: *5 ಲಕ್ಷ ಜನರಿಗೆ ಸ್ವಯಂ ಉದ್ಯೋಗಕ್ಕೆ ಯೋಜನೆ**-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

[12/01, 6:43 PM] Cm Ps: *5 ಲಕ್ಷ ಜನರಿಗೆ ಸ್ವಯಂ ಉದ್ಯೋಗಕ್ಕೆ ಯೋಜನೆ*
*-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಹುಬ್ಬಳ್ಳಿ, ಜ.12:

ಸುಮಾರು 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯೋಜ‌ನೆಯನ್ನು ಕರ್ನಾಟಕದಲ್ಲಿ  ಅನುಷ್ಠಾನಗೊಳಿಸಲಾಗುತ್ತಿದೆ.
ದೇಶದಲ್ಲಿಯೇ ಮೊಟ್ಟ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದ ಕೀರ್ತಿ ನಮ್ಮ ರಾಜ್ಯದ್ದಾಗಿದೆ.
ಮುಂಬರುವ ಓಲಂಪಿಕ್ ಕ್ರೀಡಾಕೂಟಕ್ಕಾಗಿ ರಾಜ್ಯವು  75 ಜನ ಕ್ರೀಡಾಪಟುಗಳನ್ಬು ಅಣಿಗೊಳಿಸಲು ಪ್ರತಿಭಾವಂತರನ್ನು  ದತ್ತು ಪಡೆದು ತರಬೇತಿ ನೀಡುವ ಕಾರ್ಯಕೈಗೊಂಡಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಭಾರತ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ  ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಆಯೋಜಿಸಿರುವ 26 ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು,

ಯುವಜನರನ್ನು ಸ್ವಯಂ ಉದ್ಯೋಗಿಗಳನ್ನಾಗಿಸಲು ರಾಜ್ಯ ಸರ್ಕಾರವು ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯೋಜನೆ ಜಾರಿಗೊಳಿಸಲಿದೆ.
ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆಕೊಟ್ಟ ಧೀಮಂತ ಯೋಗಿಯಾಗಿದ್ದಾರೆ.ಧ್ಯಾನ ಮತ್ತು ಜ್ಞಾನವನ್ನು ಯುವಜನರಿಗೆ ಬೋಧಿಸಿದ ಮಹಾನ್ ಚೇತನ ಅವರಾಗಿದ್ದಾರೆ.ಜನಸಂಖ್ಯೆ ಎಂದರೆ ಹೊರೆಯಲ್ಲ,ಅದು ಮಾನವಸಂಪತ್ತು ಅದರ ಸದ್ವಿನಿಯೋಗಪಡಿಸಿಕೊಂಡು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿದ್ದಾರೆ.ಖೇಲೋ ಇಂಡಿಯಾ ಮೂಲಕ ಯುವಜನತೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಇಂದಿನಿಂದ ಪ್ರಾರಂಭವಾಗಲಿರುವ ರಾಷ್ಟ್ರೀಯ ಯುವಜನೋತ್ಸವ ನಾಡಿನ ಯುವಜನರಲ್ಲಿ ಹೊಸ ಸ್ಫೂರ್ತಿ ತುಂಬಲಿ ಎಂದು ಆಶಿಸಿದರು.
[13/01, 1:00 PM] Cm Ps: *ಬಸವಣ್ಣ ಹಾಗೂ ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜನವರಿ 13 : ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು  ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು    ವಿಧಾನಸಧದ ಮುಂಭಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಿರುವ, ಸಾಮರಸ್ಯವಿರುವ, ಭಾರತದಲ್ಲಿಯೇ ಅತ್ಯಂತ ಶ್ರೇಷ್ಠ ರಾಜ್ಯವಾಗಬೇಕು.  ಈ ಇಬ್ಬರೂ ಮಹಾತ್ಮರ ಪ್ರೇರಣೆ ವಿಧಾನಸೌಧದಲ್ಲಿ ನಿಲ್ಲಲಿ ಎಂದು ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ ಎಂದರು. 

*ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ*
 ಬರುವ ದಿನಗಳಲ್ಲಿ ನಾಡಿನ ಜನತೆಗೆ ಒಳ್ಳೆಯದಾಗಿ ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಲಾಗಿದೆ  ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಎಲ್ಲರೂ ಸೇರಿ ಉದ್ಘಾಟನೆ ಮಾಡೋಣ ಎಂದರು. ಕನ್ನಡ ನಾಡಿಗೆ ಇದೊಂದು ಶುಭದಿನ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

*ನಾಡು ಕಟ್ಟಿರುವ ಅಪ್ರತಿಮ ನಾಯಕರು*
ಕನ್ನಡನಾಡಿನಲ್ಲಿ ಹುಟ್ಟಿ,  ಕ್ರಾಂತಿಯನ್ನು ಮಾಡಿದ ಇಬ್ಬರು ಮಹಾನ್ ಪುರುಷರು. ಒಬ್ಬರು ವಿಶ್ವಬಂಧು, ಸಾಮಾಜಿಕ, ಆರ್ಥಿಕ ಹಾಗೂ ವೈಚಾರಿಕ ಕ್ರಾಂತಿಯನ್ನು ಕರ್ನಾಟಕದಲ್ಲಿ 12 ನೇ ಶತಮಾನದಲ್ಲಿ ಮಾಡಿ ಜಗತ್ತಿಗೆ ದರ್ಶನವನ್ನು ನೀಡಿರುವವರ ಪುತ್ಥಳಿ ಹಾಗೂ ನಾಡು ಕಟ್ಟಿರುವ ಅಪ್ರತಿಮ ನಾಯಕರು, ಜನಹಿತಕ್ಕಾಗಿ ಕರಕಟ್ಟೆಗಳು, ಊರು ಕೇರಿಗಳನ್ನು, ಮಾರುಕಟ್ಟೆಗಳನ್ನು ಕಟ್ಟಿ ಮಾದರಿ ಆಡಳಿತ ಮಾಡಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ವಿಧಾನಸಭಾ ಮುಂಭಾಗದಲ್ಲಿ ನಿರ್ಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಎಲ್ಲಾ ನಾಯಕರ ಅನುಮತಿ ಪಡೆದು, ಸಚಿವ ಆರ್. ಅಶೋಕ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಅಶೋಕ್ ಅವರು ಅತ್ಯಂತ ಅಚ್ಚುಕಟ್ಟಾಗಿ ಜವಾಬ್ದಾರಿಯನ್ನು ನಿರ್ವಹಿಸಿ, ಕೇವಲ ಒಂದೂವರೆ ಎರಡು ತಿಂಗಳೊಳಗೆ ಕಾರ್ಯನಿರ್ವಹಿಸಿ ಕ್ರಮ ಕೈಗೊಂಡಿದ್ದಾರೆ. ನಾಡಿನ ಎಲ್ಲಾ ಪರಮಪೂಜ್ಯರ ಸಾನಿಧ್ಯದಲ್ಲಿ, ಅವರ ಆಶೀರ್ವಾದದೊಂದಿಗೆ ಒಂದು ಶಂಕುಸ್ಥಾಪನೆ ನೆರವೇರಿದೆ ಎಂದರು.
[13/01, 1:02 PM] Cm Ps: ಬೆಂಗಳೂರು, ಜನವರಿ 13: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದಲ್ಲಿ ವಿಸ್ತಾರ ಮೀಡಿಯಾ ಹಮ್ಮಿಕೊಂಡಿದ್ದ ವಿವೇಕ ವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವೀರೇಶಾನಂದ ಸ್ವಾಮೀಜಿ, ವಿಸ್ತಾರ ಮೀಡಿಯಾ ಸಂಸ್ಥೆಯ ಸಿಇಒ ಹರಿಪ್ರಕಾಶ್ ಕೋಣೆಮನೆ, ಸಚಿವರಾದ ಬಿ.ಸಿ.ನಾಗೇಶ್,  ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ, ಶಾಸಕ ಸಿದ್ದುಸವದಿ, ವಿಸ್ತಾರ. ಮೀಡಿಯಾ ಅಧ್ಯಕ್ಷ ಧರ್ಮೇಶ್, ನಿತೀಶ್ ಕುಮಾರ್ ಸಿಂಗ್, ಕಾವೇರಿ ಮೊದಲಾದವರು ಉಪಸ್ಥಿತರಿದ್ದರು.
[13/01, 5:00 PM] Cm Ps: ಆಂಧ್ರಪ್ರದೇಶ (ಶ್ರೀಶೈಲಂ), ಜನವರಿ: 13: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಶ್ರೀಶೈಲ ಜಗದ್ಗುರು ಲಿಂ. ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳವರ ಜನ್ಮ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿರುವ “ರಾಷ್ಟ್ರೀಯ ಧರ್ಮ ಜಾಗೃತಿ ಮಹಾಸಮ್ಮೇಳನ” ಹಾಗೂ “ಕಂಬಿ ಮಂಟಪ”ದ ಅಡಿಗಲ್ಲು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಉಜ್ಜಯನಿಯ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ, ಕಾಶೀಯ ಜಗದ್ಗುರು ಡಾ|| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ, ಕಾಶೀಯ ಕಾಶೀಯ ಜಗದ್ಗುರು ಡಾ|| ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಶ್ರೀಶೈಲಂನ 1008 ಜಗದ್ಗುರು ಡಾ|| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
[13/01, 5:18 PM] Cm Ps: ಆಂಧ್ರಪ್ರದೇಶ (ಶ್ರೀಶೈಲಂ), ಜನವರಿ: 13: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಆಂಧ್ರದ ಶ್ರೀಶೈಲಂನಲ್ಲಿ ಬಸವೇಶ್ವರ ವಿದ್ಯಾವರ್ಧಕ ಸಂಘ, ಬಾಗಲಕೋಟೆ ಇವರ ವತಿಯಿಂದ ಆಯೋಜಿಸಿರುವ ನಿತ್ಯ ಅನ್ನದಾನ ಛತ್ರದ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಶಾಸಕ ವೀರಣ್ಣ ಸಿ. ಚರಂತಿಮಠ ಹಾಗೂ ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Post a Comment

Previous Post Next Post