[16/12, 10:53 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ವಿಜಯ ದಿವಸ ಸಮಾರಂಭವನ್ನು ಉದ್ಘಾಟಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ಎಂ.ಬಿ ಶಶಿಧರ್, ಉಪಸ್ಥಿತರಿದ್ದರು
[16/12, 11:26 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಕ್ಕರೆ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕಿ ಪೂರ್ಣಿಮಾ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
[16/12, 11:44 AM] Cm Ps: *ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ*
ಬೆಂಗಳೂರು, ಡಿಸೆಂಬರ್ 16: ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲಾ ಸಹಾಯ, ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಅವರು ಇಂದು ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ವಿಜಯ ದಿವಸ ಸಮಾರಂಭವನ್ನು ಇಂದು ಉದ್ಘಾಟಿಸಿ ಮಾತನಾಡಿದರು.
ಭಾರತ ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ಬಾಂಗ್ಲಾ ವಿಮೋಚನೆ , ಕಾರ್ಗಿಲ್ ಸೇರಿದಂತೆ ಅನೇಕ ಯುದ್ಧಗಳಲ್ಲಿ ಕರ್ನಾಟಕದ ಯೋಧರು ತಮ್ಮ ಪ್ರಾಣ ತ್ಯಾಗ ಮಾಡಿ ಭಾರತಕ್ಕೆ ವಿಜಯ ತಂದುಕೊಟ್ಟಿದ್ದಾರೆ. ಅದರ ಸ್ಮರಣಾರ್ಥವಾಗಿ ವಿಜಯ ದಿವಸ ಆಚರಣೆ ಮಾಡಲಾಗುತ್ತದೆ.
ರಕ್ಷಣಾ ಪಡೆಗಳ ಸೇವೆ ಅತ್ಯಂತ ಶ್ರೇಷ್ಠ ಸೇವೆ. ಅಲ್ಲಿಗೆ ಸೇರುವ ಮುನ್ನವೇ ಎಲ್ಲಾ ತ್ಯಾಗಕ್ಕೂ ಸಿದ್ದರಾಗಿರಬೇಕು ಎಂದು ಮನಗಂಡು ಸೇರುತ್ತೇವೆ. ದೇಶದ ರಕ್ಷಣೆ ಹಾಗೂ ಅದರ ಜನರಿಗಾಗಿ ಪ್ರಾಣ ತ್ಯಾಗ ಮಾಡುವ ಮೂಲಕ ದೇಶಕ್ಕೆ ವಿಜಯ ಪ್ರಾಪ್ತಿ ಯಾಗಿದ್ದನ್ನು ನೋಡಲೂ ಅವರಿರುವುದಿಲ್ಲ. ಮಾನವೀಯತೆಯ ಅತ್ಯಂತ ಶ್ರೇಷ್ಠ ಗುಣವನ್ನು ಹೊಂದಿರುವ ಸೇವೆ ಇದು ಎಂದರು.
*ಮನದಾಳದ ನಮನ*
ಮಾನವನ ಹೊಂದಾಣಿಕೆಯ ಗುಣ ಅತ್ಯಂತ ಶ್ರೇಷ್ಠವಾದುದು. ಪ್ರತಿಕೂಲ ವಾತಾವರಣದಲ್ಲಿಯೂ ಬದುಕಿ, ಸೈನಿಕರು ಹೋರಾಡುತ್ತಾರೆ. ದೇಶವನ್ನು ವಿಜಯಪಥದತ್ತ ನಡೆಸಿ, ಪ್ರಾಣತ್ಯಾಗ ಮಾಡಿದ ಹಾಗೂ ಗಾಯಗೊಂಡ ಎಲ್ಲ ಯೋಧರಿಗೂ ಮನದಾಳದ ನಮನ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಅವರ ಅಪ್ರತಿಮ ತ್ಯಾಗ ದೇಶಕ್ಕೆ ವಿಜಯ ತಂದು ಸುರಕ್ಷಿತವಾಗಿ ಇಟ್ಟಿದೆ. ಸಾಮಾನ್ಯ ನಾಗರಿಕರು ಶಾಂತಿಯಿಂದಿರಲು ಸಾಧ್ಯವಾಗಿದೆ ಎಂದರು.
*ಸನ್ನದ್ಧತೆ*
ಯಾವುದೇ ಸಮಯದಲ್ಲಿ ಯುದ್ಧಕ್ಕೆ ತಯಾರಿರಲು ಅತ್ಯಂತ ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಅಭ್ಯಾಸವನ್ನು ಬೇಡುವ ರಕ್ಷಣಾ ಪಡೆ ಮಾನಸಿಕವಾಗಿಯೂ ಸನ್ನದ್ಧರಾಗಿರಬೇಕು ಎಂದರು.
*ನಾಯಕತ್ವ*
ಆಧುನಿಕ ಕಾಲದಲ್ಲಿ ತಮ್ಮ ಸರಹದ್ದನ್ನು ವಿಸ್ತರಿಸಲು ಪ್ರಯತ್ನಿಸುತ್ತವೆ. ಆದರೆ ಈ ಕಾಲದಲ್ಲಿ ಅದಕ್ಕೆ ಅವಕಾಶವಿಲ್ಲ. ಆದರೂ ಸಾಹಸವನ್ನು ಮಾಡುತ್ತಿರುತ್ತಾರೆ. ಕೆಲವು ಹಿಂದಿನ ಅನುಭವದಿಂದ ಸೈನಿಕರು ಗಡಿಯಲ್ಲಿ ಸದಾ ಸನ್ನದ್ಧರಾಗಿದ್ದಾರೆ. ಯಾವುದೇ ದೇಶ ಒಂದಿಚು ಒಳಗೆ ಬಂದರೂ ಹಿಮ್ಮೆಟ್ಟಿಸಿ ಸೋಲಿಸುವ ಶಕ್ತಿ ನಮ್ಮ ಸೈನಿಕರಿಗಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕಿದೆ ಎಂದರು.
ರಕ್ಷಣಾ ಪಡೆಗಳಿಂದಾಗಿ ನಮ್ಮ ದೇಶ ಸುರಕ್ಷಿತವಾಗಿದ್ದು, ನಾವು ಪ್ರಗತಿಯತ್ತ ಸಾಗಬೇಕು. ನಾಗರಿಕರಾಗಿ ದೇಶವಾಸಿಗಳಿಗೆ ಉತ್ತಮ ಜೀವನ ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ಎಂ.ಬಿ ಶಶಿಧರ್, ಉಪಸ್ಥಿತರಿದ್ದರು
[16/12, 12:22 PM] Cm Ps: .
*ಕಾಂಗ್ರೆಸ್ ಭಯೋತ್ಪಾದಕರ ಪರವೋ ಅಥವಾ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಲಿ*ಸಿಎಂ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 16:
ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಯವರು, ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರವೋ ಅಥವಾ ದೇಶವನ್ನು ಉಳಿಸುವ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಜಯ ದಿವಸ್ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿ ಬಾರಿ ದೇಶದ ನೈತಿಕತೆ, ಪೊಲೀಸ್ ಇಲಾಖೆಯ ನೈತಿಕತೆ ಕಡಿಮೆ ಮಾಡುವಂತೆ ಮಾತನಾಡುವುದು ದೇಶಭಕ್ತರ ಕೆಲಸವಲ್ಲ. ಇದನ್ನು ಸ್ಪಷ್ಟವಾಗಿ ಹೇಳಿದರೆ ಜನ ತೀರ್ಮಾನ ಮಾಡುತ್ತಾರೆ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗ ಅದರ ಪ್ರಕ್ರಿಯೆ ಹಾಗೂ ತನಿಖೆಯನ್ನೇ ಪ್ರಶ್ನೆ ಮಾಡುವುದು ಭಯೋತ್ಪಾದಕ ಸಂಘಟನೆಗಳಿಗೆ ನೈತಿಕ ಬಲ ತಂದುಕೊಡುತ್ತದೆ ಎಂದರು.
*ಶೋಭೆ ತರುವಂಥದ್ದಲ್ಲ*
ಕುಕ್ಕರ್ ಬಾಂಬ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಒಬ್ಬ ವ್ಯಕ್ತಿ ಬಾಂಬ್ ಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಕುಕ್ಕರ್ ನಲ್ಲಿ ಹಾಕಿಕೊಂಡು ಹೋಗುವಾಗ ಸ್ಪೋಟವಾಗಿದೆ. ಅದನ್ನು ಮಂಗಳೂರಿನಲ್ಲಿ ಸ್ಪೋಟ ಗೊಳಿಸುವ ಉದ್ದೇಶ ವಿತ್ತು ಎನ್ನುವುದು ಸ್ಪಷ್ಟವಾಗಿದೆ. ಆತ ತನ್ನ ಗುರುತನ್ನು ಮರೆಮಾಚಿ ಈಗಾಗಲೇ 2-3 ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದು, ಭಯೋತ್ಪಾದಕ ಎಂದ ಮೇಲೆ ದೇಶದ ಹೊರಗೂ ಸಂಪರ್ಕವಿತ್ತು ಎನ್ನುವುದು ಕೂಡ ಸ್ಪಷ್ಟ ಎಂದರು.
*ತುಷ್ಟೀಕರಣದ ರಾಜಕಾರಣ*
ಇಂಥ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರು ಅದು ಆಕಸ್ಮಿಕ, ಪ್ರಕರಣ ಮುಚ್ಚಿಹಾಕಲು ಮಾಡಿದ್ದಾರೆ ಎನ್ನುವುದು ನಿಜಕ್ಕೂ ಅವರಿಗೆ ಶೋಭೆ ತರುವಂಥದ್ದಲ್ಲ. ಅವರ ನೀತಿಯೇ ಹೀಗಿದೆ. ಭಯೋತ್ಪಾದಕ ಚಟುವಟಿಕೆಗಕನ್ನು ಕ್ಷುಲ್ಲಕ ವಾಗಿ ಕಾಣುವುದು, ಭಯೋತ್ಪಾದಕರಿಗೆ ಬೆಂಬಲ ನೀಡುವುದು, ಗಲ್ಲಿಗೇರಿಸಿದಾಗ ಟೀಕೆ ಮಾಡುವ ಅವರ ಪ್ರವೃತ್ತಿ, ಚುನಾವಣೆಯ ತುಷ್ಟೀಕರಣದ ತಂತ್ರ. ಈ ರೀತಿ ಮಾತನಾಡಿದರೆ ಅಲ್ಪಸಂಖ್ಯಾತರ ಮತಗಳು ದೊರಕಬಹುದೆಂಬ ಹಳೇ ತಂತ್ರ. ಅದನ್ನೇ ಬಳಕೆ ಮಾಡಿದ್ದಾರೆ. ಆದರೆ ಜನ ಜಾಗೃತರಾಗಿದ್ದು, ಇದೆಲ್ಲಾ ನಡೆಯೋಲ್ಲ ಎಂದರು.
*ಕಾನೂನು ಬಾಹಿರವಾಗಿ ಮತ ಹಾಕಿಸುವ ಪ್ರವೃತ್ತಿ*
ಡಿ.ಕೆ.ಶಿವಕುಮಾರ್ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ 2017 ರಲ್ಲಿ ಆ ಸಂಸ್ಥೆ ಗೆ ಆಜ್ಞೆ ಕೊಟ್ಟಿದ್ದೆ ಕಾಂಗ್ರೆಸ್ ಎನ್ನುವುದನ್ನು ಡಿ.ಕೆ.ಶಿವಕುಮಾರ್ ಮರೆಯಬಾರದು. ಕಾನೂನು ಬಾಹಿರವಾಗಿ ಮತ ಹಾಕಿಸುವ ಪ್ರವೃತ್ತಿ ಕಾಂಗ್ರೆಸ್ಸಿಗಿದೆ. ನಾವು ತನಿಖೆ ಮಾಡಿಸಿ ಬಂಧನವೂ ಆಗಿದೆ. ಯಾವ ಕ್ಷೇತ್ರಗಳಲ್ಲಿ ಯಾವ ಪ್ರದೇಶಗಳಿಂದ ಬಂದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಚುನಾವಣೆ ಆಯೋಗ ಹೊಸ ತಾಂತ್ರಿಕ ವಿಧಾನವನ್ನು ಅಳವಡಿಸಿದ್ದು, ಫೋಟೋ ಮೂಲಕವೇ ಬೇರೆಡೆ ಮತದಾರರ ಚೀಟಿ ಹೊಂದಿದ್ದಾರೆ ಗುರುತಿಸಿ ತೆಗೆದುಹಾಕಲಾಗುವುದು ಎಂದರು.
[16/12, 1:15 PM] Cm Ps: *46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 16 :
ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.
46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾನಿಧಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು. ಮಕ್ಕಳಿಂದ ಯಾವುದೇ ರೀತಿಯ ಅರ್ಜಿಯನ್ನು ಪಡೆಯುವುದಲ್ಲ. ವಿದ್ಯಾನಿಧಿ ಮಕ್ಕಳ ಹಕ್ಕು ಎಂದು ತಿಳಿಸಿದರು.
*ನೇಕಾರರಿಗೆ ಕಾಯಕ ಯೋಜನೆ :*
ನೇಕಾರರ ಕಸುಬನ್ನು ಉನ್ನತೀಕರಿಸಿ ಉಳಿಸುವುದು ಬಹಳ ಮುಖ್ಯ. ಬಹಳ ಗಂಟೆಗಳ ಕಾಲ ಹತ್ತಿಯ ಮಧ್ಯೆಯೆ ಕೆಲಸ ಮಾಡಬೇಕಾಗುವುದರಿಂದ ನೇಕಾರರಿಗೆ ಅಸ್ತಮಾ, ಟಿಬಿಯಂತಹ ಸಮಸ್ಯೆಗಳು ಕಾಡುತ್ತವೆ. ಆದ್ದರಿಂದ ಕೈಮಗ್ಗ ನೇಕಾರರ ಕಾಳಜಿ ವಹಿಸಲು ನೇಕಾರ ಸಮ್ಮಾನ್ ಯೋಜನೆ ಯಡಿ 2000 ರೂ.ಗಳ ಆರ್ಥಿಕ ನೆರವನ್ನು 5000 ರೂ.ಗಳಿಗೆ ಹೆಚ್ಚಿಸಲಾಗಿದೆ. ಅವರ ಹತ್ತು ಹಲವಾರು ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ನಾಳೆ ವಿದ್ಯುತ್ಛಕ್ತಿ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಲಾಗುತ್ತಿದೆ. ಕೈಮಗ್ಗ ನೇಕಾರರಿಗೆ ಸಾಲ ಹಾಗೂ ಬಡ್ಡಿಮನ್ನಾ ಯೋಜನೆಗಳನ್ನು ಜಾರಿಯಲ್ಲಿವೆ. ನೇಕಾರರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕಾಯಕ ಯೋಜನೆಯಡಿ ಪ್ರತಿ ಕುಶಲಕರ್ಮಿಗೆ 50 ಸಾವಿರ ವರೆಗೆ ಧನಸಹಾಯ ನೀಡಲಾಗುತ್ತಿದೆ ಎಂದರು.
*46,864 ನೇಕಾರರಿಗೆ ಧನಸಹಾಯ:*
ನೇಕಾರ ಸಮ್ಮಾನ್ ಯೋಜನೆಯಡಿ 46,864 ಫಲಾನುಭವಿಗಳಿಗೆ 5000 ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಒಟ್ಟು 23.43 ಕೋಟಿ ರೂ.ಗಳು ನೇರವಾಗಿ ನೇಕಾರರ ಬ್ಯಾಂಕ್ ಖಾತೆಗೆ ವರ್ಗಾವಣೆಗೆ ಇಂದು ಚಾಲನೆ ನೀಡಲಾಗಿದೆ ಎಂದರು.
*ಜವಳಿ ಉದ್ಯಮಕ್ಕೆ ನೇಕಾರರ ಮಹತ್ವದ ಕೊಡುಗೆ :*
ಅತಿ ಹೆಚ್ಚು ಉದ್ಯೋಗವನ್ನು ಸೃಷ್ಟಿ ಮಾಡಿದ್ದು ನೇಕಾರ ವೃತ್ತಿ. ಸ್ವಾತಂತ್ರ್ಯ ಹೋರಾಟವನ್ನು ಗಟ್ಟಿಗೊಳಿಸಿದ್ದು ನೇಕಾರರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸ್ವದೇಶಿ ಉಡುಪುಗಳನ್ನೇ ಧರಿಸಬೇಕೆಂಬ ಗುರಿ ಸಾಧಿಸಲು ನೇಕಾರರು ಮಹತ್ವದ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯ ದೊರೆತ ನಂತರ ಜವಳಿ ಉದ್ಯಮ ಬೆಳೆದಿರದಿದ್ದ ಸಂದರ್ಭದಲ್ಲಿ ದೇಶದಲ್ಲಿ ನೇಕಾರರ ಕೊಡುಗೆ ಮಹತ್ತರವಾದ ಸ್ಥಾನಮಾನವಿದೆ. ನೇಕಾರಿಕೆ ಎಂಬುದು ಕಲಾಕೌಶಲ್ಯವನ್ನೊಳಗೊಂಡ ವೃತ್ತಿ. ವಂಶಪಾರಂಪರ್ಯವಾಗಿ ಬಂದ ಕರಕುಶಲ ಕಲೆಯನ್ನು ಇಂದಿಗೂ ಪೋಷಿಸಿಕೊಂಡು ಬಂದಿದ್ದಾರೆ. ಈಗ ತಂತ್ರಜ್ಞಾನವನ್ನು ಬಳಸಿಕೊಂಡು ಅದ್ಭುತವಾದ ಕೌಶಲ್ಯವನ್ನು ತಮ್ಮ ವೃತ್ತಿಯಲ್ಲಿ ಪ್ರದರ್ಶಿಸುತ್ತಾರೆ. ತಂತ್ರಜ್ಞಾನ ಬದಲಾವಣೆಯಿಂದ ಜವಳಿ ಉದ್ಯಮೂ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ ಎಂದರು.
ಈ ಸಂದರ್ಭದಲ್ಲಿ ಸಕ್ಕರೆ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕಿ ಪೂರ್ಣಿಮಾ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
[16/12, 1:24 PM] Cm Ps: ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮುಖಂಡರುಗಳಾದ ಇಂದ್ರೇಶ್ ಸಿ.ಪಿ ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
[16/12, 4:37 PM] Cm Ps: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
[16/12, 6:03 PM] Cm Ps: *ಮೈಸೂರು ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳಗಾರರಿಗೆ 21 ಕೋಟಿ ರೂ. ಪಾವತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಡ್ಯ, ಡಿಸೆಂಬರ್ 16:
ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, 21 ಕೋಟಿ ರೂ. ಮೊತ್ತದ ಕಬ್ಬಿನ ಬಿಲ್ಲ ಮೊದಲನೆ ಕಂತನ್ನು ರೈತರಿಗೆ ಪಾವತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಗೆ ಎಥನಾಲ್ ಪ್ಲಾಂಟ್ ಸ್ಥಾಪಿಸಿ, ಈ ಭಾಗದ ರೈತರ ಕಬ್ಬನ್ನು ಅರೆಸುವ ಕಾರ್ಯವನ್ನು ಮಾಡಲಾಗುವುದು. ಪಾಂಡವಪುರ ಶ್ರೀರಾಂಪುರ ಸಕ್ಕರೆ ಕಾರ್ಖಾನೆಯಲ್ಲಿ ಮಂಡ್ಯ ಜಿಲ್ಲೆಯ ಕಬ್ಬನ್ನು ಅರೆಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಕೆಆರ್ ಎಸ್ ಜಲಾಶಯದ ಕ್ರೆಸ್ಟ್ ಗೇಟ್ ಗಳು ಹಳೆಯದಾಗಿದ್ದು, ನೀರು ಸೋರುತ್ತಿತ್ತು. 16 ಗೇಟ್ ಗಳನ್ನು ಈವರೆಗೆ ಬದಲಾಯಿಸಲಾಗಿದ್ದ, ಮುಂದಿನ ದಿನಗಳಲ್ಲಿ ಎಲ್ಲ ಹಳೆಯ ಗೇಟ್ ಗಳನ್ನು ಸಂಪೂರ್ಣವಾಗಿ ಬದಲಾಯಿಸಿ ಹೊಸ ಗೇಟ್ ಗಳನ್ನು ಅಳವಡಿಸಲಾಗುವುದು ಎಂದರು.
*ಮಂಡ್ಯ ಜಿಲ್ಲೆಯ 180 ಕೆರೆ ತುಂಬಿಸಲು 454 ಕೋಟಿ ರೂ. :*
ವಿ.ಸಿ.ನಾಲೆಯ ನಿರ್ಮಾಣವನ್ನು 330 ಕೋಟಿ ರೂ.ಗಳ ವೆಚ್ಚದಲ್ಲಿ ನಮ್ಮ ಸರ್ಕಾರ ಪೂರ್ಣಗೊಳಿಸಿದೆ. ರೈತರ ಹೊಲಕ್ಕೆ ನೀರು ತಲುಪಿಸುವ ಸಂಕಲ್ಪದೊಂದಿಗೆ , ವಿ.ಸಿ.ನಾಲೆ ಹೆಬ್ಬಗೋಡಿ ಆಧುನೀಕರಣಕ್ಕೆ 606 ಕೋಟಿ ರೂ.ಗಳನ್ನು ಮಂಜೂರಾತಿಯನ್ನು ನೀಡಲಾಗುವುದು. ಮಂಡ್ಯ ಜಿಲ್ಲೆಯ 180 ಕೆರೆಗಳನ್ನು ತುಂಬಿಸುವ 454 ಕೋಟಿ ರೂ.ಗಳ ಅನುದಾನವನ್ನು ಸಧ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು. ರೈತರ ಸಬಲೀಕರಣ, ಔದ್ಯೋಗಿಕರಣ ಆಗುವುದು ಭಾಜಪದ ಸಂಕಲ್ಪ ಎಂದರು.
*ಸಾಧನೆಗಳ ರಿಪೋರ್ಟ್ ಕಾರ್ಡ್ :*
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಕರ್ನಾಟಕದಲ್ಲಿ ಭಾಜಪ ಗೆಲ್ಲಬೇಕೆಂಬ ಆಶಯದಿಂದ ಜನಸಂಕಲ್ಪ ಯಾತ್ರೆಯ ನೇತೃತ್ವವನ್ನು ವಹಿಸಿದ್ದಾರೆ. ಭಾರತೀಯ ಜನತಾ ಪಕ್ಷ ಸಕಾರಾತ್ಮಕ ರಾಜಕಾರಣವನ್ನು ಮಾಡುತ್ತದೆ. ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಎಂಬ ಮಂತ್ರದೊಂದಿಗೆ ರಾಜ್ಯದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಕಲ್ಯಾಣ ಕಾರ್ಯಕ್ರಮಗಳ ಸಾಧನೆಯ ರಿಪೋರ್ಟ್ ಕಾರ್ಡ್ ನ್ನು ಮುಂದಿಟ್ಟುಕೊಂಡು ಈ ಬಾರಿಯೂ ರಾಜ್ಯದಲ್ಲಿ ಭಾಜಪ ಸರ್ಕಾರವನ್ನು ಅಧಿಕಾರಕ್ಕೆ ತರಲಾಗುವುದು ಎಂದರು.
*ಬೆಂಗಳೂರು ಮೈಸೂರು ಹೈಸ್ಪೀಡ್ ರೈಲು :*
ಜಲಜೀವನ ಮಿಷನ್ ಯೋಜನೆಯಲ್ಲಿ ಕರ್ನಾಟಕದಲ್ಲಿ ಒಂದೂವರೆ ವರ್ಷದಲ್ಲಿ 30 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಿದೆ. ಈ ವರ್ಷ 20 ಲಕ್ಷ ಮನೆಗಳಿಗೆ ನಳಸಂಪರ್ಕ ನೀಡಲಾಗುವುದು. 6000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯದಿಂದ 3000 ಕಿ.ಮೀ. ರಾಜ್ಯ ಹೆದ್ದಾರಿಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗುತ್ತಿದೆ. ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೇಯನ್ನು 10 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಬೆಂಗಳೂರು ಮೈಸೂರು ಹೈಸ್ಪೀಡ್ ರೈಲು ಪ್ರಾರಂಭಿಸಲಾಗಿದೆ. ಈ ಎಲ್ಲ ಅಭಿವೃದ್ಧಿ ಕಾರ್ಯಗಳು ಡಬಲ್ ಇಂಜಿನ ಸರ್ಕಾರದಿಂದ ಸಾಧ್ಯವಾಗಿದೆ. ಈ ಕೆಲಸ ಕಾಂಗ್ರೆಸ್ ನವರ ಕೇಂದ್ರ ಅಥವಾ ರಾಜ್ಯ ಸರ್ಕಾರದ ಅವಧಿಯಲ್ಲಿ ಆಗಲಿಲ್ಲ ಎಂದರು.
*ಕಿಸಾನ್ ಸಮ್ಮಾನ್ ನಿಧಿ:*
60 ಲಕ್ಷಕ್ಕೂ ಹೆಚ್ಚು ರೈತರ ಕುಟುಂಬಗಳು ಕಿಸಾನ್ ಸಮ್ಮಾನ್ ನಿಧಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಕೇಂದ್ರದ 6000 ರೂ. ಕ್ಕೆ ರಾಜ್ಯ ಸರ್ಕಾರದ 4000 ರೂ. ಸೇರಿಸಿ, ಒಟ್ಟು 10 ಸಾವಿರ ರೂ.ಗಳ ಪರಿಹಾರವನ್ನು ಒದಗಿಸಲಾಗುತ್ತಿದೆ. ಬಿ ಎಸ್.ಯಡಿಯೂರಪ್ಪ ಅವರು ರೈತಪರ ಕಾಳಜಿಯುಳ್ಳ ನಾಯಕರಾಗಿದ್ದಾರೆ. ತಾವು ಅಧಿಕಾರಕ್ಕೆ ಬಂದಾಗ ರೈತರಿಗೆ 10 ಹೆಚ್ ಪಿ ಉಚಿತ ವಿದ್ಯುತ್ ನೀಡಿದ್ದರು. 2 ನೇ ಬಾರಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕಿಸಾನ್ ಸಮ್ಮಾನ ನಿಧಿಯಲ್ಲಿ ರಾಜ್ಯದಿಂದ 4000 ರೂ.ಗಳನ್ನು ಮಂಜೂರು ಮಾಡಿದರು. ಭಾಗ್ಯಲಕ್ಷ್ಮಿ ಯೋಜನೆ, ವಿಧವಾ ಮಾಸಾಶನ, ಸಂಧ್ಯಾ ಸುರಕ್ಷಾ ಯೋಜನೆಯನ್ನು ಜಾರಿ ಮಾಡಿದರು. 20 ಲಕ್ಷ ಹೆಣ್ಣುಮಕ್ಕಳು ಭಾಗ್ಯಲಕ್ಷ್ಮಿ ಯೋಜನೆಯ ಲಾಭ ಪಡೆದಿದ್ದಾರೆ. ಇದರಲ್ಲಿ ಶೇ.25 ರಷ್ಟು ಅಲ್ಪಸಂಖ್ಯಾತ ಹೆಣ್ಣಮಕ್ಕಳಿದ್ದಾರೆ ಎಂದರು.
*46 ಸಾವಿರ ನೇಕಾರರಿಗೆ ಆರ್ಥಿಕ ನೆರವು:*
ರೈತ ಮಕ್ಕಳಿಗೆ ವಿದ್ಯಾನಿಧಿ , ನೇಕಾರ ಸಮ್ಮಾನ ನಿಧಿಯನ್ನು 5000 ರೂ. ಹೆಚ್ಚಿಸಿ 46 ಸಾವಿರ ನೇಕಾರರಿಗೆ ಆರ್ಥಿಕ ನೆರವು ಒದಗಿಸಲಾಗಿದೆ. ವಿವಿಧ ಕಸುಬುದಾರರಿಗೆ ಕಾಯಕ ಯೋಜನೆಯಡಿ 50 ಸಾವಿರ ವರೆಗೆ ಧನಸಹಾಯ ನೀಡಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿಯೋಜನೆಯಿಂದ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀ ಸಾಮರ್ಥ್ಯ ಯೋಜನೆಯಿಂದ 5 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗ, ದುಡಿಯುವ ವರ್ಗಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮುಖಂಡರುಗಳಾದ ಇಂದ್ರೇಶ್ ಸಿ.ಪಿ ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
[16/12, 6:27 PM] Cm Ps: *ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಡ್ಯ, ಡಿಸೆಂಬರ್ 16:
ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು.
*ಕಾಂಗ್ರೆಸ್ನಿಂದ ರಾಜ್ಯಕ್ಕೆ ದೌರ್ಭಾಗ್ಯ :*
ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ ಮತ್ತು ಬೃಹತ್ ನೀರಾವರಿಯಲ್ಲಿ ಭ್ರಷ್ಟಾಚಾರ ಮಾಡಿ, ಕಾಂಗ್ರೆಸ್ ರಾಜ್ಯಕ್ಕೆ ದೌರ್ಭಾಗ್ಯವನ್ನು ತಂದರು. ಮಂಡ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣುತ್ತಿದ್ದಾರೆ. ಆದರೆ ಜನ ಜಾಗೃತರಾಗಿದ್ದು, ದಕ್ಷಿಣ ಭಾಗದ ಕರ್ನಾಟಕದಲ್ಲಿ ಭಾಜಪ ಗೆಲುವನ್ನು ಕಾಣಲಿದೆ ಎಂಬ ವಿಶ್ವಾಸವಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮುಖಂಡರುಗಳಾದ ಇಂದ್ರೇಶ್ ಸಿ.ಪಿ ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
[16/12, 6:33 PM] Cm Ps: *ಮದ್ದೂರು ಬ್ರ್ಯಾಂಚ್ ಕಾಲುವೆಯ ಆಧುನೀಕರಣಕ್ಕೆ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಡ್ಯ, ಡಿಸೆಂಬರ್ 16 :
ಮದ್ದೂರು ಬ್ರ್ಯಾಂಚ್ ಕಾಲುವೆಯ ಕೊನೆಯ ಹಳ್ಳಿಗೆ ಕಾವೇರಿ ನೀರು ತಲುಪುತ್ತಿಲ್ಲ. ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಕಾಲುವೆಯ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮದ್ದೂರಿನಲ್ಲಿ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಮಂಡ್ಯದ ಇತಿಹಾಸವನ್ನು ಅವಲೋಕಿಸಿದಾಗ, ಕೇವಲ ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕೆ ಬಂದಿದೆ. ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಮುಚ್ಚಿಸಿದ್ದರಿಂದ, ಮಂಡ್ಯದ ರೈತರು ಕಬ್ಬುಬೆಳೆಯನ್ನು ಮೈಸೂರಿಗೆ ತೆಗೆದುಕೊಂಡು ಹೋಗುವ ಪರಿಸ್ಥಿತಿಯಿತ್ತು. ಹಿಂದಿನ ಸರ್ಕಾರಗಳು ರೈತರ ಸಂಕಷ್ಟವನ್ನು ಇಮ್ಮಡಿಗೊಳಿಸಿದರು. ನಾನು ಮುಖ್ಯಮಂತ್ರಿಯಾದ ನಂತರ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಿ, ಮಂಡ್ಯದ ರೈತರು ಕಬ್ಬನ್ನು ಇಲ್ಲಿಯೇ ಅರೆಸುವ ವ್ಯವಸ್ಥೆಯನ್ನು ಕಲ್ಪಿಸಿದ್ದೇನೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಅಧಿಕಾರ ಹೊಂದಿದ್ದ ಪಕ್ಷಗಳು, ಅಲ್ಲಿನ ಜನರ ಸಂಕಷ್ಟಕ್ಕೆ ಪರಿಹಾರ ನೀಡಲಿಲ್ಲ. ಮಂಡ್ಯದ ಜನರನ್ನು ಭಾವನಾತ್ಮಕವಾಗಿ ಸೆಳೆದು , ಮತವನ್ನು ಪಡೆಯಲು ಇನ್ನು ಮುಂದೆ ಸಾಧ್ಯವಿಲ್ಲ. ಆದರೆ ಭಾಜಪ ಸರ್ಕಾರ ರೈತರ ಶ್ರಮಕ್ಕೆ ಬೆಲೆ ನೀಡಿದೆ. ಮಂಡ್ಯ ಜಿಲ್ಲೆಯ ಜನರ ಆಶೋತ್ತರಗಳನ್ನು ಸಾಕಾರಗೊಳಿಸುವ ಸರ್ಕಾರ ನಮ್ಮದಾಗಿದೆ. ಕೆಆರ್ ಎಸ್ ಜಲಾಶಯಕ್ಕೆ 16 ಹೊಸ ಕ್ರೆಸ್ಟ್ ಗೇಟ್ ಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಹೊಸ ಗೇಟ್ ಗಳನ್ನು ಅಳವಡಿಸಲಾಗುವುದು. ನೀರಾವರಿ ಸಚಿವನಾಗಿದ್ದ ಸಂದರ್ಭದಲ್ಲಿ 330 ಕೋಟಿ ರೂ. ವೆಚ್ಚದಲ್ಲಿ ಮಂಡ್ಯದ ಕಾಲುವೆಗಳ ಆಧುನೀಕರಣವನ್ನು ಮಾಡಲಾಯಿತು ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ ಮತ್ತಿತರು ಉಪಸ್ಥಿತರಿದ್ದರು.
Post a Comment