ರೈತರ ಆಂದೋಲನಕ್ಕೆ ಸಂಬಂಧಿಸಿದ 86 ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಒಪ್ಪಿಗೆ

ಡಿಸೆಂಬರ್ 16, 2022
8:51PM

ರೈತರ ಆಂದೋಲನಕ್ಕೆ ಸಂಬಂಧಿಸಿದ 86 ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಒಪ್ಪಿಗೆ

ಫೈಲ್ ಚಿತ್ರ
ರೈತರ ಆಂದೋಲನಕ್ಕೆ ಸಂಬಂಧಿಸಿದ 86 ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಒಪ್ಪಿಗೆ ನೀಡಿದೆ. ಶುಕ್ರವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಈ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ. ರೈತರ ಆಂದೋಲನದ ಸಂದರ್ಭದಲ್ಲಿ ರೈಲ್ವೇ ರಕ್ಷಣಾ ಪಡೆ ದಾಖಲಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ರೈಲ್ವೆ ಸಚಿವಾಲಯ ನಿರ್ದೇಶನ ನೀಡಿದೆ ಎಂದು ಅವರು ಹೇಳಿದರು. ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಕುರಿತು, ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು, ಎಂಎಸ್‌ಪಿಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕಗೊಳಿಸಲು ಮತ್ತು ದೇಶದ ಬದಲಾಗುತ್ತಿರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಬೆಳೆ ಮಾದರಿಯನ್ನು ಬದಲಾಯಿಸಲು ಸರ್ಕಾರವು ಈ ವರ್ಷ ಜುಲೈನಲ್ಲಿ ಸಮಿತಿಯನ್ನು ರಚಿಸಿದೆ ಎಂದು ಸಚಿವರು ತಿಳಿಸಿದರು. ಸಮಿತಿಯ ಸಭೆಗಳು ನಿತ್ಯವೂ ನಡೆಯುತ್ತಿವೆ ಎಂದರು

Post a Comment

Previous Post Next Post