ಅಕ್ಟೋಬರ್ 09, 2022 | , | 10:42AM |
ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ

ಫೈಲ್ PIC
ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಇದನ್ನು ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನವೆಂದು ಆಚರಿಸಲಾಗುತ್ತದೆ. ರಾಮಾಯಣವನ್ನು ಬರೆದ ಕೀರ್ತಿ ಇವರಿಗೆ ಸಲ್ಲುತ್ತದೆ. ಈ ದಿನವನ್ನು ಗುರುತಿಸಲು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾಲ್ಮೀಕಿ ಜಯಂತಿಯಂದು ಜನತೆಗೆ ಶುಭಾಶಯ ಕೋರಿದ್ದಾರೆ. ಅವರು ಮಹರ್ಷಿ ವಾಲ್ಮೀಕಿ ಅವರ ಆಲೋಚನೆಗಳ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.
Post a Comment