cm, ವಿಶೇಷ, ಇಂದು

[21/11, 1:46 PM] Cm Ps: ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್ ಐಡಿಎಲ್ ವತಿಯಿಂದ ನಿರ್ಮಾಣವಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಭೂಮಿ ಪೂಜೆ ನೆರವೇರಿಸಿದರು. 
ಈ ಸಂದರ್ಭದಲ್ಲಿ ಶಾಸಕರಾದ ಸತಿಶ್ ರೆಡ್ಡಿ, ಕೆಆರ್ ಐಡಿಎಲ್ ಅಧ್ಯಕ್ಷ ಎಂ. ರುದ್ರೇಶ್, ಪಂಚಾಯತ್ ರಾಜ್ ಇಲಾಖೆಯ ಎಸಿಎಸ್ ಉಮಾ ಮಹಾದೇವನ್, ಕೆಆರ್ ಐಡಿಎಲ್ ಎಂಡಿ ಎಂ. ಜಿ. ಹಿರೇಮಠ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
[21/11, 3:08 PM] Cm Ps: *ಬಿಬಿಎಂಪಿ ಹಾಗೂ ಬಿಡಿಎ ಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು,ನವೆಂಬರ್  21 :

 ಬಿಬಿಎಂಪಿ ಹಾಗೂ ಬಿಡಿಎ ಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್ ಐಡಿಎಲ್ ವತಿಯಿಂದ ನಿರ್ಮಾಣವಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 

*ವಾಣಿಜ್ಯ ಸಂಕೀರ್ಣದಲ್ಲಿ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಬೇಕು :*
ಬೆಂಗಳೂರು ನಾಲ್ಕೂ ದಿಕ್ಕುಗಳಲ್ಲಿ ಅತ್ಯಂತ  ವೇಗವಾಗಿ ಬೆಳೆಯುತ್ತಿರುವ ನಗರ. ಇದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ, ಇಂಜಿನಿಯರ್ಸ್, ಜಂಟಿಆಯುಕ್ತರನ್ನೂ ನೇಮಿಸಲಾಗುತ್ತಿದೆ. ಆದರೆ ಈ ಅಧಿಕಾರಿಗಳಿಗೆ ಸ್ಥಳದ ಅಭಾವದಿಂದ ಮುಖ್ಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಪ್ರತಿ ವರ್ಷ ಸರ್ಕಾರಿ ಕಚೇರಿಗಳ ನಿರ್ಮಾಣಕ್ಕೆ ಸರ್ಕಾರ ಹಣ ವ್ಯಯಿಸುತ್ತದೆ. ಕೆಲವೊಮ್ಮೆ ಸ್ಥಳದ ಅಭಾವ ವಿರುತ್ತದೆ. ಸರ್ಕಾರದ ಅಧೀನದ  ಕೆಆರ್ ಡಿ ಎಲ್ ಸಂಸ್ಥೆ ಮುಖಾಂತರ ಇಂದು ಶಂಕುಸ್ಥಾಪನೆಗೊಂಡಿರುವ ವಾಣಿಜ್ಯ ಸಂಕೀರ್ಣದ ಮಾದರಿಯಲ್ಲಿಯೇ ವಾಣಿಜ್ಯ ಚಟುವಟಿಕೆ  ಹಾಗೂ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಬಹುದಾದ ರಾಜ್ಯದ ಹಲವೆಡೆ ಕಟ್ಟಡಗಳ ನಿರ್ಮಾಣಕ್ಕೆ ತೀರ್ಮಾನವನ್ನು ಕೈಗೊಳ್ಳಲಾಗುವುದು. ಬಿಜಾಪುರ ಮತ್ತು ಮಂಗಳೂರಿನಲ್ಲಿ ಇಂತಹುದೇ ಯೋಜನೆಯನ್ನು ಈಗಾಗಲೇ ಕೈಗೆತ್ತಿಗಕೊಂಡಿದ್ದು, ಈ ಯೋಜನೆಯನ್ನು ಕೆಆರ್ ಡಿ ಎಲ್ ಸಂಸ್ಥೆ ರಾಜ್ಯದ ಉಳಿದ ಜಿಲ್ಲಾ ಕೇಂದ್ರಗಳಲ್ಲಿಯೂ ನಿರ್ಮಿಸಬೇಕು ಎಂದರು.

ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ ತನ್ನದೇ ಆದ ಆಸ್ತಿಗಳ ಸೃಜನೆ ಹಾಗೂ ತನ್ನದೇ ಆದ ಗುರುತರ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದೆ. ವಾಣಿಜ್ಯ ಸಂಕೀರ್ಣವೂ ಸರ್ಕಾರದ ಆಸ್ತಿಯಾಗುತ್ತದೆ. ಬೆಂಗಳೂರಿನಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಿ, ಪ್ರತಿ ವರ್ಷವೂ ಈ ಸರ್ಕಾರದ ಆಸ್ತಿಯಿಂದ ಆದಾಯ ಪಡೆಯಬಹುದಾಗಿದ್ದು, 91 ಕೋಟಿ ರೂ. ವೆಚ್ಚದಲ್ಲಿ 9 ಮಹಡಿಗಳ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಈ ಭಾಗದ ಜನರಿಗೆ ಬಹಳ ಅವಶ್ಯಕತೆಯಿತ್ತು. ಸರ್ಕಾರಿ ಆಸ್ತಿಯನ್ನು ಖಾಸಗಿಯವರಿಗೆ ವಹಿಸಿಕೊಡಲಾಗುತ್ತದೆ.. ಖಾಸಗಿ ಸಹಭಾಗಿತ್ವದಲ್ಲಿ ಇಂತಹ ಕಟ್ಟಡಗಳನ್ನು ನಿರ್ಮಿಸಿದರೆ ಸರ್ಕಾರದ ಲಾಭ ಬರುವುದಿಲ್ಲ ಎಂದರು.

*ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ 12 ಹೈಡೆನ್ಸಿಟಿ ರಸ್ತೆ ನಿರ್ಮಾಣ :*
ಬೆಂಗಳೂರು ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿದೆ. ಬೆಂಗಳೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ದಿನನಿತ್ಯವೂ ಬರುತ್ತಾರೆ. ಭಾರತದಲ್ಲಿ ನವದೆಹಲಿಯಂತೆ ಬೆಂಗಳೂರಿಗೂ ದೊಡ್ಡ ಸಂಖ್ಯೆಯಲ್ಲಿ ವಿದೇಶಿಯರು ಭೇಟಿ ನೀಡುತ್ತಾರೆ. ಪ್ರತಿ ದಿನ 5000 ಕ್ಕಿಂತ ಹೆಚ್ಚು  ಹೊಸ ವಾಹನಗಳು ರಸ್ತೆಗಿಳಿಯುತ್ತವೆ. ನಗರದಲ್ಲಿ 1.30 ಕೋಟಿ ಜನಸಂಖ್ಯೆಯಿದ್ದು, 1.56 ಕೋಟಿ ವಾಹನ ಸಂಖ್ಯೆಯಿದೆ. ಅಂತರಾಷ್ಟ್ರೀಯ ನಗರಗಳಲ್ಲಿ ಜನದಟ್ಟಣೆ ಇದ್ದೇ ಇರುತ್ತದೆ. ಈ ಜನದಟ್ಟಣೆಯ ಸವಾಲನ್ನು ಎದುರಿಸಲು ಹತ್ತು ಹಲವಾರು ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. 12 ಹೈ ಡೆನ್ಸಿಟಿ ರಸ್ತೆ ನಿರ್ಮಾಣಕ್ಕೆ 280 ಕೋಟಿ ರೂ.ಗಳಿಗೆ ಮಂಜೂರಾತಿ ನೀಡಲಾಗಿದೆ. ಇವುಗಳು ದೇಶದ ವಿವಿಧ ಪ್ರಮುಖ ನಗರಗಳನ್ನು ಬೆಂಗಳೂರಿಗೆ ಸಂಪರ್ಕಿಸುವ ರಸ್ತೆಗಳಾಗಿವೆ. ನಗರೋತ್ಥಾನ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಸುಮಾರು 8000 ಕೋಟಿ ರೂ.ಗಳನ್ನು ವಿವಿಧ ಯೋಜನೆಗಳಡಿ ನೀಡಲಾಗಿದೆ ಎಂದರು.

*ವಾಹನ ದಟ್ಟಣೆಯ ಪ್ರದೇಶಗಳಲ್ಲಿ ಹೊಸ ಸಂಚಾರ ಪೊಲೀಸ್ ಠಾಣೆಗಳ ಸ್ಥಾಪನೆಗೆ ಸೂಚನೆ :*

ನಗರದಲ್ಲಿ ವಾಹನ ದಟ್ಟಣೆಯ ನಿರ್ವಹಣೆಗಾಗಿ ವಿಶೇಷ ಆಯುಕ್ತರನ್ನು  ನೇಮಿಸಲಾಗಿದೆ. ವಿಶೇಷ ಸಾರಿಗೆ ಆಯುಕ್ತರ ಕಚೇರಿಯನ್ನು ಹಾಗೂ ನೂತನ ಸಂಚಾರ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು. ಹೆಚ್ಚಿನ ವಾಹನ ಸಂದಣಿಯಿರುವ ಪ್ರದೇಶಗಳಿಗೆ ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ನಿರ್ಮಾಣಕ್ಕೆ ಅನುಮೋದನೆ ಪಡೆಯಲು ಬೆಂಗಳೂರಿನ ನಗರ ಆಯುಕ್ತರಿಗೆ ಸೂಚಿಸಲಾಗಿದೆ. ನಗರದಲ್ಲಿ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಮೂಲಸೌಕರ್ಯವನ್ನೂ ಅಭಿವೃದ್ಧಿಪಡಿಸಲಾಗುತ್ತಿದೆ. ನಿರ್ಭಯಾ ಯೋಜನೆಯಡಿ ನಗರದಾದ್ಯಂತ 7500 ಇಂಟೆಲಿಜೆನ್ಸ್ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ತಡೆರಹಿತ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಬೆಂಗಳೂರಿನಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ವ್ಯವಸ್ಥಿತಗೊಳಿಸಲು ಮಾಸ್ಟರ್ ಪ್ಲಾನ್ ನ್ನು ರೂಪಿಸಲಾಗುವುದು. ರಾಜಾ ಕಾಲುವೆ ಹಾಗೂ ಉಪಕಾಲುವೆಗಳ  ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇದಕ್ಕೆ ಬೇಕಾದ ಅನುದಾನವನ್ನು ನೀಡಲಾಗಿದೆ.  ಮೇಲಿನ ಎಲ್ಲಿನ ಯೋಜನೆಗಳಿಂದ ಬೆಂಗಳೂರು ನಗರವನ್ನು ಅಭಿವೃದ್ಧಿ ಪಥದಲ್ಲಿ ಸರ್ಕಾರ ಕೊಂಡೊಯ್ಯಲಿದೆ ಎಂದರು ತಿಳಿಸಿದರು.

*ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಾಯಕ:*
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿಯವರು ಜನಪ್ರಿಯ ಶಾಸಕರು ಮಾತ್ರವಲ್ಲ ಜನೋಪಯೋಗಿ ಶಾಸಕರಾಗಿದ್ದಾರೆ. ಜನರ ಸಮಸ್ಯೆಗಳನ್ನು ಅರಿತು, ಪರಿಹಾರವನ್ನು ನೀಡಿ, ಜನಸಾಮಾನ್ಯರ ಬದುಕು ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. 80 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಈ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಾಯಕರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಸತಿಶ್ ರೆಡ್ಡಿ, ಕೆಆರ್ ಐಡಿಎಲ್ ಅಧ್ಯಕ್ಷ ಎಂ. ರುದ್ರೇಶ್, ಪಂಚಾಯತ್ ರಾಜ್ ಇಲಾಖೆಯ ಎಸಿಎಸ್ ಉಮಾ ಮಹಾದೇವನ್, ಕೆಆರ್ ಐಡಿಎಲ್ ಎಂಡಿ ಎಂ. ಜಿ. ಹಿರೇಮಠ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
[21/11, 5:36 PM] Cm Ps: ಮಾಜಿ ಸಂಸದ ಪ್ರಭಾಕರ್ ಕೋರೆಯವರು  ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ  ನಡೆಸಿದರು.

ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ. ಕೆ,  ಆಯುಕ್ತ  ಡಿ.ರಂದೀಪ್ ಮತ್ತಿತರರು   ಉಪಸ್ಥಿತರಿದ್ದರು.
[21/11, 5:50 PM] Cm Ps: 7 ನೇ ವೇತನ ಪರಿಷ್ಕರಣೆ ಆಯೋಗದ ಅಧ್ಯಕ್ಷ ಡಾ: ಸುಧಾಕರ ರಾವ್ ಅವರು ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು  ಭೇಟಿ ಮಾಡಿ ಮಾತುಕತೆ ನಡೆಸಿದರು.

ಆಯೋಗದ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[21/11, 5:54 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ  ಇಂದು ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು. 

ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ,  ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ವಸತಿ ಇಲಾಖೆ ಕಾರ್ಯದರ್ಶಿ ಡಾ: ಜೆ.ರವಿಶಂಕರ್,   ಗೃಹ ಮಂಡಳಿ ಆಯುಕ್ತೆ ಕವಿತಾ.ಎಸ್.ಮಣ್ಣಿಕೇರಿ,  ಮುಖ್ಯಮಂತ್ರಿಗಳ  ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,  ಮೊದಲಾದವರು ಉಪಸ್ಥಿತರಿದ್ದರು.
[21/11, 6:40 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಪಶುಸಂಗೋಪನೆ ಇಲಾಖೆ ವಿಷಯಗಳ ಕುರಿತು ಸಭೆ ನಡೆಸಿದರು. ಈ ಸಂದರ್ಭದಲ್ಲಿ  ಕೆಎಂಎಫ್ ಅಧ್ಯಕ್ಷ ಬಾಲಚಂದ್ರ‌ ಜಾರಕಿಹೊಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಹಣಕಾಸು ಇಲಾಖೆ ಎಸಿಎಸ್ ಐಎಸ್ ಎನ್ ಪ್ರಸಾದ್ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
[21/11, 8:01 PM] Cm Ps: *ಕಾಡಾನೆ ಹಾವಳಿ: ಪ್ರತಿ  ಜಿಲ್ಲೆಗೊಂದು  ಆನೆ ಟಾಸ್ಕ್ ಫೋರ್ಸ್ ರಚನೆಗೆ ಸರ್ಕಾರಿ ಆದೇಶ*

ಬೆಂಗಳೂರು, ನವೆಂಬರ್ 21 : ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿ, ಸರ್ಕಾರಿ ಆದೇಶ ಹೊರಬಿದ್ದಿದೆ. 

ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ  ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ  ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು.

ಟಾಸ್ಕ್ ಫೋರ್ಸ್ ಗಳನ್ನು ತಕ್ಷಣ ದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು,  ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ  ಈ ಕೆಳಕಂಡಂತೆ  ಕಾರ್ಯನಿರ್ವಹಿಸಬೇಕಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.  

1. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುವುದು, ಜನವಸತಿ, ಕೃಷಿ ಪ್ರದೇಶ  ಹಾಗೂ ಕಾಫಿ ಎಸ್ಟೇಟ್ ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ  ಆನೆಗಳನ್ನು ಹಿಮ್ಮೆಟ್ಟಿಸುವುದು ಮುಂತಾದ ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ  ಕೈಗೊಳ್ಳಬೇಕು. 

2. ಕಾಡಾನೆ ಹಾವಳಿ ಕಂಡುಬರುವ ಸ್ಥಳಗಳಲ್ಲಿ ಆನೆಗಳ ಚಲನವಲನ ಗಳ ಬಗ್ಗೆ  ಮಾಹಿತಿ ನೀಡುವುದು ಹಾಗೂ ಅರಣ್ಯ ಪ್ರದೇಶದೊಳಗೆ ಸಂಚರಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು. 


3. ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆ ಯನ್ನು ಪ್ರಚುರಪಡಿಸುವುದು. 

4. ಆನೆಗಳನ್ನು ಹಿಮ್ಮೆಟ್ಟಿಸಲು    ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ  ಸಲಕರಣೆಗಳನ್ನು ಅರಣ್ಯ ಪಡೆ ಮುಖ್ಯಸ್ಥರು ಒದಗಿಸುವುದು

5. ಅರಣ್ಯ ಪಡೆ ಮುಖ್ಯಸ್ಥರು  ಜಿಲ್ಲಾ ಟಾಸ್ಕ್ ಫೋರ್ಸ್ ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷ ಕರನ್ನು ಸ್ಥಳ ನಿಯುಕ್ತಿಗೊಳಿಸಿ ಕೂಡಲೇ ಆದೇಶ ಹೊರಡಿಸುವುದು.

6. ಆನೆ ಹಾವಳಿ ಪ್ರದೇಶಗಳಿಗೆ ಕೂಡಲೇ ತಲುಪಲು ಅನುಕೂಲವಾಗುವಂತೆ  ಪ್ರತಿ ಜಿಲ್ಲಾ ಟಾಸ್ಕ್ ಪ್ಫೋರ್ಸ್ ಗೆ ಮೂರು ಬೊಲೆರೋ ಜೀಪ್ ಗಳನ್ನು ಒದಗಿಸುವುದು ಹಾಗೂ ಕ್ಯಾಂಟರ್ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನಿಯೋಜಿಸುವುದು. 

7. ಆನೆಗಳನ್ನು ಹಿಮ್ಮೆಟ್ಟಿಸುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಸಹಾಯ ಪಡೆಯುವುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
[21/11, 8:11 PM] Cm Ps: *ಪ್ರೆಷರ್ ಕುಕ್ಕರ್ ಸ್ಪೋಟ ಪ್ರಕರಣ – ತನಿಖೆ ಚುರುಕುಗೊಂಡಿದೆ :*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಪ್ರೆಷರ್ ಕುಕ್ಕರ್ ಸ್ಪೋಟದ ತನಿಖೆ ಚುರುಕುಗೊಂಡಿದೆ. ಪ್ರಮುಖ ಆರೋಪಿಯ ವೈಯಕ್ತಿಕ ಮಾಹಿತಿಗಳನ್ನು ಪೊಲೀಸರು ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸಂಪರ್ಕ ಯಾವ ಊರುಗಳಲ್ಲಿದೆ ಎಂಬುದರ ಮಾಹಿತಿಯೂ ಲಭಿಸಿದೆ. ಆತನ ನಿಜವಾದ ಹೆಸರು ಹಾಗೂ ಗುರುತು ಪತ್ತೆಯಾದ ನಂತರ , ಆತ ಬೇರೆಯಾವ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ಆ ಜಾಡನ್ನು ಹಿಡಿದು ತನಿಖೆ ನಡೆಯುತ್ತಿದೆ ಎಂದರು.

*ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚನೆ :*

ಆರೋಪಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಕುಟುಂಬ ವರ್ಗದವರು ಆತನ ಗುರುತಿಸಿರುವುದು ಪ್ರಮುಖ ಬೆಳೆವಣಿಗೆ. ಇಲ್ಲಿಯವರೆಗಿನ ಎಲ್ಲ ಮಾಹಿತಿಗಳನ್ನು ರಾಷ್ಟ್ರೀಯ ತನಿಖಾ ದಳ ಹಾಗೂ ಐಬಿ ಗೆ ನೀಡಲಾಗಿದೆ. ಇದೇ ರೀತಿಯ ಕೃತ್ಯಗಳು ಬೇರೆ ಕಡೆಯೂ ಮಾಡಿದ್ದರೆ ಎಂಬುದು, ಈ ಘಟನೆಯ ಹಿಂದಿನ ಸಂಘಟನೆ ಬಗ್ಗೆ ಮಾಹಿತಿಗಳು ತಿಳಿಯಬೇಕಿದೆ. ಈ ನಿಟ್ಟಿನಲ್ಲಿಯೂ ತನಿಖೆ ಮುಂದುವರೆದಿದ್ದು, ವಿಷಯಗಳು ಲಭ್ಯವಾದ ನಂತರ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಭಯೋತ್ಪಾದಕ ನಿಗ್ರಹ ದಳ, ಆಂತರಿಕ ಸುರಕ್ಷತಾ ವಿಭಾಗಗಳು ಸಂಯೋಜಿಸಿ ಕಾರ್ಯನಿರ್ವಹಿಸಬೇಕು. ತನಿಖೆಯನ್ನು ಚುರುಕುಗೊಳಿಸಿ , ಹಿಂದಿರುವ ಘಾತುಕ ಶಕ್ತಿಗಳನ್ನು ಬಹಿರಂಗಗೊಳಿಸಬೇಕು ಎಂದರು.

ಸಿದ್ದರಾಮಯ್ಯನವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವಿಫಲವಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,ಕಾಂಗ್ರೆಸ್ ಕಾಲದಲ್ಲಿಯೂ ಇಂತಹ ಹಲವಾರು ಘಟನೆಗಳು ಸಂಭವಿಸಿವೆ. ಇದು ರಾಜಕೀಯ ಪ್ರೇರಿತ ಹೇಳಿಕೆ. ಇಂತಹ ಹೇಳಿಕೆಗಳಿಗೆ ಮಹತ್ವ ನೀಡುವುದಿಲ್ಲ ಎಂದರು.
[21/11, 8:14 PM] Cm Ps: *ಹಾಲಿನ ದರ ಪರಿಷ್ಕರಣೆ ವಿಚಾರ*

*ಗ್ರಾಹಕರಿಗೆ ಹೊರೆಯಾಗದ ಹಾಗೂ ರೈತರಿಗೆ ಅನ್ಯಾಯವಾಗದ ಸೂತ್ರ ರೂಪಿಸಲು ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ನವೆಂಬರ್ 21 :

 ಗ್ರಾಹಕರಿಗೆ ಹೊರೆಯಾಗದಂತೆ  ಹಾಗೂ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕೆಂದು ಕೆ ಎಂ ಫ್ ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಾಲಿನ ದರ ಏರಿಕೆಯ ಬಗ್ಗೆ ಪ್ರತಿಕ್ರಯಿಸಿ, ವಿವಿಧ ರಾಜ್ಯಗಳಲ್ಲಿರುವ ಹಾಲಿನ ದರ ಹಾಗೂ ಸಂಬಂಧಿಸಿದ ಸಂಪೂರ್ಣ ಮಾಹಿತಿ,ಕೆಎಂಎಫ್ ಸಂಸ್ಥೆಗೆ ತಗಲುತ್ತಿರುವ ವೆಚ್ಚ,ಹಾಲಿನ ದರ ಏರಿಕೆಗೆ  ಕಾರಣಗಳು, ಸಂಸ್ಥೆಯಲ್ಲಿ ಆಗುತ್ತಿರುವ ಸೋರಿಕೆಗಳು,ನಷ್ಟಗಳನ್ನು ತಡೆಗಟ್ಟಲು ಸಂಸ್ಥೆಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ. ಗ್ರಾಹಕ ಹಾಗೂ ರೈತನಿಗೆ ಅನುಕೂಲವಾಗುವ ಸೂತ್ರವನ್ನು ಎರಡು ದಿನಗಳಲ್ಲಿ  ರೂಪಿಸಿಕೊಂಡು, ಕೆಎಂಎಫ್ ನಿರ್ದೇಶಕರ ಮಂಡಳಿ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. 3 ರೂ. ದರ ಹೆಚ್ಚಳ ಮಾಡುವುದು ಬೇಡ  , ಆದರೆ ರೈತರು ಹಾಗೂ ಗ್ರಾಹಕರ  ಹಿತದೃಷ್ಟಿಯಿಂದ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕೆಂದು ಸಲಹೆ ನೀಡಲಾಗಿದೆ ಎಂದರು.

 *ಗ್ರಾಹಕ ಹಾಗೂ ರೈತನ ಹಿತಚಿಂತನೆ ಸರ್ಕಾರದ ಕರ್ತವ್ಯ :*
ಕೆಎಂಎಫ್ ಕೂಡ ಸರ್ಕಾರದ ಒಂದು ಅಂಗವಾಗಿದ್ದು, ರೈತರಿಗೆ ಪ್ರೋತ್ಸಾಹ ಧನ, ಶಾಲಾ ಮಕ್ಕಳಿಗೆ ಹಾಲು ನೀಡಲಾಗುತ್ತಿದೆ. ಗ್ರಾಹಕರ ಹಾಗೂ ರೈತರ ಹಿತಚಿಂತನೆ ಮಾಡುವ ಕರ್ತವ್ಯ ಸರ್ಕಾರದ್ದಾಗಿದ್ದು, ಕೆಎಂಎಫ್ ಗೆ ಮಾರ್ಗದರ್ಶನ ನೀಡಲಾಗಿದೆ. ಹಾಲಿನ ದರ ಕಾಲಕಾಲಕ್ಕೆ ಬದಲಾವಣೆಯಾಗುತ್ತದೆ. ಈ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳೂ ಸ್ಪರ್ಧೆಯಲ್ಲಿವೆ. ಈ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕೆಂದು ಕೆಎಂಎಫ್ ಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
[21/11, 8:26 PM] Cm Ps: ಬೆಂಗಳೂರಿನ ಅಕ್ಷರ ಧಾಮ ಸ್ವಾಮಿ ನಾರಾಯಣ ಮಂದಿರದ ಸ್ವಾಮೀಜಿ ಸಾದು ಸರಳ ಜೀವನದಾಸ ಹಾಗೂ ಸಾಧು ಭಕ್ತಿ ವೇದಾಂತದಾಸ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಂದಿರದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಹಿತ್ ಸಹಾ ಉಪಸ್ಥಿತರಿದ್ದರು.
[21/11, 8:39 PM] Cm Ps: *ಫೆಬ್ರವರಿ  ಅಂತ್ಯದೊಳಗೆ 7 ಲಕ್ಷ  ಮನೆಗಳನ್ನು ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ*
ಬೆಂಗಳೂರು,  ನವೆಂಬರ್ 21: ಫೆಬ್ರವರಿ  ಅಂತ್ಯದೊಳಗೆ 7 ಲಕ್ಷ  ಮನೆಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 

ಅವರು ಇಂದು ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ನಿರ್ಮಾಣದ ವಿವಿಧ ಹಂತಗಳಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಇದೊಂದು ಆಂದೋಲನದ ರೀತಿಯಲ್ಲಿ ಕೈಗೊಂಡು ಅಗತ್ಯವಿರುವ ಸಿಬ್ಬಂದಿ ಪೂರೈಸುವುದಾಗಿ ತಿಳಿಸಿದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು ಎಂದು ಸೂಚಿಸಿದರು. 

ಎಲ್ಲಾ ಕೆಡಿಪಿ ಸಭೆಗಳಲ್ಲಿ ವಿವಿಧ ವಸತಿ ಯೋಜನೆಗಳಡಿ  ಗೃಹ ನಿರ್ಮಾಣ ಪ್ರಮುಖ ವಿಷಯವಾಗಬೇಕು. ಹಿಂದಿನ ವರ್ಷಗಳ ಮನೆಗಳ ಪೈಕಿ  2 ಲಕ್ಷ ಹೆಚ್ಚಿನ ಮನೆಗಳು ಹಾಗೂ  ಪ್ರಸಕ್ತ ಸಾಲಿನ  2 ರಿಂದ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.  

ನಗರ ಪ್ರದೇಶಕ್ಕೆ ಸಂಬಂಧಿಸಿದಂತೆ ಖಾಸಗಿ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು ಸಾಲ ನೀಡುವ ನಿಯಮಗಳ ಬಗ್ಗೆ ಚರ್ಚಿಸಲು ಸೂಚಿಸಿದರು. 

20 ಸಾವಿರ ಮನೆ ನಿರ್ಮಾಣ ಮಾಡಲು ಅನುದಾನದ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು. 
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ ಒಟ್ಟು 1089 ಕೋಟಿ ಲಭ್ಯವಿದ್ದು, ಫಲಾನುಭವಿಗಳು ನೀಡಬೇಕಿರುವ ಅನುದಾನ ಸರ್ಕಾರವೇ ಸಾಲ ನೀಡಿ, ಫಲಾನುಭವಿಗಳು  ಹಣ ಮರುಪಾವತಿ ಮಾಡುವ ಷರತ್ತು ವಿಧಿಸಿ , ಕಂತಿನ ಮೊತ್ತವನ್ನು  ಸರ್ಕಾರಕ್ಕೆ ಮರುಪಾವತಿ ಮಾಡುವಂತೆ ಸಿಎಂ ಸೂಚಿಸಿದರು.

ಸಭೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ,  ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ವಸತಿ ಇಲಾಖೆ ಕಾರ್ಯದರ್ಶಿ ಡಾ: ಜೆ.ರವಿಶಂಕರ್,   ಗೃಹ ಮಂಡಳಿ ಆಯುಕ್ತೆ ಕವಿತಾ.ಎಸ್.ಮಣ್ಣಿಕೇರಿ,  ಮುಖ್ಯಮಂತ್ರಿಗಳ  ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,  ಮೊದಲಾದವರು ಉಪಸ್ಥಿತರಿದ್ದರು.
[21/11, 10:02 PM] Cm Ps: *ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ನವೆಂಬರ್ 21 :

 ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ. ದೇಶದಲ್ಲಿ ಶಾಂತಿ ಕದಡುವ ಯಾವುದೇ ಶಕ್ತಿಯನ್ನು ಯಾರೂ ಬೆಂಬಲಿಸಬಾರದು. ಎಲ್ಲರೂ ಒಟ್ಟಾಗಿ ದೇಶ ಕಟ್ಟುವ ಕೆಲಸ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು* *ಅಲ್ಪಸಂಖ್ಯಾತರ* *ಕಲ್ಯಾಣ* , *ಹಜ್ ಮತ್ತು ವಕ್ಫ್* ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು *ಉರ್ದು ಅಕಾಡೆಮಿ ಇದರ* ನೂತನ ಕಛೇರಿಗಳ ಸಂಕೀರ್ಣ “ *ಕೆ.ಎಂ.ಡಿ.ಸಿ. ಭವನ”ದ* ಉದ್ಘಾಟಿಸಿ ಮಾತನಾಡಿದರು.

ಭಾರತದಲ್ಲಿ ಅನೇಕ ಧರ್ಮಗಳು ಹುಟ್ಟಿವೆ. ಎಲ್ಲರೂ ಮೊದಲು ನಮ್ಮ ದೇಶವನ್ನು ಪ್ರೀತಿಸೋಣ.  ಎಲ್ಲರೂ ಮಾತೃಭೂಮಿಯನ್ನು ಪೂಜಿಸಬೇಕು. ಶಿಕ್ಷಣ, ಉದ್ಯೋಗ, ಸಬಲೀಕರಣ ವನ್ನು ಸಾಧಿಸಲು ಅಲ್ಪಸಂಖ್ಯಾತರು ಸಂಘಟಿತರಾಗಬೇಕು. ದೇಶದ್ರೋಹದ ಕೃತ್ಯಗಳಿಗೆ ಯಾರೂಬೆಂಬಲ ನೀಡಬಾರದು ಮತ್ತು ಅಂತಹ ಕಿಡಿಗೇಡಿಗಳ ವಿರುದ್ಧ ಎದ್ದುನಿಲ್ಲಬೇಕೆಂದು ಅಲ್ಪಸಂಖ್ಯಾತರಿಗೆ ಕರೆ ನೀಡಿದರು. ಆಗ ಮಾತ್ರ ಸಮಾಜದಲ್ಲಿ ಸೌಹಾರ್ದತೆ ಬೆಳೆಯಲು ಸಾಧ್ಯ ಎಂದರು. ನನ್ನ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ನನಗೆ ಪ್ರಾರ್ಥನೆ ಮಾಡಿ ಎಂದು ತಿಳಿಸಿದರು.

*ಸಮುದಾಯದವರ ಚಿಂತನೆ ಬದಲಾಗಬೇಕು :*
ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಣ್ಣುಮಕ್ಕಳು ಬುದ್ಧಿವಂತರಿದ್ದಾರೆ. ಸಮುದಾಯದಲ್ಲಿ ಹೆಚ್ಚು ಜನ ಶಿಕ್ಷಣ ಪಡೆಯುತ್ತಿದ್ದಾರೆ.  21 ನೇ ಶತಮಾನ ಜ್ಞಾನದ ಶತಮಾನ. ಅಲ್ಪ ಸಂಖ್ಯಾತರನ್ನು ಕತ್ತಲಲ್ಲಿ ಇಡಲಾಗಿದೆ. ಸಮುದಾಯದವರ ಚಿಂತನೆ ಬದಲಾಗಬೇಕು. ನಾನು ಹೇಳೊದು ಕೆಲವರಿಗೆ ಇಷ್ಟ ಆಗೋದಿಲ್ಲ. ಅಲ್ಪ ಸಂಖ್ಯಾತ ಮಕ್ಕಳ ಕೈಯಲ್ಲಿ ಪೆನ್ನು ಪೆನ್ಸಿಲ್ ಇರಬೇಕೊ ಅವರ ಕೈಯಲ್ಲಿ ಪಾನಾ ಪಕ್ಕಡ್ ಇದೆ. ಬೆನ್ನ ಮೇಲೆ  ಸ್ಕೂಲ್ ಬ್ಯಾಗ್ ಇರಬೇಕೊ ಅವರ ಬೆನ್ನಮೇಲೆ ಜೋಳ, ಅಕ್ಕಿಯ ಚೀಲ‌ಇದೆ‌ ಅವರಿಗೆ ಓದುವ ಹಕ್ಕಿದೆ. ಈ ಬಗ್ಗೆ ಹಿಂದಿನ ಸರ್ಕಾರಗಳು ಏಕೆ ಯೋಚನೆ ಮಾಡಲಿಲ್ಲ ಎಂದರು.

 ಅಬ್ದುಲ್ ಅಜೀಂ ಅತ್ಯುತ್ತಮ ಅಧಿಕಾರಿಯಾಗಿದ್ದರು. ಅವರಂತೆ ಇಂದಿನ ಮಕ್ಕಳು ಯಶಸ್ವಿಯಾಗಬೇಕು. ನಮ್ಮ ಸರ್ಕಾರದ ಬಗ್ಗೆ ಆರೋಪ ಮಾಡುತ್ತಾರೆ. ನನ್ನ ಆರ್ಥಿಕ ಕಾರ್ಯದರ್ಶಿ ಶ್ರೀ ಜಾಫರ್  ಹಾಗೂ ಕೊವಿಡ್ ಸಂದರ್ಭದಲ್ಲಿ ಶ್ರಮವಹಿಸಿದ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ಶ್ರೀ ಜಾವೇದ್ ಅಖ್ತರ್ ಅಲ್ಪಸಂಖ್ಯಾತರು. ಈಗ ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿರ್ವಹಿಸಲು ವಿಶೇಷ ಆಯುಕ್ತರ ಹುದ್ದೆಗೆ ಶ್ರೀ  ಸಲೀಂ ಅವರನ್ನು ನೇಮಕ ಮಾಡಲಾಗಿದೆ ಎಂದರು.

*ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 1460 ಕೋಟಿ  ರೂ:*
ವಿದೇಶದಲ್ಲಿ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ‌, ಐಎಎಸ್ ಕೆಎಎಸ್ ತರಬೇತಿ ನಿಲ್ಲಿಸಲಾಗಿತ್ತು.ಅದನ್ನು ಪುನ: ಪ್ರಾರಂಭಿಸಲಾಗಿದೆ. ನಮ್ಮ ಸರ್ಕಾರ ಮೌಲಾನಾ ಆಜಾದ್ ಶಾಲೆ, 30 ಕ್ಕಿಂತ ಹೆಚ್ಚು ಸಿಬಿಎಸ್ ಸಿ ಕಲಿಸುವ ಅಬ್ದುಲ್ ಕಲಾಂ ಶಾಲೆಗಳು ಕರ್ನಾಟಕದಲ್ಲಿ ಯಶಸ್ವಿಯಾಗುತ್ತಿದೆ. ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ವೇತನ ಗಳನ್ನು ಡಿಬಿಟಿ ಮೂಲಕ ನೀಡಲಾಗುತ್ತಿದೆ.  ಅಲ್ಪಸಂಖ್ಯಾತರ ಶಾಲೆಗಳಿಗೆ 624 ಶಿಕ್ಷಕರನ್ನು ನಮ್ಮ ಸರ್ಕಾರ ನೇಮಕ ಮಾಡಿದೆ. ಈ ವರ್ಷ ಹಾಸ್ಟೆಲ್ ಗಳಲ್ಲಿ 2500 ಮಕ್ಕಳು ಹೆಚ್ಚುವರಿಯಾಗಿ ಸೇರಿಸಿಕೊಳ್ಳಲಾಗಿದೆ.1460 ಕೋಟಿ  ರೂ. ಅನುದಾನವನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿದೆ ಎಂದರು.

*ವಕ್ಪ್ ಆಸ್ತಿ ರಕ್ಷಣೆ:*
ವಕ್ಪ್ ಆಸ್ತಿ ವಶಪಡಿಸಿಕೊಳ್ಳುವವರೆಗೂ ವಕ್ಪ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು. ದೇವರ ಆಸ್ತಿ ಉಳಿಸುವ ಅವಕಾಶ ವಕ್ಪ್ ಅಧ್ಯಕ್ಷರಿಗೆ ಸಿಕ್ಕಿದೆ. ದೇವರ ಕೆಲಸ ಮಾಡಿ. ರಾಜ್ಯದಲ್ಲಿ 2500 ಎಕರೆ ವಕ್ಪ್ ಅಸ್ತಿ ಖಾಸಗಿಯವರಿಂದ ಕಬಳಿಕೆಯಾಗಿದೆ. ಅದನ್ನು ವಶಪಡಿಸಿಕೊಳ್ಳಲು ಸಮುದಾಯ ನಿಲ್ಲಬೇಕು. ನಿಮ್ಮ ಜೊತೆಗೆ ಸರ್ಕಾರವಿದೆ. ವಕ್ಫ್ ಮಂಡಳಿ ಮುಸ್ಲಿಂ ಸಮುದಾಯದ ಹಕ್ಕುಗಳ ರಕ್ಷಣೆಗೆ ಬದ್ಧರಾಗಿರಬೇಕು ಎಂದರು.

ಕ್ರಿಶ್ಚಿಯನ್ ಧರ್ಮ ಪ್ರಗತಿಪರ ಧರ್ಮ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರತಿ ಭಾನುವಾರ ಪ್ರಾರ್ಥಿಸುತ್ತಾರೆ. ಅವರ ಜೊತೆಗೂ ನನಗೆ ಒಳ್ಳೆಯ ಸಂಬಂಧ ಇದೆ. ಜೈನಧರ್ಮದ ಮಹಾವೀರರು ತ್ಯಾಗಮೂರ್ತಿಯಾಗಿದ್ದರು.ಶಾಂತಿ, ಅಹಿಂಸೆಯನ್ನು ಪ್ರತಿಪಾದಿಸಿರು ಎಂದು ತಿಳಿಸಿದರು.
[21/11, 11:20 PM] Cm Ps: *ಗಡಿವಿವಾದ: ಬಲಿಷ್ಠ ಹಿರಿಯ ವಕೀಲರ ತಂಡ ರಚನೆ* *ಸಿಎಂ ಬೊಮ್ಮಾಯಿ*
*ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತರಾಗಿದ್ದೇವೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ನವೆಂಬರ್ 21 : ಗಡಿವಿವಾದಗಳನ್ನು ಬಗೆಹರಿಸಲು  ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಇಂದು ತಮ್ಮ ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ಬಗ್ಗೆ   ಇಂದು ಸಭೆ ನಡೆಸಲಾಗಿದೆ. 
ತಂಡವು  ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ  ಹಿರಿಯ ವಕೀಲರಾದ ಉದಯ್ ಹೊಳ್ಳ , ಬೆಳಗಾವಿಯ ಮಾರುತಿ ಜಿರ್ಲೆ, ವಕೀಲರಾದ ರಘುಪತಿ ಅವರನ್ನೊಳಗೊಂಡಿದೆ ಎಂದರು. 

ವಕೀಲರ ತಂಡವು ಈಗಾಗಲೇ 2-3 ಬಾರಿ ಸಭೆ ಸೇರಿ ವಿಷಯಗಳ ಬಗ್ಗೆ  ಏನು ವಾದ ಮಾಡಬೇಕೆಂದು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಸಂಜೆ ಈ ವಕೀಲರೊಂದಿಗೆ ವೀಡಿಯೋ ಸಂವಾದ ನಡೆಸುತ್ತಿದ್ದು, ಈ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕರಿಗೆ ಹಾಗೂ ಎಲ್ಲಾ ಪಕ್ಷದ ನಾಯಕರಿಗೆ ಈಗಾಗಲೇ ಪತ್ರವನ್ನು ನಾಳೆ ಬೆಳಿಗ್ಗೆ ಕಳಿಸಿಕೊಡಲಾಗುತ್ತಿದೆ.  ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು. 

 ಮಾಹಾರಾಷ್ಟ್ರ  ಸಲ್ಲಿಸಿರುವ ಅರ್ಜಿಗೆ ಮಾನ್ಯತೆ ದೊರಕಿಲ್ಲ. ಮೆಂಟೇನಬಿಲಿಟಿ ಈವರೆಗೆ ಸಿಕ್ಕಿಲ್ಲ. ಸಿಗುವುದೂ ಇಲ್ಲ. ಮೆಂಟೇನಬಿಲಿಟಿ ಆಗಬೇಕೋ ಬೇಡವೋ ಎನ್ನುವ ಬಗ್ಗೆಯೇ ಇನ್ನೂ ಚರ್ಚೆಯಾಗುತ್ತಿದೆ. ಮುಖ್ಯ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯ ಇನ್ನೂ ಪರಿಗಣಿಸಿಲ್ಲ.ಮೆಂಟೇನಬಿಲಿಟಿ ಆಗುವುದಿಲ್ಲ, ಇದನ್ನು ಪರಿಗಣಿಸಬಾರದು ಎಂದು ವಾದಿಸಲು ನಾವು ಸಿದ್ಧರಿದ್ದೇವೆ. ಸಂವಿಧಾನ ಬದ್ಧವಾಗಿ 3 ನೇ ಕಲಂ ಪ್ರಕಾರ ರಾಜ್ಯ ಪುನರ್ ವಿಂಗಡನಾ ಕಾಯ್ದೆ ರಚನೆಯಾಯಿತು. ಕಾಯ್ದೆಯ ಪ್ರಕಾರ ಆಗಿದ್ದನ್ನು ಪುನರ್ ಪರಿಶೀಲನೇ ಮಾಡಿದ ಉದಾಹರಣೆ ಇಲ್ಲ ಹಾಗೂ ಅಂಥ ಸಂದರ್ಭವೂ ಒದಗಿಬಂದಿಲ್ಲ ಎಂದರು. 

*ಕಾಯ್ದೆಯಲ್ಲಿ ಬದಲಾವಣೆ ಮಾಡುವ ಹಕ್ಕು ಯಾರಿಗೂ  ಇಲ್ಲ*
ಮಹಾರಾಷ್ಟ್ರದಲ್ಲಿ ಗಡಿ ವಿವಾದವೇ ರಾಜಕೀಯ ವಸ್ತುವಾಗಿದೆ. ಯಾವುದೇ ಪಕ್ಷದ ಸರ್ಕಾರವಿದ್ದರೂ  ಎಲ್ಲಾ ಪಕ್ಷಗಳು ಕೂಡ ತಮ್ಮ ರಾಜಕೀಯ ಕಾರಣಕ್ಕಾಗಿ ಇದನ್ನು ಎತ್ತುವ ಕೆಲಸ ಮಾಡುತ್ತಿದ್ದಾರೆ. ಈವರೆಗೂ ಅವರು ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ಕರ್ನಾಟಕದ ಗಡಿ ರಕ್ಷಣೆ ಮಾಡಲು ಎಲ್ಲಾ ರೀತಿಯಲ್ಲಿ ಸಶಕ್ತರಾಗಿದ್ದೇವೆ. ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕನ್ನಡ ನಾಡು, ನುಡಿ, ನೀರಿನ ಬಗ್ಗೆ ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನಾವು ಒಂದಾಗಿ ಹೋರಾಟ ಮಾಡುವ ತೀರ್ಮಾನ ಮಾಡಿದ್ದೇವೆ.  ನ್ಯಾಯ ನಮ್ಮ ಪರವಾಗಿದೆ. ರಾಜ್ಯ ಪುನರ್ ವಿಂಗಡನಾ ಕಾಯ್ದೆಯಲ್ಲಿ ಬದಲಾವಣೆ ಮಾಡುವ ಹಕ್ಕು ಯಾರಿಗೂ  ಇಲ್ಲ. ಕನ್ನಡದ ಗಡಿ ರಕ್ಷಣೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

Post a Comment

Previous Post Next Post