cm, ವಿವಿಧ ಕಾರ್ಯಕ್ರಮ

[26/11, 7:35 PM] Cm Ps: ಬೆಂಗಳೂರಿನ ಆರ್ ಟಿ ನಗರದಲ್ಲಿ ನ್ಯೂಸ್ 18 ಕನ್ನಡ ಸುದ್ದಿವಾಹಿನಿ ಏರ್ಪಡಿಸಿದ್ದ ಕರುನಾಡ ಹಬ್ಬ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು. 
ಈ ಸಂದರ್ಭದಲ್ಲಿ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್,  ನ್ಯೂಸ್ 18 ದಕ್ಷಿಣ ಭಾರತದ ಸಂಪಾದಕಿಯ ಸಲಹೆಗಾರರಾದ ಡಿ.ಪಿ.ಸತೀಶ್, ಸಂಪಾದಕ ನಿಖಿಲ್ ಜೋಶಿ, ರಾಜಕೀಯ ವಿಭಾಗದ ಮುಖ್ಯಸ್ಥ ಚಿದಾನಂದ ಪಟೇಲ ಮತ್ತಿತರರು  ಹಾಜರಿದ್ದರು.
[26/11, 7:37 PM] Cm Ps: ಮುಖ್ಯಮಂತ್ರಿಗಳಿಂದ ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಉದ್ಘಾಟನೆ 

*ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ‌ ಕೋಟಿ ಬಂಡವಾಳ ಹೂಡಿಕೆ*: *ಸಿಎಂ ಬೊಮ್ಮಾಯಿ*
ಬೆಂಗಳೂರು, ನವೆಂಬರ್ 26: ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ‌ ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 

ಅವರು ಇಂದು  ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿ   ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು.

ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಪರ್ಯಾಯವಾಗಿ ನವೀಕರಣ ಇಂಧನ ಹೆಚ್ಚಿನ ಪ್ರಮಾಣದಲ್ಲಿ ‌ಬಳಕೆಯಾಗಲಿದೆ. 
ಪ್ರಮುಖವಾಗಿ ಹೈಡ್ರೊಜನ್ ಉದ್ಯಮದಲ್ಲಿ ‌ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, ಕಡಿಮೆ ದರದಲ್ಲಿ ಇಂಧನ ದೊರೆಯುವಂತೆ ಮಾಡಲು ಸಾಕಷ್ಟ ಸಂಶೋಧನೆ ನಡೆಯುತ್ತಿದೆ ಎಂದರು.

*ಮುಂದಿನ 5 ವರ್ಷಗಳಲ್ಲಿ ಎಲೆಕ್ಟಿಕ್ ವಾಹನಗಳ ದರ ಕಡಿಮೆಯಾಗಲಿದೆ*
ಮುಂದಿನ ಐದು ವರ್ಷಗಳಲ್ಲಿ ‌ನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗಲಿದ್ದು,  
ಎಲೆಕ್ಟಿಕ್ ವಾಹನಗಳ ದರವೂ ಕಡಿಮೆಯಾಗಲಿದೆ ಎಂದರು.


ರಾಷ್ಟ್ರೀಯ ಶಿಕ್ಷಣ ನೀತಿಯನ್ನು  ಜಾರಿಗೊಳಿಸಲು ಖಾಸಗಿಯವರ ಪಾತ್ರವೂ ದೊಡ್ಡದಿದೆ.  ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಹಯೋಗ‌ ಮಾಡಿಕೊಂಡು ಕಾರ್ಯ ನಿರ್ವಹಿಸಬಹುದು ಎಂದು ತಿಳಿಸಿದರು. 


ಭಾರತದಲ್ಲಿ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಇಲ್ಲಿ ಉದ್ಯೋಗ ಸೃಷ್ಟಿಸುವುದು ದೊಡ್ಡ ಜವಾಬ್ದಾರಿ‌. ಮಾನವ ಸಂಪನ್ಮೂಲ ಹಾಗೂ ತಂತ್ರಜ್ಞಾನ ಹೊಂದಾಣಿಕೆ ಮಾಡಿಕೊಂಡು ಶಿಕ್ಷಣ ನೀಡುವ ವ್ಯವಸ್ಥೆಯಾಗಬೇಕು ಎಂದರು. 

ಕೇಂದ್ರ ಹಣಕಾಸು  ಸಚಿವರಾದ ನಿರ್ಮಲಾ ಸೀತಾರಾಮನ್, ಏಟ್ರಿಯಾ ಗುಂಪಿನ ಅಧ್ಯಕ್ಷ  ಸಿ.ಎಸ್.ಸುಂದರರಾಜು ಮೊದಲಾದವರು ಉಪಸ್ಥಿತರಿದ್ದರು.
[26/11, 9:49 PM] Cm Ps: *ಇತರೆ ರಾಜ್ಯಗಳಲ್ಲಿರುವ ಕನ್ನಡ ಶಾಲೆಗಳನ್ನು ಬಲಗೊಳಿಸಲು  ಕಾರ್ಯಕ್ರಮ*ಸಿಎಂ ಬೊಮ್ಮಾಯಿ*
ಬೆಂಗಳೂರು, ನವೆಂಬರ್ 26: ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ದಿಯ ಜೊತೆಗೆ  ಬೇರೆ ರಾಜ್ಯಗಳಲ್ಲಿರುವ ಕನ್ನಡ ಶಾಲೆಗಳನ್ನು ಬಲಗೊಳಿಸಲು  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ನ್ಯೂಸ್ 18 ವಾಹಿನಿ ಹಮ್ಮಿಕೊಂಡಿದ್ದ ಕರುನಾಡ ಸಂಭ್ರಮ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

*ಕನ್ನಡಿಗರ ಅಸ್ಮಿತೆ ಉಳಿಸಬೇಕು*
ಭಾರತದಲ್ಲಿ ಕನ್ನಡಿಗರೂ ಎಲ್ಲಿಯೇ ಹೋದರೂ,  ಕನ್ನಡಿಗರು ಅಂತ ಗುರುತಿಸುತ್ತಾರೆ‌. ಕನ್ನಡ ನಮ್ಮ ಅಸ್ಮಿತೆ ನಾವು ಅದನ್ನು ಉಳಿಸಿಕೊಂಡು ಹೋಗಬೇಕು. 
ನಮ್ಮ ನಾಡು ಅತ್ಯಂತ ವಿಶಿಷ್ಟ ವಾಗಿದೆ. ಕರ್ನಾಟಕಕ್ಕೆ    'ಗಾಡ್ಸ್ ಲಿವಿಂಗ್  ಕಂಟ್ರಿ ಎನ್ನುವುದು ನಮ್ಮ ರಾಜ್ಯಕ್ಕೆ ನೀಡಿರುವ ಹೊಸ ಟ್ಯಾಗ್ ಲೈನ್ ಎಂದರು.

*ಸಮೃದ್ಧ ಕರ್ನಾಟಕ*
ನಮ್ಮ ರಾಜ್ಯದಲ್ಲಿ ಹುಟ್ಟುವ ನದಿಗಳು ಪೂರ್ವಾಭಿಮುಖವಾಗಿ ಹರಿದು ನಮ್ಮ ನಾಡನ್ನು ರಕ್ಷಿಸಿವೆ.
ಈ ನಾಡಿನಲ್ಲಿ ಹತ್ತು ಕೃಷಿ ವಲಯಗಳಿವೆ. ವರ್ಷದ ಮುನ್ನೂರು ದಿನ ಸೂರ್ಯನ ಬೆಳಕು ಬೀಳುತ್ತದೆ. ಸಾಹಿತ್ಯ ಕ್ಷೇತ್ರದಲ್ಲಿ 8 ಜನ ಜ್ಞಾನ ಪೀಠ ಪ್ರಶಸ್ತಿ ಪಡೆದಿದ್ದಾರೆ. ಯಾವ ರಾಜ್ಯದಲ್ಲಿಯೂ ಅಷ್ಟು ಪ್ರಶಸ್ತಿ ಪಡೆದಿಲ್ಲ. ಮೊದಲು ಪಶ್ಚಿಮ ಬಂಗಾಳದಲ್ಲಿ ಸಾಹಿತಿಗಳು ಹೆಚ್ಚಿದ್ದಾರೆ ಎಂಬ ಮಾತಿತ್ತು. ಬಂಗಾಳ ಇಂದು ಯೋಚಿಸುವುದನ್ನು ದೇಶ ನಾಳೆ ಯೋಚಿಸುತ್ತದೆ ಅಂತ ಮಾತಿತ್ತು. ಈಗ ಬೆಂಗಳೂರು ಇಂದು  ಯೋಚಿಸುವುದನ್ನು   ದೇಶ ನಾಳೆ ಯೋಚಿಸುತ್ತದೆ ಎಂದಾಗಿದೆ ಎಂದು ತಿಳಿಸಿದರು. 

*ಕನ್ನಡಿಗರು ಒಂದಾಗಿರಬೇಕು*

ಕನ್ನಡ ನಾಡಿನ ಅಸ್ಮಿತೆಯ ಬಗ್ಗೆ ಅಕ್ಕ ಪಕ್ಕದ ರಾಜ್ಯಗಳು ಮಾಡುತ್ತಿವೆ. ಈ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿರಬೇಕು ಎಂದರು.  

*ಮುಂದಿನ ಜನ್ಮದಲ್ಲೂ ಕನ್ನಡನಾದಲ್ಲೇ ಹುಟ್ಟುವೆ*
ನಾನು ಕನ್ನಡ ನಾಡಿನಲ್ಲಿ ಹುಟ್ಟಿದ ಪುಣ್ಯವಂತ. ಕನ್ನಡಿಗರ ಋಣ ತೀರಿಸಲು ನಾನು ಇನ್ನೊಂದು ಜನ್ಮದಲ್ಲಿ ಇಲ್ಲಿಯೇ ಹುಟ್ಟುತ್ತೇನೆ. 
ಕರ್ನಾಟಕ ಏಕೀಕರಣಕ್ಕೆ ನಮ್ಮ ತಂದೆ ಹೋರಾಟ ಮಾಡಿದ್ದರು. ಸ್ವಾತಂತ್ರ್ಯ ಹೋರಾಟ, ಗೋವಾ ವಿಮೋಚನೆ, ಗೋಕಾಕ ಚಳುವಳಿಯಲ್ಲಿ  ನಮ್ಮ ತಂದೆ ಹೋರಾಟ ಮಾಡಿದ್ದರು ಎಂದು ಸ್ಮರಿಸಿದರು. 

*ಸಾಹಿತ್ಯ ಸಮ್ಮೇಳನ*
ಹಾವೇರಿ  ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಅದನ್ನು ಯಶಸ್ವಿಗೊಳಿಸುವ ಕೆಲಸ ಮಾಡುತ್ತೇವೆ ಎಂದರು.
[27/11, 11:10 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ ಅವರ ನಿವಾಸಕ್ಕೆ ಭೇಟಿ ನೀಡಿದರು. 
ಈ ಸಂದರ್ಭದಲ್ಲಿ ನಟ ಅನಿರುದ್ದ್ ಹಾಗೂ ಮತ್ತಿತರರು ಹಾಜರಿದ್ದರು.
[27/11, 12:41 PM] Cm Ps: *ಎಲೆ ಚುಕ್ಕಿ ರೋಗ:  ಮುನ್ನೆಚ್ಚರಿಕಾ ಕ್ರಮಕ್ಕೆ 10 ಕೋಟಿ ರೂ. ಅನುದಾನ* *ಸಿಎಂ ಬೊಮ್ಮಾಯಿ*

ಚಿಕ್ಕಮಗಳೂರು (ಕೊಪ್ಪ),ನವೆಂಬರ್ 27:  ಅಡಿಕೆ ಬೆಳೆಗೆ ತಗಲಿರುವ  ಎಲೆ ಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು   10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕೂ ಜಿಲ್ಲೆಗಳಿಗೆ ಈ ಮೊತ್ತವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಹರಿಹರಪುರ ಹೆಲಿಪ್ಯಾಡ್‍ ನಲ್ಲಿ  ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸರ್ಕಾರ ವಿಶ್ವವಿದ್ಯಾಲಯದ ತಂಡ ವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರ್ಕಾರದ  ತಜ್ಞರು ಕೂಡ  ಚಿಕ್ಕಮಗಳೂರು ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಇರುವುದರಿಂದ ಹಾಗೂ ಗಾಳಿಯಿಂದ ಒಂದಕ್ಕೊಂದು ಹರಡುತ್ತಿದೆ. ಅದಕ್ಕಾಗಿ  ಫಂಗಸ್ ನಿವಾರಣೆಗೆ ಔಷಧಿ ಸಿಂಪಡನೆ ಮಾಡಲಾಗುವುದು. ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ವಿಜ್ಞಾನಿಗಳು ಶಿಫಾರಸು ಮಾಡುವ ಕ್ರಮಗಳನ್ನು ಕೂಡಲೇ ಕೈಗೊಳ್ಳಲಾಗುವುದು  ಎಂದರು. 

ಶಾಸಕ ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಈಗಾಗಲೇ ಮಾತನಾಡಿ ಎಲ್ಲಾ ರೀತಿಯ ರಕ್ಷಣೆ ನೀಡಲು ಹಾಗೂ ತನಿಖೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
[27/11, 12:52 PM] Cm Ps: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ  ಬಿಜೆಪಿಯಿಂದ ಏರ್ಪಡಿಸಿದ್ದ  ಜನಸಂಕಲ್ಪ ಯಾತ್ರೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಭೈರತಿ ಬಸವರಾಜ್, ಗೋವಿಂದ ಕಾರಜೋಳ, ಮಾಜಿ ಸಚಿವ ಡಿ.ಎನ್. ಜೀವರಾಜ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶಾಸಕರು ಸೇರಿ ಹಲವರು ಉಪಸ್ಥಿತರಿದ್ದರು.
[27/11, 2:23 PM] Cm Ps: *ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ* *ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ನವೆಂಬರ್ 27: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ  ವಿಷ್ಣುವರ್ಧನ್ ಸ್ಮಾರಕವನ್ನು  ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಹಿಂದೆ ವಿಷ್ಣುವರ್ಧನ್ ಅವರಿದ್ದ  ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ  ಮನೆಯ  ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ  ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರುಗೆ ಶುಭ ಕೋರಲು. ಬಂದಿದ್ದೇನೆ ಎಂದರು .

 ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆವಿವಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು.  ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ  ಕಾರ್ಯಕ್ರಮವನ್ನು ವೈಭವಾಯುತವಾಗಿ  ಆಯೋಜಿಸಲಾಗುವುದು ಎಂದರು.

*ಚುಕ್ಕಿ ರೋಗ ತಡೆಗೆ ಕ್ರಮ*
ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ  ಹಾವಳಿ   ಹೆಚ್ವಿದ್ದು,  ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ  ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ ಎಂದರು. 

*ಶೃಂಗೇರಿಯಲ್ಲಿ ಆಸ್ಪತ್ರೆ*
ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಂಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.
[27/11, 4:12 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಬಿ ಬ್ಲಾಕ್  ಕಟ್ಟಡವನ್ನು ಉದ್ಘಾಟಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ  ನಾರಾಯಣಗೌಡ, ಸಚಿವರಾದ ಗೋವಿಂದ ಕಾರಜೋಳ,  ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, , ಶಾಸಕ ಹರತಾಳು ಹಾಲಪ್ಪ, ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
[27/11, 6:05 PM] Cm Ps: *ಯಾರದ್ದೋ ದುಡ್ಡು…ಸಿದ್ದರಾಮಯ್ಯನ ಜಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಚಿಕ್ಕಮಗಳೂರು, ನವೆಂಬರ್ 27 :

 ಕಾಂಗ್ರೆಸ್ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಪ್ರದಾನಿ ಮೋದಿ ನೀಡಿದ್ದು, ಅದನ್ನು ತುಂಬಿದ ಚೀಲ ಸಿದ್ದುದು. ಯಾರದ್ದೋ ದುಡ್ಡು…ಸಿದ್ದರಾಮಯ್ಯನ ಜಾತ್ರೆ ನಡೆಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಅವರು ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ  ಬಿಜೆಪಿಯಿಂದ ಏರ್ಪಡಿಸಿದ್ದ  ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

75 ವರ್ಷದಲ್ಲಿ ಕಾಂಗ್ರೆಸ್ ನವರು ಕೇವಲ 25 ಲಕ್ಷ ಮನೆಗಳಿಗೆ ನೀರು ನೀಡಿದ್ದರು.  ಕುಡಿಯುವನೀರು ಕೊಡಲಾಗದವರು ನಮ್ಮನ್ನು ಆಳಿದ್ದರು. ನೀರು ಕೊಡದವರು ಬದುಕು ಕಟ್ಟಿಕೊಡಲು ಸಾಧ್ಯವಿಲ್ಲ. ಜನ ಪರ ಕೆಲಸ ಮಾಡುವುದು ನಮ್ಮ ಜವಾಬ್ದಾರಿ. ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿದ್ದರೂ ಏನೂ ಕೆಲಸ ಮಾಡಲಿಲ್ಲ. ಲೋಕಾಯುಕ್ತ ಮುಚ್ಚಿ ಎಸಿಬಿ ಮಾಡಿದ್ದರು. ಎಸಿಬಿಯಲ್ಲಿ ಹಲವು ಕೇಸ್ ಮುಚ್ಚಿಹಾಕಿದ್ದಾರೆ. 50 ಕೇಸ್ ಗಳಿಗೆ ಬಿ-ರಿಪೋರ್ಟ್ ಕೊಟ್ಟಿದ್ದಾರೆ. ಇದು ಕಾಂಗ್ರೆಸ್ ಆಡಳಿತದ ವೈಖರಿ. ಚಿಕ್ಕಮಗಳೂರಿನಲ್ಲಿ‌ ಮೆಡಿಕಲ್ ಕಾಲೇಜ್ ಕಾಂಗ್ರೆಸ್ ನವರು ಯಾಕೆ ಮಾಡಲಿಲ್ಲ. ಭ್ರಷ್ಟ ಕಾಂಗ್ರೆಸ್ ನ್ನು ಬೇರು ಸಮೇತ ಕಿತ್ತು ಹಾಕಲು ಶೃಂಗೇರಿ ಶಾರದಾಂಬೆಯ ಪುಣ್ಯ ಸ್ಥಳದಿಂದ ಸಂಕಲ್ಪ ಮಾಡೋಣ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡಲು ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ತರುವ ಸಂಕಲ್ಪ ಮಾಡಬೇಕೆಂದು ಜನರಿಗೆ ಮುಖ್ಯಮಂತ್ರಿಗಳು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಭೈರತಿ ಬಸವರಾಜ್, ಗೋವಿಂದ ಕಾರಜೋಳ, ಮಾಜಿ ಸಚಿವ ಡಿ.ಎನ್. ಜೀವರಾಜ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶಾಸಕರು ಸೇರಿ ಹಲವರು ಉಪಸ್ಥಿತರಿದ್ದರು.
[27/11, 6:07 PM] Cm Ps: *ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಚಿಕ್ಕಮಗಳೂರು, ನವೆಂಬರ್ 27 :

 ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಸರ್ಕಾರ ನಮ್ಮದು. ಒಂದೇ ವರ್ಷದಲ್ಲಿ 8000 ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ  ಬಿಜೆಪಿಯಿಂದ ಏರ್ಪಡಿಸಿದ್ದ  ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

 ನಾರಾಯಣ ಗುರು ಅವರ ಹೆಸರಿನಲ್ಲಿವಸತಿ ಶಾಲೆ, ಎಸ್ ಸಿ ಎಸ್ ಟಿ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ,50 ಕನಕದಾಸ ಹಾಸ್ಟೆಲ್ ನಿರ್ಮಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಲಾಗುತ್ತಿದೆ ಎಂದರು.


ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ನಾಡು ಶೃಂಗೇರಿ. ನಾನು ದೇವರ ನಾಡಿಗೆ ಬಂದಿದ್ದೇನೆ ಎಂದ ಮುಖ್ಯಮಂತ್ರಿಗಳು ಜನಸಂಕಲ್ಪ ಯಾತ್ರೆಗೆ ಜನ ಬೆಂಬಲ ಸಿಗುತ್ತಿದೆ. ಮೋದಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತ ನಡೆಸ್ತಿದೆ. ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲದಿಂದ ವಿಜಯ ಸಂಕಲ್ಪ ಯಾತ್ರೆಯಾಗಿ ಯಶಸ್ವಿಯಾಗಿದೆ ಎಂದರು.


ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ 6000 ರಾಷ್ಟ್ರೀಯ ಹೆದ್ದಾರಿ  ರಸ್ತೆ, ಬಂದರುಗಳ ನಿರ್ಮಾಣ, ಜಲಜೀವನ ಮಿಷನ್ ಯೋಜನೆಗಳು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿಯಾದ ಕುಡಿಯುವ ನೀರಿನ ಯೋಜನೆಯನ್ನು ಕೇವಲ ಒಂದೇ ವರ್ಷದಲ್ಲಿ 30 ಲಕ್ಷ ಮನೆಗಳಿಗೆ ಪೂರೈಸಲಾಗಿದೆ. ಕೋವಿಡ್ ನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮರ್ಥವಾಗಿ ನಿರ್ವಹಿಸಲಾಯಿತು. ಔಷಧಿ, ಆರೋಗ್ಯ ಮೂಲಸೌಕರ್ಯಗಳನ್ನು ಸಪರ್ಪಕವಾಗಿ ನೀಡಲಾಯಿತು. ಪ್ರವಾಹದಲ್ಲಿಯೂ  5 ಲಕ್ಷ ಪರಿಹಾರಗಳನ್ನು ನೀಡಲಾಯಿತು. ಬೆಳೆಹಾನಿ ಪರಿಹಾರವನ್ನು ದುಪ್ಪಟ್ಟುಗೊಳಿಸಿ ರೈತರಿಗೆ ನೀಡಲಾಗುತ್ತಿದೆ. ರೈತರಿಗೆ 5 ಹೆಚ್ ಪಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರೈತಮಕ್ಕಳಿಗೆ ವಿದ್ಯಾನಿಧಿ, 6 ಲಕ್ಷ ರೈತ ಕೂಲಿಕಾರ್ಮಿಕರಿಗೆ ವಿದ್ಯಾನಿಧಿ  ನೀಡುತ್ತಿದೆ.

 

 5 ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ,ಪ್ರತಿ ಗ್ರಾಮದಲ್ಲಿ ಎರಡು ವಿವೇಕಾನಂದ ಯುವಕ ಸಂಘ ಕ್ಕೆ ಆರ್ಥಿಕ ಸಹಾಯ ನೀಡಿ, ಅವರ ಸ್ವಯಂಉದ್ಯೋಗಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ ಕಂಬಾರ,ಕುಂಬಾರ, ಬಡಿಗೇರ, ಟೇಲರ್ ಗಳಿಗೆ ಅವರ ವೃತ್ತಿ ಕಾಯದ ಆಧಾರದ ಮೇಲೆ ಕಾಯಕ ಯೋಜನೆಯ ಮೂಲಕ ಸಾಲ ನೀಡಲಾಗುತ್ತದೆ ಎಂದರು.

ಸರ್ಕಾರ ಹಾಗು ಜನರು ಶ್ರೀಮಂತ ರಾಗಬೇಕು. ಜನರ ಬಳಿ ಹಣ ಇದ್ದರೆ ಮಾತ್ರ ಸರ್ಕಾರ ಶ್ರೀಮಂತ ಆಗುತ್ತದೆ.  ದುಡಿಮೆಯೇ ದೊಡ್ಡಪ್ಪ ಎನ್ನುವ ಕಾಲವಿದು.ಜನರು ಆರ್ಥಿಕವಾಗಿ ಸಬಲರಾಗಬೇಕು ಎಂಬುದು ಸರ್ಕಾರದ ಸಂಕಲ್ಪ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಭೈರತಿ ಬಸವರಾಜ್, ಗೋವಿಂದ ಕಾರಜೋಳ, ಮಾಜಿ ಸಚಿವ ಡಿ.ಎನ್. ಜೀವರಾಜ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶಾಸಕರು ಸೇರಿ ಹಲವರು ಉಪಸ್ಥಿತರಿದ್ದರು.
[27/11, 6:13 PM] Cm Ps: *ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆ ಯೋಜನೆ ಶೀಘ್ರ ಪ್ರಾರಂಭ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಚಿಕ್ಕಮಗಳೂರು, ನವೆಂಬರ್ 27 :

 ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆಗೆ ಮೇಲ್ದರ್ಜೆಗೇರಿಸಲು ಸರ್ಕಾರ ತೀರ್ಮಾನಿಸಿದ್ದು, ಸ್ಥಳವನ್ನು ನಿರ್ಧರಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ  ಬಿಜೆಪಿಯಿಂದ ಏರ್ಪಡಿಸಿದ್ದ  ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

*ಕಾಫಿ ಬೆಳೆಗಾರರ ಒತ್ತುವರಿ ಸಮಸ್ಯೆಗೆ ಪರಿಹಾರ:*
ಮಲೆನಾಡು ಭಾಗದಲ್ಲಿ ಅಕ್ರಮ ಒತ್ತುವರಿ ಬಗ್ಗೆ ಸಮಸ್ಯೆ ಇದೆ‌. ಕಾಫಿ ಬೆಳೆಗಾರರ ಸಮಸ್ಯೆಗಳನ್ನು ನಿವಾರಿಸಲು ಕಂದಾಯ ಇಲಾಖೆಯವರು ಶೀಘ್ರ ಪರಿಹಾರ ಕಂಡುಕೊಳ್ಳಲಿದ್ದಾರೆ‌.ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಬಂದಿದೆ. ಔಷಧಿ ಸಿಂಪಡನೆ ಹಾಗೂ ರೋಗ ಹರಡದಂತೆ  ಪರಿಹಾರ ಕಂಡುಕೊಳ್ಳಲು 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆ ನಡೆಸಿದೆ.  ಈ ಭಾಗದ ಪ್ರವಾಹ ಬಂದು ಹಾಳಾಗಿರುವ ರಸ್ತೆಗಳ ದುರಸ್ತಿಗೆ 5.80 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇನ್ನೂ 5 ಕೋಟಿ ರೂ. ಹೆಚ್ಚಿನ ಅನುದಾನವನ್ನು ಬಿಡುಗಡೆ ನಿನ್ನೆಯಷ್ಟೇ ಬಿಡುಗಡೆ ಮಾಡಲಾಗಿದೆ  ಎಂದರು.
 
*ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠದ ನಡುವೆ ರೋಪ್ ವೇ ನಿರ್ಮಾಣ:*
ದತ್ತ ಪೀಠ ಈ ಭಾಗದ ಭಾವನೆಗಳ ದೇವಸ್ಥಾನ. ಈ ದೇವಸ್ಥಾನದಲ್ಲಿ ಮೂಲ ಪೂಜೆ ನಡೆಸುವ ಬಗ್ಗೆ ಶಾಸಕ ಸಿಟಿ ರವಿಯವರು ಸುದೀರ್ಘ ಹೋರಾಟ ನಡೆಸಿದ್ದಾರೆ. ಈಗಾಗಲೇ ಕಾನೂನಾತ್ಮಕ ಹೊರಾಟ ನಡೆದಿದ್ದು, ಸೂಕ್ತ ಪರಿಹಾರ ದೊರೆಯಲಿದೆ.ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠದ ನಡುವೆ ರೋಪ್ ವೇ ನಿರ್ಮಿಸಲು ಆಯವ್ಯಯದಲ್ಲಿ ಅನುದಾನವನ್ನು ಮೀಸಲಿರಿಸಿದ್ದು, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು. ಈ ಭಾಗದಲ್ಲಿ ಆನೆ ಹಾವಳಿ ಹೆಚ್ಚಿದೆ ಅದಕ್ಕೆ ಪರಿಹಾರ ಕಂಡುಕೊಳ್ಳಲು ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುತ್ತಿದ್ದೇವೆ‌ ಆನೆ ದಾಳಿಯಿಂದ ಜೀವ ಹಾನಿಯಾದರೆ 15 ಲಕ್ಷಪರಿಹಾರ ನೀಡಲಾಗುತ್ತಿದೆ. ಆನೆ ದಾಳಿಯನ್ನು ತಡೆಯಲು ಪ್ರತಿ ಜಿಲ್ಲೆಗೆ ಸ್ಕ್ವಾಡ್ ರಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಭೈರತಿ ಬಸವರಾಜ್, ಗೋವಿಂದ ಕಾರಜೋಳ, ಮಾಜಿ ಸಚಿವ ಡಿ.ಎನ್. ಜೀವರಾಜ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶಾಸಕರು ಸೇರಿ ಹಲವರು ಉಪಸ್ಥಿತರಿದ್ದರು.

Post a Comment

Previous Post Next Post