ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

[06/12, 11:19 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಉಪಸ್ಥಿತರಿದ್ದರು.
[06/12, 12:13 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕ ಓಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.
[06/12, 12:46 PM] Cm Ps: ಬೆಂಗಳೂರು, ಡಿಸೆಂಬರ್ 06: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* *ಯುವ ಸಬಲೀಕರಣ* ಮತ್ತು *ಕ್ರೀಡಾ ಇಲಾಖೆಯ* ವತಿಯಿಂದ *ಗಾಜಿನ ಮನೆ,* ರಾಜಭವನದಲ್ಲಿ ಆಯೋಜಿಸಿರುವ *2021ನೇ ಸಾಲಿನ “ಏಕಲವ್ಯ”,* ‘ *ಜೀವಮಾನ ಸಾಧನೆ’, ‘ಕರ್ನಾಟಕ* *ಕ್ರೀಡಾ* *ರತ್ನ* ’ ಹಾಗೂ ‘ *2022-23ರ ಕ್ರೀಡಾ* ಪೋಷಕ ಪ್ರಶಸ್ತಿ ಪ್ರದಾನ’ ಹಾಗೂ ‘ *36ನೇ* *ರಾಷ್ಟ್ರೀಯ* ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ *ನಗದು* *ಪುರಸ್ಕಾರ* ’ ಕಾರ್ಯಕ್ರಮದಲ್ಲಿ *ಗೌರವಾನಿತ್ವ ರಾಜ್ಯಪಾಲರೊಂದಿಗೆ* ಕಾರ್ಯಕ್ರಮದಲ್ಲಿ ಪಾಲ್ಗೊಂಡು *ಮಾತನಾಡಿದರು.*
[06/12, 1:03 PM] Cm Ps: *ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ  ಪರಿಣಾಮ* *ಸಿಎಂ ಬೊಮ್ಮಾಯಿ*

ಬೆಂಗಳೂರು, ಡಿಸೆಂಬರ್ 06:ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ  ಬಿಜೆಪಿ ಗೆ ಬಹುಮತ ಬರಲಿದ್ದು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.

ಅವರು ಇಂದು ಬಾಬಾ ಸಾಹೇಬ್ ಡಾ:ಬಿ.ಆರ್.ಅಂಬೇಡ್ಕರ್ ಅವರ 66 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನ ಸೌಧದ ಪೂರ್ವದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. 

ಜನ ಇಂದು ಸುಶಾನ, ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುತ್ತಾರೆ. ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲವಿಲ್ಲ ಎಂದು ಸ್ಪಷ್ಟವಾಗಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯಭೇರಿ ಹೊಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7 ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ ಎಂದರು. 


*ಚುನಾವಣಾ ದೃಷ್ಟಿಕೋನವಿಲ್ಲ*
ಮಹಾರಾಷ್ಟ್ರ ಸಚಿವರು ಬಾರದೆ ಇರುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಇದು ಮಹಾರಾಷ್ಟ್ರ ದವರು ಬಹಳ ವರ್ಷಗಳಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ವಿವಾದದಿಂದ ಎರಡೂ ಕಡೆ ಪ್ರತಿಕ್ರಿಯೆ ಬರುತ್ತದೆ. ಜನರ ಮಧೆ ಇರುವ ಸಾಮರಸ್ಯ ಕದಡುವ ಕೆಲಸ ಬೇಡ ಎಂದು ಹೇಳಿದ್ದೇನೆ. ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ವಿದ್ದು, ನಮ್ಮ ನಡೆ ಸಂವಿಧಾನಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ. ನಮಗೆ ಚುನಾವಣಾ ದೃಷ್ಟಿಕೋನವಿಲ್ಲ.ಅಥವಾ ವಿವಾದ  ಹುಟ್ಟಿಸುವ ಇರಾದೆಯೂ ಇಲ್ಲ. ನಮ್ಮ ಗಡಿ ಹಾಗೂ ಜನರ ರಕ್ಷಣೆ  ಮಾಡುವ ಕೆಲಸಕ್ಕೆ ನಾವು ಬದ್ಧರಾಗಿದ್ದೇವೆ.  ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿರುವ ಕನ್ನಡಿಗರ ಹಿತಚಿಂತನೆಯನ್ನೂ ಮಾಡುತ್ತಿದ್ದೇವೆ ಎಂದರು.

Post a Comment

Previous Post Next Post