[08/12, 11:26 AM] Cm Ps: ಬೆಂಗಳೂರು, ಡಿಸೆಂಬರ್ 08 *ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು* ಇಂದು ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ನೂತನ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಿರುವ ರ್ಯಾಪಿಡ್ ರಸ್ತೆಯನ್ನು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸಿ.ಸಿ ಪಾಟೀಲ್, ಸಿವಿ ರಾಮನ್ ನಗರ ಶಾಸಕ ಎಸ್ ರಘು ಮತ್ತಿತರರು ಹಾಜರಿದ್ದರು.
[08/12, 11:28 AM] Cm Ps: *ರ‍್ಯಾಪಿಡ್ ರಸ್ತೆ : ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ: ಸಿಎಂ ಬೊಮ್ಮಾಯಿ* ಬೆಂಗಳೂರು, ಡಿಸೆಂಬರ್ 08: ಪ್ರಿ ಕಾಸ್ಟ್ ತಂತ್ರಜ್ಞಾನ ಬಳಸಿ ನಿರ್ಮಾಣವಾಗುವ ರ‍್ಯಾಪಿಡ್ ರಸ್ತೆಗಳನ್ನು ಗುಣಮಟ್ಟ ಹಾಗೂ ದರಗಳನ್ನು ಪರಿಶೀಲಿಸಿದ ನಂತರ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಿರುವ ರ‍್ಯಾಪಿಡ್ ರಸ್ತೆಯನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಉತ್ತಮ ರಸ್ತೆ ಗಳ ಜೊತೆಗೆ ವೆಚ್ಚವೂ ಕಡಿಮೆಯಿರುವುದು ಬಹಳ ಮುಖ್ಯ. ಈ ಕುರಿತು ವರದಿಗಳು ಬಂದ ನಂತರ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರಿನ ರಸ್ತೆ ನಿರ್ಮಾಣ ಮಾಡುವ ಸಂದರ್ಭಗಳಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೆವು. ವೈಟ್ ಟಾಪಿಂಗ್ ಮಾಡುವುದು ಬಹಳ ಸಮಯ ತೆಗೆದುಕೊಳ್ಳುತ್ತದೆ. ಸಂಚಾರ ವ್ಯವಸ್ಥೆ ಯನ್ನು ಬದಲಾಯಿಸುವುದು, ದಟ್ಟಣೆಯಾಗುವುದು ಹೆಚ್ಚು. ಒಂದು ಬಾರಿ ವೈಟ್ ಟಾಪಿಂಗ್ ಆದ ನಂತರ ಸಮಸ್ಯೆ ಉಂಟಾದಲ್ಲಿ ಪುನಃ ಅದನ್ನು ಒಡೆದು ತೆಗೆಯುವುದು ದೊಡ್ಡ ಆತಂಕದ ಕೆಲಸ. ಅದಕ್ಕೆಂದೇ ರ‍್ಯಾಪಿಡ್ ರಸ್ತೆ ತಂತ್ರಜ್ಞಾನ ಬಂದಿದೆ. ಈ ತಂತ್ರಜ್ಞಾನ ಪ್ರಿ ಕಾಸ್ಟ್ ಸ್ಲ್ಯಾಬ್ ಗಳನ್ನು ತಯಾರಿಸಿ, ಆಂತರಿಕ ಜಾಯಿಂಟ್ ಹಾಕಿ, ಬಲಗೊಳಿಸಿ, ರಸ್ತೆಯನ್ನು ಪ್ರಾಯೋಗಿಕವಾಗಿ 500 ಮೀ. ಪೈಕಿ 375 ಮೀಟರ್ ಉದ್ದದ ರಸ್ತೆ ನಿರ್ಮಾಣ ವಾಗಿದೆ. ಅದನ್ನು ಪರಿಶೀಲಿಸಲು ಬಂದಿದ್ದು, ಹಲವಾರು ಸೂಚನೆಗಳನ್ನು ನೀಡಿದ್ದೇನೆ. 20 ಟನ್ ಮೇಲಿರುವ ವಾಹನಗಳನ್ನು ಸತತವಾಗಿ ಸಂಚಾರ ಮಾಡಿಸಿ, ವಿಶ್ಲೇಷಣೆ ಮಾಡಬೇಕಿದೆ. ಭಾರಿ ವಾಹನಗಳ ಚಲನೆಯಿಂದ ಆಗುವ ಪರಿಣಾಮಗಳ ಬಗ್ಗೆ ಸಂಪೂರ್ಣ ವರದಿ ಬೇಕೆಂದು ಸೂಚಿಸಿದ್ದೇನೆ. ಇಲ್ಲಿಯ ಜಾಯಿಂಟ್ ಗಳು, ಟೆನ್ಸಾಯಿಲ್ ಶಕ್ತಿ ಏನಿದೆ, ತಾಂತ್ರಿಕ ವಿವರಗಳನ್ನು ಸಲ್ಲಿಸಲು ಸೂಚಿಸಿದ್ದು, ಅಂತಿಮವಾಗಿ ಕಾಮಗಾರಿಯು ಕ್ಷಿಪ್ರವಾಗಿ ಆಗಬೇಕು, ಗುಣಮಟ್ಟವಿರಬೇಕು ಹಾಗೂ ವೆಚ್ಚವೂ ಸೂಕ್ತವಾಗಿರಬೇಕು ಎಂದು ಸೂಚಿಸಿದ್ದೇನೆ ಎಂದರು.
ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಂಡಿದ್ದು, ಕಡಿಮೆ ವೆಚ್ಚದಲ್ಲಿ ಆಗುವುದಾದರೆ, ಬೆಂಗಳೂರಿನಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್, ಸಂಚಾರ ದಟ್ಟಣೆಯುಳ್ಳ, ಕ್ಷಿಪ್ರವಾಗಿ ರಸ್ತೆಯಾಗಬೇಕಿರುವ ಸ್ಥಳಗಳಲ್ಲಿ ಇದನ್ನು ಅಳವಡಿಸಬಹುದು ಎಂದರು.
ಈ ರಸ್ತೆಗಳಿಗೆ ವೈಟ್ ಟಾಪಿಂಗ್ ಗಿಂತ ಶೇ 30 ರಷ್ಟು ಹೆಚ್ಚು ವೆಚ್ಚವಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ವೆಚ್ಚವನ್ನು ಕಡಿತಗೊಳಿಸಬೇಕು. ನಮ್ಮ ಎಸ್.ಆರ್.ದರಗಳಿಗೆ ಹೊಂದುವಂತಿದ್ದರೆ ಮಾತ್ರ ಇದನ್ನು ಪರಿಗಣಿಸಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಸ್.ರಘು, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[08/12, 12:54 PM] Cm Ps: *ಗುಜರಾತ್ ಚುನಾವಣಾ ಫಲಿತಾಂಶ: ಸುಶಾಸನದ ಫಲ: ಸಿಎಂ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 08: ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಲಲಿತ್ ಅಶೋಕ್ ಹೋಟೆಲ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಭಾಜಪ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಕಳೆದ ಎಲ್ಲ ಚುನಾವಣೆ ಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆ ಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ. ಇದುವರೆಗೂ ದೇಶದಲ್ಲಿ ಆಡಳಿತ ವಿರೋಧ ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. 7 ನೇ ಬಾರಿ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ ಎಂದರು.
*ಮೋದಿಯವರ ನಾಯಕತ್ವ*
ಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಮಾಡುತ್ತಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ. ಅವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಳೆದ ಬಾರಿ 3 ರಾಜ್ಯಗಳಲ್ಲಿ ಸಹ ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಸಮಬಲದ ಹೋರಾಟವಿದೆ. ಅಂತಿಮವಾಗಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
*ಹೋಲಿಕೆ ಸಲ್ಲದು*
ನವದೆಹಲಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ 15 ವರ್ಷ ಆಡಳಿತ ಮಾಡುವುದೇ ದೊಡ್ಡ ಸಾಧನೆ. ಸ್ಥಳೀಯ ಸಮಸ್ಯೆಗಳು ಬಹಳ ಇರುತ್ತವೆ. ಮತದಾರರ ಸಣ್ಣ ಸಂಖ್ಯೆ, ಬಹುಆಯಾಮದ ಸ್ಪರ್ಧೆ ಇರುತ್ತದೆ ಮುನಿಸಿಪಲ್ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಗೆ ಹೋಲಿಕೆ ಮಾಡಲಾಗುವುದಿಲ್ಲ ಎಂದರು.
*ಜಯ ನಿಶ್ಚಿತ*
ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಭಾಜಪ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುರುಪು, ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ ಜಯ ನಿಶ್ಚಿತ ಎಂದರು.
*ಯಾವುದೂ ನಿಜವಾಗಿಲ್ಲ*
ಚುನಾವಣಾ ಫಲಿತಾಂಶ ಪರಿಣಾಮ ಬೀರುವುದಿಲ್ಲ ಎಂದಿರುವ ವಿಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿಗಳು ಅವರು ಹಾಗೆಯೇ ಹೇಳಬೇಕು. ಅವರು ಹೇಳಿದ್ದು ಯಾವುದೂ ನಿಜವಾಗಿಲ್ಲ ಎಂದರು.
[08/12, 12:58 PM] Cm Ps: ಬೆಂಗಳೂರು ವಿನ್ಯಾಸಕಾರರ ಸಮುದಾಯದ ವತಿಯಿಂದ ಆಯೋಜಿಸಿದ್ದ ಬಿ.ಎಲ್.ಆರ್ ಡಿಸೈನ್ ವೀಕ್ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು.
ಐ.ಟಿ. ಬಿ.ಟಿ, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸ್ಟಾರ್ಟ್ ಅಪ್ ವಿಷನ್ ಗುಂಪಿನ ಅಧ್ಯಕ್ಷ ಪ್ರಶಾಂತ್ ಭೂಷಣ್ ಮೊದಲಾದವರು ಉಪಸ್ಥಿತರಿದ್ದರು.
[08/12, 2:54 PM] Cm Ps: *ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 8 :
ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ (ಇನ್ನೋವೇಷನ್ ಎಕ್ಸ್ಪೀರಿಯನ್ಸ್ ಮ್ಯೂಸಿಯಂ) ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರು ವಿನ್ಯಾಸಕಾರರ ಸಮುದಾಯದ ವತಿಯಿಂದ ಆಯೋಜಿಸಿದ್ದ ಬಿ.ಎಲ್.ಆರ್ ಡಿಸೈನ್ ವೀಕ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಎಲ್ಲ ನಾವಿನ್ಯತೆ, ಅವಿಷ್ಕಾರಗಳ ಬಗ್ಗೆ ಮಾಹಿತಿ ನೀಡುವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ಇದಾಗಲಿದ್ದು, ಹಸಿರಿನ ಪರಿಸರವನ್ನೂ ಒಳಗೊಂಡಿರಲಿದೆ. ಇದರಿಂದ ವಿದೇಶಿ ಪ್ರವಾಸೋದ್ಯಮವನ್ನು ಪ್ರೋತ್ಸಾಹ ದೊರೆಯುತ್ತದೆ. ಈ ಮ್ಯೂಸಿಯಂ ನಿಂದ ಯುವ ಆವಿಷ್ಕಾರಿಗಳು, ವಿನ್ಯಾಸಕಾರರಿಗೆ ಸ್ಪೂರ್ತಿ ದೊರೆಯಲಿದೆ ಎಂದರು.
*ಬೆಂಗಳೂರಿಗೆ 8 ನಗರ ಕೇಂದ್ರಗಳ ನಿರ್ಮಾಣ :*
ವಿಶ್ವದ ಯಾವುದೇ ಸಣ್ಣ ನಗರದಲ್ಲಿ ಒಂದು ನಗರ ಕೇಂದ್ರವಿರುವಂತೆ, ಬೆಂಗಳೂರಿನ 8 ದಿಕ್ಕುಗಳಲ್ಲಿ 8 ನಗರ ಕೇಂದ್ರಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಬೆಂಗಳೂರು ನಗರಕ್ಕೆ ಮಾತ್ರ ನಗರಕೇಂದ್ರವೆಂಬುದಿಲ್ಲ.. ಆದ್ದರಿಂದ 8 ನಗರಕೇಂದ್ರಗಳನ್ನು ನಿರ್ಮಿಸಿ, ಇದಕ್ಕೆ ಪೂರಕವಾಗಿ ರಸ್ತೆ, ರೈಲುಗಳನ್ನು ಅಭಿವೃದ್ಧಿಗೊಳಿಸಬಹುದು. ಈ ಯೋಜನೆಗೆ ಬೇಕಾದ ಸಲಹೆಗಳನ್ನು ವಿನ್ಯಾಸಕಾರರಿಂದ ಬಯಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
*400 ಸಂಶೋಧನಾ ಕೇಂದ್ರ :*
ಬೆಂಗಳೂರು ಜನರ ನೆಚ್ಚಿನ ನಗರವಾಗಿದ್ದು, ಈ ನಗರದಲ್ಲಿ ಅವಿಷ್ಕಾರ ಸೇರಿದಂತೆ ವಿವಿಧ ರಂಗಗಳಲ್ಲಿ ಪ್ರತಿಭಾವಂತರಿದ್ದಾರೆ. ಜೆನೋಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಸಂಶೋಧನಾ ಕೇಂದ್ರಗಳಿವೆ. ರಾಜ್ಯದಲ್ಲಿ 400 ಫಾರ್ಚೂನ್ ಕಂಪನಿಗಳಿವೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಬೆಂಗಳೂರಿನಲ್ಲಿ ಅಭಿವೃದ್ಧಿಗೆ ಬಹಳ ಅವಕಾಶಗಳಿವೆ. ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಸಕಾರಾತ್ಮಕತೆ ಎಲ್ಲರಲ್ಲೂ ಇರಬೇಕು. ಇದಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡುತ್ತದೆ ಎಂದರು.
*ಉತ್ತಮ ವಿನ್ಯಾಸ ಸ್ಪೂರ್ತಿ ನೀಡುತ್ತದೆ :*
ಉತ್ತಮ ವಿನ್ಯಾಸಕಾರರು ಸೂಕ್ಷ್ಮವಾಗಿ ಗಮನಿಸಬೇಕು ಹಾಗೂ ಆಂತರ್ಯವನ್ನು ನೋಡಬೇಕು. ನಿಮ್ಮ ಆತ್ಮಸಾಕ್ಷಿಯ ಮಾತನ್ನು ಕೇಳಬೇಕು. ಆಗಲೇ ಉತ್ತಮ ವಿನ್ಯಾಸಗಳು ಹೊರಹೊಮ್ಮಲು ಸಾಧ್ಯ. ಹೊಸ ವಿನ್ಯಾಸಗಳು ಹೆಚ್ಚಿನ ವ್ಯತ್ಯಾಸವನ್ನು ಮಾಡುವ ಜೊತೆಗೆ ಪರಿಣಾಮವನ್ನೂ ಬೀರುತ್ತದೆ. ಯುವ ವಿನ್ಯಾಸಕಾರರು, ಜೀವನದಲ್ಲಿ ಸುಧಾರಣೆಗಳನ್ನು ತರುವಂತಹ ವಿನ್ಯಾಸಗಳನ್ನು ಮಾಡುವ ಶಕ್ತಿಯನ್ನು ಪ್ರತಿಭೆಯನ್ನು ಹೊಂದಿದ್ದಾರೆ. ಉತ್ತಮ ವಿನ್ಯಾಸ ಸ್ಪೂರ್ತಿಯನ್ನೂ ನೀಡುತ್ತದೆ. ವಿನ್ಯಾಸ ರಚನೆ ನಿರಂತರವಾದ ಪ್ರಕ್ರಿಯೆ ಎಂದರು.
*ಜನರ ಜೀವನ ಸುಗಮಗೊಳಿಸುವಂತಹ ವಿನ್ಯಾಸಗಳ ರಚನೆಯಾಗಬೇಕು:*
ಬೆಂಗಳೂರು ನಮ್ಮ ಪರಂಪರೆ, ಕಲೆ, ಸಂಸ್ಕೃತಿ, ಇಂಜಿನಿಯರಿಂಗ್, ಆವಿಷ್ಕಾರ, ಸೃಜನಾತ್ಮಕತೆ ಎಲ್ಲವೂ ಇಲ್ಲಿದೆ. ಆದರೆ ಇವೆಲ್ಲವನ್ನೂ ಸಂಯೋಜಿಸುವ ಅಗತ್ಯವಿದೆ. ಈ ಸಂಯೋಜನೆಯ ಫಲವಾಗಿ ರಚಿಸಲಾಗುವ ವಿನ್ಯಾಸಗಳೇ ಬ್ರ್ಯಾಂಡ್ ಬೆಂಗಳೂರಿನ ವಿನ್ಯಾಸಗಳಾಗಬೇಕು. ಕಾಲ ಚಲಿಸಿದಂತೆ ನಾವೂ ಮುಂದುವರೆಯಬೇಕು. ಹಲವಾರು ಸವಾಲುಗಳು ಮಾನವ ನಿರ್ಮಿತವೇ. ನಾನು ಕೆಲವು ಸವಾಲುಗಳನ್ನು ನಿಮ್ಮ ಮುಂದಿರಿಸುತ್ತೇನೆ. ಈಗ ಲಭ್ಯವಿರುವ ಮೂಲಭೂತಸೌಕರ್ಯಗಳನ್ನು ಬಳಸಿ ಜನರ ಜೀವನ ಸುಗಮಗೊಳಿಸುವಂತಹ ಮಾಡೆಲ್ ಗಳನ್ನು ವಿನ್ಯಾಸಗೊಳಿಸಬೇಕು. ಈಗಿರುವ ಮೂಲಸೌಕರ್ಯಗಳನ್ನು ಬದಲಾಯಿಸದೇ ಅವುಗಳನ್ನು ಸುಧಾರಿಸುವ ಕೆಲಸವನ್ನು ಮಾಡುಬೇಕು. ಉದಾಹರಣೆಗೆ ಬೆಂಗಳೂರಿನ ಎಂಜಿರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಮಲ್ಲೇಶ್ವರಂ, ಇಂದಿರಾನಗರ, ಹೀಗೆ ಇಂತಹ ಪ್ರದೇಶಗಳನ್ನು ಜನರಿಗೆ ಅನುಕೂಲವಾಗುವಂತಹ, ಪರಂಪರೆಯನ್ನು ಉಳಿಸುವ ರೀತಿಯಲ್ಲಿ ಮರುವಿನ್ಯಾಸಗೊಳಿಸಬೇಕು. ಬೆಂಗಳೂರಿನಲ್ಲಿರುವ ಕೆರೆಗಳ ವಿನ್ಯಾಸವನ್ನು ಬದಲಿಸಬೇಕು. ನೀರು ನಿರ್ವಹಣೆ, ರಸ್ತೆ ನಿರ್ವಹಣೆ ಹಾಗೂ ವಾಣಿಜ್ಯ ನಿರ್ವಹಣೆಗಳನ್ನು ಎದುರಿಸಬೇಕೆನ್ನುವ ಸವಾಲುಗಳನ್ನು ತಮ್ಮ ಮುಂದಿಡುತ್ತೇನೆ ಎಂದರು.
ವಿನ್ಯಾಸಕಾರರು ತಾವು ರಚಿಸಿದ ವಿನ್ಯಾಸಗಳ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು. ಬೆಂಗಳೂರು ನಗರವನ್ನು ಉತ್ತಮ ವಿನ್ಯಾಸಹೊಂದಿರುವ, ಜನಸ್ನೇಹಿಯಾಗಿರುವ ನಗರವನ್ನಾಗಿಸೋಣ. ಇಲ್ಲಿನ ಆವಿಷ್ಕಾರಗಳನ್ನು ಹಾಗೂ ವಿನ್ಯಾಸಗಳನ್ನು ಹೊರದೇಶದವರು ಸ್ಪೂರ್ತಿಯಾಗಿಸಿಕೊಳ್ಳುವಂತೆ ಕೆಲಸ ಮಾಡಬೇಕು. ಇದನ್ನು ಸರ್ಕಾರ ಎಲ್ಲ ರೀತಿಯಲ್ಲಿ ಪ್ರೋತ್ಸಾಹವನ್ನು ನೀಡುತ್ತದೆ ಎಂದರು.
ಐ.ಟಿ. ಬಿ.ಟಿ, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸ್ಟಾರ್ಟ್ ಅಪ್ ವಿಷನ್ ಗುಂಪಿನ ಅಧ್ಯಕ್ಷ ಪ್ರಶಾಂತ್ ಭೂಷಣ್ ಮೊದಲಾದವರು ಉಪಸ್ಥಿತರಿದ್ದರು.
[08/12, 4:45 PM] Cm Ps: ಬೆಂಗಳೂರು, ಡಿಸೆಂಬರ್ 08: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ವತಿಯಿಂದ *ಕನ್ನಡ ಮತ್ತು* *ಸಂಸ್ಕøತಿ ಇಲಾಖೆ* ಪ್ರಾಯೋಜಿಸಿ *ವಿಧಾನಸೌಧದ* *ಸಮ್ಮೇಳನ* ಸಭಾಂಗಣದಲ್ಲಿ ಆಯೋಜಿಸಿರುವ “ *ಶಾಸ್ತ್ರೀಯ* *ಭಾಷಾ ಯೋಜನೆಯ ನಾಲ್ಕು* *ಪುಸ್ತಕಗಳ ಲೋಕಾರ್ಪಣೆ* ”ಗೊಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಸಿ.ಸಿ. ಪಾಟೀಲ್, ಶಿವರಾಮ್ ಹೆಬ್ಬಾರ್ ಹಾಗೂ ಮತ್ತಿತರರು ಹಾಜರಿದ್ದರು.
[08/12, 4:59 PM] Cm Ps: *ಗಡಿ ವಿವಾದ: ರಾಜ್ಯದ ನೀತಿಯನ್ನ ಸ್ಪಷ್ಟವಾಗಿ ಪ್ರಕಟಿಸಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 8: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. ಕರ್ನಾಟಕದಲ್ಲಿಯೂ ಕೂಡ ಸಂಪುರ್ಣ ಬಂದೋಬಸ್ತು ಮಾಡಲಾಗಿದೆ. ನಾನೂ ಕೂಡ ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ.
ಅಮಿತ್ ಶಾ, ಅವರಾಗಲಿ ಬೇರ್ಯಾರೂ ನನ್ನ ಬಳಿ ಈ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.
--
[08/12, 5:10 PM] Cm Ps: *ಹಿಂದಿನ ನ್ಯಾಯದಾನ ವ್ಯವಸ್ಥೆಯಲ್ಲಿ ಮಾನವೀಯ ವಿಚಾರಗಳಿಗೆ ಹೆಚ್ಚು ಮೌಲ್ಯ: ಸಿಎಂ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 8: ಹಿಂದಿನ ನ್ಯಾಯದಾನ ವ್ಯವಸ್ಥೆಯಲ್ಲಿ ಮಾನವೀಯ ಗುಣಗಳಿರುವ ವಿಚಾರಗಳಿಗೆ ಹೆಚ್ಚು ಮೌಲ್ಯ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾನೂನು ಮತ್ತು ಸಂಸದೀಯ ಸುಧಾರಣಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಾಯೋಜಕತ್ವದಲ್ಲಿ ಹೊರತಂದಿರುವ ಶಾಸ್ತ್ರೀಯ ಭಾಷಾ ಯೋಜನೆಯ ನಾಲ್ಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಈ ವಿಚಾರ ಇತಿಹಾಸದಲ್ಲಿ ಕಂಡುಬಂದಿದೆ. ಕರ್ನಾಟಕ ಮಾನವ ಸಂಘ ಜೀವಿ, ಹೀಗಾಗಿ ನಾಗರೀಕತೆ ಬೆಳೆಸಿಕೊಂಡು ಬರಲಾಗಿದೆ. ಎಲ್ಲಿ ನಾಗರೀಕತೆ ಇದೆ ಅಲ್ಲಿ ನ್ಯಾಯದಾನದ ಅವಶ್ಯಕತೆ ಇದೆ. ನ್ಯಾಯದಾನಕ್ಕೆ ತನ್ನದೇ ಇತಿಹಾಸ ಪರಂಪರೆ ಇದೆ. ಅನಾದಿಕಾಲದಿಂದ ಹಿಡಿದು, ಮಧ್ಯ ಕಾಲ ಹಾಗೂ ಕಲಿಯುಗದಲ್ಲಿಯೂ ಕೂಡ ನ್ಯಾಯದಾನದ ವ್ಯವಸ್ಥೆ ಇದೆ. ಪ್ರಜಾಪ್ರಭುತ್ವದಲ್ಲಿ ಈಗ ಕ್ರೋಢೀಕರಿಸಿದ ಶಾಸನ ರಚನೆ ಹಾಗೂ ನ್ಯಾಯದಾನದ ವ್ಯವಸ್ಥೆ ಇದೆ. ಕ್ರೋಢೀಕರಣ ಆಗದಿದ್ದರೂ ಕೂಡ ತನ್ನದೇ ಆದ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು. ರಾಜರ ಕಾಲದಲ್ಲಿ ನ್ಯಾಯದಾನ ಹೇಗಿತ್ತು, ರಾಣಿಯರ ಆಡಳಿತದಲ್ಲಿಯೂ ಕರ್ನಾಟಕದಲ್ಲಿ ಹೇಗೆ ಆಗಿತ್ತು ಎಂಬ ಪರಂಪರೆಯ ವಿಚಾರಗಳು ಪುಸ್ತಕದಲ್ಲಿ ಬಂದಿರುವುದು ಕಾನೂನು ಆಸಕ್ತಿ ಇರುವವರಿಗೆ ಮಾರ್ಗದರ್ಶಿಯಾಗಲಿದೆ ಎಂದರು.
*ಗ್ರಂಥಾಲಯಗಳಿಗೆ ವಿತರಣೆ*
ಪಿ.ಹೆಚ್.ಡಿ ಮಾಡಿರುವ ವ್ಯಕ್ತಿ ಒಬ್ಬರು ಕಲ್ಯಾಣ ಚಾಲುಕ್ಯರ ಆಡಳಿತದಲ್ಲಿ ನ್ಯಾಯದಾನ ವ್ಯವಸ್ಥೆ ಹೇಗಿತ್ತು, ಪ್ರಜಾಪ್ರಭುತ್ವ ಹೇಗಿತ್ತು ಎಂದು 11 ನೇ ಶತಮಾನದ ಶಿಲಾಶಾಸನಗಳನ್ನು ಅಭ್ಯಾಸ ಮಾಡಿ ತಿಳಿಸಿದ್ದಾರೆ. ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ ಎನ್ನುವ ವ್ಯತ್ಯಾಸವನ್ನು 11 ನೇ ಶತಮಾನದಲ್ಲಿಯೇ ಗುರುತಿಸಿರುವುದು ಗಮನಾರ್ಹ. ಅಂಥದ್ದೇ ವಿಚಾರಗಳು ಇಲ್ಲಿಯೂ ಕೂಡ ಇದೆ. ಈ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ಕೊಟ್ಟು ಯುವಕರು ಓದಿ ನ್ಯಾಯ, ನ್ಯಾಯಾಂಗ ಹಾಗೂ ನ್ಯಾಯದಾನ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತಾಗಲಿ ಎಂದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಡಿಎಲ್ ಪಿಎ ನಿವೃತ್ತ ಕಾರ್ಯದರ್ಶಿ ದ್ವಾರಕಾನಾಥ್ ಬಾಬು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
[08/12, 5:51 PM] Cm Ps: ಗುಜರಾತಿನ ಚುನಾವಣಾ ಫಲಿತಾಂಶ-
*ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 8 :
ಗುಜರಾತಿನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಬಿಜೆಪಿ ಪುನ: ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಗುಜರಾತ್ ಮತ್ತು ಕರ್ನಾಟಕ ಗಾತ್ರದಲ್ಲಿ, ಜನಸಂಖ್ಯೆಯಲ್ಲಿ, ಕೈಗಾರಿಕೋದ್ಯಮ, ಶಿಕ್ಷಣ, ಸಂಸ್ಕøತಿಯಲ್ಲಿ ಸಮಾನವಾಗಿದೆ. ಎರಡೂ ಕಡೆ ಅನೇಕ ಸಾಮ್ಯಗಳಿದ್ದು, ಸಾಮಾಜಿಕ ರಚನೆ ಒಂದೇ ರೀತಿ ಇದೆ ಎಂದರು.
*ಗುಜರಾತ್ ನಲ್ಲಿ ಭಾಜಪ ಸತತ ಏಳು ಬಾರಿ ಗೆಲುವು :*
ಇತರೆ ಪಕ್ಷಗಳಲ್ಲಿ ಆಡಳಿತದ ಬಗ್ಗೆ ವಿರೋಧವಿದೆ. ಆದರೆ ಬಿಜೆಪಿಯಲ್ಲಿ ಆಡಳಿತದ ಪರವಾದ ಟ್ರೆಂಡ್ ಸೃಷ್ಟಿಸಲಾಗಿದೆ. ಉತ್ತಮ ಆಡಳಿತ ಪುನ: ಅದೇ ಸರ್ಕಾರವನ್ನು ಆಯ್ಕೆ ಮಾಡುತ್ತದೆ ಎಂದು ನಿರೂಪಿತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳೂ ಹಾಗೂ ಗುಜರಾತ್ ಸರ್ಕಾರ ಮತ್ತು ಸಂಘಟನೆಗಳ ಬಲ ಗುಜರಾತ್ ನಲ್ಲಿ ಏಳು ಬಾರಿ ಸತತವಾಗಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು.
ಹಿಮಾಚಲ್ ಪ್ರದೇಶದಲ್ಲಿ ಸಾಕಷ್ಟು ಕಾರ್ಯಕ್ರಮಗಳು, ಸಂಪರ್ಕ ಸಾಧಿಸುವುದು ಸವಾಲು. ಅಲ್ಲಿ ಯಾವಾಗಲೂ ಪರ್ಯಾಯವಾಗಿ ಪಕ್ಷಗಳನ್ನು ಆಯ್ಕೆ ಮಾಡುವ ಟ್ರೆಂಡ್ ಇದೆ. ಈ ಬಾರಿಯೂ ಅದು ಮುಂದುವರೆದಿದೆ. ಆದರೂ ನಮ್ಮ ಪಕ್ಷದವರು ಸಾಕಷ್ಟು ಪ್ರಯತ್ನ ಮಾಡಿ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಅಲ್ಪ ಮಟ್ಟದಲ್ಲಿ ಶೇಕಡವಾರು ವ್ಯತ್ಯಾಸವಾಗಿದೆ ಎಂದು ತಿಳಿಸಿದರು.
[08/12, 7:42 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಹಾಯಕ ಪೊಲೀಸ್ ಆಯುಕ್ತರ ಕಚೇರಿ, ಶೇಷಾದ್ರಿಪುರಂ, ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆ, ಹಾಗೂ ಸಂಚಾರ ಪೊಲೀಸ್ ಠಾಣೆ, ಹೈ ಗ್ರೌಂಡ್ಸ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ,ಸಚಿವರಾದ ಡಾ: ಕೆ.ಸುಧಾಕರ್, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಶಾಸಕರಾದ ರಿಜ್ವಾನ್ ಅರ್ಷದ್, ಟಿ. ಎ. ಶರವಣ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[08/12, 7:54 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಪ ಪೊಲೀಸ್ ಆಯುಕ್ತರು, ಪೂರ್ವ ವಿಭಾಗ, ಬೆಂಗಳೂರು ನಗರ, ಇವರ ನೂತನ ಕಟ್ಟದ ಹಾಗೂ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಡಾ: ಕೆ.ಸುಧಾಕರ್, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಶಾಸಕರಾದ ರಿಜ್ವಾನ್ ಅರ್ಷದ್, ಟಿ. ಎ. ಶರವಣ, ಡಿಜಿಪಿ ಪ್ರವೀಣ್ ಸೂದ್ , ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[08/12, 9:12 PM] Cm Ps: ಬೆಂಗಳೂರು, ಡಿಸೆಂಬರ್ 08: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಬೆಂಗಳೂರು ನಗರ ಪೊಲೀಸ್ ಇಲಾಖೆಯ ವತಿಯಿಂದ ಮಿಲ್ಲರ್ಸ್ ರಸ್ತೆಯ ಹೈಗ್ರೌಂಡ್ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿರುವ “ *ಸಹಾಯಕ* *ಪೊಲೀಸ್ ಆಯುಕ್ತರ ಕಛೇರಿ -* ಶೇಷಾದ್ರಿಪುರಂ”, “ *ಕಾನೂನು-ಸುವ್ಯವಸ್ಥೆ ಪೊಲೀಸ್* *ಠಾಣೆ, ಸಂಚಾರ* ಪೊಲೀಸ್ ಠಾಣೆ, *ಹೈಗ್ರೌಂಡ್ ಇದರ* *ಕಟ್ಟಡದ ಕಾಮಗಾರಿಯ* *ಶಂಕುಸ್ಥಾಪನಾ”* ಕಾರ್ಯವನ್ನು ನೆರವೇರಿಸಿ ನಂತರ *ಮಾಧ್ಯಮದವರೊಂದಿಗೆ ಮಾತನಾಡಿದರು* .
[08/12, 10:29 PM] Cm Ps: *ಬೆಂಗಳೂರಿನಲ್ಲಿ ಐದು ಹೊಸ ಸಂಚಾರಿ ಪೊಲೀಸ್ ಠಾಣೆ:ಸಿಎಂ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 08: ಬೆಂಗಳೂರಿಗೆ 2-3 ದಿನಗಳಲ್ಲಿ ಐದು ಸಂಚಾರಿ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಹಾಯಕ ಪೊಲೀಸ್ ಆಯುಕ್ತರ ಕಛೇರಿ ಶೇಷಾದ್ರಿಪುರಂ ಕಾನೂನು-ಸುವ್ಯವಸ್ಥೆ ಪೊಲೀಸ್ ಠಾಣೆ, ಸಂಚಾರ ಪೊಲೀಸ್ ಠಾಣೆ, ಹೈಗ್ರೌಂಡ್ ಇದರ ಕಟ್ಟಡದ ಕಾಮಗಾರಿಯ ಶಂಕುಸ್ಥಾಪನೆ ಯನ್ನು ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
*ರಸ್ತೆ ಅಭಿವೃದ್ಧಿಯ ಜೊತೆಗೆ ಸಂಚಾರ ನಿರ್ವಹಣೆ*
ಸಂಚಾರದಲ್ಲಿ ಇರುವ ಅಂತರವಿದ್ದ ಕಡೆಗಳಲ್ಲಿ (ಡಾರ್ಕ್ ಏರಿಯಾ) 5 ಸಂಚಾರ ಠಾಣೆಗಳು ಬರಲಿವೆ. ಇಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತದೆ. ಯಾವುದೇ ವಾಹನ ಚಾಲಕರಿಗೆ ನಿಲ್ಲಿಸದೇ, ತೊಂದರೆ ಆಲ್ಲದೇ, ಭ್ರಷ್ಟಾಚಾರ ವಾದರೆ, ನಿಯಮ ಉಲ್ಲಂಘನೆ ಯಾದರೆ ಗುರುತಿಸುತ್ತದೆ. ಶುಲ್ಕವನ್ನು ಕೂಡ ಹಾಕುತ್ತದೆ. ಸಿಗ್ನಲ್ ಗಳ ಸಿಂಕ್ರೋನೈಜಿಂಗ್ ಕೂಡ ಮಾಡಲಾಗುತ್ತಿದೆ. ಮಿನರ್ವಾ ವೃತ್ತದಿಂದ ಟೌನ್ ಹಾಲ್ ವರೆಗೆ ಸಿಗ್ನಲ್ ಸಿಂಕ್ರೋನೈಜ್ ಮಾಡಲಾಗಿದೆ. ಹಲವಾರು ಕಡೆ ಸಿಂಕ್ರೋನೈಜಿಂಗ್ ಪ್ರಾರಂಭವಾಗಿದೆ. ಇಂದು ಸಂಚಾರ ಸಭೆ ಕರೆದು 12 ಹೈ ಡೆನ್ಸಿಟಿ ಕಾರಿಡಾರ್ ಗಳಿಗೆ ಅಡೆತಡೆಯಿಲ್ಲದ ಸಂಚಾರ ಹಾಗೂ ಸಿಂಕ್ರೋನೈಜೇಶನ್ ಆಗಬೇಕೆಂದು ಸೂಚಿಸಲಾಗಿದೆ. 5-6 ಜಂಕ್ಷನ್ ಗಳನ್ನು ಸುಗಮಗೊಳಿಸಲು ಸೂಚಿಸಿದ್ದೇನೆ. ಗೋರಗುಂಟೆಪಾಳ್ಯ, ಸಿಲ್ಕ್ ಬೋರ್ಡ್ ಜಂಕ್ಷನ್, ಕೆ.ಆರ್. ಪುರಂ ಮುಂತಾದೆಡೆಗಳಲ್ಲಿ ಸಂಚಾರ ಸುಗಮವಾಗಲಿದೆ. ಬರುವ ದಿನಗಳಲ್ಲಿ ರಸ್ತೆ ಅಭಿವೃದ್ಧಿಯ ಜೊತೆಗೆ ಸಂಚಾರ ನಿರ್ವಹಣೆ ಕೂಡ ಉತ್ತಮ ರೀತಿಯಲ್ಲಿ ಆಗಬೇಕೆಂದು ಕೆಲಸ ಮಾಡುತ್ತಿದ್ದೇವೆ ಎಂದರು.
ಬಹಳ ದಿನಗಳಿಂದ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಸ್ಥಳ ನೆನೆಗುದಿಗೆ ಬಿದ್ದಿತ್ತು. ಸ್ಥಳಾಂತರಗೊಂಡ ಮೇಲೆ ಸರಿಯಾದ ವ್ಯವಸ್ಥೆ ಇಲ್ಲದಂತಾಗಿತ್ತು. ಸ್ಥಳದ ದಾಖಲೆಗಳು ದೊರಕಿದ ಮೇಲೆ ಬಹಳ ದಿನಗಳ ಆಸೆ ನೆರವೇರಿದೆ. ಸುವ್ಯವಸ್ಥಿತ ಪೊಲೀಸ್ ಠಾಣೆ, ಎಸಿಪಿ ಕಚೇರಿ ಮತ್ತು ಸಂಚಾರ ಕಟ್ಟಡ ನಿರ್ಮಾಣವಾಗಲಿದೆ. ಪೂರ್ವ ಭಾಗದಲ್ಲಿ ಒಳ್ಳೆಯ ಡಿಸಿಪಿ ಕಚೇರಿ ಆಗಿದೆ. ಇದರಿಂದ ಪೊಲೀಸ್ ಆಡಳಿತ ಸುಲಭ, ದಕ್ಷ ವಾಗಲಿದೆ. ಜನರಿಗೆ ಸೇವೆ ದೊರೆತು, ನ್ಯಾಯ ಸಿಗಬೇಕಾದವರಿಗೆ ನ್ಯಾಯ ದೊರಕಲಿದೆ.
*ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ*
ಹೊಸ ಸಂಚಾರ ವ್ಯವಸ್ಥೆ ಪ್ರಾರಂಭವಾಗಿದೆ. ಸಂಚಾರ ಸಮಸ್ಯೆ ಗಳನ್ನು ಬಗೆಹರಿಸಲು ವಿಶೇಷ ವಾಗಿರುವ ರಚನೆ ಹಾಗೂ ಯೋಜನೆ ಎರಡೂ ಅಗತ್ಯವಿತ್ತು. ಹಲವಾರು ಪ್ರಯೋಗಗಳಾದ ನಂತರ ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ ಸಂಚಾರಕ್ಕೆ ವಿಶೇಷ ಆಯುಕ್ತರ ಹುದ್ದೆ ಸೃಜಿಸಿ, ಅವರಿಗ್ಸ್ ಸಿಬ್ಬಂದಿ ನೀಡಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿ ಪರಿಣಿತರಾಗಿರುವ, ಪಿ.ಹೆಚ್. ಡಿ.ಮಾಡಿರುವ ಎಸ್.ಎ. ಸಲೀಂ ಅವರನ್ನು ನೇಮಿಸಲಾಗಿದೆ. ಕೆಲವೇ ದಿನಗಳಲ್ಲಿ ಬಹಳ ದೊಡ್ಡ ಬದಲಾವಣೆ ತಂದಿದ್ದಾರೆ. ಮೇಲ್ಮಟ್ಟದಲ್ಲಿ ಮಾತ್ರವಲ್ಲದೆ ಕೆಳ ಮಟ್ಟದಿಂದ ಬಳಪಡಿಸಲಾಗುತ್ತಿದೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಡಾ: ಕೆ.ಸುಧಾಕರ್, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಶಾಸಕರಾದ ರಿಜ್ವಾನ್ ಅರ್ಷದ್, ಟಿ. ಎ. ಶರವಣ, ಡಿಜಿಪಿ ಪ್ರವೀಣ್ ಸೂದ್ , ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Post a Comment