಶವನ್ನು ಪಡೆಯುವ ಈ ಸಂಕಲ್ಪ ಯಾತ್ರೆ ರಾಯಚೂರಿನಿಂದ ಪ್ರಾರಂಭವಾಗುತ್ತಿದೆ. ಜನಸಂದಣಿ ಎಷ್ಟು ದೊಡ್ಡದಿದೆ, ಉತ್ಸವ ಎಷ್ಟು ದೊಡ್ಡದಿದೆ ಎಂದು ಕಾಣಬಹುದು. ಇದು ಬರುವ ದಿನಗಳಲ್ಲಿ 2023 ಕ್ಕೆ ಭಾರತೀಯ ಜನತಾ ಪಕ್ಷ ಮತ್ತೆ ಕರ್ನಾಟಕದಲ್ಲಿ ಆಡಳಿತದ ಚುಕ್ಕಾಣಿ ಹಿಡಿದು ಜನಪರವಾದ ಕೆಲಸ ಮಾಡುತ್ತದೆ ಎನ್ನುವುದರ ಸಂದೇಶ ನೀಡುತ್ತಿದೆ ಎಂದು ಭಾವಿಸುವುದಾಗಿ ತಿಳಿಸಿದರು.
ಕಾಂಗ್ರೆಸ್ ಪಕ್ಷದ ಜೋಡೋ ಯಾತ್ರೆಗೂ ಜನಸಂಕಲ್ಪ ಯಾತ್ರೆಗೂ ಸಂಬಂಧವಿಲ್ಲ. ಅವರು ಕಾಂಗ್ರೆಸ್ ಜೋಡೋ ಯಾತ್ರೆಯಲ್ಲಿ ಏನು ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಆದರೆ ನಮ್ಮದು ಜನಸಂಕಲ್ಪ, ಜನಸಂಪರ್ಕ ಮಾಡುವ ಯಾತ್ರೆ ಎಂದರು.
ಡಿ.ಕೆ.ಶಿವಕುಮಾರ್ ಜನಸಂಕಲ್ಪ ಯಾತ್ರೆಯನ್ನು ಬಿಜೆಪಿ ಸೋಲುವ ಭಯದಿಂದ ಕೈಗೊಂಡಿದೆ ಎಂಬ ಹೇಳಿಕೆಗೆ ಪ್ರತಿಕಿಯೆ ನೀಡಿ ಈಗ ಅವರು ಜೋಡೋ ಯಾತ್ರೆಯನ್ನು ಸೋಲುವ ಭಯದಿಂದಲೇ ಕೈಗೊಂಡಿದ್ದಾರೆಯೇ ? ರಾಹುಲ್ ಗಾಂಧಿ ಅಸ್ತಿತ್ವ ಕಳೆದುಕೊಳ್ಳುವ ಭಯದಿಂದ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.
*ರಾಯಚೂರಿಗೆ ಏಮ್ಸ್*
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಬಗ್ಗೆ ಮುಂದಿನ ವಾರ ದೆಹಲಿಗೆ ಹೋಗುವ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪ ಮಾಡಿ ಹಿಂದುಳಿದ ಜಿಲ್ಲೆಗೆ ಏಮ್ಸ್ ಸ್ಥಾಪನೆಗೆ ಕ್ರಮವಹಿಸಲಾಗುವುದು. ಏಮ್ಸ್ ತರುವಲ್ಲಿ ನಾನು ಯಶಸ್ವಿಯಾಗುತ್ತೇನೆ ಎಂದು ನನಗೆ ವಿಶ್ವಾಸವಿದೆ ಎಂದರು.
[11/10, 7:51 PM] +91 99001 58601: *ರಾಯಚೂರಿನ ರಾಜಕಾರಣದಲ್ಲಿ ಬಹಳ ದೊಡ್ಡ ಬದಲಾವಣೆ ಆಗಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ರಾಯಚೂರು , ಅಕ್ಟೋಬರ್ 11 :
ರಾಯಚೂರಿನ ರಾಜಕಾರಣದಲ್ಲಿ ಬಹಳ ದೊಡ್ಡ ಬದಲಾವಣೆ ಆಗಲಿದೆ. ನಾವು ರಾಯಚೂರಿಗೆ ಮಾಡಿರುವ ಕೆಲಸಗಳ ರಿಪೋರ್ಟ್ ಕಾರ್ಡ್ ಇಟ್ಟು, ನಿಮ್ಮ ಬೆಂಬಲವನ್ನು ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂಬ ಸಂಕಲ್ಪವನ್ನು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರು ತಾಲ್ಲೂಕಿನ ಗಿಲ್ಲೆಸಗೂರು ಗ್ರಾಮದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು.
*ರಾಯಚೂರಿಗೆ ಏಮ್ಸ್*
ಬಹುದಿನಗಳ ಬೇಡಿಕೆಯಾದ ಏಮ್ಸ್ ಸಂಸ್ಥೆಯನ್ನು ರಾಯಚೂರಿಗೆ ತರಲು ಎಲ್ಲಾ ಪ್ರಯತ್ನಗಳು ನಡೆದಿದೆ. ಕೇಂದ್ರ ಆರೋಗ್ಯ ಸಚಿವರ ಬಳಿ ಮಾತನಾಡಿದ್ದೇನೆ. ಮುಂದಿನ ವಾರ ದೆಹಲಿಗೆ ಹೋಗಿ ಮಾತನಾಡಲಿದ್ದೇನೆ. ನರೇಂದ್ರ ಮೋದಿಯವರ ಆಶೀರ್ವಾದದಿಂದ ಏಮ್ಸ್ ರಾಯಚೂರಿಗೆ ಬರಲಿದೆ ಎಂದರು .
*ಮಂತ್ರಾಲಯದ ಸೇತುವೆಗೆ ಮಾಜಿ ಸಿಎಂ ಬಿ ಎಸ್ ವೈ ಬಿ.ವೈ ಹೆಸರು:*
ಮಂತ್ರಾಲಯದ ಸೇತುವೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನರ ಹೆಸರು ಇಡಲು ಸಧ್ಯದಲ್ಲಿಯೇ ಆದೇಶ ಹೊರಡಿಸಲಾಗುವುದು.
ರಾಯಚೂರಿನ ಗ್ರಾಮೀಣ ಭಾಗದಲ್ಲಿ 23 ಕೆರೆ ತುಂಬಿಸುವ ಯೋಜನೆಯನ್ನು ಖಂಡಿತವಾಗಿಯೂ ಜಾರಿ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ಕಟ್ಟಕಡೆಯಲ್ಲಿರುವವ ಜಮೀನಿಗೂ ನೀರು ತಲುಪಿಸಲಾಗುವುದು. ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಭಾಜಪ ಸರ್ಕಾರ ಕಂಕಣಬದ್ಧವಾಗಿದೆ ಎಂದರು.
*ರಾಯಚೂರು ಜಿಲ್ಲೆಗೆ ವಿಶೇಷವಾದ ಕೈಗಾರಿಕಾ ಯೋಜನೆ :*
ರಾಯಚೂರು ಕರ್ನಾಟಕದ ಹೃದಯ ಭಾಗ. ವಿದ್ಯುತ್ ಕೊಡುವ ಮಹತ್ವದ ಕೇಂದ್ರ. ಈ ಭಾಗದಲ್ಲಿ ಔದ್ಯೋಗೀಕರಣವಾಗಬೇಕು, ಯುವಕರಿಗೆ ಉದ್ಯೋಗ ಸಿಗಬೇಕು. ರಾಯಚೂರು ಜಿಲ್ಲೆಗೆ ವಿಶೇಷವಾದ ಕೈಗಾರಿಕಾ ಯೋಜನೆಗಳನ್ನು ಬರುವ ತಿಂಗಳಲ್ಲಿ ಘೋಷಣೆ ಮಾಡಲಾಗುವುದು. ರಾಯಚೂರು ವಿಶ್ವವಿದ್ಯಾಲಯಕ್ಕೆ ಅನುದಾನ, ರಾಯಚೂರು ಜಿಲ್ಲೆಯ ಮಕ್ಕಳ ಪೌಷ್ಟಿಕ ಆಹಾರಕ್ಕೆ ವಿಶೇಷ ಅನುದಾನ ನೀಡಲಾಗುವುದು ಎಂದರು.
*ಕಲ್ಯಾಣ ಕರ್ನಾಟಕ ಅಭಿವೃದ್ದಿ :*
ಕಲ್ಯಾಣ ಕರ್ನಾಟದಲ್ಲಿ 1101 ಶಾಲಾ ಕೊಠಡಿಗಳನ್ನು ಕಟ್ಟಲು ವಿಶೇಷ ಅನುದಾನ, 64 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರಾರಂಭ, ಪ್ರತಿ ಕ್ಷೇತ್ರಕ್ಕೆ, ರಸ್ತೆ, ಮೂಲಭೂತ ಸೌಕರ್ಯ ಅಭಿವೃದ್ಧಿ ಬರುವ ದಿನಗಳಲ್ಲಿ ಈ ಭಾಗಕ್ಕೆ 5000 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ನೀಡಲಾಗುವುದು., ಇದನ್ನು ಮಾಡೇ ತೀರುತ್ತೇನೆ ಎಂದರು. ಕಲ್ಯಾಣ ಕರ್ನಾಟಕಕ್ಕೆ, ದೀನದಲಿತರಿಗೆ, ರಾಯಚೂರಿಗೆ ಕೈಕೊಟ್ಟು, ಇಡೀ ಕರ್ನಾಟಕದ ಜನತೆಗೆ ಸುಳ್ಳು ಹೇಳಿದ್ದಾರೆ. ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂದುಕೊಂಡಿದ್ದಾರೆ. ಜನಮನ್ನಣೆ ಕೊಡುತ್ತಾರೆ ಎಂದು ಕಾಂಗ್ರೆಸ್ ನವರು ತಿಳಿದಿದ್ದಾರೆ ಎಂದರು.
*ದುಡಿಯುವ ವರ್ಗ ಭವಿಷ್ಯ ನಿರ್ಮಾಣ:*
ಸನ್ಮಾನ್ಯ ಯಡಿಯೂರಪ್ಪನವರ ಅವಧಿಯಲ್ಲಿ ರೈತರಿಗೆ 10 ಹೆಚ್ ಪಿ ಉಚಿತ ವಿದ್ಯುತ್, ರೈತ ಸನ್ಮಾನ ಯೋಜನೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ, ರೈತಬಂಧುಗಳ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು 10 ಲಕ್ಷ ರೈತರ ಮಕ್ಕಳಿಗೆ ನೀಡಲಾಗಿದೆ. ರೈತ ಕೂಲಿ ಮಕ್ಕಳಿಗೆ, ನೇಕಾರರು, ಮೀನುಗಾರರು, ಟ್ಯಾಕ್ಸಿ ಡ್ರೈವರ್, ಆಟೋಚಾಲಕರ ಮಕ್ಕಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ದುಡಿಯುವ ವರ್ಗ ಭವಿಷ್ಯ ನಿರ್ಮಾಣಕ್ಕೆ ಸಹಾಯ ಮಾಡುತ್ತಿದ್ದೇವೆ. ನಮ್ಮ ಸರ್ಕಾರ 28 ಸಾವಿರ ಕೋಟಿ ರೂ. ಎಸ್‍ಸಿಪಿ, ಟಿಎಸ್‍ಪಿ ಯೋಜನೆಗಳಿಗೆ ನೀಡಲಾಗಿದೆ. ಎಸ್ ಸಿ ಎಸ್ ಟಿ ಬಡ ಜನರಿಗೆ ವಿದ್ಯುತ್ ಉಚಿತ, 2 ಲಕ್ಷ ಮನೆ ನಿರ್ಮಾಣಕ್ಕೆ, 100 ಯುವಕರಿಗೆ ಉದ್ಯೋಗ ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ಸ್ವಯಂಉದ್ಯೋಗ ಕೊಡುವ ಯೋಜನೆ , 100 ಅಂಬೇಡ್ಕರ್ ಹಾಸ್ಟೆಲ್ಗಳು, ಕಲ್ಬುರ್ಗಿ ಸೇರಿದಂತೆ 5 ವಿವಿಧ ಶೈಕ್ಷಣಿಕ ಕೇಂದ್ರಗಳಲ್ಲಿ ಮೆಗಾ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡಿ ಉತ್ಪಾದನೆ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯವನ್ನು ನೀಡಲಾಗುತ್ತಿದ್ದು, 5 ಲಕ್ಷ ಮಹಿಳೆಯರಿಗೆ ಹಾಗೂ 5 ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದರು.
[11/10, 7:58 PM] +91 99001 58601: *ಭಾಜಪ ಸಂಕಲ್ಪ ಯಾತ್ರೆ ವಿಜಯಯಾತ್ರೆಗಾಗಿ ಪರಿವರ್ತನೆಯಾಗಲಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ರಾಯಚೂರು , ಅಕ್ಟೋಬರ್ 11 :
ಭಾಜಪ ಸಂಕಲ್ಪ ಯಾತ್ರೆ ವಿಜಯಯಾತ್ರೆಯಾಗಿ ಪರಿವರ್ತನೆಯಾಗಲಿದೆ. ರಾಯಚೂರಿನಿಂದ ಸಂಕಲ್ಪ ಯಾತ್ರೆ ಪ್ರಾರಂಭಿಸಲಾಗಿದ್ದು, ಇಲ್ಲಿಂದ ಕಾಂಗ್ರೆಸ್ನ್ನು ಧೂಳಿಪಟ ಮಾಡಿ ಭಾಜಪ ಸರ್ಕಾರದ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರು ತಾಲ್ಲೂಕಿನ ಗಿಲ್ಲೆಸಗೂರು ಗ್ರಾಮದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು.
*ಕಾಂಗ್ರೆಸ್ ಅವರದು ಭ್ರಷ್ಟ ನೌಕರಿ ಭಾಗ್ಯ*:
ಕಾಂಗೆಸ್ ಅವರ ಕನಸು ಕನಸಾಗಿಯೇ ಉಳಿಯುತ್ತದೆ . ಕರ್ನಾಟಕದ ಜನ ಕಾಂಗ್ರೆಸ್ ನವರ ಆಡಳಿತವನ್ನ ನೋಡಿದ್ದಾರೆ. ನಮಗೆ ಭ್ರಷ್ಟಾಚಾರದ ಬಗೆಪಾಠ ಹೇಳುತ್ತಾರೆ. ಕಾಂಗ್ರೆಸ್ ಅವಧಿಯಲ್ಲಿ ಪೊಲೀಸ್ ನೇಮಕಾತಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಯಿತು. ಡಿಐಜಿ ವಿಚಾರಣೆಯಾಯಿತೇ ಹೊರತು, ಯಾವುದೇ ಕ್ರಮವಾಗಲಿಲ್ಲ. ಆದರೆ ಎಡಿಜಿಪಿ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಂಡಿದ್ದು ನಮ್ಮ ಸರ್ಕಾರ. ಇದು ಭಾಜಪ ಸರ್ಕಾರದ ನಿಲುವು. ಶಿಕ್ಷಕರ ನೇಮಕಾತಿಯಲ್ಲೂ ಭ್ರಷ್ಟಾಚಾರವಾಗಿದೆ. ಕಾಂಗ್ರೆಸ್ ಅವರದು ಭ್ರಷ್ಟ ನೌಕರಿ ಭಾಗ್ಯ. ದಿಂಬು, ಹಾಸಿಗೆ, ಕೆಲಸ ಮಾಡದೇ ಎಸ್ಸಿ ಎಸ್ ಟಿ ಜನಾಂಗದ 36 ಸಾವಿರ ಬೋರ್ವೆಲ್ ಬಿಲ್ ಮಾಡಿಕೊಂಡಿರಿ, ಸಣ್ಣ ನೀರಾವರಿ, ಡೀನೋಟಿಫಿಕೇಷನ್ ಸೇರಿದಂತೆ ಪ್ರತಿಯೊಂದು ಇಲಾಖೆಯಲ್ಲಿಯೂ ಕಾಂಗ್ರೆಸ್ ಸರ್ಕಾರದ ಹಗರಣವಿದೆ. ಸರಿಯಾದ ಸಮಯದಲ್ಲಿ ಈ ಪ್ರಕರಣದ ವಿಚಾರಣೆಗಳನ್ನು ನಡೆಸಲಾಗುವುದು. ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿದರೆ ಜನ ಸುಮ್ಮನೆ ಬಿಡುವುದಿಲ್ಲ. ನಾವು ಅತ್ಯಂತ ಪ್ರಾಮಾಣಿಕ ಆಡಳಿತ ಕೊಡುತ್ತಿದ್ದೇವೆ ಎಂದರು.
*ಜನಸಂಕಲ್ಪದಿಂದ 2023ಕ್ಕೆ ಕಮಲ ಅರಳಿಸುವ ಸಂಕಲ್ಪ ಸಾಧನೆ*:
ರಾಯಚೂರು ಜಿಲ್ಲೆಯ ಎಲ್ಲ 7 ವಿಧಾನಸಭಾ ಕ್ಷೇತ್ರಗಳನ್ನು ಭಾಜಪ ಗೆಲ್ಲುತ್ತೇವೆ. ಇದರಲ್ಲಿ ಯಾವುದೇ ಸಂಶಯವಿಲ್ಲ.ರಾಯಚೂರಿನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಕಾಂಗ್ರೆಸ್ನವರು ತಮ್ಮ ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳಲು ಮೊದಲು ಪ್ರಯತ್ನಿಸಲಿ ಎಂದು ಸವಾಲು ಹಾಕುತ್ತೇನೆ. ಇಡೀ ಕರ್ನಾಟಕದ ಜನಸಂಕಲ್ಪದಿಂದ 2023ಕ್ಕೆ ವಿಧಾನಸೌಧದಲ್ಲಿ ಕಮಲ ಅರಳುವಂತೆ ಮಾಡುವ ಮೂಲಕ ಕರ್ನಾಟಕವನ್ನು ಪ್ರಗತಿಪರ ರಾಜ್ಯವನ್ನಾಗಿ ಮಾಡುವ ಸಂಕಲ್ಪವನ್ನು ಸಾಧಿಸಲು ಜನರು ಆರ್ಶಿವಾದಿಸಬೇಕು ಎಂದರು. ಎಸ್ ಸಿ ಎಸ್ ಟಿ ಜನಾಂಗಕ್ಕೆ ಆಗಿದ್ದ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಅಪಸ್ವರ ಎತ್ತುತ್ತಿರುವವರನ್ನು ತಿರಸ್ಕರಿಸಬೇಕು ಎಂದರು.
.
Post a Comment