ಲola ಾ- ಉಬರ್ ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದರಿಂದ ಆಯಪ್ ಆಧಾರಿತ ಸಂಸ್ಥೆಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಇಲಾಖೆಯಿಂದ ಆಯಪ್ ಆಧಾರಿತ ಓಲಾ ಮತ್ತು ಊಬರ್ ಕಂಪನಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಮೊಬೈಲ್​ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಬರುವುದರಿಂದ ಜನರು ಈ ಆಟೋ ಸರ್ವಿಸ್ (Cab Service) ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದರೆ, ಈ ಕಂಪನಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಓಲಾ- ಊಬರ್ ಕಂಪನಿಗಳಿಗೆ ಸಾರಿಗೆ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಸಾರಿಗೆ ಇಲಾಖೆಯ ನಿಯಮದ ಪ್ರಕಾರ ಆಟೋಗಳ ಕನಿಷ್ಟ ದರ 30 ರೂ. ಇರಬೇಕು. ಕಾಯುವಿಕೆಯ ಚಾರ್ಜ್ (ವೇಟಿಂಗ್ ಚಾರ್ಜ್) ಅನ್ನು ಪ್ರತಿ 5 ನಿಮಿಷಕ್ಕೆ 5 ರೂ.ಗಳಂತೆ ನಿಗದಿ ಪಡಿಸಲಾಗಿತ್ತು. ಆದರೆ, ಸಾರಿಗೆ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ 100 ರೂ.ಗಳಷ್ಟು ಹಣ ವಸೂಲಿ ಮಾಡಲಾಗುತ್ತಿದೆ. ಆಯಪ್ ಆಧಾರಿತ ಟ್ರಾನ್ಸ್‌ಪೋರ್ಟ್‌ ಸಂಸ್ಥೆಗಳು ಪ್ರಯಾಣಿಕರ ಬಳಿ ಸುಲಿಗೆ ಮಾಡುತ್ತಿರುವುದರಿಂದ ಆಯಪ್ ಆಧಾರಿತ ಸಂಸ್ಥೆಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಇಲಾಖೆಯಿಂದ ಆಯಪ್ ಆಧಾರಿತ ಓಲಾ ಮತ್ತು ಊಬರ್ ಕಂಪನಿಗೆ ನೋಟೀಸ್ ಜಾರಿ ಮಾಡಲಾಗಿದೆ.

GST: ಹೊಸ ವರ್ಷದ ಆರಂಭದಲ್ಲೇ ಶಾಕಿಂಗ್ ನ್ಯೂಸ್: ಜ. 1 ರಿಂದ ಓಲಾ, ಉಬರ್‌, ಸ್ವಿಗ್ಗಿ, ಜೊಮ್ಯಾಟೋ ಸೇವೆ ದುಬಾರಿ

ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದ್ದು, ಈ ವಿಚಾರವಾಗಿ ವಿವರಣೆ ನೀಡುವಂತೆ ಸಾರಿಗೆ ಇಲಾಖೆ 3 ದಿನಗಳ ಗಡುವು ನೀಡಿದೆ. ಆಯಪ್ ಆಧಾರಿತ ಓಲಾ-ಊಬರ್ ನಲ್ಲಿ ಆಟೋ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆ ನೋಟಿಸ್ ನೀಡಿದೆ. ಹೀಗಾಗಿ, ಇನ್ಮುಂದೆ ಓಲಾ -ಉಬರ್ ನಲ್ಲಿ ಆಟೋ ಸಿಗೋದು ಅನುಮಾನ ಎನ್ನಲಾಗುತ್ತಿದೆ. ಈ ಆಯಪ್ ಆಧಾರಿತ ಸಂಸ್ಥೆಗಳಲ್ಲಿ ಆಟೋ ಸೇವೆ ಸ್ಥಗಿತ ಮಾಡುವಂತೆ ನೋಟಿಸ್ ನೀಡಲಾಗಿದೆ. ನಿಬಂಧನೆಗಳ ಪ್ರಕಾರ ಟ್ಯಾಕ್ಸಿ ಸೇವೆಗೆ ಮಾತ್ರ ಓಲಾ -ಉಬರ್ ಲೈಸೆನ್ಸ್ ನಲ್ಲಿ ಅವಕಾಶವಿದೆ. ಆದರೆ, ನಿಯಮ ಉಲ್ಲಂಘಿಸಿ ಆಟೋ ರಿಕ್ಷಾಗಳ ಸೇವೆ ಒದಗಿಸಲಾಗುತ್ತಿದೆ. ಹೀಗಾಗಿ ಅಗ್ರಿಗೇಟರ್ ಸೇವೆಯಡಿಯಲ್ಲಿ ಆಟೋ ರಿಕ್ಷಾ ಸೇವೆ ಒದಗಿಸೋದನ್ನು ಸ್ಥಗಿತಗೊಳಿಸುವಂತೆ ನೋಟಿಸ್ ನೀಡಲಾಗಿದೆ. ಹಾಗೇ, ಮೂರು ದಿನದೊಳಗೆ ವರದಿ ಸಲ್ಲಿಕೆಗೆ ಸೂಚನೆ ನೀಡಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

Auto Rickshaw Offences: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರು ಪ್ರಯಾಣಕ್ಕೆ ಹೆಚ್ಚಿನ ದರ ಕೇಳಿದರೆ ಏನು ಮಾಡಬೇಕು? ವಿವರ ಇಲ್ಲಿದೆ

ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಆಯುಕ್ತ ಟಿಹೆಚ್‌ಎಂ ಕುಮಾರ್ ಹೇಳಿಕೆ ನೀಡಿದ್ದು, ಕಳೆದ 3-4 ದಿನಗಳಿಂದ ನಮಗೆ ತುಂಬಾ ದೂರುಗಳು ಬರುತ್ತಿದ್ದವು. ಓಲಾ-ಊಬರ್ ಆಟೋ ದರ ದುಪ್ಪಟ್ಟು ವಿಧಿಸ್ತಾರೆ ಎನ್ನುವ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು,
ಒಲಾ-ಉಬರ್ ಸಂಸ್ಥೆಗೆ ನೋಟಿಸ್ ನೀಡಿದ್ದೇವೆ. ಅವರಿಗೆ 3 ದಿನ ಗಡುವು ನೀಡಿದ್ದೇವೆ. ಅವರು ಏನು ಉತ್ತರ ಕೊಡುತ್ತಾರೆ ಅನ್ನೋದನ್ನು ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

Post a Comment

Previous Post Next Post