ಆನೆಗೆ ಗಾಯ: ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಲಾಗುವುದು: ಸಿಎಂ ಬೊಮ್ಮಾಯಿ*

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಕಬನ್ ಪಾರ್ಕ್ ಬಳಿ ಕೇಂದ್ರ ವಲಯದ ಉಪ ಪೊಲಿಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಡಿಜಿಪಿ ಪ್ರವೀಣ್ ಸೂದ್ ಹಾಗೂ ಹಿರಿಯ ಪೊಲಿಸ್ ಅಧಿಕಾರಿಗಳು ಹಾಜರಿದ್ದರು.
[ *ಬೆಂಗಳೂರು,* ಅಕ್ಟೋಬರ್ 06: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಕಬ್ಬನ್ ಪಾರ್ಕ್* *ಉದ್ಯಾನವನದಲ್ಲಿ ಕರ್ನಾಟಕ* *ರಾಜ್ಯ ಪೊಲೀಸ್ ಇಲಾಖೆಯ* ವತಿಯಿಂದ ಆಯೋಜಿಸಿರುವ *ಉಪ ಪೊಲೀಸ್ ಆಯುಕ್ತರ* *ಕಛೇರಿ ನಿರ್ಮಾಣ ಕಾಮಗಾರಿಯ* ಭೂಮಿ ಪೂಜೆ *ಕಾರ್ಯವನ್ನು ನೆರವೇರಿಸಿ*ನಂತರ *ಮಾಧ್ಯಮದವರೊಂದಿಗೆ* ಮಾತನಾಡಿದರು.
[06 ಬೆಂಗಳೂರು, ಅಕ್ಟೋಬರ್ 06ಬೆಂಗಳೂರು, ಅಕ್ಟೋಬರ್ 06: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ *ಶಿಕ್ಷಣ ಇಲಾಖೆಯ* *ಸಹಯೋಗದೊಂದಿಗೆ ಕೆ.ಸಿ.* *ಜನರಲ್ ಆಸ್ಪತ್ರೆಯಲ್ಲಿ* ಆಯೋಜಿಸಿರುವ “ *50 ಹಾಸಿಗೆ* *ಸಾಮಥ್ರ್ಯದ ಶ್ರೀ ಜಯದೇವ* *ಹೃದ್ರೋಗ ವಿಜ್ಞಾನ ಮತ್ತು* *ಸಂಶೋಧನಾ ಸಂಸ್ಥೆಯ* ಉಪಕೇಂದ್ರ”ದ ಹಾಗೂ “ *ಇಂದಿರಾಗಾಂಧಿ ಮಕ್ಕಳ ಆರೋಗ್ಯ* ಸಂಸ್ಥೆಯ ಮಕ್ಕಳ *ತೀವ್ರ ನಿಗಾ ಘಟಕದ* *ಉಪಕೇಂದ್ರ”ದ ಉದ್ಘಾಟಿಸಿ* ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು ಮಕ್ಕಳ ಆರೋಗ್ಯ ಸಂಸ್ಥೆಯ ಮಕ್ಕಳ ತೀವ್ರ ನಿಗಾ ಘಟಕದ ಉಪಕೇಂದ್ರ”ದ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು
[ *ಆನೆಗೆ ಗಾಯ: ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಲಾಗುವುದು: ಸಿಎಂ ಬೊಮ್ಮಾಯಿ*

ಬೆಂಗಳೂರು, ಅಕ್ಟೋಬರ್ 06: ನಾಗರಹೊಳೆ ಅರಣ್ಯದಲ್ಲಿ    ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಳಲ್ಲಿ ಗಾಯವಾಗಿರುವ ಬಗ್ಗೆ 
 ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಈ ಬಗ್ಗೆ ಸ್ಪಂದಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಮಾಧ್ಯಮ ದವರೊಂದಿಗೆ ಮಾತನಾಡುತ್ತಿದ್ದರು. 

ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಇದನ್ನು ಗಮನಿಸಿದ್ದು,  ಇನ್ನು ಅರ್ಧ ಗಂಟೆಯ ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಬಳಿ ಮಾತನಾಡಿ ಆನೆಗಳಿಗೆ ಏನೆಲ್ಲಾ ಚಿಕಿತ್ಸೆ ನೀಡಬಹುದು  ಎಂದು ಪರಿಶೀಲನೆ ಮಾಡಲಾಗುವುದು. ಅವರು ಗಮನಕ್ಕೆ ತಂದಿರುವ ವಿಷಯದ ಬಗ್ಗೆ ಸ್ಪಂದಿಸಲಾಗುವುದು ಹಾಗೂ  ಮಾನವೀಯ ದೃಷ್ಟಿಯಿಂದ  ಅದರ ಅಗತ್ಯವೂ ಇದೆ ಎಂದರು. 

*ಯಾವುದೇ ಪರಿಣಾಮ ಬೀರೋಲ್ಲ*
ಭಾರತ್ ಜೋಡೋ ಅಭಿಯಾನ ದಲ್ಲಿ ಸೋನಿಯಾ ಗಾಂಧಿ ಪಾಲ್ಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ,  ಸಹಜವಾಗಿ ಎಲ್ಲಾ ಪಕ್ಷದ ಮುಖ್ಯ ಸ್ಥರು ತಮ್ಮ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ಸೋನಿಯಾ ಗಾಂಧಿ  ಅರ್ಧ ಕಿ.ಮೀ ನಡೆಯು ವಾಪಸ್ಸಾಗಿದ್ದಾರೆ. ಇದ್ಯಾವುದೂ ಪರಿಣಾಮವನ್ನು ಬೀರುವುದಿಲ್ಲ ಎಂದರು. ಪ್ರಿಯಾಂಕಾ ಗಾಂಧಿ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೂ ನಮಗೂ ಸಂಬಂಧ ಇಲ್ಲ, ಇದರಿಂದ ಯಾವ ಪರಿಣಾಮವೂ ಆಗುವುದಿಲ್ಲ ಎಂದರು. 

*ಆರು ರ್ಯಾಲಿಗಳು*
ಭಾರತ್ ಜೋಡೋ ಅಭಿಯಾನಕ್ಕೂ  ಮುನ್ನವೇ ತೀರ್ಮಾನಿಸಿದಂತೆ ಬಿಜೆಪಿ ಆರು ರ್ಯಾಲಿಗಳನ್ನು ಕೈಗೊಳ್ಳಲಿದೆ. ಮಧ್ಯೆ ಅಧಿವೇಶನ ಹಾಗೂ ದಸರಾ ಇದ್ದುದರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಜಂಟಿ ಪ್ರವಾಸವನ್ನು ಪ್ರಾರಂಭ ಮಾಡಲಿದ್ದೇವೆ ಎಂದರು. 

*ಪೊಲೀಸ್ ಹಲ್ಲೆ ಕುರಿತು ಪರಿಶೀಲನೆ*
ಮಂಡ್ಯದಲ್ಲಿ ಪೊಲೀಸ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಯಾರ ತಪ್ಪಿದೆ ಎಂದು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ
: ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನೈಸರ್ಗಿಕ ‌ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು ನಡೆದ ವಿಡಿಯೊ ಸಂವಾದ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.
[06/10,: *ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ  ರಾಜ್ಯ* *ಸಿಎಂ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 06:ಕರ್ನಾಟಕ ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈವರೆಗೆ ರೈತರು, ಸರ್ವೆ ನಂಬರ್ ಹಾಗೂ ಆಧಾರ್ ಗಳನ್ನು ಜೋಡಿಸಲಾಗಿದ್ದು, 78 ಲಕ್ಷ ರೈತರನ್ನು  ಈ ವ್ಯಾಪಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇಂದು   ನೈಸರ್ಗಿಕ ‌ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು ನಡೆದ ವಿಡಿಯೊ ಸಂವಾದದಲ್ಲಿ  ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಮಾತನಾಡಿದರು. 

 ಕೇಂದ್ರ ಕೃಷಿ ಪ್ರಧಾನ ಕಾರ್ಯದರ್ಶಿ ಗಳು ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂದಿರುವ  ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು,  ಭೂಮಿ ತಂತ್ರಜ್ಞಾನದಡಿ ಈ ಹಿಂದೆಯೇ ಡಿಜಿಟಲೀಕರಣವಾಗಿದೆ. 62 ಲಕ್ಷ ಭೂಮಿಯುಳ್ಳ ಹಾಗೂ 16 ಲಕ್ಷ ಭೂ ರಹಿತರನ್ನೂ ತಂತ್ರಾಂಶದಲ್ಲಿ ಸೇರಿಸಲಾಗಿದೆ. ಫ್ರೂಟ್ಸ್ ಯೋಜನೆಯನ್ನು ಎಲ್ಲಾ ರಾಜ್ಯ ಗಳೂ ಅಳವಡಿಸಿಕೊಳ್ಳುತ್ತಿವೆ ಎಂದರು. ಈ ತಂತ್ರಾಂಶವನ್ನು ನಿರಂತರವಾಗಿ ಸುಧಾರಣೆ ಮಾಡಲಾಗುತ್ತಿದೆ. ಇದರ ಉಪಯೋಗ ಪಡೆದು ರೈತರನ್ನು ಜೋಡಿಸಲಾಗಿದೆ. ಕೇಂದ್ರ ಸರ್ಕಾರದ ಸ್ವಮಿತ್ವ ಯೋಜನೆಯನ್ನು ಕರ್ನಾಟಕದಲ್ಲಿ ಅಭಿಯಾನದ ರೀತಿಯಲ್ಲಿ ಕೈಗೊಂಡಿದೆ ಎಂದರು. 

*ಕ್ರಾಂತಿಕಾರಿ ನ್ಯಾನೋ ಯೂರಿಯಾ*
ಕೃಷಿ ಕ್ಷೇತ್ರದಲ್ಲಿ ನ್ಯಾನೋ ಯೂರಿಯಾ ಕ್ರಾಂತಿಯನ್ನು ಉಂಟುಮಾಡಿದ್ದು,ಮೊದಲ  ನ್ಯಾನೋ ಯೂರಿಯಾ ಘಟಕ ಬೆಂಗಳೂರಿನಲ್ಲಿದೆ.  ಅಧ್ಯಯನ ಮಾಡಿ  , ರೈತರಿಗೂ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲ ವಿದೆ ಎಂದು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು. 

ಡಿಜಿಟಲ್ ತಂತ್ರಜ್ಞಾನದ ಮೂಲಕ  ರೈತರೇ ತಮ್ಮ ಭೂಮಿಯ ಸಮೀಕ್ಷೆ ಮಾಡುತ್ತಿದ್ದಾರೆ. ಈವರೆಗೆ 212 ಕೋಟಿ  ಭೂ ಪ್ರದೇಶವನ್ನು ಡಿಜಿಟಲೀಕರಣಗೊಳಿಸಲಾಗಿದೆ.  ಬೆಳೆ ಸಮೀಕ್ಷೆಯನ್ನು ರೈತರೇ ಮಾಡುತ್ತಿದ್ದಾರೆ. 212 ಕೋಟಿ ಪೈಕಿ16,584 ಬೆಳೆ ಗಳನ್ನು ರೈತರೇ ಸಮೀಕ್ಷೆ ಮಾಡಿದ್ದಾರೆ.1.61ಕೋಟಿ ಪ್ರದೇಶವನ್ನು ಇಲಾಖೆ ಮಾಡಿದೆ. ಯಾವುದೇ ವ್ಯಾಜ್ಯಕ್ಕೆ ಎಡೆ ಮಾಡಿಕೊಡದಿರಲು  ಶೇ 100 ರಷ್ಟು ರೈತರೇ ಸಮೀಕ್ಷೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು. ರೈತರು ಅತ್ಯಂತ ಪ್ರಾಮಾಣಿಕವಾಗಿ ಇದನ್ನು ನಡೆಸಿದ್ದಾರೆ ಎಂದು ತಿಳಿಸಿದರು. 

*ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆ* 

ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆಯಾಗಿದ್ದು  ಈ ಕುರಿತು ಸಂಶೋಧನೆ ಹಾಗೂ ಪ್ರಮಾಣೀಕರಣ ಅತ್ಯಂತ ಪ್ರಮುಖ ಅಂಶಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

*ಕರ್ನಾಟಕ ನೈಸರ್ಗಿಕ ಕೃಷಿಯಲ್ಲಿ ಸಕ್ರಿಯ*

ಪ್ರಧಾನಿ ನರೇಂದ್ರ ಮೋದಿಯವರ ರೈತರ ಆದಾಯ ದ್ವಿಗುಣಗೊಳಿಸುವ ಆಶಯದಂತೆ ಕರ್ನಾಟಕ ರಾಜ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳೊಂದಿಗೆ ನೈಸರ್ಗಿಕ ಕೃಷಿ ಯನ್ನು ಸಕ್ರಿಯವಾಗಿ ಕೈಗೊಂಡಿದೆ. 
ರಾಜ್ಯದಲ್ಲಿ 5 ಕೃಷಿ ಹಾಗೂ ತೋಟಗಾರಿಕಾ ವಿಶ್ವ ವಿದ್ಯಾಲಯಗಳಿದ್ದು, ವಿಶ್ವವಿದ್ಯಾಲಯಗಳ ನಿರಂತರ ಮೇಲ್ವಿಚಾರಣೆಯಲ್ಲಿ ನೈಸರ್ಗಿಕ ಕೃಷಿ ಯನ್ನು ತಲಾ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗೊಳ್ಳಲಾಗಿದೆ ಬೆಳೆಗಳ ಗುಣಮಟ್ಟದಿಂದ ಹಿಡಿದು, ಉತ್ಪನ್ನ, ಪರೀಕ್ಷೆಗಳನ್ನು ಕೃಷಿ ಪ್ರಯೋಗಾಲಯದಲ್ಲಿ ಕೈಗೊಳ್ಳಲಾಗಿದೆ  ಎಂದು ವಿವರಿಸಿದರು. 

*ನೈಸರ್ಗಿಕ ಕೃಷಿಗೆ ಪರಿವರ್ತನೆ*
ರಾಜ್ಯದಲ್ಲಿ  2.4 ಲಕ್ಷ ಎಕರೆ ಭೂ ಪ್ರದೇಶದಲ್ಲಿ ಕೈಗೊಂಡಿರುವ  ಸಾವಯವ ಕೃಷಿ ಭೂಮಿಯನ್ನು ನೈಸರ್ಗಿಕ ಕೃಷಿಗೆ ಕ್ರಮೇಣ ಪರಿವರ್ತಿಸಲಾಗುತ್ತಿದೆ.  ಮುಂದಿನ ಮಾರ್ಚ್ ಒಳಗೆ ಹೊಸದಾಗಿ 1 ಲಕ್ಷ ಎಕರೆ ಪ್ರದೇಶವನ್ನು ನೈಸರ್ಗಿಕ ಕೃಷಿಗೆ ಪರಿವರ್ತನೆ ಮಾಡಲು ಗುರಿ ನಿಗದಿ ಪಡಿಸಲಾಗಿದೆ  ಎಂದರು. 

ನೈಸರ್ಗಿಕ ಕೃಷಿಗೆ 41, 434 ಕೃಷಿಕರನ್ನು ಆಯ್ಕೆ ಮಾಡಲಾಗಿದ್ದು, 1100 ತರಬೇತಿ ಕಾರ್ಯಕ್ರಮಗಳು, 200 ಕ್ಷೇತ್ರ ಭೇಟಿಗಳನ್ನು ಕೈಗೊಂಡಿದೆ ಹಾಗೂ   ಕಾರ್ಯಾಗಾರಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಯೋಜನೆಯನ್ನು  ಮಿಷನ್ ಮಾದರಿಯಲ್ಲಿ ಕಾರ್ಯಗತ ಮಾಡಲಾಗುತ್ತಿದೆ ಎಂದರು. 

*ಮಣ್ಣಿನ ಫಲವತ್ತತೆ*
ನೈಸರ್ಗಿಕ ಕೃಷಿಯಲ್ಲಿ ವೈಜ್ಞಾನಿಕ ಅಂಶಗಳನ್ನು ಕೂಡ ಗಮನದಲ್ಲಿಟ್ಟುಕೊಂಡು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲು ಒತ್ತು ನೀಡಲಾಗಿದೆ. ಮಣ್ಣಿನಲ್ಲಿ ಸಾರಾಜನಕ ಹಾಗೂ ಕಾರ್ಬನ್  ಪ್ರಮಾಣ ಸೇರಿದಂತೆ ನೈಸರ್ಗಿಕ ಗೊಬ್ಬರ ಬಳಕೆಗೂ ಮಹತ್ವ ನೀಡಲಾಗಿದೆ. ಪೈಟೋಸೈನಾಸಿಸಿಸ್ ಪರಿಣಾಮದ ಬಗ್ಗೆ  ಅಧ್ಯಯನ ಕೈಗೊಳ್ಳಲಾಗಿದೆ ಎಂದರಲ್ಲದೆ 
ಈ ಕುರಿತಂತೆ ಅಧ್ಯಯನಗಳು ಉತ್ತಮ ಇಳುವರಿ ಹಾಗೂ ಉತ್ಪಾದನೆಗೆ ಎಡೆ ಮಾಡಿಕೊಡುತ್ತದೆ ಎಂದು ತಿಳಿಸಿದರು.  ರೈತರು ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.
[06/10, *ಸಮುದಾಯ ಆರೋಗ್ಯ ಕೇಂದ್ರಗಳಿಗೆ ಆರು ಕಮಾಂಡರ್ ಸೆಂಟರ್ ಗಳ ಜೋಡಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಅಕ್ಟೋಬರ್ 6 : 

 ಟೆಲಿಮೆಡಿಸಿನ್ ಮೂಲಕ ಪ್ರಾದೇಶಿಕ ಹಂತದಲ್ಲಿ, ವೈದ್ಯರ ತಂಡವೊಂದು 24*7 ಗಳಿಗೆ ಆರೋಗ್ಯ ಕೇಂದ್ರಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಆರು ಕಮಾಂಡರ್ ಸೆಂಟರ್ ಗಳನ್ನು ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೆ.ಸಿ.* *ಜನರಲ್ ಆಸ್ಪತ್ರೆಯಲ್ಲಿ* ಆಯೋಜಿಸಿರುವ “ *50 ಹಾಸಿಗೆ* *ಸಾಮಥ್ರ್ಯದ ಶ್ರೀ ಜಯದೇವ* *ಹೃದ್ರೋಗ ವಿಜ್ಞಾನ ಮತ್ತು* *ಸಂಶೋಧನಾ ಸಂಸ್ಥೆಯ* ಉಪಕೇಂದ್ರ”ದ ಹಾಗೂ “ *ಇಂದಿರಾಗಾಂಧಿ ಮಕ್ಕಳ ಆರೋಗ್ಯ* ಸಂಸ್ಥೆಯ ಮಕ್ಕಳ *ತೀವ್ರ ನಿಗಾ ಘಟಕದ* *ಉಪಕೇಂದ್ರ”ದ ಉದ್ಘಾಟಿಸಿ* ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು .

100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು  ತಲಾ 7-8 ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳನ್ನು, ಬೆಡ್ ಗಳನ್ನು ಹೆಚ್ಚಿಸಲಾಗುವುದು. ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಮೊದಲೇ ಇದ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಟೆಲಿಮೆಡಿಸಿನ್ ಗೆ ಜೋಡಣೆ ಮಾಡುವ  ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು.

*ಆಯುಷ್ಮಾನ್ ಕಾರ್ಡ್ ಬಳಸಲು ಸರಳೀಕೃತ ನಿಯಮಗಳಿಗೆ ಶೀಘ್ರದಲ್ಲಿ ಆದೇಶ :*

ಇದಲ್ಲದೇ ಸುಮಾರು 81 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದಲ್ಲಿ  ಹಾಗೂ ಬೆಂಗಳೂರಿನಲ್ಲಿ ವಲಯಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ, ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ, ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಕಿವುಡರಿಗೆ ಕಾಕ್ಲಿಯರ್ ಇಂಪ್ಲಾಂಟ್ ವ್ಯವಸ್ಥೆಯನ್ನು ಬಡವರಿಗೆ ಉಚಿತವಾಗಿ ಪೂರೈಸಲಾಗುತ್ತಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿರಿಸಲಾಗಿದೆ. ಡಯಾಲಿಸಿಸ್ ಸೈಕಲ್ ಗಳನ್ನು 30 ಸಾವಿರಗಳಿಂದ 60 ಸಾವಿರಗಳನ್ನು ಹೆಚ್ಚಿಸಲಾಗಿದೆ. ಕಿಮೋಥೆರಪಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆಯುಷ್ಮಾನ್ ಕಾರ್ಡ್ ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು ಎಂದರು.

*ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಾಣ:*

ರೈತರಿಗೆ ಆರೋಗ್ಯ ಸೌಲಭ್ಯ ನೀಡುವ ‘ಯಶಸ್ವಿನಿ’ ಯೋಜನೆಯನ್ನು ನವೆಂಬರ್ 1 ರಂದು ಚಾಲನೆಗೊಳಿಸಲಾಗುವುದು. ಹೀಗೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಪೌಷ್ಟಿಕ ಆಹಾರ ಪೂರೈಸುವ ಜೊತೆಗೆ 4000 ಅಂಗನವಾಡಿಗಳ ಸ್ಥಾಪನೆಗೆ ಕ್ರಮ ವಹಿಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ  ಬಹಳ ಮುಖ್ಯ. ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು. 430 ನಮ್ಮ ಕ್ಲೀನಿಕ್ಗಳನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಇದರಲ್ಲಿ 240 ಕ್ಲಿನಿಕ್ಗಳು ಬೆಂಗಳೂರು ನಗರದ ಪ್ರತಿಯೊಂದು ವಾರ್ಡ್ ಗಳಲ್ಲಿ ಇರಲಿದೆ. 4 ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ ಎಂದರು.

ಜಯದೇವ, ಕೆಸಿಜನರಲ್ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆಯ ಸಹಕಾರದಿಂದ ಸ್ಥಾಪಿಸಲಾಗಿರುವ ಈ ಆಸ್ಪತ್ರೆಯ ಮಾದರಿ ಉತ್ತಮವಾಗಿದ್ದು, ಈ ಮಾದರಿಯನ್ನು ರಾಜ್ಯದ ಇತರೆ ಪ್ರದೇಶಗಳಲ್ಲಿಯೂ ಅನುಸರಿಸಬಹುದು. ಇದಕ್ಕೆ ಬೇಕಾದ ಎಲ್ಲ ಸಹಕಾರವನ್ನು ಸರ್ಕಾರ ಒದಗಿಸಲಿದೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಜಯದೇವ, ಕಿದ್ವಾಯಿ, ನಿಮಾನ್ಸ್ ಸೇರಿದಂತೆ ಪ್ರಮುಖ ಆರೋಗ್ಯ ಸಂಸ್ಥೆಗಳು ಉತ್ತಮ ಕೆಲಸವನ್ನು ಮಾಡುತ್ತಿವೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಎಂಸಿಹೆಚ್ ಆಸ್ಪತ್ರೆ ಮತ್ತು ಟ್ರಾಮಾ ಸೆಂಟರ್ ಗಳ ಸ್ಥಾಪಿಸುವ ಯೋಜನೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

*ಆರೋಗ್ಯಕರ ಸಮಾಜವಿದ್ದರೆ ಅಭಿವೃದ್ಧಿ ಸಾಧ್ಯ :*

ಸರ್ವರಿಗೂ ಆರೋಗ್ಯ ಕೊಡುವುದು ಸರ್ಕಾರ, ಖಾಸಗಿ ವಲಯದ ಕರ್ತವ್ಯವಾಗಿದೆ. ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆ ಜನರಿಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸುತ್ತಿರುವ ಖ್ಯಾತಿಯನ್ನು ಹೊಂದಿದೆ. ಇದಕ್ಕೆ ಕಾರಣರಾಗಿರುವ ವೈದರು, ಅರೆ ವೈದ್ಯಕೀಯ ಹಾಗೂ ಎಲ್ಲ ಸಿಬ್ಬಂದಿಗಳಿಗೆ ಅಭಿನಂದನೆಗಳು. ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರಿಗೆ ಕರ್ತವ್ಯದ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯೂ ಇರುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಒತ್ತು ನೀಡುತ್ತಿದ್ದು, ಮಾನವನ ಬೆಳವಣಿಗೆಗೆ ಪೂರಕವಾಗಿವೆ. ಆರೋಗ್ಯಕರ ಸಮಾಜವಿದ್ದರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಶಾಸಕ ದಿನೇಶ್ ಗುಂಡೂರಾವ್, ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ: ಸಿ.ಎನ್.ಮಂಜುನಾಥ್, ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ನಿರ್ದೇಶಕ ಡಾ:ಸಂಜಯ್. ಕೆ.ಎಸ್. ಮತ್ತಿತರರು ಉಪಸ್ಥಿತರಿದ್ದರು.
[06/10, 5:50 PM] +91 99001 58601: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್ ಹಾಗೂ ಡಾ‌‌. ಸಿ.ಎನ್. ಅಶ್ವತ್ಥ್ ನಾರಾಯಣ, ಯಲಹಂಕ ಶಾಸಕ ಎಸ್‌ . ಆರ್. ವಿಶ್ವನಾಥ ಹಾಗೂ ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.
[06/10, 6:53 PM] +91 99001 58601: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್ , ಮುರುಗೇಶ ನಿರಾಣಿ , ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ ಹಾಗೂ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.
[06/10, 7:07 PM] +91 99001 58601: 2022ನೇ ಸಾಲಿನ ಪಿಯುಸಿ ದ್ವಿತೀಯ ವಾರ್ಷಿಕ ಪರೀಕ್ಷೆ ಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಬೆಂಗಳೂರಿನ ಆರ್.ವಿ. ಸೈನ್ಸ್ ಕಾಲೇಜ್ ವಿದ್ಯಾರ್ಥಿನಿ ಸಿಮ್ರಾನ್ ರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹಾಜರಿದ್ದರು.
[06/10, 7:59 PM] +91 99001 58601: *ಕೂಡಲಸಂಗಮ ಕ್ಷೇತ್ರದಲ್ಲಿ ಜನವರಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು*
*ಸಿಎಂ ಬೊಮ್ಮಾಯಿ ಸೂಚನೆ*
ಬೆಂಗಳೂರು, ಅಕ್ಟೋಬರ್ 06: ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲಸಂಗಮ ಕ್ಷೇತ್ರದಲ್ಲಿ  ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಜನವರಿ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಸೂಚಿಸಿದರು.

ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ  ಕೂಡಲ ಸಂಗಮ ಅಭಿವೃದ್ಧಿ ಮಂಡಳಿ 16 ನೇ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಬಸವ ಅಂತರರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಸಂಗ್ರಹಾಲಯ, ಕೂಡಲಸಂಗಮ ಸಂಕೀರ್ಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಕೂಡಲ ಸಂಗಮದಲ್ಲಿ  ಬಸವಣ್ಣನವರ  ಜೀವನ ಚರಿತ್ರೆ ಹಾಗೂ ವಿಚಾರಧಾರೆಗಳ ಪೂರ್ಣ ಚಿತ್ರಣವನ್ನು ಬಿಂಬಿಸುವಂತೆ  ಮುಖ್ಯಮಂತ್ರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್, ಮುರುಗೇಶ್ ನಿರಾಣಿ, ಹುನುಗುಂದ ಶಾಸಕ  ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಹಾಗೂ ಕೂಡಲು ಸಂಗಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು  ಹಾಜರಿದ್ದರು.
[06/10, 8:02 PM] +91 99001 58601: *ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ*

*ಸೂಕ್ತ ವ್ಯವಸ್ಥೆಗಳನ್ನು  ಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ*
ಬೆಂಗಳೂರು, ಅಕ್ಟೋಬರ್ 06: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್  ಉದ್ಘಾಟನೆಗೆ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆಗಳನ್ನು  ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದರು.

ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6 ನೇ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ನಾಡಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಹಾಗೂ ಜಲಸಂಗ್ರಹಿಸುವ ಅಭಿಯಾನದಲ್ಲಿ   ತಾಲ್ಲೂಕು ಕೇಂದ್ರಗಳಿಗೆ ಮಣ್ಣನ್ನು ತಲುಪಿಸುವಂತೆ ಸೂಚನೆ ನೀಡಿ, ಅಲ್ಲಿಂದ ಜಿಲ್ಲಾ ಕೇಂದ್ರಕ್ಕೆ ತರಿಸುವಂತೆ ಸೂಚಿಸಿದರು. ಕೆಂಪೇಗೌಡರ ಜೀವನಚರಿತ್ರೆಯನ್ನು ಬಿಂಬಿಸುವ   ವೀಡಿಯೋ ಮ್ಯಾಪಿಂಗ್ ಹಾಗೂ ನೃತ್ಯ ರೂಪಕ ಆಯೋಜಿಸಲು ಅನುಮತಿ ನೀಡಿದರು.

ಕೆಂಪೇಗೌಡರ  ವೀರ ಸಮಾಧಿ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ, 46 ತಾಣಗಳಲ್ಲಿ ನಾಮಫಲಕಗಳ ಅಳವಡಿಕೆ, ಮಾಗಡಿ ಕೋಟೆ ಸಂರಕ್ಷಣೆ ಮುಂತಾದ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಡಾ: ಸಿ.ಎನ್.ಅಶ್ವತ್ಥ್‍ನಾರಾಯಣ್, ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು.

Post a Comment

Previous Post Next Post