[01/11, 3:56 PM] Kpcc official: ಕೇಂದ್ರೀಯ ಪರೀಕ್ಷೆಗಳಲ್ಲಿ ಹಿಂದಿ ಇಂಗ್ಲಿಷ್ ಗೆ ಮಾತ್ರ ಮಣೆ. ಕನ್ನಡಕ್ಕೆ ಇಲ್ಲ ಮಾನ್ಯತೆ.
ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಆಗುತ್ತಿರುವ ದ್ರೋಹ 'ಕೋಟಿ ಕಂಠ ಗಾಯನ'ದಿಂದ ಪರಿಹಾರವಾಗುವುದೇ?
ತೋರಿಕೆಗೆ ಕನ್ನಡ. ಹಿಂದಿ ಹೇರಿಕೆಯ ಮೇಲೆ ಪ್ರೀತಿ.
#ಕನ್ನಡವಿರೋಧಿಬಿಜೆಪಿ
[01/11, 6:29 PM] Kpcc official: ನಿನ್ನೆ
ಬಿಜೆಪಿಯೇ ನನಗೆ ಕಿರುಕುಳ ನೀಡುತ್ತಿದರುವುದು -ಜನಾರ್ಧನ ರೆಡ್ಡಿ
ಇಂದು
ರೆಡ್ಡಿ ಬಿಜೆಪಿ ಬಿಟ್ಟು ಹೋಗುವುದಾದರೆ ಹೋಗಲಿ- ಸಚಿವ ಭೈರತಿ
ಗಣಿ ಲೂಟಿ ಮಾಡಿ ಬಿಜೆಪಿಯನ್ನು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ತಂದ ರೆಡ್ಡಿಗಳು ಈಗ ಬಿಜೆಪಿಗೆ ಬೇಡವಾಗಿದ್ದಾರೆ.
#BJPvsBJP ಜೋರಾಗಿ ನಡೆಯುತ್ತಿದೆ.
[01/11, 6:29 PM] Kpcc official: ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು.
@JnanendraAraga ಅವರೇ, ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ?
ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ.
[01/11, 6:29 PM] Kpcc official: PSI ಹಗರಣದದಿಂದ ಸಂತ್ರಸ್ತರಾಗಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ @JnanendraAraga ಅವರೇ?
ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ.
ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ.
PSI ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು.
@JnanendraAraga ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ?
ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ.
[02/11, 11:27 AM] Kpcc official: '@sriramulubjp ಅವರೇ,
ತಾವು ಧರಣಿ ನಡೆಸಿದ್ದು ಯಾರ ವಿರುದ್ಧ?
ನಿಮ್ಮದೇ ಸರ್ಕಾರದ ವಿರುದ್ಧವೇ?
ನಿಮ್ಮದೇ ಸಿಎಂ ವಿರುದ್ಧವೇ?
ನಿಮ್ಮದೇ ಪ್ರಧಾನಿ ವಿರುದ್ಧವೇ?
ಕ್ಯಾಬಿನೆಟ್ ಸಚಿವರು ತಮ್ಮದೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಒದಗಿದ್ದೇಕೆ?
ತಮ್ಮ ಮಾತನ್ನು ಯಾರೂ ಕೇಳ್ತಿಲ್ಲವೇ? ಅಥವಾ ಇದು ಕೇವಲ ತಳ್ಳುವ ಸರ್ಕಾರವೇ?
[02/11, 12:15 PM] Kpcc official: ಮೋದಿಜಿಯ ಫೋಟೋಶೂಟ್‌ಗಾಗಿ ಸಿನೆಮಾದವರೂ ನಾಚುವಂತೆ "ಗುಜರಾತ್ ಮಾಡೆಲ್" ಸೆಟ್ ಹಾಕಲಾಗಿದೆ!
ಆ ಸೆಟ್ ಥೇಟ್ ಕರ್ನಾಟಕದಲ್ಲಿ ಮೋದಿಜಿಗಾಗಿ ರಸ್ತೆಗೆ ಪೈಂಟ್ ಹೊಡೆದಂತೆಯೇ ಇದೆ!
ವಿಕಾಸ್, ಅಚ್ಛೆ ದಿನ್, ವಿಶ್ವಗುರು, ಆತ್ಮನಿರ್ಭರ್ ಎಲ್ಲವಕ್ಕೂ ಗುಜರಾತಿನ ಮೊರ್ಬಿಯಲ್ಲಿ ಸಾಕ್ಷ್ಯ ಸಿಕ್ಕಿದೆ ಅಲ್ಲವೇ @BJP4Karnataka?
[02/11, 12:15 PM] Kpcc official: ಬಿಜೆಪಿಯವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಗೋಳಾಡುತ್ತಿರುವುದು ಯಾರ ವಿರುದ್ಧ?
ಗೆಳೆಯನನ್ನು ಬಿಟ್ಟಿರುವ @sriramulubjp ವಿರುದ್ಧವೇ?
ಋಣ ಮರೆತಿರುವ @BSYBJP ವಿರುದ್ಧವೇ?
ಆಪರೇಷನ್ ಕಮಲ ಎಂಬ ಕೊಳಕು ರಾಜಕೀಯಕ್ಕೆ ನಾಂದಿ ಹಾಡಿದವರನ್ನು ತುಳಿದು ಹಾಕಿದ @BJP4Karnataka ವಿರುದ್ಧವೇ?
#BJPvsBJP
[02/11, 1:12 PM] Kpcc official: ರೆಡ್ಡಿ ಬಳಸಿ ಸಿಎಂ ಆದವರೇ ಈಗ ಆತಂತ್ರರಾಗಿದ್ದಾರೆ, ರೆಡ್ಡಿಯವರಿಗೆ ನೆರವು ನೀಡಲು ಸಾಧ್ಯವೇ @BasanagoudaBJP ಅವರೇ?
ಆಪರೇಷನ್ ಮಾಡಿಸಿದವರು, ಆಪರೇಷನ್ ಮಾಡಿದವರು ಇಬ್ಬರನ್ನೂ ಬಿಜೆಪಿ ಕೆಡವಿ ಹಾಕಿದೆ.
ಆಪರೇಷನ್ ಆದವರನ್ನೂ ಕೆಡವಲಿದೆ.
ಬಿಜೆಪಿ ಎಂದರೆ ಬಸ್ಮಾಸುರ ಇದ್ದಂತೆ ಯಾರ ತಲೆ ಮೇಲೆ ಕೈ ಬಿದ್ದರೂ ಅವರು ಭಸ್ಮವಾಗುತ್ತಾರೆ!
#BJPvsBJP
[02/11, 3:14 PM] Kpcc official: ◆ಕುಸಿದ ಕಾನೂನು ಸುವ್ಯವಸ್ಥೆ
◆ರಸ್ತೆ ಗುಂಡಿಗಳು
◆ಮಳೆ ಅವಾಂತರಕ್ಕೆ ಪರಿಹಾರವಿಲ್ಲ
◆ಕಸ ವಿಲೇವಾರಿ ಸಮಸ್ಯೆ
◆ವೃದ್ಧಿಸದ ಮೂಲ ಸೌಕರ್ಯ ವ್ಯವಸ್ಥೆ
◆ಕಳೆಗುಂದಿದ ಬ್ರಾಂಡ್ ಬೆಂಗಳೂರು
◆ಹಲವು ಉದ್ಯಮಗಳ ನಿರ್ಗಮನ
#40percentsarkara ದಲ್ಲಿ ಇಷ್ಟೆಲ್ಲಾ ಆಗಿರುವಾಗ ಹೂಡಿಕೆದಾರರಿಗೆ ಯಾವ ಭರವಸೆ ಮೂಡಲು ಸಾಧ್ಯ?
#InvestKarnataka2022
[02/11, 4:38 PM] Kpcc official: *ಡಿ.ಕೆ. ಶಿವಕುಮಾರ್ ಅವರ ಮಾಧ್ಯಮಗೋಷ್ಠಿ ಮುಖ್ಯಾಂಶಗಳು:*
ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಇದೇ 6 ರಂದು ಆಗಮಿಸುತ್ತಿದ್ದಾರೆ. ಅವರು ದೇಶದಲ್ಲಿ ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ನಮ್ಮ ರಾಜ್ಯಕ್ಕೆ ಆಗಮಿಸಬೇಕು ಎಂದು ಬಯಸಿದ್ದಾರೆ. ನಾವೆಲ್ಲ ನಾಯಕರು ಚರ್ಚೆ ಮಾಡಿ ನವೆಂಬರ್ 6 ರಂದು ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು 6 ರಂದು ಬೆಳಗ್ಗೆ 10.50 ಗಂಟೆಗೆ ಆಗಮಿಸುತ್ತಾರೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ. ನಂತರ ಮಧ್ಯಾಹ್ನ 2.35ಕ್ಕೆ ಅರಮನೆ ಮೈದಾನದಲ್ಲಿ ‘ಸರ್ವೋದಯ ಸಮಾವೇಶ’ ಹಮ್ಮಿಕೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾವಿರಾರು ಮಂದಿ ಕಾರ್ಯಕರ್ತರು, ನಾಯಕರು ಸ್ವಾಗತ ಮಾಡಲಿದ್ದಾರೆ.
ರಾಜ್ಯದ ವಿವಿಧ ಮೂಲೆಯಿಂದ ಜನ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮಧ್ಯಾಹ್ನ ಹಮ್ಮಿಕೊಂಡಿದ್ದೇವೆ. ರಾಜ್ಯದ ಎಲ್ಲ ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಆಗಮಿಸಲಿದ್ದಾರೆ. ಅವರು ಎರಡು ದಿನ ಮುಂಚಿತವಾಗಿ ಆಗಮಿಸಲಿದ್ದಾರೆ. ರಾಜ್ಯದ ವಿವಿಧ ನಾಯಕರ ಜತೆ ಒಂದು ವಾರ ಸಭೆ ನಡೆಸಲಿದ್ದಾರೆ.
ಖರ್ಗೆ ಅವರು 1972ರಲ್ಲಿ ವಿಧಾನಸಭೆಗೆ ಪ್ರವೇಶಿಸಿದ್ದು, 50 ವರ್ಷಗಳ ಸುದೀರ್ಘ ಸೇವೆ ಮಾಡಿದ್ದು, ಇಂತಹ ಹಿರಿಯ ನಾಯಕರು ನಮ್ಮ ರಾಜ್ಯದಿಂದ ಈ ಸ್ಥಾನಕ್ಕೆ ಆಯ್ಕೆ ಆಗಿರುವುದು ನಮ್ಮ ಹೆಮ್ಮೆ. ಹೀಗಾಗಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಮುಂದಾಗಿದ್ದೇವೆ. ಪಕ್ಷ ಮಾತ್ರವಲ್ಲದೆ ಹಲವು ಸಂಘಟನೆಗಳು ಕೂಡ ಸ್ವಾಗತ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ. ಈ ಸರ್ವೋದಯ ಸಮಾವೇಶಕ್ಕೆ ಪ್ರತಿ ಗ್ರಾಮ ಪಂಚಾಯ್ತಿಯಿಂದ, ವಾರ್ಡ್ ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಆಗಮಿಸಬೇಕು. ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಕಿಸಾನ್ ಘಟಕ, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಘಟಕ ಸೇರಿದಂತೆ ನಾನಾ ಘಟಕಗಳ ಮುಖಂಡರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು.
ಖರ್ಗೆ ಅವರ ಮಾರ್ಗದರ್ಶನದ ಮಾತು, ಸಂದೇಶವನ್ನು ಹಳ್ಳಿ ಹಳ್ಳಿಗೆ ಕೊಂಡೊಯ್ಯಬೇಕು. ಜಿಲ್ಲಾ, ತಾಲೂಕು, ರಾಜ್ಯ ಮಟ್ಟದ ಕಾರ್ಯಕರ್ತರು ಮಾಧ್ಯಮಗಳಲ್ಲಿ ಜಾಹೀರಾತು ನೀಡಲು ನಾವು ಮುಕ್ತ ಅವಕಾಶ ನೀಡುತ್ತಿದ್ದೇವೆ.
*ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನ:*
ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 5 ರಿಂದ 15 ರವರೆಗೆ ಅರ್ಜಿ ಹಾಕಬಹುದು. ಅರ್ಜಿಗೆ 5 ಸಾವಿರ ರು. ಶುಲ್ಕ. ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರು ಡಿಡಿ, ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ. 50 ರಷ್ಟು ವಿನಾಯಿತಿ ನೀಡಲಾಗಿದೆ. ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ.
2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅರ್ಜಿ ಹಾಕಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ.
*ಮತ್ತೆ ಸದಸ್ಯತ್ವ ನೋಂದಣಿ ಆರಂಭ:*
ಹಲವು ಮಂದಿ ಕಾಂಗ್ರೆಸ್ ಸದಸ್ಯತ್ವ ಪಡೆಯಲು ಉತ್ಸುಕರಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಆನ್ ಲೈನ್ ಮೂಲಕ ನೋಂದಣಿ ಆರಂಭಿಸಿದ್ದೇವೆ. ಕೆಲವು ನಾಯಕರು ಕಾಂಗ್ರೆಸ್ ಸೇರಲು ಬಯಸಿದ್ದು, ನನ್ನ ಸಂಪರ್ಕದಲ್ಲಿದ್ದಾರೆ. ಅವರ ಹೆಸರನ್ನು ಈಗ ಬಹಿರಂಗ ಪಡಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ.
*ಪ್ರಶ್ನೋತ್ತರ:*
ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ‘ಈ ವಿಚಾರದಲ್ಲಿ ಮುಕ್ತ ಅವಕಾಶ ನೀಡಿದ್ದೇವೆ. ಅದಕ್ಕಾಗಿ ಒಂದು ಸಮಿತಿ ಇದೆ. ಪಕ್ಷದ ಸಿದ್ಧಾಂತ ಒಪ್ಪಿಕೊಳ್ಳುವ ಯಾರು ಬೇಕಾದರೂ ಅರ್ಜಿ ಹಾಕಬಹುದು. ನಾವು ಎಲ್ಲ ನಾಯಕರ ಜತೆ ಚರ್ಚೆ ಮಾಡಿ, ಪಕ್ಷದ ಅಧ್ಯಕ್ಷನಾಗಿ ಈ ವಿಚಾರ ತಿಳಿಸುತ್ತಿದ್ದೇನೆ. ಯಾರನ್ನು ಸೇರಿಸಿಕೊಳ್ಳಬೇಕು ಯಾರನ್ನು ಸೇರಿಸಿಕೊಳ್ಳಬಾರದು ಎಂಬ ನಿರ್ಧಾರವನ್ನು ಸಮಿತಿ ಕೈಗೊಳ್ಳಲಿದೆ’ ಎಂದರು.
ಪಕ್ಷದ ಟಿಕೆಟ್ ಗೆ ಹಣ ಯಾವ ಮಾನದಂಡದಲ್ಲಿ ನೀಡಬೇಕು ಎಂಬ ಪ್ರಶ್ನೆಗೆ, ‘ಯಾವುದೇ ಮಾನದಂಡವಿಲ್ಲ. ನಾವು ಪಕ್ಷದ ಕಟ್ಟಡ, ಪಕ್ಷದ ನಿಧಿ, ಚುನಾವಣಾ ಪ್ರಚಾರ, ಜಾಹೀರಾತು ನೀಡಲು ಹಣ ಬೇಕಿದೆ. ಪತ್ರಕರ್ತರಿಗೆ ಹಣ ನೀಡುವುದಿಲ್ಲ. ಮುಖಪುಟದ ಜಾಹೀರಾತು ನೀಡಲು ನಮ್ಮ ಬಳಿ ಸರ್ಕಾರ ಇಲ್ಲ. ಪಕ್ಷಕ್ಕೆ 20 ಸಾವಿರಕ್ಕಿಂತ ಹೆಚ್ಚಿನ ನಗದು ಪಡೆಯುವಂತಿಲ್ಲ. ನಮಗೆ ಯಾವುದೇ ಚುನಾವಣಾ ಬಾಂಡ್ ಬರುತ್ತಿಲ್ಲ. ಎಲ್ಲ ಬಿಜೆಪಿಗೆ ಹೋಗುತ್ತಿದೆ. ಹೀಗಾಗಿ ಕಾರ್ಯಕರ್ತರಾದರೂ ಪಕ್ಷಕ್ಕೆ ಹಣ ನೀಡಲಿ’ ಎಂದು ತಿಳಿಸಿದರು.
ಅರ್ಜಿ ಹಾಕಲು ವಯೋಮಿತಿ ಇದೆಯೇ ಎಂಬ ಪ್ರಶ್ನೆಗೆ, ‘ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಲಿ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್ ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಗಳನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ. ಅದಕ್ಕೆ ನಾನು ಅವಕಾಶ ನೀಡುವುದಿಲ್ಲ’ ಎಂದರು.
ಬಿಜೆಪಿಯವರು ಸಮುದಾಯಗಳ ಸಮಾವೇಶ ಮಾಡುತ್ತಿರುವ ಬಗ್ಗೆ ಕೇಳಿದಾಗ, ‘ಅವರಿಗೆ ಜಾತಿ ಇಲ್ಲ. ಹೀಗಾಗಿ ಜಾತಿಗಳ ಬೆಂಬಲ ಹುಡುಕಿಕೊಂಡು ಹೋಗುತ್ತಿದ್ದಾರೆ. ನಾವು ಸರ್ವೋದಯ ಸಮಾವೇಶ ಮಾಡುತ್ತಿದ್ದೇವೆ. ಗಾಂಧಿ ಅವರು ಆರಂಭಿಸಿದ ಸರ್ವೋದಯವನ್ನೇ ಮಲ್ಲಿಕಾರ್ಜುನ ಖರ್ಗೆ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ’ ಎಂದರು.
ಶ್ರೀರಾಮುಲು ಅವರ ಧರಣಿ ಬಗ್ಗೆ ಕೇಳಿದಾಗ, ‘ಸರ್ಕಾರ ಎಷ್ಟು ವೇಗವಾಗಿದೆ ಎಂಬುದಕ್ಕೆ ಶ್ರೀರಾಮುಲು ಅವರ ಧರಣಿ ಸಾಕ್ಷಿ. ಶ್ರೀರಾಮ ಮಲಗಿರುವುದು ರಾಮ ರಾಜ್ಯ ಏನಾಗುತ್ತಿದೆ ಎಂಬುದಕ್ಕೆ ಸಾಕ್ಷಿ’ ಎಂದರು.
[02/11, 5:50 PM] Kpcc official: ಸರ್ಕಾರಿ ಕಚೇರಿಗಳಲ್ಲಿ ಬೋರ್ಡ್ ಹಾಕುವುದಾಯ್ತು, ಈಗ ಪ್ರಮಾಣವಚನದ ನಾಟಕ!
@BSBommai ಅವರೇ, ನಿಮ್ಮ ಮಾತಿಗೂ ಕೃತಿಗೂ ಸಂಬಂಧವಿದೆಯೇ?
PSI ಅಕ್ರಮದ ಬಸವರಾಜ್ ದಡೇಸಾಗುರರನ್ನು ತನಿಖೆ ಮಾಡದೆ, 40% ಕಮಿಷನ್ ಆರೋಪವನ್ನು ನ್ಯಾಯಾಂಗ ತನಿಖೆಗೊಪ್ಪಿಸದೆ ಭ್ರಷ್ಟಾಚಾರ ಬೆಂಬಲಿಸುವುದಿಲ್ಲ ಎಂಬ ನಿಮ್ಮ ಪ್ರಮಾಣಕ್ಕೆ ಯಾವ ನೈತಿಕತೆ ಇದೆ?
#SayCM
Post a Comment