CM, ವಿಶೇಷ

[06/12, 1:09 PM] Cm Ps: *ಇಂದಿನ ಸವಾಲುಗಳನ್ನು ಎದುರಿಸಲು  ಸಂವಿಧಾನದಲ್ಲಿ  ಪರಿಹಾರವಿದೆ*: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಡಿಸೆಂಬರ್ 06:ಇಂದಿನ ಸವಾಲುಗಳನ್ನು ಎದುರಿಸಲು ಸರ್ಕಾರ ಸಂವಿಧಾನದ ಆಶ್ರಯದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ  ನಮ್ಮ ಸರ್ಕಾರ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. 

 ಬಾಬಾ ಸಾಹೇಬ್ ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ಹಾಗೂ ಪುಣ್ಯ ಸ್ಮರಣೆಯ ದಿನವಾದ ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. 

ಅಂಬೇಡ್ಕರ್ ಅವರು ಸಂವಿಧಾನದ ಜೀವಂತಿಕೆಗೆ ಬದಲಾದ ಕಾಲದ ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸಲು ಸಂವಿಧಾನದಲ್ಲಿ ತಿದ್ದುಪಡಿ ತರುವ ಆಯಾಮ ನೀಡಿರುವುದು ಎಂಥಾ ಬದಲಾದ ಕಾಲಕ್ಕೂ ಸ್ಪಂದಿಸುವಂಥದ್ದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಗತ್ತಿಗೆ ಪ್ರಜಾಪ್ರಭುತ್ವ ಹೇಗೆ ಯಶಸ್ವಿಯಾಗಬಹುದು ಎಂದು ತೋರಿಸಿದವರು. ಹಲವಾರು ಭಾಷೆ, ಜಾತಿ, ಪ್ರಾಂತ್ಯಗಳಿಂದ ಕೂಡಿದ ಭಾರತದಲ್ಲಿ ಒಂದು ಸಂವಿಧಾನದಿಂದ ಒಂದು ಮಾಡಿ ಎಲ್ಲರ ಭಾವನೆಗಳನ್ನು ಹೆಣೆದು ಅಖಂಡ ಭಾರತ ದೇಶವನ್ನು ರೂಪಿಸುವ ಜೊತೆಗೆ ದೀರ್ಘಕಾಲ ಪ್ರಜಾಪ್ರಭುತ್ವದ ಜೀವಂತಿಕೆಗೆ ನಾಂದಿ ಹಾಡಿದ್ದಾರೆ ಎಂದರು. 


ಸಂವಿಧಾನ ಇಲ್ಲದಿದ್ದಿದ್ದರೆ ಏನಾಗುತ್ತಿತ್ತು ಎಂದು ಊಹಿಸಲೂ ಸಾಧ್ಯವಿಲ್ಲ. ಹಲವಾರು ದೇಶಗಳು ಪ್ರಜಾಪ್ರಭುತ್ವದ ಪ್ರಯೋಗದಲ್ಲಿ ಎಲ್ಲಿ ಯಶಸ್ವಿಯಾಗಿಲ್ಲವೋ, ಅಲ್ಲೇ ಭಾರತ ಯಶಸ್ವಿಯಾಗಲು ಕಾರಣ ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಅವರು ಮಾಡಿರುವ ಕಾರ್ಯ ಕಾಲಕಾಲಕ್ಕೆ ಪ್ರಸ್ತುತ ಹಾಗೂ ಶಾಶ್ವತವಾಗುತ್ತಿದೆ. ನಿಜವಾದ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಸಂವಿಧಾನದ ಅಶಯಗಳಾದ, ಸಮಾನತೆ, ಏಕತೆ, ಒಕ್ಕೂಟ ವ್ಯವಸ್ಥೆ, ಭ್ರಾತೃತ್ವ, ಸಮಾನತೆಯ ವಿಚಾರ ಗಳಲ್ಲಿ ಅತ್ಯಂತ ಮಾನವೀಯ ವಿಚಾರಗಳನ್ನು ಅಳವಡಿಸಿಕೊಂಡಿದ್ದಾರೆ. ಅದಕ್ಕೆ ಕಾರಣ ಅವರ ಬದುಕಿನ ನೋವು, ಅಪಮಾನದ ಅನುಭವಗಳನ್ನು ಇತರರು ಅನುಭವಿಸಬಾರದು ಎಂದು ಸಂವಿಧಾನದ ರಕ್ಷಣೆ ಯನ್ನು ತುಳಿತಕ್ಕೆ ಹಾಗೂ ನಿಂದನೆಗೆ ಒಳಗಾದ ವರ್ಗಕ್ಕೆ ರಕ್ಷಣೆ ನೀಡುವ  ಮೂಲಕ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆ, ಆರ್ಥಿಕತೆಯಲ್ಲಿ ಸಮಾನತೆಯ ಬೆಳವಣಿಗೆಗೆ ಅವರು ಮಹತ್ವ ನೀಡಿದ್ದರು ಎಂದರು. 

*ಹೋರಾಟದ ಕಲ್ಪನೆ*
ಶಿಕ್ಷಣ, ಸಂಘಟನೆ, ಹೋರಾಟ ಎಂಬ ಘೋಷವಾಕ್ಯದಿಂದ ಜನರ ಜಾಗೃತಿ , ಬುದ್ದಿವಂತರನ್ನಾಗಿಸುವುದು ಹಾಗು ಹೋರಾಟದ ಕಲ್ಪನೆ ನೀಡಿದ್ದಾರೆ. ನಿಜವಾಗಿಯೂ ನಾವೆಲ್ಲರೂ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯಭಾಗ್ಯ ಎಂದರು. 

*ಸಂವಿಧಾನದ ಆಶಯಗಳನ್ನು ಈಡೇರಿಸಲು ಬದ್ಧ*

ಸಂವಿಧಾನದ ಆಶಯಗಳನ್ನು ಸಂಪೂರ್ಣವಾಗಿ ಈಡೇರಿಸಲು ಆಡಳಿತ, ಆಡಳಿತ ವರ್ಗ, ಸಮಾಜ ಎಲ್ಲರೂ ಸಂಕಲ್ಪ ಮಾಡಿ ಸಿದ್ಧಿಸಿಕೊಳ್ಳುವ  ಕೆಲಸ ಮಾಡಬೇಕು. 

*ಸಾಮಾಜಿಕ  ನ್ಯಾಯ*
ಸಮಾನತೆ, ಸಾಮಾಜಿಕ ನ್ಯಾಯ ಮಾತಿನಿಂದಾಗುವುದಿಲ್ಲ  ಎನ್ನುವುದು ನಮ್ಮ ನಂಬಿಕೆ. ಇವು ಭಾಷಣಗಳ ಸರಕಾಗಬಾರದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅದನ್ನು ಸಂವಿಧಾನದಲ್ಲಿ ಅಳವಡಿಸಿದ್ದರು.  ಸಾಮಾಜಿಕ ಸಮಾನತೆ ತರಲು, ಆರ್ಥಿಕವಾಗಿ, ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಾಗೂ ಎಲ್ಲಾ ಆಯಾಮಗಳಲ್ಲಿ ಅವರಿಗೆ ಮುಕ್ತ ಅವಕಾಶ ನೀಡಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ ಎಂದರು. 

*ಮೀಸಲಾತಿ ಹೆಚ್ಚಳ: ಕ್ರಾಂತಿಕಾರಿ ನಿರ್ಧಾರ*
ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಭವಿಷ್ಯದಲ್ಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದಲ್ಲಿ ಶಕ್ತಿಯನ್ನು ತುಂಬುವ ಕೆಲಸ ಆಗಲಿದೆ. 29 ಸಾವಿರ ಕೋಟಿ ರೂ.ಗಳನ್ನು ಎಸ್.ಸಿ.ಎಸ್. ಪಿ/ ಟಿ ಎಸ್.ಪಿ ಅನುದಾನದಲ್ಲಿ ಮೀಸಲಿರಿಸಲಾಗಿದೆ. ಶಿಕ್ಷಣ ಕ್ಕೆ ಒಟ್ಟು ಕೊಟ್ಟು ನೂರು ಅಂಬೇಡ್ಕರ್ ಹಾಸ್ಟೆಲ್ ಗಳನ್ನು, 55 ಕನಕದಾಸ ಹಾಸ್ಟೆಲ್ ಹಾಗೂ 5 ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಮೈಸೂರು, ಧಾರವಾಡ, ಮಂಗಳೂರು, ಬೆಂಗಳೂರು, ಕಲಬುರಾಗಿಯಲ್ಲಿ ಮೆಗಾ ಹಾಸ್ಟೆಲ್ ನಿರ್ಮಾಣವಾಗುತ್ತಿದೆ. ಉದ್ಯೋಗದಲ್ಲಿರುವ ಹೆಣ್ಣು ಮಕ್ಕಳಿಗೆ ಹಾಸ್ಟೆಲ್, 75 ಯೂನಿಟ್ ವರೆಗೂ ಉಚಿತ ವಿದ್ಯುತ್ ಸರಬರಾಜು, ಗೃಹ ನಿರ್ಮಾಣ ಕ್ಕೆ 2 ಲಕ್ಷ ರೂಗಳ ಸಹಾಯಧನ, ಭೂಒಡೆತನ ಯೋಜನೀಡಿ 15 ಲಕ್ಷದಿಂದ 20 ಲಕ್ಷಕ್ಕೆ ಅನುದಾನ ಹೆಚ್ಚಿಸಲಾಗಿದೆ.ಹಾಸ್ಟೆಲ್ ಗಳಿಗೆ ಶುಲ್ಕ, ಉದ್ಯೋಗ ಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಿದೆ.ಅಂಬೇಡ್ಕರ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ 10 ಸ್ಥಳಗಳನ್ನು ಅಭಿವೃದ್ಧಿ ಪಡಿಸಲು 10 ಕೋಟಿ ರೂ.ಗಳನ್ನು ಒದಗಿಸಿದ್ದು ಕಾರ್ಯಕ್ರಮ ಪ್ರಾರಂಭವಾಗಿದೆ. ವಿಕಾಸಸೌಧದ ಮುಂಭಾಗದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಸ್ಫೂರ್ತಿ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು, 50 ಕೋಟಿ ಬಿಡುಗಡೆಯಾಗಿದೆ ಎಂದರು.


 ಸಮಗ್ರ ಅಭಿವೃದ್ಧಿಯ ಕಲ್ಪನೆಯಲ್ಲಿ  ಕೆಲಸಗಳನ್ನು ಮಾಡಲಾಗುತ್ತಿದೆ. ಬರುವ ದಿನಗಳಲ್ಲಿ ಪರಿಶಿಷ್ಟರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಪ್ರಬಲರಾಗಿ, ಸಬಲೀಕರಣ ಹೊಂದಿ ಸ್ವಾವಲಂಬಿ, ಸ್ವಾಭಿಮಾನದ ಬದುಕು ನಡೆಸಬೇಕೆನ್ನುವುದು ನಮ್ಮ ಆಶಯ ಎಂದರು.

*ಆತ್ಮಾವಲೋಕನ ಅಗತ್ಯ*
ಇಂದು ಆತ್ಮಾವಲೋಕನ ಮಾಡಿಕೊಂಡು, ನಡೆದುಬಂದ ದಾರಿಯ ಬಗ್ಗೆ ವಿಚಾರ ಮಾಡುವ ದಿನ ಪರಿವರ್ತನೆ ನಮ್ಮಿಂದಲೇ ಪ್ರಾರಂಭವಾಗಬೇಕು. ಎಲ್ಲರೂ ಬಡಜನರಿಗೆ, ದೀನದಲಿತರಿಗೆ ಯಾವ ರೀತಿಯ ಕೆಲಸ ಮಾಡಬೇಕೆಂದು ಆತ್ಮಾವಲೋಕನ. ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಜನಕ್ಕೆ ನ್ಯಾಯ ನೀಡಲು ಸಂಕಲ್ಪ ಮಾಡಬೇಕು. ಅದನ್ನು ಸಿದ್ಧಿಸಿಕೊಂಡು ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಸರ್ಕಾರ ಮಾಡಲಿದೆ  ಎಂದರು.
[06/12, 2:00 PM] Cm Ps: *ಕ್ರೀಡಾಪಟುಗಳ ನೇರನೇಮಕಾತಿಗೆ  ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ*

*ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ –ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಡಿಸೆಂಬರ್ 6 :

 ಕ್ರೀಡಾಇಲಾಖೆಯ ಅಪರಮುಖ್ಯಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ ನೀಡಿ, ಪದವೀಧರರಾದ ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ ನೀಡಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.

 ಪದವೀಧರರಾಗಿರುವ ಏಷಿಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದರು.

*ರಾಜ್ಯ ಸರ್ಕಾರದಿಂದ 75 ಕ್ರೀಡಾಪಟುಗಳಿಗೆ ತರಬೇತಿ :*
ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತುಪಡೆದು, ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಲಕ್ಷ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಬೇಕು ಎಂದರು.

*ಕ್ರೀಡೆ ರಾಷ್ಟ್ರೀಯ ಸಂಕೇತವಾಗುತ್ತಿದೆ :*
ಯುವ ಕ್ರೀಡಾ ಪ್ರತಿಭೆಗಳು ದೇಶದ ಆಸ್ತಿ. ಏಕಾಗ್ರತೆ, ಹಾಗೂ ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ.  ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವವನ್ನು ನೀಡಿದೆ. ಕ್ರೀಡೆ ಹವ್ಯಾಸವಾಗಿ ಪ್ರಾರಂಭವಾಗಿ ರಾಷ್ಟ್ರೀಯ ಸಂಕೇತವಾಗಿ ಇತ್ತೀಚೆಗೆ ಪರಿಗಣಿಸಲಾಗುತ್ತಿದೆ.ಒಂದು ರಾಷ್ಟ್ರವನ್ನು ಅದರ ಕ್ರೀಡಾ ಸಾಧನೆಯ ಮೇಲೆ ಗುರುತಿಸಲಾಗುತ್ತಿದೆ. ಭಾರತದಂತಹ ರಾಷ್ಟ್ರದಲ್ಲಿ ಕ್ರೀಡೆಯನ್ನು ಮುಖ್ಯವಾಹಿನಿಗೆ ತರಲು ಪ್ರಧಾನಿ ಮೋದಿಯವರು ಯಶಸ್ವಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಎಂಬ ಕಾರ್ಯಕ್ರಮಗಳ ಮೂಲಕ ಕ್ರೀಡೆಗಳ ಬಗ್ಗೆ ಜಾಗೃತಿ ಮೂಡಿದೆ. ಇದರ ಪರಿಣಾಮವಾಗಿ ಹಿಂದಿನ ಒಲಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವಂತಾಯಿತು. ಪ್ಯಾರಾ ಒಲಂಪಿಕ್ಸ್ ನಲ್ಲಿಯೂ ಭಾರತ ಮಹತ್ತರ ಸಾಧನೆಗಳನ್ನು ಮಾಡಿದೆ. ಇದಕ್ಕಾಗಿ ಎಲ್ಲ ಕ್ರೀಡಾಸಾಧಕರನ್ನು ಅಭಿನಂದಿಸುತ್ತೇನೆ ಎಂದರು.

*ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆಗೆ ಯುವನೀತಿ :*
ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ.ಕ್ರೀಡೆಗೆ ದೇಹದ ಹಾಗೂ ಮನಸ್ಸಿನ ಆರೋಗ್ಯದ ಜೊತೆಗೆ ಗೆಲ್ಲಲೇಬೇಕೆಂದು ಆಡುವುದು ಬಹಳ ಮುಖ್ಯ. ಕೇವಲ ಸೋಲಬಾರದು ಎಂದು ಆಡುವ ಭಾವನೆ ಕ್ರೀಡಾಪಟುಗಳಲ್ಲಿರಬಾರದು. ಗೆಲ್ಲಲೇಬೇಕೆಂಬ ಸಕಾರಾತ್ಮಕ ಭಾವನೆಯಿಂದ ಆಡಿದರೆ ಗೆಲುವು ನಿಮ್ಮದಾಗುತ್ತದೆ. ರಾಜ್ಯ ಸರ್ಕಾರ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಬಹಳ ಮಹತ್ವ ನೀಡುತ್ತಿದೆ. ಗೃಹ ಇಲಾಖೆಯ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ.  ರಾಜ್ಯ ಸರ್ಕಾರದಲ್ಲಿ ಕ್ರೀಡೆಗಳಿಗೆ ಪ್ರಾಶಸ್ತ್ಯ ನೀಡುವ ನಾಯಕರು, ಆಡಳಿತಗಾರರು ನಮ್ಮಲ್ಲಿದ್ದಾರೆ. ಇದರಿಂದಾಗಿ ಕ್ರೀಡೆಗೆ ಉತ್ತೇಜನ ನೀಡುವಂತಹ ನೀತಿಗಳನ್ನು ಜಾರಿಗೆ ತರಲು ಸಾಧ್ಯವಾಗಿದೆ ಎಂದರು.

*ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ:*
ಗ್ರಾಮಗಳಲ್ಲಿ ನಿಜವಾದ ಕ್ರೀಡಾಪ್ರತಿಭೆಗಳಿದ್ದು, ಅವರಿಗೆ ಸೂಕ್ತ ತರಬೇತಿ ನೀಡಿದ್ದಲ್ಲಿ ಮಹತ್ತರ ಸಾಧನೆಗಳನ್ನು ಮಾಡಲು ಶಕ್ತರಾಗಿರುತ್ತಾರೆ. ಆದ್ದರಿಂದ ಗ್ರಾಮ, ತಾಲ್ಲೂಕು, ಜಿಲ್ಲಾಪಂಚಾಯತಿ ಹಂತಗಳಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಈ ವರ್ಷದಿಂದ ಪ್ರಾರಂಭಿಸಲಾಗಿದ್ದು, ಕೋಕೋ, ಕಬ್ಬಡ್ಡಿ, ಕುಸ್ತಿ, ವಾಲಿಬಾಲ್, ಕಂಬಳ ದಂತಹ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಕ್ರೀಡೆಗಳಲ್ಲಿ ತೊಡಗಿದವರು ಹೆಚ್ಚಾಗಿ ಕ್ರೀಡಾಮನೋಭಾವವನ್ನು ಹೊಂದಿದವರಾಗಿರುತ್ತಾರೆ. ಇಂತಹ ಕ್ರೀಡಾಪಟುಗಳು ಸೋಲನ್ನೂ ಸಹ ಗೆಲುವಿಗೆ ಪರಿವರ್ತಿಸಲು ಶ್ರಮಿಸುತ್ತಾರೆ. ಸೋಲಿಗೆ ಹೆದರುವ ಸ್ವಭಾವದವರಲ್ಲ.ಕ್ರೀಡಾಸಾಧಕರ ಬೆಂಬಲವಾಗಿ ಅವರ ಕುಟುಂಬವರ್ಗದವರು, ತರಬೇತುದಾರರ ಪರಿಶ್ರಮವೂ ಇರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕ ಓಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.
[06/12, 6:53 PM] Cm Ps: ನಿಯಾಸ್ ಹಾಗೂ ಇಸ್ರೊ ತಂಡದ  ನಿರ್ದೇಶಕ ಡಾ: ಶೈಲೇಶ್ ನಾಯಕ್ ಅವರು ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು. 

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
[06/12, 8:54 PM] Cm Ps: ನಾಸ್ಕಾಂ ಹಾಗೂ ಫಾರ್ವರ್ಡ್ ಫೌಂಡೇಶನ್ ಜಂಟಿಯಾಗಿ ಏರ್ಪಡಿಸಿದ್ದ ಸಿಎಸ್ ಆರ್ ಪಾರ್ಟನರ್ ಸನ್ಮಾನ ಸಮಾರಂಭವನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಅರವಿಂದ ಲಿಂಬಾವಳಿ, ನ್ಯಾಸ್ಕಾಂ ಅಧ್ಯಕ್ಷೆ ದೇಬಜಾನಿ ಘೊಸ್, ಫಾರ್ವರ್ಡ್ ಫೌಂಡೇಶನ್ ನ ಕೃಷ್ಣ ಹಾಜರಿದ್ದರು.
[06/12, 9:05 PM] Cm Ps: *ಐಟಿ ಕಂಪನಿಗಳು ನೀಡುವ ಕೊಡುಗೆಯಿಂದ ಜನಸಾಮಾನ್ಯರಿಗೆ ಅನುಕೂಲವಾಗಬೇಕು: ಸಿಎಂ.ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 06 :ಐಟಿ ಕಂಪನಿಗಳು ಸಮಾಜಕ್ಕೆ ನೀಡುವ ಕೊಡುಗೆಯಿಂದ ಸಾಮಾನ್ಯರಿಗೆ ಅನುಕೂಲವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
 
ಅವರು ಇಂದು ನ್ಯಾಸ್ಕಾಂ  ಹಾಗೂ ಫಾರ್ವರ್ಡ್ ಪ್ರತಿಷ್ಠಾನದ ವತಿಯಿಂದ   ಆಯೋಜಿಸಿದ್ದ   ಸಿಎಸ್ ಆರ್ ಪ್ರಾಯೋಜಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 

ಸರ್ಕಾರಿ ಶಾಲೆಗಳಲ್ಲಿ ಮಳೆ ನೀರು ಕೊಯ್ಲು ಯೋಜನೆ ಅತ್ಯಂತ ಉಪಯುಕ್ತ ಹಾಗೂ ಮಹತ್ವದ ಕಾರ್ಯಕ್ರಮ.   ಕರ್ನಾಟಕದಲ್ಲಿ ಐಟಿ ಉದ್ಯಮ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. 1984 ರಲ್ಲಿ ಮೊದಲ ಐಟಿ ಕಂಪನಿ ಪ್ರಾರಂಭವಾದ ನಂತರ  ಬೆಂಗಳೂರು ಹಿಂತಿರುಗಿ ನೋಡಿಯೇ ಇಲ್ಲ. ಇಂದು  ಕರ್ನಾಟಕ ಅತಿ ಹೆಚ್ಚು ಸ್ಟಾರ್ಟ್ ಅಪ್,  ಯುನಿಕಾರ್ನ್, ಆರ್ ಆಂಡ್ ಸಿ ಸಂಸ್ಥೆಗಳನ್ನು ಹೊಂದಿರುವ ರಾಜ್ಯವಾಗಿದೆ ಎಂದರು. 

*ಐಟಿ ಕಂಪನಿಗಳು ನಮಗೆ ಅನುಕೂಲಕರ*
 ಪ್ರತಿಯೊಂದು ಐಟಿ ಕಂಪನಿ ಬೆಂಗಳೂರಿನಲ್ಲಿಯೇ ಪ್ರಾರಂಭಿಸಲು  ಮುಂದಾಗುತ್ತಾರೆ‌.  ಬೆಂಗಳೂರು 1.25 ಕೋಟಿ ಜನ ಸಂಖ್ಯೆ ಇದೆ. ಪ್ರತಿ ದಿನ ಐದು ಸಾವಿರು ಇಂಜಿನಿಯರ್  ಗಳು ಬೆಂಗಳೂರಿಗೆ ಬರುತ್ತಾರೆ. ಪ್ರತಿ ದಿನ ಸುಮಾರು 5000 ಹೊಸ ಕಾರ್ ಗಳು ರಸ್ತೆ ಗಿಳಿಯುತ್ತವೆ. 
ಐಟಿ ಕಂಪನಿಗಳು ನಮಗೆ ಅನುಕೂಲಕರ. ಆದರೆ ಅಷ್ಟೆ ಸಮಸ್ಯೆಗಳೂ ಇವೆ ಎಂದರು. 

*ನೆರವು ನೀಡಿ*
ವಿಶ್ವದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಆದರೆ ಭಾರತದಲ್ಲಿ ಆರ್ಥಿಕತೆ ಬೆಳೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಕಾರಾತ್ಮಕ ಪ್ರೇರಣೆ ಕಾರಣವಾಗಿದೆ. 
ನೀವು ಸೂಕ್ತ ದೇಶದಲ್ಲಿದ್ದೀರಿ.  ಐಟಿ ಸಂಸ್ಥೆಗಳು ದೇಶವೇ ಹೆಮ್ಮೆ ಪಡುವಂತ ಕೆಲಸಗಳಲ್ಲಿ ತೊಡಗಿರುವುದು ಶ್ಲಾಘನೀಯ.  ಸಾಧ್ಯವಾದಷ್ಟು ಅಕ್ಕಪಕ್ಕದವರಿಗೆ ಸಹಾಯ ಮಾಡಿ, ಸಹಾಯ ಮಾಡುವವರ ಜೊತೆ ಸರ್ಕಾರ ಇದೆ‌ ಎಂದರು.


ಶಾಸಕ ಅರವಿಂದ ಲಿಂಬಾವಳಿ, ನ್ಯಾಸ್ಕಾಂ ಅಧ್ಯಕ್ಷೆ ದೇಬಜಾನಿ ಘೋಷ್, ಫಾರ್ವರ್ಡ್ ಫೌಂಡೇಶನ್ ನ ಕೃಷ್ಣ ನ್ಯಾಸ್ ಕಾಂ ಪ್ರಾದೇಶಿಕ ಮುಖ್ಯಸ್ಥ ಭಾಸ್ಕರ್ ಕುಮಾರ್ ವರ್ಮಾ ಹಾಗೂ ಸಿ.ಎಸ್.ಆರ್ ಪ್ರಾಯೋಜಕರು  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[06/12, 10:27 PM] Cm Ps: ಕಬ್ಬಿನ ಉಪ‌ ಉತ್ಪನ್ನದ ಲಾಭಾಂಶದಲ್ಲಿ ಕಾರ್ಖಾನೆಗಳಿಂದ ಮೊದಲ ಕಂತಾಗಿ ರೈತರಿಗೆ ಹೆಚ್ಚಿಗೆ 50 ರೂ. ಹಣ ನೀಡಲು ತೀರ್ಮಾನ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ರೈತ  ಮುಖಂಡ ಕೃಷ್ಣೇಗೌಡರ ನೇತೃತ್ವದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ಅಭಿನಂದನೆ ಸಲ್ಲಿಸಿದರು. 
ಈ ಸಂದರ್ಭದಲ್ಲಿ ಸಕ್ಕರೆ ಹಾಗೂ ಜವಳಿ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಹಾಜರಿದ್ದರು.

Post a Comment

Previous Post Next Post