ರಾಷ್ಟ್ರೀಯ ಏಕತಾ ದಿವಸ್ ಆಚರಣೆ
*ಪ್ರತಿಜ್ಞಾ ವಿಧಿ ಬೋಧಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 31:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಸಮ್ಮೇಳನದಲ್ಲಿ ದಿ. ಸರ್ದಾರ್ ವಲ್ಲಭಬಾಯ್ ಪಟೇಲ್ರವರ ಜನ್ಮ ದಿನದ ಅಂಗವಾಗಿ “ರಾಷ್ಟ್ರೀಯ ಏಕತಾ ದಿವಸ ಆಚರಣೆ ಮತ್ತು ಪ್ರತಿಜ್ಞಾ ಬೋಧನೆ ಹಾಗೂ ಜಾಗೃತಿ ಅರಿವು ಸಪ್ತಾಹದ ಪ್ರತಿಜ್ಞಾ ವಚನ ಬೋಧನೆ ಮಾಡಿದರು.
ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಭ್ರಷ್ಟಾಚಾರ ಒಂದು ಪ್ರಮುಖ ಅಡಚನೆಯಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ, ಸೇರಿದಂತೆ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ. ಪ್ರತಿಯೊಬ್ಬರೂ ಜಾಗರೂಕನಾಗಿ ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ, ನಿಷ್ಠೆಗೆ ಬದ್ಧನಾಗಿರಬೇಕು. ಭ್ರಷ್ಟಾಚಾರದ ವಿರುದ್ದದ ಹೋರಾಟವನ್ನು ಬೆಂಬಲಿಸಬೇಕು ಎಂದು ಪ್ರತಿಜ್ಞೆ ಬೋಧಿಸಿದರು.
ದೇಶವನ್ನು ಒಗ್ಗೂಡಿಸಿದ ಸರ್ದಾರ್ ವಲ್ಲಭಬಾಯ್ ಪಟೇಲ್ರವರ ಜೀವನ ಹಾಗೂ ಆದರ್ಶಗಳನ್ನು ನಾವೆಲ್ಲರೂ ಅನುಸರಿಸಬೇಕೆಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಕರೆನೀಡಿದರು.
ಈ ಸಂದರ್ಭದಲ್ಲಿ ಸಚಿವ ಸುನೀಲ್. ಕುಮಾರ್ ಸಂಸದ ಉಮೇಶ್ ಜಾಧವ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.
Post a Comment