ಶೀಘ್ರವೇ ಕಾಂಗ್ರೆಸ್ ಬಾಗಿಲು ಮುಚ್ಚಲಿದೆ- ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ಇನ್ನು 15- 20 ದಿನಗಳಲ್ಲಿ ಅಥವಾ ಚುನಾವಣೆಯ ಒಳಗೆ ಕಾಂಗ್ರೆಸ್ ಮನೆಯ ಬಾಗಿಲು ಮುಚ್ಚುತ್ತಾರೆ. ಕಾಂಗ್ರೆಸ್ಸಿನ ಹತ್ತಾರು ಜನ ನಮ್ಮ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇದೊಂದು ವಿಶೇಷ ಸಂದರ್ಭ ಮಾತ್ರವಲ್ಲ; ರಾಜಕೀಯ ಬದಲಾವಣೆಯ ಸಂಕೇತವೂ ಆಗಿದೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ತೆರಳಿದಲ್ಲೆಲ್ಲ ಕಾಂಗ್ರೆಸ್ ಪಕ್ಷ ಸೋತಿದೆ. ಕೊಳ್ಳೇಗಾಲದಲ್ಲಿ 7ರಲ್ಲಿ ಆರು ಸ್ಥಾನಗಳನ್ನು ಬಿಜೆಪಿ ಗೆದ್ದಿರುವುದೇ ಇದಕ್ಕೆ ಸಾಕ್ಷಿ ಎಂದರು.
ವಿಜಾಪುರದಲ್ಲೂ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಕಾಂಗ್ರೆಸ್ ಮನೆ ಖಾಲಿ ಆಗುವುದರ ಸಂಕೇತ ಇದಾಗಿದೆ. ಬಿಜೆಪಿ ಕಮಲ ಮತ್ತೆ ಮುಂದಿನ ವರ್ಷದ ಅಸೆಂಬ್ಲಿ ಚುನಾವಣೆಯಲ್ಲಿ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರದಲ್ಲಿ ಮೋದಿಜಿ ಅವರ ಆಡಳಿತವನ್ನು ಜನರು ಒಪ್ಪಿದ್ದಾರೆ. ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಬೊಮ್ಮಾಯಿ ಅವರು ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಹಾಗೂ ಪೌರಕಾರ್ಮಿಕರಿಗೆ ನ್ಯಾಯ ನೀಡಿದ್ದಾರೆ. ಅದರ ನಂತರ ರಾಜ್ಯದ ಚಿತ್ರಣ ಬದಲಾಗಿದೆ. ಬಿಜೆಪಿ ಗೆಲುವು ಖಚಿತವಾಗಿದೆ ಎಂದರು.
ಕಾಂಗ್ರೆಸ್ ಪಕ್ಷವು ತನ್ನ ತಲೆತಲಾಂತರದ ಮತಗಳೆಂದು ನಂಬಿದ್ದ ಮತಗಳು ಕೈಬಿಟ್ಟು ಹೋಗಿವೆ. ಕಾರ್ಯಕರ್ತರೇ ಆ ಪಕ್ಷವನ್ನು ಕೈಬಿಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ನುಡಿದರು.
ಕಲ್ಬುರ್ಗಿಯ ಒಬಿಸಿ ಸಮಾವೇಶದಲ್ಲಿ 4ರಿಂದ 5 ಲಕ್ಷ ಜನ ಸೇರಿದ್ದರು. 40- 50 ಸಾವಿರ ಜನ ಎಂದಿರುವ ಸಿದ್ದರಾಮಣ್ಣನಿಗೆ ವೈದ್ಯರಾದ ಅಶ್ವತ್ಥನಾರಾಯಣ್ ಅವರು ಬೇರೆ ಕನ್ನಡಕ ಕೊಡಿಸಬೇಕು ಎಂದು ವ್ಯಂಗ್ಯವಾಗಿ ತಿಳಿಸಿದರು. ಕಾಂಗ್ರೆಸ್ ನವರಂತೆ ನಾವು ಬಿರಿಯಾನಿ, ಹೆಂಡ ಕೊಟ್ಟು ಜನ ತರಿಸಲಿಲ್ಲ. ಜನ ಸ್ವಯಂಪ್ರೇರಿತರಾಗಿ ಬಂದಿದ್ದಾರೆ ಎಂದು ವಿವರಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಸೋಲುವ ಭಯ ಕಾಡುತ್ತಿದೆ ಎಂದ ಅವರು, ಬಿಜೆಪಿಗೆ ಬಂದವರೆಲ್ಲರೂ ನಾಯಕರಾಗಿದ್ದಾರೆ. ಹಾಲಿನೊಳಗೆ ಸಕ್ಕರೆ ಬೆರೆತಂತೆ ಸಿಹಿ ಮಾತ್ರ ಇರಬೇಕು. ನಮ್ಮೊಳಗೆ ಒಂದಾಗಬೇಕು ಎಂದು ಕಿವಿಮಾತು ಹೇಳಿದರು. ಮುದ್ದಹನುಮೇಗೌಡರಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿತ್ತು. ಅವರಿಗೆ ಕಾಂಗ್ರೆಸ್ ಪಕ್ಷದ ನೈಜ ಬಣ್ಣದ ಅರಿವಾಗಿದೆ ಎಂದು ತಿಳಿಸಿದರು.
ಕರ್ನಾಟಕದ ಕಾಂಗ್ರೆಸ್ ಪಕ್ಷವು ಸಿದ್ರಾಮಣ್ಣನ ನಾಟಕ ಕಂಪೆನಿ ಮತ್ತು ಡಿಕೆಶಿ ನಾಟಕ ಕಂಪೆನಿಯಾಗಿ ಎರಡು ಗುಂಪಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಆಗುತ್ತದೆ ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯದ ಸಚಿವ ಗೋವಿಂದ ಕಾರಜೋಳ, ಎಸ್.ಟಿ. ಸೋಮಶೇಖರ್, ಡಾ|| ಸಿ.ಎನ್. ಅಶ್ವತ್ಥನಾರಾಯಣ್, ಭೈರತಿ ಬಸವರಾಜ್, ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ರಾಜ್ಯ ಉಪಾಧ್ಯಕ್ಷ ಲಕ್ಷಣ ಸವದಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಾಜಿ ಸಂಸದ ಮುದ್ದಹನುಮೇಗೌಡ, ಕನ್ನಡ ಚಲನಚಿತ್ರ ನಟ ಮತ್ತು ಮಾಜಿ ಸಂಸದ ಶಶಿಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ಬಿ.ಹೆಚ್. ಅನಿಲ್ ಕುಮಾರ್, ಶೀಲಾ ದೀಕ್ಷಿತ್ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ರಮೇಶ್ ಮುನಿಯಪ್ಪ, ಕಾಂಗ್ರೆಸ್ ಸೇವಾದಳದ ರಾಜ್ಯ ಉಪಾಧ್ಯಕ್ಷ ಹನುಮಂತರಾವ್ ಜವಳಿ ಮತ್ತಿತರರು ಬಿಜೆಪಿ ಸೇರಿದರು. ಇವರಲ್ಲದೆ ಕೆ.ಪಿ.ಸಿ.ಸಿ ಸದಸ್ಯ ಹಾಗೂ ತೆಂಗು ನಾರು ಮಂಡಳಿ ಮಾಜಿ ಅಧ್ಯಕ್ಷ ಜಿ.ವೆಂಕಟಾಚಲಯ್ಯ, ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹೆಚ್.ವೈ.ರವಿಕುಮಾರ್, ರಾಜ್ಯ ರೈತ ಸಂಘದ ನಾಯಕ ಸಂಜೀವ ರೆಡ್ಡಿ, ದಲಿತ ಮುಖಂಡ ವÉಂಕಟೇಶಮೂರ್ತಿ ಅವರೂ ಪಕ್ಷ ಸೇರಿದರು.
(ಕರುಣಾಕರ ಖಾಸಲೆ)
।।।।।
ಜನಪರ ಆಡಳಿತದಿಂದ ಜನಮನ್ನಣೆ ಹೆಚ್ಚಳ- ಬಸವರಾಜ ಬೊಮ್ಮಾಯಿ
ಬೆಂಗಳೂರು: ಕೋವಿಡ್ ಮತ್ತು ಕೋವಿಡ್ ನಂತರವೂ ಬಿಜೆಪಿ ಜನಪರ ಆಡಳಿತ ಕೊಟ್ಟಿದೆ. ಜನರಿಗೆ ಹತ್ತಿರವಾಗಿ ಕಳೆದ ಬಾರಿಗಿಂತ ಹೆಚ್ಚು ಜನಮನ್ನಣೆಯೂ ಸಿಗುವ ದಿಕ್ಸೂಚಿ ಕಾಣುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಸಂಕಲ್ಪ ಯಾತ್ರೆ ವೇಳೆ ಬಿಜೆಪಿ ಪರ ಅಲೆ ಕಾಣುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಹತ್ತಾರು ವರ್ಷ ಕೆಲಸ ಮಾಡಿದ ನಾಯಕರು ಅವರ ಸೇವೆ, ಸಜ್ಜನಿಕೆಗೆ ಬೆಲೆ ಸಿಗದೆ ರಾಷ್ಟ್ರೀಯ- ದೇಶಭಕ್ತಿಯ- ವಿಶ್ವಮಾನ್ಯ ನಾಯಕ ನರೇಂದ್ರ ಮೋದಿಜಿ ನೇತೃತ್ವದ ಪಕ್ಷದತ್ತ ಮುಖ ಮಾಡಿದ್ದಾರೆ. ಡಬಲ್ ಎಂಜಿನ್ ಸರಕಾರಗಳು ಕಂಕಣಬದ್ಧವಾಗಿ ಕೆಲಸ ಮಾಡುವ ವಿಶ್ವಾಸದ ಜೊತೆ, ಪಕ್ಷದ ಸಿದ್ಧಾಂತ ಮತ್ತು ತತ್ವಾದರ್ಶವನ್ನು ನಂಬಿ ಎಲ್ಲ ಪ್ರಮುಖರು ಬಿಜೆಪಿ ಸೇರಿದ್ದಾರೆ ಎಂದರು.
ಮುದ್ದಹನುಮೇಗೌಡರು ತುಮಕೂರು ಜಿಲ್ಲೆಯ ನಾಯಕರು. ಶಾಸಕ- ಸಂಸದರಾಗಿ ತಮ್ಮದೇ ಆದ ಛಾಪನ್ನು ಹೊಂದಿದ ಸಜ್ಜನ ರಾಜಕಾರಣಿ. ಅವರ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಬಲ ಬಂದಿದೆ. ಚಿತ್ರನಟರೂ ಆದ ಶಶಿಕುಮಾರ್ ಅವರು ಮತ್ತೆ ಮರಳಿ ಮನೆಗೆ ಬಂದಿದ್ದಾರೆ. ನಮ್ಮ ಮನೆಯೇ ಸುರಕ್ಷಿತ; ಇಲ್ಲಿ ಸಿಗುವ ಗೌರವ ಬೇರೆ ಕಡೆ ಸಿಗುವುದಿಲ್ಲ ಎಂದು ವಾಪಸಾಗಿದ್ದಾರೆ. ಅವರು ಬಂದ ಕಾರಣ ಪಕ್ಷಕ್ಕೆ ಶಕ್ತಿ ಹೆಚ್ಚಾಗಿದೆ. ಸೇವಾದಳದ ಹನುಮಂತರಾವ್ ಭ್ರಮನಿರಸನಗೊಂಡು ಇಲ್ಲಿ ಬಂದಿದ್ದಾರೆ. ಅವರ ಸೇವೆ ಪಡೆಯುತ್ತೇವೆ ಎಂದರು.
ಐಎಎಸ್ ಅಧಿಕಾರಿ, ಜನಪರ ಕೆಲಸ ಮಾಡಿದ ವ್ಯಕ್ತಿ ಬಿ.ಹೆಚ್. ಅನಿಲ್ ಕುಮಾರ್ ದೀನದಲಿತರ ಬಗ್ಗೆ ಅಪಾರ ಕಾಳಜಿ ಉಳ್ಳವರು. ಅವರು ಪಕ್ಷಕ್ಕೆ ಬಂದಿದ್ದರಿಂದ ಮೌಲ್ಯಯುತ ರಾಜಕಾರಣಕ್ಕೆ ಬೆಲೆ ಬಂದಿದೆ. ರಮೇಶ್ ಮುನಿಯಪ್ಪ ಅವರು ದೆಹಲಿ- ರಾಷ್ಟ್ರ ರಾಜಕಾರಣದಲ್ಲಿ ಅಪಾರ ಅನುಭವ ಇದ್ದವರು. ಅವರಿಗೂ ಹೃದಯಪೂರ್ವಕ ಸ್ವಾಗತ ಎಂದು ತಿಳಿಸಿದರು.
ರಾಜಕಾರಣದಲ್ಲಿ ಸಮೀಕರಣ ಆಗುತ್ತಿದೆ. ಬಿಜೆಪಿಯೊಂದೇ ಗುರುತ್ವಾಕರ್ಷಣೆ ಇರುವ ಶಕ್ತಿ. ಹೀಗಾಗಿ ಅದರ ಸುತ್ತಲೇ ರಾಜಕಾರಣ ನಡೆಯುತ್ತಿದೆ ಎಂದ ಅವರು, ಸ್ಥಾನಮಾನದ ಕುರಿತು ಪಕ್ಷ ತೀರ್ಮಾನ ಮಾಡುತ್ತದೆ. ಈ ವ್ಯವಸ್ಥೆಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದ್ದು ಮಾತ್ರವಲ್ಲದೆ ಜನಮತವನ್ನೂ ಕಳೆದುಕೊಂಡಿದೆ. ಹಿಂದೆ 120ಕ್ಕಿಂತ ಹೆಚ್ಚಿದ್ದ ಸೀಟುಗಳು ಕಳೆದ ಚುನಾವಣೆಯಲ್ಲಿ 79ಕ್ಕೆ ಇಳಿದಿತ್ತು. ಸಚಿವ ಸಂಪುಟದ ಬಹುತೇಕ ಸಚಿವರು ಸೋತಿದ್ದರು. ಜನಮತ ಇಲ್ಲದಿದ್ದರೂ ಜೆಡಿಎಸ್ ಜೊತೆ ಸೇರಿ ಹಿಂಬಾಗಿಲಿನಿಂದ ಅಧಿಕಾರ ಮಾಡಲು ಹೋಗಿ ಆ ಪ್ರಯೋಗವೂ ವಿಫಲವಾಯಿತು ಎಂದು ವಿವರಿಸಿದರು.
ಮಾಜಿ ಸಂಸದ ಮುದ್ದಹನುಮೇಗೌಡ ಅವರು ಮಾತನಾಡಿ, ಬಿಜೆಪಿ ನನ್ನನ್ನು ಗೌರವಯುತವಾಗಿ ಸ್ವಾಗತಿಸಿದೆ. ಪ್ರಧಾನಮಂತ್ರಿ ಹುದ್ದೆಗೆ ಮೋದಿಜಿ ಗಾಂಭೀರ್ಯ ತಂದಿದ್ದಾರೆ. ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ದಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ರಾಜ್ಯ ಸರಕಾರವೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಚಲನಚಿತ್ರ ನಟ ಮತ್ತು ಮಾಜಿ ಸಂಸದ ಶಶಿಕುಮಾರ್ ಅವರು ಮಾತನಾಡಿ, ಬಿಜೆಪಿ ನನಗೇನೂ ಹೊಸದಲ್ಲ. ಎನ್‍ಡಿಎ ಜೊತೆಗೆ ನಾನಿದ್ದೆ. ಸುಳ್ಳಿನ ಆಶ್ವಾಸನೆ ಕಾರಣದಿಂದ ಪಕ್ಷದಿಂದ ದೂರವಿದ್ದೆ. ಮೋದಿಜಿ- ಬಸವರಾಜ ಬೊಮ್ಮಾಯಿ ಅವರ ಜನಪರ ಆಡಳಿತವನ್ನು ಮೆಚ್ಚಿ ಮತ್ತೆ ಬಿಜೆಪಿ ಸೇರಿದ್ದೇನೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯದ ಸಚಿವ ಗೋವಿಂದ ಕಾರಜೋಳ, ಎಸ್.ಟಿ. ಸೋಮಶೇಖರ್, ಡಾ|| ಸಿ.ಎನ್.ಅಶ್ವತ್ಥನಾರಾಯಣ್, ಭೈರತಿ ಬಸವರಾಜ್, ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ರಾಜ್ಯ ಉಪಾಧ್ಯಕ್ಷ ಲಕ್ಷಣ ಸವದಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಾಜಿ ಸಂಸದ ಮುದ್ದಹನುಮೇಗೌಡ, ಕನ್ನಡ ಚಲನಚಿತ್ರ ನಟ ಮತ್ತು ಮಾಜಿ ಸಂಸದ ಶಶಿಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ಬಿ.ಹೆಚ್. ಅನಿಲ್ ಕುಮಾರ್, ಶೀಲಾ ದೀಕ್ಷಿತ್ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ರಮೇಶ್ ಮುನಿಯಪ್ಪ, ಕಾಂಗ್ರೆಸ್ ಸೇವಾದಳದ ರಾಜ್ಯ ಉಪಾಧ್ಯಕ್ಷ ಹನುಮಂತರಾವ್ ಜವಳಿ ಮತ್ತಿತರರು ಬಿಜೆಪಿ ಸೇರಿದರು. ಇವರಲ್ಲದೆ ಕೆ.ಪಿ.ಸಿ.ಸಿ ಸದಸ್ಯ ಹಾಗೂ ತೆಂಗು ನಾರು ಮಂಡಳಿ ಮಾಜಿ ಅಧ್ಯಕ್ಷ ಜಿ.ವೆಂಕಟಾಚಲಯ್ಯ, ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹೆಚ್.ವೈ.ರವಿಕುಮಾರ್, ರಾಜ್ಯ ರೈತ ಸಂಘದ ನಾಯಕ ಸಂಜೀವ ರೆಡ್ಡಿ, ದಲಿತ ಮುಖಂಡ ವÉಂಕಟೇಶಮೂರ್ತಿ ಅವರೂ ಪಕ್ಷ ಸೇರಿದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
[03/11, 7:24 PM] +91 83103 04771: 3-11-2022
ಗೆ,
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಆರಂಭವಾಗಿತ್ತು. ಅಲ್ಲಿ ಬಿಜೆಪಿ 7ರಲ್ಲಿ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಮುಳುಗುವ ಸಂಕೇತ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು.
ಹಾಸನದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಸೆಂಬ್ಲಿ ಚುನಾವಣೆ ಬಳಿಕ ಸಿದ್ರಾಮಣ್ಣನ ಕುಟುಂಬ, ಬಂಡೆಯ ಕುಟುಂಬ ಮತ್ತು ಗೌಡರ ಕುಟುಂಬ ಸೇರಿ 3 ಕುಟುಂಬದವರು ನಿರುದ್ಯೋಗಿಗಳಾಗುತ್ತಾರೆ ಎಂದು ತಿಳಿಸಿದರು.
ಹಾಸನದ ಗೌಡರು ದೆಹಲಿ ಆಳಿದರು, ರಾಜ್ಯವನ್ನೂ ಆಳಿದರು; ಆದರೆ ಏನು ಮಾಡೋಣ ಕೆಂಪೇಗೌಡರನ್ನು ಮರೆತರು. ಬಿಜೆಪಿ, ಕೆಂಪೇಗೌಡರ ವಿಗ್ರಹವನ್ನು ಸ್ಥಾಪಿಸಿ ಅವರಿಗೆ ಗೌರವ ಕೊಡುವ ಕಾರ್ಯ ಮಾಡುತ್ತಿದೆ ಎಂದು ವಿವರಿಸಿದರು.
ಹಾಸನದಲ್ಲಿ ಕುಟುಂಬವಾದಿಗಳಿರಬೇಕೇ ಅಥವಾ ರಾಷ್ಟ್ರೀಯವಾದಿಗಳಿರಬೇಕೇ ಎಂಬ ಚರ್ಚೆಗಳು ಆರಂಭವಾಗಿವೆÉ. ಕುಟುಂಬ ರಾಜಕಾರಣ ಮಾಡುತ್ತ, ಕುಟುಂಬ ಬೆಳೆಸುತ್ತ, ಕುಟುಂಬದ ಎಲ್ಲರಿಗೆ ಅವಕಾಶ ಕೊಡುತ್ತ ಹಾಗೂ ಕೌಟುಂಬಿಕ ಸ್ಥಾನಮಾನದತ್ತ ಗಮನ ಕೊಡುವ ಪಾರ್ಟಿ ಇಲ್ಲಿದೆ. ಇವತ್ತು ಕಾಂಗ್ರೆಸ್‍ನ ಹಲವು ಪ್ರಮುಖರು ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಹಲವು ಪ್ರಮುಖರು, ಜೆಡಿಎಸ್‍ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ಚುನಾವಣೆಯೊಳಗೆ ಅವರೆಲ್ಲರೂ ಬಿಜೆಪಿ ಸೇರಲಿದ್ದಾರೆ ಹಾಗೂ ಬಿಜೆಪಿ ಮತ್ತೆ ಅಧಿಕಾರ ಪಡೆಯಲಿದೆ ಎಂದು ವಿವರಿಸಿದರು.
ಜನನಾಯಕರಾದ ಬಿಎಸ್ ಯಡಿಯೂರಪ್ಪ, ಖಳ ನಾಯಕರಾದ ಸಿದ್ರಾಮಣ್ಣ ಮತ್ತು ಕಣ್ಣೀರ ನಾಯಕ ಕುಮಾರಸ್ವಾಮಿ ಪೈಕಿ ಯಾರು ನಿಮಗೆ ಬೇಕು ಎಂದು ಜನರನ್ನು ಪ್ರಶ್ನಿಸಿದರು. ಒಂದು ಕಾಲಘಟ್ಟದಲ್ಲಿ ಈ ಜಿಲ್ಲೆಯಲ್ಲಿ ನಮ್ಮ ಪಕ್ಷವು ಬಿ.ಬಿ.ಶಿವಪ್ಪ ಅವರ ನೇತೃತ್ವದಲ್ಲಿ 4 ಸ್ಥಾನಗಳನ್ನು ಪಡೆದಿತ್ತು. ಮುಂದಿನ ಚುನಾವಣೆಯಲ್ಲಿ 5ಕ್ಕಿಂತ ಹೆಚ್ಚು ಸ್ಥಾನ ಪಡೆದು ಜನತಾದಳ ಮುಕ್ತ ಜಿಲ್ಲೆಯಾಗಿ ಪರಿವರ್ತಿಸುವ ವಿಶ್ವಾಸವಿದೆ ಎಂದರು.
ಕುಟುಂಬವಾದ, ಪರಿವಾರವಾದ ಹಾಗೂ ಏಕವ್ಯಕ್ತಿಯ ರಾಜಕಾರಣ ಮುಗಿದು ಹೋಗಿದೆ. ಈ ದೇಶದಲ್ಲಿ ಇನ್ನು ರಾಷ್ಟ್ರೀಯವಾದದ ರಾಜಕಾರಣಕ್ಕೆ ಅವಕಾಶ ಸಿಗಲಿದೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಅಭಿವೃದ್ಧಿಶೀಲ ದೇಶವಾಗಿ ಭಾರತವನ್ನು ಪರಿವರ್ತಿಸಲಾಗುತ್ತಿದೆ. ಈ ದೇಶದಲ್ಲಿ ಪರಿವರ್ತನೆ ಆರಂಭವಾಗಿದೆ; ಜಗತ್ತಿನ ಎಲ್ಲ ದೇಶದವರೂ ನಮ್ಮತ್ತ ನೋಡುತ್ತಿದ್ದಾರೆ ಎಂದು ತಿಳಿಸಿದರು.
60 ವರ್ಷಗಳ ಕಾಲ ದೇಶದ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷವು ಈ ದೇಶವನ್ನು ಸಾಲಗಾರರ ರಾಷ್ಟ್ರವಾಗಿ ಮಾಡಿ ತಲೆ ತಗ್ಗಿಸುವ ದೇಶವಾಗಿ ಪರಿವರ್ತಿಸಿತ್ತು. ಪರಿವಾರವಾದ, ಭ್ರಷ್ಟಾಚಾರ, ದೇಶ ವಿಭಜನೆ ಮತ್ತು ಭಯೋತ್ಪಾದನೆಯು ಕಾಂಗ್ರೆಸ್ ಪಕ್ಷದ ಕೊಡುಗೆಗಳು ಎಂದು ಅವರು ಟೀಕಿಸಿದರು.
ಭಾರತವನ್ನು ಅಮೇರಿಕದ ಅಧ್ಯಕ್ಷರು ಮೆಚ್ಚಿಕೊಳ್ಳುತ್ತಾರೆ. ಶ್ರೀಲಂಕಾಕ್ಕೆ ನೆರವಿತ್ತ ದೇಶ ಭಾರತ. ಜಗತ್ತನ್ನು ಒಂದು ಮಾಡಿ ಯುದ್ಧ ನಿಲ್ಲಿಸುವ ತಾಕತ್ತಿರುವ ದೇಶವಾಗಿ ಭಾರತ ಹೊರಹೊಮ್ಮಿದೆ; ಅಂಥ ಶ್ರೇಷ್ಠ ನಾಯಕತ್ವ ನರೇಂದ್ರ ಮೋದಿ ಅವರದು ಎಂದು ವಿವರಿಸಿದರು.
ಕಾಂಗ್ರೆಸ್ ಆಡಳಿತದಲ್ಲಿ ಜಮ್ಮು ಕಾಶ್ಮೀರ, ಹುಬ್ಬಳ್ಳಿಯಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗದ ಪರಿಸ್ಥಿತಿ ಇತ್ತು. ಈಗ ಪರಿವರ್ತನೆ ಆಗಿದೆ. ತಿರಂಗ ಧ್ವಜಕ್ಕೆ ಜಗತ್ತಿನೆಲ್ಲೆಡೆ ಗೌರವ ಸಿಗುತ್ತಿದೆ ಎಂದು ತಿಳಿಸಿದರು. ವಿಶ್ವಗುರು ಭಾರತ ನಿರ್ಮಾಣವಾಗುತ್ತಿದೆ ಎಂದರು.
ಮುಂದಿನ ಚುನಾವಣೆ ಬಳಿಕ ಸಿದ್ರಾಮಣ್ಣ ಒಳಗಿರ್ತಾರೋ ಹೊರಗಿರ್ತಾರೋ ಗೊತ್ತಿಲ್ಲ. ಒಳಗಿದ್ದರೂ ಎಲ್ಲಿರ್ತಾರೋ ತಿಳಿದಿಲ್ಲ ಎಂದ ಅವರು, ವಿಭಜನಾವಾದ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಟೀಕಿಸಿದರು. ಬಿಜೆಪಿ, ಭಾರತ್ ಜೋಡೋ ಮಾಡಿದ ಪಕ್ಷ ಎಂದು ತಿಳಿಸಿದರು.
ಗರೀಬಿ ಹಠಾವೋ ಘೋಷಣೆಯಡಿ ಗಾಂಧಿ- ಖರ್ಗೆ- ಸಿದ್ರಾಮಣ್ಣ- ಡಿಕೆಶಿ ಕುಟುಂಬಗಳ ಗರೀಬಿ ದೂರವಾಯಿತು. ಜನ್ ಧನ್ ಸೇರಿದಂತೆ ಹಲವು ಜನಪರ ಯೋಜನೆಗಳ ಮೂಲಕ ನೈಜ ಗರೀಬಿ ಹಠಾವೋ ಮಾಡಿದವರಿದ್ದರೆ ಅದು ಮೋದಿಜಿ ಎಂದು ವಿವರ ನೀಡಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಮ್ ಗೌಡ, ಜಿಲ್ಲಾ ಅಧ್ಯಕ್ಷ ಹೆಚ್.ಕೆ. ಸುರೇಶ್, ನಗರಸಭಾ ಅಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾ ಮತ್ತು ಮಂಡಲ ಮುಖಂಡರು ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment