[15/12, 12:35 PM] Cm Ps: .
*ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ*: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕೊಪ್ಪಳ, ಡಿಸೆಂಬರ್ 15: ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.
ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.
ಅವರು ಇಂದು ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
*ಭಿನ್ನಾಭಿಪ್ರಾಯ ಶುದ್ಧ ಸುಳ್ಳು*
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು.
ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು.
ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
[15/12, 12:57 PM] Cm Ps: ಕೊಪ್ಪಳ ಜಿಲ್ಲೆಯ ಪ್ರವಾಸದಲ್ಲಿರುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಗಿಣಿಗೇರಾ ಏರ್ ಸ್ಟ್ರಿಪ್ (ಎಂಎಸ್ಪಿಎಲ್ ವಿಮಾನ ನಿಲ್ದಾಣದ) ಬಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.
[15/12, 6:09 PM] Cm Ps: *ಕೊಪ್ಪಳ ವಿಮಾನ ನಿಲ್ದಾಣಕ್ಕೆ ಶೀಘ್ರ ಅಡಿಗಲ್ಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕೊಪ್ಪಳ, ಡಿಸೆಂಬರ್ 15: ಕೊಪ್ಪಳ ವಿಮಾನ ನಿಲಾಣಕ್ಕೆ ಕೆಕೆಆರ್‍ಡಿಬಿ ಮೂಲಕ 40 ಕೋಟಿ ರೂ.ಗಳನ್ನು ನೀಡಿದ್ದು, ಆದಷ್ಟು ಬೇಗನೇ ಭೂ ಸ್ವಾಧೀನ ಕಾರ್ಯವನ್ನು ಪೂರ್ಣಗೊಳಿಸಿ, ವಿಮಾನನಿಲ್ದಾಣಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿದರು.
ಅವರು ಇಂದು ಕೊಪ್ಪಳ ಜಿಲ್ಲೆಯಲ್ಲಿ ಭಾಜಪ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೊಪ್ಪಳ ಜಿಲ್ಲೆಗೆ ಉತ್ತಮ ಭವಿಷ್ಯವಿದೆ. ಉಕ್ಕು ತಯಾರು ಮಾಡುವ ಅವಕಾಶಗಳಿರುವ ಜಿಲ್ಲೆ. ಸಮಗ್ರ ಅಭಿವೃದ್ಧಿಗೆ ಕಂಕಣ ಬದ್ಧರಾಗಿ ಕೆಲಸ ಮಾಡುವುದಾಗಿ ತಿಳಿಸಿದರು. ಕೊಪ್ಪಳಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅಗತ್ಯವಿದ್ದು, ಅದಕ್ಕಾಗಿ ಬಜೆಟ್ ನಲ್ಲಿ ಅನುದಾನ ಮೀಸಲಿರಿಸಲಾಗುವುದು. ಕನ್ನಡ ನಾಡು ಭಾರತದಲ್ಲಿ ಶೇಷ್ಠ ನಾಡಾಗಿಸಬೇಕು ಎಂದರು.
ಕೊಪ್ಪಳ ಏತ ನೀರಾವರಿ ಯೋಜನೆ ಮಾರ್ಚ್‍ನಲ್ಲಿ ಪ್ರಾರಂಭ
ಕೊಪ್ಪಳ ಏತ ನೀರಾವರಿ ಯೋಜನೆ ಬಿಜೆಪಿ ಪ್ರಾರಂಭ ಮಾಡಿತು. ಈಗ ಪುನ: ಅದನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ನಮ್ಮ ಸರ್ಕಾರವೇ ಮಾಡಲಿದೆ. ಈ ಯೋಜನೆಗೆ ಆಲಮಟ್ಟಿಯಿಂದ ನೀರ ತರುವುದಿತ್ತು.. ಕೊಪ್ಪಳ ಜಿಲ್ಲೆಗೆ ಕಡೇ ಹಂತದಲ್ಲಿ ನೀರು ಮುಟ್ಟುತ್ತಿರಲಿಲ್ಲ. 1. 8 ಟಿಎಂಸಿ ಗೆ ಹೆಚ್ಚು ಮಾಡಿ ನಾರಾಯಣಪುರಕ್ಕೆ ತಂದು ಮೊದಲು ಕೊಪ್ಪಳ ಜಿಲ್ಲೆಗೆ ಕೊಡಬೇಕೆಂದು ಮಾಡಿದ್ದು ಬಿಜೆಪಿ ಸರ್ಕಾರ. ಇದು ಕೊಪ್ಪಳ ಜಿಲ್ಲೆಗೆ ನಮ್ಮ ಸರ್ಕಾರಕ್ಕಿರುವ ಬದ್ಧತೆ. ಈ ಯೋಜನೆಯನ್ನು ಮಾರ್ಚ್ ತಿಂಗಳಲ್ಲಿ ನೀರು ಕೊಡುವ ಮೂಲಕ ಪ್ರಾರಂಭ ಮಾಡುತ್ತೇವೆ. ಬಹಳ ದಿನಗಳ ಕನಸು ನನಸಾಗುತ್ತಿದ್ದು, ಅದು ಕೇವಲ ಭಾಜಪ ಸರ್ಕಾರದಿಂದ ಮಾತ್ರ ಸಾಧ್ಯ ಎಂದರು.
*ಕರ್ನಾಟಕದ ನೀರಾವರಿಗೆ ಬದ್ಧತೆಯ ಕೆಲಸ*
ಸಿಂಗಟಾಲೂರು ಏತ ನೀರಾವರಿ ಯೋಜನೆ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಅದರ ಸಾಮರ್ಥ್ಯವನ್ನು ಹೆಚ್ಚಿಸಿ ಕೊಪ್ಪಳ ಜಿಲ್ಲೆಗೆ ಅನುದಾನ ವಿನಿಯೋಗಿಸಿ 45 ಸಾವಿರಕ್ಕಿಂತ ಹೆಚ್ಚು ಪ್ರದೇಶದಲ್ಲಿ ನೀರಾವರಿಗೆ ಸೌಲಭ್ಯ ಕಲ್ಪಿಸಿದ್ದು ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗ. ಹನಿ ನೀರಾವರಿ ಯೋಜನೆಗೆ ಮಾರ್ಚ್ ತಿಂಗಳಲ್ಲಿ ಅಡಿಗಲ್ಲು ಹಾಕಿ ಈ ಭಾಗದ ಬಹುತೇಕ ಎಲ್ಲಾ ತಾಲ್ಲೂಕುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇಡೀ ಕರ್ನಾಟಕದ ನೀರಾವರಿಗೆ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.
*ತುಂಗಭದ್ರಾ ಬ್ಯಾಲೆನ್ಸಿಂಗ್ ಜಲಾಶಯಕ್ಕೆ ಅಂತಿಮ ಒಪ್ಪಿಗೆ*
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತುಂಗಭದ್ರಾ ಬ್ಯಾಲೆನ್ಸಿಂಗ್ ಜಲಾಶಯದ ಬಗ್ಗೆ ಡಿಪಿಆರ್ ಸಿದ್ಪಡಿಸಲು 20 ಕೋಟಿ ರೂ.ಗಳನ್ನು ಒದಗಿಸಿದ್ದರು. ಆಂಧ್ರಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಮಾತನಾಡಿದ್ದು, ಅವರ ಅಧಿಕಾರಿಗಳ ತಂಡ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಮತ್ತೊಂದು ಸುತ್ತಿನ ಮಾತುಕತೆಯನ್ನು ಜಲಸಂಪನ್ಮೂಲ ಸಚಿವರು ಮಾಡಿ ಅಂತಿಮ ಒಪ್ಪಿಗೆ ಪಡೆದು ಅಡಿಗಲ್ಲು ಹಾಕಿ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದರು.
*ನಿಗದಿತ ಸಮಯದೊಳಗೆ *ಅಂಜನಾದ್ರಿ ಬೆಟ್ಟದ ಕಾಮಗಾರಿ ಪೂರ್ಣ*
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಹಾಗೂ 40 ಕೋಟಿ ರೂ.ಗಳನ್ನು ಕೆಕೆ.ಆರ್ .ಡಿ ಬಿ ಗೆ ನೀಡಿ ಒಟ್ಟು 140 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಈಗಾಗಲೇ ಮಾಸ್ಟರ್ ಪ್ಲಾನ್ ಸಿದ್ಧಗೊಂಡಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಲಿದೆ. ಸಂಪರ್ಕ ರಸ್ತೆಯನ್ನು ಅಭಿವೃದ್ಧಿಗೊಳಿಸುತ್ತಿದ್ದು, ಯಾತ್ರಿ ನಿವಾಸವನ್ನು ನಿರ್ಮಿಸಲಾಗುತ್ತಿದೆ. ಬೆಟ್ಟದ ಸಮಗ್ರ ಅಭಿವೃದ್ಧಿಗೆ ಈ ಎಲ್ಲಾ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಮಾಡಲಿದೆ. ಉತ್ತರ ಭಾರತದಿಂದ ಸಾವಿರಾರು ಜನ ಭಕ್ತರು ಬರುತ್ತಾರೆ. ಮೊನ್ನೆ ನಡೆದ ಉತ್ಸವ ನೋಡಿ ಉತ್ಸಾಹ ಮೂಡಿದೆ. ನಿಗದಿತ ಸಮಯದೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದರು.
*ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಿ*
ಶಿಕ್ಷಣಕ್ಕೆ ಒತ್ತು ನೀಡಿ 8000 ಶಾಲಾ ಕೊಠಡಿಗಳನ್ನು ಒಂದೇ ವರ್ಷದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 100 ಆಸ್ಪತ್ರೆಗಳ ಉನ್ನತೀಕರಣ, ರೈತ ವಿದ್ಯಾ ನಿಧಿ, ಎಸ್‍ಸಿ ಎಸ್‍ಟಿ ಮೀಸಲಾತಿ ಹೆಚ್ಚಳ ಮಾಡಿ ಸ್ವಾವಲಂಬಿ, ಸ್ವಾಭಿಮಾನದ ಜೀವನ ನಡೆಸಲು ಅವಕಾಶ ನೀಡಲಾಗುತ್ತಿದೆ. ಸಾಮಾಜಿಕ ನ್ಯಾಯವನ್ನು ನಮ್ಮ ಸರ್ಕಾರ ನೀಡುತ್ತಿದೆ. ಯುವಕರಿಗೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ, ಸ್ತ್ರೀ ಸಾಮರ್ಥ್ಯ ಯೋಜನೆ, ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಕಾಯಕ ಯೋಜನೆ. ದುಡಿಯುವ ವರ್ಗಕ್ಕೆ ಶಕ್ತಿ ತುಂಬುವ ಕೆಲಸವಾಗುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ನಾವು ಮಾಡಬೇಕಿದೆ . ನವ ಕರ್ನಾಟದಿಂದ ನವ ಭಾರತ ನಿರ್ಮಿಸಬೇಕಿದೆ. ಪ್ರಧಾನಿಗಳ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆಯನ್ನು ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೊಳ, ಆನಂದ ಸಿಂಗ್, ಹಾಲಪ್ಪ ಆಚಾರ್, ಮತ್ತಿತರ ಮುಖಂಡರು ಹಾಜರಿದ್ದರು.
[15/12, 6:13 PM] Cm Ps: *ಭಾರತದ ನಾಯಕತ್ವದಲ್ಲಿ ಹೊಸ ಯುಗ ಪ್ರಾರಂಭ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕೊಪ್ಪಳ, ಡಿಸೆಂಬರ್ 15 :
ಭಾರತದ ನಾಯಕತ್ವದಲ್ಲಿ ಹೊಸ ಯುಗ ಪ್ರಾರಂಭವಾಗಿದ್ದು,2023ರ ವಿಧಾನಸಭಾ ಚುನಾವಣೆಯಲ್ಲಿ ಸಕಾರಾತ್ಮಕತೆಯಿಂದ ಮತ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಭಾರತೀಯ ಜನತಾ ಪಕ್ಷದ ವತಿಯಿಂದ ಕೊಪ್ಪಳ ದಲ್ಲಿ ಆಯೋಜಿಸಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸದೃಡ ಸಂಘಟನೆ ಜೊತೆ ಗೆ ದೇಶ ಮೊದಲು ಎಂಬುದು ಭಾಜಪದ ಉದ್ದೇಶ. ಏಕ ಭಾರತ ಶ್ರೇಷ್ಟ ಭಾರತ ಎಂದಿರುವ ಪ್ರಧಾನಿ ಮೋದಿಯವರ ನಾಯಕತ್ವ ವಿಶ್ವಮಾನ್ಯವಾದುದು. ಅದೇ ರೀತಿ ಕರ್ನಾಟಕದಲ್ಲಿ ಎಲ್ಲರೂ ಒಪ್ಪಿರುವ ನಾಯಕತ್ವ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ. ರಾಜ್ಯದ ಜನಪರ ಹಾಗೂ ರೈತಹೋರಾಟಗಳನ್ನು ಮಾಡಿ, ರೈತ ಸಮೂಹವನ್ನು ಒಗ್ಗೂಡಿಸಿ ಭಾಜಪದ ಪರ ನಿಲ್ಲುವಂತೆ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದಾರೆ. ನರೇಂದ್ರ ಮೋದಿ, ನಡ್ಡಾ ಅವರ ನಾಯಕತ್ವದಲ್ಲಿ ಭಾರತದಲ್ಲಿ ಹೊಸ ಯುಗ ಪ್ರಾರಂಭವಾಗಿದೆ. ಸಕಾರಾತ್ಮಕ ರಾಜಕಾರಣದಿಂದ ದೇಶದ ಹಾಗೂ ನಾಡಿನ ಅಭಿವೃದ್ಧಿಯನ್ನು ಮಾಡುತ್ತಿದ್ದಾರೆ. ಗುಜರಾತಿನ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವು ವಿಶ್ವದಾಖಲೆಯನ್ನು ಸಾಧ್ಯವಾಗಿಸಿದ್ದಾರೆ ಎಂದರು.
*ಕಾಂಗ್ರೆಸ್ ಧೂಳಿಪಟವಾಗಲಿದೆ :*
ನಮ್ಮ ಜನಕಲ್ಯಾಣ ಕಾರ್ಯಕ್ರಮಗಳು, ದೀನದಲಿತರ ಏಳಿಗೆಯ ಕಾರ್ಯಕ್ರಮ ಯಶಸ್ಸಿನ ಮೇಲೆ ಮತ ಪಡೆಯಲಾಗುವುದು. ಈ ಬಾರಿ ಕಾಂಗ್ರೆಸ್ ಧೂಳಿಪಟವಾಗಲಿದೆ. ಇತ್ತೀಚೆಗೆ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟ ಉಪಸಮಿತಿ ಸರ್ಕಾರ ರಚಿಸಿದೆ. ಇದಕ್ಕೆ ಸಿದ್ದರಾಮಯ್ಯನವರು ಇದೊಂದು ಕಣ್ಣೊರೆಸುವ ತಂತ್ರವಾಗಿದ್ದು, ಕಾಂಗ್ರೆಸ್ ಗೆ ಅಧಿಕಾರವನ್ನು ನೀಡಿದರೆ ಈ ಕೆಲಸವನ್ನು ಮಾಡಲಾಗುವುದು ಎಂದರು. ಅವರು ಸಮಾವೇಶಕ್ಕೆ ಹೋಗಿ ಕೇವಲ ದೀಪ ಹಚ್ಚಿಬಂದರೇ ಹೊರತು ಮೀಸಲಾತಿ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಭಂಡತನದ ಬದ್ಧತೆ. ಸಾರ್ವಜನಿಕವಾಗಿ ಸುಳ್ಳು ಹೇಳುವಂತಹ ಪ್ರತೀತಿಯನ್ನು ಬೆಳೆಸಿಕೊಂಡಿದ್ದು, ಈಗ ಜನ ಜಾಗೃತರಾಗಿದ್ದಾರೆ ಎಂದರು.
*ಕಾಂಗ್ರೆಸ್ ತಂತ್ರಗಾರಿಕೆಗೆ ಜನರು ಮರಳಾಗುವುದಿಲ್ಲ :*
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಪೊಳ್ಳು ಭರವಸೆ ನೀಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮೊದಲಿಗೆ 4 ಕೆಜಿ ಅಕ್ಕಿ ನೀಡಿ, ಚುನಾವಣೆಯ ಸಂದರ್ಭದಲ್ಲಿ 7 ಕೆಜೆ ಕೊಡಲು ಪ್ರಾರಂಭಿಸಿದರು. ಆದರೆ ಈಗಾಗಲೇ ನಮ್ಮ ಸರ್ಕಾರದ 5 ಕೆಜಿ ಹಾಗೂ ಗರೀಬ್ ಕಲ್ಯಾಣ ಯೋಜನೆಯಿಂದ 5 ಕೆಜಿ, ಹೀಗೆ ಒಟ್ಟು 10 ಕೆಜಿ ಅಕ್ಕಿಯನ್ನು ನೀಡಲಾಗುತ್ತಿದೆ. ಕಾಂಗ್ರೆಸ್ ನವರ ಅನ್ನಭಾಗ್ಯದಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಜನರು ಇಂತಹ ತಂತ್ರಗಾರಿಕೆಗೆ ಮರಳಾಗುವುದಿಲ್ಲ ಎಂದರು.
ಕೊಪ್ಪಳದ ಅಂಜನಾದ್ರಿ ಕ್ಷೇತ್ರ ಬಹಳ ಪವಿತ್ರವಾದದ್ದು. ಕಾಂಗ್ರೆಸ್ ನವರು ಕೃಷ್ಣೆ ಕಡೆಗೆ ನಮ್ಮ ನಡಿಗೆ ಎಂದರು. ಐದು ವರ್ಷದಲ್ಲಿ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ . 50 ಸಾವಿರ ಕೋಟಿ ಅನುದಾನ ನೀಡುತ್ತೇವೆ ಎಂದವರು 5 ಸಾವಿರ ಕೋಟಿ ಅನುದಾನವನ್ನೂ ನೀಡಲಿಲ್ಲ. ಈ ಭಾಗದ ಜನರಿಗೆ ಮೋಸ ಮಾಡಲಾಗಿದೆ ಎಂದರು
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೊಳ, ಆನಂದ ಸಿಂಗ್, ಹಾಲಪ್ಪ ಆಚಾರ್, ಮತ್ತಿತರ ಮುಖಂಡರು ಹಾಜರಿದ್ದರು.
[15/12, 7:17 PM] Cm Ps: ಸುಗಮ ಸಂಗೀತ ಗಾಯಕ ದಿ. ಶಿವಮೊಗ್ಗ ಸುಬ್ಬಣ್ಣ ಅವರ ಪ್ರತಿಷ್ಠಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಸಾಹಿತಿ ಚಂದ್ರಶೇಖರ ಕಂಬಾರ, ಕವಿ ಎಚ್. ಎಸ್. ವೆಂಕಟೇಶ ಮೂರ್ತಿ, ಲಹರಿ ವೇಲು ಹಾಗೂ ಮತ್ತಿತರರು ಹಾಜರಿದ್ದರು.
[15/12, 9:35 PM] Cm Ps: *ಸಾಹಿತಿಗಳ ಪ್ರತಿಮೆಗಳುಳ್ಳ ಬಯಲು ವಸ್ತುಸಂಗ್ರಹಾಲಯ ಸ್ಥಾಪನೆಗೆ ಸರ್ಕಾರದ ಚಿಂತನೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 15:
ಕನ್ನಡ ನಾಡಿಗೆ ಜ್ಞಾನಪೀಠ ಪ್ರಶಸ್ತಿ ಹಾಗೂ ಅಪರೂಪದ ಸಾಹಿತ್ಯವನ್ನು ನೀಡಿದವರಿಗೆ ಬಯಲು ವಸ್ತುಸಂಗ್ರಹಾಲಯ (ಓಪನ್ ಏರ್ ಮ್ಯೂಸಿಯಂ) ಸ್ಥಾಪಿಸಿ ಅವರ ಪ್ರತಿಮೆಗಳನ್ನು ಅಳವಡಿಸುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನುಡಿನಮನ ಮೊದಲು ಮಾನವನಾಗು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಾಮಾನ್ಯವಾಗಿ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತದೆ. ಆದರೆ ಸಾಹಿತಿಗಳ ಪ್ರತಿಮೆ ಅಪರೂಪ. ವಸ್ತುಸಂಗ್ರಹಾಲಯದಲ್ಲಿ ಶಿವಮೊಗ್ಗ ಸುಬ್ಬಣ್ಣ ಅವರಿಗೆ ವಿಶೇಷವಾದ ಸ್ಥಾನವಿರಲಿದೆ. ವಿಭಿನ್ನ ವ್ಯಕ್ತಿಯಾಗಿದ್ದ ಸುಬ್ಬಣ್ಣ ಅವರ ವ್ಯಕ್ತಿತ್ವ, ಧ್ವನಿ, ಆತ್ಮೀಯತೆ, ಚಿಂತನೆ, ತತ್ವಾದರ್ಶಗಳು ತಮ್ಮದೇ ಆದ ಮೆರಗನ್ನು ಹೊಂದಿವೆ. ಇನ್ನೊಬ್ಬ ಸುಬ್ಬಣ್ಣ ಇರಲು ಸಾಧ್ಯವಿಲ್ಲ. ಹಾಗಾಗಿ ಸುಬ್ಬಣ್ಣ ಅವರನ್ನು ಎಲ್ಲರೂ ಚಿರಕಾಲ ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.
*ಗಾಯನದ ಉತ್ಕೃಷ್ಟತೆ*
ಶರೀಫರು ಧರ್ಮದ ಚೌಕಟ್ಟನ್ನು ಮೀರಿ ತಮ್ಮ ತತ್ವಗಳನ್ನು ಮನಮುಟ್ಟುವಂತೆ ಹೇಳುತ್ತಿದ್ದ ಕವಿ .ಶಿಶುನಾಳ ಶರೀಫರು ದಿನನಿತ್ಯ ಮಾಡುವ ಕರ್ಮಗಳಲ್ಲಿ ತತ್ವಗಳನ್ನು ಅಳವಡಿಸಿದ್ದಾರೆ. ತತ್ವ ಮತ್ತು ಮಾರ್ಮಿಕತೆಗೆ ವಿಶೇಷ ಭಾವನೆಗಳನ್ನು ನೀಡಿದವರು ಶಿವಮೊಗ್ಗ ಸುಬ್ಬಣ್ಣ. ತಮ್ಮ ಭಾಗದಲ್ಲಿ ಪ್ರಸಿದ್ಧರಾಗಿದ್ದ ಶರೀಫರನ್ನು ಇಡೀ ಕರ್ಟಕಕ್ಕೆ ಮತ್ತು ಭಾರತಕ್ಕೆ ಶಿಶುನಾಳ ಶರೀಫರನ್ನು ಪರಿಚಯಿಸಿದ್ದು ಸುಬ್ಬಣ್ಣ. ಸಂತ ಶಿಶುನಾಳ ಶರೀಫರ ತತ್ವ ಹಾಗೂ ಸುಬ್ಬಣ್ಣನವರ ಗಾಯನದ ಉತ್ಕಷ್ಠತೆ ಅನನ್ಯವಾದುದು ಎಂದರು.
*ಸಾಹಿತ್ಯ, ಸಂಗೀತದ ರಕ್ಷಣೆಗೆ ಸದಾ ಬದ್ಧ:*
ಕನ್ನಡ ನಾಡಿನಲ್ಲಿ ಹುಟ್ಟಿ ಅವರ ಸಮಕಾಲೀನರಾಗಿ ನಾವು ಕೂಡ ಇದ್ದೆವು ಎನ್ನುವುದೇ ಭಾವನೆ ಹೆಮ್ಮೆ ಹಾಗೂ ಸಂತೋಷ ತರುತ್ತದೆ. ಕನ್ನಡ ನಾಡು ಹಾಗೂ ಭಾಷೆಯನ್ನು ಶ್ರೀಮಂತಗೊಳಿಸಿದವರೇ ಇಂಥ ಸಾಹಿತಿಗಳು ಹಾಗೂ ಗಾಯಕರು. ಇಂಥವರನ್ನು ನಾವು ಉಳಿಸಿಕೊಂಡು, ಚಿರಸ್ಮರಣೀಯವಾಗಿ ಇಟ್ಟುಕೊಂಡು ಮುಂದಿನ ಜನಾಂಗಕ್ಕೆ ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯ. ಸುಬ್ಬಣ್ಣ ಅವರ ಬಗ್ಗೆ ಗಾಯನಗಳ ಬಗ್ಗೆ ಅಧ್ಯಯನ ಮಾಡಿ, ಇನ್ನಷ್ಟು ಪ್ರಸಿದ್ಧಿಗೆ ತರುವ ಕೆಲಸವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮೂಲಕ ಮಾಡಲಾಗುವುದು ಎಂದರು. ನಾನು ಸುಬ್ಬಣ್ಣ ಅವರ ಅಭಿಮಾನಿ. ಕನ್ನಡ ನಾಡಿನ ಅದ್ಭುತ ಸಾಹಿತ್ಯ, ಸಂಗೀತದ ರಕ್ಷಣೆಗೆ ಸದಾ ಬದ್ಧ ಎಂದು ತಿಳಿಸಿದರು.
*ಕವಿತೆಗಳಿಗೆ ಜೀವ ತುಂಬುವಂತಹ ಹಾಡುಗಾರಿಕೆ :*
ಶಿವಮೊಗ್ಗ ಸುಬ್ಬಣ್ಣ ಅವರಿಗೆ ನಾನು ಒಬ್ಬ ಅಭಿಮಾನಿ ಅಷ್ಟೆ. ಅವರನ್ನು ಹತ್ತಿರದಿಂದ ಬಲ್ಲವನಾಗಿದ್ದರೂ ಅಭಿಮಾನಿಯಾಗಿ ಉಳಿಯುತ್ತೇನೆ. ನಾನು ಅಭಿಮಾನಿಯಾಗಿ ಗುರುತಿಸಿಕೊಂಡಿರಲು ಬಯಸುತ್ತೇನೆ. ಅದನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಅವರ ಗಡುಸಾದ ಧ್ವನಿಯಲ್ಲಿ ಇಂಪಾಗಿ ಹಾಡುವುದು ಸುಲಭವಲ್ಲ. ಅವರು ತಮ್ಮ ಧ್ವನಿಯಿಂದ ಕವಿತೆಗಳಿಗೆ ಜೀವ ತುಂಬುವಂತೆ ಅತ್ಯಂತ ಸರಳ ಹಾಗೂ ಸುಲಭವಾಗಿ ಹಾಡುತ್ತಿದ್ದರು ಎಂದರು.
*ಸಂಗೀತದ ಮೂಲಕ ಜನಮನದಲ್ಲಿ ಚಿರಸ್ಥಾಯಿ :*
ದರಾ ಬೇಂದ್ರೆ, ವಿಕೃ ಗೊಕಾಕ್, ಬಸವರಾಜ ರಾಜಗುರು, ಮಲ್ಲಿಕಾರ್ಜುನ ಮನ್ಸೂರು, ಗಂಗೂಬಾಯಿ ಹಾನಗಲ್ , ಕನಕದಾಸರು ಕೂಡ ನಮ್ಮ ಕ್ಷೇತ್ರದವರು. ಸಂಗೀತ ಸಾಹಿತ್ಯ ಕ್ಷೇತ್ರಕ್ಕೆ ನಮ್ಮ ಸರ್ಕಾರ ಏನಾದರೂ ಕೊಡುಗೆ ನೀಡುತ್ತದೆ. ಸುಬ್ಬಣ್ಣ ಅವರ ಹಾಡು ಸದಾಕಾಲ ಜೀವಂತವಾಗಿರುತ್ತದೆ. ಸ್ವಾಮಿ ವಿವೇಕಾನಂದರು ಹೇಳಿದಂತೆ ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವನು ಸಾಧಕ. ಸುಬ್ಬಣ್ಣನವರು ತಮ್ಮ ಸಂಗೀತ ಹಾಗೂ ಸಾಧನೆಗಳ ಮೂಲಕ ಜನಮನದಲ್ಲಿ ಚಿರಸ್ಥಾಯಿಯಾಗಿರುತ್ತಾರೆ.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಸಾಹಿತಿ ಚಂದ್ರಶೇಖರ ಕಂಬಾರ, ಕವಿ ಎಚ್. ಎಸ್. ವೆಂಕಟೇಶ ಮೂರ್ತಿ, ಲಹರಿ ವೇಲು ಹಾಗೂ ಮತ್ತಿತರರು ಹಾಜರಿದ್ದರು.
Post a Comment