[20/11, 9:27 AM] Cm Ps: *ಬೆಂಗಳೂರು ನವೆಂಬರ್ 20 *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು *ಕಾವೇರಿ ನಿವಾಸ ಬಳಿ* *ಮಾಧ್ಯಮದರೊಂದಿಗೆ* ಮಾತನಾಡಿದರು.
[20/11, 10:46 AM] Cm Ps: *ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣವಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ನವೆಂಬರ್ 20:
ಚುನಾವಣಾ ಆಯೋಗದ ನಿಯಮಾವಳನ್ನು ಗಾಳಿಗೆ ತೂರಿ ಕಾಂಗ್ರೆಸ್ ಸರ್ಕಾರ ಚಿಲುಮೆ ಸಂಸ್ಥೆಗೆ ಆದೇಶವನ್ನು ನೀಡಿದ್ದು, ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿದೆ. ಕಾಂಗ್ರೆಸ್ ಅವರ ಆರೋಪ ನಿರಾಧಾರ. ಈ ಪ್ರಕರಣ ಅವರಿಗೇ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಾವೇರಿ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
*ಕಾಂಗ್ರೆಸ್ ಸರ್ಕಾರ ಹದ್ದುಮೀರಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ :*
ಸಿದ್ದರಾಮಯ್ಯ ಅವರ ಸರ್ಕಾರ 2013 ರಿಂದಲೂ ತನಿಖೆಯಾಗಬೇಕು ಎಂದು ಸೂಚನೆ ನೀಡಲಾಗಿದೆ. 2013 ರಿಂದ ಯಾವ ಆದೇಶಗಳನ್ನು ನೀಡಿದ್ದಾರೆ ಎಂಬ ಎಲ್ಲ ಸ್ಪಷ್ಟವಾದ ಸತ್ಯಗಳು ಹೊರಗೆ ಬರಲಿ ಎಂಬ ಉದ್ದೇಶದಿಂದ ತನಿಖೆಗೆ ಆದೇಶ ನೀಡಲಾಗಿದೆ. ಯಾವ ಉದ್ದೇಶದಿಂದ ಚಿಲುಮೆ ಸಂಸ್ಥೆಗೆ ಆದೇಶ ನೀಡಿರುವ ಸತ್ಯಾಸತ್ಯತೆ ಜನರಿಗೆ ಗೊತ್ತಾಗಬೇಕು. ನಮ್ಮ ಸರ್ಕಾರದ ಆದೇಶದಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ಕೆ ಆದೇಶ ನೀಡಲಾಗಿದ್ದು, ಚಿಲುಮೆ ಸಂಸ್ಥೆಗೆ ಯಾವುದೇ ರಾಜಕೀಯ ಪಕ್ಷದ ಜೊತೆ ಸಂಬಂಧವಿರಬಾರದು ಎಂಬ ಷರತ್ತನ್ನು ವಿಧಿಸಲಾಗಿದೆ. ಆದರೆ ಸಿದ್ದರಾಮಯ್ಯ ಅವರು ನೀಡಿರುವ ಆದೇಶದಲ್ಲಿ ಚುನಾವಣಾ ಆಯೋಗ ನಿರ್ವಹಿಸಬೇಕಾ ಮತ ಪರಿಷ್ಕರಣೆಯ ಕಾರ್ಯವನ್ನೇ ಸಂಸ್ಥೆಗೆ ನೀಡಿದ್ದಾರೆ. ಚುನಾವಣಾ ಆಯೋಗ ನಿರ್ವಹಿಸಬೇಕಾದ ಕಾರ್ಯವನ್ನು ಖಾಸಗಿ ಸಂಸ್ಥೆಗೆ ವಹಿಸಿರುವುದು ಅಕ್ಷಮ್ಯ ಅಪರಾಧ. ಅವರ ಅವಧಿಯಲ್ಲಿ ತಹಶೀಲ್ದಾರ ರವರಿಗೆ ಬಿಎಲ್ ಓಗಳ ನೇಮಕ ಮಾಡುವ ಆದೇಶವನ್ನೂ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಹದ್ದುಮೀರಿ ಅಧಿಕಾರದ ದುರುಪಯೋಗ ಮಾಡಲಾಗಿದೆ ಎಂದರು.
*ಸರ್ಕಾರದ ಮೇಲೆ ರಾಜಕೀಯ ಪ್ರೇರಿತ ಆರೋಪ*
ಮತದಾರರ ಪರಿಷ್ಕರಣೆಯ ಕಾರ್ಯದಲ್ಲಿ ಮತದಾರರ ಹೆಸರನ್ನು ಸೇರಿಸುವುದು ಹಾಗೂ ಕೈಬಿಡುವುದು ಚುನಾವಣಾ ಆಯೋಗದ ಕೆಲಸವೇ ಹೊರತು ಸರ್ಕಾರದ್ದಲ್ಲ. ನಮ್ಮ ಸರ್ಕಾರದ ಮೇಲೆ ರಾಜಕೀಯ ಪ್ರೇರಿತವಾಗಿ ಆರೋಪ ಹೊರಿಸಲಾಗುತ್ತಿದೆ ಎಂದರು.
*ತನಿಖೆಯಿಂದ ಸಂಪೂರ್ಣ ಸತ್ಯ ಹೊರಬರಲಿದೆ :*
ಮತದಾರರ ವಿವರ ಪಡೆಯಲು ಏಜೆನ್ಸಿಯಾಗಿ ಸಚಿವರು ಬಳಸಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಯಿಸಿ, ಎಲ್ಲಾ ಪಕ್ಷಗಳು ಸಂಸ್ಥೆಗಳನ್ನು ಏಜೆನ್ಸಿಯಾಗಿ ಬಳಸಿಕೊಳ್ಳುತ್ತಾರೆ. ರಾಜಕೀಯ ಪಕ್ಷಗಳು ಸಮೀಕ್ಷೆಯನ್ನು ಮಾಡಿಸುತ್ತದೆ. ಇಲ್ಲಿ ಸರ್ಕಾರ ಯಾವ ರೀತಿಯ ಆದೇಶವನ್ನು ನೀಡಿದೆ ಎಂಬುದಷ್ಟೇ ಮುಖ್ಯ. ನಮ್ಮ ಸರ್ಕಾರದ ಆದೇಶದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧವಿರಬಾರದು ಎಂಬ ಷರತ್ತು ವಿಧಿಸಲಾಗಿದೆ. ಅವರ ಆದೇಶದಲ್ಲಿ ಈ ಷರತ್ತನ್ನು ವಿಧಿಸಿಯೇ ಇಲ್ಲ ಮತ್ತು ಬಿಎಲ್ಓ ನೇಮಕಾತಿಗೂ ಅನುಮತಿಯನ್ನು ಕಾನೂನುಬಾಹಿರವಾಗಿ ನೀಡಿದ್ದಾರೆ. ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆಯೇ ಎಂಬುದಕ್ಕೆ ಪ್ರತಿಕ್ರಯಿಸಿ, ಈ ಮೊದಲು ಕೇವಲ 2022ರದ್ದು ತನಿಖೆ ಮಾಡಿಸಲು ಸೂಚಿಸಲಾಗಿತ್ತು. ಆದರೆ ಈಗ 2013 ರಿಂದ ತನಿಖೆ ಮಾಡಿಸಲು ಸೂಚಿಸಲಾಗಿದ್ದು, ಎಲ್ಲ ಸತ್ಯಗಳೂ ಹೊರಬರಲಿದೆ ಎಂದರು.
*ಮತದಾರರ ಹೆಸರನ್ನು ಕೈಬಿಟ್ಟಿರುವ ಆರೋಪ ನಿರಾಧಾರ :*
ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಕಾಂಗ್ರೆಸ್ ನವರ ಆರೋಪವಾಗಿದೆ. 27 ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂಬು ಶುದ್ಧ ಸುಳ್ಳು. ಶಿವಾಜಿನಗರ ಕ್ಷೇತ್ರದಲ್ಲಿ ಕೇವಲ 15000 ಹೆಸರನ್ನು ಹಾಗೂ ಕೆ.ಆರ್.ಪುರ, ಮಹಾದೇವಪುರಗಳಲ್ಲಿ ಕೇವಲ 45 ರಿಂದ 47 ಸಾವಿರ ಹೆಸರುಗಳನ್ನು ಕೈಬಿಡಲಾಗಿದೆ. ಆದ್ದರಿಂದ ಈ ಆರೋಪ ನಿರಾಧಾರ ಎಂದರು.
*ನಕಲಿ ಮತದಾರರನ್ನು ತೆಗೆದರೆ ನ್ಯಾಯಸಮ್ಮತವಾದ ಚುನಾವಣೆ ಸಾಧ್ಯ*
ಈ ಬಾರಿ ಚುನಾವಣಾ ಆಯೋಗವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಸಿ ಎರಡು ಪ್ರದೇಶದಲ್ಲಿ ಇರುವ ವೋಟರ್ ಐಡಿಗಳನ್ನು ತೆಗೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಈ ರೀತಿ ನಕಲಿ ಮತದಾರರನ್ನು ತೆಗೆದರೆ ಮಾತ್ರ ನ್ಯಾಯಸಮ್ಮತವಾದ ಚುನಾವಣೆ ನಡೆಸಲು ಸಾಧ್ಯ. ಬೇರೆ ಪ್ರದೇಶದಲ್ಲಿದ್ದವರನ್ನು ಬೇರೆ ಯಾವುದೇ ಪ್ರದೇಶಕ್ಕೆ ಸೇರಿಸಿ ಮತ ಹಾಕಿಸುವ ಕಾಂಗ್ರೆಸ್ ನವರ ತಂತ್ರ ಬಂದ್ ಆಗಲಿದೆ ಎಂಬ ಆತಂಕದಿಂದ ಈ ರೀತಿ ಹುಲ್ಲೆಬ್ಬಿಸಿದ್ದಾರೆ ಎಂದರು.
ಕೇಂದ್ರ ಚುನಾವಣಾ ಆಯೋಗಕ್ಕೂ ಕಾಂಗ್ರೆಸ್ ದೂರು ನೀಡಲಿದೆ ಎಂಬುದಕ್ಕೆ ಉತ್ತರಿಸಿ, ಅವರು ಯಾರಿಗೆ ಬೇಕಾದರೂ ದೂರು ನೀಡಲಿ, ನ್ಯಾಯ ಹಾಗೂ ಸತ್ಯ ಖಂಡಿತ ಹೊರಬರಲಿದೆ ಹಾಗೂ ಅವರು ಎಬ್ಬಿಸಿರುವ ಈ ಪ್ರಕರಣ ಅವರಿಗೆ ತಿರುಗುಬಾಣವಾಗಲಿದೆ ಎಂದು ತಿಳಿಸಿದರು
[20/11, 2:10 PM] Cm Ps: ಬಳ್ಳಾರಿಯಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ವತಿಯಿಂದ ಏರ್ಪಡಿಸಿರುವ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಾರಿಗೆ ಹಾಗೂ ಎಸ್ಟಿ ಇಲಾಖೆಗಳ ಸಚಿವ ಬಿ. ಶ್ರೀರಾಮುಲು, ಸಚಿವರಾದ ಗೋವಿಂದ ಕಾರಜೋಳ, ಆನಂದ ಸಿಂಗ್, ಪ್ರಭು ಚೌಹ್ವಾಣ್, ಶಾಸಕರಾದ ಸೋಮಶೇಖರ್ ರೆಡ್ಡಿ, ಕರುಣಾಕರ್ ರೆಡ್ಡಿ, ರಾಜು ಗೌಡ ಹಾಗೂ ಮತ್ತಿತರರು ಹಾಜರಿದ್ದರು.
[20/11, 4:02 PM] Cm Ps: ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಣ –
*ಈ ಜಾಲವನ್ನು ಸರ್ಕಾರ ಬೇಧಿಸಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬಳ್ಳಾರಿ, ನವೆಂಬರ್ 20 :
ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣ ನಡೆದಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಇರಬಹುದು ಎಂಬು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬಳ್ಳಾರಿಯ ಜೀವೃತ್ತ ಮೈದಾನ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆಗೆ ಎಲ್ ಇ ಡಿ ಇರುವಂತಹ ಸಲಕರಣೆಯ ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ್ಯ ವಿವರಗಳು ಲಭಿಸಿರುವುದರಿಂದ , ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬರುತ್ತದೆ ಎಂದರು.
ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿಯು ಆಸ್ಪತ್ರೆಯಲ್ಲಿದ್ದು, ನಂತರ ಆ ವ್ಯಕ್ತಿಯಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿಯು ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು, ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದ್ದು, ಇದು ಒಂದು ಭಯೋತ್ಪಾದಕ ಘಟನೆ ಇರಬಹುದು ಎಂಬು ಮೇಲ್ನೋಟಕ್ಕೆ ಕಂಡುಬರುತ್ತಿರುವ ಬಗ್ಗೆ ಪೊಲೀಸರು ತಿಳಿಸದಿದ್ದಾರೆ. ಪಿಎಫ್ಐ ಗೂ, ಈ ಘಟನೆಗೂ ಸಂಬಂಧ ಇರುವ ಬಗ್ಗೆ ಮಾಹಿತಿಯೂ ತನಿಖೆಯ ನಂತರ ತಿಳಿಯಲಿದೆ ಎಂದರು.
[20/11, 5:39 PM] Cm Ps: *ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳ –*
*ತಳಸಮುದಾಯದವರಿಗೆ ಸ್ವಾಭಿಮಾನದ ಬದುಕು ನೀಡಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬಳ್ಳಾರಿ,ನವೆಂಬರ್ 20 :
ಎಸ್ ಸಿ ಸಮುದಾಯಕ್ಕೆ 15 ರಿಂದ 17 % ಹಾಗೂ ಎಸ್ ಟಿ ಸಮುದಾಯಗಳಿಗೆ 3 ರಿಂದ 7 % ಮೀಸಲಾತಿ ಹೆಚ್ಚಳ ಸಂವಿಧಾನಬದ್ಧವಾದ ನಿರ್ಧಾರವಾಗಿದ್ದು, ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಭಾರತೀಯ ಜನತಾ ಪಕ್ಷದ ಎಸ್.ಟಿ. ಮೋರ್ಚಾ ವತಿಯಿಂದ ಬಳ್ಳಾರಿಯ ಜೀ ವೃತ್ತದ ಬಳಿ ಆಯೋಜಿಸಿರುವ “ ಎಸ್.ಟಿ.ಮೋರ್ಚಾ ಬೃಹತ್ ಸಮಾವೇಶ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಎನ್ನುವ ಮೂಲಕ ಇಡೀ ಭಾರತವನ್ನು ಒಗ್ಗೂಡಿಸಿದ್ದಾರೆ. ಏಕ್ ಭಾರತ ,ಶ್ರೇಷ್ಠ ಭಾರತ ಎಂದು ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಿದ್ದಾರೆ. ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಲು ಸರ್ಕಾರ, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳದ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.
*ಸಾಮಾಜಿಕ ನ್ಯಾಯ ಒದಗಿಸಿದ ಸರ್ಕಾರದ ಯೋಜನೆಗಳು :*
ಸರ್ಕಾರ ಎಸ್ ಸಿ ಎಸ್ ಟಿ ಸಮುದಾಯಗಳಿಗೆ 28 ಸಾವಿರಕ್ಕೂ ಹೆಚ್ಚಿನ ಅನುದಾನವನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ 6 ಸಾವಿರ ಕೋಟಿ ರೂ. ನೀಡಲಾಗಿದೆ. ಎಸ್ ಟಿ ಸಮುದಾಯಕ್ಕೆ ಪ್ರತ್ಯೇಕ ನಿರ್ದೇಶನಾಲಯವನ್ನು ಸ್ಥಾಪಿಸಲಾಯಿತು. ಹಾಲು ಮತದ ಸಮುದಾಯಕ್ಕೆ ನ್ಯಾಯ ಒದಗಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕಾಗಿನೆಲೆ ಅಭಿವೃದ್ಧಿ ಅನುದಾನ ನೀಡಿದರು. ವಾಲ್ಮೀಕಿ ಜಯಂತಿಯನ್ನು ಘೋಷಣೆ ಮಾಡಿದರು. ಸಾಮಾಜಿಕ ನ್ಯಾಯವನ್ನು ನಮ್ಮ ಸರ್ಕಾರ ಅಕ್ಷರಶ: ನೀಡಿದೆ. ಎಸ್ ಸಿ ಎಸ್ ಟಿ ಸಮುದಾಯದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕೆಂಬ ಆಶಯದೊಂದಿದೆ ನಮ್ಮ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿದೆ. 100 ಅಂಬೇಡ್ಕರ್ ಹಾಸ್ಟೆಲ್ ಗಳು, 50 ಕನಕದಾಸ ಹಾಸ್ಟೆಲ್ ಗಳನ್ನು ನಿರ್ಮಿಸಲಾಗುತ್ತಿದೆ. ಐದು ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಐದು ಲಕ್ಷ ಯುವಕರಿಗೆ ವಿವೇಕಾನಂದ ಯುವಶಕ್ತಿ ಯೋಜನೆಗಳ ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದರು.
*ವಾಲ್ಮೀಕಿ ನಮ್ಮ ಸರ್ಕಾರಕ್ಕೆ ಸ್ಪೂರ್ತಿ:*
ವಾಲ್ಮೀಕಿ ರಚಿಸಿದ ರಾಮಾಯಣ, ಪವಿತ್ರ ಧರ್ಮಗ್ರಂಥಗಳಲ್ಲಿ ಒಂದು. ವಾಲ್ಮೀಕಿಯವರು ನಮಗೆ ಸ್ಪೂರ್ತಿ. ದೇಶವನ್ನು ಕಟ್ಟುವ ಕೆಲಸವನ್ನು ವಾಲ್ಮೀಕಿ ಸಮುದಾಯದವರು ಮಾಡಬೇಕು. ಮೊಘಲರನ್ನು ಹಿಮ್ಮೆಟ್ಟಿಸಿದ್ದು, ಈ ಸಮುದಾಯದ ವೀರ ನಾಯಕರು. ವೀರ ಮದಕರಿ, ಏಕಲವ್ಯ,ಬೇಡರ ಕಣ್ಣಪ್ಪ ಎಲ್ಲರೂ ವಾಲ್ಮೀಕಿ ಕುಲವನ್ನು ಶ್ರೇಷ್ಟಗೊಳಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಾರಿಗೆ ಹಾಗೂ ಎಸ್ಟಿ ಇಲಾಖೆಗಳ ಸಚಿವ ಬಿ. ಶ್ರೀರಾಮುಲು, ಸಚಿವರಾದ ಗೋವಿಂದ ಕಾರಜೋಳ, ಆನಂದ ಸಿಂಗ್, ಪ್ರಭು ಚೌಹ್ವಾಣ್, ಶಾಸಕರಾದ ಸೋಮಶೇಖರ್ ರೆಡ್ಡಿ, ಕರುಣಾಕರ್ ರೆಡ್ಡಿ, ರಾಜು ಗೌಡ ಹಾಗೂ ಮತ್ತಿತರರು ಹಾಜರಿದ್ದರು.
[20/11, 5:43 PM] Cm Ps: *ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬಳ್ಳಾರಿ,ನವೆಂಬರ್ 20 :
ಕಾಂಗ್ರೆಸ್ ಪಕ್ಷ ತಳಸಮುದಾಯಗಳಿಗೆ ರಕ್ಷಣೆ ನೀಡದೇ, ಕೇವಲ ಸುಳ್ಳು ಭರವಸೆಗಳು ನೀಡಿದ್ದಾರೆ. ಇನ್ನು ಮುಂದೆ ಅವರ ಮತಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಭಾರತೀಯ ಜನತಾ ಪಕ್ಷದ ಎಸ್.ಟಿ. ಮೋರ್ಚಾ ವತಿಯಿಂದ ಬಳ್ಳಾರಿಯ ಜೀ ವೃತ್ತದ ಬಳಿ ಆಯೋಜಿಸಿರುವ “ ಎಸ್.ಟಿ.ಮೋರ್ಚಾ ಬೃಹತ್ ಸಮಾವೇಶ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿದ್ದರಾಮಯ್ಯ ನವರ ‘ಅಹಿಂದ’ ಎಲ್ಲಿದೆ, ಆ ಸಮುದಾಯದವರಿಗೆ ಬಡತನ ನಿರ್ಮೂಲನೆ ಮಾಡಲಿಲ್ಲ, ಸ್ವಾಭಿಮಾನದ ಬದುಕನ್ನು ನೀಡಲಿಲ್ಲ. ಆದರೆ ಇಂದು ಎಸ್ ಸಿ ಎಸ್ ಟಿ ಸಮುದಾಯಗಳು ಜಾಗೃತರಾಗಿದ್ದಾರೆ. ಅವರ ಜೊತೆ ಭಾಜಪ ಸರ್ಕಾರವಿದೆ. ಅವರ ಏಳಿಗೆಗೆ ಸರ್ಕಾರ ಹೆಗಲಿಗೆ ಹೆಗಲು ನೀಡಲಿದೆ ಎಂದರು.
*ಕಾಂಗ್ರೆಸ್ ಎಸ್ ಸಿ ಎಸ್ ಟಿಗಳ ಬಡತನ ನಿರ್ಮೂಲನೆಗೆ ಶ್ರಮಿಸಲಿಲ್ಲ :*
ಕಾಂಗ್ರೆಸ್ ನವರು 60 ವರ್ಷ ದೇಶವಾಳಿದರು. ಎಸ್ ಸಿ ಎಸ್ ಟಿ ನಮ್ಮ ಬಾಂಧವರು ಎಂದು ಬಾಯಿಮಾತಿನಲ್ಲಿ ಹೇಳಿದರೆ ಹೊರತು , ಅವರ ಬಡತನ ನಿರ್ಮೂಲನೆಗೆ ಶ್ರಮಿಸಲಿಲ್ಲ. ಕಾಂಗ್ರೆಸ್ ನವರು ಎಸ್ ಸಿ , ಎಸ್ ಟಿ ಜನಾಂಗದವರನ್ನು ಕೇವಲ ಮತಬ್ಯಾಂಕ್ ಆಗಿ ಮಾಡಿಕೊಂಡಿದ್ದರು. ಸಣ್ಣ ಮೈದಾನದಲ್ಲಿ ಕಾರ್ಯಕ್ರಮ ನಡೆಸಿ,ಕಾಂಗ್ರೆಸ್ ನವರ ಭಾರತ್ ಜೋಡೋಯಾತ್ರೆ ಸುನಾಮಿ ಎಬ್ಬಿಸಿದೆ ಎಂದು ಸುಳ್ಳು ಹೇಳುತ್ತಾರೆ. ಎಸ್ ಸಿ ಎಸ್ ಟಿ , ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಭಾಜಪ ಸರ್ಕಾರ ಶ್ರಮಿಸಲಿದ್ದು, ಸ್ವಾಭಿಮಾನದ ಬದುಕನ್ನು ನಿಮ್ಮದಾಗಿಸಲಿದೆ ಎಂದರು. ಈಗ ಪರಿವರ್ತನೆಯ ಕಾಲ ಬಂದಿದೆ ಎಂದರು.
*ಭಾಜಪ ಸುನಾಮಿಯಲ್ಲಿ ಕಾಂಗ್ರೆಸ್ ಧೂಳಿಪಟ :*
ಬಳ್ಳಾರಿಯಿಂದ ಲೋಕಸಭೆಗೆ ಗೆದ್ದ ಶ್ರೀಮತಿ ಸೋನಿಯಾಗಾಂಧಿಯವರು ಬಳ್ಳಾರಿಗೆ 3 ಸಾವಿರ ಕೋಟಿ ನೀಡುವುದಾಗಿ ತಿಳಿಸಿದ್ದರು. ಆದರೆ ಅವರು ಮೂರು ಕಾಸನ್ನು ನಿಮಗೆ ನೀಡದೇ ಬಳ್ಳಾರಿ ಜನರಿಗೆ ಮೋಸ ಮಾಡಿದರು. ಇದು ಕಾಂಗ್ರೆಸ್ ಪಕ್ಷದ ನೀತಿ. ಕಾಂಗ್ರೆಸ್ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಬಳ್ಳಾರಿಯ ಜನ ಕಲಿಸಲಿದ್ದಾರೆ. ಭಾರತೀಯ ಜನತಾ ಪಕ್ಷದ ಸುನಾಮಿಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ. ಕಾಂಗ್ರೆಸ್ ಅವಧಿಯಲ್ಲಿ ಕೇವಲ 8 ಸಾವಿರ ಕೋಟಿ, 15 ಸಾವಿರ ಕೋಟಿ ನಿಗದಿಪಡಿಸಿ, ಕೆಲಸ ಮಾಡಲಿಲ್ಲ. ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಹಾಲು ಮತದ ಸಮುದಾಯಕ್ಕೆ ನ್ಯಾಯ ನೀಡಲಿಲ್ಲ. ಕೇವಲ ಬಾಯಿಮಾತಿನಲ್ಲಿ ಸಾಮಾಜಿಕ ನ್ಯಾಯವೆನ್ನುತ್ತಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಾರಿಗೆ ಹಾಗೂ ಎಸ್ಟಿ ಇಲಾಖೆಗಳ ಸಚಿವ ಬಿ. ಶ್ರೀರಾಮುಲು, ಸಚಿವರಾದ ಗೋವಿಂದ ಕಾರಜೋಳ, ಆನಂದ ಸಿಂಗ್, ಪ್ರಭು ಚೌಹ್ವಾಣ್, ಶಾಸಕರಾದ ಸೋಮಶೇಖರ್ ರೆಡ್ಡಿ, ಕರುಣಾಕರ್ ರೆಡ್ಡಿ, ರಾಜು ಗೌಡ ಹಾಗೂ ಮತ್ತಿತರರು ಹಾಜರಿದ್ದರು.
[20/11, 8:53 PM] Cm Ps: ಬೆಂಗಳೂರಿನ ಬಸವನಗುಡಿಯ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ ಗರುಡಾಚಾರ್, ವಿಧಾನ ಪರಿಷತ್ ಸಧಸ್ಯರಾದ ಟಿ.ಎ ಶರವಣ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.
[20/11, 9:51 PM] Cm Ps: ಬೆಂಗಳೂರು, ನವೆಂಬರ್ 20: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* *ಬಸವನಗುಡಿಯ* ಕೆಂಪಾಂಬುಧಿ ಕೆರೆ ಇಲ್ಲಿ ಆಯೋಜಿಸಿರುವ “ *ಬೆಂಗಳೂರು* *ಪಾರಂಪರಿಕ* *ಕಡಲೆಕಾಯಿ ಪರಿಷೆ”ಯ* ಕಾರ್ಯಕ್ರಮವನ್ನು *ಉದ್ಘಾಟಿಸಿ* *ಮಾತನಾಡಿದರು* .
Post a Comment