[13/10, 9:57 AM] Cm Ps: ದಿನಾಂಕ 13-10-2022ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮುಖ್ಯಾಂಶಗಳು
1. ಮನೆಗಳಿಗೆ ಸಂಬಂಧೀಸಿದ ಹಾನಿ ದಾಖಲಿಸುವಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಮನೆ ಹಾನಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚಿಸಲಾಗಿದೆ.
2. ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಲಾಯಿತು.
3. ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ.
4. ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಯಿತು.
5. ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು.
6. ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು.
7. ವಿದ್ಯುತ್ ಕಂಬಗಳು, ಟ್ರಾನ್ಸ್್ಫಾಂರ್ಮರುಗಳನ್ನು 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು.
8. ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು.
9. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
10. ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು.
11. ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಲಾಯಿತು.
[13/10, 9:58 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಸಚಿವರಾದ ಗೋವಿಂದ ಎಂ. ಕಾರಜೋಳ ಹಾಗೂ ಶಶಿಕಲಾ ಜೊಲ್ಲೆ ಉಪಸ್ಥಿತ ರಿದ್ದರು. ಇತರ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.
[13/10, 10:39 AM] Cm Ps: *ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ; ಪರಿಹಾರ ವಿತರಣೆಯಲ್ಲಿ ಲೋಪ ಸಲ್ಲದು:*
*ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ*
ಹೊಸಪೇಟೆ, ಅಕ್ಟೋಬರ್ 13-
ರಾಜ್ಯದಲ್ಲಿ ಹಿಂದೆಂದಿಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು. ಮಳೆಹಾನಿ ಸಂಭವಿಸಿದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.
ಅವರು ಇಂದು ಹೊಸಪೇಟೆಯಿಂದ ಮಳೆಹಾನಿ ಸಂಭವಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿದರು. ಮನೆಗಳಿಗೆ ಸಂಬಂಧಿಸಿದ ಹಾನಿಯನ್ನು ದಾಖಲಿಸುವ ಹಂತದಲ್ಲಿಯೇ ಕೆಲವೆಡೆ ಲೋಪಗಳಾಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಮನೆ ಹಾನಿಗೆ ಸಂಬಂಧಿಸಿದಂತೆ ಎನ್ಡಿಆರ್ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚನೆ ನೀಡಿದರು.
ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು.
ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಲಾಯಿತು.
*ಮೂಲಸೌಲಭ್ಯ ಹಾನಿ ವರ್ಗೀಕರಣ*
ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಯಿತು.
ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಹ ಸೂಚನೆ ನೀಡಿದರು. ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು ಎಂದರು.
ವಿದ್ಯುತ್ ಕಂಬಗಳು, ಟ್ರಾನ್ಸ್್ಫಾೊರ್ಮರುಗಳನ್ನು 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು.
*ದಿಢೀರ್ ಪ್ರವಾಹದ ವಿರುದ್ಧ ಮುನ್ನೆಚ್ಚರಿಕೆ*
ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
*ಅನುದಾನ ಕೊರತೆ ಇಲ್ಲ*
ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಲಾಯಿತು.
ಮೂಲಸೌಕರ್ಯ ಹಾನಿಗೆ ಸಂಬಂಧಿಸಿದಂತೆ ಮೂರು ದಿನಗಳ ನಂತರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮುಖ್ಯಮಂತ್ರಿಯವರೊಂದಿಗೆ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ್ದರು.
[13/10, 10:40 AM] Cm Ps: *ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ದಿನಾಂಕ 1-10-2022ರಿಂದ ಈ ವರೆಗೆ ಸಂಬಂಧಿಸಿದಂತೆ ವರದಿಯಾಗಿರುವ ಮಳೆಹಾನಿಯ ವಿವರ:*
1. ಜೀವಹಾನಿ- 13
2. ಜಾನುವಾರುಗಳ ಸಾವು- 28
3. ಮನೆಹಾನಿ- 3309
4. ಬೆಳೆಹಾನಿ- 6279 ಹೆಕ್ಟೇರ್
5. ಕಾಳಜಿ ಕೇಂದ್ರಗಳ ಸ್ಥಾಪನೆ- 5, ಆಶ್ರಯ ಪಡೆದವರ ಸಂಖ್ಯೆ 1330
*ಪರಿಹಾರ ವಿತರಣೆ ವಿವರ*
*ಬೆಳೆಹಾನಿ ಪರಿಹಾರ:*
ಮುಂಗಾರು ಹಂಗಾಮಿನಲ್ಲಿ ಒಟ್ಟು 9,90,957 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದ್ದು, 6,16,138 ಹೆಕ್ಟೇರ್ ಪ್ರದೇಶದ ಬೆಳೆಹಾನಿಗೆ 8.83 ಲಕ್ಷ ರೈತರಿಗೆ 947.8 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇನ್ನು ಎರಡು ದಿನಗಳಲ್ಲಿ ಇನ್ನೊಂದು ಹಂತದಲ್ಲಿ ಸುಮಾರು 2 ಲಕ್ಷ ರೈತರಿಗೆ ಅಂದಾಜು 250 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
*ಮನೆಹಾನಿ ಪರಿಹಾರ*
ಜೂನ್ 1 ರಿಂದ ಸೆಪ್ಟೆಂಬರ್ 30ರ ವರೆಗೆ 48485 ಮನೆ ಹಾನಿ ಸಂಭವಿಸಿದ್ದು, 42,661 ಮನೆಗಳಿಗೆ ಪರಿಹಾರ ವಿತರಿಸಲಾಗಿದೆ.
ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಒಟ್ಟು 635.13 ಕೋಟಿ ರೂ. ಲಭ್ಯವಿದೆ.
[13/10, 12:47 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದ ದಲಿತ ಸಮುದಾಯದ ಲವ್ಲಿ ಹನುಮಂತವ್ವ ಅವರ ಮನೆಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ ಸಿಂಗ್, ಶಶಿಕಲಾ ಜೊಲ್ಲೆ ಹಾಜರಿದ್ದರು
[13/10, 12:54 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಂಪಿ ವಿಶ್ವ ವಿದ್ಯಾಲಯದ ಬಳಿ ಹೆಲಿಪ್ಯಾಡ್ ಹತ್ತಿರ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
[13/10, 1:03 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದ ಹಾಲಸ್ವಾಮಿ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ ಹಾಜರಿದ್ದರು
[13/10, 1:13 PM] Cm Ps: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆನಂದಸಿಂಗ್ ಹಾಗೂ ಮತ್ತಿತರರು ಹಾಜರಿದ್ದರು.
[13/10, 2:28 PM] Cm Ps: ಹೂವಿನಹಡಗಲಿ ಜನ ಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾತನಾಡಿದರು.
[13/10, 5:28 PM] Cm Ps: ಇಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದ ಜನ ಸಂಪರ್ಕ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ , ಸಚಿವರಾದ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು ಮತ್ತಿತರರು ಹಾಜರಿದ್ದರು.
[13/10, 6:12 PM] Cm Ps: *ಬಳ್ಳಾರಿ ಜಿಲ್ಲೆ* ( *ಸಿರಗುಪ್ಪ),* ಅಕ್ಟೋಬರ್ 13: *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು ಜಿಲ್ಲಾ ಭಾ.ಜ.ಪ.ದ ವತಿಯಿಂದ *ಸಿರಗುಪ್ಪದಲ್ಲಿ* *ತಾಲ್ಲೂಕು ಕ್ರೀಡಾಂಗಣದಲ್ಲಿ* ಆಯೋಜಿಸಿರುವ *ಜನ ಸಂಕಲ್ಪ* *ಯಾತ್ರೆಯನ್ನು ಉದ್ಘಾಟಿಸಿ* *ಮಾತನಾಡಿದರು.*
[13/10, 7:18 PM] Cm Ps: *ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬಳ್ಳಾರಿ, ಅಕ್ಟೋಬರ್ 13:
ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು, ಐದು ವರ್ಷ ಕರ್ನಾಟಕವನ್ನು ಎಟಿಎಂ ಮಾಡಿದ್ದೀರಿ, ಕಪ್ಪ ಕೊಡುವ ಸಂಸ್ಕೃತಿ ನಮ್ಮ ಪಕ್ಷದಲ್ಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು.
ಅವರು ಇಂದು ಹೂವಿನಹಡಗಲಿ ಜನಸಂಕಲ್ಪ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಮುಖ್ಯಮಂತ್ರಿ ಕಪ್ಪ ಕೊಡುವ ಬಗ್ಗೆ ಮಾತನಾಡುತ್ತಾರೆ. ಆ ಸಂಸ್ಕೃತಿ ಇರೋದು ಕಾಂಗ್ರೆಸ್ ನಲ್ಲಿ ಮಾತ್ರ. ತಾವು ಅಧಿಕಾರದಲ್ಲಿದ್ದಾಗ ಐದು ವರ್ಷ ಕರ್ನಾಟಕವನ್ನು ಎಟಿಎಂ ಮಾಡಿದ್ದೀರಿ, ಕಪ್ಪ ಕೊಡುವ ಸಂಸ್ಕೃತಿ ನಮ್ಮ ಪಕ್ಷದಲ್ಲಿಲ್ಲ. ಕಾಂಗ್ರೆಸ್ ರಾಜ್ಯಾಧ್ಯಕ್ಷರು ಕಪ್ಪ ಕೊಡಲು ಹೋಗಿಯೇ ಇಡಿ ಕೈಗೆ ಸಿಲುಕಿಕೊಂಡಿದ್ದಾರೆ. ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ. ಜನರು ಈಗ ಜಾಗೃತರಾಗಿದ್ದಾರೆ . ನಿಮ್ಮ ಆ ಭಾಗ್ಯ ಈ ಭಾಗ್ಯ ಅಂತ ಲೂಟಿ ಮಾಡಿದಿರಿ, ಅನ್ನಭಾಗ್ಯ ಅಂತ ಹೇಳಿ ಕನ್ನ ಭಾಗ್ಯ ಮಾಡಿದಿರಿ, ಎಸ್ಸಿ ಎಸ್ಟಿಗೆ ಕೊಳವೆಬಾವಿ ಕೊರೆಸಿದ್ದೇವೆ ಅಂತ ಲೂಟಿ ಮಾಡಿದಿರಿ. ನೀವು ಭಾಗ್ಯ ಕೊಟ್ಟಿದ್ದ ರೆ ಜನರು ನಿಮ್ಮನ್ನು ಯಾಕೆ ಸೋಲಿಸುತ್ತಿದ್ದರು ಎಂದು ಪ್ರಶ್ನಿಸಿ, ಕರ್ನಾಟಕದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದ್ದರೆ, ಅದು ಕಾಂಗ್ರೆಸ್ ನ ಭ್ರಷ್ಟಾಚಾರದಿಂದ ಆಗಿದೆ ಎಂದರು.
*ಸುಳ್ಳು ಆಶ್ವಾಸನೆಗಳನ್ನು ನೀಡಿದ ಕಾಂಗ್ರೆಸ್ :*
ನಾಳೆ ಕಾಂಗ್ರೆಸ್ ಪಾದಯಾತ್ರೆ ಬಳ್ಳಾರಿಗೆ ಬರುತ್ತಿದೆ. ನೀವೆಲ್ಲಾ ಸೇರಿ ಸೋನಿಯಾ ಗಾಂಧಿಗೆ ಎಂಪಿ ಮಾಡಿ ಆರಿಸಿ ಕಳುಹಿಸಿದಿರಿ. ಅವರು ಆರಿಸಿ ಬಂದ ಮೆಲೆ ಇಲ್ಲಿನ ಸ್ಥಾನಕ್ಕೆ ರಾಜಿನಾಮೆ ನೀಡಿ ಉತ್ತರ ಪ್ರದೇಶಕ್ಕೆ ಹಾರಿ ಹೋದರು. ಆಗ 3000 ಕೋಟಿ ರೂ. ಪ್ಯಾಕೇಜ್ ಕೊಡುತ್ತೇನೆ ಎಂದು ಹೇಳಿದ್ದರು. 3000 ಕೋಟಿ ಎಲ್ಲಿ ಹೋಯಿತು. ನಿಮ್ಮ ಮತವನ್ನು ಪಡೆದುಕೊಂಡು, ಈ ಕ್ಷೇತ್ರವನ್ನು ತಿರುಗಿಯೂ ನೋಡದ ಕಾಂಗ್ರೆಸ್ ನವರು ಸುಳ್ಳು ಆಶ್ವಾಸನೆಗಳನ್ನು ನೀಡಿದ್ದಾರೆ.ಈಗ ಅವರ ಮಗ ಬರುತ್ತಿದ್ದಾನೆ. ನಿಮ್ಮ ತಾಯಿಯನ್ನು ಆರಿಸಿ ಕಳುಹಿಸಿದ್ದೇವು ಅವರು ಏನು ಮಾಡಿದರು. ಈಗ ನೀವು ಏನು ಸುಳ್ಳು ಹೇಳಲು ಬಂದಿದ್ದೀರಿ ಎಂದು ಜನ ಪ್ರಶ್ನಿಸಬೇಕು. ಈ ಭಾಗದಲ್ಲಿ ಸುಳ್ಳು ನಡೆಯುವುದಿಲ್ಲ ಎಂಬ ಸಂದೇಶ ನೀಡಬೇಕು. ಎಂದರು.
*ಪಕ್ಷದ ನಿಷ್ಠೆಯೇ ನಮ್ಮ ಶಕ್ತಿ :*
ಹೂವಿನ ಹಡಗಲಿಯಲ್ಲಿ ಈ ಬಾರಿ ಕಮಲ ಅರಳುತ್ತದೆ. ನಾಯಕರುಗಳು ನಿಮ್ಮಲ್ಲಿರುವ ಸಣ್ಣ ಪುಟ್ಟ ವ್ಯತ್ಯಾಸವನ್ನು ಬದಿಗಿಟ್ಟು ಯಾರಿಗೆ ಟಿಕೆಟ್ ನೀಡಿದರೂ ನಿಷ್ಟೆಯಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಕಾರ್ಯಕರ್ತರ ಬಳಿ ಮುಖ್ಯಮಂತ್ರಿಗಳು ಪ್ರಮಾಣ ಮಾಡಿಸಿದರು.
ನಮ್ಮ ಹಿರಿಯರಾದ ಎಂ.ಪಿ.ಪ್ರಕಾಶ್ ಅವರು ಇಡೀ ಜೀವನವನ್ನು ಕಾಂಗ್ರೆಸ್ ವಿರೋಧ ಮಾಡುತ್ತ ಬಂದಿದ್ದರು. ಅವರು ಯಾಕೆ ಕಾಂಗ್ರೆಸ್ ಗೆ ಹೋದರೊ ಗೊತ್ತಿಲ್ಲ. ಕಾಂಗ್ರೆಸ್ ಅಂದರೆ ಸೋಲು, ಅಲ್ಲಿಗೆ ಹೋದರೆ ಸೋಲುವುದು ಖಚಿತ. ಆದರೆ ಅವರ ಕನಸಿನ ಯೋಜನೆಗಳನ್ನು ನಾನು ಜಾರಿಗೊಳಿಸುವ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆನಂದಸಿಂಗ್ ಹಾಗೂ ಮತ್ತಿತರರು ಹಾಜರಿದ್ದರು.
[13/10, 7:19 PM] Cm Ps: ಹೂವಿನಹಡಗಲಿ ಜನ ಸಂಕಲ್ಪ ಯಾತ್ರೆ –
*ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬಳ್ಳಾರಿ, ಅಕ್ಟೋಬರ್ 13:
ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮೂಲಕ ಈ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹೂವಿನಹಡಗಲಿ ಜನಸಂಕಲ್ಪ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದರು.
*ಹೂವಿನ ಹಡಗಲಿಯ ಅಂತರ್ಜಲ ಹೆಚ್ಚಳ:*
ನಾನು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಸಾರಿ ಇಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಸಿಂಗಟಾಲೂರು ಏತ ನೀರಾವರಿ ಪೂರ್ಣ ಮಾಡಬೇಕು ಎಂದು ಜನ ಬೇಡಿಕೆ ಇಟ್ಟಿದ್ದರು. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಹೂವಿನ ಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಯಿತು. ಹೂವಿನಹಡಗಲಿಯಲ್ಲಿ ಕೆರೆ ತುಂಬಿಸುವ ಕೆಲಸವನ್ನೂ ಮಾಡಲಾಗಿದೆ. ಹೂವಿನ ಹಡಗಲಿಯ ಅಂತರ್ಜಲ ಹೆಚ್ಚಿಸಲು ಕೆಲಸ ಮಾಡಲಾಗಿದೆ. ಈ ಭಾಗದ ರೈತರಿಗೆ ನೀರಿನ ಬರ ನಿವಾರಿಸಲು ಬಿಜೆಪಿ ಸರ್ಕಾರ ಮತ್ತು ಯಡಿಯೂರಪ್ಪ ಅವರು ಕಾರಣ. ಹುಲಿಗುಡ್ಡದ ಯೋಜನೆ ತಾವು ಮಾಡಿದ್ದೇವೆ ಅಂತ ಕೆಲವರು ಹೇಳಿಕೊಳ್ಳುತ್ತಿದ್ದರು. ಅದನ್ನು ರದ್ದು ಮಾಡಿ ಸಿಂಗಟಾಲೂರು ಯೋಜನೆಗೆ ಜೋಡಿಸಿ ರೂಪಿಸಲಾಯಿತು. ತಡಕಲ್ಲ ನೀರಾವರಿ ಯೊಜನೆಯನ್ನು ಪೂರ್ಣ ಮಾಡಿ ಲೋಕಾರ್ಪಣೆ ಮಾಡಲಾಗುವುದು ಎಂದರು.
ಹೂವಿನಹಡಗಲಿಯ ಸಮಗ್ರ ಅಭಿವೃದ್ಧಿ ಮಾಡಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಏರ್ಪಡಿಸುವ ಈ ಭಾಗಕ್ಕೆ ನಾನು ನೀಡಿದ ಯೋಜನೆಗಳನ್ನು ನಿಮ್ಮ ಮುಂದೆ ರಿಪೋರ್ಟ್ ಕಾರ್ಡ್ ಇಟ್ಡು ಮತ್ತೆ ಅಧಿಕಾರಕ್ಕೆ ಬಂದು ಕನ್ನಡ ನಾಡಿನಲ್ಲಿ ಕಮಲ ಅರಳಿಸಿ ಕಾಂಗ್ರೆಸ್ ನ್ನು ಬೇರು ಸಮೇತ ಕಿತ್ತು ಹಾಕಬೇಕು. ನಮ್ಮ ನೆಚ್ಚಿನ ನಾಯಕರಾದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ 150 ಸ್ಥಾನ ಗೆಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆನಂದಸಿಂಗ್ ಹಾಗೂ ಮತ್ತಿತರರು ಹಾಜರಿದ್ದರು.
[13/10, 8:17 PM] Cm Ps: *ಹಿಜಾಬ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ ಅಂತಿಮ ತಿರ್ಪು ಬಹಳ ಮುಖ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬಳ್ಳಾರಿ; ಹಿಜಾಬ್ ಪ್ರಕರಣ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪು ಬಹಳ ಮುಖ್ಯವಾಗಿದೆ. ಇದು ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಇಡೀ ದೇಶದಲ್ಲಿರುವ ವಿಚಾರ. ಹೀಗಾಗಿ ಅಂತಿಮ ತೀರ್ಪು ಬರುವವರೆಗೂ ನಾವು ಕಾದು ನೋಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು.
ಹಿಜಾಬ್ ಪ್ರಕರಣ ನ್ಯಾಯಾಂಗದ ವಿಚಾರವಾಗಿದೆ. ಇಬ್ಬರು ನ್ಯಾಯಮೂರ್ತಿಗಳು ತೀರ್ಪನ್ನು ಕೊಟ್ಟಿದ್ದಾರೆ. ನ್ಯಾಯಮೂರ್ತಿಗಳ ತೀರ್ಪನ್ನು ಲಿಖಿತವಾಗಿ ನೋಡಿ ಪ್ರತಿಕ್ರಿಯೆ ಕೊಡಬೇಕಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಹಿಜಾಬ್ ವಿಚಾರದಲ್ಲಿ ಹತ್ತು ಹಲವಾರು ಆಯಾಮಗಳಿವೆ. ವಿದ್ಯಾರ್ಥಿಗಳ ಬೇಡಿಕೆ, ಸರ್ಕಾರದ ಆಜ್ಞೆ ಬೇರೆ ಬೇರೆಯಾಗಿದೆ. ರಾಷ್ಟ್ರ, ಅಂತರಾಷ್ಟ್ರೀಯ ವಿಚಾರಗಳು ಇದರಲ್ಲಿ ಆಳವಡಿಕೆ ಆಗಿರುವುದರಿಂದ ಸ್ಪಷ್ಟವಾದ ತೀರ್ಪನ್ನು ನಾವು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
*ಮಳೆ ಹಾನಿಯ ಪರಿಹಾರಕ್ಕೆ ಸಿಎಂ ಬೊಮ್ಮಾಯಿ ಸೂಚನೆ**
ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾದ ಹಾನಿಯ ಬಗ್ಗೆ ತಿಳಿಯಲು 16 ಜಿಲ್ಲಾಧಿಕಾರಿಗಳ ಜತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದ್ದೇನೆ. ಅಕ್ಟೋಬರ್ ತಿಂಗಳಲ್ಲಿ ಸಾಮಾನ್ಯವಾಗಿ ಮಳೆ ಅಧಿಕವಾಗಿ ಆಗುತ್ತದೆ. ಅಕ್ಟೋಬರ್ 20 ರ ವರೆಗೂ ಅಧಿಕವಾದ ಮಳೆ ಆಗುವ ಸಾಧ್ಯತೆಯಿದೆ. ಹೀಗಾಗಿ ಅದಕ್ಕೆ ಪೂರ್ವಭಾವಿ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ. ಈ ತಿಂಗಳಲ್ಲಿ ಮಳೆಯಿಂದಾದ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಲಾಗುತ್ತಿದ್ದೆ. ಪ್ರಾಣ ಹಾನಿಯಾದವರ ಕುಟುಂಬಕ್ಕೆ ಪರಿಹಾರವನ್ನು ಈಗಾಗಲೇ ನೀಡಲಾಗಿದ್ದು, ಇನ್ನುಳಿದವರಿಗೂ 24 ಗಂಟೆಯಲ್ಲಿ ಪರಿಹಾರ ನೀಡಲು ಆದೇಶವನ್ನು ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
*ಕೆಟ್ಟ ಶಕ್ತಿಗಳ ದಮನಕ್ಕೆ ಕಾನೂನು ಕ್ರಮ*
ಹಾವೇರಿಯಲ್ಲಿ ಶಾಂತಿಯುತ ಪಥ ಸಂಚಲನವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ಹಮ್ಮಿಕೊಂಡಿದ್ದರು. ಒಂದು ವಾರದಿಂದ ಎಲ್ಲ ತಯಾರಿ ಅಲ್ಲಿ ನಡೆಯುತ್ತಿತ್ತು. ಪಥ ಸಂಚಲನದ ಮಾರ್ಗವನ್ನು ನೋಡಲು ಹೋದವರ ಮೇಲೆ ಅನವಶ್ಯಕವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದ ಇಡೀ ಜಿಲ್ಲೆಯ ಶಾಂತಿಯನ್ನು ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೇ 20 ಜನರನ್ನು ಬಂಧಿಸಲಾಗಿದೆ. ಇಂತಹ ಕೆಟ್ಟ ಶಕ್ತಿಗಳ ದಮನಕ್ಕೆ ಕಾನೂನಿನ ಮುಖಾಂತರ ಸರಿಯಾದ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದರು.
[13/10, 10:06 PM] Cm Ps: *ಕಾಂಗ್ರೆಸ್ ನವರದ್ದು 85 % ಸರ್ಕಾರ.* : *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬಳ್ಳಾರಿ, ಅಕ್ಟೋಬರ್ 13:ಕಾಂಗ್ರೆಸ್ ನವರದ್ದು 85 % ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಿರಗುಪ್ಪದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ಈ ಮಾತನ್ನು ಹಿಂದೆಯೇ ರಾಜೀವ್ ಗಾಂಧಿ ಹೇಳಿದ್ದರು. ರಾಹುಲ್ ಗಾಂಧಿ ಅವರ ತಂದೆ ರಾಜೀವ್ ಗಾಂಧೀ ಇವರೆಲ್ಲರಿಗಿಂತ ಸಜ್ಜನರು. ದಿಲ್ಲಿಯಿಂದ ನೂರು ರೂಪಾಯಿ ಕಳಿಸಿದರೆ. ಹಳ್ಳಿಗೆ 15 ರೂಪಾಯಿ ತಲುಪುತ್ತಿತ್ತು ಎಂ ದು ಪ್ರಾಮಾಣಿಕವಾಗಿ ಹೇಳಿದ್ದರು. 85 ರೂ.ಗಳು ಮಧ್ಯದಲ್ಲಿ ಸೋರಿಹೋಗುತ್ತಿತ್ತು. ಆಗ ಕೇಂದ್ರದಲ್ಲಿ ಕಾಂಗ್ರೆಸ್ , ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷವಿತ್ತು. ಇದು ಅಂದಿನ ವ್ಯವಸ್ಥೆ . ನರೇಂದ್ರ ಮೋದಿಯವರು ಬಂದ ನಂತರ ಎಲ್ಲಾ ಯೋಜನೆಗಳನ್ನು ನೇರವಾಗಿ ಎಲ್ಲಾ ಫಲಾನುಭವಿಗಳಿಗೆ ಶೇ 100 ರಷ್ಟು ಮೊತ್ತವನ್ನು ಡಿಬಿಟಿ ವ್ಯವಸ್ಥೆಯಡಿ ತಲುಪಿಸಿದ್ದಾರೆ ಎಂದರು.
*ಭೂಮಿ, ಆಕಾಶ, ಪಾತಾಳದಲ್ಲಿ ಭ್ರಷ್ಟಾಚಾರ*
ಇವರ ಕಾಲದಲ್ಲಿ ಭೂಮಿಯ ಮೇಲೆ, ಆಕಾಶಕ್ಕೆ ಹಾಗೂ ಪಾತಾಳಕ್ಕೆ ಭ್ರಷ್ಟಾಚಾರ ಮಾಡಿದರು. ಆಕಾಶಕ್ಕೆ ಭ್ರಷ್ಟಾಚಾರ ಅಂದರೆ 2 ಜಿ ಹಗರಣ. ಕಾಮನ್ ವೆಲ್ತ್ ಹಾಗೂ ಕಲ್ಲಿದ್ದಲು ಹಗರಣ ಮಾಡುವ ಆಕಾಶ, ಭೂಮಿ, ಪಾತಾಳದಲ್ಲಿ ಭ್ರಷ್ಟಾಚಾರ ಮಾಡಿದ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಕೆರೆ ತುಂಬಿಸುವ ಯೋಜನೆಯಡಿ ಭ್ರಷ್ಟಾಚಾರ, ನೀರಾವರಿ,ಸಣ್ಣ ನೀರಾವರಿ, ಗಂಗಾಕಲ್ಯಾಣ ಯೋಜನೆಯಡಿ 36 ಕೊಳವೆಬಾವಿಗಳನ್ನು ಒಂದೇ ದಿನ ಮಂಜೂರು ಮಾಡಿ ದುಡ್ಡು ಹೊಡೆದರು ಎಂದರು.
*ಅಧಿಕಾರಕ್ಕಾಗಿ ರಾಜಕಾರಣ*
ಜನಸಂಕಲ್ಪ ಯಾತ್ರೆ ರಾಯಚೂರು, ವಿಜಯನಗರ, ಕೊಪ್ಪಳಕ್ಕೆ ಹೋಗಿ ಬಳ್ಳಾರಿಗೆ ಬಂದಿದೆ. ಹೋದಲ್ಲೆಲ್ಲಾ ಜನಬೆಂಬಲ ಹಾಗೂ ಜೋಶ್ ದೊರೆತಿದೆ. ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ಮಾಡುತ್ತಿದ್ದಾರೆ. ಜನಪರವಾದ ನಿರ್ಣಯ ತೆಗೆದುಕೊಳ್ಳಲು ಕಾಂಗ್ರೆಸ್ಸಿಗೆ ಬರುವುದಿಲ್ಲ. ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಾರೆ. ಅಧಿಕಾರ ಕ್ಕೆ ಬಂದಾಗ ಅವರು ತಮ್ಮ ಸ್ವಂತ ಅಭಿವೃದ್ಧಿ ಮಾಡಿಕೊಂಡರು. ಜನರನ್ನು ಸಂಪೂರ್ಣವಾಗಿ ಮರೆಯುತ್ತಾರೆ. ಕಾಂಗ್ರೆಸ್ಸಿನ ಮಾಜಿ ಮಂತ್ರಿಗಳೊಬ್ಬರು ನಾವು ಅಧಿಕಾರ ದಲ್ಲಿದ್ದಾಗ ಮತ್ತು ಅಧಿಕಾರದಲ್ಲಿಲ್ಲದಾಗ ಅವರು ಏನಾಗುತ್ತಾರೆ ಎಂದು ತಿಳಿಸಿದ್ದರು. ಅಂದರೆ ಈ ರಾಷ್ಟ್ರವನ್ನು 50 ವರ್ಷ ಆಳಿ, ಈ ರಾಜ್ಯದ ಪ್ರಗತಿಗೆ ಮಾರಕವಾಗಿ, ರಾಜ್ಯವನ್ನು ತಮ್ಮ ಹೈ ಕಮಾಂಡಿಗೆ ಒತ್ತೆ ಇಟ್ಟು, ಕರ್ನಾಟಕ ರಾಜ್ಯದ ಸ್ವಾಭಿಮಾನವನ್ನೂ ಲೆಕ್ಕಿಸದೇ, ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡಿರುವ ಕಾಂಗ್ರೆಸ್ಸನ್ನು ಶಾಶ್ವತವಾಗಿ ಮನೆಗೆ ಕಳಿಸುವ ಕೆಲಸವನ್ನು ಕರ್ನಾಟಕದ ಜನತೆ 2023 ರಲ್ಲಿ ಮಾಡಲಿದ್ದಾರೆ ಎಂದರು.
*ಕಾಂಗ್ರೆಸ್ ಸಂಸ್ಕೃತಿ*
ಅಧಿಕಾರಕ್ಕೆ ಬಂದಾಗ ಜನರನ್ನು ಮರೆತಿದ್ದಕ್ಕೆ ಉದಾಹರಣೆ ಎಂದರೆ. ಸೋನಿಯಾ ಗಾಂಧಿ ಬಳ್ಳಾರಿಗೆ ಸಂಸದರಾಗಿ ಬಂದರು. ಮೂರು ಸಾವಿರ ಕೋಟಿ ಪ್ಯಾಕೇಜ್ ಮಾಡುವುದಾಗಿ ಹೇಳಿದರು. ಎಲ್ಲಿದೆ ಪ್ಯಾಕೇಜ್? ಯಾರ ಮನೆಗೆ ಹೋಗಿದೆ? ಬಳ್ಳಾರಿ ಜಿಲ್ಲೆಗೆ ಒಂದು ಪೈಸೆಯನ್ನೂ ಕೊಡಲಿಲ್ಲ. ಧನ್ಯವಾದಗಳನ್ನೂ ಹೇಳಲಿಲ್ಲ. ಇದು ಕಾಂಗ್ರೆಸ್ ಸಂಸ್ಕೃತಿ ಎಂದರು.
[13/10, 10:09 PM] Cm Ps: *ಸಿಂಗಾಪುರ- ನಿಟ್ಟೂರು ಸೇತುವೆ ಕಾಮಗಾರಿಗೆ ಅನುದಾನ : ಸಿಎಂ ಬೊಮ್ಮಾಯಿ ಭರವಸೆ*
ಬಳ್ಳಾರಿ, ಅಕ್ಟೋಬರ್ 13: ತುಂಗಭದ್ರಾ ನದಿಗೆ ಅಡ್ಡಲಾಗಿ ಸಿಂಗಾಪುರ ನಿಟ್ಟೂರು ಸೇತುವೆ ಕಾಮಗಾರಿಗೆ ಸಂಪೂರ್ಣ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಿರಗುಪ್ಪದಲ್ಲಿ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದರು.
ಸಂಸದ ಸಂಗಪ್ಪ ಕರಡಿ ಹಾಗೂ ಸೋಮಲಿಂಗಪ್ಪ ಅವರು ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ಬೈಪಾಸ್ ರಸ್ತೆ ಯೋಜನೆ ಸಿದ್ಧವಾಗುತ್ತಿದ್ದು ಬರುವ ದಿನಗಳಲ್ಲಿ ಅದಕ್ಕೆ ಅಗತ್ಯವಿರುವ ಅನುದಾನ ಒದಗಿಸಲಿದೆ. ಒಳಚರಂಡಿ ವ್ಯವಸ್ಥೆಯನ್ನು ಕೈಗೆತ್ತಿಕೊಳ್ಳಲು ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಸರಬರಾಜು ಮಂಡಳಿಗೆ ಸೂಚಿಸಿದ್ದೇನೆ ಎಂದರು. ಸಿರಗುಪ್ಪ ತಾಲ್ಲೂಕಿನ ಅಭಿವೃದ್ಧಿಗೆ ಸಂಪೂರ್ಣ ವಾಗಿ ಅನುದಾನ ಒದಗಿಸಲು ನಮ್ಮ ಸರ್ಕಾರ ಬದ್ದ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
*ಜಿಲ್ಲೆಯ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ರೂ.ಗಳ ಯೋಜನೆ*
ಈ ವರ್ಷ ನಾವು ನೆನೆಗುದಿಗೆ ಬಿದ್ದಿದ್ದ ಖನಿಜ ನಿಧಿಯನ್ನು ಸರ್ವೋಚ್ಚ ನ್ಯಾಯಾಲಯ ದ ಆದೇಶದ ಮೇರೆಗೆ ತಂದು 4-5 ಜಿಲ್ಲೆಗಳಿಗೆ 25 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಯನ್ನು ಮಾಡುತ್ತಿದ್ದೇವೆ. ತಲಾ 5 ಸಾವಿರ ಕೋಟಿ ರೂ ಗಳ ಕ್ರಿಯಾಯೋಜನೆ ರೂಪಿಸಿ, ಮುಂದಿನ 2 ವರ್ಷಗಳಲ್ಲಿ 5 ವರ್ಷಗಳಲ್ಲಿ 5 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ಈ ಜಿಲ್ಲೆಯ ಅಭಿವೃದ್ಧಿಗಾಗಿ
ಒದಗಿಸುತ್ತೇವೆ ಎಂದರು.
*ಜನೋಪಯೋಗಿ ಶಾಸಕರು*
ಶಾಸಕ ಸೋಮಲಿಂಗಪ್ಪ ಅವರು ಜನೋಪಯೋಗಿ ಶಾಸಕರು. ಈ ಕ್ಷೇತ್ರದ ಬಡವರು, ದೀನದಲಿತರರು, ಎಲ್ಲಾ ಸಮುದಾಯಗಳ ಬಗ್ಗೆ ಅತ್ಯಂತ ಪ್ರೀತಿ ಗೌರವ ದಿಂದ ಸಾಮಾನ್ಯ ಸೇವಕನ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ 5 ವರ್ಷಗಳಲ್ಲಿ 4 ವಸತಿ ಶಾಲೆಗಳು, ಸೇತುವೆ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ.ಕುಡಿಯುವ ನೀರಿಗೆ ಸಿರಗುಪ್ಪೆ ಕೆರೆ ನಿರ್ಮಾಣ, ಬ್ರಿಡ್ಜ್ ಕಂ ಬ್ಯಾರೇಜ್, ಹಾಸ್ಟೆಲ್ ಗಳು ಬಿ.ಆರ್.ಅಂಬೇಡ್ಕರ್ ಭವನ, ವಾಲ್ಮೀಕಿ ಭವನ, ಏತ ನೀರಾವರಿ ಯೋಜನೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನ ಕ್ಕೆ ತಂದಿದ್ದಾರೆ. ಅವರ ರಿಪೋರ್ಟ್ ಕಾರ್ಡ್ ತಂದಿದ್ದು, ಸೇವಕನನ್ನು ಆಯ್ಕೆ ಮಾಡುತ್ತೀರೋ, ನಾಯಕನನ್ನು ಆಯ್ಕೆ ಮಾಡುತ್ತೀರೋ ಎನ್ನುವ ತೀರ್ಮಾನ ಜನರದ್ದು. ಮನೆ ಬಾಗಿಲಿಗೆ ಬಂದು ಸೇವೆ ನೀಡುವ ಸಜ್ಜನ, ಸರಳ ವ್ಯಕ್ತಿ ಯಾದ ಸೋಮಲಿಂಗಪ್ಪ ಅವರಿಗೆ ಜನ ಮುಂದಿನ 5 ವರ್ಷ ಸೇವೆ ಮಾಡಲು ಆಶೀರ್ವಾದ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ , ಸಚಿವರಾದ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು ಮತ್ತಿತರರು ಹಾಜರಿದ್ದರು.
Post a Comment