[19/10, 1:26 PM] Cm Ps: ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ಹೆಲಿಪ್ಯಾಡ್ ಬಳಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುರಪುರ ಶಾಸಕರಾದ ರಾಜು ಗೌಡ ( ನರಸಿಂಹ ನಾಯಕ) ಹಾಜರಿದ್ದರು
[19/10, 2:00 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಣಸಗಿ ಯು.ಕೆ.ಪಿ.ಕ್ಯಾಂಪಿನ ದಲಿತ ಕುಟುಂಬದ ಪರಮಣ್ಣ ಕಟ್ಟೀಮನಿ ಅವರ ಮನೆಗೆ ಭೇಟಿ ನೀಡಿ ಉಪಹಾರ ಸ್ವೀಕರಿಸಿದರು.
[19/10, 2:00 PM] Cm Ps: ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ಹೆಲಿಪ್ಯಾಡ್ ಬಳಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ, ಸುರಪುರ ಶಾಸಕರಾದ ರಾಜು ಗೌಡ ( ನರಸಿಂಹ ನಾಯಕ) ಹಾಜರಿದ್ದರು
[19/10, 4:28 PM] Cm Ps: ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ್ ಕಾರಜೋಳ, ಶ್ರೀರಾಮುಲು, ಮುರುಗೇಶ ನಿರಾಣಿ, ಬೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕರಾದ ನರಸಿಂಹ ನಾಯಕ್ (ರಾಜು ಗೌಡ), ವೆಂಕಟರೆಡ್ಡಿ ಮುದ್ನಾಳ, ಸಂಸದ ರಾಜ ಅಮರೇಶ್ವರ ನಾಯ್ಕ್,
ವಿಧಾನ ಪರಿಷತ್ ಸದಸ್ಯರಾದ ಬಾಬುರಾವ್ ಚಿಂಚನಸೂರ, ಶಶೀಲ್ ನಮೋಶಿ, ಬಿ.ಜಿ.ಪಾಟೀಲ್,
ಯಾದಗಿರಿ ಜಿಲ್ಲಾಧ್ಯಕ್ಷ ಡಾ. ಶರಣಭೋಪಲ್ ರೆಡ್ಡಿ, ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ ಮತ್ತಿತರರು ಹಾಜರಿದ್ದರು.
[19/10, 4:36 PM] Cm Ps: ಯಾದಗಿರಿ ಜಿಲ್ಲೆ ( *ಹುಣಸಗಿ* ), ಅಕ್ಟೋಬರ್ 19: *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು ಯಾದಗಿರಿ ಜಿಲ್ಲಾ *ಭಾ.ಜ.ಪ. ದ ವತಿಯಿಂದ* ಆಯೋಜಿಸಿರುವ “ *ಜನ ಸಂಕಲ್ಪ* *ಯಾತ್ರೆ* ”ಯನ್ನು *ಉದ್ಘಾಟಿಸಿ ಮಾತನಾಡಿದರು.*
[19/10, 5:32 PM] Cm Ps: *ಕಲಬುರಗಿ* ಜಿಲ್ಲೆ ( *ಕಮಲಾಪುರ* ), ಅಕ್ಟೋಬರ್ 19: *ಮಾನ್ಯ ಮುಖ್ಯಮಂತ್ರಿ* *ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಕಮಲಾಪುರದ ಮಹಾಗಾಂವ* *ಕ್ರೀಡಾಂಗಣದಲ್ಲಿ ಕಲಬುರಗಿ ಜಿಲ್ಲಾ* ಭಾ.ಜ.ಪ. ದ ವತಿಯಿಂದ ಆಯೋಜಿಸಿರುವ “ *ಜನ ಸಂಕಲ್ಪ* *ಯಾತ್ರೆ”ಯನ್ನು* *ಉದ್ಘಾಟಿಸಿ ಮಾತನಾಡಿದರು* .
[19/10, 6:02 PM] Cm Ps: *ಸೇಸಿಎಂ ಅಭಿಯಾನ: ನಮ್ಮ ಕೆಲಸಗಳ ಮೂಲಕ ಉತ್ತರ*
: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಯಾದಗಿರಿ:, ಅಕ್ಟೋಬರ್ 19: ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಸೇಸಿಎಂ ಅಭಿಯಾನ ಉದ್ಯೋಗವಿಲ್ಲದವರು ಮಾಡುವುದು. ನಾವು ಮಾತನಾಡುವುದಕ್ಕಿಂತ ನಮ್ಮ ಕೆಲಸಗಳು ಮಾತನಾಡಬೇಕೆಂಬುದರ ಬಗ್ಗೆ ನಮಗೆ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಯಾದಗಿರಿ ಜಿಲ್ಲೆಯ ಹುಣಸಗಿ ಹೆಲಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಕಾಂಗ್ರಸ್ ನವರು ಏನು ಮಾಡುತ್ತಾರೋ ಮಾಡಲಿ. ಆದರೆ ನಮಗೆ ಜವಾಬ್ದಾರಿ ಇದೆ. ಸರ್ಕಾರ ನಡೆಸುವುದು, ಜನಕಲ್ಯಾಣದ ಕೆಲಸ ಮಾಡುತ್ತಿದ್ದೇವೆ. ನಾವು ನಮ್ಮ ಕೆಲಸದ ಮುಖಾಂತರ ಜನರ ಬಳಿ ತೆರಳುತ್ತಿದ್ದೇವೆ ಎಂದರು.
*ಕಾಂಗ್ರೆಸ್ ಪಕ್ಷದ ಹಗರಣಗಳ ಬಗ್ಗೆ ರಾಹುಲ್ ಗಾಂಧಿ ಕಣ್ಣು ತೆಗೆದು ನೋಡಲಿ*.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾಲದ ಹಗರಣಗಳನ್ನು ರಾಹುಲ್ ಗಾಂಧಿಗೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆಗೆ ಕುಮಾರಸ್ವಾಮಿಯವರು ದಮ್ ಇದ್ರೆ ಹಗರಣಗಳ ಬಗ್ಗೆ ತನಿಖೆ ನಡೆಸಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗಾಗಲೇ ಮೂರು ಪ್ರಕರಣಗಳು ತನಿಖೆಗೆ ಒಳಪಟ್ಟಿವೆ. ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವಾಗಿರುವ ಪ್ರಕರಣದಲ್ಲಿ ಸಿಐಡಿ 20 ಜನರನ್ನು ಬಂಧಿಸಿದ್ದಾರೆ. ಪಿ.ಎಸ್.ಐ ಸಿಐಡಿ ಈಗಾಗಲೇ ವರದಿ ಸಲ್ಲಿಸಿದ್ದಾರೆ. ಸರ್ಕಾರಿ ಅಭಿಯೋಜಕರ ನೇಮಕಾತಿ ಪ್ರಕರಣದಲ್ಲಿ ಅಮಾನತುಗೊಳಿಸಲಾಗಿದ್ದು ಕ್ರಮ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಅವರು ಅವರ ಪಕ್ಷ ಅಧಿಕಾರದಲ್ಲಿದ್ದಾಗ ಆಗಿರುವ ಹಗರಣಗಳ ಬಗ್ಗೆ ಕಣ್ಣು ತೆಗೆದು ನೋಡಲಿ. ಅವರ ಪಕ್ಷದವರು ಈಗಲೂ ಅಧಿಕಾರದಲ್ಲಿದ್ದಾರೆ ಏನು ಕ್ರಮ ತೆಗೆದುಕೊಳ್ಳುತ್ತಾರೆ ನೋಡೋಣ ಎಂದರು.
*ರಸ್ತೆ ಗುಂಡಿಗಳನ್ನು ಸಮಾರೋಪದಲ್ಲಿ ಮುಚ್ಚಲು ಸೂಚನೆ*
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸಮಾರೋಪದಲ್ಲಿ ಮುಚ್ಚಲು ಸೂಚನೆ ನೀಡಲಾಗಿದೆ. ಪ್ರಕರಣದ ಸಂಪೂರ್ಣ ತನಿಖೆಗೂ ಆದೇಶ ನೀಡಲಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರಸ್ತೆ ಗುಂಡಿಗಳಿಂದಾಗುವ ಅಪಘಾತಗಳಿಗೆ ಸರ್ಕಾರವೇ ನೇರ ಹೊಣೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕುಮಾರಸ್ವಾಮಿಯವರೂ ಹಿಂದೆ ಆಡಳಿತ ಮಾಡಿದ್ದರು. ಅವರ ಕಾಲದಲ್ಲಿಯೂ ರಸ್ತೆ ಗುಂಡಿಗಳಿಂದಾಗಿ ಸಾವಾಗಿತ್ತು ಎಂದರು.
*ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ: ಶೀಘ್ರ ತೀರ್ಪು ಹೊರಬೀಳುವ ವಿಶ್ವಾಸ*
ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಸಂಬಂಧ ನಿನ್ನೆ ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆಯಾಗಿದೆ. ಕಳೆದ 8-10 ತಿಂಗಳಿಂದ ನ್ಯಾಯಾಧೀಶರು ಒಬ್ಬರು ಮಹಾರಾಷ್ಟ ಮತ್ತು ಕರ್ನಾಟಕದವರಾಗಿದ್ದರಿಂದ ವಿಚಾರಣೆಯನ್ನು ನಿರಾಕರಿಸಿದ್ದರು. ಇಬ್ಬರು ಹೊಸ ನ್ಯಾಯಾಧೀಶರ ನೇಮಕಾತಿಯಾಗಿದ್ದು, ವಿಚಾರಣೆಯಾಗಿ, ಮುಂದೂಡಲಾಗಿದೆ. ಡಿಸೆಂಬರ್ ತಿಂಗಳ ಮೊದಲನೇ ವಾರದಲ್ಲಿ ಪುನ:ವಿಚಾರಣೆಯಾಗಲಿದೆ. ಬಹುತೇಕವಾಗಿ ಎಲ್ಲಾ ಪಾಟಿ ಸವಾಲುಗಳಿಗೆ ಉತ್ತರ ನೀಡಲಾಗಿದೆ. ಶೀರ್ಘವಾಗಿ ತೀರ್ಪು ಹೊರಬೀಳಲಿದೆ. ಬ್ರಿಜೇಶ್ ಕುಮಾರ್ ಮಿಶ್ರಾ ಅವರ ನ್ಯಾಯಮಂಡಳಿ ಆದೇಶದ ಅಧಿಸೂಚನೆ ಹೊರಡಿಸಲು ಆದೇಶ ಬರುವ ವಿಶ್ವಾಸವಿದೆ ಎಂದರು.
*ಜನಸಂಕಲ್ಪ ಯಾತ್ರೆಗೆ ಜನಬೆಂಬಲ*
ಜನಸಂಕಲ್ಪ ಯಾತ್ರೆ ಯಾದಗಿರಿಯಲ್ಲಿ ಇಂದು ಪ್ರಾರಂಭವಾಗುತ್ತಿದೆ. ಎಲ್ಲೆಡೆ ಅಭೂತಪೂರ್ವವಾದ ಜನಬೆಂಬಲ ದೊರೆಯುತ್ತಿದೆ. ರಾಯಚೂರು, ಕೊಪ್ಪಳ, ಬಳ್ಳಾರಿ, ಬೀದರ್ ಜಿಲ್ಲೆಗಳಲ್ಲಿ ಅತ್ಯಂತ ಯಶಸ್ವಿಯಾಗಿದ್ದು, ಜನರ ಉತ್ಸಾಹ ದೊಡ್ಡದಿದೆ. ಜನಸಂಕಲ್ಪ ಯಾತ್ರೆ ವಿಜಯ ಸಂಕಲ್ಪ ಯಾತ್ರೆಯಾಗಿ ಪರಿವರ್ತನೆಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
--
[19/10, 7:55 PM] Cm Ps: *ಪಿ.ಎಸ್.ಐ ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಯಾದಗಿರಿ:, ಅಕ್ಟೋಬರ್ 19: ಪಿ.ಎಸ್.ಐ ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಯಾದಗಿರಿ ಜಿಲ್ಲಾ ಭಾಜಪ ಹುಣಸಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ರಾಹುಲ್ ಗಾಂಧಿಗೆ ದೇಶ ಹಾಗೂ ಕರ್ನಾಟಕದ ಬಗ್ಗೆ ಗೊತ್ತಿಲ್ಲ. ಕರ್ನಾಟಕದ ಜನರ ಭಾವನೆಗಳೂ ತಿಳಿದಿಲ್ಲ. ಅವರ ಕಾಲದ ಎಲ್ಲಾ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಕಳುಹಿಸಲಾಗುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಲ್ಲ ಎಂದು ಹೇಳಿದ್ದಾರೆ. ಈ ಹುಡುಗ ಏನೂ ಆಗುವುದಿಲ್ಲ ಎಂದು ನಮಗೆ 15 ವಷರ್ಗಳಿಗೆ ಮುಂಚೆಯೇ ಗೊತ್ತಿತ್ತು . ಆದರೆ ಕಾಂಗ್ರೆಸ್ಸಿಗರ ಬೆನ್ನು ಹತ್ತಿದ್ದಾರೆ. ರಾಹುಲ್ ಗಾಂಧಿ ಯಾವತ್ತೂ ಪ್ರಧಾನಿ ಆಗುವುದಿಲ್ಲ. ಕಾಂಗ್ರೆಸ್ ಕಾಲದ ಹಗರಣಗಳ ಬಗ್ಗೆ ಈಗಾಗಲೇ ತನಿಖೆಯಾಗುತ್ತಿದೆ. ರಾಹುಲ್ ಗಾಂಧಿಗೆ ಕೊಡುತ್ತೇನೆ ಎಂದರೆ ಅವರಿಗೆ ಭಯ ಶುರುವಾಗಿದೆ. ಇಂಥವರನ್ನು ಕಟ್ಟಿಕೊಂಡು ನಡೆದರೆ ಇವರ ಮೇಲೆ ನಿಮ್ಮ ಪಕ್ಷದಲ್ಲಿ ಏನಾದರೂ ಕ್ರಮ ತೆಗೆದುಕೊಳ್ಳಲಾಗುವುದೇ ಎಂದು ಪ್ರಶ್ನೆ ಮಾಡುತ್ತಿದ್ದೇನೆ ಎಂದರು.
*ಕರ್ನಾಟಕದ ಜನ ಸುಳ್ಳನ್ನು ನಂಬುವುದಿಲ್ಲ*
ದಾಖಲೆ ಇಲ್ಲದೆ ಆರೋಪ ಮಾಡುವ ಕಾಂಗ್ರೆಸ್ಸಿಗೆ ದಾಖಲೆ ಕೊಟ್ಟು ಮಾತನಾಡುತ್ತಿದ್ದೇನೆ. ಕುಂಡಗಳಲ್ಲಿ ಇರುವ ಗಿಡಗಳಲ್ಲ. ಕರ್ನಾಟಕದ ಭೂಮಿಯಲ್ಲಿ ಹೆಮ್ಮರವಾಗಿ, ಆಳವಾಗಿ ಬೇರು ಬಿಟ್ಟರುವವರು ನಾವು. ಸುಳ್ಳು ಆಪಾದನೆ, ಮಾತುಗಳನ್ನು ಕರ್ನಾಟಕದ ಜನ ನಂಬುವುದಿಲ್ಲ. ಹೆಮ್ಮರಗಳನ್ನು ನೀವು ಏನೂ ಮಾಡಲು ಸಾಧ್ಯವಿಲ್ಲ ಸ್ವಚ್ಛ ದಕ್ಷ ಆಡಳಿತ, ಎಲ್ಲಾ ವರ್ಗಕ್ಕೂ ನ್ಯಾಯ, ಎಲ್ಲಾ ಪ್ರದೇಶಕ್ಕೂ ನ್ಯಾಯ ನೀಡುವ ಸಂಕಲ್ಪ ನಮ್ಮದು ಎಂದರು.
*ಭಾಷಣದಲ್ಲಿ ಸಾಮಾಜಿಕ ನ್ಯಾಯ*
ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಭಾಷಣದಲ್ಲಿ ಹೇಳಿ 70 ವರ್ಷ ಆಡಳಿತ ಮಾಡಿದರು. ಮೀಸಲಾತಿಯ ಬೇಡಿಕೆ ಐದು ದಶಕಗಳದ್ದು. ದುರ್ಬಲ ವರ್ಗದವರು ಹೇಗಿದ್ದಾರೆ ಎಂದು ತಿರುಗಿ ನೋಡಲು ಅವರಿಗೆ ಪುರುಸೊತ್ತು ಸಿಗಲಿಲ್ಲ. ಅವರಿಗೆ ಮೀಸಲಾತಿ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿ ರಚನೆಯಾಯಿತು. ಇಂದು ಅದನ್ನು ಅನುಷ್ಠಾನ ಮಾಡಬೇಕೆಂಬ ಇಚ್ಛಾಶಕ್ತಿಗೆ ಮೀಸಲಾತಿ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಎಂದರು.
*ಮಾತಿನಲ್ಲಿ ಅಲ್ಲ, ಕೃತಿಯಲ್ಲಿ ತೋರಿಸಿದ್ದೇವೆ*
ಕಾಂಗ್ರೆಸ್ ನವರಿದ್ದಾಗ ಕೆ.ಕೆ.ಆರ್.ಡಿ.ಬಿ ಅನುದಾನ ಜನರಿಗೆ ಮುಟ್ಟಲಿಲ್ಲ. ನರೇಗಾ ಯೋಜನೆಯಡಿ ನೂರಾರು ಕೋಟಿ ರೂ.ಗಳನ್ನು ಕಾಂಗ್ರೆಸ್ ಶಾಸಕರು ಹೊಡೆದಿದ್ದರು. ಕೇಂದ್ರದಲ್ಲಿ ಪ್ರಶಸ್ತಿ ಪಡೆಯಲು ಹೊರಟಿದ್ದರು. ಕೊನೆಗೆ ಸಿಬಿಐ ತನಿಖೆಯಾಯಿತು. ಇದು ಅವರ ಆಡಳಿತದ ಶೈಲಿ. ಬಡವರ, ಪರಿಶಿಷ್ಟರ ವಿದ್ಯಾಲಯಗಳಲ್ಲಿ ಮಕ್ಕಳಿಗೆ ನೀಡುವ ದಿಂಬು, ಹಾಸಿಗೆಗಳಲ್ಲಿ ಹಣ ಹೊಡೆದಿದ್ದು, ಅವರಿಗೆ ನಾಚಿಕೆಯಾಗಬೇಕು. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ನೆಲ, ನೀರು, ನೌಕರಿಯಲ್ಲಿ ದುಡ್ಡು ಹೊಡೆದಿದ್ದಾರೆ, ಹಿಂದುಳಿದವರಿಗೂ ನ್ಯಾಯ ನೀಡಬೇಕು. ಕನಕದಾಸರ ಊರಿನಿಂದ ಬಂದಿರುವ ನಾನು ಬಾಡಾ ಕ್ಷೇತ್ರವನ್ನು ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲಾಗಿದೆ. ಕನಕದಾಸರ ನೆನಪಿಡುವ ರೀತಿಯಲ್ಲಿ ಅವರ ದರ್ಶಗಳನ್ನು ಜನರಿಗೆ ತಲುಪಿಸುವ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಯಡಿಯೂರಪ್ಪನವರು ಕಾಗಿನೆಲೆಯನ್ನು ಅಭಿವೃದ್ಧಿಗೊಳಿಸಿದ್ದಾರೆ. ಎಸ್.ಟಿ ಸಮುದಾಯಕ್ಕೆ ನಿಗಮ ಮಾಡಿದ್ದು, ಭಾಜಪ. ವಾಲ್ಮೀಕ ಜಯಂತಿ, ಎಸ್.ಟಿ ಸಮುದಾಯಕ್ಕೆ ಪ್ರತ್ಯೇಕ ಇಲಾಖೆ ಕಲ್ಪಿಸಿರುವುದು ಬಾಜಪ. ಮಾತಲ್ಲಿ ಅಲ್ಲ. ಕೃತಿಯಲ್ಲಿ ತೋರಿಸಿದ್ದೇವೆ. ಸುರಪುರದ ನಾಯಕರ ಇತಿಹಾಸ ದೊಡ್ಡದಿದೆ. ಔರಂಗಜೇಬನ್ನು ಹಿಮ್ಮೆಟ್ಟಿಸಿದಂತೆಯೇ ಈ ದುಷ್ಟ ಶಕ್ತಿಗಳನ್ನು ಹಿಮ್ಮೆಟ್ಟಿಸಿ ಈ ಬಾರಿ ಕರ್ನಾಟಕದಲ್ಲಿ ಕಮಲವನ್ನು ಅರಳಿಸಬೇಕು ಎಂದರು.
*ಕಾಂಗ್ರೆಸ್ ನಾಯಕರು ಈ ಭಾಗದ ಜನರ ಋಣದಲ್ಲಿದ್ದಾರೆ*
ಇಷ್ಟು ವರ್ಷ ಕಾಂಗ್ರೆಸ್ ಅಭಿವೃದ್ಧಿ ಮಾಡದೇ ಇರಲು ಇಚ್ಛಾಶಕ್ತಿಯ ಕೊರತೆ ಕಾರಣ. ಜನರನ್ನು ಕತ್ತಲಲ್ಲಿ ಇಡುವ ಪ್ರಯತ್ನವಾಗಿದೆ. ಕಾಂಗ್ರೆಸ್ ನಾಯಕರು ಈ ಭಾಗದ ಜನರ ಋಣದಲ್ಲಿದ್ದಾರೆ. ನಿಮ್ಮ ಋಣವನ್ನು ತೀರಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಸಾಮಾಜಿಕ ಅಭಿವೃದ್ಧಿಯ ಜೊತೆಗೆ, ಸಾಮಾಜಿಕ ನ್ಯಾಯವನ್ನು ನೀಡುತ್ತಿದ್ದೇವೆ ಎಂದರು.
*ಕಲ್ಯಾಣ ನಾಡನ್ನಾಗಿ ಮಾಡುವ ಸಂಕಲ್ಪ*
ಈಗ ಕಾಲ ಬದಲಾಗಿದೆ. ಬದಲಾವಣೆಯ ಗಾಳಿ ಬೀಸುತ್ತಿದೆ. ಅದು ಬಿರುಗಾಳಿಯಾಗಿ ಅದರ ಪರಿಣಾಮವನ್ನು ನೀವು ನೋಡುತ್ತಿದ್ದೀರಿ. ಇನ್ನು ಮುಂದೆ ಈ ಭಾಗದ ಜನರಿಗೆ ವಿಶ್ವಾಸದ್ರೋಹ ಮಾಡುವುದು ಕಾಂಗ್ರೆಸ್ಸಿಗೆ ಸಾಧ್ಯ್ವವಿಲ್ಲ. ನಮ್ಮ ಸರ್ಕಾರ ಭಾಗಕ್ಕೆ ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡುವುದಷ್ಟೇ ಅಲ್ಲ, ಇದನ್ನು ಕಲ್ಯಾಣ ನಾಡನ್ನಾಗಿ ಮಾಡುವ ಸಂಕಲ್ಪ ತೊಟ್ಟಿದ್ದೇವೆ. ಅದಕ್ಕಾಗಿ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗುತ್ತಿದೆ. ಪ್ರಸ್ತುತ ಒಂದು ಕ್ಷೇತ್ರಕ್ಕೆ 50-100 ಕೋಟಿ ಬಂದರೆ, 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟರೆ 100-200 ಕೋಟಿ ರೂ.ಗಳ ಅನುದಾನ ರಲಿದೆ. ಇದು ನಿಮ್ಮ ಹಕ್ಕು, ಉಪಕಾರವಲ್ಲ. ಇದು ನಮ್ಮ ಬದ್ಧತೆ ಎಂದರು.
*ಭ್ರಮನಿರಸನ*
371 ಜೆ ಸುಲಭವಾಗಿ ಬಂದಿಲ್ಲ. ಸುಮಾರು ಮೂರು ದಶಕಗಳ ಹೋರಾಟದಿಂದ ದೊರಕಿದೆ. ಆಂಧ್ರದಿಂದ ತೆಲಂಗಾಣ ರಾಜ್ಯವಾದಾಗ ಕೇಂದ್ರ ಸರ್ಕಾರ ಅನಿವಾರ್ಯವಾಗಿ 371 ಜೆ ನೀಡಬೇಕಾಯಿತು. 371 ಜೆ ಕೊಡದೇ ಹೋಗಿದ್ದರೆ ಇಲ್ಲಿ ಕಾಂಗ್ರೆಸ್ ನವರು ಓಡಾಡಲು ಕಷ್ಟವಾಗುತ್ತಿತ್ತು. ಅದಕ್ಕೆ ಕಾಂಗ್ರೆಸ್ ನವರು ಈಗ ಎದೆ ಮುಟ್ಟಿ ಹೇಳುತ್ತಾರೆ ನಾವು ತಂದಿದ್ದು ಎಂದು. ಆದರೆ ಇದು ಹೋರಾಟದ ಫಲ. 371 ಜೆ ಬಂದ ನಂತರ ಅನುದಾನ ನೀಡದಿದ್ದರೆ ಅಭಿವೃದ್ಧಿಯಾಗಲು ಹೇಗೆ ಸಾಧ್ಯ. ಜನರಲ್ಲಿ ಈ ಬಗ್ಗೆ ಭ್ರಮನಿರಸನವಾಗಿತ್ತು ಎಂದರು.
ಜೇವರ್ಗಿಯಲ್ಲಿ ಮಲ್ಲಾಬಾದ್ ಏತ ನೀರಾವರಿ ಯಾರು ಮಾಡಿದ್ದು, ಹೈದರಾಬಾದ್ ಕರ್ನಾಟಕ ಭಾಗದ ಜನರ ಮತದಿಮದ ಬಹಳ ದೊಡ್ಡ ನಾಯಕರಾಗಿ, ರಾಜ್ಯ ಮತ್ತು ಕೇಂದ್ರದಲ್ಲಿ ಮಂತ್ರಿಗಳಾಗಿ ಕಲ್ಯಾಣ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ. ಸುಮಾರು ನಾಲ್ಕು ಐದು ದಶಕಗಳ ಕಾಲ ಅವರನ್ನು ಈ ಭಾಗದ ಜನ ಹೆಗಲ ಮೇಲಿಟ್ಟುಕೊಂಡು ಮೆರೆಸಿದ್ದೀರಿ. ವಿಶ್ವಾಸ, ನಂಬಿಕೆಯನ್ನಿಟ್ಟಿರಿ, ಆದರೆ ಈ ಭಾಗದ ಜನ ಹಿಂದುಳಿದೇ ಇದ್ದಾರೆ 371 ಜೆ, ಬೇಡುವಂಥ ಪರಿಸ್ಥಿತಿ ಬಂತು. ನಾಲ್ಕು ದಶಕಗಳ ಕಾಲ ಅಭಿವೃದ್ಧಿಯನ್ನೇ ಕಾಣಲಿಲ್ಲ. ಕಾಂಗ್ರೆಸ್ ಸರ್ಕಾರವಿದ್ದ ಸಂದರ್ಭದಲ್ಲಿ ನಂಜುಂಡಪ್ಪ ವರದಿ ಸಲ್ಲಿಕೆಯಾಯಿತು. 2007 ರಲ್ಲಿ ಯಡಿಯೂರಪ್ಪ ನವರು ಮುಖ್ಯಮಂತ್ರಿಗಳಾದಾಗ ಅದಕ್ಕೆ ಅನುದಾನ ನೀಡಿದರು. 5 ವರ್ಷ ಕಾಂಗ್ರೆಸ್ ಆಡಳಿತದಲ್ಲಿ ನಂಜುಂಡಪ್ಪ ವರದಿ ಧೂಳು ತಿನ್ನುತ್ತಿತ್ತು. ಅದನ್ನು ಕಸದ ಬುಟ್ಟಿಗೆ ಹಾಕಿದ್ದರು. 371 ಜೇ ಪರಿಚ್ಚೇಧ ಬಂದ ನಂತರ 5 ವರ್ಷ ಸರಿಯಾದ ಅನುದಾನ ಬರಲಿಲ್ಲ, ಬಂದ ಅನುದಾನ ಖರ್ಚು ಆಗಲಿಲ್ಲ. ಈ ಪ್ರದೇಶ ಹಿಂದುಳಿಯಿತು. 371 ಜೆ ಕೇವಲ ಕಾಗದದಲ್ಲಿ ಉಳಿಯಿತು. ಇಲ್ಲಿಯ ಜನರು ಮುಗ್ಧರಿದ್ದಾರೆ, ಮತಬ್ಯಾಂಕುಗಳು, ಕಣ್ಣು ಮುಚ್ಚಿಕೊಂಡು ಮತ ಹಾಕುತ್ತಾರೆ ಎಂದು ಗ್ಯಾರಂಟಿ ಇತ್ತು ಎಂದರು .
--
[19/10, 7:57 PM] Cm Ps: *ಸಮಗ್ರ ಅಭಿವೃದ್ಧಿಯ ಬಗ್ಗೆ ಭಾಜಪಕ್ಕೆ ಸ್ಪಷ್ಟತೆ ಇದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಯಾದಗಿರಿ:, ಅಕ್ಟೋಬರ್ 19: ಸಮಗ್ರ ಅಭಿವೃದ್ಧಿಯ ಬಗ್ಗೆ ನಮಗೆ ಸ್ಷಷ್ಟಯೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಯಾದಗಿರಿ ಜಿಲ್ಲಾ ಭಾಜಪ ಹುಣಸಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮಸರ್ಕಾರ ರೈತರ ಮಕ್ಕಳಿಗೆ ವಿದ್ಯಾನಿಧಿ, ರೈತ ಕೂಲಿಕಾರರು, ನೇಕಾರರು, ಮೀನುಗಾರರಿಗೆ ವಿಸ್ತರಿಸಲಾಗಿದೆ. ಎಸ್ ಸಿ/ಎಸ್/ಟಿ ಜನಾಂಗಕ್ಕೆ 75 ಯೂನಿಟ್ ವರೆಗೂ ಉಚಿತ ವಿದ್ಯುತ್, ಅವರ ಮನೆಗೆ 2 ಲಕ್ಷ ರೂ.ಗಳು, ಜಮೀನಿಗೆ 20 ಲಕ್ಷ ರೂ.ಗಳು ಒದಗಿಸಲಾಗುತ್ತಿದೆ. 100 ಡಾ; ಅಂಬೇಡ್ಕರ್ ಹಾಸ್ಟಲ್, 50 ಕನಕದಾಸರ ಹಾಸ್ಟೆಲ್ , ಒಂದು ಸಾವಿರ ಮಕ್ಕಳಿಗೆ 5 ಮೆಗಾ ಹಾಸ್ಟೆಲ್ ಗಳನ್ನು ಕಲಬುಗಿಯಲ್ಲಿ ನಿರ್ಮಿಸಲಾಗುತ್ತಿದೆ. ರಾಯಚೂರಿನಲ್ಲಿ ವಿಮಾನ ನಿಲ್ದಾಣ, ರಾಯಚೂರು ಮತ್ತು ಕಲಬುರಗಿಯಲ್ಲಿ ಜವಳಿ ಪಾರ್ಕ್ , ಯಾದಗಿರಿಯಲ್ಲಿ ಫಾರ್ಮಸ್ಯುಟಿಕಲ್ ಪಾರ್ಕ್ ನಿರ್ಮಿಸಲಾಗುತ್ತಿದೆ ಎಂದರು.
*ಅಭಿವೃದ್ಧಿಯಲ್ಲಿ ಎಲ್ಲರ ಪಾಲಿರಬೇಕು*
ಅಭಿವೃದ್ಧಿಯಲ್ಲಿ ಎಲ್ಲರ ಪಾಲಿರಬೇಕು. ಎಲ್ಲರೂ ಬೆಳೆಯಬೇಕು. ದುಡಿಯುವ ವರ್ಗಕ್ಕೆ ಹೆಚ್ಚಿನ ಶಕ್ತಿ ಮತ್ತು ಅವಕಾಶಗಳನ್ನು ನೀಡಬೇಕು. ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮುಂದೆ ಬಂದು ಸ್ವಾವಲಂಬಿಗಳಾಗಿ, ಸ್ವಾಭಿಮಾನದ ಜೀವನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರು ನಡೆಸಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಸಾಮಾಜಿಕ ನ್ಯಾಯ ನೀಡುವುದು ನಮ್ಮ ಧ್ಯೇಯ, ಬದ್ಧತೆ ಹಾಗೂ ಇಚ್ಛಾಶಕ್ತಿ. ಕಾನೂನಾತ್ಮಕವಾಗಿ ಇನ್ನಷ್ಟು ಗಟ್ಟಿಗೊಳಿಸುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ಒಮ್ಮೆ ಅವಕಾಶ ಕೊಟ್ಟರೆ ಕನ್ನಡ ನಾಡು, ಭಾರತದೇಶವನ್ನು ದುರ್ಬಲ ವರ್ಗದವರು ಕಟ್ಟುತ್ತಾರೆ. ಈ ದೇಶವನ್ನು ಕೇವಲ ಶ್ರೀಮಂತರು ಕಟ್ಟಲಾಗುವುದಿಲ್ಲ. ಕೂಲಿಕಾರರು ರಸ್ತೆ ನಿರ್ಮಿಸುವುದರಿಂದ ಬದಲಾವಣೆ ಸಾಧ್ಯವಾಗುತ್ತದೆ ಎಂದರು.
*ಸರ್ಕಾರದ ಸಂಕಲ್ಪ*
ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶಾಸಕ ರಾಜೂಗೌಡ ಶ್ರಮಿಸುತ್ತಿದ್ದಾರೆ. ಇದು ನಮ್ಮ ಸರ್ಕಾರದ ಸಂಕಲ್ಪವೂ ಹೌದು. ಹೈದರಾಬಾದ್ ಕರ್ನಾಟಕ ಹಿಂದುಳಿದಿದ್ದು, ಈ ಭಾಗವನ್ನು ಮುಂದೆ ತರಲು ರೈತರಿಗಾಗಿ ನೀರಾವರಿ, ಉದ್ಯೋಗಕ್ಕಾಗಿ ಕೈಗಾರಿಕೆ, ಶಿಕ್ಷಣಕ್ಕಾಗಿ ಶಾಲೆಗಳು, ಆರೋಗ್ಯಕ್ಕಾಗಿ ಆಸ್ಪತ್ರೆಗಳು,ಸಂಪರ್ಕಕ್ಕಾಗಿ ರಸ್ತೆ, ವಿಶ್ವವಿದ್ಯಾಲಯ, ವಿಮಾನನಿಲ್ದಾಣ ಗಳನ್ನು ಈ ಭಾಗದ ಅಭಿವೃದ್ಧಿಗಾಗಿ ಒದಗಿಸಲಾಗುತ್ತಿದೆ ಎಂದರು.
--
[19/10, 8:04 PM] Cm Ps: ಮಳೆಯ ನಡುವೆಯೂ ಬಿಜೆಪಿ ಸಂಕಲ್ಪಯಾತ್ರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಬ್ಬರದ ಭಾಷಣ
*ಕಾಂಗ್ರೆಸ್ ಕಲ್ಯಾಣ ಕರ್ನಾಟಕಕ್ಕೆ ದ್ರೋಹ ಬಗೆದಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕಲಬುರಗಿ (ಕಮಲಾಪುರ): ಕಲ್ಯಾಣ ಕರ್ನಾಟಕದಿಂದ ಎಲ್ಲ ಸ್ಥಾನಮಾನವನ್ನು ಪಡೆದುಕೊಂಡರು ಕೂಡ ಕಾಂಗ್ರೆಸ್ ಈ ಭಾಗಕ್ಕೆ ದ್ರೋಹ ಬಗೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಅವರು ಕಲಬುರಗಿಯ ಕಮಲಾಪುರದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಗಾಳಿ ಸುನಾಮಿಯಂತೆ ಬೀಸುತ್ತಿದೆ. ಕಾಂಗ್ರೆಸ್ ಮುಂಬರುವ 2023ರ ಚುನಾವಣೆಯಲ್ಲಿ ಧೂಳಿಪಟವಾಗಲಿದೆ. ಕಲ್ಯಾಣ ಕರ್ನಾಟಕದ ಜನರು ಜಾಗೃತರಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಆಟ ನಡೆಯುವುದಿಲ್ಲ ಎಂದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ನೀಡಿದ್ದು,ಮುಂದಿನ ಬಜೆಟ್ ನಲ್ಲಿ ಅದನ್ನು 5 ಸಾವಿರ ಕೋಟಿಗೆ ಹೆಚ್ಚಿಸಲಾಗುವುದು ಈ ಭಾಗದ ಅಭಿವೃದ್ಧಿಗೆ ಹಣ ನೀಡಿದರೆ, ಕಾಂಗ್ರೆಸ್ ನವರು ಅದನ್ನು ಟೀಕೆ ಮಾಡುತ್ತಿದ್ದಾರೆ. ಅವರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗುವುದು ಇಷ್ಟವಿಲ್ಲ. ಕೇವಲ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನವರು ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯ ಕೊಡುವ ಕೆಲಸ ಮಾಡಿಲ್ಲ. ಎಸ್.ಸಿ, ಎಸ್.ಟಿಯವರಿಗೆ, ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ ಎಂದರು.
*ಫಲಾಯನವಾದದ ನಾಯಕತ್ವ*
ಕಾಂಗ್ರೆಸ್ ದೇಶದೆಲ್ಲೆಡೆ ಮುಳುಗಿದೆ. ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆ ನಡೆಯುತ್ತಿದ್ದರೆ, ರಾಹುಲ್ ಗಾಂಧಿ ಆಂಧ್ರಪ್ರದೇಶದಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಎಲ್ಲಿ ಯುದ್ಧವಿದೆ, ಅಲ್ಲಿ ಹೋರಾಟ ಮಾಡುವವನು ನಿಜವಾದ ನಾಯಕ. ಫಲಾಯನವಾದದ ನಾಯಕತ್ವ ಕಾಂಗ್ರೆಸ್ ಗೆ ಇದೆ. ಮುಳುಗುತ್ತಿರುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಅಧ್ಯಕ್ಷರಾಗುತ್ತಿದ್ದಾರೆ. ಅಧಿಕಾರ ಇದ್ದಾಗ ಕಾಂಗ್ರೆಸ್ ನಾಯಕತ್ವ ನೀಡಿದ್ದರೆ ನಾವೆಲ್ಲ ಸ್ವಾಗತ ಮಾಡುತ್ತಿದ್ದೆವು. ಕಾಂಗ್ರೆಸ್ ಮುಳುಗಿದರೆ ಖರ್ಗೆಯವರ ಹೆಸರಾಗಬೇಕು ಅಂತ ಮಾಡಿದ್ದಾರೆ ಎಂದು ಸಿಎಂ ಹೇಳಿದರು.
.
*ವಿಶೇಷವಾದ ಪ್ರಾಶ್ಯಸ್ತ*
ಕರ್ನಾಟಕದ ಅಭಿವೃದ್ಧಿಗೆ ಶಾಲಾ ಕೊಠಡಿ, ವಸತಿ ನಿಲಯ, ಆಸ್ಪತ್ರೆ, ರಸ್ತೆ ಹಾಗೂ ನೀರಾವರಿಗೆ ವಿಶೇಷವಾದ ಪ್ರಾಶ್ಯಸ್ತವನ್ನು ಕೊಟ್ಟಿದ್ದೇವೆ. ಕಲಬುರಗಿ, ಯಾದಗಿರಿಯಲ್ಲಿ ಟೆಕ್ಸಟೈಲ್ ಪಾರ್ಕ್ ರಾಜ್ಯ ಸರ್ಕಾರದಿಂದ ಮಾಡಿದ್ದೇವೆ. ಕಲಬುರಗಿ ವಿಮಾನ ನಿಲ್ಧಾಣ ನಿರ್ಮಾಣದ ಅಭಿವೃದ್ಧಿ ಕೆಲಸ ಆಗುತ್ತಿದೆ. 50 ವರ್ಷಗಳ ಬೇಡಿಕೆ ಎಸ್.ಸಿ, ಎಸ್.ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದೇವೆ. ಕಾಂಗ್ರೆಸ್ ನಿಂದ ಮಾಡಲು ಆಗಿರಲಿಲ್ಲ. ಅಂತಹ ಐತಿಹಾಸಿಕ ನಿರ್ಣಯವನ್ನು ನಮ್ಮ ಸಚಿವ ಸಂಪುಟದಲ್ಲಿ ತೆಗೆದುಕೊಂಡು ಸ್ವಾಭಿಮಾನದಿಂದ ಬದುಕುವ ರೀತಿಯಲ್ಲಿ ನಾವು ಮಾಡಿದ್ದೇವೆ ಎಂದರು. .
*ಜನರ ಸಂಕಲ್ಪವೇ ನಮ್ಮ ಸಂಕಲ್ಪ*
ಜನರ ಸಂಕಲ್ಪವೇ ನಮ್ಮ ಬಿಜೆಪಿಯ ಸಂಕಲ್ಪ. 2023 ರಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿಕೊಡಿ. ಕಲ್ಯಾಣ ಕರ್ನಾಟಕದಲ್ಲಿ ಕಡೆ ಬಿಜೆಪಿ ಗಾಳಿ ಸುನಾಮಿಯಂತೆ ಬೀಸುತ್ತಿದೆ. ನವ ಕರ್ನಾಟಕದಿಂದ ನವ ಭಾರತವನ್ನು ಕಟ್ಟುವ ಸಂಕಲ್ಪವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದರು.
ಬಸವರಾಜ ಮತ್ತಿಮೂಡ ಈ ಕ್ಷೇತ್ರದ ಸಮಸ್ತ ಅಭಿವೃದ್ಧಿಗೆ ಕೆಲಸವನ್ನು ಮಾಡುತ್ತಿದ್ದಾರೆ. ಕ್ಷೇತ್ರದ ಶಾಸಕರಾದ ಮೇಲೆ 1,500 ಕೋಟಿ ರೂಪಾಯಿ ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ. ಅವರನ್ನು 25 ಸಾವಿರ ಮತಗಳ ಅಂತರದಿಂದ ಮತ್ತೊಮ್ಮೆ ಗೆಲ್ಲಿಸಿಕೊಡಬೇಕೆಂದು ಸಿಎಂ ಬೊಮ್ಮಾಯಿ ನುಡಿದರು.
*ಅಲ್ಪ ಸಂಖ್ಯಾತರ ಸಾವಿರಾರು ಕೋಟಿ ವಕ್ಫ ಆಸ್ತಿಯನ್ನು ಕಾಂಗ್ರೆಸ್ ನಾಯಕರು ನುಂಗಿ ನೀರು ಕುಡಿದಿದ್ದಾರೆ*
ಕಾಂಗ್ರೆಸ್ ನವರು ಅಲ್ಪ ಸಂಖ್ಯಾತರಿಗೆ ದ್ರೋಹ ಮಾಡಿದ್ದಾರೆ. ಸಮುದಾಯದ ಸಾವಿರಾರು ಕೋಟಿ ಮೌಲ್ಯದ ವಕ್ಫ ಆಸ್ತಿಯನ್ನು ಕಾಂಗ್ರೆಸ್ ನಾಯಕರು ನುಂಗಿ ನೀರು ಕುಡಿದಿದ್ದಾರೆ. ಕಲಬುರಗಿ, ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿರುವ ವಕ್ಫ ಆಸ್ತಿಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈಗಾಗಲೇ ಅದರ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಇನ್ನಷ್ಟು ಹೆಚ್ಚಿನ ತನಿಖೆಗೆ ನಾವು ಆದೇಶಿಸಿಸುತ್ತೇವೆ. ಅಲ್ಪಸಂಖ್ಯಾತರ ಮತ ಪಡೆದು ಅವರಿಗೆ ದ್ರೋಹ ಮಾಡಿದ್ದಾರೆ. ಅದೆಲ್ಲವನ್ನು ಬಯಲಿಗೆ ತರುತ್ತೇವೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಗೆ ಅಲ್ಪಸಂಖ್ಯಾತರು ಕೂಡ ಬೆಂಬಲ ನೀಡುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.
[20/10, 11:46 AM] Cm Ps: ಬೆಂಗಳೂರು, ಅಕ್ಟೋಬರ್ 20: ಮಾನ್ಯ *ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು* ಕರ್ನಾಟಕ ರಾಜ್ಯ *ಅಗ್ನಿಶಾಮಕ ಮತ್ತು ತುರ್ತು* *ಸೇವೆಗಳು ಇಲಾಖೆಯ ವತಿಯಿಂದ* *ವಿಧಾನಸೌಧದ* *ಬೃಹತ್ ಮೆಟ್ಟಿಲುಗಳ ಬಳಿ* ಆಯೋಜಿಸಿರುವ ‘**90 ಮೀಟರ್* *ಏರಿಯಲ್ ಲ್ಯಾಡರ್* *ಪ್ಲಾಟ್‍ಫಾರಂ ವಾಹನ’* ಲೋಕಾರ್ಪಣೆ ಹಾಗೂ ‘ *ಹಸಿರು ದೀಪಾವಳಿ ಸಾರ್ವಜನಿಕ* ಜಾಗೃತಿ ಜಾಥಾಕ್ಕೆ ಚಾಲನೆ* ನೀಡಿ *ಮಾತನಾಡಿದರು.*
[20/10, 12:33 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ 90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಅನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಅಪರ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.
[20/10, 12:51 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಲು ಎಲ್ಇಡಿ ಪ್ರಚಾರ ವಾಹನ ಮೂಲಕ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಕಿರುಚಿತ್ರ ಬಿಡುಗಡೆ ಮಾಡಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮೊದಲಾದವರು ಉಪಸ್ಥಿತರಿದ್ದರು.
[20/10, 12:53 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಸ್ ಹೋಮ್ಬೇಸ್ ಆರ್ಗನೈಸೇಷನ್ ಸಂಸ್ಥೆಯ ವತಿಯಿಂದ ಮಂಗಳ ಗ್ರಹದಲ್ಲಿ ಮಾನವ ವಾಸಿಸುವ ಕುರಿತು ಸಿದ್ಧಪಡಿಸಿರುವ ಅಂತರಿಕ್ಷ ತಂತ್ರಜ್ಞಾನ ಮಾಡೆಲ್ ಪ್ರದರ್ಶನವನ್ನು ವೀಕ್ಷಿಸಿದರು.
ಸಚಿವರಾದ ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಶಿವರಾಮ ಹೆಬ್ಬಾರ, ಸಂಸದ ಪಿ.ಸಿ.ಮೋಹನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
[20/10, 12:57 PM] Cm Ps: *ಅಗ್ನಿ ದುರಂತಗಳಿಂದ ಜನರನ್ನು ರಕ್ಷಿಸುವ ಸಾಮರ್ಥ್ಯ ಹೆಚ್ಚಳ:ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 20: ಅಗ್ನಿ ದುರಂತವಾದ ಸಂದರ್ಭದಲ್ಲಿ ಸಮರ್ಥವಾಗಿ ಅಗ್ನಿಯನ್ನು ನಂದಿಸಲು ಹಾಗೂ ಜನರ ಪ್ರಾಣ ರಕ್ಷಣೆ ಮಾಡಲು ನಮ್ಮ ಸಾಮರ್ಥ್ಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿರುವ 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ’ ಲೋಕಾರ್ಪಣೆ ಹಾಗೂ ಹಸಿರು ದೀಪಾವಳಿ ಸಾರ್ವಜನಿಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತದಲ್ಲಿ ಮುಂಬೈ ಹೊರತುಪಡಿಸಿದರೆ ಬೆಂಗಳೂರಿನಲ್ಲಿ ಮಾತ್ರ ಇಷ್ಟು ದೊಡ್ಡ ಏಣಿ ಇರುವ ವಾಹನಗಳನ್ನು ಪರಿಚಯಿಸಲಾಗಿದೆ. ಜನರ ರಕ್ಷಣೆ ಹಾಗೂ ಇನ್ನಷ್ಟು ಎತ್ತರದ ಕಟ್ಟಡಗಳ ನಿರ್ಮಾಣವನ್ನು ಇದು ಸಾಧ್ಯವಾಗಿಸಿದೆ. ನಗರ ಬೆಳೆಯಲು ಹಾಗೂ ಅಗ್ನಿ ದುರಂತಗಳನ್ನು ನಿಯಂತ್ರಣ ಮಾಡಲು 90 ಮೀಟರ್ ಏಣಿ ಉಪಯುಕ್ತವಾಗಿದೆ. ಈ ಕಾರ್ಯವನ್ನು ಸಾಧ್ಯವಾಗಿಸಿರುವ ಗೃಹ ಸಚಿವರು, ಗೃಹ ಇಲಾಖೆ ಹಾಗೂ ಅಗ್ನಿಶಾಮಕ ದಳದ ಎಲ್ಲಾ ಮುಖ್ಯಸ್ಥರನ್ನು ಅಭಿನಂದಿಸುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.
ವಾಹನದಲ್ಲಿ ಎತ್ತರಕ್ಕೆ ಹೋದ ಅನುಭದ ಬಗ್ಗೆ ವಿವರಿಸಿದ ಮುಖ್ಯ ಮಂತ್ರಿಗಳು
ವಿಧಾನಸೌಧದ ಗೋಪುರದಲ್ಲಿ ಶಿಲಾವಿನ್ಯಾಸವನ್ನು ಕಂಡು ಆಶ್ಚರ್ಯವಾಯಿತು. ಆ ಕಾಲದಲ್ಲಿ ಎಷ್ಟು ಶ್ರಮವಹಿಸಿ ಶಿಲೆಯನ್ನು ಕೊಂಡೊಯ್ದಿದ್ದಾರೆ. ಅಶೋಕ ಸ್ಥಂಭ ವನ್ನು ಹತ್ತಿರದಿಂದ ಕಂಡು ಸಂತೋಷವಾಯಿತು. ಅಗ್ನಿ ಅವಘಡಗಳಿಂದ ಜನರ ರಕ್ಷಣೆಯಾಗುತ್ತದೆ ಎನ್ನುವುದು ಸಮಾಧಾನಕರವಾದ ಸಂಗತಿಯಾಗಿದೆ ಎಂದರು.
[20/10, 12:59 PM] Cm Ps: ಬೆಂಗಳೂರು ಅಕ್ಟೋಬರ್ *20..:ಇಂದು *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರ* *ಅಧ್ಯಕ್ಷತೆಯಲ್ಲಿ ನಡೆದ* *ಸಚಿವ* *ಸಂಪುಟ ಸಭೆಯ ನಂತರ* *ಕಾನೂನು ಮತ್ತು ಸಣ್ಣ ನೀರಾವರಿ* *ಸಚಿವರಾದ ಶ್ರೀ ಜೆ.ಸಿ.* *ಮಾಧುಸ್ವಾಮಿ ಅವರು* *ಸಚಿವ ಸಂಪುಟದ ನಿರ್ಣಯಗಳ* ಕುರಿತು *ಪತ್ರಿಕಾ ಗೋಷ್ಠಿ* *ನಡೆಸಿದರು.*
[20/10, 1:02 PM] Cm Ps: 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ’ ಲೋಕಾರ್ಪಣೆ
*ಅಗ್ನಿಶಾಮಕ ದಳಕ್ಕೆ ದೊಡ್ಡ ಶಕ್ತಿ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 20: ರಾಜ್ಯದ ಅಗ್ನಿಶಾಮಕ ದಳಕ್ಕೆ ದೊಡ್ಡ ಶಕ್ತಿಯನ್ನು ತುಂಬುವ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ಬಹಳ ದೊಡ್ಡ ಕೊಡುಗೆಯನ್ನು ನೀಡುವ ಪ್ರಮುಖ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿದ್ದ 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ ಲೋಕಾರ್ಪಣೆ ಹಾಗೂ ‘ ಹಸಿರು ದೀಪಾವಳಿ ಸಾರ್ವಜನಿಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
*ಆಪತ್ಕಾಲದ ಬಂಧು*
90 ಮೀಟರ್ ಏರಿಯಲ್ ಏಣಿ ಪ್ರಮುಖವಾದ, ಅತ್ಯಗತ್ಯವಾದ ಸೇವೆ. ಆಧುನಿಕ ಏಣಿಗಳು ಆಪತ್ಕಾಲದಲ್ಲಿ ಬಂಧುಗಳಂತೆ ಕೆಲಸ ಮಾಡುತ್ತವೆ. ನಾಗರಿಕತೆಯಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಜಗತ್ತಿನಾದ್ಯಂತ ಬೆಳೆಯುತ್ತಿದೆ. ಎಲ್ಲ ಪ್ರಮುಖ ಮೆಟ್ರೋ ನಗರಗಳಲ್ಲಿ ಇದು ಅತ್ಯಂತ ಅವಶ್ಯಕ ಸೇವೆ. ಇದಿಲ್ಲದೆ ಕಟ್ಟಡಗಳಿಗೆ ಅನುಮತಿ ನೀಡುವುದಿಲ್ಲ. ಅಗ್ನಿ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತಾ ನಿಯಮಗಳೂ ಅಷ್ಟೇ ಮುಖ್ಯ. ಎತ್ತರದ ಕಟ್ಟಡ ಕಟ್ಟಲು ಅಪತ್ಕಾಲದಲ್ಲಿ ನಿಭಾಯಿಸುವ ಸಲುವಾಗಿ ಅಗ್ನಿಶಾಮಕ ದಳದ ಎಲ್ಲಾ ನಿಯಮಗಳನುಸಾರವಾಗಿ ವ್ಯವಸ್ಥೆ ಇರುವುದು ಮುಖ್ಯ ಎಂದರು.
*ಸೇವೆಗೆ ಸಿದ್ದ*
ಇದುವರೆಗೂ ಬೆಂಗಳೂರಿನ ಅಗ್ನಿಶಾಮಕ ದಳಕ್ಕೆ 50 ಮೀಟರಿನ ಏಣಿ ಇತ್ತು. ಇಂದು ಬೆಂಗಳೂರು ನಗರ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಲಂಬವಾಗಿಯೂ ಬೆಳೆಯುತ್ತಿದೆ. ಎತ್ತರದ ಕಟ್ಟಡಗಳನ್ನು ಕಟ್ಟಲು ಇದರ ಅವಶ್ಯಕತೆ ಇದೆ. ವ್ಯವಸ್ಥೆ ಗಳಿಲ್ಲದಿದ್ದರೆ ಎತ್ತರದ ಕಟ್ಟಡಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಭಾರತ ದೇಶದಲ್ಲಿ ಮುಂಬೈ ಮಹಾನಗರದಲ್ಲಿ 90 ಮೀಟರ್ ಏಣಿ ಇದೆ. ಮುಂಬೈ ಬಿಟ್ಟರೆ ಬೆಂಗಳೂರಿನಲ್ಲಿ ಮಾತ್ರ ಈ ವ್ಯವಸ್ಥೆ ಇದೆ. ಸುಮಾರು ಎರಡೂವರೆ ವರ್ಷಗಳಿಂದ ಇದನ್ನು ಪಡೆದುಕೊಳ್ಳುವ ಪ್ರಯತ್ನ ನಡೆದಿತ್ತು. ನಾನು ಹಿಂದೆ ಗೃಹ ಸಚಿವನಿದ್ದ ಸಂದರ್ಭದಲ್ಲಿ ಇದಕ್ಕೆ ಆದೇಶ ನೀಡಿ ಅನುದಾನವೂ ಬಿಡುಗಡೆಯಾಗಿತ್ತು. ಕಾರಣಾಂತರಗಳಿಂದ ವಿಳಂಬವಾಯಿತು. ಕೋವಿಡ್ ಮತ್ತು ಉತ್ಪಾದನೆಯ ಸಮಸ್ಯೆಯಾಗಿ ತಡವಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತನ್ನ ಸೇವೆಯನ್ನು ನೀಡಲು ಸಿದ್ಧವಾಗಿರುವುದು ಸಂತಸದ ಸಂಗತಿ ಎಂದರು.
*ಸಮಸ್ಯೆ ಬಗೆಹರಿಸುವ ಸಾಮರ್ಥ್ಯ ಸರ್ಕಾರಕ್ಕಿದೆ*
ಬೆಂಗಳೂರು ದೊಡ್ಡ ನಗರವಾಗಿ ಬೆಳೆಯುತ್ತಿದೆ. ವಿಚಾರಗಳನ್ನು ತಿಳಿದುಕೊಳ್ಳದೆ ಹಲವಾರು ವ್ಯಾಖ್ಯಾನಗಳು ಆಗುತ್ತಿರುವುದು ಸರಿಯಲ್ಲ. ಮೊನ್ನೆ ಬಂದ ಮಳೆಗೆ ಎರಡು ಕ್ಷೇತ್ರದಲ್ಲಿ ಮಾತ್ರ ಪ್ರವಾಹವಾಗಿತ್ತು. 26 ಕ್ಷೇತ್ರಗಳಲ್ಲಿ ಪ್ರವಾಹ ಇರಲಿಲ್ಲ. ಆದರೆ ಇಡೀ ಬೆಂಗಳೂರು ಮುಳುಗಿದೆ ಎನ್ನುವ ರೀತಿಯಲ್ಲಿ ಬಿಂಬಿಸಲಾಯಿತು. ಬೆಂಗಳೂರು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖವಾದ ನಗರ . ಏನೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸುವ ಸಾಮರ್ಥ್ಯ ನಮ್ಮ ಸರ್ಕಾರಕ್ಕಿದೆ. ಆದ್ದರಿಂದ ಇದನ್ನು ಸರಿಯಾದ ರೀತಿಯಲ್ಲಿ ಬಿಂಬಿಸುವ ಅಗತ್ಯವಿದೆ ಎಂದರು.
*ಎಸ್.ಡಿ.ಆರ್.ಎಫ್ ಬಲವರ್ಧನೆ*
ಪ್ರವಾಹ ಪರಿಸ್ಥಿತಿ ನಿಭಾಯಿಸಲು ತಕ್ಷಣ ಧಾವಿಸಿದ್ದು ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ. ಆರ್.ಎಫ್ ತಂಡಗಳು. ಬೆಂಗಳೂರಿನಲ್ಲಿ ಎಸ್.ಡಿ.ಆರ್.ಎಫ್ ನಡಿ ನೂರಕ್ಕಿಂತ ಹೆಚ್ವು ಯೋಧರು ಇದ್ದಾರೆ. ಯಾವುದೇ ಭಾಗದಲ್ಲಿ ಏನೇ ಆದರೂ ರಕ್ಷಣೆ ಮಾಡುವ ಸಾಮರ್ಥ್ಯ ಈ ತಂಡಕ್ಕಿದೆ. ನೂತನ ಸಲಕರಣೆಗಳನ್ನು ಸರ್ಕಾರ ಈಗಾಗಲೇ 20 ಕೋಟಿ ನೀಡಿದ್ದು, ಪುನಃ 20 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಎಸ್.ಡಿ.ಆರ್.ಎಫ್ ಬಲಪಡಿಸುವುದು ನಮ್ಮ ಉದ್ದೇಶ. ಇನ್ನು ಎರಡು ಕಂಪನಿಗಳನ್ನು ಸೃಜಿಸಲು ಸೂಚಿಸಿದ್ದು, ಇದರಲ್ಲಿ ನಿವೃತ್ತ ಯೋಧರನ್ನು ನೇಮಕ ಮಾಡಿ ಕೊಳ್ಳಲಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಸೇನೆಯ ನಿವೃತ್ತ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗಿದೆ. ಇನ್ನೆರಡು ಕಂಪೆನಿಗಳಿಗೂ ನಿವೃತ್ತ ಸೇನಾ ಅಧಿಕಾರಿಗಳನ್ನು ನೇರವಾಗಿ ನೇಮಿಸಿಕೊಳ್ಳಲು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ. ಆಧುನೀಕರಣ, ಸಂಖ್ಯೆಯ ಹೆಚ್ಚಳದ ಜೊತೆಗೆ ತರಬೇತಿ ಹಾಗೂ ಸಬಲೀಕರಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಉಂಟಾದ ಪ್ರವಾಹದಲ್ಲಿ ಎನ್.ಡಿ.ಆರ್.ಎಫ್ ಬಹಳ ದೊಡ್ಡ ಸಹಾಯವನ್ನು ಮಾಡಿದ್ದು, ಅವರ ಕೆಲಸವನ್ನು ಸರ್ಕಾರ ಗುರುತಿಸಿ, ಶ್ಲಾಘಿಸುತ್ತದೆ ಎಂದರು.
*ಅಗ್ನಿಶಾಮಕ ದಳದ ಸಬಲೀಕರಣ*
ಅಗ್ನಿಶಾಮಕ ದಳದ ಸಬಲೀಕರಣಕ್ಕೆ ಹಲವಾರು ಯೋಜನೆಗಳಿಗೆ ನಮ್ಮ ಸರ್ಕಾರ ಅನುಮತಿಗಳನ್ನು ನೀಡಿದೆ. ಏರಿಯಲ್ ಏಣಿ ಕೂಡ ಇದರಲ್ಲಿ ಒಂದು.90 ಮೀಟರ್ ಎತ್ತರದಲ್ಲಿ ಯಾವುದೇ ಅವಘಡ ಸಂಭವಿಸಿದರೂ ಅದನ್ನು ರಕ್ಷಿಸುವ ಸಾಮರ್ಥ್ಯ ಅಗ್ನಿಶಾಮಕ ದಳಕ್ಕಿದೆ. ಇದು ಬೇರೆ ಯಾವ ನಗರಗಳಲ್ಲಿ ಇಲ್ಲ.
*ಸಂಚಾರ ದಟ್ಟಣೆ ಸುಗಮಗೊಳಿಸಲು ಕ್ರಮ*
5000 ಹೊಸ ವಾಹನಗಳು ಪ್ರತಿ ನಿತ್ಯ ರಸ್ತೆಗೆ ಇಳಿಯುತ್ತವೆ. ರಸ್ತೆ ಮಾತ್ರ ಅಷ್ಟೇ ಇದೆ. ಆದರೂ ಕೂಡ ಸಂಚಾರ ನಿರ್ವಹಣೆಗೆ ವ್ಯವಸ್ಥೆ ಗಳನ್ನು ಪೊಲೀಸ್ ಇಲಾಖೆ ಮಾಡುತ್ತಿದೆ. ಸಿಂಕ್ರೋನೈಜಿಂಗ್ ಹೊಸ ವಿಧಾನಗಳನ್ನು ಬಳಸಿ ಅಡೆತಡೆಯಿಲ್ಲದ ಸಂಚಾರ ವ್ಯವಸ್ಥೆ ಕೈಗೊಳ್ಳಲಾಗಿದೆ. 7500 ಕ್ಯಾಮರಾಗಳನ್ನು ನಿರ್ಭಯ ಯೋಜನೆಯಡಿ ಅಳವಡಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ಜೊತೆಗೆ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಉಪಯೋಗ ಮಾಡಲಾಗುತ್ತಿದೆ ಎಂದರು. ಕೃತಕ ಬುದ್ಧಿಮತ್ತೆ, 360 ಡಿಗ್ರಿ ಕೆಲಸ ಮಾಡುವ ಸಾಮರ್ಥ್ಯ ಅವುಗಳಿಗಿದೆ ಎಂದರು.
*ಸಮರೋಪಾದಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಆದೇಶ*
ಈಗಾಗಲೇ ಒಮ್ಮೆ ಗುಂಡಿಗಳನ್ನು ಮುಚ್ಚಲಾಗಿದೆ. ಈಗ ಮತ್ತೆ ನಿರಂತರವಾಗಿ ಮಳೆಯಾಗಿದ್ದರಿಂದ ಅಲ್ಲಲ್ಲಿ ಗುಂಡಿಗಳು ಬಿದ್ದಿವೆ. ಅವುಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸೂಚಿಸಲಾಗಿದೆ. ಮಳೆ ಕಡಿಮೆಯಾದರೆ ಗುಣಮಟ್ಟದ ಕೆಲಸ ಮಾಡಲು ಸಾಧ್ಯವಾಗುತ್ತದೆ. ಮಳೆ ಇದ್ದ ಸಂದರ್ಭದಲ್ಲಿ ಹಾಕಿದರೆ ಅದು ಉಳಿಯುವುದಿಲ್ಲ. ಯೋಜನಾ ಬದ್ಧವಾಗಿ ಗುಂಡಿಗಳನ್ನು ಮುಚ್ಚಲಾಗುತ್ತಿದೆ ಎಂದರು.
*ಅಭಿನಂದನೆ*
ಅಗ್ನಿಶಾಮಕ ದಳಕ್ಕೆ ಪ್ರಬಲ ಅಸ್ತ್ರ ದೊರೆತಿರುವ ಪ್ರಮುಖ ದಿನ. ಸುರಕ್ಷತೆಯ ದೃಷ್ಟಿಯಿಂದ ಇದು ಬಹಳ ಉಪಯೋಗಿಯಾಗಲಿದೆ. ಅತಿ ಕಡಿಮೆ ಸಮಯದಲ್ಲಿ ಅಪಘಾತವನ್ನು ತಡೆಯಬಹುದಾದ ಕೆಲಸ ಮಾಡಲಾಗುವುದು. ಅಮರ್ ಪಾಂಡೆ ಅವರು ಇದಕ್ಕೆ ಶ್ರಮವಹಿಸಿದ್ದಾರೆ. ತಾಂತ್ರಿಕವಾಗಿ, ಆಡಳಿತಾತ್ಮಕವಾಗಿ ಕ್ರಮಗಳನ್ನು ಜರುಗಿಸಿದ್ದಾರೆ. ಜನರಿಗಾಗಿ ಇದು ಸಮರ್ಪಕವಾಗಿ ಬಳಕೆಯಾಗಲಿ ಎಂದು ತಿಳಿಸಿದರು.
*ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಕರೆ*
ದೀಪಾವಳಿ ಹಬ್ಬ ನಾಡಿನ ಸಮಸ್ತರಿಗೂ ಬೆಳಕು ತರಲಿ. ಜಾಗು ಪರಿಸರ ಉಳಿಸುವ ಸಲುವಾಗಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ. ಶಬ್ಧ ಹಾಗೂ ವಾಯು ಮಾಲಿನ್ಯ ತಡೆಯೋಣ, 125 ಡೆಸಿಬಿಲ್ ಗಿಂತ ಕಡಿಮೆ ಇರುವ ಪಟಾಕಿಗಳನ್ನು ಬಳಸಿ ಎಂದು ಕರೆ ನೀಡಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಕೋಟ ಶ್ರೀ ನಿವಾಸ ಪೂಜಾರಿ, ಸೋಮಶೇಖರ್, ಶಿವರಾಮ ಹೆಬ್ಬಾರ್, ಸಂದಸ ಪಿ.ಸಿ.ಮೋಹನ್, ಶಾಸಕ ನಿರಂಜನ್ ಕುಮಾರ್, ಹಾಗೂ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಅಗ್ನಿಶಾಮಕ ಸೇವೆಗಳ ಡಿಜಿಪಿ ಡಾ: ಎ. ಕೆ.ಪಾಂಡೆ ಉಪಸ್ಥಿತರಿದ್ದರು.
[20/10, 2:09 PM] Cm Ps: ದಿ. ಪುನಿತ್ ರಾಜಕುಮಾರ್ ಅವರಿಗೆ ಕರ್ನಾಟಕರತ್ನ ಪ್ರಶಸ್ತಿ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ವಿ. ಸೋಮಣ್ಣ, ಆರ್. ಅಶೋಕ್, ಡಾ. ಸುಧಾಕರ್, ಗೋಪಾಲಯ್ಯ, ಸುನಿಲ್‌ಕುಮಾರ್ , ಬೈರತಿ ಬಸವರಾಜ , ಅಶ್ವಿನಿ ಪುನಿತ್ ರಾಜಕುಮಾರ್ , ರಾಘವೇಂದ್ರ ರಾಜಕುಮಾರ್ ಹಾಜರಿದ್ದರು.
[20/10, 4:04 PM] Cm Ps: ಬೆಂಗಳೂರು, ಅಕ್ಟೋಬರ್ 20: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 4.39 ಕೋಟಿ ರೂ. ಗಳ ಮೊತ್ತದ ಚೆಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂಧನ ಸಚಿವ ಸುನಿಲ್ ಕುಮಾರ್ ಹಸ್ತಾಂತರಿಸಿದರು.
ಇಂಧನ ಸಚಿವ ಸುನೀಲ್ ಕುಮಾರ್, ಸಚಿವ ಆರ್. ಅಶೋಕ್ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[20/10, 4:55 PM] Cm Ps: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ₹2.5 ಕೋಟಿಗಳ ಮೊತ್ತದ ಚೆಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಸತಿ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹಾಗೂ ನಿಗಮದ ಅಧ್ಯಕ್ಷರಾದ ಶ್ರೀ ಶೈಲೇಂದ್ರ ಬೆಲ್ದಾಳೆಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಡಾ||ಕೆ.ಸುಧಾಕರ್, ಶ್ರೀ ಮುನಿರತ್ನ ಹಾಗೂ ಕೆ.ಎಸ್.ಐ.ಐ.ಡಿ.ಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
[20/10, 5:02 PM] Cm Ps: *ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 20 :
ಖ್ಯಾತ ಕಲಾವಿದ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸರ್ಕಾರ ಘೋಷಿಸಿದ್ದು, ನವೆಂಬರ್ 1 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಈ ವರೆಗೆ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದ್ದು, 2009ರ ನಂತರ ಮೊದಲ ಬಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಪುನೀತ್ ರಾಜ್ ಕುಮಾರ್ ಕುಟುಂಬದವರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು ಎಂದು ತಿಳಿಸಿದರು.
*ಪುನೀತ್ ರಾಜ್ ಕುಮಾರ್ ಅವರು ನಿಜವಾದ ಕರ್ನಾಟಕ ರತ್ನ:*
ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ಭಾಷೆ ಸಂಸ್ಕೃತಿಗೆ ಪುನೀತ್ ರಾಜ್ ಕುಮಾರ್ ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ . ತಮ್ಮ ಜೀವಮಾನದಲ್ಲಿ ದೊಡ್ಡ ಸಾಧನೆಯನ್ನು ಮಾಡಿ ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ಅವರು ನಿಜವಾದ ಕರ್ನಾಟಕ ರತ್ನ. ಅವರು ಸದಾಕಾಲ ಯುವಜನರಿಗೆ ಪ್ರೇರಣೆಯಾಗಿರಬೇಕು ಎಂಬ ಮಹಾದಾಸೆಯಿಂದ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಸಮಾರಂಭವನ್ನ ನವೆಂಬರ್ 1ರಂದು ಸಂಜೆ 5 ಗಂಟೆಗೆ ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ಮೇಲೆ ಆಯೋಜಿಸಲಾಗುವುದು ವಿಶೇಷ ಮುಖ್ಯ ಅತಿಥಿಗಳು, ಶ್ರೇಷ್ಠ ಸಾಹಿತಿಗಳು, ಖ್ಯಾತ ಚಲನಚಿತ್ರ ನಟರು, ಶಾಸಕರು, ಹಿರಿಯ ಸಾಧಕರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದು, ಅರ್ಥಪೂರ್ಣವಾದ ಕಾರ್ಯಕ್ರಮವಾಗಿರಲಿದೆ ಎಂದರು.
*ಬೆಂಗಳೂರಿನ ವಿವಿಧ ಕಡೆ ಪುನೀತ್ ರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮಗಳು:*
ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕೆಂಬ ಅಭಿಮಾನಿಗಳ ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನವೆಂಬರ್ 1 ರ ನಂತರ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಒಟ್ಟು 3 ಕಾರ್ಯಕ್ರಮಗಳನ್ನು ಸುಮಾರು10 ದಿನಗಳ ಕಾಲ ಆಯೋಜಿಸಲಾಗುವುದು ಎಂದು ತಿಳಿಸಿದರು.
[20/10, 5:05 PM] Cm Ps: *ಭಾರತದ ಅಸ್ಮಿತೆಗೆ ಧಕ್ಕೆ ತರುವ ಪಿಎಫ್ಐ ಸಂಚು ಬಯಲು :*ಮುಖ್ಯಮಂತ್ರಿ* *ಬಸವರಾಜ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 20:ಭಾರತದ ಅಸ್ಮಿತೆಗೆ ಧಕ್ಕೆ ತರುವ ಪಿಎಫ್ಐ ಸಂಚು ಬಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ರಾಮಮಂದಿರ ಸ್ಫೋಟ ಮಾಡುವುದಕ್ಕೆ ಪಿಎಫ್ಐ ಸಂಚು ಮಾಡಿತ್ತು ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಪಿಎಫ್ಐ ಸಂಘಟನೆ ಒಂದು ದೇಶದ್ರೋಹಿ ಸಂಘಟನೆ. ದೇಶವ್ಯಾಪಿ ವಿಧ್ವಂಸಕ ಹಾಗೂ ಭಯೋತ್ಪಾದನೆ ಕೃತ್ಯಗಳನ್ನು ಮಾಡುತ್ತಿದೆ. ಈ ಹಿಂದೆ ಮುಂಬಯಿಯಲ್ಲಿ ಸರಣಿ ಬಾಂಬ್ ಸ್ಪೋಟ ಸಂಭವಿಸಿದಂತೆ, ಏಕಕಾಲದಲ್ಲಿ ವಿವಿಧ ಕಡೆ ದುಷ್ಕೃತ್ಯಗಳನ್ನು ಮಾಡುವ ಅವರ ಷಡ್ಯಂತ್ರ ಈಗಾಗಲೇ ಬಯಲಾಗಿದೆ. ಭಾರತದ ಅಸ್ಮಿತೆಯನ್ನು ಪ್ರತಿನಿಧಿಸುವಂತಹ ಕಟ್ಟಡಗಳನ್ನು ಧ್ವಂಸ ಮಾಡುವ ಮೂಲಕ ಭಾರತದ ಅಸ್ಮಿತೆಗೆ ಧಕ್ಕೆ ತರುವುದು ಅವರ ಹುನ್ನಾರವಾಗಿದೆ ಎಂದರು.
ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದರು.
[20/10, 5:30 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವೆಂಬರ್ 11 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿದರು. ಸಚಿವರಾದ ಆರ್. ಅಶೋಕ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ, ಕೆ. ಗೋಪಾಲಯ್ಯ, ಕೆ.ಸಿ. ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.
[20/10, 6:32 PM] Cm Ps: *ನವೆಂಬರ್ 11 ರಂದು ಪ್ರಧಾನಿ ಭೇಟಿ: ಪ್ರಯಾಣಿಕರು, ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ*
ಬೆಂಗಳೂರು, ಅಕ್ಟೋಬರ್ 20-
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವಭಾವಿ ಸಭೆ ನಡೆಸಿದರು.
ಈ ಕಾರ್ಯಕ್ರಮದಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದಕ್ಕೆ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ಎಂಬ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಮತ್ತು ಪಿಡಿಓಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಮೃತ್ತಿಕೆ ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದರು.
ಮೃತ್ತಿಕೆ ಸಂಗ್ರಹ ಅಭಿಯಾನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ, ಕೆ. ಗೋಪಾಲಯ್ಯ, ಕೆ.ಸಿ. ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.
[20/10, 7:34 PM] Cm Ps: ಬೆಂಗಳೂರು, ಅಕ್ಟೋಬರ್ 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿ. ಸೋಮಣ್ಣ ಅಭಿನಂದನಾ ಸಮಿತಿ, ಬೆಂಗಳೂರು ಇವರ ವತಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿರುವ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ. ಸೋಮಣ್ಣ ಅವರ ಅಭಿನಂದನಾ ಗ್ರಂಥ ‘’ವಿಜಯ ಪಥ’’ ಬಿಡುಗಡೆ* ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ ಅಭಿನಂದನಾ ಸಮಿತಿ ಅಧ್ಯಕ್ಷ ಡಾ:ಸಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
[20/10, 7:58 PM] Cm Ps: ತುಮಕೂರಿನ ಶ್ರೀ ಸಿದ್ದಗಂಗಾಮಠದ ಶ್ರೀ ಶಿವಕುಮಾರ ಸ್ವಾಮಿಗಳ ಸೇವಾ ಕೈಂಕರ್ಯವನ್ನು ಬೆಂಗಳೂರಿನ ಎಂ.ಎಸ್.ಶಶಿಧರ್ ಅವರು ತಮ್ಮ ರೇಖಾಚಿತ್ರಗಳ ಮೂಲಕ ಬಿಂಬಿಸಿರುವ ಚಿತ್ರ ಸಂಗಮ ಪುಸ್ತಕವನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಡುಗೆಯಾಗಿ ನೀಡಿದರು.
ಚಿತ್ರಸಂಗಮ ಪುಸ್ತಕ ರೇಖಾಚಿತ್ರದಲ್ಲಿ ಅತ್ಯುತ್ತಮವಾಗಿ ಮೂಡಿಬಂದಿದ್ದು, ಸಂಗ್ರಹಯೋಗ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.
[20/10, 8:18 PM] Cm Ps: ಬೆಂಗಳೂರು, ಅಕ್ಟೋಬರ್ 20: ಮಾನ್ಯ *ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು* ಶ್ರೀ ವಿ. ಸೋಮಣ್ಣ ಅಭಿನಂದನಾ ಸಮಿತಿ, ಬೆಂಗಳೂರು ಇವರ ವತಿಯಿಂದ *ರವೀಂದ್ರ ಕಲಾ* *ಕ್ಷೇತ್ರದಲ್ಲಿ ಆಯೋಜಿಸಿರುವ* ಮಾನ್ಯ *ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಶ್ರೀ ವಿ. ಸೋಮಣ್ಣ ಅವರ ಅಭಿನಂದನಾ ಗ್ರಂಥ ‘’ವಿಜಯ ಪಥ’’ ಬಿಡುಗಡೆ* ಕಾರ್ಯಕ್ರಮದಲ್ಲಿ ಪಾಲ್ಗೊಂಡು *ಮಾತನಾಡಿದರು.*
Post a Comment