[14/12, 4:47 PM] Cm Ps: *ನಮ್ಮ ಕ್ಲೀನಿಕ್ ಯೋಜನೆಗೆ ಚಾಲನೆ;*
*ಜನವರಿ ಅಂತ್ಯದೊಳಗೆ 438 ನಮ್ಮ ಕ್ಲೀನಿಕ್ ಆರಂಭ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಹುಬ್ಬಳ್ಳಿ ,ಡಿಸೆಂಬರ್14:
ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ಬು ತಲುಪಿಸಲು ಸರ್ಕಾರ ಆದ್ಯತೆ ನೀಡಲಾಗಿದ್ದು, ಜನವರಿ ಅಂತ್ಯದೊಳಗೆ 438 ನಮ್ಮ ಕ್ಲೀನಿಕ್ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿ ತಾಲೂಕಿನ ಬೈರಿದೇವರಕೋಪ್ಪದ ರೇಣುಕಾ ನಗರದಲ್ಲಿ ನಮ್ಮ ಕ್ಲೀನಿಕ್ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರಕಾರ ಹೆಚ್ಚು ಆದ್ಯತೆ ನೀಡಿದೆ. ಆರೋಗ್ಯ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಬಡವರಿಗೆ, ಜನಸಾಮಾನ್ಯರಿಗೆ ಅತ್ಯಂತ ಅವಶ್ಯಕತೆ ಇರುವ ಈ ಆರೋಗ್ಯ ಕಾರ್ಯಕ್ರಮ ನಗರದಲ್ಲಿನ ಬಡವರ ಆರೋಗ್ಯ ದೃಷ್ಟಿಯಿಂದ ಮಹತ್ವದ್ದಾಗಿದೆ. ಬಡವರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಖಾಸಗಿ ಆಸ್ಪತ್ರೆಗಳು ಹೆಚ್ಚು ದರ ವಿಧಿಸುವದರಿಂದ ತೊಂದರೆ ಆಗುತ್ತದೆ. ನಮ್ಮ ಸರಕಾರ ಸ್ಪಂದನಾಶೀಲವಾಗಿದೆ ಎಂದು ತಿಳಿಸಿದರು.
*ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ :*
ಬಡತನ ಮತ್ತು ಅನಾರೋಗ್ಯ ಎರಡು ಅಭಿವೃದ್ಧಿಯ ಶತ್ರುಗಳು. ಬಡತನದಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚುತ್ತದೆ. ಯಾವುದೇ ತಾರತಮ್ಯವಿಲ್ಲದೇ ಎಲ್ಲರಿಗೂ ಉತ್ತಮ ಚಿಕಿತ್ಸೆ, ಉಚಿತ ಔಷಧೋಪಚಾರ ದೊರೆಯುವಂತೆ ರಾಜ್ಯ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ . ಹಿಂದುಳಿದ, ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳನ್ನು ಗುರುತಿಸಿ, ಶಿಕ್ಷಣ, ಆರೋಗ್ಯ ಸೇವೆ, ಮೂಲಭೂತ ಸೌಕರ್ಯಗಳ ಸುಧಾರಣೆಗೆ ಕ್ರಮವಹಿಸಲಾಗಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ.ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
*ಆರೋಗ್ಯ ಸೌಲಭ್ಯಗಳು :*
ಸಮುದಾಯ ಆಸ್ಪತ್ರೆಗಳ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಡಯಾಲಿಸಿಸ್ ಸೈಕಲ್ಸ್ ಗಳನ್ನು 60 ಸಾವಿರಕ್ಕೆ ಹೆಚ್ಚಳ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಹೊಸದಾಗಿ 12 ಕೆಮೊಥೆರಪಿ ಕೇಂದ್ರಗಳನ್ನು ರಾಜ್ಯದಲ್ಲಿ ಆರಂಭಿಸಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಉಚಿತ ಕಣ್ಣು ತಪಾಸಣೆ, ಚಿಕಿತ್ಸೆ ಉಚಿತ ಕನ್ನಡಕ, 500 ಕೋಟಿ ವೆಚ್ಚದಲ್ಲಿ ಕಿವಡರಿಗೆ ಶ್ರವಣಸಲಕರಣೆ ವಿತರಣೆ, ರೈತರಿಗೆ ಯಶ್ವನಿ ಯೋಜನೆ ಮುಂದುವರಿಕೆಗೆ ಕ್ರಮವಹಿಸಲಾಗಿದೆ . ಹುಬ್ಬಳ್ಳಿಯಲ್ಲಿ ರೂ.350 ಕೋಟಿ ವೆಚ್ಚದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಶಂಕುಸ್ಥಾಪನೆ ಮಾಡಲಾಗುವುದು. ನವನಗರ ಕ್ಯಾನ್ಸರ್ ಆಸ್ಪತ್ರೆಗೆ ಹೊಸ ಉಪಕರಣ ಖರೀದಿಗೆ 10 ಕೋಟಿ ಅನುದಾನ ನೀಡಲಾಗಿದ್ದು, ಈ ಆಸ್ಪತ್ರೆ ಬಡವರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದರು.
*ಸುಲಭ ದರದ ಚಿಕಿತ್ಸೆಗೆ ಸಂಶೋಧನೆಗಳು :*
ಬಡವರಿಗೆ, ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಆರೋಗ್ಯ ಚಿಕಿತ್ಸೆ ದೊರೆಯಲು ಹೊಸ ಸಂಶೋಧನೆಗಳಿಂದ ಲಾಭ ದೊರೆಯುವಂತಾಗಬೇಕು.ವೆಂಟಿಲೇಟರ್ಸ್, ಸ್ಕ್ಯಾನರ್ಸ್ ಗಳಂತಹ ಉಪಕರಣಗಳ ಸೌಕರ್ಯ ಬಡಜನರಿಗೆ ದೊರೆಯುವ ದಿಸೆಯಲ್ಲಿ ನೂತನ ಸಂಶೋಧನೆಗಳು ನಡೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
*ರಾಜ್ಯದಲ್ಲಿ 1250 ಜನೌಷಧಿ ಕೇಂದ್ರ :*
ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸುವಲ್ಲಿ ರಾಜ್ಯ ಸರಕಾರ ಹೆಚ್ಚು ಕಾಳಜಿವಹಿಸಿದೆ. ದೇಶದಲ್ಲಿ ಕರ್ನಾಟಕ ರಾಜ್ಯ ಹೆಚ್ಚಿನ ಕೇಂದ್ರದ ಜನೌಷಧಿ ಕೇಂದ್ರಗಳು ಹೊಂದಿರುವ 2 ರಾಜ್ಯವಾಗಿದೆ. ಪ್ರಸ್ತುತ 1250 ಕೇಂದ್ರಗಳಿದ್ದು, ಮುಂದಿನ ವರ್ಷ ಇನ್ನೂ 1000 ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ನಮ್ಮ ಕ್ಲಿನಿಕ್ ನಲ್ಲಿ ಟೆಲಿಮೆಡಿಸಿನ್ ಮುಖಾಂತರ ಆರೋಗ್ಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರತಿ ಜಿಲ್ಲೆಯ ಎಲ್ಲ ಮಕ್ಕಳ ಆರೋಗ್ಯ ತಪಾಸಣೆ ಆಗಬೇಕು. ಜಿಲ್ಲೆಯ ಮಕ್ಕಳ ಚಿಕಿತ್ಸೆ, ಆರೋಗ್ಯ ದಾಖಲೆ ಆಗಬೇಕು. ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚುವಂತೆ ಮಾಡಬೇಕು. ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್ ಹಾಗೂ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[14/12, 4:50 PM] Cm Ps: ಚೌಗಲೆ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಕಿವಿಮಾತು
*ನಿಮ್ಮ ಹಣೆ ಬರಹವನ್ನು ನೀವೇ ಬರೆಯಬೇಕು: ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ*
ಹುಬ್ಬಳ್ಳಿ, ಡಿಸೆಂಬರ್ 14: . ನಿಮ್ಮ ಹಣೆ ಬರಹವನ್ನು ನೀವೇ ಬರೆಯಬೇಕು. ನಿಮ್ಮ ಮೇಲೆ ನಿಮಗೆ ನಂಬಿಕೆ ಇದ್ದರೆ ಜಗತ್ತನ್ನೇ ಗೆಲ್ಲಬಹುದು. ಆತ್ಮವಿಶ್ವಾಸವಿದ್ದರೆ ದೇವರೂ ನಿಮ್ಮನ್ನು ಮೆಚ್ಚುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಚೌಗಲಾ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
*ಅಸಾಮಾನ್ಯ ಶಿಕ್ಷಕ ಚೌಗಲೆ*
ಚೌಗಲೆ ಅವರನ್ನು 25 ವರ್ಷಗಳಿಂದ ಬಲ್ಲೆ. ಬಹಳ ಬುದ್ದಿವಂತರು ಹಾಗೂ ಶ್ರಮಜೀವಿ. ವಿದ್ಯಾರ್ಥಿಯಂತೆ ಆಲೋಚನೆ ಮಾಡುವ ಸ್ವಭಾವದವರು. ಸಾಮಾನ್ಯ ವಿದ್ಯಾರ್ಥಿಗಳ ಬಗ್ಗೆ ಚಿಂತನೆ ಮಾಡುವ ಅಸಾಮಾನ್ಯ ಶಿಕ್ಷಕರು ಚೌಗಲೆ ಅವರು. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಬಹಳ ಅದೃಷ್ಟವಂತರು. ಅವರ ಸಂಸ್ಥೆಯಲ್ಲಿ ಓದುವವರು ಯಶಸ್ವಿಯಾಗುತ್ತಾರೆ. ಇದಕ್ಕೆ ಅವರ ಪ್ರಾಮಾಣಿಕತೆ, ಒಳ್ಳೆ ಮನಸ್ಸಿನ ಶಿಕ್ಷಕರು. ನಿಮ್ಮ ಬದುಕೇ ನಿಮ್ಮ ಕೈಯಲ್ಲಿದೆ. ಶ್ರಮಪಟ್ಟರೆ ಮಾತ್ರ ಹಣೆಬರಹವನ್ನು ತಿದ್ದಬಹುದು ಎಂದರು.
*ತಾರ್ತಿಕವಾಗಿ ಚಿಂತನೆ*
ಯಾಕೆ, ಏನು, ಎಲ್ಲಿ, ಯಾವುದು ಎಂಬ ಪ್ರಶ್ನೆಗಳನ್ನು ಹಾಕಬೇಕು. ಆಗ ಮಾತ್ರ ತಾರ್ತಿಕವಾಗಿ ಚಿಂತಿಸುವ ಗುಣ ಬೆಳೆಯುತ್ತದೆ. ಒಮ್ಮೆ ವಿದ್ಯಾರ್ಥಿಯಾದರೆ, ನಿಮ್ಮ ಜೀವನದ ಕೊನೆಯವರೆಗೂ ವಿದ್ಯಾರ್ಥಿಯಾಗಿ ಯೇ ಉಳಿಯಬೇಕು. ಜೀವನ ಮೊದಲು ಪರೀಕ್ಷೆ ನೀಡಿ ನಂತರ ಪಾಠವನ್ನು ಕಲಿಸುತ್ತದೆ. ಅದಕ್ಕೆ ತಯಾರಾಗಲು ತಾರ್ತಿಕ ಚಿಂತನೆ, ಪರಿಶ್ರಮ, ಪ್ರಾಮಾಣಿಕತೆ ಇರಬೇಕು. ನೀವು ಕಲಿತ ಶಾಲೆ ಶಿಕ್ಷಕರು ಹಾಗೂ ತಂದೆತಾಯಿಗಳು ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ ನೀವು ಬದುಕಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
--
[14/12, 8:07 PM] Cm Ps: ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ಕರೆದಿದ್ದ ಸಭೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಮಿತ್ ಶಾ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಜರಿದ್ದರು.
[14/12, 11:03 PM] Cm Ps: *ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆ ಕೇಂದ್ರ ಗೃಹ ಸಚಿವರ ಸೂಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ನವದೆಹಲಿ , ಡಿಸೆಂಬರ್ 14 :
ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಮರಸ್ಯ ನಿರ್ವಹಣೆಗೆ ತಲಾ ಮೂರು ಸಚಿವರನ್ನು ನೇಮಿಸಿಕೊಳ್ಳಲು ಸೂಚಿಸಿದ್ದಾರೆ. ಗಡಿ ವಿವಾದದ ವಿಷಯಗಳನ್ನು ಬಗ್ಗೆ ಆದಷ್ಟು ಬೇಗನೆ ಚರ್ಚಿಸಿ ಬಗೆಹರಿಸಿಕೊಳ್ಳಲು ಕೇಂದ್ರ ಗೃಹ ಸಚಿವರು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಇಂದು ಕೇಂದ್ರ ಗೃಹ ಸಚಿವರು ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಚಿವರು, ಸಭೆ ನಡೆಸಲಾಯಿತು. ಗಡಿವಿಚಾರದ ಬಗ್ಗೆ ಮಹಾರಾಷ್ಟ್ರದವರು ಸರ್ವೋಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಗ್ಗೆ ಹಾಗೂ ಇತ್ತೀಚಿನ ಬೆಳವಣಿಗೆ ಬಗ್ಗೆ ಚರ್ಚಿಸಲಾಗಿದೆ. ಎರಡೂ ಪಕ್ಷಗಳ ವಿಚಾರಗಳನ್ನು ಚರ್ಚಿಸಿದ ನಂತರ ಕೇಂದ್ರ ಗೃಹ ಸಚಿವರು ಕೆಲವೊಂದು ಸೂಚನೆಗಳನ್ನು ನೀಡಿರುವುದಾಗಿ ತಿಳಿಸಿದರು.
*ಗಡಿವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ :*
ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇದ್ದು, ಜನರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಗಡಿ ವಿಚಾರದ ಬಗ್ಗೆ ಸಂವಿಧಾನಬದ್ಧವಾಗಿ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ತೀರ್ಮಾನ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದಾಗಲಿ, ಜನಸಾಮಾನ್ಯರಿಗೆ ತೊಂದರೆ ಕೊಡುವುದಾಗಲೀ, ವ್ಯಾಪಾರ ವಹಿವಾಟುಗಳಿಗೆ ತೊಂದರೆ ಕೊಡುವುದಾಗಲೀ ಮಾಡಬಾರದು. ಎರಡು ರಾಜ್ಯಗಳ ನಡುವೆ ಬರುವ ಸಣ್ಣಪುಟ್ಟ ವಿಚಾರಗಳ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಚಿವರು ಸೇರಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಎರಡೂ ರಾಜ್ಯಗಳು ನಿರಂತರವಾಗಿ ಪರಸ್ಪರ ಸಂಪರ್ಕದಲ್ಲಿರಬೇಕು. ಗಡಿವಿಚಾರದ ವಾಸ್ತವಾಂಶ, ಪರವಿರೋಧ ನಿಲುವುಗಳೇನೇ ಇದ್ದರೂ, ಎರಡೂ ರಾಜ್ಯಗಳ ರಾಜಕೀಯ ಪಕ್ಷಗಳು ಗಡಿವಿಚಾರದಲ್ಲಿ ಯಾವುದೇ ರಾಜಕಾರಣ ಮಾಡದೇ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವರು ಸ್ಪಷ್ಟವಾದ ನಿರ್ದೇಶನವನ್ನು ನೀಡಿದ್ದಾರೆ. ಜನವರಿಯಲ್ಲಿ ಗಡಿವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಬರಲಿದ್ದು, ಮೇಂಟನಬಿಲಿಟಿ ಬಗ್ಗೆಯೂ ಪ್ರಸ್ತಾಪ ಆಗಲಿದೆ ಎಂದರು
*ಕಾನೂನು ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿ ನೇಮಕಕ್ಕೆ ಸಲಹೆ*
ಸಾಮಾನ್ಯವಾಗಿ ಆಗುವ ಕಲ್ಲು ತೂರಾಟ ನಿಯಂತ್ರಿಸಬೇಕು. ಸಾಮಾನ್ಯ ಪೊಲೀಸರಿಗಿಂತಲೂ ಇದೇ ವಿಷಯದ ಬಗ್ಗೆ ಲಕ್ಷ್ಯ ನೀಡಲು ಹಿರಿಯ ಐ.ಪಿ.ಎಸ್ ಅಧಿಕಾರಿಯನ್ನು ನೇಮಿಸಿಕೊಳ್ಳಲು ಸೂಚನೆ ನೀಡಿದ್ದಾರೆ ಎಂದರು.
*ಯುವಜನೋತ್ಸವಕ್ಕೆ ಪ್ರಧಾನಿಗಳಿಗೆ ಆಹ್ವಾನ*
ಉಳಿದಂತೆ ಪಕ್ಷದ ಸಂಘಟನೆ, ಜನಸಂಕಲ್ಪ ಯಾತ್ರೆ, ಪ್ರಧಾನಿ ಹಾಗೂ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ದಿನಾಂಕಗಳನ್ನು ಚರ್ಚಿಸಲಾಯಿತು. ಪ್ರಧಾನಿಗಳು ಇನ್ನು ಮುಂದೆ ಹೆಚ್ಚಿನ ಸಮಯವನ್ನು ಸಹಜವಾಗಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದರು.
*ಯುವಜನೋತ್ಸವ*
ಜನವರಿ 12 ರಂದು ಯುವಜನೋತ್ಸವವನ್ನು ಹಮ್ಮಿಕೊಳ್ಳಲು ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಚರ್ಚಿಸಲಾಗುತ್ತಿದೆ. ಈ ಕಾರ್ಯಕ್ರಮ ಕ್ಕೆ ಪ್ರಧಾನಿಗಳನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದರು.
ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚಿಸಲು ಸಮಯ ಕೋರಲಾಗಿದೆ. ಸಚಿವ ಸಂಪುಟ ರಚನೆಯ ಅವಶ್ಯಕತೆಗಳ ಬಗ್ಗೆ ವಿವರಗಳನ್ನು ನೀಡಲಾಗಿದೆ ಎಂದರು.
*ಪೆನ್ನಾರ್ ನದಿ ನೀರು:*
ಪೆನ್ನಾರ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ನ್ಯಾಯಾಧಿಕರಣ 3 ತಿಂಗಳಲ್ಲಿ ರಚನೆ ಮಾಡಲು ಸುಪ್ರೀಂಕೋರ್ಟ್ ತಿಳಿಸಿದೆ. ಇದು ಸಣ್ಣ ವಿಚಾರವಾಗಿದ್ದು, ಪ್ರಾಧಿಕಾರ ರಚನೆ ಬೇಡ ಎಂದಿದ್ದೇವೆ. ನಮ್ಮ ನಿಲುವನ್ನು ಸುಪ್ರೀಂಕೋರ್ಟ್ನಲ್ಲಿ ನಾವು ಮರುಪರಿಶೀಲನಾ ಅರ್ಜಿ ಸಲ್ಲಿಸಲಿದ್ದೇವೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದರು.
Post a Comment