cm, ಇಂದು,, ಇಂದು 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿದ cm

[15/10, 10:28 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ಆರ್. ಟಿ ನಗರ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
[15/10, 10:41 AM] Cm Ps: ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ ನ  ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಜರಿದ್ದರು.
[15/10, 12:01 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಕಂಠಿರವ ಕ್ರೀಡಾಂಗಣದಲ್ಲಿ  61 ನೆ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಗೆ ಚಾಕನೆ ನೀಡಿ ಮಾತನಾಡಿದರು. 
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್  ಮೊದಲಾದವರು ಉಪಸ್ಥಿತರಿದ್ದರು.
[15/10, 1:25 PM] Cm Ps: *ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಅಕ್ಟೋಬರ್ 15 :

 ಭಾರತ ದೇಶ ಒಗ್ಗಟ್ಟಿನಿಂದ ಬಲಿಷ್ಟವಾಗಿ ಬೆಳೆಯುತ್ತಿರುವಾಗ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತ ಜೋಡೋ ಯಾತ್ರೆಯ ಅರ್ಥ ಏನು? ಭಾರತ ಈಗಾಗಲೇ ಒಕ್ಕೂಟವಾಗಿ, ಒಗ್ಗಟ್ಟಾಗಿ ಮುನ್ನಡೆಯುತ್ತಿದೆ. ಇದನ್ನು ಮತ್ತೆ ಜೋಡಿಸುವ ಪ್ರಮೇಯ ಇಲ್ಲ . ಇಡೀ ದೇಶ ಒಗ್ಗಟ್ಟಾಗಿ ಭಾರತ ದೇಶ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆಯನ್ನು ಸಾಧಿಸುತ್ತಿದೆ. ಪ್ರಸ್ತುತ ಇಡೀ ಜಗತ್ತಿನಲ್ಲಿ ಆರ್ಥಿಕ ಹಿಂಜರಿತ ಉಂಟಾಗುತ್ತಿದೆ. ಅಮೆರಿಕಾ ಸೇರಿದಂತೆ ಜಿ  7 ದೇಶಗಳು ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿರುವ ಸಂದರ್ಭದಲ್ಲಿ ಭಾರತ ದೇಶ ಕನಿಷ್ಟ ಶೇ. 7  ಅಭಿವೃದ್ಧಿಯನ್ನು ಕಾಯ್ದುಕೊಂಡು ಬಂದಿದೆ.. ರಾಹುಲ್ ಗಾಂಧಿಯವರು ಮೊದಲ ಮಿಸೈಲ್ ವಿಫಲಗೊಂಡಿದ್ದು, ಈಗ ಮತ್ತೊಮ್ಮೆ ಲಾಂಚ್ ಮಾಡುವ ಪ್ರಯತ್ನದಲ್ಲಿದ್ದಾರೆ. ಅದು ಬಿಟ್ಟರೆ ಇವರ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ ಎಂದು ತಿಳಿಸಿದರು.

*ಕಾಂಗ್ರೆಸ್ ಪಕ್ಷ ಬಳ್ಳಾರಿಯ ಜನಕ್ಕೆ ಮೋಸ ಮಾಡಿದಂತಲ್ಲವೇ ?*

ಬಳ್ಳಾರಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಸಮಾವೇಶಕ್ಕೆ ಯಾವ ಪ್ರಶ್ನೆ ಕೇಳಲು ಬಯಸುತ್ತೀರಿ ಎಂಬುದಕ್ಕೆ ಪ್ರತಿಕ್ರಿಯಿಸಿ, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಬಳ್ಳಾರಿಯಲ್ಲಿ ಲೋಕಸಭಾ ಚುನಾವಣೆಗೆ ನಿಂತು, ಈ ಕ್ಷೇತ್ರವನ್ನೇ ಆಯ್ಕೆ ಮಾಡುವುದಾಗಿ ನಿರ್ಣಯಿಸಿ, ನಂತರ ರಾಯಬರೇಲಿ ಎಂದು ಆಯ್ಕೆ ಮಾಡಿಕೊಂಡರು. ಆ ಸಂದರ್ಭದಲ್ಲಿ ಮತ ಹಾಕಿದ ಜನರಿಗೆ ಕೃತಜ್ಞತೆಯನ್ನೂ ಸಲ್ಲಿಸಲಿಲ್ಲ. ಅಂದು 3   ಸಾವಿರ ಕೋಟಿ ಬಜೆಟ್ ನಿಗದಿಪಡಿಸಿ 1 ಪೈಸೆಯನ್ನೂ ಬಿಡುಗಡೆ ಮಾಡಲಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದೀರಿ. ಅಲ್ಲಿನ ಜನಕ್ಕೆ ನೀವು ಮೋಸ ಮಾಡಿದಂತಲ್ಲವೇ ಎಂದು ಪ್ರಶ್ನಿಸಿದರು.

*2023 ರಲ್ಲಿ 150 ಗುರಿಯನ್ನು ಮುಟ್ಟುವ ವಿಶ್ವಾಸವಿದೆ :*

ಸಂಕಲ್ಪ ಯಾತ್ರೆಯನ್ನು 3 ದಿನಗಳ ಕಾಲ 4 ಜಿಲ್ಲೆಯಲ್ಲಿ ಪ್ರಾರಂಭ ಮಾಡಿದ್ದು,ಅಭೂತಪೂರ್ವ ಬೆಂಬಲ ಇದೆ. ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಬಂದಿದೆ. ಭಾಜಪದ ಬಗ್ಗೆ ಜನರಲ್ಲಿಯೂ ವಿಶ್ವಾಸ ಹೆಚ್ಚಿದೆ. ಸಂಕಲ್ಪಯಾತ್ರೆ ವಿಜಯಸಂಕಲ್ಪ ಯಾತ್ರೆ ಆಗುವುದರಲ್ಲಿ ಸಂಶಯವಿಲ್ಲ. 2023 ರಲ್ಲಿ 150 ಗುರಿಯನ್ನು ಮುಟ್ಟುವ ವಿಶ್ವಾಸವಿದೆ ಎಂದರು.

ಸಿದ್ಧರಾಮಯ್ಯನವರು 4 ಕಿ.ಮೀ. ನಡೆಯುವ ಸವಾಲಿಗೆ ಪ್ರತಿಕ್ರಿಯೆ ನೀಡಿ, ಅವರು ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕಿಸಿದ್ದಾರೆ. ಇದಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರಿಗೆ ದೇವರು ಒಳ್ಳೆಯ ಆರೋಗ್ಯವನ್ನು ನೀಡಿ ನೂರು ವರ್ಷ ಚೆನ್ನಾಗಿರಲಿ ಎಂದು ತಿಳಿಸಿದರು.

*ಕಾನೂನಿನ ಚೌಕಟ್ಟಿನೊಳಗೆ ಕ್ರಮ:*
ಮುರುಘಾಮಠಕ್ಕೆ ಹೊಸ ಶ್ರೀಗಳನ್ನು ನೇಮಿಸುವ ಬಗ್ಗೆ ಒತ್ತಡ ಕೇಳಿಬರುತ್ತಿರುವುದಕ್ಕೆ ಪ್ರತಿಕ್ರಯಿಸಿ, ಮಾಜಿ ಸಚಿವ ಏಕಾಂತಯ್ಯ ಅವರ ನೇತೃತ್ವದಲ್ಲಿ ಭಕ್ತಮಂಡಳಿಯ ಸರ್ವರೂ ಬಂದು ಭೇಟಿಯಾಗಿದ್ದಾರೆ. ಅಲ್ಲಿನ ವಿಚಾರಗಳೆಲ್ಲವನ್ನೂ ತಿಳಿಸಿದ್ದಾರೆ. ಮಠದ ಆಡಳಿತಕ್ಕೆ ಆಗುತ್ತಿರುವ ತೊಂದರೆಯ ಬಗ್ಗೆ ವಿವರಿಸಿದ್ದಾರೆ . ಮಠದ ಟ್ರಸ್ಟ್ ಇದ್ದು,  ಕಾನೂನಿನ ಚೌಕಟ್ಟಿನೊಳಗೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

*ಕಂಠೀರವ ಸ್ಟೇಡಿಯಂ ಟ್ರ್ಯಾಕ್ ಹಾಳಾಗದಂತೆ ಕ್ರಮವಹಿಸಲು ತಾಕೀತು :*

ಕಂಠೀರವ ಸ್ಟೇಡಿಯಂ ನ್ನು ಫುಟ್ಬಾಲ್ ಕ್ರೀಡೆಗೆ ನೀಡುತ್ತಿದ್ದು, ರಾಜ್ಯದ ಕ್ರೀಡಾಪಟುಗಳಿಗೆ ಇದರಿಂದ ತೊಂದರೆಯಾಗುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಅವರು ಮಾಡುತ್ತಿದ್ದು, ಈ ವಿಚಾರ ಅವರ ಅಧಿಕಾರದ ಮಿತಿಗೆ ಒಳಪಟ್ಟಿದ್ದು, ನಾವು ನಿರ್ಧರಿಸಲು ಆಗುವುದಿಲ್ಲ.ಆದರೆ ಕ್ರೀಡಾಂಗಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಟ್ರ್ಯಾಕ್ ನ್ನು ಹಾಳಾಗದಂತೆ ಕಾಪಾಡುವುದು ಅಸೋಸಿಯೇಷನ್ ನವರ ಜವಾಬ್ದಾರಿ. ಇದಕ್ಕೆ ಸಂಬಂಧಪಟ್ಟವರನ್ನು ಕರೆಸಿ ಈ ಬಗ್ಗೆ ತಾಕೀತು ಮಾಡಲಾಗುವುದು ಎಂದು ತಿಳಿಸಿದರು.
[15/10, 2:39 PM] Cm Ps: *ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ಕ್ರೀಡಾ ತರಬೇತಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಅಕ್ಟೋಬರ್ 15 :

 ಅಮೃತ ಮಹೋತ್ಸವ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಿ, ಮುಂದಿನ ಒಲಂಪಿಕ್ಸ್ ನಲ್ಲಿ ಭಾಗವಹಿಸಲು  ಹಾಗೂ ಭಾರತಕ್ಕೆ ಪದಕ ಗೆಲ್ಲಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿ ಮಾತನಾಡಿದರು.

*ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಗ್ರಾಮೀಣ ಕ್ರೀಡಾಕೂಟ:*

ಕರ್ನಾಟಕ ರಾಜ್ಯದಲ್ಲಿ ಕ್ರೀಡಾಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಈ ವರ್ಷ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ. ಕಬ್ಬಡಿ, ಕೊಕೊ, ವಾಲಿಬಾಲ್, ಕುಸ್ತಿ, ಚಕ್ಕಡಿ ಓಡಿಸುವುದು ಮತ್ತು ಕರಾವಳಿಯ ಕಂಬಳ ಸೇರಿದಂತೆ ಗ್ರಾಮೀಣ ಕ್ರೀಡೆಗಳನ್ನು ಗ್ರಾಮ, ತಾಲ್ಲೂಕು, ಜಿಲ್ಲೆ ಹಾಗೂ ಅಂತಿಮವಾಗಿ ರಾಜ್ಯಮಟ್ಟದಲ್ಲಿ ಏರ್ಪಡಿಸಲಾಗುವುದು. ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಭಾರತ ರಾಷ್ಟ್ರವನ್ನು ಪ್ರತಿನಿಧಿಸುವ ಕ್ರೀಡಾಪಟುವಿಗೆ  ಇಡೀ ದೇಶ ಜನ ಒಗ್ಗಟ್ಟಾಗಿ ಅವರನ್ನು ಹುರಿದುಂಬಿಸುತ್ತಾರೆ, ಹೀಗೆ ಕ್ರೀಡೆಯ ಮೂಲಕ ಇಡೀ ಭಾರತವನ್ನು ಜೋಡಿಸಬಹುದಾಗಿದೆ ಎಂದು ತಿಳಿಸಿದರು.

*ಕ್ರೀಡೆಗಾಗಿ ಸೆಂಟರ್ ಆಫ್ ಎಕ್ಸ್ ಲೆನ್ಸ್  :*

ಬೆಂಗಳೂರಿನ ಬಳಿ ಕ್ರೀಡೆಗಾಗಿ ಸೆಂಟರ್ ಆಫ್ ಎಕ್ಸ್ ಲೆನ್ಸ್ ಕೇಂದ್ರವನ್ನು ಸ್ಥಾಪಿಸಲಾಗಿದೆ. ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗುತ್ತಿರುವ ಈ ಕೇಂದ್ರದಲ್ಲಿ ಕ್ರೀಡಾಪಟುಗಳಿಗೆ ಅತ್ಯುತ್ತಮ ತರಬೇತಿ, ಸಲಕರಣೆಗಳು, ಮೂಲಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

*ಮುಂದಿನ ಒಲಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಪದಕ ಗೆಲ್ಲುವ ನಿರೀಕ್ಷೆಯಿದೆ :*

ಪ್ರಧಾನಿ ಮೋದಿಯವರು ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಕಾರ್ಯಕ್ರಮಗಳ ಮೂಲಕ ಭಾರತದಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ. ಒಲಂಪಿಕ್ಸ್, ಏಷಿಯನ್,ಕಾಮನ್ ವೆಲ್ತ್,ನ್ಯಾಷನಲ್ ಗೇಮ್ಸ್ ಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳೊಂದಿಗೆ ಖುದ್ದು ಪ್ರೋತ್ಸಾಹಿಸಿದ್ದಾರೆ. ಈ ಕಾರಣದಿಂದ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಅತಿ ಹೆಚ್ಚಿನ ಪದಕಗಳನ್ನು ಗೆಲ್ಲಲು ಸಾಧ್ಯವಾಯಿತು. ಅವರ ನೇತೃತ್ವದಲ್ಲಿ ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಸಂಖ್ಯೆಯಲ್ಲಿ ಪದಕಗಳನ್ನು ಗೆಲ್ಲುವ ನಿರೀಕ್ಷೆ ಇದೆ ಎಂದರು.

*ಉತ್ತಮ ಚಾರಿತ್ರ್ಯವನ್ನು ಬೆಳೆಸುವ ಕ್ರೀಡೆ :*

ಕ್ರೀಡೆ ಎನ್ನುವುದು ಪ್ರಮುಖವಾದ ಚಟುವಟಿಕೆ. ಶಾಲಾಮಟ್ಟದಲ್ಲಿಯೇ ಕ್ರೀಡೆಯಲ್ಲಿ ಆಸಕ್ತಿಹೊಂದಿರುವ ಮಕ್ಕಳು,ಭವಿಷ್ಯದಲ್ಲಿ  ರಾಷ್ಟ್ರೀಯ ಕ್ರೀಡಾಪಟುಗಳಾಗುತ್ತಾರೆ. ಕ್ರೀಡೆಯಲ್ಲಿ ನಿರಂತರವಾದ ಅಭ್ಯಾಸ, ಕಠಿಣ ಪರಿಶ್ರಮ, ಸಮರ್ಪಣೆ ಬಹಳ ಮುಖ್ಯ. ಕಠಿಣ ಪರಿಶ್ರಮ ಹಾಗೂ ಶಿಸ್ತುಬದ್ಧ ಜೀವನ  ಉತ್ತಮ ಚಾರಿತ್ರ್ಯವನ್ನು ಬೆಳೆಸುತ್ತದೆ. ಕ್ರೀಡೆಗಳು ನಮ್ಮಲ್ಲಿ ಸ್ಪರ್ಧಾ ಮನೋಭಾವ, ನಮ್ಮಲ್ಲಿನ ಶಕ್ತಿ, ಗೆಲ್ಲುವ ಆತ್ಮವಿಶ್ವಾಸ ಹಾಗೂ ಸೋತಾಗ ಮನೋಸ್ಥೈರ್ಯವನ್ನು ಕಲಿಸುತ್ತದೆ. ಕ್ರೀಡೆಗಳು ನಮಗೆ ತಂಡಸ್ಪೂರ್ತಿಯನ್ನು ಹಾಗೂ ಉತ್ತಮ ಸ್ನೇಹವನ್ನೂ ನೀಡುತ್ತದೆ. ಬಹಳ ಮುಖ್ಯವಾಗಿ, ಕ್ರೀಡೆಗಳು ರಾಷ್ಟ್ರಕ್ಕಾಗಿ ಆಡುವ ಶಕ್ತಿಯನ್ನು ನೀಡುತ್ತದೆ. ಆದಕಾರಣ ಕ್ರೀಡೆ ಎಲ್ಲರ ಜೀವನದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ ಎಂದರು.

*ಸಕಾರಾತ್ಮಕ ಮನೋಭಾವದಿಂದ ಆಡಬೇಕು- ಕ್ರೀಡಾಪಟುಗಳಿಗೆ ಮುಖ್ಯಮಂತ್ರಿಗಳ ಕಿವಿಮಾತು :*

ಬೆಂಗಳೂರು ಉತ್ತಮ ವಾತಾವರಣವನ್ನು ಹೊಂದಿದ ಕಾಸ್ಮಪಾಲಿಟನ್ ನಗರ. , ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಕ್ರಿಡಾಪಟುಗಳು ಉತ್ತಮವಾಗಿ ಆಡುವ ಜೊತೆಗೆ ಬೆಂಗಳೂರಿನಲ್ಲಿನ ನಿಮ್ಮ ವಾಸ್ತವ್ಯದ ಆನಂದವನ್ನೂ ಪಡೆಯಿರಿ ಎಂದರು. ಕ್ರೀಡೆಯನ್ನು ಗೆಲ್ಲಲು ಆಡುವುದು ಹಾಗೂ ಸೋಲಬಾರದು ಎಂದು ಆಡುವುದಿದೆ. ಆದರೆ ಕ್ರೀಡಾಪಟುಗಳು ಎಂದಿಗೂ ಗೆಲ್ಲಲೇಬೇಕೆಂದು ಆಡುವ ಮನೋಭಾವದಿಂದ ಸಕಾರಾತ್ಮಕವಾಗಿ ಆಡಬೇಕು ಎಂದು ಕ್ರೀಡಾಕೂಟದಲ್ಲಿ ನೆರೆದಿದ್ದ ಎಲ್ಲ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿಗಳು  ಕಿವಿಮಾತು ಹೇಳಿದರು.
[15/10, 3:10 PM] Cm Ps: * ಬೆಳಗಾವಿ  15..ಅಕ್ಟೋಬರ್  11..ಮಾನ್ಯ ಮುಖ್ಯಮಂತ್ರಿಗಳಾದ *ಬಸವರಾಜ ಬೊಮ್ಮಾಯಿ ಅವರು* *ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.*.
[15/10, 3:55 PM] Cm Ps: *ಸಚಿವ ಸಂಪುಟ ವಿಸ್ತರಣೆ- ಸಧ್ಯದಲ್ಲಿಯೇ ನವದೆಹಲಿಗೆ ಭೇಟಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಳಗಾವಿ,ಅಕ್ಟೋಬರ್ 15:  

 ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದರು.

ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು ಎಂದು ತಿಳಿಸಿದರು.

*ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು :*

ಕೊಲ್ಲಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ಕಟ್ಟಲು ಶಿವಸೇನೆಯವರು ವಿರೋಧಿಸುತ್ತಿರುವ  ಬಗ್ಗೆ ಪ್ರತಿಕ್ರಯಿಸಿ, ಈಗಾಗಲೇ ಮಹಾರಾಷ್ಟ್ರದಲ್ಲಿ ಹತ್ತು ಹಲವಾರು ಸಂಘಗಳ ಕನ್ನಡ ಭವನಗಳು ಇವೆ.ಹಲವಾರು ದೇವಸ್ಥಾನಗಳು, ಯಾತ್ರಿನಿವಾಸಗಳೂ ಇವೆ. ಈ ವಿಚಾರದಲ್ಲಿ ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು ಎಂಬುದು ನನ್ನ ಅನಿಸಿಕೆ ಎಂದರು.

*ಶ್ರೀ ಪ್ರಭಾಕರ ಕೋರೆಯವರು ಸ್ನೇಹಜೀವಿ :*

ಕೆಎಲ್ ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಕೋರೆಯವರ 75 ನೇ ವರ್ಷದ ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತೋಷದ ವಿಷಯ. ಇಡೀ ಉತ್ತರ ಕರ್ನಾಟಕಕ್ಕೆ ಅವರ ಸುದೀರ್ಘ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜನಪ್ರಿಯರಾಗಿದ್ದಾರೆ. ಜನಾನುರಾಗಿಯಾದ ಕೋರೆಯವರಲ್ಲಿ ನಿರಂತರವಾಗಿ ಕೆಲಸ ಮಾಡುವ ಶಕ್ತಿ ಇದೆ. ಎಲ್ಲರೊಂದಿಗೂ ಸ್ನೇಹದಿಂದಿರುವ ಸ್ನೇಹಜೀವಿ. ಈ ಸಮಾರಂಭ ಅರ್ಥಪೂರ್ಣವಾಗಿರಲಿದೆ ಎಂದು ತಿಳಿಸಿದರು.
[15/10, 6:19 PM] Cm Ps: *ಬೆಳಗಾವಿ,* ಅಕ್ಟೋಬರ್ 15: *ಮಾನ್ಯ ಮುಖ್ಯಮಂತ್ರಿ   ಬಸವರಾಜ ಬೊಮ್ಮಾಯಿ*  ಅವರು *ಡಾ* : *ಪ್ರಭಾಕರ ಕೋರೆಯವರ 75ನೇ*   ಹುಟ್ಟು ಹಬ್ಬದ ಅಂಗವಾಗಿ ಇಂದು ಹಮ್ಮಿಕೊಳ್ಳಲಾಗಿದ್ದ  *ಅಮೃತ್* *ಮಹೋತ್ಸವ ಕಾರ್ಯಕ್ರಮದಲ್ಲಿ* ಪಾಲ್ಗೊಂಡ ಮಾತನಾಡಿದರು.

Post a Comment

Previous Post Next Post