[04/12, 12:08 PM] Cm Ps: *ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಜನ ಸಂಕಲ್ಪ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದರ ಜೊತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದರು.
*ಜಾಯಿನ್ ಪಿಎಫ್ಐ ವಿಚಾರ: ಪೊಲೀಸರು ಕ್ರಮ*
ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ ಜಾಯಿನ್ ಪಿಎಫ್ಐ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಅದರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
[04/12, 2:03 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶ್ರೀ ಹನುಮಂತಗೌಡ ಪಾಟೀಲ ಕಲ್ಯಾಣ ಭವನ ಹಾಗೂ ಪಾಟೀಲ ಕಂಫರ್ಟ್ಸ್ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಶಿಗ್ಗಾವಿ ವಿರಕ್ತ ಮಠದ ಸಂಗನ ಬಸವ ಸ್ವಾಮೀಜಿ, ಸಂಸದ ಶಿವಕುಮಾರ್ ಉದಾಸಿ, ಮಾಜಿ ಸಂಸದರಾದ ವಿಜಯ ಸಂಕೇಶ್ವರ್, ಮಂಜುನಾಥ ಕುನ್ನೂರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
[04/12, 4:56 PM] Cm Ps: ಹಾವೇರಿ ಜಿಲ್ಲೆಯ ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಯಿಂದ 250 ಹಾಸಿಗೆಗಳಿಗೆ ಮೆಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು ಹಾಗೂ ಮತ್ತಿತರರು ಹಾಜರಿದ್ದರು.
Post a Comment