ಹಿರಿಯೂರಿನಲ್ಲಿ ಭಾರತ जोड़ो ಯಾತ್ರೆ

[10/10, 11:36 AM] Kpcc official: ತುಮಕೂರಿನ ಹುಳಿಯಾರಿನಿಂದ ಚಿತ್ರದುರ್ಗದ ಹಿರಿಯೂರು  ಮಾರ್ಗವಾಗಿ ಸೋಮವಾರ ನಡೆದ ಭಾರತ್ ಜೋಡೋ ಯಾತ್ರೆ ನಡುವೆ ಬಸವನಗುಡಿ ಕೆಂಕೆರೆ ಬಳಿ ಯಾತ್ರೆ ನೇತಾರ ರಾಹುಲ್ ಗಾಂಧಿ ಅವರು ರಾಷ್ಟ್ರಧ್ವಜ ಹಿಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಜತೆಗೆ ಕರೆದುಕೊಂಡು ಓಡಿದ ಕ್ಷಣ...
[10/10, 1:14 PM] Kpcc official: *ಉ.ಪ್ರ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ*

*ತುಮಕೂರು:*

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ, ಕೇಂದ್ರದ ಮಾಜಿ ಸಚಿವ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ಒಬ್ಬ ಹುಟ್ಟು ಹೋರಾಟಗಾರ. ಜಾತ್ಯಾತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು, ಶೋಷಿತರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಿಟ್ಟರು. ಸಾಮಾನ್ಯ ಹಿನ್ನೆಲೆಯಿಂದ ಬಂದು ದೇಶದ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಮಟ್ಟಿಗೆ ಬೆಳೆದು ನಿಂತ ನಾಯಕ ಮುಲಾಯಂ ಸಿಂಗ್ ಯಾದವ್ ಅವರು.

ಅವರು ಬೇರೆ ರಾಜಕೀಯ ಪಕ್ಷಗಳ ನಾಯಕರ ಜತೆ ಉತ್ತಮ ಬಾಂಧವ್ಯ ಹಾಗೂ ಗೌರವ ಸಂಪಾದಿಸಿದ್ದು, ಅವರ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಸಮಾಜವಾದಿ ಚಿಂತನೆಗಳ ಪರ ನಿಂತಿದ್ದ ಧೀಮಂತ ನಾಯಕನ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು, ಮಿತ್ರರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
[10/10, 3:11 PM] Kpcc official: ಇಂದು ನಿಧನರಾದ ಸಮಾಜವಾದಿ ಪಕ್ಷದ ಸಂಸ್ಥಾಪಕ, ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಅವರು ಚಿತ್ರದುರ್ಗದ ಹಿರಿಯೂರು ವಿಶ್ರಾಂತಿ ತಾಣದಲ್ಲಿ ಸೋಮವಾರ ಪುಷ್ಪ ನಮನ ಸಲ್ಲಿಸಿದರು.
[10/10, 4:44 PM] Kpcc official: Interaction with marginalised communities
[10/10, 6:34 PM] Kpcc official: ಚಿತ್ರದುರ್ಗದ ಹಿರಿಯೂರಿನಲ್ಲಿ ಸೋಮವಾರ ಸಂಜೆ ಸಾಗಿದ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ರಮೇಶ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
[10/10, 9:32 PM] Kpcc official: *ಭಾರತ್ ಜೋಡೋ ಯಾತ್ರೆ ನಿಗದಿಯಂತೆ ಮುಂದುವರಿಯಲಿದೆ: ಡಿ ಕೆ ಶಿವಕುಮಾರ್ ಸ್ಪಷ್ಟನೆ*

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿಗದಿ ಆಗಿರುವಂತೆ ಮುಂದುವರಿಯಲಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನಾಳೆ ಯಾತ್ರೆ ಸ್ಥಗಿತಗೊಳಿಸಿ ತೆರಳಲಿದ್ದಾರೆ ಎಂಬುದು ಕೇವಲ ವದಂತಿ. ಅವರು ಇಲ್ಲೇ ಇದ್ದು ಯಾತ್ರೆ ಮುಂದುವರಿಸುವರು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
[10/10, 9:38 PM] Kpcc official: *Day 34: 11th October 2022*
*Padayatra Movement Schedule*

06:30 Padayatra resumes from Harthikote https://maps.google.com/?q=14.071183,76.644157

11:00 Morning break at Sanikere, near Hotel Chethan (14 km)
https://maps.google.com/?q=14.189496,76.667023

16:00 Padayatra resumes from Sanikere 
https://maps.google.com/?q=14.189496,76.667023

19:00 Evening break at Samrat Nagara, Arch, Siddapura, Chitradurga (9.1 km)
https://maps.google.com/?q=14.269410,76.657448

Night halt at Ground Sai Ganesha Layout, Opposite Indian Oil Petrol Pump, Siddapura, Chitradurga (2.1 km) 
https://maps.google.com/?q=14.288140,76.655144

Post a Comment

Previous Post Next Post