ನವೆಂಬರ್ 06, 2022 | , | 8:10PM |

ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ 75 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ಜಾರಿಯಲ್ಲಿದೆ, ಆದರೆ ನರೇಂದ್ರ ಮೋದಿ ಸರ್ಕಾರ ಅದನ್ನು ತೆಗೆದುಹಾಕಿತು ಮತ್ತು ಜಮ್ಮು ಮತ್ತು ಕಾಶ್ಮೀರದ ಜನರನ್ನು ದೇಶದೊಂದಿಗೆ ಒಂದುಗೂಡಿಸಿತು ಎಂದು ಅವರು ಹೇಳಿದರು.
ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ನಡೆಸುತ್ತಿರುವ ಅನೇಕ ಕಲ್ಯಾಣ ಯೋಜನೆಗಳನ್ನು ಅಮಿತ್ ಶಾ ವಿವರಿಸಿದರು.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಉನಾ ಜಿಲ್ಲೆಯ ಕುತ್ಲಹಾರ್ ವಿಧಾನಸಭಾ ಕ್ಷೇತ್ರದಲ್ಲಿ ಕೃಷಿ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ವೀರೇಂದ್ರ ಕನ್ವರ್ ಅವರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು, ಅಲ್ಲಿ ಅವರು ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ರಸ್ತೆ ಸಂಪರ್ಕ, ಮೂಲಸೌಕರ್ಯ, ವೈದ್ಯಕೀಯ, ಶಿಕ್ಷಣ ಮತ್ತು ರೈಲ್ವೇ ಆಗಿರುವ ಬೆಳವಣಿಗೆಗಳು ಡಬಲ್ ಇಂಜಿನ್ ಸರಕಾರದಿಂದ ಮಾತ್ರ ಸಾಧ್ಯವಾಗಿದೆ ಎಂದರು.
ಮತ್ತೊಂದೆಡೆ, ಲಾಹೌಲ್-ಸ್ಪಿತಿ ವಿಧಾನಸಭಾ ಕ್ಷೇತ್ರದ ಕೀಲಾಂಗ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರು ಕೇಂದ್ರದ ಬಿಜೆಪಿ ಸರ್ಕಾರವು 2014 ರಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಸರ್ಕಾರ ರಚನೆಯಾದ ಕೂಡಲೇ ಲಕ್ಷ ಉದ್ಯೋಗ ಮತ್ತು ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ ಕಾಂಗ್ರೆಸ್‌ನ ಆದ್ಯತೆಯಾಗಿದೆ.
Post a Comment