[08/10, 3:32 PM] Kpcc official: *ಜನರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಭಾರತ ಜೋಡೋ ಯಾತ್ರೆಯ ಮುಖ್ಯ ಉದ್ದೇಶ, 2024ರ ಚುನಾವಣೆ ಅಲ್ಲ: ರಾಹುಲ್ ಗಾಂಧಿ*
*ತುರುವೇಕೆರೆ:*
‘ಭಾರತವನ್ನು ಒಂದುಗೂಡಿಸುವುದು ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ. ಹಿಂಸಾಚಾರ, ದ್ವೇಷದಿಂದ ಮಾನಸಿಕವಾಗಿ ವಿಭಜನೆಯಾಗುತ್ತಿರುವ ಭಾರತವನ್ನು ಒಗ್ಗೂಡಿಸುವುದು. ಆರ್ಥಿಕ ಅಸಮಾನತೆ ಮೂಲಕ ಕೆಲವರು ದೇಶದ ಶ್ರೀಮಂತರಾದರೆ, ಬಹುತೇಕರು ಬಡವರಾಗುತ್ತಿರುವುದರ ವಿರುದ್ಧ. ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಕುಸಿಯುತ್ತಿದ್ದು, ಕೆಲ ಉದ್ಯೋಮಿಗಳ ಬಳಿ ದೇಶದ ಸಂಪತ್ತು ಸೇರುತ್ತಿರುವುದರ ವಿರುದ್ಧ. ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಹೆಚ್ಚಾಗುತ್ತಿರುವುದರ ವಿರುದ್ಧ. ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಜನಸಾಮಾನ್ಯರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಈ ಯಾತ್ರೆಯ ಪ್ರಮುಖ ಉದ್ದೇಶ’ ಎಂದು ರಾಹುಲ್ ಗಾಂಧಿ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.
ಭಾರತ ಐಕ್ಯತಾ ಯಾತ್ರೆ ಭಾಗವಾಗಿ ತುಮಕೂರಿನ ತುರುವೇಕೆರೆಯಲ್ಲಿ ಮಾಧ್ಯಮಗಳ ಜತೆ ರಾಹುಲ್ ಗಾಂಧಿ ಅವರು ಶನಿವಾರ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಜೈರಾಮ್ ರಮೇಶ್, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗೆ ರಾಹುಲ್ ಗಾಂಧಿ ಅವರು ಕೊಟ್ಟ ಉತ್ತರಗಳು ಹೀಗಿವೆ...
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ದಕ್ಷಿಣ ರಾಜ್ಯಗಳಿಗೆ ಗೌರವ ನೀಡದೇ ಕಡೆಗಣಿಸಲಾಗುತ್ತಿದೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾನು ಸಂಸತ್ತಿನ ಭಾಷಣದಲ್ಲಿ ಭಾರತವನ್ನು ಸಂವಿಧಾನಿಕ ರಾಜ್ಯಗಳ ಒಕ್ಕೂಟ ದೇಶ ಎಂದು ಹೇಳಿದ್ದೆ. ನಮ್ಮ ದೇಶದ ಎಲ್ಲ ಭಾಷೆ. ರಾಜ್ಯಗಳು, ಸಂಪ್ರದಾಯಗಳು ಸಮಾನ ಪ್ರಾಮುಖ್ಯತೆ ಹೊಂದಿದ್ದು, ಎಲ್ಲರಿಗೂ ಸಮಾನ ಪ್ರಾದಾನ್ಯತೆ ಸಿಗಬೇಕು’ ಎಂದರು.
ಪಿಎಫ್ಐ ನಿಷೇಧ ಹಾಗೂ ಪಿಎಫ್ ಐಗೆ ಪ್ರೋತ್ಸಾಹ ನೀಡಿದ್ದೇ ಕಾಂಗ್ರೆಸ್ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ದೇಶದಲ್ಲಿ ಯಾರೇ ದ್ವೇಷ ಹಬ್ಬಿಸಿ ಅಶಾಂತಿ ಸೃಷ್ಟಿಸಿದರೂ ಅವರು ಯಾವುದೇ ಸಮುದಾಯದವರಾದರೂ ಅವರನ್ನು ನಾವು ವಿರೋಧಿಸುತ್ತೇವೆ’ ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಯಾರೇ ಆಯ್ಕೆಯಾದರೂ ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗಿರುತ್ತಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ನಮ್ಮ ಪಕ್ಷದಲ್ಲಿ ಚುನಾವಣೆ ನಡೆಯುತ್ತಿದ್ದು, ಇದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಈ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, ಇಬ್ಬರೂ ಸಮರ್ಥ ಹಾಗೂ ವಿಭಿನ್ನ ನಾಯಕರು. ಅವರು ಯಾರ ನಿಯಂತ್ರಣದಲ್ಲೂ ಕೆಲಸ ಮಾಡುವುದಿಲ್ಲ’ ಎಂದು ಸ್ಪಷ್ಟನೆ ನೀಡಿದರು.
ಭಾರತ ವಿಭಜನೆಗೆ ನೀವು ಕಾರಣರಾಗಿದ್ದು ಭಾರತ ಜೋಡೋ ಯಾತ್ರೆ ಮಾಡುವುದೇಕೆ ಎಂದು ಕೇಳಿದ ಪ್ರಶ್ನೆಗೆ, ‘ಬ್ರಿಟೀಷರ ವಿರುದ್ಧ ಹೋರಾಡಿ, ಜೈಲುವಾಸ ಅನುಭವಿಸಿದ ಮಹಾತ್ಮಾ ಗಾಂಧಿ, ನೆಹರೂ, ಸರ್ದಾರ್ ಪಟೇಲ್ ಹಾಗೂ ಇತರರು ಕಾಂಗ್ರೆಸಿಗರು. ಆರ್ ಎಸ್ಎಸ್ ನವರು ಬ್ರಿಟೀಷರ ಪರವಾಗಿ ನಿಂತಿದ್ದರು. ಸಾರ್ವಕರ್ ಅವರು ಬ್ರಿಟೀಷರಿಂದ ಆರ್ಥಿಕ ನೆರವು ಪಡೆಯುತ್ತಿದ್ದರು. ಈ ದೇಶಕ್ಕೆ ಸ್ವಾಂತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನ, ಹಸಿರು ಕ್ರಾಂತಿ ತಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಈಗ ದ್ವೇಷವನ್ನು ಸೃಷ್ಟಿಸಿ ದೇಶ ವಿಭಜಿಸುತ್ತಿದ್ದಾರೆ. ಈ ಯಾತ್ರೆ ಕೇವಲ ನಾನು ಮಾಡುತ್ತಿಲ್ಲ. ದೇಶದ ಲಕ್ಷಾಂತರ ಜನ ಈ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯ ದ್ವೇಷ ರಾಜಕಾರಣ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಅಸಮಾನತೆ ಕುರಿತು ಜನ ಬೇಸತ್ತಿದ್ದಾರೆ. ಹೀಗಾಗಿ ಜನ ಯಾತ್ರೆ ನಡೆಸುತ್ತಿದ್ದಾರೆ’ ಎಂದರು.
ಪಕ್ಷದಲ್ಲಿನ ಆಂತರಿಕ ತಿಕ್ಕಾಟ ಹಾಗೂ ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ತಿಕ್ಕಾಟವಿಲ್ಲ. ನಮ್ಮ ಪಕ್ಷ ಸರ್ವಾಧಿಕಾರಿ ಮನಸ್ಥಿತಿಯ ಪಕ್ಷವಲ್ಲ. ನಮ್ಮಲ್ಲಿ ಎಲ್ಲರ ಅಭಿಪ್ರಾಯ, ಭಾವನೆಗೆ ಅವಕಾಶವಿದೆ. ನಮ್ಮಲ್ಲಿ ಚರ್ಚೆಗೆ, ವಿಭಿನ್ನ ದೃಷ್ಟಿಕೋನಕ್ಕೆ ಅವಕಾಶವಿದೆ. ಆದರೆ ಚುನಾವಣೆಯಲ್ಲಿ ಗೆಲ್ಲಲು ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ನಮ್ಮಲ್ಲಿ ಹಲವು ಸಮರ್ಥ ನಾಯಕರಿದ್ದು, ಪಕ್ಷ ಚುನಾವಣೆಯಲ್ಲಿ ಗೆದ್ದ ನಂತರ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು’ ಎಂದು ತಿಳಿಸಿದರು.
ಮುಂಬರುವ ರಾಜ್ಯ ಚುನಾವಣೆಯಲ್ಲಿ ಬಹುಮತ ಬರದಿದ್ದರೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆ ಕೈ ಜೋಡಿಸುತ್ತದೆಯೇ, ‘ಈ ಪ್ರಶ್ನೆಗೆ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಸಮರ್ಥ ಉತ್ತರ ನೀಡುತ್ತಾರೆ. ನನ್ನ ಪ್ರಕಾರ ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ. ಈ ಯಾತ್ರೆಯ ಅನುಭವದಲ್ಲಿ ವಿವಿಧ ವರ್ಗದ ಜನರ ಜತೆಗಿನ ಚರ್ಚೆಯಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ವಿಚಾರವಾಗಿ ನಾಗರೀಕರು ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಕಾಂಗ್ರೆಸ್ ಎನ್ಇಪಿ ವಿರೋಧಿಸುತ್ತಿರುವುದೇಕೆ ಎಂದು ಕೇಳಿದ ಪ್ರಶ್ನೆಗೆ, ‘ಇದು ನಮ್ಮ ದೇಶದ ಮೌಲ್ಯ, ಇತಿಹಾಸಕ್ಕೆ ಧಕ್ಕೆಯಾಗಿದ್ದು, ಇದು ಅಧಿಕಾರ ಹಾಗೂ ಶಿಕ್ಷಣ ಕ್ಷೇತ್ರವನ್ನು ಒಂದು ವರ್ಗಕ್ಕೆ ನೀಡುವ ಪ್ರಯತ್ನವಾಗಿದೆ. ಹೀಗಾಗಿ ಕಾಂಗ್ರೆಸ್ ಈ ಶಿಕ್ಷಣ ನೀತಿಯನ್ನು ವಿರೋಧಿಸುತ್ತದೆ’ ಎಂದರು.
ಕಾಂಗ್ರೆಸ್ ನಾಯಕರು ಬೇಲ್ ಮೇಲೆ ಹೊರಗಿದ್ದು, ಆದರೂ ಸರ್ಕಾರದ ವಿರುದ್ಧ ಹೇಗೆ 40% ಕಮಿಷನ್ ಆರೋಪ ಮಾಡುತ್ತಿರಿ ಎಂದು ಕೇಳಿದ ಪ್ರಶ್ನೆಗೆ, ‘ಬಿಜೆಪಿ ಹಾಗೂ ಆರ್ ಎಸ್ ಎಸ್ ದೇಶದ ಸಂವಿಧಾನಿಕ ಸಂಸ್ಥೆಳನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ. ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಈ ಸಂಸ್ಥೆಗಳ ದುರ್ಬಳಕೆ ಆಗುತ್ತಿದೆ. ಇವುಗಳನ್ನು ಬಳಸಿಕೊಂಡು ಚುನಾಯಿತ ಸರ್ಕಾರಗಳನ್ನು ಕೆಡವಲಾಗುತ್ತಿದೆ’ ಎಂದು ತಿಳಿಸಿದರು.
ಕಳೆದೊಂದು ತಿಂಗಳಲ್ಲಿ ಈ ಯಾತ್ರೆ ಅನುಭವ ಹೇಗಿದೆ? ಯಾತ್ರೆಯಿಂದ ನಿಮ್ಮಲ್ಲಿ ಏನಾದರೂ ಬದಲಾವಣೆ ಆಗಿದೆಯೇ? ಎಂದು ಕೇಳಿದಾಗ, ‘ನಾನು ಸದಾ ಕೆಲವು ಸಿದ್ಧಾಂತದ ಪರವಾಗಿ ನಿಂತಿದ್ದೇನೆ. ಅದು ಬಿಜೆಪಿ ಹಾಗೂ ಆರ್ ಎಸ್ಎಸ್ ಸಹಿಸಿಕೊಳ್ಳಾಗುತ್ತಿಲ್ಲ. ಕಳೆದ ಹಲವು ವರ್ಷಗಳಿಂದ ಸಾವಿರಾರು ಕೋಟಿ ಖರ್ಚು ಮಾಡಿ ನನ್ನ ಬಗ್ಗೆ ತಪ್ಪು ಅಭಿಪ್ರಾಯ ಸೃಷ್ಟಿಸಲು ಮಾಧ್ಯಮಗಳನ್ನು ಬಳಸಲಾಗಿದೆ. ಈ ಪ್ರಯತ್ನ ಹೀಗೆ ಮುಂದುವರಿಯಲಿದೆ. ಆದರೆ ಜನ ನನ್ನ ಬಗ್ಗೆ ಸತ್ಯವನ್ನು ಅರಿಯಲು, ಈ ಯಾತ್ರೆ ಮುಖ್ಯವಾಗಿದೆ. ನಾನು ರಾಜಕೀಯ ವ್ಯವಸ್ಥೆಯಲ್ಲಿ ರಾಜಕೀಯ ವರ್ಗ ಹಾಗೂ ನಾಗರೀಕರ ಮಧ್ಯೆ ಇರುವ ಅಂತರವನ್ನು ನೋಡಿದ್ದೇನೆ. ನನ್ನ ಪರಿಕಲ್ಪನೆ ಪ್ರಕಾರ ರಾಜಕೀಯ ನಾಯಕರು ರಸ್ತೆಯಲ್ಲಿ ಹೋಗಿ ಜನರನ್ನು ಭೇಟಿಯಾಗಿ ಅವರಿಗೆ ಹತ್ತಿರವಾಗಬೇಕು. ಇದೊಂದು ವಿಭಿನ್ನ ಪ್ರಯತ್ನ. ಜನರ ಜತೆಗಿನ ಚರ್ಚೆಯಲ್ಲಿ ನೋವಿನ ವಿಚಾರ ಚರ್ಚೆಯಾಗಬೇಕು. ನನ್ನ ಜನರ ಜತೆ ಮಾತನಾಡುವಾಗ ಅವರ ನೋವು ನನಗೆ ಅನುಭವವಾಗಬೇಕು ಎಂಬುದು ಈ ಯಾತ್ರೆಯ ಉದ್ದೇಶ. ಈ ವಿಚಾರದಲ್ಲಿ ನನಗೆ ದೊಡ್ಡ ಅನುಭವವಾಗಿದೆ. ರಸ್ತೆಯಲ್ಲಿ ಸಾಗುವಾಗ ಜನರ ಜತೆ ಮಾತನಾಡುವಾಗ ಹೆಚ್ಚು ಆಪ್ತವಾಗಿ ಮಾತನಾಡಬಹುದು. ಆಗ ನಾವು ಅವರ ಮಾತನ್ನು ಹೆಚ್ಚಾಗಿ ಆಲಿಸಬಹುದು. ಹೀಗಾಗಿ ನನಗೆ ಇದೊಂದು ಕಲಿಕೆಯ ಮಾರ್ಗವಾಗಿದೆ. ಯಾತ್ರೆ ಆರಂಭವಾಗಿ ಕೇವಲ 31 ದಿನಗಳಾಗಿದ್ದು, ಇದು ಇನ್ನು ಆರಂಭಿಕ ಹಂತ. ಆದರೆ ಈ ರೀತಿಯ ಮಾತುಕತೆಯಿಂದ ಆಗುವ ಅನುಕೂಲದ ಬಗ್ಗೆ ಅರಿವಾಗಿದೆ. ನಾನು ಮಾಧ್ಯಮಗಳ ಮೂಲಕ ಜನರ ಜತೆ ಮಾತನಾಡುವಾಗ ಕ್ಯಾಮೆರಾದ ಹಿಂದೆ ಇಚ್ಛಾಶಕ್ತಿಗಳಿರುತ್ತವೆ. ಆದರೆ ನೇರವಾಗಿ ಮಾತನಾಡುವಾಗ ಯಾವುದೇ ಇಚ್ಛಾಶಕ್ತಿ ಅಡ್ಡಬರುವುದಿಲ್ಲ. ಬೇರೆಯವರಂತೆ ಜನರಿಂದ ಅಂತರ ಕಾಯ್ದುಕೊಂಡು ಕಾರು, ವಾಹನಗಳು, ಮಾಧ್ಯಮಗಳ ಮೂಲಕ ಹೋಗಬಹುದು. ಆದರೆ ಆ ಮಾರ್ಗಕ್ಕಿಂದ ಈ ಮಾರ್ಗ ಜನರಿಗೆ ಹತ್ತಿರವಾಗಲು ಸುಲಭವಾಗಿದೆ. ನಾನು ತಪಸ್ಸಿನಲ್ಲಿ ನಂಬಿದ್ದೇನೆ. ನಮ್ಮ ಜನರಲ್ಲಿ ಅಪಾರವಾದ ದೂರದೃಷ್ಟಿಯಿದ್ದು, ನಮ್ಮ ರಾಜಕೀಯ ವ್ಯವಸ್ಥೆಯಿಂದ ಅದು ವ್ಯರ್ಥವಾಗುತ್ತಿದೆ. ಈ ವ್ಯವಸ್ಥೆಯಿಂದ ಜನ ತಮ್ಮ ಯಶಸ್ಸಿಗೆ ಬೇಕಾದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಯಾತ್ರೆಗೆ ಎಲ್ಲ ವರ್ಗದ ಜನರ ಬೆಂಬಲ ಸಿಗುತ್ತಿದೆ’ ಎಂದರು.
ಚೀನಾದಿಂದ ದೇಶದ ಗಡಿ ಅತಿಕ್ರಮಣವಾಗುತ್ತಿದ್ದು ದೇಶದ ವಿದೇಶಾಂಗ ನೀತಿ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಪಾದಯಾತ್ರೆ ಸಂದರ್ಭದಲ್ಲಿ ನಾನು ಯುವಕರ ಜತೆ ಮಾತನಾಡುವಾಗ ನಾನು ಅವರಿಗೆ ನೀವು ಏನು ಮಾಡುತ್ತಿದ್ದೀರಾ ಎಂದು ಸರಳ ಪ್ರಶ್ನೆ ಕೇಳಿದೆ. ಅವರು ಶಾಲೆ, ಪದವಿ ಹಾಗೂ ವಿವಿಧ ಹಂತದ ವಿದ್ಯಾಭ್ಯಾಸ ಮಾಡುತ್ತಿರುವುದಾಗಿ ತಿಳಿಸಿದರು. ನಂತರ ನಿಮಗೆ ಕೆಲಸ ಸಿಗುತ್ತದೆಯೇ ಎಂದು ಕೇಳಿದೆ ಅವರು ಇಲ್ಲ ಎಂದರು. ರೈತರು, ಮಧ್ಯಮ ವರ್ಗದ ಜನರ ಜತೆ ಮಾತನಾಡಿದಾಗ ಅವರು ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಈ ವಿಚಾರಗಳ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ಇನ್ನು ಚೀನಾ ಸೇನೆ ಭಾರತ ಗಡಿಯೊಳಗೆ ಅತಿಕ್ರಮಣ ಮಾಡಿದೆ. ಆದರೆ ಸರ್ಕಾರ ಸಂಸತ್ತಿನಲ್ಲಿ ಇದರ ಚರ್ಚೆಗೆ ಅವಕಾಶ ನೀಡಲು ನಿರಾಕರಿಸುತ್ತಾರೆ. ಪ್ರಧಾನಮಂತ್ರಿಗಳೇ ದೇಶದ ಗಡಿಯಲ್ಲಿ ಯಾವುದೇ ಅತಿಕ್ರಮಣ ಆಗಿಲ್ಲ ಎಂದು ಹೇಳುತ್ತಾರೆ. ದೇಶದ ಪ್ರಧಾನಿ ಈ ರೀತಿ ಕೊಟ್ಟಾಗ ಚೀನಾದವರಿಗೆ ಬೆಂಬಲ ನೀಡದಂತಾಗುತ್ತದೆ’ ಎಂದು ವಾಗ್ದಾಳಿ ನಡೆಸಿದರು.
ಈ ಯಾತ್ರೆಯಲ್ಲಿ ನಿಮ್ಮ ಉದ್ದೇಶ ಹಾಗೂ ಜನರ ಉದ್ದೇಶ ಹೊಂದಾಣಿಕೆ ಆಗುತ್ತಿದೆಯೇ ಎಂದು ಕೇಳಿದಾಗ, ‘ಖಂಡಿತವಾಗಿಯೂ ಹೊಂದಾಣಿಕೆಯಾಗುತ್ತಿದೆ’ ಎಂದರು.
ರಾಜಸ್ಥಾನದಲ್ಲಿ ಅದಾನಿ ಅವರಿಗೆ ಬಂಡವಾಳ ಹೂಡಿಕೆಗೆ ಅವಕಾಶ ನೀಡಿರುವ ಬಗ್ಗೆ ಕೇಳಿದಾಗ, ‘ಅದಾನಿ ಅವರು ರಾಜಸ್ಥಾನದಲ್ಲಿ 67 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಪ್ರಸ್ತಾವನೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ ಇದನ್ನು ನಿರಾಕರಿಸುವುದಿಲ್ಲ. ನಿರಾಕರಿಸುವುದು ಸರಿಯೂ ಆಲ್ಲ. ರಾಜಸ್ಥಾನ ಸರ್ಕಾರ ಅದಾನಿಗೆ ವಿಶೇಷ ಆದ್ಯತೆ ನೀಡಿಲ್ಲ. ಅವರ ವ್ಯಾಪಾರ ವ್ಯವಹಾರಕ್ಕೆ ಅನುಕೂಲ ಮಾಡಿಕೊಡಲು ರಾಜಸ್ಥಾನ ಸರ್ಕಾರ ರಾಜಕೀಯ ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಆದರೆ ಬಿಜೆಪಿ ಸರ್ಕಾರ ಕೇವಲ ಒಂದಿಬ್ಬರು ವ್ಯಾಪಾರಸ್ಥಿಗೆ ವಿಶೇಷ ಆದ್ಯತೆ ನೀಡಿ ಬೆಳೆಸುತ್ತಿದೆ. ನಾನು ಉದ್ಯಮಿಗಳು ಅಥವಾ ಬೇರೆ ವ್ಯಾಪಾರಸ್ಥರ ವಿರುದ್ಧವಿಲ್ಲ. ದೇಶದಲ್ಲಿ ಕೇಲವರಿಗೆ ಮಾತ್ರ ಆದ್ಯತೆ ನೀಡುವುದು ದೇಶಕ್ಕೆ ಮಾರಕ. ರಾಜಸ್ಥಾನ ಸರ್ಕಾರ ಪ್ರಾಮಾಣಿಕವಾಗಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಿದ್ದರೆ ಬೆಂಬಲಿಸುತ್ತೇನೆ. ಆದರೆ ಅವರಿಗಾಗಿ ವಿಶೇಷ ಆದ್ಯತೆ ನೀಡಲು ರಾಜಕೀಯ ಅಧಿಕಾರ ದುರ್ಬಳಕೆ ಮಾಡಿದ್ದರೆ ಆಗ ರಾಜಸ್ಥಾನದ ಸರ್ಕಾರದ ವಿರುದ್ಧವೂ ನಿಲ್ಲುತ್ತೇನೆ’ ಎಂದು ತಿಳಿಸಿದರು.
[08/10, 6:50 PM] +91 99000 09614: *ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪ ಹಾಗೂ ಶಾಸಕರಾದ ಎನ್.ಎ ಹ್ಯಾರೀಸ್ ಅವರ ಜಂಟಿ ಮಾಧ್ಯಮಗೋಷ್ಠಿ ಮುಖ್ಯಾಂಶಗಳು*
ಬಿಜೆಪಿಯ ಮಾಧ್ಯಮಗಳಲ್ಲಿನ ಜಾಹೀರಾತು ಪ್ರಚಾರದಲ್ಲಿ ಬಿಜೆಪಿ ಚಿಹ್ನೆ ಇದೆ, ಆದರೆ ಅದರಲ್ಲಿರುವ ನಾಯಕರಾರೂ ಬಿಜೆಪಿಯವರಲ್ಲ. ಈ ಎಲ್ಲ ನಾಯಕರು ಈ ರಾಜ್ಯವನ್ನು ಆಳಿರುವ ಪ್ರಬಲ ಕಾಂಗ್ರೆಸ್ ನಾಯಕರಾಗಿದ್ದಾರೆ.
ದೇವರಾಜ ಅರಸು, ವಿರೇಂದ್ರ ಪಾಟೀಲ್, ಬಂಗಾರಪ್ಪನವರ ಭಾವಚಿತ್ರವನ್ನು ಬಿಜೆಪಿ ಬಳಸಿಕೊಂಡಿದ್ದು, ಇವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಇವರು ತಮ್ಮ ರಾಜಕೀಯ ಜೀವನದಲ್ಲಿ ಕೆಲವು ನಿರ್ಧಾರ ತೆಗೆದುಕೊಂಡಿರುತ್ತಾರೆ. ಆದರೆ ಬಿಜೆಪಿಯವರು ಇದನ್ನು ದುರ್ಬಳಕೆ ಮಾಡಿಕೊಂಡಿದೆ.
ಈ ನಾಯಕರು ಹಿಂದುಳಿದ ವರ್ಗಕ್ಕೆ ಸೇರಿದ್ದು, ಇವರು ಬಡವರು ಹಾಗೂ ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ.
ಭಾರತ ಜೋಡೋ ಯಾತ್ರೆ ಆರಂಭವಾದ ನಂತರ ನಾವು ಬಿಜೆಪಿಗೆ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದೇವೆ. ಅವರು ಕೊಟ್ಟ ಭರವಸೆಗಳ ಬಗ್ಗೆಯೇ ಪ್ರಶ್ನೆ ಮಾಡುತ್ತಿದ್ದೇವೆ. ಆದರೆ ಅವರು ಇಂದು ನಮಗೆ ಪ್ರಶ್ನೆ ಹಾಕಿದ್ದು, ರಾಹುಲ್ ಗಾಂಧಿ ಅವರ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಒಂದು ವಿಚಾರ ಅರ್ಥ ಮಾಡಿಕೊಳ್ಳಬೇಕು. ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಮೈಮೇಲೆ ಭೂತ ದೇವರು ಬಂದಾಗ ಭವದ್ಗೀತೆ ಅತ್ಯುತ್ತಮವಾಗಿ ಬರುತ್ತದೆ. ಕಾಂಗ್ರೆಸ್ ಪಕ್ಷ ಬಂಗಾರಪ್ಪ, ವೀರೇಂದ್ರ ಪಾಟೀಲ್, ದೇವರಾಜ ಅರಸು ಅವರನ್ನು ಮೂಲೆಗೆ ಕೂರಿಸಿದ್ದಾರೆ ಎಂದು ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿದ್ದು, ಅವರು ಮತ್ತೊಂದು ಜಾಹೀರಾತು ನೀಡಿ, ಬಿಜೆಪಿ ಪಕ್ಷ ಕಟ್ಟಿದ ಲಾಲ ಕೃಷ್ಣ ಆಡ್ವಾಣಿ, ಮುರಳಿ ಮನೋಹರ್ ಜೋಷಿ, ಗೋವಿಂದ ಆಚಾರ್ಯ, ಬಿ.ವಿ ಶಿವಪ್ಪ, ಸಂಜಯ್ ಸಿಂಗ್ ಸೇರಿದಂತೆ ಹಲವು ನಾಯಕರನ್ನು ಎಲ್ಲಿ ಕೂರಿಸಿದ್ದಾರೆ ಎಂಬ ಬಗ್ಗೆ ಜಾಹೀರಾತು ನೀಡಲಿ.
ಬಿಜೆಪಿಯವರು ನಮ್ಮ ತಂದೆ ಅವರ ಫೋಟೋ ಹಾಕುವ ಮುನ್ನ ಒಂದು ವಿಚಾರ ಅರಿಯಬೇಕು. ಬಿಜೆಪಿಗೆ ಇಂದು ಇಷ್ಟು ಶಕ್ತಿ ಬರಬೇಕು ಎಂದರೆ ಅವರು ಬಿಜೆಪಿಗೆ 9 ತಿಂಗಳು ಇದ್ದಿದ್ದಕ್ಕೆ ಎಂದು ಜನರು, ರಾಜಕೀಯ ವಿಶ್ಲೇಷಕರು ಎಲ್ಲರೂ ಹೇಳಿದ್ದಾರೆ. ಆದರೂ ಅವರು 9 ತಿಂಗಳು ಬಿಜೆಪಿ ಪಕ್ಷದಲ್ಲಿ ಇರಲು ಆಗಲಿಲ್ಲ. ನಂತರ ಅವರದೇ ಆದ ಹಾದಿ ಹಿಡಿದರು. ಯಾರಾದರೂ ಹೆಸರು ಬಳಸಿಕೊಳ್ಳುವಾಗ ಈ ರಾಜ್ಯಕ್ಕೆ ಅವರು ಕೊಟ್ಟಿರುವ ಕೊಡುಗೆ ಅರ್ಥ ಮಾಡಿಕೊಳ್ಳಬೇಕು.
ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ದೇವರಾಜ ಅರಸು, ವಿರೇಂದ್ರ ಪಾಟೀಲ್ ಹಾಗೂ ಬಂಗಾರಪ್ಪನವರ ಕೆಲಸಗಳ ಬಗ್ಗೆ ಜಾಹೀರಾತು ನೀಡಿದ್ದರೆ, ಅವರಿಗೆ ಸ್ವಲ್ಪ ಹೆಸರಾದರೂ ಬರುತ್ತಿತ್ತು. ಆಸ್ರಯ, ಆರಾಧನಾ, ಗ್ರಾಮೀಣ ಕೃಪಾಂಕದಂತಹ ಯೋಜನೆ ತಂದಿದ್ದರು. ಇವರು ವಿದ್ಯುತ್ ಬಿಲ್ ನೀಡುವುದಿಲ್ಲ, ಭೂಹಕ್ಕು ವಾಪಸ್ ಪಡೆಯುವುದಿಲ್ಲ ಎಂಬ ನಿರ್ಧಾರ ಮಾಡಲಿ ನೋಡೋಣ. ಅರಣ್ಯ ಹಕ್ಕು ಕಾಯ್ದೆಯಲ್ಲಿ ರೈತರನ್ನು ಭೂಗಳ್ಳರು ಎಂದು ನ್ಯಾಯಾಲಯಕ್ಕೆ ಅಲೆಯುವಂತೆ ಮಾಡಿದ್ದಾರೆ.
ಭ್ರಷ್ಟಾಚಾರದ ಹಣದಲ್ಲಿ ಜನರಿಗೆ ತಪ್ಪು ಸಂದೇಶ ನೀಡತ್ತಿದ್ದಾರೆ. ಇದು ಬಿಜೆಪಿಯ ನೀಚ ಬುದ್ಧಿ. ಬೇರೆಯವರ ಬಗ್ಗೆ ಮಾತನಾಡುವ ಬಿಜೆಪಿ ಯಡಿಯೂರಪ್ಪನವರ ಬಗ್ಗೆ ಯಾಕೆ ಹಾಕಿಲ್ಲ. ಅವರು ಕೆಜೆಪಿ ಪಕ್ಷ ಕಟ್ಟಿದಾಗ ಅವರ ವಿರುದ್ಧ ಹೇಗೆ ಬಿಜೆಪಿ ನಾಯಕರು ಮಾತನಾಡಿದ್ದಾರೆ ಒಮ್ಮೆ ಯೋಚಿಸಲಿ. ಅವರ ವಿರುದ್ಧ ಕೇಸುಗಳನ್ನು ಹಾಕಿದವರು ಯಾರು? ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದ್ದು ಯಾರು? ಬಿಜೆಪಿ ಕೀಳು ಮಟ್ಟದ ರಾಜಕೀಯ ಬಿಟ್ಟು ತಮ್ಮ ಸರ್ಕಾರದ ಸಾಧನೆ ಬಗ್ಗೆ ಮಾತನಾಡಲಿ.
ಈ ಜಾಹೀರಾತಿನಲ್ಲಿ ನಮ್ಮ ತಂದೆ ಹೆಸರನ್ನು ತೆಗೆದುಕೊಳ್ಳುವ ಯೋಗ್ಯತೆ ಇಲ್ಲ ಎಂದು ಹೇಳಿರುವುದಾಗಿ ಬಿಜೆಪಿ ತಿಳಿಸಿದೆ. ನಮ್ಮ ತಂದೆಯವರ ಮೇಲೆ ಸಿಬಿಐ ಕೇಸು ದಾಖಲಿಸಲಾಗಿತ್ತು, ನಾವು 18 ವರ್ಷಗಳ ಕಾಲ ಹೋರಾಟ ಮಾಡಿದ್ದೆ. ಅವರು ನಿರಪರಾಧಿಯಾಗಿ ನಮ್ಮನ್ನು ಅಗಲಿದ್ದಾರೆ. ಈ ಹೇಳಿಕೆ ನೀಡಿದಾಗ ನಾನು ಜೆಡಿಎಸ್ ಪಕ್ಷದಲ್ಲಿದ್ದು, ಸದನದಲ್ಲಿ ಮಾತನಾಡುವಾಗ ಈ ಪ್ರಕರಣದಲ್ಲಿ ಬಂಗಾರಪ್ಪನವರ ಹೆಸರನ್ನು ತೆಗೆದುಕೊಳ್ಳಬಾರದು ಎಂದು ಹೇಳಿದ್ದೆ. ಆದರೆ ಬಿಜೆಪಿಯವರು ನನ್ನ ಹೇಳಿಕೆಯನ್ನು ತಪ್ಪಾಗಿ ಬಳಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಇದ್ದಾಗ ಸಿದ್ದರಾಮಯ್ಯ ಅವರು ನಾವು ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಇಂತಿಷ್ಟು ಭರವಸೆ ಈಡೇರಿಸಿದ್ದೇವೆ. ರಾಜ್ಯದ ಜನರಿಗಾಗಿ ಇಂತಹ ಯೋಜನೆಗಳನ್ನು ಮಾಡಿದ್ದೇವೆ ಎಂಬ ಜಾಹೀರಾತುಗಳನ್ನು ಮಾಧ್ಯಮಗಳಲ್ಲಿ ನೀಡುತ್ತಿದ್ದೆವು. ಆದರೆ ಬಿಜೆಪಿಯವರು ತಮ್ಮ ಸಾಧನೆಗಳ ಬಗ್ಗೆ ಜಾಹೀರಾತು ನೀಡಲಾಗದೆ ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಜಾಹೀರಾತು ನೀಡಲಾಗುತ್ತಿದೆ. ಮಹಾನ್ ನಾಯಕರ ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ.
ಈ 40% ಸರ್ಕಾರದ ಭ್ರಷ್ಟಾಚಾರದ ಪರಿಣಾಮ ಮುಖ್ಯಮಂತ್ರಿಗಳ ನಿವಾಸದ ಬಳಿ ಹಾಕಿರುವ ರಸ್ತೆ ಒಂದು ವಾರದಲ್ಲಿ ಕಿತ್ತು ಹೋಗಿದೆ. ಮಾಧ್ಯಮಗಳು ತಹ ಸುಳ್ಳು ಜಾಹೀರಾತಿನ ಬದಲು ಅಂತಹ ವಿಚಾರವನ್ನು ಜನರಿಗೆ ತಿಳಿಸಬೇಕು.
ಮೋದಿ ಅವರು ಅವರ ತಾಯಿಯನ್ನು ಭೇಟಿ ಮಾಡಲು ಹೋದಾಗ ಹಾಡಿ ಹೋಗಳುವವರು, ಭಾರತ ಜೋಡೋ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದ ಸೋನಿಯಾ ಗಾಂಧಿ ಅವರಿಗೆ ಅವರ ಮಗ ಶೂ ಲೇಸೆ ಹಾಕಿದಾಗ ಆ ತಾಯಿ ಮಗನ ಸಂಬಂಧದ ಬಗ್ಗೆ ಕೀಳಾಗಿ ಮಾತನಾಡುತ್ತಾರೆ. ಅವರು ತಮ್ಮ ಕೆಲಸದ ಬಗ್ಗೆ ಬೇಕಾದಷ್ಟು ಮಾತನಾಡಲಿ.
ಅಂದು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಪಡೆಯಲು ಹೋರಾಟ ಮಾಡಿದಂತೆ ಇಂದು ದೇಶ ಬಿಜೆಪಿಯಿಂದ ಸ್ವಾತಂತ್ರ್ಯ ಪಡೆಯಲು ಈ ಹೋರಾಟ ಮಾಡಲಾಗುತ್ತಿದೆ.
ಬಿಜೆಪಿಯವರು ಕಳೆದ ಎಂಟು ವರ್ಷಗಳಲ್ಲಿ ಎಷ್ಟು ಜನರಿಗೆ ಉದ್ಯೋಗ ಕೊಟ್ಟಿದ್ದಾರೆ, ಎಷ್ಟು ಜನರನ್ನು ಪಕೋಡಾ ಮಾರಲು ಕಳುಹಿಸಿದ್ದಾರೆ ಎಂಬುದರ ಬಗ್ಗೆ ಜಾಹೀರಾತು ನೀಡಲಿ. ಬಿಜೆಪಿಯವರಿಗೆ ಇನ್ನು ಆರು ತಿಂಗಳು ಮಾತ್ರ ಅಧಿಕಾರವಿದ್ದು, ಇನ್ನಾದರೂ ಇಂತಹ ನೀಚ ಕೆಲಸ ಬಿಟ್ಟು ಜನಪರ ಕೆಲಸದತ್ತ ಗಮನಹರಿಸಲಿ.
ಇನ್ನು ಈ ಜಾಹೀರಾತಿನಲ್ಲಿ ಕನ್ನಡದ ನಾಯಕರ ಬಗ್ಗೆ ಬಿಜೆಪಿ ಮಾತನಾಡಿದ್ದಾರೆ. ಇವರಿಗೆ ಕನ್ನಡದ ನಾಯಕರು ಜನರ ಬಗ್ಗೆ ಆಸಕ್ತಿ ಇದ್ದರೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪ್ರತಿ ಹಂತದಲ್ಲಿ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆಯಾಗಿರುವ 26 ಸಂಸದರಲ್ಲಿ ಯಾರೋಬ್ಬರೂ ಮಾತನಾಡುತ್ತಿಲ್ಲ.
*ಎನ್.ಎ ಹ್ಯಾರಿಸ್:*
ಇಂದು ರಾಜಕೀಯ ಬಹಳ ಕೀಳುಮಟ್ಟಕ್ಕೆ ಹೋಗುತ್ತಿದೆ. ಭಾರತ ಜೋಡೋ ಯಾತ್ರೆ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಿದೆ, ಜನಬೆಂಬಲ ಸಿಗುತ್ತಿದೆ ಎಂದು ಬಿಜೆಪಿಯವರು ಈ ಜಾಹೀರಾತುಗಳು ಹೇಳುತ್ತಿವೆ. 2014ರಲ್ಲಿ ಬಿಜೆಪಿ ಸರ್ಕಾರ ಬಂದಾಗ ಬಿಜೆಪಿ ಹೈಕಮಾಂಡ್ ಅನ್ನೇ ಮೂಲೆಗುಂಪು ಮಾಡಿದ್ದಾರೆ. ಇವರು ಯಾರಿಗೆ ಬುದ್ಧಿ ಹೇಳುತ್ತಿದ್ದಾರೆ? ಇವರು ತಾವು ಏನು ಮಾಡಿದ್ದೇವೆ ಎಂದು ಅರಿತು ನಮ್ಮ ಬಗ್ಗೆ ಮಾತನಾಡಲಿ.
ಬಿಜೆಪಿ ಇಂತಹ ಮಹಾನ್ ನಾಯಕರ ಬಗ್ಗೆ ಮಾತನಾಡುವ ಯೋಗ್ಯತೆಯೂ ಇಲ್ಲ. ಆದರೂ ಇವರ ಹೆಸರು ಬಳಸಿಕೊಂಡು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ.
ಇವರು 15 ಲಕ್ಷ ಹಣ ನೀಡುತ್ತೇವೆ ಎಂಬ ಸುಳ್ಳಿನ ಮೂಲಕ ಇವರು ಸುಳ್ಳಿನ ಸರಪಳಿ ಆರಂಭಿಸಿದರು. ಇವರು ಬೆಲೆ ಏರಿಕೆ ವಿರುದ್ಧ ಮಾತನಾಡಿ ಅಧಿಕಾರಕ್ಕೆ ಬಂದರು. ಆದರೆ ಈಗ ಅಡುಗೆ ಅನಿಲ ಸಬ್ಸಿಡಿ ಕಿತ್ತುಕೊಂಡು 350 ರೂ ಇದ್ದ ಸಿಲಿಂಡರ್ ಅನ್ನು 1000 ರೂ ಮಾಡಿದ್ದಾರೆ. ಇದರಿಂದ ಜನಸಾಮಾನ್ಯರ ಬದುಕು ದುಸ್ಥರವಾಗಿದೆ.
ಬಂಗಾರಪ್ಪ ಹಾಗೂ ದೇವರಾಜ ಅರಸು ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ವಿರೇಂದ್ರ ಪಾಟೀಲರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್. ಇವರಿಗೂ ಬಿಜೆಪಿಗೂ ಏನು ಸಂಬಂಧ? ರಾಜಕೀಯ ಪಕ್ಷದಲ್ಲಿ ಕೆಲ ಸಮಯದಲ್ಲಿ ಭಿನ್ನಾಭಿಪ್ರಾಯದ ಮೇಲೆ ಪಕ್ಷ ಬಿಡುವುದು ಪ್ರಜಾಪ್ರಭುತ್ವ ವ್ಯವಸ್ಥೆ ಭಾಗ.
ಬಿಜೆಪಿಯವರು ತಮ್ಮ ಸಾಧನೆ ಬಗ್ಗೆ ಜಾಹೀರಾತು ನೀಡುವ ಬದಲು ಕಾಂಗ್ರೆಸ್ ಪಕ್ಷದ ವಿಚಾರದಲ್ಲಿ ಜಾಹೀರಾತು ನೀಡುತ್ತಿರುವುದೇಕೆ?
ರಾಹುಲ್ ಗಾಂಧಿ ಅವರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಲು ಅವರು ಇಂತಹ ಪ್ರಯತ್ನ ಮಾಡುತ್ತಾ ಅಪಪ್ರಚಾರ ಮಾಡುತ್ತಾರೆ. ಅವರ ನಾಯಕರು ಕೂಡ ಕಾಶ್ಮೀರದಿಂದ ಪಾದಯಾತ್ರೆ ಮಾಡಲಿ, ಅವರು ಎಲ್ಲಿಯವರೆಗೂ ಮಾಡಲು ಸಾಧ್ಯ ನೋಡೋಣ.
ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವ ಕಾರಣ ನಾವು ಅದರ ಬಗ್ಗೆ ಮಾತನಾಡುತ್ತೇವೆ. ಇದನ್ನು ಬಿಜೆಪಿ ಕಾರ್ಯಕಾರಿ ಸಮಿತಿಯಲ್ಲಿ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ.
ಯಡಿಯೂರಪ್ಪ ಅವರನ್ನು ಯಾಕೆ ಅಧಿಕಾರದಿಂದ ಕೆಳಗೆ ಇಳಿಸಿದರು ಎಂದು ಹೇಳಲಿ. ನಾವು ವಿರೋಧ ಪಕ್ಷದಲ್ಲಿರುವಾಗ ನಾವು ನೆರಳಾಗಿ ಅವರ ತಪ್ಪನ್ನು ಪ್ರಶ್ನಿಸಬೇಕು. ಅದೇ ತಪ್ಪು ಎಂದರೆ ಹೇಗೆ? ಈ ಅಧಿಕಾರವನ್ನು ಕಸಿಯುವ ಪ್ರಯತ್ನ ಮಾಡಬಾರದು.
ಭಾರತ ಜೋಡೋ ಬಗ್ಗೆ ಇವರು ಮಾತನಾಡಿದರೆ ನಾವು ಯಾವೆಲ್ಲ ವಿಚಾರವಾಗಿ ಮಾತನಾಡಬಹುದು. ನೋಟು ಅಮಾನ್ಯೀಕರಣ, ಜಿಎಸ್ ಟಿ ಬಗ್ಗೆ ಅವರು ಜಾಹೀರಾತು ನೀಡಲಿ.
ಇಂದು ಬಂಗಾರಪ್ಪ, ದೇವರಾಜ ಅರಸು ಹಾಗೂ ವಿರೇಂದ್ರ ಪಾಟೀಲರು ಎಂದರೆ ಅವರು ಹಾಗೂ ಕಾಂಗ್ರೆಸ್ ನಡುವಣ ಸಂಬಂಧವೇ ಕಣ್ಣಮುಂದೆ ಬರುತ್ತದೆ. ಆದರೆ ಬಿಜೆಪಿಯವರು ತಮ್ಮ ಪಕ್ಷಕ್ಕೆ ಸಂಬಂಧವೇ ಇಲ್ಲದ ವಿಚಾರವಾಗಿ ಜಾಹೀರಾತು ನೀಡುತ್ತಿರುವುದೇಕೆ?
Post a Comment