[08/11, 4:46 PM] Cm Ps: *ದೇಶವನ್ನು ಚೂರು ಮಾಡುವ ಕಾಂಗ್ರೆಸ್ ನಿಂದ ಭಾರತ ಜೋಡೋ ಯಾತ್ರೆ: ಮುಖ್ಯಮಂತ್ರಿ ಬೊಮ್ಮಾಯಿ ವ್ಯಂಗ್ಯ*
ಶಿರಹಟ್ಟಿ, ನವೆಂಬರ್ 8-
ಕಾಂಗ್ರೆಸ್ ನವರು ದೇಶ ಇಬ್ಭಾಗವಾಗುವಂತೆ ಮಾಡಿದರು. ಪಂಜಾಬ್ ನ್ನು ಖಾಲಿಸ್ತಾನ ಮಾಡಲು ಪ್ರಯತ್ನಿಸಿದರು., ದೇಶವನ್ನು ಚೂರು ಮಾಡುವ ಕಾಂಗ್ರೆಸ್ ಪಕ್ಷ ಈಗ ಭಾರತ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವ್ಯಂಗ್ಯವಾಡಿದರು.
ಅವರು ಇಂದು ಶಿರಹಟ್ಟಿಯಲ್ಲಿ ಭಾರತೀಯ ಜನತಾ ಪಕ್ಷ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸತೀಶ್ ಜಾರಕಿಹೊಳಿ ‘ಹಿಂದು’ ಹೊಲಸು ಪದ ಅಂತ ಹೇಳುವ ಮೂಲಕ ಅಲ್ಪ ಸಂಖ್ಯಾತರ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇಡೀ ಭಾರತ ದೇಶದ ಹಿಂದೂಗಳನ್ನು ಅವಮಾನ ಮಾಡಲಾಗಿದೆ. ಶ್ರೀಮಂತ ಹಾಗೂ ಪುರಾತನ ಪರಂಪರೆ, ಸಂಸ್ಕೃತಿಯುಳ್ಳ ಹಿಂದೂ ಧರ್ಮದ ನಮ್ಮದು.ಈ ಬಗ್ಗೆ ಚರ್ಚೆ ಮಾಡೊಣ ಅಂತಾರೆ. ಇದರಲ್ಲಿ ಚರ್ಚೆ ಮಾಡುವುದೇನಿದೆ. ಸಿದ್ದರಾಮಯ್ಯ , ರಾಹುಲ್ ಗಾಂಧಿ ಇದನ್ನು ಖಂಡಿಸಿಲ್ಲ. ಭಾಜಪ ಇದನ್ನು ಸಹಿಸುವುದಿಲ್ಲ.ಭಾರತದ ಅಸ್ಮಿತೆಯ ಪ್ರಶ್ನೆ ಬಂದರೆ, ಭಾಜಪ ಪುಟಿದೇಳುತ್ತದೆ ಎಂದರು.
*ಕಾಂಗ್ರೆಸ್ ನವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ:*
2018 ರ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ಕೊಟ್ಟಿದ್ದೀರಿ. 2018 ರಲ್ಲಿ 10 ಜನರು ಕೇವಲ 500 ಮತಗಳ ಅಂತರದಿಂದ ಸೋತರು. ಅವರು ಗೆದ್ದಿದ್ದರೆ ಸಮ್ಮಿಶ್ರ ಸರ್ಕಾರ ಬರುತ್ತಿಲ್ಲ. ಅಧಿಕಾರ ಇಲ್ಲದೆ ಕಾಂಗ್ರೆಸ್ ಇರಲು ಸಾಧ್ಯವಿಲ್ಲ. ಹಿಂಬಾಗಿಲಿನಿಂದ ಬಂದು ಸರ್ಕಾರ ರಚಿಸಿದರೂ, ಅದೂ ಯಶಸ್ವಿ ಆಗಲಿಲ್ಲ. ಕಾಂಗ್ರೆಸ್ ನವರು ಅಧಿಕಾರವನ್ನು ಕೇವಲ ಸ್ವಾರ್ಥಕ್ಕಾಗಿ ಬಳಸುತ್ತಾರೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಅವರನ್ನು ಮತ್ತೆ ಮನೆಗೆ ಕಳುಹಿಸುವ ಸಂಕಲ್ಪ ಮಾಡಬೇಕು ಎಂದರು.
ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ 27 ಲಕ್ಷ ಕುಟುಂಬಗಳಿಗೆ ಮನೆಗಳಿಗೆ ನೀರು ತಲುಪಿಸುವ ಕೆಲಸ ಮಾಡಿದ್ದೇವೆ. ಕಾಂಗ್ರೆಸ್ ಕಳೆದ ಐವತ್ತು ವರ್ಷದಲ್ಲಿ ಮನೆಗಳಿಗೆ ನೀರು ಕೊಡುವ ಕೆಲಸ ಮಾಡಿಲ್ಲ ಎಂದರು.
*ಅಲ್ಪ ಸಂಖ್ಯಾತರಿಗೂ ಕಾಂಗ್ರೆಸ್ ನಿಂದ ಅನ್ಯಾಯ:*
ಒಡೆದು ಆಳುವುದು ಕಾಂಗ್ರೆಸ್ ನೀತಿ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ, ಧರ್ಮವನ್ನು ಒಡೆದು ಆಡಳಿತ ನಡೆಸಿದರು. ಈಗಲೂ ಅದೇ ರೀತಿ ಮಾಡುತ್ತಿದ್ದಾರೆ.ಅಲ್ಪ ಸಂಖ್ಯಾತರಿಗೂ ಕಾಂಗ್ರೆಸ್ ಅನ್ಯಾಯ ಮಾಡಿದೆ. ವಕ್ಪ್ ಆಸ್ತಿಯನ್ನು ಕಾಂಗ್ರೆಸ್ ನಾಯಕರು ಲಪಟಾಯಿಸಿದ್ದಾರೆ. ಇದಕ್ಕೆ ಸಂಬಂದ ಪಟ್ಟ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದೇವೆ. ಇದಕ್ಕೆ ಪೂರಕ ತನಿಖೆಯನ್ನು ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಬಿ.ಸಿ.ಪಾಟೀಲ್, ರಾಮುಲು, ಸಂಸದ ಶಿವಕುಮಾರ ಉದಾಸಿ ಮತ್ತಿತರು ಹಾಜರಿದ್ದರು.
[08/11, 4:48 PM] Cm Ps: *ಗದಗ ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂ. : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಗದಗ, ನವೆಂಬರ್ 8 :
ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದ ಪಾಲು 600 ಕೋಟಿ ರೂ. ನೀಡಲಾಗುವುದು. ಈ ರೈಲು ಶಿರಹಟ್ಟಿಯ ಮೂಲಕ ಸಾಗುವ ಬಗ್ಗೆ ಪೂರಕ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.
*ಶಿರಹಟ್ಟಿ ಮುಂಡರಗಿ ಕ್ಷೇತ್ರ ಪ್ರವಾಸೋದ್ಯಮ ಗಮ್ಯ :*
ಗದಗ ಜಿಲ್ಲೆಯಲ್ಲಿ ಜಾಲವಾಡಗಿ ನೀರಾವರಿ ಯೋಜನೆಗೆ ಚಾಲನೆ ಹಾಗೂ ತಮಗೊಂಡ ಯೊಜನೆಗಳಿಗೆ ಶೀಘ್ರದಲ್ಲಿ ಮಂಜೂರಾತಿ ನೀಡಲಾಗುವುದು. ಶಿರಹಟ್ಟಿ ಮುಂಡರಗಿ ಕ್ಷೇತ್ರವನ್ನು ಪ್ರವಾಸೋದ್ಯಮದ ಗಮ್ಯವಾಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
*ಲಂಬಾಣಿ ತಾಂಡಾಗಳ ಮನೆಗಳಿಗೆ ಹಕ್ಕುಪತ್ರ :*
ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಒಂದು ತಿಂಗಳಲ್ಲಿ ಮಾಡಲಾಗುವುದು. ತಾಂಡಾದ ಪ್ರತಿಯೊಂದು ಮನೆಗೂ ಹಕ್ಕುಪತ್ರಗಳನ್ನು ಒಂದು ತಿಂಗಳಲ್ಲಿ ತಲುಪಿಸಲಾಗುವುದು ಅವರ ಬೇಡಿಕೆಯನ್ನು ಈಡೇರಿಸುವುದು ಸರ್ಕಾರ ಬದ್ಧತೆಯಾಗಿದೆ ಎಂದು ತಿಳಿಸಿದರು.
*ಕನಕದಾಸರ ಸಭಾ ಭವನಕ್ಕೆ 1 ಕೋಟಿ ರೂ. ಬಿಡುಗಡೆ :*
ಶಿರಹಟ್ಟಿಯಲ್ಲಿ ಕನಕದಾಸರ ಸಭಾ ಭವನ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇದಕ್ಕಾಗಿ 1. ಕೋಟಿ ರೂ.ಶೀಘ್ರವೇ ಬಿಡುಗಡೆ ಮಾಡಲಾಗುವುದು.ಗದಗ ಜಿಲ್ಲೆಗೆ 1.20 ಲಕ್ಷ ರೈತರಿಗೆ ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ 209 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಗದಗ ಜಿಲ್ಲೆಗೆ 97 ಕೋಟಿ ರೂ. ಬೆಳೆ ವಿಮೆ ಬಂದಿದೆ. 9 ಕೋಟಿ ರೂ.ಗಳ ರೈತ ವಿದ್ಯಾನಿಧಿಯನ್ನು ಈ ಜಿಲ್ಲೆಯ ಮಕ್ಕಳಿಗೆ ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆ, 159 ಕೋಟಿ ರೂ. ಗದಗ ಜಿಲ್ಲೆಗೆ ಬಂದಿದ್ದು, ರೈತಾಪಿ ವರ್ಗವನ್ನು ಬಲಿಷ್ಟಗೊಳಿಸಲು ಈ ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದರು.
*ರೈತ ಯಶಸ್ವಿನಿ ಯೋಜನೆಗೆ 500 ಕೋಟಿ ರೂ. :*
ನಮ್ಮ ನಾಯಕರ ಯಡಿಯೂರಪ್ಪ ಅವರು ಸಂಧ್ಯಾ ಸುರಕ್ಷಾ, ಮಕ್ಕಳಿಗೆ ಸೈಕಲ್,ಭಾಗ್ಯ ಲಕ್ಷ್ಮೀ ಯೊಜನೆ, ರೈತರಿಗೆ 10 ಎಚ್ ಪಿ ಉಚಿತ ವಿದ್ಯುತ್, ಕಿಸಾನ್ ಸಮ್ಮಾನ ಯೋಜನೆಗಳ ಮೂಲಕ ರಾಜ್ಯ ಸರ್ಕಾರದಿಂದ 4000 ರೂ. ಸೇರಿ, ಒಟ್ಟು 10,000 ರೂ. ನೀಡಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ತಂದಿದ್ದು, 10.16 ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ದೊರೆತಿದೆ.ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರ, ಟ್ಯಾಕ್ಸಿ , ಆಟೋ ಚಾಲಕರ ಮಕ್ಕಳಿಗೂ ಈ ಯೋಜನೆ ವಿಸ್ತರಣೆ ಮಾಡಲಾಗಿದೆ. ರೈತ ಯಶಸ್ವಿ ಯೋಜನೆ ಪ್ರಾರಂಭಿಸಲಾಗಿದ್ದು, ಇದಕ್ಕಾಗಿ 500 ಕೋಟಿ ರೂ. ಇಡಲಾಗಿದೆ. ರೈತಶಕ್ತಿ,ಡೀಸೆಲ್ ಯೋಜನೆಯಿಂದ 28 ಲಕ್ಷ ರೈತರಿಗೆ ಅನುಕೂಲವಾಗಿದೆ ಎಂದರು.
*5 ಲಕ್ಷ ಮಹಿಳೆಯರು ಹಾಗೂ ಯುವಕರಿಗೆ ಉದ್ಯೋಗ :*
ಹಿಂದುಳಿದ ವರ್ಗದವರ ವಿದ್ಯಾರ್ಥಿಗಳ ವಸತಿನಿಲಯ ವೇತನ , ವಿದ್ಯಾರ್ಥಿ ಹೆಚ್ಚಿಸಲಾಗಿದೆ. 50 ಕನಕದಾಸ ಹಾಸ್ಟೆಲ್ ಗಳು, 100 ಅಂಬೇಡ್ಕರ್ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಿಸುವ ದಿಟ್ಟ ಕ್ರಮವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಸಮಾಜವನ್ನು ಎತ್ತಿಹಿಡಿಯುವ ಕೆಲಸವನ್ನು ಬದ್ಧತೆಯಿಂದ ಮಾಡಲಾಗಿದೆ.
ರಾಜ್ಯದ ಸಮಗ್ರ ಅಭಿವೃದ್ದಿಗಾಗಿ ಪ್ರತಿ ಗ್ರಾಮದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ, ತಲಾ 2 ಸಂಘಕ್ಕೆ 5 ಲಕ್ಷ ರೂ ನೀಡಲಾಗುವುದು. ಅದೇ ರೀತಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ ಪ್ರತಿ ಗ್ರಾಮದ ತಲಾ 2 ಸಂಘಕ್ಕೆ 5 ಲಕ್ಷ ರೂ ಉದ್ಯೋಗ ನೀಡಲಾಗುವುದು. ಇದರಿಂದ 5 ಲಕ್ಷ ಮಹಿಳೆಯರು ಹಾಗೂ 5 ಲಕ್ಷ ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆಯಾಗಿದೆ. ಸರ್ಕಾರದ ಅಭಿವೃಧ್ದಿ ಯೋಜನೆ ಗಳಲ್ಲಿ ಜನರು ಪಾಲುದಾರರನ್ನಾಗಿ ಮಾಡುವ ಗುರಿ ನಮ್ಮದಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಬಿ.ಸಿ.ಪಾಟೀಲ್, ರಾಮುಲು, ಸಂಸದ ಶಿವಕುಮಾರ ಉದಾಸಿ ಮತ್ತಿತರು ಹಾಜರಿದ್ದರು.
[08/11, 6:48 PM] Cm Ps: *ಮುರುಘಾ ಮಠಕ್ಕೆ ಆಡಳಿತಾಧಿಕಾರಿ: ವರದಿಯ ನಂತರ ತೀರ್ಮಾನ: ಸಿಎಂ ಬೊಮ್ಮಾಯಿ*
ಚಿತ್ರದುರ್ಗ, (ಹೊಸದುರ್ಗ) ನವೆಂಬರ್ 08: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಬಂದಿದ್ದು, ನೇಮಿಸುವ ಪೂರ್ವದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದ್ದು, ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಾಣೇಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಮುರುಘಾ ಶ್ರೀಗಳ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ವ್ಯಾಖ್ಯಾನ ಮಾಡುವುದಿಲ್ಲ. ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
*ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ*
ಶಾಸಕ ಸತೀಶ್ ಜಾರಕಿಹೊಳಿಯವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಶತಮಾನಗಳಿಂದ ಯಾವುದೇ ಧರ್ಮ ನಡೆಯುವುದು ನಂಬಿಕೆ, ವಿಶ್ವಾಸದ ಮೇಲೆ ಸ್ಥಾಪಿತವಾಗಿರುವ ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಮಾಡಿದ್ದಾರೆ. ಅದರ ಮೇಲೆ ಚರ್ಚೆ ಮಾಡುವುದೇನಿದೆ. ತಾಂತ್ರಿಕವಾಗಿ ಅವರ ಶಾಲಾ, ಕಾಲೇಜುಗಳ ಪ್ರಮಾಣಪತ್ರದಲ್ಲಿ ಹಿಂದೂ ಎಂದೇ ನಮೂದಾಗಿದೆ. ನಂಬಿಕೆಗಳು ಶತಮಾನಗಳಿಂದ ಇದೆ. ಜನರ ನಂಬಿಕೆಯನ್ನು ಘಾಸಿ ಮಾಡುವಂಥ ಕೆಲಸ ಮಾಡಿ ಪುನ: ಚರ್ಚೆ ಮಾಡುವುದು ಏನೂ ಇಲ್ಲ. ಅವರ ಕ್ಷಮೆಯೂ ಬೇಕಾಗಿಲ್ಲ. ಜನ ತೀರ್ಮಾನ ಮಾಡುತ್ತಾರೆ ಎಂದರು.
*ಜನಸಂಕಲ್ಪಯಾತ್ರೆಗೆ ಸಿದ್ದರಾಮಯ್ಯ ಅವರಿಗೆ ಆಹ್ವಾನ*
ಜನಸಂಕಲ್ಪ ಯಾತ್ರೆಯಲ್ಲಿ ಜನರೇ ಸೇರುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡುತ್ತೇನೆ ಬಂದು ನೋಡಲಿ ಎಂದರು. ಮಾಧ್ಯಮದಲ್ಲಿ ತೋರಿಸುವ ಜನಸಾಗರವೇ ಉತ್ತರ. ಜನಸಂಕಲ್ಪ ಯಾತ್ರೆ, ವಿಜಯಸಂಕಲ್ಪವಾಗಿ ಪರಿವರ್ತನೆಯಾಗಲಿದೆ ಎಂದರು.
[08/11, 7:24 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಾಣೆಹಳ್ಳಿಯ ಶ್ರೀ ಶಿವಕುಮಾರ ಕಲಾ ಸಂಘ ಆಯೋಜಿಸಿದ್ದ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡರು.
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಂಸದರಾದ ಶಿವಕುಮಾರ್ ಉದಾಸಿ, ಜಿ.ಎಂ.ಸಿದ್ದೇಶ್ವರ, ಸಚಿವರಾದ ಬಿ.ಸಿ.ನಾಗೇಶ್, ಬಿ.ಸಿ.ಪಾಟೀಲ್, ವೀರಶೈವ ಮಹಾಸಭಾ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.
[08/11, 8:31 PM] Cm Ps: *ವಸತಿ ಶಾಲಾ ಮಕ್ಕಳಿಗೆ ಸಿ.ಎಂ. ಬಸವರಾಜ ಬೊಮ್ಮಾಯಿ ಕಿವಿಮಾತು*
*ಐ.ಎ.ಎಸ್ , ಐ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಿ ಉನ್ನತ ಅಧಿಕಾರಿಗಳಾಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಚಿತ್ರದುರ್ಗ: ನ.08: ಐ.ಎ.ಎಸ್, ಐ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಿ ಉನ್ನತ ಅಧಿಕಾರಿಗಳಾಗಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಕಿವಿ ಮಾತು ಹೇಳಿದರು.
ಮಂಗಳವಾರ ಹೊಸದುರ್ಗ ತಾಲೂಕು ಸಾಣೇಹಳ್ಳಿ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಿರುಗುಂದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲಾ ಆವರಣದಲ್ಲಿನ ಹಲಿಪ್ಯಾಡ್ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಸತಿ ಶಾಲಾ ವಿದ್ಯಾರ್ಥಿನಿಯರೊಂದಿಗೆ ಕೆಲ ಸಮಯ ಸಂವಾದ ನೆಡೆಸಿದರು.
ಬೆಂಗಾವಲು ಪಡೆ ವಾಹನಗಳು ತೆರಳವ ಹಾದಿಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯರು ಮುಖ್ಯಮಂತ್ರಿಗಳು ನೋಡಿ ಹರ್ಷೋದ್ಗಾರದಿಂದ ಕೂಗಿ ಕೈ ಬಿಸಿದರು. ಬಸವರಾಜ ಬೊಮ್ಮಾಯಿ ಮಕ್ಕಳು ಕಂಡೊಡನೆ ವಾಹನದಿಂದ ಇಳಿದು ಅವರ ಬಳಿಗೆ ತೆರಳಿದರು.
"ನೀವೆಲ್ಲ ಯಾವ ಕ್ಲಾಸ್ ಓದುತ್ತಿದ್ದೀರಿ?" ಎಂದು ಮುಖ್ಯಮಂತ್ರಿಗಳು ವಿದ್ಯಾರ್ಥಿನಿಯರಿಗೆ ಪ್ರಶ್ನಿಸಿದರು.
ಮಕ್ಕಳು ಜೋರಾದ ದನಿಯಲ್ಲಿ 6,7,8,9,10ನೇ ತರಗತಿ ಓದುವುದಾಗಿ ಹೇಳಿದರು.
ಮಕ್ಕಳ ಉತ್ಸಾಹ ಕಂಡ ಮುಖ್ಯಮಂತ್ರಿಗಳು, ಇಷ್ಟು ಜೋರಾಗಿ ನೀವು ಕೂಗಿದರೆ, ನನ್ನ ಕಿವಿಗಳು ನೋವಾಗುತ್ತವೆ ಎಂದು ತಮಾಷೆ ಮಾಡಿ, ಒಬ್ಬರಾಗಿ ಉತ್ತರಿಸುವಂತೆ ಹೇಳಿದರು.
"ವಸತಿ ಶಾಲೆಯಲ್ಲಿ ಚೆನ್ನಾಗಿ ಊಟ ನೀಡುತ್ತಿದ್ದಾರೆ? ಎಷ್ಟು ದಿನಗಳಿಗೆ ಒಮ್ಮೆ ಊರಿಗೆ ಹೋಗಿ ಬರಲು ಅವಕಾಶ ನೀಡುತ್ತಾರೆ? ಊರಲ್ಲಿ ಸ್ನೇಹಿತರು ಸಿಗುತ್ತಾರ? ವಸತಿ ಶಾಲೆ ಸೌಲಭ್ಯ ಹೇಗಿದೆ ಎಂದು ಪ್ರಶ್ನಿಸಿದರೆ ಏನು ಹೇಳುತ್ತಿರಿ?" ಎಂದು ಮುಖ್ಯಮಂತ್ರಿಗಳು ಮಕ್ಕಳನ್ನು ಕೇಳಿದರು.
ಮಕ್ಕಳು ಊಟ ಚನ್ನಾಗಿ ನೀಡುತ್ತಾರೆ. ಊರಿನಲ್ಲಿ ಸ್ನೇಹಿತರ ಬಳಿ ವಸತಿ ಶಾಲೆ ಸೌಲಭ್ಯ ಚನ್ನಾಗಿದೆ ಎಂದು ಹೇಳುವುದಾಗಿ ಉತ್ತರಿಸಿದರು.
ನೀವೆಲ್ಲ ಚನ್ನಾಗಿ ಓದಬೇಕು. ಪೋಷಕರನ್ನು ಬಿಟ್ಟು ಬಂದಿದ್ದೀರಿ ಹೇಗೆ ಅನಿಸುತ್ತಿದೆ ನಿಮಗೆ ಎಂದು ಮಕ್ಕಳ ಯೋಗಕ್ಷೇಮವನ್ನು ಮುಖ್ಯಮಂತ್ರಿ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಪಕ್ಕದಲ್ಲಿ ನಿಂತಿದ್ದ ಚಿತ್ರದುರ್ಗ ಜಿಲ್ಲಾಧಿಕಾರಿ ಜೆ.ಆರ್.ಜಿ.ದಿವ್ಯಪ್ರಭು ಅವರನ್ನು ಮಕ್ಕಳಿ ಮಾದರಿಯಾಗಿ ಪರಿಚಯಿಸಿ "ಇವರು ಐ.ಎ.ಎಸ್ ಪರೀಕ್ಷೆ ಪಾಸು ಮಾಡಿ ಜಿಲ್ಲಾಧಿಕಾರಿಗಳಾಗಿದ್ದಾರೆ. ಮುಂದೆ ಇನ್ನೂ ಉನ್ನತ ಹುದ್ದೆಗೆ ಏರುತ್ತಾರೆ. ಇವರ ಹಾಗೇ ನೀವು ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತಯಾರು ಆಗಬೇಕು. ಉತ್ತಮ ವಿದ್ಯಾಭ್ಯಾಸ ಮಾಡಿ ಪೋಷಕರಿಗೆ,ನಾಡಿಗೆ ಕೀರ್ತಿ ತರಬೇಕು"ಎಂದು ಮಕ್ಕಳಿಗೆ ಸ್ಪೂರ್ತಿದಾಯಕ ಮಾತುಗಳನ್ನು ಆಡಿದರು. ಮಕ್ಕಳು ಹಾಗೂ ಬೋಧಕರೊಂದಿಗೆ ಪೋಟೋ ತೆಗೆಸಿಕೊಂಡರು. ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ ಮಕ್ಕಳ ಸಂತಸ ಇಮ್ಮಡಿಯಾಗಿತ್ತು.
ಈ ಸಂದರ್ಭದಲ್ಲಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಹಾವೇರಿ ಗದಗ ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ
ಗೂಳಿಹಟ್ಟಿ ಶೇಖರ್, ಜಿ.ಹೆಚ್.ತಿಪ್ಪಾರೆಡ್ಡಿ, ಸುರೇಶ್, ಜಿ.ಪಂ.ಸಿಇಓ ದಿವಾಕರ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
[08/11, 10:39 PM] Cm Ps: *ಶಿವ ಸಂಚಾರ ಕಲಾ ಸಂಘಕ್ಕೆ ಸರ್ಕಾರ 2 ಕೋಟಿ ರೂ.ಗಳ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಚಿತ್ರದುರ್ಗ, ನವೆಂಬರ್ 08: ಶಿವ ಸಂಚಾರ ಕಲಾ ಸಂಘಕ್ಕೆ ಈ ವರ್ಷ ಸರ್ಕಾರ ಎರಡು ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಶ್ರೀ ಶಿವಕುಮಾರ ಕಲಾ ಸಂಘ ಸಾಣೆಹಳ್ಳಿ ವತಿಯಿಂದ ಆಯೋಜಿಸಿರುವ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಾಂಸ್ಕೃತಿಕ ವಿಶ್ವವಿದ್ಯಾಲಯದ ಸ್ಥಾಪಿಸುವ ಬಗ್ಗೆ ಶ್ರೀಗಳ ಮನವಿಯನ್ನು ಎಲ್ಲಾ ಆಯಾಮಗಳಲ್ಲಿ ಪರಿಶೀಲಿಸಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
*ಮೌಲ್ಯಗಳುಳ್ಳ ನಾಟಕೋತ್ಸವ*
ಫಲಾಫಲದ ಅಪೇಕ್ಷೆ ಇಲ್ಲದೆ ಭಗವಂತನಲ್ಲಿ ತೋರುವ ಪ್ರೀತಿ ನಿಜವಾದ ಭಕ್ತಿ. ಸಂಸ್ಕೃತಿ ಅಧೋಗತಿಗೆ ಹೋಗಿದೆ. ನಾಗರೀಕತೆ ಮತ್ತು ಸಂಸ್ಕೃತಿಯ ನಡುವೆ ಇರುವ ವ್ಯತ್ಯಾಸವನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು. ಹಂಗಿನ ಬದುಕನ್ನು ತೊರೆಯುವುದೇ ಸಾಧನೆ. ಮುಗ್ಧತೆ ಹಾಗೂ ಆತ್ಮಸಾಕ್ಷಿಯಾಗಿ ನಡೆದುಕೊಳ್ಳುವುದು ಅತ್ಯಂತ ಕಷ್ಟದ ಕೆಲಸ. ಇವೆರಡನ್ನು ಪಡೆಯಲು ನಿರಂತರವಾಗಿ ಪ್ರಯತ್ನವಾಗಬೇಕು. ಆಧ್ಯಾತ್ಮ ಪೂರಕವಾಗಿರುವ ನಾಟಕೋತ್ಸವದಲ್ಲಿ ಮೌಲ್ಯಗಳನ್ನು ಪಡೆದುಕೊಳ್ಳುವ ಕೆಲಸವಾಗಬೇಕು. ಮೌಲ್ಯಗಳನ್ನು ಮಕ್ಕಳಿಗೆ ಕಲಿಸಬೇಕು. ನಿರಂತರವಾಗಿ ಪಂಡಿತಾರಾಧ್ಯರು 25 ವರ್ಷಗಳಿಂದ 78 ನಾಟಕಗಳು, ವರ್ಷಕ್ಕೆ 150 ಪ್ರಯೋಗಗಳನ್ನು ಮಾಡಿಕೊಂಡು ಬಂದಿದ್ದಾರೆ. ಇದನ್ನು ಬೆಂಬಲಿಸುವುದು ನಮ್ಮ ಕರ್ತವ್ಯ. ಸಮಾಜದಲ್ಲಿ ಈ ರೀತಿಯೂ ಪರಿವರ್ತನೆ ಮಾಡಬಹುದು ಎಂದು ತೋರಿಸಿದ್ದಾರೆ ಎಂದರು.
[08/11, 11:16 PM] Cm Ps: *ರಾಹುಲ್ ಗಾಂಧಿ ವಿಫಲ ನಾಯಕ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹಾವೇರಿ, ನವೆಂಬರ್ 08: ರಾಹುಲ್ ಗಾಂಧಿ ಒಬ್ಬ ವಿಫಲ ನಾಯಕ. ಅವರು ಭೇಟಿ ನೀಡಿದ ರಾಜ್ಯದಲ್ಲೆಲ್ಲಾ ಅವರ ಪಕ್ಷ ಸೋತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬ್ಯಾಡಗಿಯಲ್ಲಿ ಭಾಜಪ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದರು.
ಕರ್ನಾಟಕದಲ್ಲಿ ಪಾದಯಾತ್ರೆ ಮಾಡಿದ್ದು, ಇಲ್ಲಿ ಕಾಂಗ್ರೆಸ್ ಹುಲ್ಲು ಹುಟ್ಟುವುದಿಲ್ಲ. ಭಾರತ್ ಜೋಡೋ ಮೂಲಕ ಕಾಂಗ್ರೆಸ್ ನಾಟಕ ಕಂಪನಿ ಪ್ರಾರಂಭಿಸಿದ್ದಾರೆ. ಭಾರತ ಒಕ್ಕೂಟ ಗಟ್ಟಿಯಾಗಿಯೇ ಇದೆ. ಇವರು ಏನು ಜೋಡಿಸಲು ಹೊರಟಿದ್ದಾರೆ ಎಂದು ಗೊತ್ತಿಲ್ಲ ಎಂದರು.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಮೊದಲು ಜೋಡಿಸಲಿ ಆಮೇಲೆ ಭಾರತ್ ಜೋಡೋ ಮಾಡಲಿ ಎಂದರು.
ಶಾಸಕ ಸತೀಶ್ ಜಾರಕಿಹೊಳಿ ಹಿಂದೂ ಎಂಬ ಪದ ಕೆಟ್ಟ ಪದ ಎಂದಿರುವುದು ಮತದ ಸಲುವಾಗಿ ಹಿಂದೂ ಎಂದರೆ ಹೊಲಸು ಶಬ್ಧ ಎಂದಿದ್ದಾರೆ. ಇಂಥ ಚಿಂತನೆ ಇರುವ ಪಕ್ಷ ದೇಶವನ್ನು ಆಳಲು ಲಾಯಕ್ಕಿಲ್ಲ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈವರೆಗೆ ಮಾತನಾಡಿಲ್ಲ. ಅವರನ್ನು ಪಕ್ಷದಲ್ಲಿಟ್ಟು ಕೊಂಡರೆ ಅವರ ಬೆಂಬಲ ಇದೆ ಎಂದು ಅರ್ಥ. ಭಾರತದ ಜನರ ಮನಸ್ಸನ್ನು ನೋಯಿಸಿದ್ದಾರೆ. ಜನ ಇವರ ಪಕ್ಷವನ್ನು ಕಳಿಸುತ್ತಾರೆ. ಇವರಿಗೆ ತಕ್ಕ ಪಾಠ ಕಲಿಸಬೇಕು ಎಂದರು. ಹಿಂದೂ ಎಂದರೆ ಎಲ್ಲರನ್ನೂ ಒಳಗೊಂಡ, ಎಲ್ಲರೂ ನಮ್ಮವರೇ ಎನ್ನುವ ಭಾವನೆವುಳ್ಳವರು. ಭಾರತ ದ ಭವ್ಯ ಭವಿಷ್ಯಕ್ಕೆ ಈ ಮನಸ್ಥಿತಿ ಮಾರಕ. ಇವರನ್ನು ಶಾಶ್ವತವಾಗಿ ಮನೆಗೆ ಕಳಿಸಬೇಕು ಎಂದರು.
[09/11, 11:10 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಸಹೋದರನ ಮಗ ಚಂದ್ರಶೇಖರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರೇಣುಕಾಚಾರ್ಯ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸಚಿವರಾದ ಗೋವಿಂದ ಕಾರಜೋಳ ಹಾಗೂ ಬಿ. ಎ. ಬಸವರಾಜ ಉಪಸ್ಥಿತರಿದ್ದರು.
[09/11, 12:50 PM] Cm Ps: *ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕುಟುಂಬಕ್ಕೆ ಮುಖ್ಯಮಂತ್ರಿಗಳ ಸಾಂತ್ವನ*
*ಸಂಪೂರ್ಣ ತನಿಖೆಯಾಗುವವರೆಗೆ ತೀರ್ಮಾನಕ್ಕೆ ಬರಬಾರದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ದಾವಣಗೆರೆ , ಹೊನ್ನಾಳಿ, ನವೆಂಬರ್ 09: ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಕುರಿತು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದು, ಸಂಪೂರ್ಣ ತನಿಖೆಯಾಗುವವರೆಗೂ, ಕಾರಣ ನಿಖರವಾಗಿ ಪತ್ತೆಯಾಗುವವರೆಗೆ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರೇಣುಕಾ ಚಾರ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅವರ ಕುಟುಂಬದ ಸದಸ್ಯರು ಹಾಗೂ ನಮ್ಮೆಲ್ಲರಿಗೂ ಚಂದ್ರು ಸಾವು ಕಾಡುತ್ತಿದೆ. ಇಲ್ಲಿಗೆ ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ. ನಾನೊಬ್ಬ ಸಹೋದರನಾಗಿ ಬಂದಿದ್ದೇನೆ ಎಂದರು.
*ಹಲವು ಆಯಾಮಗಳು*
ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಎರಡು ರೀತಿಯ ಸಾಧ್ಯಾಸಾಧ್ಯತೆಗಳಿವೆ. ಚಂದ್ರು ಹಿನ್ನೆಲೆ ಗಮನಿಸಿದರೆ ಕೊಲೆಯಾಗಿರುವ ಸಂಭವವಿರಬಹುದು ಎಂಬ ಸಂಶಯಕ್ಕೆ ಎಡೆ ಮಾಡಿಕೊಡುತ್ತದೆ. ಕಾರಿನ ಸ್ಥಿತಿ ನೋಡಿದರೆ ಅಪಘಾತವಾಗಿರಬಹುದುದೆಂಬ ಸಾಧ್ಯತೆಯೂ ಇದೆ. ಯಾವುದನ್ನೂ ನಾವು ತೆಗೆದುಹಾಕುವಂತಿಲ್ಲ. ಎರಡೂ ಆಯಾಮದಲ್ಲಿ ತನಿಖೆ ಮಾಡಲು ಸೂಚಿಸಲಾಗಿದೆ.
ಸಾಕ್ಷ್ಯಾಧಾರಗಳು ಬಹಳ ಮುಖ್ಯ. ಚಂದ್ರು ಹಿಂದಿನ ಸೀಟಿಗೆ ಯಾಕೆ ಬಂದ ಎನ್ನುವ ಪ್ರಶ್ನೆಯಿದೆ. ಅವನ ತಲೆಯಲ್ಲಿ ಕೂದಲು ಹೋಗಿರುವುದು, ಕಾರಿನ ಮುಂದಿನ ಗಾಜು ಒಡೆದಿದೆ, ಹಿಂದಿನ ಗಾಜಿಗೆ ಏನೂ ಆಗದಿರುವುದು ಎನ್ನುವುದು ಮೇಲ್ನೋಟಕ್ಕೆ ಸಾಮಾನ್ಯರಿಗೆ ಕಾಡುವ ಪ್ರಶ್ನೆಗಳು. ಆದರೆ ತನಿಖಾಧಿಕಾರಿಗಳು ಮರಣೋತ್ತರ ಪರೀಕ್ಷೆ ವರದಿ ಬರಬೇಕು. ಅದಕ್ಕೆ ಬೆಂಬಲವಾಗಿ ಎಫ್. ಎಸ್.ಎಲ್ ವರದಿಯೂ ಮುಖ್ಯ. ಅಲ್ಲಿನ ಪದಾರ್ಥಗಳನ್ನು ಆಯ್ಕೆ ಮಾಡಿ ತನಿಖೆ ಮಾಡುತ್ತಾರೆ. ದೇಹದ ನೀರು, ಕಾಲುವೆ ನೀರು ಇವುಗಳ ವರದಿ ಅಗತ್ಯ. ಅಪರಾಧ ಹೇಗಾಗಿರಬಹುದೆಂಬ ಮರುಸೃಷ್ಟಿ ಮಾಡಿ ಪರಿಣಿತರು ನೋಡುತ್ತಾರೆ. ಈ ಮೂರು ತನಿಖೆ ಆದ ನಂತರ ಮುಂದಿನ ತನಿಖೆಯ ಕೈಗೊಳ್ಳಲಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಪ್ರತ್ಯೇಕ ತನಿಖಾ ತಂಡದ ಅಗತ್ಯತೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
*ಭರಿಸಲಾಗದ ದುಃಖ*
ಚಂದ್ರಶೇಖರ್ ಅಗಲಿರುವುದು ಅವರ ಪೋಷಕರಿಗೆ ಭರಿಸಲಾಗದ ದುಃಖವಾಗಿದೆ. ಚಂದ್ರು ಅವರನ್ನು ಶಾಸಕ ರೇಣುಕಾಚಾರ್ಯ ತುಂಬಾ ಹಚ್ಚಿಕೊಂಡಿದ್ದರು. ಸಿವಿಲ್ ಇಂಜಿನಿಯರ್ ಆಗಿಯೂ ಕೂಡ ತಮ್ಮ ದೊಡ್ಡಪ್ಪನಿಗೆ ಸಹಾಯವಾಗಲು ಬಡವರ ಕಣ್ಣೀರು ಒರೆಸುತ್ತಾ, ಇಲ್ಲದವರಿಗೆ ಸಹಾಯ ಮಾಡುತ್ತಾ ಹಬ್ಬ ಹರಿದಿನಗಳಲ್ಲಿ ಭಾಗವಹಿಸುತ್ತಾ ಜನಪ್ರಿಯನಾಗಿದ್ದ. ರೇಣುಕಾಚಾರ್ಯರ ಅರ್ಧ ಭಾರವನ್ನು ಅವನೇ ಹೊತ್ತಿದ್ದ. ಈ ರೀತಿ ಸಾವಾಗುತ್ತದೆ ಎಂದು ಯಾರೂ ಕನಸು ಮನಸಿನಲ್ಲಿ ನೆನಸಿರಲಿಲ್ಲ. ರೇಣುಕಾಚಾರ್ಯ ವರಿಗೆ ಆಘಾತವಾಗಿದೆ. ದೊಡ್ಡ ಯಕ್ಷಪ್ರಶ್ನೆಯಾಗಿ ಈ ಸಾವು ನಮ್ಮೆಲ್ಲರನ್ನು ಕಾಡುತ್ತಿದೆ. ರೇಣುಕಾಚಾರ್ಯ ಸಹೋದರ ಇದ್ದಂತೆ. ಅವರ ಸಂಕಟ ನಮ್ಮ ಸಂಕಟ ಕೂಡ ಎಂದರು.
[09/11, 12:53 PM] Cm Ps: *ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ : ಸಿಎಂ ಬೊಮ್ಮಾಯಿ*
ದಾವಣೆಗೆರೆ, ನವೆಂಬರ್ 09: ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗವನ್ನು ರಚಿಸಲು ಸರ್ಕಾರ ತೀರ್ಮಾನಿಸಿದ್ದು, ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.
[09/11, 1:50 PM] Cm Ps: *ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ. : ಸಿಎಂ ಬೊಮ್ಮಾಯಿ *
ಬೆಳಗಾವಿ, ನವೆಂಬರ್ 09:
ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಇಂದು ರಾಯಭಾಗದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಒಂದೆಡೆ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ಹಿಂಪಡೆಯುವುದಿಲ್ಲ ಎಂದಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಇದನ್ನು ಒಪ್ಪುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನುಣುಚಿ ಕೊಳ್ಳುತ್ತಿದ್ದಾರೆ. ಯಾಕಿಷ್ಟು ಅಸ್ಪಷ್ಟತೆ ಕಾಂಗ್ರೆಸ್ ನಲ್ಲಿ ಇದೆ ಎಂದು ತಿಳಿದಿಲ್ಲ ಎಂದು ಅವರು ತಿಳಿಸಿದರು.
ಸತೀಶ್ ಜಾರಕಿಹೊಳಿ ಒಪ್ಪಿಲ್ಲ ಎಂದರೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಒಪ್ಪಿದ್ದೇವೆ ಎನ್ನಬೇಕು. ಬಹುಸಂಖ್ಯಾತ ಹಿಂದೂಗಳಿದ್ದಾರೆ. ಪರಿಶಿಷ್ಟರಿದ್ದಾರೆ ಅವರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ನೂರು ವರ್ಷಗಳ ಹಳೆ ಪಕ್ಷ ನಡೆದುಕೊಳ್ಳುತ್ತಿದೆ. ಅಂದರೆ ಭಾರತವನ್ನು ಗೊಂದಲ ದಲ್ಲಿಟ್ಟು ಆಳಬೇಕೆನ್ನುವ ಮೂಲ ಸಿದ್ಧಾಂತ ವಿದೆ. ರಾಹುಲ್ ಗಾಂಧಿ ಸುಮ್ಮನಿದ್ದಾರೆ. ಅವರು ಒಂದೆಡೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ, ಇನ್ನೊಂದೆಡೆ ಈ ರೀತಿಯ ಹೇಳಿಕೆಗಳು ಬಂದಾಗ ಪರೋಕ್ಷವಾಗಿ ಬೆಂಬಲ ನೀಡುತ್ತಾರೆ. ಈ ದ್ವಂದ್ವ ನೀತಿ ಕಾಂಗ್ರೆಸ್ ಗೆ ಒಳ್ಳೆಯದಲ್ಲ ಎಂದರು.
*ಯಾರ ಭಾವನೆಗಳಿಗೂ ಧಕ್ಕೆ ತರಬಾರದು ಎಂಬ ಅರಿವಿನಿಂದ ನಡೆದುಕೊಳ್ಳಬೇಕು*
ಹೇಳಿಕೆ ತಪ್ಪು ಎಂದು ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಸತೀಶ್ ಜಾರಕಿಹೊಳಿ ಹೇಳಿರುವ ಬಗ್ಗೆ ಉತ್ತರಿಸಿ ಯಾವ ಪುರಾವೆಯ ಆಧಾರದ ಮೇಲೆ ಅವರು ಹೇಳಿದ್ದಾರೆ ಎಂದು ಬಹಿರಂಗಪಡಿಸಲಿ. ಅವರ ಹೇಳಿಕೆ ಯಾವುದನ್ನು ಆಧಾರಿಸಿದ್ದು ಎನ್ನುವುದೇ ಸಾಕ್ಷಿಯಾಗುತ್ತದೆ. ಅಂತರ್ಜಾಲದಲ್ಲಿ ಹತ್ತು ಹಲವಾರು ವಿಚಾರಗಳಿರುತ್ತವೆ. ಎಲ್ಲಾ ವಿಚಾರಗಳಲ್ಲಿ ಪರ, ವಿರೋಧ ಇದ್ದೇ ಇರುತ್ತದೆ. ಆದರೆ ನಾವು ಯಾವುದನ್ನು ತೆಗೆದುಕೊಳ್ಳಬೇಕು ಎಂದು ವಿಚಾರ ಮಾಡಬೇಕು. ಸಾರ್ವಜನಿಕ ಜೀವನದಲ್ಲಿ ಯಾರ ಭಾವನೆಗಳಿಗೂ ಧಕ್ಕೆ ತರಬಾರದು ಎಂಬ ಅರಿವಿನಿಂದ ನಡೆದುಕೊಳ್ಳಬೇಕು ಎಂದರು.
*ಮುಂದೆ ಅನುಭವಿಸುತ್ತಾರೆ*
ಚರ್ಚೆ ಮಾಡಲು ವಸ್ತುವಿಲ್ಲ. ಅವರ ಹೇಳಿಕೆ ಅತ್ಯಂತ ಅಸಂಗತ್ಯವಾಗಿದೆ. ಮಾಧ್ಯಮ ಗಳಲ್ಲಿ ಅದು ತಪ್ಪು ಎಂದು ಹೇಳಿದ್ದಾರೆ. ಒಪ್ಪಲು ತಯಾರಿಲ್ಲದಿದ್ದರೆ ಮುಂದೆ ಅನುಭವಿಸುತ್ತಾರೆ ಎಂದರು.
[09/11, 4:01 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗಾವಿ ಜಿಲ್ಲೆಯ ರಾಯಬಾಗನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ದುರ್ಯೋಧನ ಐಹೊಳೆ, ಪಿ. ರಾಜೀವ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರವಿಕುಮಾರ್, ಮಾಜಿ ಸಂಸದರಾದ ರಮೇಶ್ ಕತ್ತಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಮತ್ತಿತರರು ಹಾಜರಿದ್ದರು.
[09/11, 6:07 PM] Cm Ps: *ಕಾಂಗ್ರೆಸ್ ನ ದುರಾಡಳಿತ ಮತ್ತು ಅವರ ದೌರ್ಭಾಗ್ಯ ಜನರಿಗೆ ಬೇಡವಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಳಗಾವಿ(ರಾಯಬಾಗ), ನವೆಂಬರ್ 9 :
60 ವರ್ಷ ಕಾಂಗ್ರೆಸ್ ನವರ ಆಡಳಿತವನ್ನು ಜನ ನೋಡಿದ್ದಾರೆ. ಯಾವ ಭಾಗ್ಯವೂ ಜನರನ್ನು ಮುಟ್ಟಲಿಲ್ಲ. ಕಾಂಗ್ರೆಸ್ ನ ದುರಾಡಳಿತ ಮತ್ತು ಅವರ ದೌರ್ಬಾಗ್ಯ ಜನರಿಗೆ ಬೇಡವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗಾವಿ ಜಿಲ್ಲೆಯ ರಾಯಬಾಗನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಅಕ್ಕಿಗೆ ಸಿದ್ದರಾಮಯ್ಯ ಚೀಲದ ಮೇಲೆ ತಮ್ಮ ಫೋಟೊ ಹಾಕಿಸಿಕೊಂಡರು ಅನ್ನದಲ್ಲಿ ಕನ್ನ ಹಾಕುವ ಮೂಲಕ ಅದರಲ್ಲೂ ಲೂಟಿ ಮಾಡಿದರು. ಸಣ್ಣ ನೀರಾವರಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ಬಿಲ್ ತೆಗೆದರು. ಬೆಂಗಳೂರು, ಮಂಗಳೂರು, ಬಳ್ಳಾರಿಯಲ್ಲಿ ಮಣ್ಣಿನಲ್ಲೂ ತಿಂದರು. ಅವರ ಆಡಳಿತಾವಧಿಯಲ್ಲಿ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂದು ಹೋದರು. ಕಾಂಗ್ರೆಸ್ ನ ದುರಾಡಳಿತ ಮತ್ತು ಅವರ ದೌರ್ಬಾಗ್ಯ ಜನರಿಗೆ ಬೇಡವಾಗಿದೆ. ಕಾಂಗ್ರೆಸ್ ನವರು ಅಧಿಕಾರದಲ್ಲಿ ಇದ್ದಾಗ ಸ್ವಂತ ಲಾಭಕ್ಕಾಗಿ ಹಾಗೂ ಸ್ವಾರ್ಥಕ್ಕಾಗಿ ಮಾಡಿಕೊಳ್ಳುತ್ತಾರೆ. ಜನರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದಾರೆ ಎಂದರು.
*ಶಾಸಕ ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಕ್ಲುಲ್ಲಕವಾಗಿ ಮಾತನಾಡಿದ್ದಾರೆ :*
ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಜಗಳವೇ ಇನ್ನೂ ಮುಗಿದಿಲ್ಲ. ಖರ್ಗೆಯವರು ಎಐಸಿಸಿಯ ಮುಳುಗುವ ದೋಣಿಯ ಅಧ್ಯಕ್ಷರಾದ ತಕ್ಷಣ, ಬೆಳಗಾವಿ ಶಾಸಕರಾದ ಸತೀಶ್ ಜಾರಕಿಹೊಳಿ ಹಿಂದೂ ಅಂದರೆ ಹೊಲಸು ಅಂತ ಹೇಳ್ತಾರೆ. ಅವರಿಗೆ ಈ ರೀತಿಯ ಮಾತನಾಡಲು ಮನಸ್ಸು ಹೇಗೆ ಬಂತು ತಿಳಿಯುತ್ತಿಲ್ಲ. ನಮ್ಮ ಸನಾತನ ಧರ್ಮ ಯಾವುದೇ ಜಗತ್ತಿನಲ್ಲಿ ಯಾವುದೇ ಧರ್ಮ ಹುಟ್ಟಿರಲಿಲ್ಲಾ ಆಗಲೇ ಸಿಂಧೂ ಸಂಸ್ಕೃತಿ ಹಿಂದು ಧರ್ಮವಾಗಿ ಬೆಳೆದಿದೆ. ಇಡೀ ಮನುಕುಲವೊಂದೇ ಎಂದು ಸಾರುವ ಹಿಂದೂ ಧರ್ಮದ ಬಗ್ಗೆ ಕ್ಲುಲ್ಲಕವಾಗಿ ಮಾತನಾಡಿದ್ದಾರೆ ಎಂದರು.
*ಕಾಂಗ್ರೆಸ್ ಗೆ ಕೆಟ್ಟ ಕಾಲ ಬಂದಿದೆ :*
ರಾಹುಲ್ ಗಾಂಧಿ ಚುನಾವಣೆ ಬಂದಾಗ ದೇವಸ್ಥಾನ ಕ್ಕೆ ಹೋಗುತ್ತಾರೆ.ಸಿದ್ದರಾಮಯ್ಯ ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತಾರೆ. ನಮ್ಮದು ಸಮಾಜವನ್ನು ಜೋಡಿಸುವ ಕೆಲಸವಾದರೆ, ಕಾಂಗ್ರೆಸ್ ಅವರದು ಅಧಿಕಾರಕ್ಕಾಗಿ ದೇಶ ಒಡೆಯುವ ಕೆಲಸ, ಕರ್ನಾಟಕದ ಅಧಿಕಾರಕ್ಕಾಗಿ ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಭಾರತ ಜೋಡೊ ಯಾತ್ರೆ ಎನ್ನುತ್ತಾರೆ ಆದರೆ ಭಾರತ ಈಗಾಗಲೇ ಒಂದಾಗಿದೆ. ನೀವು ಜೋಡೊ ಅಂತಿರಿ ಇಲ್ಲಿ ಸತೀಶ್ ಜಾರಕಿಹೊಳಿ ತೋಡೊ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಕೆಟ್ಟ ಕಾಲ ಬಂದಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ದುರ್ಯೋಧನ ಐಹೊಳೆ, ಪಿ. ರಾಜೀವ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರವಿಕುಮಾರ್, ಮಾಜಿ ಸಂಸದರಾದ ರಮೇಶ್ ಕತ್ತಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಮತ್ತಿತರರು ಹಾಜರಿದ್ದರು.
Post a Comment