[31/10, 5:13 PM] Bjp Media: 31-10-2022
ವಿಜಯಪುರ, ಕೊಳ್ಳೇಗಾಲದ ಫಲಿತಾಂಶ- ನಳಿನ್‍ಕುಮಾರ್ ಕಟೀಲ್ ಸಂತಸ
ಬೆಂಗಳೂರು: ವಿಜಯಪುರ ನಗರಪಾಲಿಕೆ ಮತ್ತು ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಬಿಜೆಪಿ ಗೆದ್ದಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಜಯಶಾಲಿಗಳಾದ ಅಭ್ಯರ್ಥಿಗಳನ್ನು ನಳಿನ್ ಕುಮಾರ್ ಕಟೀಲ್ ಅವರು ಅಭಿನಂದಿಸಿದ್ದಾರೆ. ವಿಜಯಪುರ ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಪಕ್ಷವು ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಮತದಾರರು, ಶ್ರಮಿಸಿದ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಮುಖಂಡರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
[31/10, 5:13 PM] Bjp Media: 31-10-2022
ಗೆ,
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಗೆಲುವು ಜನರ ಒಲವಿನ
ಸಂಕೇತ: ನಿರ್ಮಲ್ ಕುಮಾರ್ ಸುರಾಣ ಅಭಿಪ್ರಾಯ
ಬೆಂಗಳೂರು: ವಿಜಯಪುರ ಮತ್ತು ಕೊಳ್ಳೇಗಾಲದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸಾಧಿಸಿದ ಗೆಲುವು ಪಕ್ಷದ ಪರ ಜನರು ತೋರಿಸುತ್ತಿರುವ ಒಲವನ್ನು ವ್ಯಕ್ತಪಡಿಸಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗಳ ಫಲಿತಾಂಶ ಮತ್ತು ಕಲ್ಬುರ್ಗಿಯ ಸಮಾವೇಶದ ಸಂಖ್ಯೆಯು ಭಾರತ್ ಜೋಡೋ ಯಾತ್ರೆಗೆ ತಕ್ಕ ಉತ್ತರ ಕೊಟ್ಟಿದೆ ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿಜಯಪುರ ನಗರ ಪಾಲಿಕೆ ಫಲಿತಾಂಶ ಹೊರಬಿದ್ದಿದೆ. ವಿಜಯಪುರ ಪಾಲಿಕೆಯಲ್ಲಿ ಬಿಜೆಪಿ ಗೆಲ್ಲುವುದು ಕಷ್ಟ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ, ನಾವು ಬಹಳ ಸರಳ ಮತ್ತು ಸುಲಭವಾಗಿ ಗೆದ್ದಿದ್ದೇವೆ. ಒಟ್ಟು 35 ಸೀಟುಗಳಲ್ಲಿ 17 ಸೀಟನ್ನು ಬಿಜೆಪಿ ಗೆದ್ದಿದೆ ಎಂದು ತಿಳಿಸಿದರು. ಸರಳ ಬಹುಮತ ಲಭಿಸಿದ್ದು, ಇಲ್ಲಿ ಯಾವತ್ತೂ ಬಿಜೆಪಿ ಗೆದ್ದಿರಲಿಲ್ಲ ಎಂದರು. ಇದೊಂದು ಐತಿಹಾಸಿಕ ಗೆಲುವು ಎಂದು ತಿಳಿಸಿದರು.
ವಿಜಯಪುರದಲ್ಲಿ ನಾಳೆ ದೊಡ್ಡ ಪ್ರಮಾಣದ ಸಂಭ್ರಮಾಚರಣೆ ನಡೆಯಲಿದೆ. ಕಾರ್ಯಕರ್ತರು ಮತ್ತು ಪ್ರಮುಖರು ಈ ಕುರಿತು ಯೋಜಿಸಿದ್ದಾರೆ. ಕೊಳ್ಳೇಗಾಲದ ನಗರಸಭೆಯ 7 ಸೀಟುಗಳಿಗೆ ಉಪ ಚುನಾವಣೆ ನಡೆದಿದ್ದು, 6 ಸೀಟುಗಳನ್ನು ಬಿಜೆಪಿ ಗೆದ್ದಿದೆ. ಇದು ಬಿಜೆಪಿ ಪರ ವಾತಾವರಣದ ಸಂಕೇತ ಎಂದು ವಿಶ್ಲೇಷಿಸಿದರು.
ಕಾಂಗ್ರೆಸ್ ಪಕ್ಷವು ವಿಜಯಪುರದಲ್ಲಿ ಬಹಳ ಪ್ರಯತ್ನ ಪಟ್ಟರೂ ಕೇವಲ 10 ಸೀಟುಗಳನ್ನು ಗೆದ್ದಿದೆ. ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರನ್ನು ಓಲೈಸುವ ಪಕ್ಷವಾಗಿ ಮುಂದುವರಿದಿದೆ. 10 ಸೀಟುಗಳಲ್ಲಿ 7 ಜನ ಮುಸ್ಲಿಮರು ಗೆದ್ದಿದ್ದಾರೆ. 35 ಸೀಟುಗಳಲ್ಲಿ 17 ಮುಸ್ಲಿಮರಿಗೆ ಅವರು ಟಿಕೆಟ್ ಕೊಟ್ಟಿದ್ದರು. ತುಷ್ಟೀಕರಣದ ಕಾಂಗ್ರೆಸ್ ಪಕ್ಷದ ಹಳೆಯ ನೀತಿಯನ್ನು ಅದು ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ವಿವರಿಸಿದರು.
ಬೆಳಗಾವಿ ಚುನಾವಣೆಯಲ್ಲಿ ಕಾಂಗ್ರೆಸ್ 15 ಸೀಟು ಗೆದ್ದಿದ್ದರೆ ಅದರಲ್ಲಿ 9 ಜನ ಮುಸ್ಲಿಮರಿದ್ದರು. ಗುಲ್ಬರ್ಗದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ 27 ಸೀಟುಗಳಲ್ಲಿ 18 ಜನ ಮುಸ್ಲಿಮರು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ಮುಸ್ಲಿಂ ಲೀಗ್ ಆಗುತ್ತಿದೆ ಎಂದು ತಿಳಿಸಿದರು.
ನವೆಂಬರ್ 20ರಂದು ಬಳ್ಳಾರಿಯಲ್ಲಿ ಎಸ್‍ಟಿ ಸಮಾವೇಶ ನಡೆಯಲಿದ್ದು, ಅಲ್ಲಿ 8ರಿಂದ 10 ಲಕ್ಷ ಜನರು ಭಾಗವಹಿಸಲಿದ್ದಾರೆ. ಕೇಂದ್ರದ ಪ್ರಮುಖ ನಾಯಕರನ್ನು ಆಹ್ವಾನಿಸಿದ್ದು, ಎರಡರಿಂದ ಮೂರು ದಿನಗಳಲ್ಲಿ ಸ್ಪಷ್ಟತೆ ಲಭಿಸಲಿದೆ ಎಂದರು. ದೀರ್ಘ ಕಾಲದಿಂದ ಬಾಕಿ ಇದ್ದ ಮೀಸಲಾತಿ ಹೆಚ್ಚಳದ ಬಳಿಕ ಎಸ್‍ಟಿ ಸಮುದಾಯದಲ್ಲಿ ಹೆಚ್ಚಿನ ಉತ್ಸಾಹ ಇದೆ. ಪ್ರಮುಖರ ಭೇಟಿ ವೇಳೆ ಹೆಚ್ಚಿನ ಪ್ರತಿಕ್ರಿಯೆ ಮತ್ತು ಉತ್ಸಾಹವೂ ವ್ಯಕ್ತವಾಗಿದೆ ಎಂದು ವಿವರಿಸಿದರು.
ಕೋರ್ಟ್ ಸೂಚನೆಯಂತೆ ಬಿಬಿಎಂಪಿ ಚುನಾವಣೆ ನಡೆಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಕಾಂಗ್ರೆಸ್ ಪಕ್ಷವು ತುಷ್ಟೀಕರಣಕ್ಕೆ ಒತ್ತು ಕೊಡುತ್ತಿದೆ. ಪಕ್ಷ ಜೋಡಣೆ ಕಾರ್ಯದ ಬಗ್ಗೆ ಗಮನ ಕೊಡಲಿ ಎಂದು ಸಲಹೆ ನೀಡಿದರು.
ಕಲ್ಬುರ್ಗಿಯಲ್ಲಿ ಒಬಿಸಿ ಸಮಾವೇಶ ಅದ್ಧೂರಿಯಾಗಿ ನಡೆದಿದೆ. ನಾವು 1.5 ಲಕ್ಷದಿಂದ 2 ಲಕ್ಷ ಜನರನ್ನು ನಿರೀಕ್ಷೆ ಮಾಡಿದ್ದರೂ 3 ಲಕ್ಷಕ್ಕಿಂತ ಹೆಚ್ಚು ಜನರು ಸೇರಿದ್ದಾರೆ. ಇದು ಅತ್ಯಂತ ವಿಶೇಷ ಎಂದು ತಿಳಿಸಿದರು. ನಮ್ಮ ಪ್ರಮುಖರ ಪ್ರವಾಸ ಮತ್ತು ಶ್ರಮ ಇದಕ್ಕೆ ಕಾರಣ ಎಂದು ಮೆಚ್ಚುಗೆ ಸೂಚಿಸಿದರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯದ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment