[26/11, 11:30 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧ ಸಮ್ಮೇಳನದ ಸಭಾಂಗಣದಲ್ಲಿ ಸರ್ಕಾರಿ ನೌಕರರಿಗೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೊಧಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಎನ್.ಮಹೇಶ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮೊದಲಾದವರು ಹಾಜರಿದ್ದರು.
[26/11, 1:02 PM] Cm Ps: ಮತದಾರರ ಮಾಹಿತಿ ಕಳುವು:
*ಮುಕ್ತ ತನಿಖೆಗೆ ಆದೇಶ*: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ನವೆಂಬರ್ 26: ಮತದಾರರ ಮಾಹಿತಿ ಕಳುವು ಪ್ರಕರಣದಲ್ಲಿ ಸರ್ಕಾರ ಮುಕ್ತ ರೀತಿಯ ತನಿಖೆ ಮಾಡಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಂವಿಧಾನ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ:ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಯಾವುದೇ ಸಂಸ್ಥೆಯಾಗಲಿ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವುಗಳನ್ನು ಶಿಕ್ಷೆಗೆ ಒಳಪಡಿಸಲೆಂದೇ ಅವುಗಳನ್ನು ತನಿಖೆಗೆ ಆದೇಶ ಮಾಡಿರುವುದು. ಈಗಾಗಲೇ ಹಲವಾರು ಜನರ ವಿರುದ್ಧ ಕ್ರಮಕೈಗೊಂಡು ಬಂಧಿಸಿಸಲಾಗಿದೆ. ಅಧಿಕಾರ ಗಳ ವಿಚಾರಣೆ ಯೂ ನಡೆದಿದೆ. ಚುನಾವಣಾ ಆಯೋಗ ಮುಖ್ಯವಾಗಿ ಡಿಲೀಟ್ ಆಗಿರುವ ಪ್ರಕರಣಗಳನ್ನು ಹಾಗೂ ಮತಪಟ್ಟಿಯನ್ನು ಮತ್ತೊಮ್ಮೆ ಪರಿಷ್ಕರಣೆ ಮಾಡಲು ತೀರ್ಮಾನಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳಾಗಬೇಕು. ಯಾವುದಾದರೂ ಅನ್ಯಾಯವಾಗಿ ಡಿಲೀಟ್ ಮಾಡಿದ್ದಾರೆ ಸರಿಪಡಿಸುವುದು ಹಾಗೂ ಎರಡು ಮತ್ತು ಮೂರು ಕಡೆಗಳಲ್ಲಿ ಗುರುತಿಸಿ ಚೀಟಿ ಹೊಂದಿದ್ದರೆ ಅದನ್ನು ತೆಗೆಯುವುದು. ಪ್ರಾಥಮಿಕವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿರುವುದನ್ನು ಸ್ವಾಗತಿಸುವುದಾಗಿ ತಿಳಿಸಿದರು.
*ಸಾಮರಸ್ಯ ಹದಗೆಡಬಾರದು*
ಮಹಾರಾಷ್ಟ್ರದ ಗೃಹ ಇಲಾಖೆ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಲು ಸೂಚಿಸಿದೆ. ಯಾವುದೇ ಕಾರಣಕ್ಕೂ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಲು ಬಿಡಕೂಡದು. ಎರಡೂ ರಾಜ್ಯಗಳ ಸಾಮರಸ್ಯ ಹದಗೆಡುವುದು ಬೇಡ. ಕರ್ನಾಟಕ ಬಸ್ಸುಗಳಿಗೆ, ಜನರಿಗೆ ಹಾಗೂ ಆಸ್ತಿಗೆ ಸಂಪೂರ್ಣವಾದ ರಕ್ಷಣೆ ನೀಡಬೇಕೆಂದು ಗೃಹ ಸಚಿವರು ಮಾತನಾಡುತ್ತಾರೆ ಎಂದರು.
*ಅಧಿವೇಶನ ಸಂದರ್ಭದಲ್ಲಿ ಅಡಿಗಲ್ಲು*
ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಆದೇಶ ನೀಡಿದ್ದು, ಅಧಿವೇಶನ ಸಂದರ್ಭದಲ್ಲಿ ಅಡಿಗಲ್ಲು ಹಾಕಲಾಗುವುದು ಎಂದರು.
*ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ವರದಿ*
ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಪಡೆಯಲು ಪಂಚಾಮಸಾಲಿ ಸ್ವಾಮೀಜಿಗಳು ಗಡುವು ನೀಡಿದ್ದು, ಅದು ಒಂದು ಶಾಸನಬದ್ದ ಸಂಸ್ಥೆ. ಆದಷ್ಟು ಬೇಗನೆ ವರದಿ ನೀಡಲು ಹೇಳಿದ್ದು, ಆದಷ್ಟು ಬೇಗ ಕೊಟ್ಟರೆ ನಾವು ಕೂಡ ನಿರ್ಣಯ ಮಾಡುತ್ತೇವೆ ಎಂದರು.
*ಏಕರೂಪ ನಾಗರಿಕ ಸಂಹಿತೆ*
ರೈತರು ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಇದು ಬಿಜೆಪಿ ಪ್ರಣಾಳಿಕೆಯಲ್ಲಿದ್ದ ಪ್ರಮುಖ ಅಂಶ. ಸಮಿತಿಗಳನ್ನು ವಿವಿಧ ರಾಜ್ಯಗಳಲ್ಲಿ ರಚಿಸಲಾಗಿದೆ. ಏಕರೂಪ ನಾಗದಿಕ ಸಂಹಿತೆ ಇದ್ದರೆ ಉತ್ತಮ ಎಂದು ಬಿಜೆಪಿ ನಂಬಿದೆ ಎಂದು ತಿಳಿಸಿದರು.
[26/11, 1:04 PM] Cm Ps: *ಗ್ರಾಮ ಪಂಚಾಯತ್ ಗಳಿಗೆ ಸಂವಿಧಾನದ ಪ್ರತಿ ಹಂಚಿಕೆ: ಸಿಎಂ ಬೊಮ್ಮಾಯಿ*
ಬೆಂಗಳೂರು, ನವೆಂಬರ್ 26: ಎಲ್ಲಾ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಸಂವಿಧಾನ ಹಾಗೂ ಗ್ರಾಮ ಪಂಚಾಯಿತಿಯ 73 ಮತ್ತು 74 ನೇ ತಿದ್ದುಪಡಿ, ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಗಳ ಪ್ರತಿಗಳನ್ನು ದೊಡ್ಡ ಪ್ರಮಾಣದಲ್ಲಿ ಕಳಿಸಿ ಅಲ್ಲಿಯೂ ಸಂವಿಧಾನಬದ್ಧ ಆಡಳಿತ ನಡೆಸುವುದು ನಮ್ಮ ಆಶಯವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಂವಿಧಾನ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ:ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಂವಿಧಾನದ ಸ್ಪೂರ್ತಿ ಗ್ರಾಮೀಣ ಮಟ್ಟದಲ್ಲಿ ಆಗಬೇಕೆನ್ನುವುದು ನಮ್ಮ ಉದ್ದೇಶ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂವಿಧಾನ ನನಗೆ ಧರ್ಮಗ್ರಂಥ ಎಂದು ಹೇಳಿದ್ದರು. ಅದನ್ನು ಅಕ್ಷರಶಃ ನಾವೆಲ್ಲರೂ ಪಾಲನೆ ಮಾಡುತ್ತಿದ್ದೇವೆ ಎಂದರು. ಸಂವಿಧಾನದ ಪ್ರಕಾರ ನಡೆದುಕೊಳ್ಳುವ ವಚನ ಬೋಧನಾ ವಿಧಿಯನ್ನು ಇಂದು ಹಮ್ಮಿಕೊಂಡಿದ್ದು, ಸಂವಿಧಾನವನ್ನು ಅದರ ಒಟ್ಟು ರೂಪದಲ್ಲಿ ಆಚರಣೆಗೆ
ತರುವ ಉದ್ದೇಶ ನಮ್ಮದು. ಅಧಿಕಾರ ವಿಕೇಂದ್ರೀಕರಣ ಆಗಿದೆ, ಇನ್ನಷ್ಟು ಆಗಬೇಕಿದೆ ಎಂದರು.
*ಸಂವಿಧಾನ ಶಾಶ್ವತ ಕೊಡುಗೆ*
ಭಾರತದ ಸಂವಿಧಾನ ದಿನಾಚರಣೆ ಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಸಂವಿಧಾನ ರಚನೆಯಾಗಿ ಭಾರತ ಸರ್ವ ಸ್ವತಂತ್ರ ಒಕ್ಕೂಟ ರಾಷ್ಟ್ರವಾಗಿ, ಸಂವಿಧಾನಬದ್ಧವಾದ ಗಣತಂತ್ರವಾಗಿ ಕೆಲಸ ಮಾಡಲು ಪ್ರಾರಂಭಿಸಿತು. ಈ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅತ್ಯಂತ ಆದರ ಗೌರವ ಗಳಿಂದ ನೆನಪು ಮಾಡಿಕೊಳ್ಳುತ್ತೇವೆ. ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಸಂವಿಧಾನ ರಚನಾ ಸಮಿತಿ, ಪ್ರಜಾಪ್ರಭುತ್ವಕ್ಕೆ ಶಾಶ್ವತ ಕೊಡುಗೆಯಾಗಿ ಸಂವಿಧಾನ ವನ್ನು ನೀಡಿದ್ದಾರೆ. ಹಲವಾರು ದೇಶಗಳ ಸಂವಿಧಾನಗಳನ್ನು ಅಭ್ಯಾಸ ಮಾಡಿ ಭಾರತಕ್ಕೆ ಲಿಖಿತ ರೂಪದ ಸಂವಿಧಾನವನ್ನು ಕೊಟ್ಟಿದ್ದಾರೆ. ಬ್ರಿಟನ್ ನಲ್ಲಿ ಇಂದಿಗೂ ಅಲಿಖಿತ ಸಂವಿಧಾನ ಇದೆ. ಇದರಲ್ಲಿ ಭಾರತದ ಏಕತೆ, ಸಮಾನತೆ, ವ್ಯಕ್ತಿ ಸ್ವಾತಂತ್ರ್ಯ ಎಲ್ಲವೂ ಕೂಡ ಎಲ್ಲಾ ಆಯಾಮಗಳಲ್ಲಿ ನೋಡಿ ರಚನೆಯಾಗಿದ್ದರಿಂದ 75 ವರ್ಷ ಯಶಸ್ವಿ ಪ್ರಜಾಪ್ರಭುತ್ವ ವನ್ನು ಸಂವಿಧಾನಬದ್ಧವಾಗಿ ನಡೆಸಲು ಸಾಧ್ಯವಾಗಿದೆ. ಎಲ್ಲಾ ಕಾನೂನು ಗಳು ಸಂಬಿಧಾನಬದ್ಧವಾಗಿ ನಡೆಯಬೇಕಾಗಿರುವುದು ಭಾರತ ಪ್ರಜಾಪ್ರಭುತ್ವದ ಮೂಲ ಮಂತ್ರವಾಗಿದೆ ಎಂದರು.
*ಸಂವಿಧಾನದಂತೆ ನಡೆದುಕೊಳ್ಳಬೇಕು*
ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ,ಪತ್ರಿಕಾ ರಂಗಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕಿದೆ. ಭಾರತದಲ್ಲಿ ಕಾನೂನು ಸುವ್ಯವಸ್ಥೆ, ನ್ಯಾಯ ಮತ್ತು ಶಾಂತಿ ಎಲ್ಲವೂ ನಡೆಸಲು ಸಾಧ್ಯವಾಗಿದೆ. ಇಂಥ ಮಹಾನ್ ಸಂವಿಧಾನವನ್ನು ನೀಡಿದ್ದಾರೆ. ಇದು ಅತ್ಯಂತ ಜೀವಂತಿಕೆ ಇರುವ ಸಂವಿಧಾನವಾಗಿದ್ದು, ಕಾಲ ಕಾಲಕ್ಕೆ ಬದಲಾಗುತ್ತಿರುವ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಿಗನುಗುಣವಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುವ ಹಾಗೂ ಹೊಸ ಹೊಸ ಸಂಶೋಧನೆಗಳ ಮೂಲಕ ಸಂವಿಧಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಅವಕಾಶವನ್ನು ಅಂಬೇಡ್ಕರ್ ಅವರು ಮಾಡಿಕೊಟ್ಟಿದ್ದಾರೆ. ಹೀಗಾಗಿ ಕಾಲಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಪರಿಪೂರ್ಣತೆಯಿಂದ ಕೂಡಿರುವ ಸಂವಿಧಾನ, ಮಾನವ ಹಕ್ಕುಗಳ ರಕ್ಷಣೆ ಮಾಡುವ, ವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ, ಸಮಾನತೆಯನ್ನು ಸಾರುವ ಸಂವಿಧಾನವನ್ನು ನಾವೆಲ್ಲರೂ ಗೌರವಿಸಿ, ಅದರಂತೆ ನಡೆಯಬೇಕು ಎಂದರು.
[26/11, 3:09 PM] Cm Ps: *ಮಹಾರಾಷ್ಟ್ರ ಗಡಿವಿವಾದ : ಕಾನೂನು ಹೋರಾಟಕ್ಕೆ ಸಕಲ ಸಿದ್ಧತೆ*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ದಾವಣಗೆರೆ(ಕರ್ನಾಟಕ ವಾರ್ತೆ).ನ.26: ರಾಜ್ಯ ಪುನರ್ವಿಂಗಡಣಾ ಕಾಯ್ದೆ ಮತ್ತು ಸಂವಿಧಾನ 3ನೇ ವಿಧಿ ಅನುಸಾರ ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆಯಲ್ಲಿ 2004 ರಲ್ಲಿ ಹೂಡಿದ ದಾವೆಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಈ ವಾದಕ್ಕೆ ಹೆಚ್ಚಿನ ಒತ್ತು ನೀಡಿ ರಾಜ್ಯ ಸರ್ಕಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಸಮರ್ಥವಾದ ಕಾನೂನು ಹೋರಾಟಕ್ಕೆ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಾಸಕ ಎಸ್.ವಿ.ರವಿಂದ್ರನಾಥ್ ಹುಟ್ಟು ಹಬ್ಬದ ಸಮಾರಂಭದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿದ ಮುಖ್ಯಮಂತ್ರಿಗಳ ಜಿ.ಎಂ. ಐ.ಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಹಿರಿಯ ನ್ಯಾಯವಾದಿಗಳಾದ ಮುಕುಲ್ ರೊಹಟಗಿ, ಉದಯಹೊಳ್ಳ ನೇತೃತ್ವದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಗಂಭೀರವಾಗಿ ವಾದ ಮಂಡಿಸಲಿದ್ದೇವೆ. ಕಾನೂನು ಹೋರಾಟಕ್ಕೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರನ್ನು ಸಹ ಸರ್ಕಾರ ನೇಮಿಸಿದೆ. ನಾವು ಸಂವಿಧಾನ ಹಾಗೂ ಕಾನೂನು ಬದ್ದವಾಗಿ ಇದ್ದೇವೆ. ಕರ್ನಾಟಕದ ರಾಜ್ಯದ ಭೂ ಪ್ರದೇಶದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಬೇಡಿಕೆ ಹಾಗೂ ನಿಲುವುಗಳನ್ನು ವಿಚಾರಣೆ ಸಂದರ್ಭದಲ್ಲಿ ಮಂಡಿಸಲಾಗುವುದು. ಈ ಸಂಬಂಧವಾಗಿ ಮುಂದಿನ ವಾರ ಸರ್ವಪಕ್ಷ ಹಾಗೂ ಕಾನೂನು ತಜ್ಞರ ಸಭೆ ಕರೆದಿದ್ದೇನೆ. ಯಾವ ವಿಚಾರವನ್ನು ಮಂಡಿಸಬೇಕು ಎಂಬುದರ ಕುರಿತು ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಾಗುವುದು ಎಂದರು.
ಮಹಾರಾಷ್ಟ್ರ ಹಿರಿಯ ರಾಜಕಾರಣಿ ಶರದ್ ಪವಾರ್ ಬೆಳಗಾವಿ ಗಡಿ ವಿವಾದ ಇಟ್ಟುಕೊಂಡು ಇದುವರೆಗೂ ರಾಜಕೀಯ ಮಾಡಿದ್ದಾರೆ. ಬೆಳಗಾವಿ ಬಗೆಗಿನ ಅವರ ಕನಸ ನನಸಾಗಿಲ್ಲ, ಮುಂದೆಯೂ ನನಸಾಗುವುದಿಲ್ಲ. ಮಹಾರಾಷ್ಟ್ರದ ಜತ್ತ ಭಾಗದ ಜನರು ಕರ್ನಾಟಕದಲ್ಲಿ ವಿಲೀನವಾಗಲು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ,ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು
ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಜಿ.ಪಂ.ಸಿಇಓ ಡಾ.ಚೆನ್ನಪ್ಪ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮತ್ತಜ್ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಉಪವಿಭಾಗಧಿಕಾರಿ ದುರ್ಗಶ್ರೀ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
[26/11, 3:30 PM] Cm Ps: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಾಸಕ ಎಸ್.ಎ. ರವೀಂದ್ರನಾಥ್ ಅವರ 77 ನೇ ಜನ್ಮ ದಿನಾಚರಣೆ ಹಾಗೂ ಸುಧಾ ವೀರೇಂದ್ರ ಪಾಟೀಲ್ ಸಮುದಾಯ ಭವನವನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳು ಶಾಸಕ ಎಸ್.ಎ. ರವೀಂದ್ರನಾಥ್ ದಂಪತಿಗಳನ್ನು ಸನ್ಮಾನಿಸಿದರು.
ಸಿರಿಗೆರೆಯ ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಸಂಸದ ಜಿ.ಎಂ.ಸಿದ್ದೇಶ್ವರ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ, ಮತ್ತಿತರರು ಉಪಸ್ಥಿತರಿದ್ದರು.
[26/11, 4:03 PM] Cm Ps: *ಎಸ್.ಎ.ರವೀಂದ್ರನಾಥ್ ಅವರ ಹೆಸರಿನ 50 ಎಕರೆ ಪ್ರದೇಶದ ಬಡಾವಣೆ ಅಭಿವೃದ್ಧಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ದಾವಣಗೆರೆ, ನವೆಂಬರ್ 26 :
ಶ್ರೀ ಎಸ್.ಎ.ರವೀಂದ್ರನಾಥ್ ಅವರ ಸೇವೆಯ ಸ್ಮರಣಾರ್ಥ, ಅವರ ಹೆಸರಿನಲ್ಲಿಯೇ 50 ಎಕರೆ ಪ್ರದೇಶದಲ್ಲಿ ಬಡವರಿಗಾಗಿ ನಿರ್ಮಿಸಲಾಗುವ ಮನೆಗಳ ಬಡಾವಣೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಶಾಸಕ ಎಸ್.ಎ. ರವೀಂದ್ರನಾಥ್ ಅವರ 77 ನೇ ಜನ್ಮ ದಿನಾಚರಣೆ ಹಾಗೂ ಸುಧಾ ವೀರೇಂದ್ರ ಪಾಟೀಲ್ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು.
*ರೈತಪರ ಚಿಂತನೆ ಮಾಡುವ ಮಣ್ಣಿನಮಗ :*
ಶ್ರೀ ಎಸ್.ಎ.ರವೀಂದ್ರನಾಥ್ ಅವರು ರೈತ ಹೋರಾಟಗಾರರು. ತುಂಗಭದ್ರಾ ನೀರನ್ನು ಜಿಲ್ಲೆಗೆ ಹರಿಸಲು ಅವರ ಹೋರಾಟ ನಡೆಸಿದವರು. ರೈತಪರ ಚಿಂತನೆ ಮಾಡುವ ಮಣ್ಣಿನಮಗ. ರವೀಂದ್ರನಾಥ್ ಅವರ ಸಂಘಟನಾತ್ಮಕ ಶಕ್ತಿ ಅಭೂತಪೂರ್ವವಾಗಿತ್ತು. ದಾವಣಗೆರೆಯ ಸುತ್ತ ನೀರಾವರಿ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಮಾಲೆಬೆನ್ನೂರು ಸಬ್ ಡಿವಿಷನ್ ನ ಕೊನೆಯ ಭಾಗಕ್ಕೆ ನೀರು ಬರುತ್ತಿರಲಿಲ್ಲ. ಅದಕ್ಕಾಗಿ ಮತ್ತೆ ಹೋರಾಟ ನಡೆಸಿದ ರವಿಯಣ್ಣ ಈ ಭಾಗದ ಜನರಿಗೆ ನ್ಯಾಯ ಒದಗಿಸಿದರು. ತುಂಗಭದ್ರಾ ಯೋಜನೆಯ ಸಂದರ್ಭದಲ್ಲಿ ಈ ಭಾಗದ ರೈತರಿಗಾಗಿ ದಿಟ್ಟ ಹೋರಾಟವನ್ನು ನಡೆಸಿದರು ಎಂದು ತಿಳಿಸಿದರು.
*ಸಮಚಿತ್ತದ ಸಾರ್ವಜನಿಕ ಬದುಕು*
ರವಿಯಣ್ಣನವರು ಯಾವುದೇ ರಾಜಕೀಯ ಆಸಕ್ತಿಯಿಂದ ಹೋರಾಟಗಳನ್ನು ಮಾಡಲಿಲ್ಲ. ಯಾವುದೇ ಅಧಿಕಾರವಿರಲಿ, ಅಧಿಕಾರವಿರದೇ ಇರಲಿ, ಸಮಚಿತ್ತವಾಗಿ ಸಾರ್ವಜನಿಕ ಜೀವನವನ್ನು ನಡೆಸಿಕೊಂಡು ಬಂದಿದ್ದಾರೆ. ಅವರ ಮಾರ್ಗದರ್ಶನ ಸದಾ ಕಾಲ ನಮಗಿರಲಿ. ದಾವಣಗೆರೆಯ ಜನರು ಕಠಿಣ ಪರಿಶ್ರಮಿಗಳಾಗಿದ್ದು, ವ್ಯಾಪಾರದಲ್ಲಿ ತೊಡಗಿರುವವರು. ಅಂತೆಯೇ ಅವರು ಮಾಡುವ ದಾನಧರ್ಮದ ಕಾರ್ಯಗಳಿಂದ ಅವರ ವ್ಯಕ್ತಿತ್ವಕ್ಕೆ ಮೆರುಗು ನೀಡುತ್ತದೆ ಎಂದರು.
*ರವಿಯಣ್ಣ , ಅನುಭವ ಬುತ್ತಿ :*
ಶ್ರೀ ಶಾಮನೂರು ಶಿವಶಂಕರಪ್ಪ ಹಾಗೂ ಶ್ರಿ ಸಿದ್ದೇಶ್ವರರು ಬಡವರಪರ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಇವರೆಲ್ಲರ ಸತ್ಕಾರ್ಯಗಳಿಂದ ಜನರಿಗೆ ಒಳಿತುಂಟಾಗುತ್ತಿದೆ. 77 ವರ್ಷದ ರವಿಯಣ್ಣ, ಅನುಭವದ ಬುತ್ತಿಯಾಗಿದ್ದಾರೆ. ಅವರೊಬ್ಬ ಮುತ್ಸದ್ದಿ, ಒಬ್ಬ ರಾಜಕಾರಣಿಯ ಕಣ್ಣು ಮುಂದಿನ ಚುನಾವಣೆಯ ಮೇಲಿದ್ದರೆ, ಒಬ್ಬ ಮುತ್ಸದ್ದಿಯ ಕಣ್ಣು ಮುಂದಿನ ಜನಾಂಗದ ಮೇಲಿರುತ್ತದೆ. ಅವರ ಅನುಭವ ಇಂದಿನ ಯುವಜನತೆಗೆ ಮಾರ್ಗದರ್ಶನವನ್ನು ನೀಡಲಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳು ಶಾಸಕ ಎಸ್.ಎ. ರವೀಂದ್ರನಾಥ್ ದಂಪತಿಗಳನ್ನು ಸನ್ಮಾನಿಸಿದರು. ಸಮಾರಂಭದಲ್ಲಿ ಸಿರಿಗೆರೆಯ ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಸಂಸದ ಜಿ.ಎಂ.ಸಿದ್ದೇಶ್ವರ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ, ಮತ್ತಿತರರು ಉಪಸ್ಥಿತರಿದ್ದರು.
[26/11, 6:11 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕೇಂದ್ರ ಹಣಕಾಸಿನ ಸಚಿವ ನಿರ್ಮಲಾ ಸೀತಾರಾಮನ್, ಏಟ್ರಿಯಾ ಗುಂಪಿನ ಅಧ್ಯಕ್ಷ ಸಿ.ಎಸ್.ಸುಂದರರಾಜು ಮೊದಲಾದವರು ಉಪಸ್ಥಿತರಿದ್ದರು.
Post a Comment