[16/10, 7:20 AM] Kpcc official: Thanked local police
From yesterday evening
[16/10, 7:20 AM] Kpcc official: Thanked local police
From yesterday evening
[16/10, 1:45 PM] Kpcc official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಳ್ಳಾರಿಯ ಮೋಕಾ ವಿಶ್ರಾಂತಿ ತಾಣದಲ್ಲಿ ಮಾಧ್ಯಮಗಳ ಜತೆ ಭಾನುವಾರ ಮಾತನಾಡಿದ್ದು...
[16/10, 1:45 PM] Kpcc official: *ಎಐಸಿಸಿ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರ ಪತ್ರಿಕಾಗೋಷ್ಠಿ ಮುಖ್ಯಾಂಶಗಳು:*
ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಕಲ್ಯಾಣ ಕರ್ನಾಟಕದ ಬಳ್ಳಾರಿ ಭಾಗಕ್ಕೆ ಆಗಮಿಸಿದ್ದೇನೆ.
ಆರ್ಟಿಕಲ್ 371 ಜಾರಿಗೆ ತಂದಿದ್ದು, ಕಾಂಗ್ರೆಸ್ ಸರ್ಕಾರ. ಸಂಸತ್ತಿನಲ್ಲಿ ಕಾಂಗ್ರೆಸ್ ಗೆ ಕೇವಲ 208 ಸಂಸದರಿದ್ದರು. ಈ ವಿಶೇಷ ಸ್ಥಾನಮಾನ ನೀಡಲು ಅಂಗೀಕರಿಸಲು 381 ಸಂಸದರ ಬೆಂಬಲ ಬೇಕಿತ್ತು. ಆದರೂ ಸೋನಿಯಾ ಗಾಂಧಿ ಅವರು ವಿಶೇಷ ಆದ್ಯತೆ ನೀಡಿ ಎಲ್ಲಾ ಬೆಂಬಲ ಪಡೆದು ಈ ಭಾಗಕ್ಕೆ ಅನುಕೂಲ ಮಾಡಿಕೊಟ್ಟಿದ್ದು, ಹೀಗಾಗಿ ಈ ಭಾಗದ ಕಾರ್ಯಕ್ರಮಕ್ಕೆ ಭಾಗಿಯಾಗಲು ಬಂದಿದ್ದೇನೆ.
ನಾನು ಕಾಂಗ್ರೆಸ್ ಪಕ್ಷದ ಸಂಘಟನೆಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದೇನೆ.
ಗಾಂಧಿ ಕುಟುಂಬ ಚುನಾವಣೆಯಿಂದ ಹಿಂದೆ ಸರಿದು, ಬೇರೆಯವರಿಗೆ ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಆರಂಭದಲ್ಲಿ ನನಗೆ ಈ ಚುನಾವಣೆ ಬಗ್ಗೆ ಆಸಕ್ತಿ ಇಲ್ಲದಿದ್ದರೂ ರಾಜ್ಯ ಪ್ರಮುಖ ನಾಯಕರು, ರಾಷ್ಟ್ರ ಹಾಗೂ ಬೇರೆ ರಾಜ್ಯದ ನಾಯಕರ ಸಲಹೆ ಮೇರೆಗೆ ಸ್ಪರ್ಧಿಸುತ್ತಿದ್ದೇನೆ.
ಕಳೆದ 55 ವರ್ಷಗಳಿಂದ ನೀವು ಪಕ್ಷವನ್ನು ಸಂಘಟಿಸುತ್ತಿದ್ದು, ನೀವು ಸ್ಪರ್ಧಿಸಬೇಕು ಎಂದು ಹಲವು ನಾಯಕರು ನನಗೆ ಒತ್ತಾಯಿಸಿದರು.
ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಇತ್ತಾದರೂ ಎಲ್ಲರೂ ಭಾರತ ಐಕ್ಯತಾ ಯಾತ್ರೆಯಲ್ಲಿ ಭಾಗವಹಿಸುವುದರಿಂದ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ.
ಸಾಮಾನ್ಯ ಸದಸ್ಯತ್ವದಿಂದ, ಬ್ಲಾಕ್, ಜಿಲ್ಲಾ ಮಟ್ಟದ ಸಮಿತಿಯಿಂದ ಕೆಪಿಸಿಸಿ ಅಧ್ಯಕ್ಷನಾಗಿ, ಶಾಸಕ, ಮಂತ್ರಿಯಿಂದ ಸಿಎಲ್ ಪಿ ನಾಯಕನಾಗಿ ಕೆಲಸ ಮಾಡಿದ್ದು ನನ್ನ ರಾಜಕೀಯ ಜೀವನ ಕರ್ನಾಟಕದಿಂದಲೇ ಆರಂಭವಾಗಿದೆ.
ರಾಜ್ಯ ನಾಯಕರು ನನಗೆ ಬೆಂಬಲ ನೀಡುವುದರಲ್ಲಿ ಸಂಶಯವಿಲ್ಲ. ಆದರೆ ನನ್ನ ಕರ್ತವ್ಯ ಹಿನ್ನೆಲೆಯಲ್ಲಿ ನಾನು ಎಲ್ಲರಿಗೂ ಬೆಂಬಲ ನೀಡುವಂತೆ ಮನವಿ ಮಾಡಿಕೊಳ್ಳುತ್ತೇನೆ.
ಇಂದು ದೇಶದಲ್ಲಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಬೆಂಬಲಿತ ಸರ್ಕಾರ ಸಂವಿಧಾನಕ್ಕೆ ತಿಲಾಂಜಲಿ ಕೊಟ್ಟಿದ್ದು, ಸಂವಿಧಾನ ರೀತಿ ನಡೆದುಕೊಳ್ಳುತ್ತಿಲ್ಲ. ಐಟಿ ಇಡಿ ಮೂಲಕ ಚುನಾಯಿತ ಸರ್ಕಾರ ಕೆಡವುತ್ತಿದ್ದಾರೆ. ಅವರ ಪಕ್ಷ ಸೇರಲು ಒಪ್ಪದಿದ್ದರೆ ಕೇಸ್ ಮುಂದುವರಿಸುತ್ತಾರೆ. ಇಲ್ಲಿ ಕಳಂಕಿತರು ಅಲ್ಲಿ ಹೋಗಿ ಕ್ಲೀನ್ ಆಗುತ್ತಾರೆ.
ದೇಶದ 6-7 ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಕೆಡವಲಾಗಿದೆ. ಇನ್ನು ದೇಶದಲ್ಲಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಇದೆಲ್ಲವನ್ನೂ ಎದುರಿಸಲು ಕಾಂಗ್ರೆಸ್ ಶಕ್ತಿಶಾಲಿಯಾಗಬೇಕು.
ಇದು ಒಬ್ಬರಿಂದ ಆಗುವ ಕೆಲಸ ಅಲ್ಲ. ಎಲ್ಲರೂ ಒಟ್ಟಾಗಿ ಸೇರಿ ಸಂಘಟನೆ ಮಾಡಬೇಕು. ಆಮೂಲಕ ನಿರುದ್ಯೋಗ, ಹಣದುಬ್ಬರ, ಜಿಡಿಪಿ ಕುಸಿತ, ರೂಪಾಯಿ ಮೌಲ್ಯ ಕುಸಿತ, ಆರ್ಥಿಕ ಹಿನ್ನಡೆ, ಖಾಸಗೀಕರಣ, ಉದ್ಯೋಗ ನಷ್ಟ ಕಡಿಮೆ ಆಗುತ್ತಿದೆ. ದುರ್ಬಲ ವರ್ಗದವರಿಗೆ ಮೀಸಲಾತಿ ಉದ್ಯೋಗ ಸಿಗುತ್ತಿಲ್ಲ.
ನಾನು ವಿದ್ಯಾರ್ಥಿ ಘಟ್ಟದಿಂದ ಈ ವಿಚಾರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಈ ಪಕ್ಷಕ್ಕೆ ಬಲ ತುಂಬುತ್ತಾ ಬಂದಿದ್ದೇನೆ. ನಾವು ಸಂಘಟನೆಗೆ ಶಕ್ತಿ ತುಂಬಲು ಈ
ಈ ಮನವಿ ಮಾಡುತ್ತಿದ್ದೇನೆ.
ಶಶಿ ತರೂರ್ ಅವರಿಗೆ ಯಾವ ಸಲಹೆ ನೀಡುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ' ನಾನು ಈ ವಿವಾದಾತ್ಮಕ ವಿಚಾರವಾಗಿ ಮಾತನಾಡುವುದಿಲ್ಲ. ನಾನು ನನ್ನ ವಿಚಾರವನ್ನು ಮಾತ್ರ ಮಾತನಾಡುತ್ತೇನೆ. ಅವರ ವಿಚಾರದ ಬಗ್ಗೆ ಚರ್ಚೆ ಮಾಡಲು ಬಯಸುವುದಿಲ್ಲ. ಇದು ನಮ್ಮ ಮನೆ ವಿಚಾರ. ಇಲ್ಲಿ ಅವರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರ ಇದೆ. ಇದು ಪಕ್ಷದ ಆಂತರಿಕವಾಗಿ ನಡೆಯುತ್ತಿರುವ ಸ್ನೆಹಯುತ ಸ್ಪರ್ಧೆ. ನಾನು ಕಾಂಗ್ರೆಸ್ ಪಕ್ಷದ ತಳಮಟ್ಟದಿಂದ ಇಲ್ಲಿಯವರೆಗೂ ನಾನು ಬೆಳೆದು ಬಂದಿದ್ದು, ಆ ಬಗ್ಗೆ ನಾನು ಮಾತನಾಡುತ್ತೇನೆ ' ಎಂದರು.
ಖರ್ಗೆ ಅವರು ಗಾಂಧಿ ಕುಟುಂಬದ ನಿಯಂತ್ರಣದಲ್ಲಿ ಕೆಲಸ ಮಾಡುತ್ತಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ' ಅವರಿಗೆ ಚರ್ಚೆ ಮಾಡಲು ಬೇರೆ ವಿಷಯ ಸಿಗುತ್ತಿಲ್ಲ. ಕಳೆದ 20 ವರ್ಷಗಳಿಂದ ಸೋನಿಯಾ ಗಾಂಧಿ ಅವರು ಪಕ್ಷ ಸಂಘಟನೆ ಮಾಡಿ ಹಲವು ಕಾನೂನು ತಂದು ಬಡವರ ಹೊಟ್ಟೆ ತುಂಬುವ ಆಹಾರ ಭದ್ರತೆ, ಶಿಕ್ಷಣ ಹಕ್ಕು, ನರೆಗಾದಂತಹ ಯೋಜನೆ ತಂದಿದ್ದಾರೆ. ಇಂತಹ ಯೋಜನೆಗಳಿಗೆ ಬೆಂಬಲ ನೀಡಬೇಕು. ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ 6 ರಾಜ್ಯಗಳಲ್ಲಿ ಸರ್ಕಾರ ಮಾಡಿದ್ದೆವು. ಮೋದಿ ಹಾಗೂ ಅಮಿತ್ ಶಾ ಅವರು ಸಾಂವಿಧಾನಿಕ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಒಂದೊಂದಾಗಿ ಸರ್ಕಾರ ಕೆಡವಿದರು. ಆ ಕುಟುಂಬ ಪಕ್ಷಕ್ಕೆ ಸೇವೆ ಸಲ್ಲಿಸಿಕೊಂದು ಬಂದಿದೆ. ಪಂಡಿತ್ ನೆಹರೂ ಅವರಿಂದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಹತ್ತು ಹಲವು ಯೋಜನೆಗಳು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ನಂತರ ಪಕ್ಷ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅಧಿಕಾರ ಸ್ವೀಕಾರ ಮಾಡಲಿಲ್ಲ. ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಆ ಹುದ್ದೆ ನೀಡಿದರು. 10 ವರ್ಷಗಳಲ್ಲಿ ಹಲವು ಪ್ರಗತಿಪರ ಯೋಜನೆಗಳು ಬಂದವು. ಕೆಲ ಚುನಾವಣೆ ಕಳೆದುಕೊಂಡ ಹಿನ್ನೆಲೆಯಲ್ಲಿ ಇಂತಹ ಮಾತು ಹೇಳುವುದು ಸರಿಯಲ್ಲ. ಒಳ್ಳೆಯ ವಿಚಾರಗಳು ಇದ್ದರೆ ಅವರ ಸಲಹೆ ಪಡೆಯುತ್ತೇನೆ. ಉತ್ತಮ ಸಲಹೆ ನೀವು ಕೊಟ್ಟರೂ ಸ್ವೀಕರಿಸುತ್ತೇವೆ. ಅವರು ಈ ಪಕ್ಷಕ್ಕೆ ದುದಿದಿದ್ದು, ಅವರ ಸಲಹೆ ಪಡೆಯುತ್ತೇನೆ. ಅದು ನನ್ನ ಕರ್ತವ್ಯ. 20 ವರ್ಷಗಳ ಅವರ ಅನುಭವ ನಾನು ಕಲಿಯಬೇಕಿದೆ ' ಎಂದರು.
ಈ ಚುನಾವಣೆ ರಾಜ್ಯದ ಮೇಲೆ ಪ್ರಭಾವ ಬೀರುತ್ತದೆಯೆ ಎಂಬ ಪ್ರಶ್ನೆಗೆ, ' ನಮ್ಮ ರಾಜ್ಯದಲ್ಲಿ ಸಾಕಷ್ಟು ಮುಖಂಡರು ಇದ್ದಾರೆ. ರಾಜ್ಯದಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಡುತ್ತಿದ್ದಾರೆ. ಹೀಗಾಗಿ ನನ್ನಿಂದ ಎಲ್ಲಾ ಪ್ರಯೋಜನ ಆಗಲಿದೆ ಎಂದು ನಾನು ಹೇಳುವುದಿಲ್ಲ. ಏನೇ ಆದರೂ ಅದು ಎಲ್ಲಾ ನಾಯಕರ ಸಾಮೂಹಿಕ ನೇತೃತ್ವದ ಫಲ. ಇದನ್ನೇ ನಾನು ನಂಬಿದ್ದೇನೆ ' ಎಂದರು.
ಕಾಂಗ್ರೆಸ್ ನಾಯಕರು ಸಹಕಾರ ನೀಡುತ್ತಿಲ್ಲ ಎಂಬ ಶಶಿ ತರೂರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ' ನಾನು ಹಾಗೂ ನನ್ನ ಚುನಾವಣಾ ಪ್ರಚಾರದ ಅಧಿಕಾರಿಗಳು ನನ್ನ ಪರವಾಗಿ ಸಂಘಟನೆ ಮಾಡುತ್ತಿದ್ದಾರೆ. ನಮ್ಮ ಬಳಿ ಬಂದವರನ್ನು ಬೇರೆಯವರ ಜೊತೆ ಕಲಿಸಲು ಆಗುತ್ತದೆ? ನನಗೆ ಹಲವು ಹಿರಿಯ ನಾಯಕರು ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಿದ್ದಾರೆ. ನಾನು ಇದನ್ನು ನಿರೀಕ್ಷೆ ಮಾಡಿಲ್ಲದಿದ್ದರೂ ನನಗೆ ಬೆಂಬಲ ನೀಡಿದ್ದಾರೆ. ನನಗೆ ಸಂಪುಟ ಸ್ಥಾನಮಾನಕ್ಕಿಂತ ಸಂಘಟನೆಯೇ ಮುಖ್ಯ. ನಾನು 50 ವರ್ಷಗಳಲ್ಲಿ ಎಲ್ಲವೂ ಒಂದೊಂದಾಗಿ ಸಿಕ್ಕಿದೆ. ಎಲ್ಲರಿಗೂ ನಾನು ಏನು ಎಂದು ಗೊತ್ತಿದೆ. ಹಾಗೆಂದು ಇನ್ನೊಬ್ಬರನ್ನು ನಾನು ಟೀಕಿಸುವಿದಿಲ್ಲ. ಅವರ ಹೇಳಿಕೆ ಅವರದ್ದಾಗಿದೆ ' ಎಂದು ತಿಳಿಸಿದರು.
2019ರ ಚುನಾವಣೆಯಲ್ಲಿ ನಿಮ್ಮನ್ನು ಸೋಲಿಸಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದವರಿಗೆ ಏನು ಹೇಳಬಯಸುತ್ತೀರಿ ಎಂದು ಕೇಳಿದಾಗ, ' ನಾನು ಎಂದಿಗೂ ಯಾವುದೇ ಸ್ಥಾನ ಬಯಸಿರಲಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನ, ಈ ಅವಕಾಶವನ್ನು ನಿರೀಕ್ಷೆ ಮಾಡಿರಲಿಲ್ಲ. 1994ರಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಬಿದ್ದ ನಂತರ ವಿರೋಧ ಪಕ್ಷದ ನಾಯಕ ಆಗುತ್ತೇನೆ ಎಂದು ನಿರೀಕ್ಷೆ ಮಾಡಿರಲಿಲ್ಲ. 2008ರಲ್ಲಿ ಶಾಸಗಾಂಗ ಪಕ್ಷದ ನಾಯಕನಾಗಿದ್ದೆ. ನಾನು ಪಕ್ಷಕ್ಕಾಗಿ ಇದ್ದೇನೆ ಹೊರತು ಬೇರೆ ವಿಚಾರಕ್ಕೆ ಅಲ್ಲ. ನನ್ನಂತಹ ಹಲವರು ಪಕ್ಷದಲ್ಲಿ ಇದ್ದಾರೆ. ಹೀಗಾಗಿ ಪಕ್ಷ ಯಾವ ಜವಾಬ್ದಾರಿ ನೀಡುತ್ತದೆಯೋ ಅದರಂತೆ ನಡೆಯುತ್ತೇನೆ. ನನಗೆ ಯಾರೂ ವಿರೋಧಿಗಳಿಲ್ಲ ' ಎಂದರು.
ಪಕ್ಷದಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಣದ ಜತೆ ಖರ್ಗೆ ಅವರ ಬಣ ಬರುತ್ತದೆಯೇ ಎಂದು ಕೇಳಿದಾಗ, ' ನಮ್ಮಲ್ಲಿ ಯಾವುದೇ ಬಣ ಇಲ್ಲ. ನಾವೆಲ್ಲರೂ ಸಮಾನರು. ಒಗ್ಗಟ್ಟಿದ್ದರೆ ನಮ್ಮ ಸರ್ಕಾರ ಬರುವುದು ಖಚಿತ ' ಎಂದು ತಿಳಿಸಿದರು.
[16/10, 3:50 PM] Kpcc official: Interaction with textile and garment owners and workers from Ballari district
[16/10, 4:01 PM] Kpcc official: Filmmaker Saeed Akhtar Mirza today met Shri Rahul Gandhi and joined the Bharat Jodo Yatra, lending his support to the cause.
[16/10, 5:09 PM] Kpcc official: *ಬಳ್ಳಾರಿಯ ಮೋಕಾದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮಗೋಷ್ಠಿ ಮುಖ್ಯಾಂಶಗಳು:*
ಕರ್ನಾಟಕ ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಜನ ಮತ್ತು ಮಾಧ್ಯಮಗಳಿಂದ ಉತ್ತಮ ಪ್ರೋತ್ಸಾಹ, ಸಹಕಾರ ಸಿಕ್ಕಿದೆ.
ರಾಜ್ಯದಲ್ಲಿ ಚುನಾವಣೆ ಎದುರಾಗುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. ಬಿಜೆಪಿಯವರು ನಾವು ಬೇರೆಡೆಯಿಂದ ಜನ ಕರೆದುಕೊಂಡು ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ.
ರಾಜಕಾರಣದಲ್ಲಿ ಜನ ಸಂಘಟನೆ ಮಾಡಬೇಕಾದರೆ, ರಾಷ್ಟ್ರಮಟ್ಟದ ಪಾದಯಾತ್ರೆ ಮಾಡುವಾಗ ಎಲ್ಲರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಯಾತ್ರೆಯಲ್ಲಿ ಪಕ್ಷಬೇಧ ಮರೆತು ಸಹಸ್ರಾರು ಜನ ಭಾಗವಹಿಸಿದ್ದಾರೆ. ಅವರು ತೋರಿದ ಪ್ರೀತಿ, ವಿಶ್ವಾಸ ಅಪಾರ. ಶ್ರಮ ಇದ್ದಲಿ ಫಲ ಎಂಬುದರಲ್ಲಿ ನಮಗೆ ನಂಬಿಕೆ ಇದೆ.
ರಾಜಕಾರಣದಲ್ಲಿರುವಾಗ ದೇಶದಲ್ಲಿ ಬದಲಾವಣೆ ತಂದು ಸಾಧನೆ ಮಾಡಬೇಕು. ದೇಶ ಒಡೆಯಲಾಗುತ್ತಿದ್ದು, ದ್ವೇಷ, ಆರ್ಥಿಕ ಸಂಕಷ್ಟ, ನಿರುದ್ಯೋಗ, ದುರಾಡಳಿತ ಹೆಚ್ಚಾಗಿದೆ. ಇದರಿಂದ ಬೇಸತ್ತು ಜನ ಹೆಚ್ಚು ಸಂಖ್ಯೆಯಲ್ಲಿ ಈ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ.
ನಾವು ಮಕ್ಕಳನ್ನು ಕರೆತಂದಿಲ್ಲ. ಅವರೇ ಓಡೋಡಿ ಬಂದು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಅವರ ಭಾವನೆಯನ್ನು ನಾವು ತಡೆಯಲು ಸಾಧ್ಯವೇ? ಮಕ್ಕಳು, ರೈತರು, ಮಹಿಳೆಯರು, ಕಾರ್ಮಿಕರು ಸೇರಿ ಎಲ್ಲ ವರ್ಗದ ಜನರ ಜತೆಗಿನ ರಾಹುಲ್ ಗಾಂಧಿ ಅವರ ಮಾತುಕತೆ ಸಂದರ್ಭ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ.
ರಾಹುಲ್ ಗಾಂಧಿ ಅವರು ಕೇವಲ ಒಂದು ಮಗು, ಒಬ್ಬ ಯುವಕ, ಒಬ್ಬ ರೈತ, ಕಾರ್ಮಿಕ, ಮಹಿಳೆ ಜತೆ ಮಾತನಾಡಿದ್ದಲ್ಲ. ಎಲ್ಲ ವರ್ಗದ ಜನ ಸಮೂಹದ ಜತೆ ಮಾತುಕತೆ ನಡೆಸಿದ್ದಾರೆ. ಅವರ ನೋವು, ಕಷ್ಟ, ಭಾವನೆ ಅರಿತು, ಮುಂದೆ ಜನ ಆಶೀರ್ವಾದ ಮಾಡಿದಾಗ ಅವರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ನೀಡುವ ಚಿಂತನೆ ಅವರದಾಗಿದೆ.
ಇಂದು ಬಳ್ಳಾರಿಯಲ್ಲಿ ಯಾತ್ರೆ ಮುಕ್ತಾಯವಾಗಿದ್ದು, ನಾಳೆ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಇದೆ. ಸಂಸದ ಡಿ ಕೆ ಸುರೇಶ್, ಉಗ್ರಪ್ಪ, ಶಾಸಕ ನಾಗೇಂದ್ರ ಸೇರಿದಂತೆ ಕೆಲವು ನಾಯಕರನ್ನು ಯಾತ್ರಿಗಳು ಎಂದು ಪರಿಗಣಿಸಿ, ಅವರಿಗೆ ಇಲ್ಲೇ ಮತ ಚಲಾಯಿಸುವ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ. ಉಳಿದವರು ಬೆಂಗಳೂರಿನಲ್ಲಿ ಮತ ಚಲಾಯಿಸಲಿದ್ದಾರೆ. ನಮ್ಮ ರಾಜ್ಯದವರೇ ಅಭ್ಯರ್ಥಿಯಾಗಿದ್ದು, ಎಲ್ಲರೂ ಚುನಾವಣೆಯಲ್ಲಿ ಉತ್ಸುಕರಾಗಿ ಭಾಗವಹಿಸಲಿದ್ದಾರೆ. ಗಾಂಧಿ ಕುಟುಂಬ ಈ ಚುನಾವಣೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ ಪಕ್ಷದವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದು, ಈ ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಭಾರತ ಐಕ್ಯತಾ ಯಾತ್ರೆ ಬಗ್ಗೆ ಮಾಡಿರುವ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ' ಬಿಜೆಪಿ ಜನ ಸ್ಪಂದನ ಸಮಾವೇಶ ಮಾಡಿತು. ಹಾಗಾದರೆ ಅವರು ಇಷ್ಟು ದಿನ ಜನರಿಗೆ ಸ್ಪಂದಿಸಿರಲಿಲ್ಲವೆ? ಅವರು ಅಧಿಕಾರದಲ್ಲಿದ್ದಾಗ ಜನರ ಮಧ್ಯೆ ಇದ್ದು, ಅವರ ಕಷ್ಟಕ್ಕೆ ಸ್ಪಂದಿಸಲಿಲ್ಲವೆ? ನೀವು ನಿಮ್ಮ ಅಧಿಕಾರ ಅವಧಿಯಲ್ಲಿ ಏನು ಸಾಧನೆ ಮಾಡಿದ್ದೀರಿ ಎಂದು ಹೇಳುವ ಬದಲು ಬೇಕಾಬಿಟ್ಟಿ ಹೇಳಿಕೆ, ಜಾಹೀರಾತು ನೀಡುತ್ತಿದ್ದೀರಿ. ಈಗ ಜನ ಸಂಕಲ್ಪ ಮಾಡುತ್ತಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಲು, ಕಾಂಗ್ರೆಸ್ ಪಕ್ಷಕ್ಕೆ 150 ಸ್ಥಾನ ಕೊಡಲು ಜನ ಈಗಾಗಲೇ ಸಂಕಲ್ಪ ಮಾಡಿದ್ದಾರೆ. ಈ ಯಾತ್ರೆಯಲ್ಲಿ ಜನ ನೀಡುತ್ತಿರುವ ಬೆಂಬಲ ನೋಡಿದರೆ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಖಚಿತ ' ಎಂದು ಉತ್ತರಿಸಿದರು.
ಕಾಂಗ್ರೆಸ್ ಭಾರತ ಜೋಡೋ ಬದಲು, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರ ಜೋಡೋ ಮಾಡಲಿ ಎಂಬ ಬಿಜೆಪಿ ಲೇವಡಿ ಬಗ್ಗೆ ಕೇಳಿದಾಗ, ' ನಮ್ಮಿಬ್ಬರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಸಮಾಧಾನ ಆಗುವುದಿಲ್ಲ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಬಹಳ ಸಂತೋಷ ' ಎಂದು ಕುಟುಕಿದರು.
ರಾಹುಲ್ ಗಾಂಧಿ ಅವರನ್ನು ಬಚ್ಚಾ ಎಂದು ಕರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಯಡಿಯೂರಪ್ಪ, ಯತ್ನಾಳ್, ಶ್ರೀರಾಮುಲು ಸೇರಿದಂತೆ ಯಾರು ಬೇಕಾದರೂ ರಾಹುಲ್ ಗಾಂಧಿ ಅವರ ಬಗ್ಗೆ ಮಾತನಾಡಲಿ. ಆದರೆ ಚಡ್ಡಿ ಹಾಕಿರುವ ಬಚ್ಚಾ ಮುಂದೆ ಪ್ಯಾಂಟು ಧರಿಸಿ, ಪಂಚೆ ಕಚ್ಚೆ ಕಟ್ಟಿ, ಕೆಲಸ ಮಾಡುತ್ತಿರುವವರನ್ನು ಜನ ಗಮನಿಸುತ್ತಿದ್ದಾರೆ. ಅವರ ವಯಸ್ಸಿನ ಮುಂದೆ, ಅವರ ಹಿರಿತನದ ಮುಂದೆ ನಾವು ಬಚ್ಚಾಗಳೇ. ಯಡಿಯೂರಪ್ಪ ಅವರನ್ನು ಯಾಕೆ ಅಧಿಕಾರದಿಂದ ತೆಗೆದಿರಿ ಎಂದು ರಾಹುಲ್ ಗಾಂಧಿ ಅವರು ಗೌರವಯುತವಾಗಿ ಕೇಳಿದ್ದಾರೆ. ಯಡಿಯೂರಪ್ಪ ಅವರು ಅದನ್ನು ಅರಿಯಬೇಕು ' ಎಂದರು.
ಕಾಂಗ್ರೆಸ್ ಪಕ್ಷ ಮುಂದೆ ಮಾಡಲಿರುವ ಬಸ್ ಯಾತ್ರೆ ಬಗ್ಗೆ ಕೇಳಿದ ಪ್ರಶ್ನೆಗೆ, ' ರಾಜ್ಯದ ಎಲ್ಲ ಕ್ಷೇತ್ರಗಳನ್ನೂ ಮುಟ್ಟಬೇಕು ಎಂಬ ಕಾರಣಕ್ಕೆ ನಾನು, ಸಿದ್ದರಾಮಯ್ಯ ಅವರು ಹಾಗೂ ಎಐಸಿಸಿ ನಾಯಕರು ಕೂತು ಚರ್ಚಿಸಿ ಈ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇವೆ ' ಎಂದರು.
ಕಾಂಗ್ರೆಸ್ ತಂತ್ರಗಳನ್ನು ಬಿಜೆಪಿ ನಕಲು ಮಾಡುತ್ತಿದೆಯೇ ಎಂಬ ಪ್ರಶ್ನೆಗೆ, ' ಜನರನ್ನು ಮರೆತು ಮಲಗಿರುವ ಸರ್ಕಾರವನ್ನು ನಾವು ಬಡಿದೆಬ್ಬಿಸುತ್ತಿದ್ದೇವೆ ' ಎಂದರು.
ಈ ಯಾತ್ರೆ ಯಶಸ್ಸು ಆಗಿದೆಯೇ ಎಂದು ಕೇಳಿದಾಗ, ' ಈ ಯಾತ್ರೆ ನೋಡಿ ನಿಮಗೆ ಏನು ಅನಿಸುತ್ತಿದೆ? ನಿಮ್ಮ ಕ್ಯಾಮೆರಾ, ನಿಮ್ಮ ಸಂದರ್ಶನ, ವಿಶ್ಲೇಷಣೆ ಏನು ಹೇಳುತ್ತಿದೆ? ನಮ್ಮ ಯಾತ್ರೆ ಜನರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಎಲ್ಲರೂ ಅಭಿಪ್ರಾಯ ಪಟ್ಟಿದ್ದಾರೆ. ಈ ಯಾತ್ರೆ ಯಶಸ್ಸಿನ ಶ್ರೇಯ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರಿಗೆ ಸಲ್ಲಬೇಕು ' ಎಂದರು.
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಬಗ್ಗೆ ಕೇಳಿದಾಗ, ' ಈ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುವುದಿಲ್ಲ. ಮತದಾರರ ಬಳಿ ನೇರವಾಗಿ ಮಾತನಾಡುತ್ತೇನೆ. ನನ್ನನ್ನು ಸಿಲುಕಿಸುವ ಪ್ರಯತ್ನ ಮಾಡಬೇಡಿ ' ಎಂದರು.
ಸೋನಿಯಾ ಗಾಂಧಿ ಅವರು ರಾಜ್ಯಕ್ಕೆ ಬಂದರೂ ಮಾತನಾಡಲಿಲ್ಲ ಎಂಬ ಪ್ರಶ್ನೆಗೆ, ' ಮೋದಿ ಅವರು ಎಂದಾದರೂ ಪತ್ರಿಕಾಗೋಷ್ಠಿ ನಡೆಸಿದ್ದಾರಾ? ರಾಹುಲ್ ಗಾಂಧಿ ಅವರು ಎಲ್ಲೆಡೆ ಮಾತನಾಡುತ್ತಿದ್ದಾರಲ್ಲಾ' ಎಂದರು.
ಪ್ರಿಯಾಂಕಾ ಗಾಂಧಿ ಅವರ ಆಗಮನದ ಬಗ್ಗೆ ಕೇಳಿದಾಗ, ' ಅವರು ಸಿಮ್ಲಾ ಚುನಾವಣಾ ಪ್ರಚಾರದಲ್ಲಿದ್ದಾರೆ. ಇಂದು ದೆಹಲಿಗೆ ಹೋಗಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನ ಯಾತ್ರೆ ಬಾಕಿ ಇದೆ. ಅವರ ಭಾಗವಹಿಸುವಿಕೆ ಬಗ್ಗೆ ಶೀಘ್ರದಲ್ಲಿ ತಿಳಿಸುತ್ತೇನೆ ಎಂದರು.
ಬಳ್ಳಾರಿಯಲ್ಲಿ ಸಮಾವೇಶ ಮಾಡಲು ಕಾರಣ ಏನು ಎಂಬ ಪ್ರಶ್ನೆಗೆ, ' ಈ ಯಾತ್ರೆ ಸುದೀರ್ಘವಾಗಿ ನಡೆದು, ಒಂದಷ್ಟು ಅನುಭವ ಪಡೆದ ನಂತರ ಸಮಾವೇಶ ಮಾಡಲು ತೀರ್ಮಾನ ಮಾಡಲಾಗಿತ್ತು. ಹೀಗಾಗಿ 20 ದಿನಗಳ ಯಾತ್ರೆ ನಂತರ ಬಳ್ಳಾರಿಯಲ್ಲಿ ಮಾಡಿದ್ದೇವೆ. ರಾಯಚೂರಿನಲ್ಲಿ ಮಾಡುವ ಚರ್ಚೆ ನಡೆಯಿತು. ಅಲ್ಲಿ ತೆಲಂಗಾಣ ರಾಜ್ಯದವರೂ ಆಗಮಿಸುವುದಾಗಿ ಹೇಳಿದ್ದರು. ಆದರೆ ನಾವು ಅದನ್ನು ಒಪ್ಪದೇ ಬಳ್ಳಾರಿಯಲ್ಲಿ ಮಾಡಿದ್ದೇವೆ' ಎಂದರು.
ಈ ಯಾತ್ರೆ ನಂತರ ರಾಜ್ಯದಲ್ಲಿ ನಾಯಕತ್ವಕ್ಕೆ ಬಲ ಬಂದಿದೆಯೇ ಎಂಬ ಪ್ರಶ್ನೆಗೆ, ' ಪಕ್ಷಕ್ಕೆ ಶಕ್ತಿ ಬಂದಿದ್ದು, ನನ್ನ ಆರೋಗ್ಯ ಗಟ್ಟಿಯಾಗಿದೆ. ನನ್ನ ಅನುಭವ ಹೆಚ್ಚಾಯ್ತು. ನಾನು ರಾಜ್ಯ ಹಾಗೂ ಬೇರೆ ರಾಜ್ಯಗಳಲ್ಲೂ ಇಂತಹ ಹಲವು ಸಂಘಟನೆ ಮಾಡಿದ್ದೇನೆ. ನಮ್ಮ ರಾಜ್ಯದಲ್ಲಿ ಯಾತ್ರೆ ಮಾಡಿದ್ದೇನೆ. ಮೇಕೆದಾಟು ಯಾತ್ರೆ, ಸ್ವಾತಂತ್ರ್ಯ ನಡಿಗೆ ನೋಡಿದ್ದೀರಿ. ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂಬಂತೆ ಎಲ್ಲ ಕಾರ್ಯಕರ್ತರ, ನಾಯಕರನ್ನು ಸೇರಿಸಿ ಈ ಕಾರ್ಯಕ್ರಮ ಮಾಡಲಾಗಿದೆ ' ಎಂದರು.
ಆರು ತಿಂಗಳ ಮುಂಚಿತವಾಗಿ ಚುನಾವಣೆ ಅಭ್ಯರ್ಥಿ ಘೋಷಣೆ ಬಗ್ಗೆ ಕೇಳಿದ ಪ್ರಶ್ನೆಗೆ, ' ನಾವು ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಯಾತ್ರೆ ಮುಗಿದ ನಂತರ ಮಾತನಾಡುತ್ತೇನೆ. ಯಾರ ಶಕ್ತಿ ಏನು ಎಂದು ನೋಡಿದ್ದೇವೆ. ಪಾದಯಾತ್ರೆಗೆ ಶ್ರಮಿಸುವವರು, ಜನರ ಬಳಿ ಕೆಲಸ ಮಾಡಿರುವವರು, ಜನರ ಪ್ರೀತಿ ವಿಶ್ವಾಸ ಉಳಿಸಿಕೊಂಡಿರುವವರನ್ನು ಗಮನದಲ್ಲಿ ಇಟ್ಟುಕೊಂಡಿದ್ದೇವೆ' ಎಂದರು.
Post a Comment