[01/12, 10:31 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತ ಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಂಸದ ಮುನಿಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[01/12, 11:16 AM] Cm Ps: ಭಾರತದಲ್ಲಿ ಚೆಕ್ ಗಣರಾಜ್ಯದ ರಾಯಭಾರಿ ಡಾ. ಎಲಿಸ್ಕಾ ಝಿಗೋವ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿತು.
[01/12, 11:21 AM] Cm Ps: *ಕೆಂಗಲ್ ಹನುಮಂತಯ್ಯ ಕರ್ನಾಟಕಕ್ಕೆ ಅಭಿವೃದ್ಧಿಯ ನೀಲನಕ್ಷೆ ಹಾಕಿದವರು*: *ಸಿಎಂ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 01: ಕೆಂಗಲ್ ಹನುಮಂತಯ್ಯನವರು ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಹಾಕಿದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತ ಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಧಾನಸೌಧದ ನಿರ್ಮಾತೃ, ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯ ಅಂಗವಾಗಿ ಅವರನ್ನು ಇಂದು ಸ್ಮರಿಸಿದ್ದೇವೆ. ಅವರ ಕಾರ್ಯಕ್ರಮಗಳು, ಬಿಟ್ಟು ಹೋಗಿರುವ ತತ್ವ ಆದರ್ಶಗಳನ್ನು ಸ್ಮರಿಸುವ ದಿನವಾಗಿದೆ. ಕೆಂಗಲ್ ಹನುಮಂತಯ್ಯ ಅವರು ಮೈಸೂರು ಪ್ರಾಂತ್ಯದ ಅತ್ಯಂತ ಹಿರಿಯ, ಪ್ರಮುಖ ನಾಯಕರಾಗಿದ್ದರು. ಕರ್ನಾಟಕದ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿ ಅವರು ಇಡೀ ಕನ್ನಡ ನಾಡಿನ ಬಗ್ಗೆ ಅಪ್ರತಿಮ ಪ್ರೀತಿ, ಕನ್ನಡಿಗರು ಒಂದಾಗಬೇಕೆಂಬ ಹೆಬ್ಬಯಕೆ ಇತ್ತು. ಮೈಸೂರು ಒಡೆಯರ ರಾಜಮನೆತನದ ಪ್ರಭಾವ ಅವರ ಮೇಲಿತ್ತು. ಅಭಿವೃದ್ಧಿಯನ್ನು ರಾಜಕಾರಣದ ಮೂಲ ಮಂತ್ರವಾಗಬೇಕು ಎಂದು ನಾಡಿನ ಅಭಿವೃದ್ಧಿಯ ಬಗ್ಗೆ ಸದಾ ಚಿಂತನೆ ಮಾಡಿದವರು ಎಂದರು.
*ಜನಮಾನಸದಲ್ಲಿ ಶಾಶ್ವತ ಸ್ಥಾನ*
ಅಂದಿನ ಮೈಸೂರು ರಾಜ್ಯವಾದ ತಕ್ಷಣ ಬೆಂಗಳೂರು ಅದರ ಶಕ್ತಿ ಕೇಂದ್ರವಾಗಬೇಕೆಂದು ಯೋಚಿಸಿ, ಕರ್ನಾಟಕದ ಶಕ್ತಿ ಸೌಧ ವಿಧಾನಸೌಧದ ನಿರ್ಮಿಸಿದರು. ಅವರ ದೂರದೃಷ್ಟಿಯಿಂದ ಭವ್ಯವಾದ ವಿಧಾನಸೌಧ ನಮಗೆ ಕೊಟ್ಟಿದ್ದಾರೆ. ಇಡೀ ಭಾರತ ದೇಶದಲ್ಲಿ ವಿಧಾನ ಮಂಡಲಗಳ ಕಚೇರಿ ಯಾವುದೇ ರಾಜ್ಯದಲ್ಲಿ ಇಲ್ಲ. ಇದರಲ್ಲಿ ಕುಳಿತು ಅವರ ಆಡಳಿತ ಮಾಡಲು ಸಾಧ್ಯವಾಗಲಿಲ್ಲ. ಆದರೆ ಜನಮಾನಸದಲ್ಲಿ, ತಮ್ಮದೇ ಆದ ಶಾಶ್ವತ ಸ್ಥಾನ ಗಳಿಸಿದ್ದಾರೆ. ಕೇಂದ್ರದ ರೈಲ್ವೆ ಸಚಿವರಾಗಿ ರಾಜ್ಯದಲ್ಲಿ ಡಬಲ್ ಲೈನ್ ರೈಲ್ವೆ ಆಗಬೇಕೆಂದು ಪ್ರಥಮ ಬಾರಿಗೆ ಚಿಂತನೆ ಮಾಡಿದವರು ಹನುಮಂತಯ್ಯ ಅವರು. ಅವರು ಹಾಕಿರುವ ಬುನಾದಿಯಿಂದ ಕರ್ನಾಟಕದಲ್ಲಿ ಪ್ರಗತಿ ಕಾಣಲು ಸಾಧ್ಯವಾಯಿತು. ಆಡಳಿತದ ಬಗ್ಗೆ ಬಹಳಷ್ಟು ವಿಚಾರ ಗಳಿದ್ದಂಥವರು. ಆಡಳಿತ ಸುಧಾರಣೆಯ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಸ್ವಾತಂತ್ರ್ಯ ನಂತರ ಅವರನ್ನು ಸದಾ ಸ್ಮರಣೆ ಮಾಡಿ, ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಜಾತಿ , ಮತ, ಪಂಥವನ್ನು ಮೀರಿ ಕೆಲಸ ಮಾಡಿದವರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರಾಗಿದ್ದರು.ಅವರ ಆದರ್ಶ ಬರುವ ದಿನಗಳಲ್ಲಿ ನಮಗೆ ದಾರಿ ದೀಪವಾಗುತ್ತದೆ ಎಂದರು.
ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಂಸದ ಮುನಿಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[01/12, 11:24 AM] Cm Ps: ಬೆಂಗಳೂರು ಜಲ ಮಂಡಳಿ ವತಿಯಿಂದ ಇಂದು ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರಿಗೆ ಹಸ್ತಾಂತರಿಸಲಾಯಿತು. ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಶ್ ಸಿಂಗ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[01/12, 1:01 PM] Cm Ps: *ಗಡಿ ವಿವಾದ *ರಾಜ್ಯದ ನಿಲುವು ಸಂವಿಧಾನಬದ್ದ*- *ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 01: ಸುಪ್ರೀಂಕೋರ್ಟ್ ನಲ್ಲಿ ಗಡಿ ವಿವಾದದ ಪ್ರಕರಣ ವಿಚಾರಣೆಗೆ ಬರಲಿದ್ದು, ಕರ್ನಾಟಕದ ನಿಲುವು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತ ಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ ಎಂದರು.
*ಪಕ್ಷದಲ್ಲಿ ರೌಡಿಗಳಿಗೆ ಅವಕಾಶವಿಲ್ಲ*
ಪಕ್ಷದಲ್ಲಿ ಯಾವುದೇ ರೌಡಿಗಳನ್ನು ನಾವು ಸೇರ್ಪಡೆ ಮಾಡುವುದಿಲ್ಲ. ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.
*ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು: ಚರ್ಚೆಯಾಗಿಲ್ಲ*
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವು ದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದರು.
ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಂಸದ ಮುನಿಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[01/12, 1:18 PM] Cm Ps: ಭಾರತದ ಬ್ರಿಟಿಷ್ ಹೈಕಮಿಷನರ್ ಎಲೆಕ್ಸ್ ಎಲ್ಲಿಸ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೂತನವಾಗಿ ನೇಮಕಗೊಂಡ ಚಂದ್ರು ಅಯ್ಯರ್ ಉಪಸ್ಥಿತರಿದ್ದರು.
[01/12, 5:20 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ 25 ನೇ ರಾಜ್ಯ ಮಟ್ಟದ ಕ್ರೀಡಾಕೂಟ - ರಜತ ಚುಂಚಾದ್ರಿ ಕ್ರೀಡೋತ್ಸವ 2022 ನ್ನು ಉದ್ಘಾಟಿಸಿ ಮಾತನಾಡಿದರು.
ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ಡಾ: ಕೆ. ಸುಧಾಕರ್ , ಆರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
[01/12, 5:38 PM] Cm Ps: *ಸಿಎಂ ಭೇಟಿ ಮಾಡಿದ ಭಾರತದ ಬ್ರಿಟಿಷ್ ಹೈ-ಕಮಿಷನರ್*
*ರಾಜ್ಯದಲ್ಲಿ ಆರ್&ಡಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆಗೆ ಯುಕೆ ಹೂಡಿಕೆದಾರರಿಗೆ ಮುಖ್ಯಮಂತ್ರಿ ಆಹ್ವಾನ*
ಬೆಂಗಳೂರು, ಡಿ.1- ಯು.ಕೆ. ಹೂಡಿಕೆದಾರರು ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದರು.
ಅವರು ಇಂದು ತಮ್ಮನ್ನು ಭೇಟಿಯಾದ ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡಿರುವ ಚಂದ್ರು ಅಯ್ಯರ್ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು.
ಕರ್ನಾಟಕ ರಾಜ್ಯವು ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೂ ಹೊಸ ನೀತಿಯನ್ನು ಜಾರಿಗೆ ತರಲಾಗಿದೆ. ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಅವರು ಯುಕೆ ಹಾಗೂ ಕರ್ನಾಟಕ ನಡುವಿನ ಬಾಂಧವ್ಯ ವಿಶೇಷವಾದುದು. ಕರ್ನಾಟಕದಲ್ಲಿರುವ ಯು.ಕೆ. ಕಂಪೆನಿಗಳ ಸಂಖ್ಯೆ ಗಣನೀಯವಾದುದು. ಒಂದು ವರದಿಯ ಪ್ರಕಾರ ಭಾರತದಲ್ಲಿರುವ 618 ಬ್ರಿಟಿಷ್ ಮಾಲೀಕತ್ವದ ಕಂಪೆನಿಗಳಲ್ಲಿ ಶೇ. 14 ರಷ್ಟು ಕರ್ನಾಟಕದಲ್ಲಿದ್ದು, ದಕ್ಷಿಣ ಭಾರತದಲ್ಲಿಯೇ ಇದು ಅತಿ ಹೆಚ್ಚು ಎಂದು ಗಮನ ಸೆಳೆದರು. ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಅಯನ ರಿನ್ಯೂವೇಬಲ್ ಪವರ್ ಲಿ. ಯುಕೆಯ ಅತಿ ವೇಗವಾಗಿ ಬೆಳೆಯುತ್ತಿರುವ ಕಂಪೆನಿಯಾಗಿದೆ ಎಂದು ಅವರು ವಿವರಿಸಿದರು.
ಈಸ್ ಆಫ್ ಡೂಯಿಂಗ್ ಬಿಸಿನೆಸ್, ವಿದ್ಯುತ್ ಚಾಲಿತ ವಾಹನ ಬಳಕೆಯ ಕುರಿತ ಜಾಗೃತಿ, ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಯುಕೆ ಹಾಗೂ ಕರ್ನಾಟಕದ ಸಹಯೋಗದ ಕುರಿತು ಚರ್ಚಿಸಲಾಯಿತು. ಯುಕೆಯಲ್ಲಿನ ಕನ್ನಡಿಗರ ಕೊಡುಗೆ, ಹಾಗೂ ಅವರು ಭಾರತ ಹಾಗೂ ಯು.ಕೆ. ನಡುವೆ ಬಾಂಧವ್ಯ ಬಲಪಡಿಸುತ್ತಿರುವ ಕುರಿತು ಉಭಯತ್ರರೂ ಮೆಚ್ಚುಗೆ ವ್ಯಕ್ತಪಡಿಸಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಬ್ರಿಟಿಷ್ ಹೈ-ಕಮಿಷನ್ ಸಲಹೆಗಾರ ಮಂಜುನಾಥ್ ಕೆ.ಎಸ್. ಉಪಸ್ಥಿತರಿದ್ದರು.
[01/12, 5:47 PM] Cm Ps: ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು-
*ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಶಿವಮೊಗ್ಗ, ಡಿಸೆಂಬರ್ 1 :
ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಭದ್ರಾವತಿ ಹೆಲಿಪ್ಯಾಡ್ ಬೊಮ್ಮನಕಟ್ಟೆ ಹತ್ತಿರ ಮಾಧ್ಯಮದವರೊಂದಿಗೆ ಮಾತನಾಡಿದರು.
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಯಿಸಿ, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿಯಾವುದೇ ಗೊಂದಲವಿಲ್ಲ ಎಂದರು.
[01/12, 7:02 PM] Cm Ps: *ಮಾನಸಿಕ ಒತ್ತಡವಿಲ್ಲದೆ, ಮುಕ್ತವಾಗಿ ವಿದ್ಯೆ ಕಲಿಯುವುದು 21 ನೇ ಶತಮಾನದ ಅವಶ್ಯಕತೆ: ಬಸವರಾಜ ಬೊಮ್ಮಾಯಿ*
ಶಿವಮೊಗ್ಗ, ಡಿಸೆಂಬರ್ 01: ಸಾಮಾನ್ಯ ಕುಟಂಬದ ಮಗು ಯಾವುದೇ ರೀತಿಯ ಮಾನಸಿಕ ಒತ್ತಡವಿಲ್ಲದೆ, ಮುಕ್ತವಾಗಿ ವಿದ್ಯೆ ಕಲಿಯುವುದು 21 ನೇ ಶತಮಾನದ ಅವಶ್ಯಕತೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ 25 ನೇ ರಾಜ್ಯ ಮಟ್ಟದ ಕ್ರೀಡಾಕುಟ- ರಜತ ಚುಂಚಾದ್ರಿ ಕ್ರೀಡೋತ್ಸವ 2022 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
*ವಿಶ್ವಮಾನವರು*
ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ 1.25 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಎಲ್ಲಾ ಮಕ್ಕಳಿಗೆ ಅನ್ನ, ವಿದ್ಯೆ, ಸಂಸ್ಕøತಿಯ ದಾನ ನೀಡಿ, ತಂದೆತಾಯಿಯಂತೆ ಸಲಹುತ್ತಿದ್ದಾರೆ. ದೈಹಿಕ ಶಿಕ್ಷಣ ನೀಡಿ ವಿಶ್ವಮಾನವರನ್ನಾಗಿ ಮಕ್ಕಳನ್ನು ಬೆಳೆಸುತ್ತಿದ್ದಾರೆ. ಈ ಸಂಸ್ಥಾನಕ್ಕೆ ಕೋಟಿ ನಮನಗಳು ಎಂದರು. ಯಾವುದೇ ಬೇಧಭಾವವಿಲ್ಲದೆ ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಇಲ್ಲಿಗೆ ಬಂದು ಇಂದು ನಾನು ಬಹಳ ಪುನೀತನಾಗಿದ್ದೇನೆ. ಆದಿಚುಂಚನಗಿರಿ ಸಂಸ್ಥೆ ಎಷ್ಟು ಬೆಳೆದಿದೆ ಎನ್ನುವುದಕ್ಕೆ ಈ ಕ್ರೀಡಾಕೂಟಗಳು ಸಾಕ್ಷಿಯಾಗಿವೆ ಎಂದರು.
*ಶಿಕ್ಷಣದ ಸರಳೀಕರಣ*
ನಮ್ಮ ದೇಶ ವಿದ್ಯೆಯಲ್ಲಿ ಮುಂದೆ ಬರಲು ಇಂಥ ಹಲವಾರು ಸಂಸ್ಥೆಗಳು ಮಾಡುತ್ತಿರುವ ಸೇವೆಯನ್ನು ಮೆಚ್ಚಿಕೊಳ್ಳಬೇಕು. ವಿದ್ಯೆಯನ್ನು ಇನ್ನಷ್ಟು ಸರಳಗೊಳಿಸಬೇಕು. ವಿದ್ಯೆಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಕೆಲವು ನಿರ್ಬಂಧಗಳ ಅವಶ್ಯಕತೆ ಇದೆ. ಆದರೆ ಈ ಬಗ್ಗೆ ನಾವೆಲ್ಲಾ ಚಿಂತನೆ ಮಾಡಬೇಕು. ಇದೇ ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಶಿಕ್ಷಣದ ಸರಳೀಕರಣ ಮಾಡಿದ್ದಾರೆ. ಸರಳವಾಗಿ, ಸಹಜವಾಗಿ ಮತ್ತು ಸ್ಪಷ್ಟವಾಗಿ ಕಲಿಯಲು ಹಾಗೂ ಕಲಿಕೆಯಲ್ಲಿ ಹತ್ತು ಹಲವಾರು ಆಯ್ಕೆಗಳನ್ನು ನೀಡುವ ಅವಕಾಶವಿದೆ. ಬಹುವಿಧ ಕೋರ್ಸ್ಗಳನ್ನು ಒಂದೇ ಸಂದರ್ಭದಲ್ಲಿ ಪಡೆದುಕೊಳ್ಳಲು ಅವಕಾಶವಿರುವ ನೀತಿಯನ್ನು ಕರ್ನಾಟಕವು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸುತ್ತಿದೆ. ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾರಂಭವಾಗಿದ್ದು, ಪ್ರಾಥಮಿಕ ವಲಯದಲ್ಲಿಯೂ ಪ್ರಾರಂಭ ಮಾಡುತ್ತಿದ್ದೇವೆ ಎಂದರು.
*ಆಟದ ಜೊತೆ ಬದುಕಿನಲ್ಲಿ ಗೆಲ್ಲಿ*
ಇದುವರೆಗೂ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತವಾಗಿರಲಿಲ್ಲ. ವಿದ್ಯಾರ್ಥಿ ಕೇಂದ್ರಿತವಾಗಿರುವ ಶಿಕ್ಷಣ ನೀತಿಯ ಅಗತ್ಯವಿದೆ. 21 ನೇ ಶತಮಾನ ಜ್ಞಾನದ ಶತಮಾನ. ವಿದ್ಯಾರ್ಥಿಗಳಿಗೆ ಅವರ ಭವಿಷ್ಯದ ಜೊತೆಗೆ ಇಡೀ ಮನುಕುಲದ ಭವಿಷ್ಯವನ್ನು ಬರೆಯುವ ಶಕ್ತಿ ಈ ಸಂಸ್ಥೆಗಳು ನೀಡುತ್ತಿವೆ. ಆರೋಗ್ಯವೇ ಭಾಗ್ಯ. ಸಚ್ಛಾರಿತ್ರ್ಯ ಬೆಳೆಸಿಕೊಳ್ಳಲು ಬುದ್ದಿಶಕ್ತಿ ಬೇಕು. ಬುದ್ಧಿಶಕ್ತಿಗೆ ದೈಹಿಕ ಶಕ್ತಿ ಸದೃಢವಾಗಿರಬೇಕು. ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಿ ಯಶಸ್ವಿಯಾಗಬೇಕು. ಕ್ರೀಡೆಗಳಲ್ಲಿ ಬಾಗವಹಿಸುವುದು ಬಹಳ ಮುಖ್ಯ. ಸೋಲು ಗೆಲುವು ಸಾಮಾನ್ಯ. ಇಂದು ಸೋತವನು ನಾಳೆ ಗೆಲ್ಲಬಹುದು. ಆದರೆ ಭಾಗವಹಿಸುವಿಕೆ ಬಹಳ ಮುಖ್ಯ. ಅತ್ಯಂತ ಸ್ಪೂರ್ತಿದಾಯಕವಾಗಿ ಆಡವಾಡಬೇಕು. ಸಂತೋಷಕ್ಕಾಗಿ ಆಟವಾಡಬೇಕು. ಇದನ್ನು ರಕ್ಷಣಾತ್ಮಕ ಆಟ ಎನ್ನುತ್ತಾರೆ. ಆಟ ಆಡುವಾಗ ಸೋಲಬಾರದು ಎಂದು ಆಡಬೇಕು .ಇನ್ನೊಂದು ಗೆಲ್ಲಬೇಕು ಎಂದು ಆಡಬೇಕು. ಇದನ್ನು ಆಕ್ರಮಣಕಾರಿ ಆಟ ಎನ್ನುತ್ತಾರೆ. ಎರಡೂ ಒಂದೇ ಇದ್ದರೂ ಅದರ ವಿಧಾನ ಬೇರೆ ಬೇರೆ ಇದೆ. ಕ್ರೀಡೆ ಹಾಗೂ ಬದುಕಿನಲ್ಲಿ ಗೆಲ್ಲಲು ಗೆಲ್ಲಬೇಕೆಂದು ಆಡಬೇಕು. ಸೋತಾಗ ಕುಗ್ಗಬಾರದು. ಮತ್ತೊಂದು ಅವಕಾಶ ಸಿಗುತ್ತದೆ. ನಿರಂತರವಾಗಿ ಪ್ರಯತ್ನಪಟ್ಟವರಿಗೆ ಗೆಲುವು ಸಾಧ್ಯ. ಬದುಕಿನಲ್ಲಿ ಗೆಲ್ಲಿ ಎಂದು ಮಕ್ಕಳಿಗೆ ಹಾರೈಸಿದರು.
*ಕನ್ನಡನಾಡನ್ನು ಮರೆಯಬೇಡಿ*
ಬಾಲಗಂಗಾಧರನಾಥ ಸ್ವಾಮೀಜಿಯವರು 500 ಕ್ಕೂ ಹೆಚ್ಚು ಸಂಸ್ಥೆಗಳನ್ನು ಕಟ್ಟಿ, ಉತ್ಕøಷ್ಟ ಶಿಕ್ಷಣ ನೀಡಿ, ಕರ್ನಾಟಕದ ಸಂಸ್ಕøತಿಯನ್ನು ಎತ್ತಿ ಹಿಡಿಯುವ ಮಹಾನ್ ಕಾರ್ಯ ಅವರಿಂದಾಗಿದೆ. ಅದನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದು ಗುಣಾತ್ಮಕತೆ ಹಾಗೂ ಆಧ್ಯಾತ್ಮವನ್ನು ತುಂಬಿ, ಜಗತ್ತಿನಲ್ಲಿಯೇ ಸರ್ವ ಶ್ರೇಷ್ಠ ಮಠ, ಶಿಕ್ಷಣ ಸಂಸ್ಥಾನವನ್ನು ಬೆಳೆಸುತ್ತಿರುವ ನಿರ್ಮಾಲಾನಂದನಾಥಸ್ವಾಮಿಗಳು ಮೇಧಾವಿಗಳು. ಖದ್ದು ಆಧ್ಯಾತ್ಮಿಕ ಚಿಂತಕರು. ಆಧ್ಯಾತ್ಮ, ತತ್ವಜ್ಞಾನ ಮತ್ತು ವಿಜ್ಞಾನವನ್ನು ಅರ್ಥಮಾಡಿಕೊಂಡಿದ್ದಾರೆ. ವಿಜ್ಞಾನ ಮತ್ತು ತತ್ವಜ್ಞಾನದ ಸಂಗಮ ಅವರು. ಅವರ ಆಶೀರ್ವಾದದೊಂದಿದೆ ಮಕ್ಕಳ ಬದುಕು ಹಸನುಗೊಳುತ್ತದೆ. ಎಷ್ಟೇ ಎತ್ತರಕ್ಕೆ ಹೋದರೂ ಕನ್ನಡನಾಡನ್ನು, ಆದಿಚುಂಚನಗಿರಿ ಮಠವನ್ನು ಹಾಗೂ ಜನ್ಮ ಕೊಟ್ಟ ತಂದೆತಾಯಿಯರನು ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ಡಾ: ಕೆ. ಸುಧಾಕರ್ , ಆರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
--
[01/12, 9:01 PM] Cm Ps: *ಕೆಂಗಲ್ ಹನುಮಂತಯ್ಯ ಕರ್ನಾಟಕಕ್ಕೆ ಅಭಿವೃದ್ಧಿಯ ನೀಲನಕ್ಷೆ ಹಾಕಿದವರು*: *ಸಿಎಂ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 01: ಕೆಂಗಲ್ ಹನುಮಂತಯ್ಯನವರು ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಹಾಕಿದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತ ಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಧಾನಸೌಧದ ನಿರ್ಮಾತೃ, ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯ ಅಂಗವಾಗಿ ಅವರನ್ನು ಇಂದು ಸ್ಮರಿಸಿದ್ದೇವೆ. ಅವರ ಕಾರ್ಯಕ್ರಮಗಳು, ಬಿಟ್ಟು ಹೋಗಿರುವ ತತ್ವ ಆದರ್ಶಗಳನ್ನು ಸ್ಮರಿಸುವ ದಿನವಾಗಿದೆ. ಕೆಂಗಲ್ ಹನುಮಂತಯ್ಯ ಅವರು ಮೈಸೂರು ಪ್ರಾಂತ್ಯದ ಅತ್ಯಂತ ಹಿರಿಯ, ಪ್ರಮುಖ ನಾಯಕರಾಗಿದ್ದರು. ಕರ್ನಾಟಕದ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿ ಅವರು ಇಡೀ ಕನ್ನಡ ನಾಡಿನ ಬಗ್ಗೆ ಅಪ್ರತಿಮ ಪ್ರೀತಿ, ಕನ್ನಡಿಗರು ಒಂದಾಗಬೇಕೆಂಬ ಹೆಬ್ಬಯಕೆ ಇತ್ತು. ಮೈಸೂರು ಒಡೆಯರ ರಾಜಮನೆತನದ ಪ್ರಭಾವ ಅವರ ಮೇಲಿತ್ತು. ಅಭಿವೃದ್ಧಿಯನ್ನು ರಾಜಕಾರಣದ ಮೂಲ ಮಂತ್ರವಾಗಬೇಕು ಎಂದು ನಾಡಿನ ಅಭಿವೃದ್ಧಿಯ ಬಗ್ಗೆ ಸದಾ ಚಿಂತನೆ ಮಾಡಿದವರು ಎಂದರು.
*ಜನಮಾನಸದಲ್ಲಿ ಶಾಶ್ವತ ಸ್ಥಾನ*
ಅಂದಿನ ಮೈಸೂರು ರಾಜ್ಯವಾದ ತಕ್ಷಣ ಬೆಂಗಳೂರು ಅದರ ಶಕ್ತಿ ಕೇಂದ್ರವಾಗಬೇಕೆಂದು ಯೋಚಿಸಿ, ಕರ್ನಾಟಕದ ಶಕ್ತಿ ಸೌಧ ವಿಧಾನಸೌಧದ ನಿರ್ಮಿಸಿದರು. ಅವರ ದೂರದೃಷ್ಟಿಯಿಂದ ಭವ್ಯವಾದ ವಿಧಾನಸೌಧ ನಮಗೆ ಕೊಟ್ಟಿದ್ದಾರೆ. ಇಡೀ ಭಾರತ ದೇಶದಲ್ಲಿ ವಿಧಾನ ಮಂಡಲಗಳ ಕಚೇರಿ ಯಾವುದೇ ರಾಜ್ಯದಲ್ಲಿ ಇಲ್ಲ. ಇದರಲ್ಲಿ ಕುಳಿತು ಅವರ ಆಡಳಿತ ಮಾಡಲು ಸಾಧ್ಯವಾಗಲಿಲ್ಲ. ಆದರೆ ಜನಮಾನಸದಲ್ಲಿ, ತಮ್ಮದೇ ಆದ ಶಾಶ್ವತ ಸ್ಥಾನ ಗಳಿಸಿದ್ದಾರೆ. ಕೇಂದ್ರದ ರೈಲ್ವೆ ಸಚಿವರಾಗಿ ರಾಜ್ಯದಲ್ಲಿ ಡಬಲ್ ಲೈನ್ ರೈಲ್ವೆ ಆಗಬೇಕೆಂದು ಪ್ರಥಮ ಬಾರಿಗೆ ಚಿಂತನೆ ಮಾಡಿದವರು ಹನುಮಂತಯ್ಯ ಅವರು. ಅವರು ಹಾಕಿರುವ ಬುನಾದಿಯಿಂದ ಕರ್ನಾಟಕದಲ್ಲಿ ಪ್ರಗತಿ ಕಾಣಲು ಸಾಧ್ಯವಾಯಿತು. ಆಡಳಿತದ ಬಗ್ಗೆ ಬಹಳಷ್ಟು ವಿಚಾರ ಗಳಿದ್ದಂಥವರು. ಆಡಳಿತ ಸುಧಾರಣೆಯ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಸ್ವಾತಂತ್ರ್ಯ ನಂತರ ಅವರನ್ನು ಸದಾ ಸ್ಮರಣೆ ಮಾಡಿ, ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಜಾತಿ , ಮತ, ಪಂಥವನ್ನು ಮೀರಿ ಕೆಲಸ ಮಾಡಿದವರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರಾಗಿದ್ದರು.ಅವರ ಆದರ್ಶ ಬರುವ ದಿನಗಳಲ್ಲಿ ನಮಗೆ ದಾರಿ ದೀಪವಾಗುತ್ತದೆ ಎಂದರು.
ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Post a Comment