ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಬುಧವಾರ ಉದ್ಘಾಟಿಸಿದರು.

[18/01, 3:44 PM] Kpcc official: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಬುಧವಾರ ಉದ್ಘಾಟಿಸಿದರು.
[18/01, 5:01 PM] Kpcc official: *ಬಾಗಲಕೋಟೆ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು*

ಇಂದು ನನಗೆ ಬಹಳ ಸಂತೋಷದ ದಿನ. 20 ವರ್ಷಗಳ ಹಿಂದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಚೇರಿಗೆ ಜಾಗ ಮಂಜೂರಾತಿ ಮಾಡುವ ಭಾಗ್ಯ ಸಿಕ್ಕಿತ್ತು. ಪಕ್ಷದ ಕಚೇರಿಗಳು ನಮ್ಮ ಪಾಲಿಗೆ ದೇವಾಲಯಗಳು. ಇಂದು ನಾನು ಅಧ್ಯಕ್ಷನಾಗಿ ಆ ದೇವಾಲಯವನ್ನು ಉದ್ಘಾಟನೆ ಮಾಡುತ್ತಿರುವುದು ನನ್ನ ಭಾಗ್ಯ.

ಜಿಲ್ಲಾಧ್ಯಕ್ಷರಾದ ನಂಜಯ್ಯನಮಠ್ ಅವರು ನನ್ನ ಆತ್ಮೀಯರು. ಅವರು ರಾಜ್ಯ ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ನಾನು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷನಾಗಿದ್ದೆ. ಇಂದು ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದು, ಅವರು ಜಿಲ್ಲಾಧ್ಯಕ್ಷರಾಗಿದ್ದಾರೆ. ನಾನು ಅಧ್ಯಕ್ಷನಾದಾಗ ನನ್ನ ಕೈಕೆಳಗೆ ನೀವು ಜಿಲ್ಲಾಧ್ಯಕ್ಷರಾಗಿರುವುದು ಬೇಡ ರಾಜೀನಾಮೆ ನೀಡಿ, ನಾನು ನಿಮ್ಮನ್ನು ಸೇವಾದಳದ ರಾಜ್ಯಾಧ್ಯಕ್ಷರಾಗಿ ಅಥವಾ ರಾಜ್ಯದ ಪದಾಧಿಕಾರಿಯಾಗಿ ಮಾಡುತ್ತೇನೆ ಎಂದೆ. ಆಗ ಅವರು ದೇವಸ್ಥಾನದಂತಹ ಕಾಂಗ್ರೆಸ್ ಕಚೇರಿ ಕಟ್ಟಿ ಉದ್ಘಾಟನೆ ಮಾಡುವವರೆಗೂ ನಾನು ಈ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ನಾವೆಲ್ಲ ಪವಿತ್ರ ಗಳಿಗೆಯಲ್ಲಿ ಬಾಗಲಕೋಟೆಗೆ ಬಂದಿದ್ದೇವೆ. ಬಸವಣ್ಣ, ಕುವೆಂಪು, ಕನಕದಾಸ, ಸಂತ ಶಿಶುನಾಳ ಶರೀಫರ ಕರ್ನಾಟಕದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ಕಾಪಾಡಲು ಈ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ಒಂದು ಕಾಲದಲ್ಲಿ ಕರ್ನಾಟಕ ದೇಶದಲ್ಲಿಯೇ ಅತ್ಯಂತ ಗೌರವ ಪಡೆದಿದ್ದ ರಾಜ್ಯವಾಗಿತ್ತು. ಆದರೆ ಇಂದು ರಾಜ್ಯದ ಗೌರವ ಏನಾಗಿದೆ? ಎಂದು ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ರಾಜ್ಯದ ಜನರ ಸಮಸ್ಯೆ, ನೋವುಗಳ ಧ್ವನಿಯಾಗಿ ಪ್ರಜಾಧ್ವನಿ ಯಾತ್ರೆ ನಡೆಸಲಾಗುತ್ತಿದೆ. ಈ ಯಾತ್ರೆಯನ್ನು ಜನಸಾಮಾನ್ಯರ ಸಂಕಷ್ಟ ಪರಿಹಾರಕ್ಕಾಗಿ ಮಾಡುತ್ತಿದ್ದೇವೆ. 

ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಇರಲಿಲ್ಲ. ಆದರೆ ಆಪರೇಷನ್ ಕಮಲದ ಮೂಲಕ ಈ ಸರ್ಕಾರ ಅಧಿಕಾರಕ್ಕೆ ಬಂದಿತು. ಕಳೆದ ಮೂರುವರೆ ವರ್ಷಗಳಲ್ಲಿ ಈ ಸರ್ಕಾರದಿಂದ ಏನಾದರೂ ಬದಲಾವಣೆ ಆಗಿದೆಯಾ? ಮೋದಿ ಅವರು ನಿಮಗೆಲ್ಲ ಅಚ್ಛೇ ದಿನ ಬರಲಿದೆ, ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇನೆ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಇದ್ಯಾವುದಾದರೂ ನಿಮಗೆ ಸಿಕ್ಕಿದೆಯಾ? ಖಾಸಗಿ, ಸರ್ಕಾರಿ ನೌಕರಿ ನಿಮ್ಮ ಊರಿನ ಜನರಿಗೆ ಸಿಕ್ಕಿದೆಯಾ? ಕೋವಿಡ್ ಬಂದಾಗ, 18 ದಿನಗಳಲ್ಲಿ ಮಹಾಭಾರತ ಯುದ್ಧ ಮುಗಿದಿತ್ತು, ನಾನು ಈ ಕೋವಿಡ್ ವಿರುದ್ಧದ ಯುದ್ಧವನ್ನು 21 ದಿನಗಳಲ್ಲಿ ಅಂತ್ಯ ಮಾಡುತ್ತೇವೆ ಜಾಗಟೆ ಚಪ್ಪಾಳೆ ಹೊಡೆಯಿರಿ ಎಂದರು. ಇಡೀ ದೇಶದ ಜನ ಹೊಡೆದರು.

ಕೋವಿಡ್ ನಿಂದ ಆಸ್ಪತ್ರೆ ಸೇರಿದವರಿಗೆ ಹಣ ನೀಡುತ್ತೇವೆ, ಚಿಕಿತ್ಸಾ ವೆಚ್ಚ ಭರಿಸುತ್ತೇವೆ, ಕೋವಿಡ್ ನಿಂದ ಸತ್ತರವಿಗೆ ಪರಿಹಾರ ನೀಡುತ್ತೇವೆ ಎಂದು ಹೇಳಿದ್ದರು. ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಸತ್ತಿದ್ದರು. ಅವರ ಕಡೆ ಸರ್ಕಾರ ತಿರುಗಿಯೂ ನೋಡಲಿಲ್ಲ. ನಾನು, ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆವು. ಕೋರ್ಟ್ ಮಧ್ಯಪ್ರವೇಶ ಮಾಡಿ ತನಿಖೆ ನಡೆಸಿ 36 ಜನ ಸತ್ತಿದ್ದಾರೆ ಎಂದು ತಿಳಿಸಿತು. ಬಿಜೆಪಿ ಅವರ ನೆರವಿಗೆ ಧಾವಿಸಲಿಲ್ಲ. ನಾನು ಪಕ್ಷದ ಪರವಾಗಿ ಅವರ ಮನೆಗಳಿಗೆ ಹೋಗಿ, ತಲಾ 1 ಲಕ್ಷ ಆರ್ಥಿಕ ನೆರವು ನೀಡಿ ಬಂದಿದ್ದೇವೆ. ರಾಜ್ಯದಲ್ಲಿ 4.5 ಲಕ್ಷ ಜನ ಕೋವಿಡ್ ನಿಂದ ಸತ್ತಿದ್ದಾರೆ. ನ್ಯಾಯಾಲಯ ಇವರಿಗೆ ಪರಿಹಾರ ನೀಡಿ ಎಂದು ಹೇಳಿದ್ದರೂ ಬಿಜೆಪಿ ಸರ್ಕಾರ ಅವರಿಗೆ ಪರಿಹಾರ ನೀಡಿಲ್ಲ. ಈ ಎಲ್ಲ ಅನಾಹುತಗಳಿಗೆ ಬಿಜೆಪಿ ಕಾರಣ.

ನಾವೆಲ್ಲ ನಾಯಕರು ಈ ಬಗ್ಗೆ ಚರ್ಚೆ ಮಾಡಿ ಇದನ್ನು ಜನರ ಮುಂದೆ ಇಟ್ಟು ಚರ್ಚೆ ಮಾಡಬೇಕು ಎಂದು ತೀರ್ಮಾನಿಸಿದೆವು. ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನಾವು ಜನರಿಗಾಗಿ ಏನು ಮಾಡಿದ್ದೇವೆ, ಆಡಳಿತ ಪಕ್ಷ ಏನು ಮಾಡಿದೆ ಎಂದು ತೀರ್ಮಾನ ಮಾಡುವವರು ಜನರು. ಹೀಗಾಗಿ ಜನರ ಮಧ್ಯೆ ಈ ವಿಚಾರ ತಿಳಿಸಲು ಇಲ್ಲಿಗೆ ಬಂದಿದ್ದೇವೆ. ಇಲ್ಲಿಗೆ ಬರುವ ಮುನ್ನ ಬಿಜೆಪಿ ಪಾಪದ ಪುರಾಣವನ್ನು ಬಿಡುಗಡೆ ಮಾಡಿದ್ದೇವೆ.

ಬಿಜೆಪಿ ಮಾಡಿರುವ ಲೂಟಿ ಬಗ್ಗೆ ಪ್ರಸ್ತಾಪಿಸಿದ್ದೇವೆ. ಕೋವಿಡ್ ಸಲಕರಣೆ, ಹಾಸಿಗೆ ಸೇರಿದಂತೆ ಪ್ರತಿಯೊಂದರಲ್ಲೂ 200, 300ರಷ್ಟು ಕಮಿಷನ್ ಲೂಟಿ ಮಾಡಿದ್ದಾರೆ. ಹೀಗಾಗಿ ಈ ಸರ್ಕಾರಕ್ಕೆ 40% ಸರ್ಕಾರ ಎಂದು ಹೆಸರು ಬಂದಿದೆ. ಯುವಕರು ಉದ್ಯೋಗ ಪಡೆಯಲು ಕಷ್ಟಪಡುತ್ತಿದ್ದಾರೆ. ಸರ್ಕಾರ ಪಿಎಸ್ಐ, ಜೆಇಇ, ಸಹಾಯಕ ಪ್ರಾಧ್ಯಾಪಕ ಸೇರಿದಂತೆ ಎಲ್ಲ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ 4-5 ಕೋಟಿ ಹಣ ನೀಡಬೇಕು ಎಂದು ಬಿಜೆಪಿ ಸಂಸದ ಬಹಿರಂಗ ಹೇಳಿಕೆ ನೀಡಿದ್ದಾರೆ. ನಿಮ್ಮ ಪಕ್ಕದ ಕ್ಷೇತ್ರದ ಶಾಸಕರು ಈ ಸರ್ಕಾರದಲ್ಲಿ ಮಂತ್ರಿಯಾಗಬೇಕಾದರೆ 100 ಕೋಟಿ, ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ನೀಡಬೇಕು ಎಂದು ಹೇಳಿದರು. ಒಬ್ಬ ಮಂತ್ರಿಯನ್ನು ಪಿಂಪ್ ಎಂದು ಕರೆದರು. ಆದರೂ ಈ ಸರ್ಕಾರಕ್ಕೆ ಯಾವ ಪ್ರಕರಣವನ್ನು ತನಿಖೆ ಮಾಡುವ ಧೈರ್ಯವಿಲ್ಲ. ವಿಶ್ವನಾಥ್ ಅವರು ನೀರಾವರಿ ಇಲಾಖೆ ಟೆಂಡರ್ ನಲ್ಲಿ 20% ಕಮಿಷನ್ ಪಡೆಯಲಾಗಿದೆ ಎಂದರು. ಇನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈ ಸರ್ಕಾರದಲ್ಲಿ 40% ಕಮಿಷನ್ ಪಡೆಯುತ್ತಿದೆ ಎಂದು ಪ್ರಧಾನಮಂತ್ರಿಗಳಿಗೆ ಪತ್ರ ಬರೆದರು. ಆದರೂ ಅದನ್ನು ತನಿಖೆ ಮಾಡಲು ಈ ಸರ್ಕಾರದಿಂದ ಸಾಧ್ಯವಾಗಿಲ್ಲ. ಪಿಡಬ್ಲ್ಯೂಡಿ, ಸಹಾಯಕ ಪ್ರಾಧ್ಯಪಕ ಹುದ್ದೆಗಳಿಗೆ 40-60 ಲಕ್ಷ ನೀಡಬೇಕು ಎಂದು ಪತ್ರಿಕೆಗಳು ವರದಿ ಮಾಡುತ್ತಿವೆ.  

ನಿಮ್ಮ ಸಮಸ್ಯೆಗೆ ಸಹಾಯಮಾಡಿ, ನಿಮ್ಮ ನೋವನ್ನು ಪರಿಹರಿಸಬೇಕು. ಅದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಕಳೆದ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಾಗ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಕಲ್ಯಾಣ ಕರ್ನಾಟಕ್ಕೆ 5 ಸಾವಿರ ಕೋಟಿ ಅನುದಾನ, ಆ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಆರ್ಥಿಕ ನೀತಿ ನೀಡುವ ವಚನ ನೀಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ಜನಸಂಖ್ಯೆ ಅನುಗುಣವಾಗಿ ಅವರಿಗೆ ನ್ಯಾಯ ಸಿಗಬೇಕು ಎಂದು 10 ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ವಿಜಯಪುರದಲ್ಲಿ ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ, ಹುಬ್ಬಳ್ಳಿ ಧಾರವಾಡದಲ್ಲಿ ಹೆಚ್.ಕೆ ಪಾಟೀಲ್ ಅವರ ನೇತೃತ್ವದಲ್ಲಿ ಸಭೆ ಮಾಡಿ ಅಲ್ಲಿ ಈ ಭಾಗದ ಭೂಮಿಯನ್ನು ಹಸನಾಗಿಸಲು, ನೀರಾವರಿ ಸೌಲಭ್ಯ ನೀಡಲು ಐದು ವರ್ಷಗಳಲ್ಲಿ 2 ಲಕ್ಷ ಕೋಟಿ ಮೀಸಲಿಡಲು ತೀರ್ಮಾನಿಸಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ವಚನ.

ಮಹಾತ್ಮಾಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಬೆಳಗಾವಿಯಲ್ಲಿ ಪ್ರಜಾಧ್ವನಿ ಆರಂಭಿಸಿ, ಅಲ್ಲಿ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ಎಂಬ ಗೃಹಜ್ಯೋತಿ ಕಾಂಗ್ರೆಸ್ ನ ಮೊದಲ ಗ್ಯಾರೆಂಟಿ ಯೋಜನೆಯನ್ನು ಘೋಷಣೆ ಮಾಡಿದೆವು. ಆಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ. ಉಳಿತಾಯವಾಗುತ್ತದೆ. ನಾ ನಾಯಕಿ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಅವರ ಸಮ್ಮುಖದಲ್ಲಿ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಭತ್ಯೆಯಂತೆ ವರ್ಷಕ್ಕೆ 24 ಸಾವಿರ ನೀಡುವುದಾಗಿ ಗೃಹಲಕ್ಷ್ಮಿ ಎಂಬ ಕಾಂಗ್ರೆಸ್ ನ ಎರಡನೇ ಗ್ಯಾರೆಂಟಿ ಯೋಜನೆ ಘೋಷಿಸಿದ್ದೇವೆ.  

ಹೆಣ್ಣು ಕುಟುಂಬದ ಕಣ್ಣು, ಹೆಣ್ಣಿನ ಶಕ್ತಿ ದೇಶದ ಶಕ್ತಿ, ಆಕೆಯ ನಾಯಕತ್ವ ಬೆಳೆಸಲು ನಾವು ನಾ ನಾಯಕಿ ಕಾರ್ಯಕ್ರಮ ಮಾಡಿದ್ದೇವೆ. ವೆಂಕಟೇಶ್ವರನನ್ನು ಲಕ್ಷ್ಮೀವೆಂಕಟೇಶ್ವರ, ಶಿವನನ್ನು ಪಾರ್ವತಿ ಪರಮೇಶ್ವರ, ಗಣೆಶನಿಗೆ ಗೌರಿಪುತ್ರ ಎಂದು ಕರೆಯುತ್ತೇವೆ. ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ, ಪೂಜಿಸುತ್ತೇವೆ. ಹೀಗಾಗಿ ಮಹಿಳೆಯರಿಗೆ ಶಕ್ತಿ ತುಂಬಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಸೋನಿಯಾ ಗಾಂಧಿ ಅವರು ದೇಶದ ಹಿತಕ್ಕಾಗಿ 2 ಬಾರಿ ದೇಶದ ಪ್ರಧಾನಮಂತ್ರಿ ಹುದ್ದೆಯನ್ನು ಒಬ್ಬ ಆರ್ಥಿಕ ತಜ್ಞನಿಗೆ ಬಿಟ್ಟುಕೊಟ್ಟರು. ಗ್ರಾಮಪಂಚಾಯ್ತಿ ಸ್ಥಾನವನ್ನೇ ಹಂಚಿಕೊಳ್ಳದ ಕಾಲದಲ್ಲಿ ಆ ತಾಯಿ ಪ್ರಧಾನಮಂತ್ರಿ ಹುದ್ದೆಯನ್ನು ಬಿಟ್ಟುಕೊಟ್ಟರು. 

ಈ ಸಭೆ ಬಳಿಕ ನಾನು ಅರ್ಜಿ ಕಳುಹಿಸಿ ಕೊಡುತ್ತೇವೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅಭ್ಯರ್ಥಿಗಳು ಈ ಅರ್ಜಿಯನ್ನು ಮನೆ ಮನೆಗೂ ಹೋಗಿ, ಮಹಿಳೆಯರರಿಂದ ಸಹಿ ಹಾಕಿಸಿ, ಎಷ್ಟು ಜನರಿಗೆ ನಮ್ಮ ಯೋಜನೆ ಬೇಕು ಎಂದು ಮಾಹಿತಿ ಕಲೆಹಾಕಬೇಕು. ಆಮೂಲಕ ನಮ್ಮ ಕಾರ್ಯಕ್ರಮವನ್ನು ಎಲ್ಲ ಮನೆಗಳಿಗೆ ತಲುಪಿಸಬೇಕು. ಈ ಕಾರ್ಯಕ್ರಮಗಳನ್ನು ನೀಡುವುದು ನಮ್ಮ ಪ್ರತಿಜ್ಞೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಪೊಲೀಸರು ನಮಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಅವರಿಗೊಂದು ಸಲಾಂ. ಮುಂದೆ ನಮ್ಮ ಸರ್ಕಾರದಲ್ಲಿ ಅವರ ವರ್ಗಾವಣೆಗೆ, ಪೋಸ್ಟಿಂಗ್ ಗೆ ಲಂಚ ಪಡೆಯುವುದಿಲ್ಲ. ಅದೇನಿದ್ದರೂ ಬಿಜೆಪಿ ಸರ್ಕಾರದ ಕೆಲಸ. ಇನ್ನು ಅತ್ಯುತ್ತಮ ಕೆಲಸ ನಿರ್ವಹಿಸುತ್ತಿರುವ ಮಾಧ್ಯಮಗಳಿಗೂ ಒಂದು ನಮಸ್ಕಾರ ತಿಳಿಸುತ್ತೇನೆ.
[18/01, 5:03 PM] Kpcc official: ಬಾಗಲಕೋಟೆಯಲ್ಲಿ ಬುಧವಾರ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೇಂದ್ರದ ಮಾಜಿ ಸಚಿವ ಕೆ ಎಚ್ ಮುನಿಯಪ್ಪ, ಮುಖಂಡರಾದ ಎಚ್ ಕೆ ಪಾಟೀಲ್, ಸತೀಶ್ ಜಾರಕಿಹೊಳಿ, ಬಸವರಾಜ ರಾಯರೆಡ್ಡಿ ಮತ್ತಿತರರು ಭಾಗವಹಿಸಿದ್ದರು.
[18/01, 5:03 PM] Kpcc official: *ಬಾಗಲಕೋಟೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮಗೋಷ್ಠಿ ಮುಖ್ಯಾಂಶಗಳು:*

ರಾಜ್ಯದ ಜನರ ಅಭಿಪ್ರಾಯ ಪಡೆದು, ಅವರ ನೋವು, ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಪರಿಹಾರ ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಮೊದಲ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ. ನಂತರ ನಾನು ಹಾಗೂ ಸಿದ್ಧರಾಮಯ್ಯನವರು ಎರಡು ತಂಡಗಳಾಗಿ ಉತ್ತರ ಹಾಗೂ ದಕ್ಷಿಣ ಭಾಗದ ಜಿಲ್ಲೆಗಳ ವಿಧಾನಸಭಾ ಕ್ಷೇತ್ರ ಭಾಗಗಳಲ್ಲಿ ಪ್ರವಾಸ ಮಾಡಲಾಗುವುದು.

ಮಹದಾಯಿ, ಕೃಷ್ಣಾ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮಾವೇಶ, ಮಹಿಳೆಯರ ಸಮಾವೇಶವನ್ನು ಮಾಡಿದ್ದೇವೆ. ಬೆಲೆ ಏರಿಕೆಯಿಂದ ರಾಜ್ಯದ ಮಹಿಳೆಯರು ಅನುಭವಿಸುತ್ತಿರುವ ಸಮಸ್ಯೆಗೆ ಪರಿಹಾರ ನೀಡಲು ಅವರಿಂದಲೇ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, 9 ಸಾವಿರಕ್ಕೂ ಹೆಚ್ಚು ಮಹಿಳೆಯರು ತಮ್ಮ ಸಲಹೆ ನೀಡಿದ್ದರು. ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಮಹಿಳೆಯರು ಅನುಭವಿಸುತ್ತಿರುವ ನೋವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ನೆರವಾಗುವ ಉದ್ದೇಶದಿಂದ ಗೃಹಲಕ್ಷ್ಮೀ ಯೋಜನೆಯನ್ನು ಘೋಷಣೆ ಮಾಡಿದ್ದೇವೆ. ಅಮೂಲಕ ಮನೆಯ ಜವಾಬ್ದಾರಿ ವಹಿಸಿಕೊಂಡಿರುವ ಮಹಿಳೆಯಗೆ ವಾರ್ಷಿಕವಾಗಿ 24 ಸಾವಿರ ನೀಡಲು ಪಕ್ಷ ಕಾರ್ಯಕ್ರಮ ನೀಡಿದೆ. ಇದು ಕಾಂಗ್ರೆಸ್ ಪಕ್ಷದ ಎರಡನೇ ಗ್ಯಾರಂಟಿ ಯೋಜನೆಯಾಗಿದೆ. ಇನ್ನು ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ ನೀಡುವ ಗ್ರಹಜ್ಯೋತಿ ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರಂಟಿ ಯೋಜನೆಯಾಗಿದೆ. ಈ ಯೋಜನೆ ಮೂಲಕ ಪ್ರತಿ ಕುಟುಂಬ ಪ್ರತಿ ವರ್ಷ 18 ಸಾವಿರ ರೂ. ಉಳಿತಾಯ ಮಾಡಬಹುದಾಗಿದೆ.

ಈ ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ, ಜನರ ಆದಾಯ ಡಬಲ್ ಮಾಡಲು ಆಗಲಿಲ್ಲ ಹೀಗಾಗಿ ಈ ಸಮಸ್ಯೆಗಳು ಉದ್ಭವಿಸಿದ್ದು, ಇವುಗಳಿಗೆ ಪರಿಹಾರ ನೀಡಲು ಈ ಯೋಜನೆಗಳನ್ನು ಘೋಷಿಸಲಾಗಿದೆ. ನಾವು ಈ ಹಿಂದೆ ಕೊಟ್ಟ ಮಾತಿನಂತೆ ನಡೆದಿದ್ದೇವೆ. ಈಗಲೂ ಅದೇ ರೀತಿ ಕೊಟ್ಟ ಮಾತಿನಂತೆ ನಡೆಯುತ್ತೇವೆ. ಈ ಯೋಜನೆಗಳ ಜಾರಿ ಬಗ್ಗೆ ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ. ನಾನು ಇಂಧನ ಸಚಿವನಾಗಿದ್ದಾಗ ರಾಜ್ಯದಲ್ಲಿ 10 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ನಾನು ಅಧಿಕಾರದಿಂದ ಇಳಿಯುವ ಮುನ್ನ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ 21 ಸಾವಿರ ಮೆ.ವ್ಯಾ ಗೆ ಏರಿಕೆ ಮಾಡಲಾಗಿತ್ತು.

ಮಾದ ಮಗಳು ವೇದಿಕ ಸಿದ್ಧ ಮಾಡಿದರೆ ಅಶೋಕ್‌ ಅವರ ಜತಗಾಗಲಿ, ಇಂದನ ಸಚಿವ ಸುನೀಲ್‌ ಕುಮಾರ್ ಅವರ ಜತಗಾಗಲಿ ಈ ಯೋಜನೆ ಹೇಗೆ ಜಾರಿ ಮಾಡಲಾಗುವುದು, ಎಲ್ಲಿ ಹಣ ಉಳಿತಾಯ ಮಾಡಿ, ಸಂಪನ್ಮೂಲ ಕ್ರೂಡೀಕರಣಗೊಳಿಸಿ ಸರ್ಕಾರಕ್ಕೆ ಹೊರೆಯಾಗದ ರೀತಿ ಈ ಯೋಜನೆ ಜಾರಿ ಮಾಡಬಹುದು ಎಂಬುದರ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ.

*ಪ್ರಶ್ನೋತ್ತರ:*

ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಕೇಳಿದ ಪ್ರಶ್ನೆಗೆ '2ರಂದು ರಾಜ್ಯ ಚುನಾವಣಾ ಸಮಿತಿ ಬೆಂಗಳೂರಿನಲ್ಲಿ ಸಭೆ ನಡೆಸಲಿದೆ. ಅದಕ್ಕೂ ಮುನ್ನ ಎಲ್ಲ ಜಿಲ್ಲೆಗಳಲ್ಲಿ ಸಭೆ ನಡೆಸಿ ಪರಿಷ್ಕೃತ ಪಟ್ಟಿಯನ್ನು ಸಿದ್ಧಪಡಿಸಸಿ ನೀಡಲು ತಿಳಿಸಿದ್ದೇವೆ' ಎಂದರು.

ಗುಜರಾತ್ ಮಾದರಿ ಅನ್ವಯವಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಬಿಜೆಪಿಯವರು ಗುಜರಾತ್ ಮಾದರಿ ಮಾಡಬಹುದು. ನಾವು ಕರ್ನಾಟಕ ಮಾದರಿಯನ್ನೇ ಅನುಸರಿಸುತ್ತೇವೆ, ನಮಗೆ ನಮ್ಮ ಮಾದರಿಯೇ ಸಾಕು' ಎಂದರು.

ನಿಮ್ಮ ಪಕ್ಷದಲ್ಲಿ ಯಾರಿಗಾದರೂ 2 ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶವಿದೆಯೇ ಎಂದು ಕೇಳಿದಾಗ, 'ಸಿದ್ದರಾಮಯ್ಯನವರು ಇತ್ತೀಚೆಗೆ ಬಹಿರಂಗವಾಗಿ  ಒಂದು ಕಡೆ ಸ್ಪರ್ಧಿಸುವುದಾಗಿ ಹೇಳಿದ್ದು, ಅರ್ಜಿ ಹಾಕಿದ್ದಾರೆ. ಈ ವಿಚಾರವಾಗಿ ಪಕ್ಷ ತೀರ್ಮಾನ ಕೈಗೊಳ್ಳಲಿದೆ' ಎಂದು ತಿಳಿಸಿದರು.

ಕೃಷ್ಣಾ ನದಿ ನೀರು ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ರಾಜ್ಯದಲ್ಲಿ ಎಲ್ಲ ನೀರಾವರಿ ಯೋಜನ ಜಾರಿ ಮಾಡಲು ಐದು ವರ್ಷಗಳಲ್ಲಿ 2 ಲಕ್ಷ ಕೋಟಿ ಹಣ ನೀಡುವುದಾಗಿ ನಾವು ಘೋಷಣೆ ಮಾಡಿದ್ದೇವೆ. ದೊಡ್ಡ ನೀರಾವರಿ, ಸಣ್ಣ ನೀರಾವರಿ ಯೋಜನೆಗಳನ್ನು ನಾವು ಪೂರ್ಣಗೊಳಿಸುತ್ತೇವೆ' ಎಂದರು.

ಪ್ರಧಾನಿ ಮೋದಿ ಅವರು ರಾಜ್ಯ ಪ್ರವಾಸ ಮಾಡುತ್ತಿರುವ ಬಗ್ಗೆ ಹೇಳಿದಾಗ, 'ಅಮಿತ್ ಶಾ ಅವರು ಬಹಿರಂಗವಾಗಿ ಈಗಾಗಲೆ ಹೇಳಿದ್ದಾರೆ. ಅವರು ಮುಂಬರುವ ಚುನಾವಣೆಯನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎದುರಿಸುವುದಿಲ್ಲ. ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲಿಗೆ ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಅವರ ಹೇಳಿಕೆ ಸ್ಪಷ್ಟಪಡಿಸುತ್ತಿದೆ. ರಾಜ್ಯ ನಡೆಸುತ್ತಿರುವ ಬೊಮ್ಮಾಯಿ ಅವರು ವಿಫಲರಾಗಿರುವುದಕ್ಕೆ ಅವರು ಪ್ರಧಾನಿಗಳ ಹೆಸರನ್ನು ಹೇಳುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರವನ್ನು ಅವರಿಂದ ನಡೆಸಲು ಆಗಿಲ್ಲ. ಈಗ ಅವರು ಮುಖ್ಯಮಂತ್ರಿ ಬಿಟ್ಟು ರಾಷ್ಟ್ರ ನಾಯಕರನ್ನು ಮುಂದೆ ಬಿಡುತ್ತಿದ್ದಾರೆ' ಎಂದು ತಿಳಿಸಿದರು.

ಮೀಸಲಾತಿ ವಿಚಾರ ಚುನಾವಣೆ ಮೇಲೆ ಪ್ರಭಾವ ಬೀರಲಿದೆಯೇ ಎಂಬ ಪ್ರಶ್ನೆಗೆ, 'ಖಂಡಿತವಾಗಿಯೂ ಬೀರುತ್ತದೆ. ಈ ಮೀಸಲಾತಿ ವಿಚಾರದವನ್ನು ಬಿಜೆಪಿ ಗೊಂದಲದ ಗೂಡು ಮಾಡಿದ್ದಾರೆ. ಮೃತ್ಯುಂಜಿಯ ಸ್ವಾಮೀಜಿಗಳು ಈಗಾಗಲೇ ಸರ್ಕಾರ ಈ ವಿಚಾರದಲ್ಲಿ ತಲೆ ಮೇಲೆ ತುಪ್ಪ ಸವರಿದ್ದಾರೆ ಎಂದು ಸರ್ಕಾರದ ನಿಲುವನ್ನು ತಿರಸ್ಕರಿಸಿದ್ದಾರೆ. ಈಗ ಅವರೇ ಬೇರೆಯವರಿಂದ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿಸಿದ್ದಾರೆ. ಸುಪ್ರೀಂ ಕೋರ್ಟ್‌ ಆರಥಿಕ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ಸ್ಪಷ್ಟಪಡಿಸಿದ್ದು, ಸರ್ಕಾರ ಅದನ್ನು ಮುಟ್ಟಲು ಸಾಧ್ಯವಿಲ್ಲ. ಕಾನೂನು ಚೌಕಟ್ಟಿನಲ್ಲಿ ಆಗದಿರುವ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಅವರು ಮೀಸಲಾತಿ ನೀಡಿದ್ದರ ಸ್ವಾಮೀಜಿಗಳು ಯಾಕ ಧರಣಿ ಕೂರುತ್ತಿದ್ದರು. ಆ ಸಮಾಜ ಸರ್ಕಾರವನ್ನು ದಿಕ್ಕರಿಸುತ್ತಿರುವುದು ಏಕೆ? ಪರಿಸಿಷ್ಠರ ಮೀಸಲಾತಿ ವಿಚಾರದಲ್ಲೂ ಅವರಿಗೆ ಸರಿಯಾದ ಆಸಕ್ತಿ ಇದ್ದಿದ್ದರೆ, ಸಂಪುಟ ಸಭೆಯಲ್ಲಿ ಅದನ್ನು ಅನುಮೋದನೆ ನೀಡಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಸಂಸತ್ತಿನಲ್ಲಿ ಸಂವಿಧಾನಕ್ಕೆ ತಿಂದ್ದುಪಡಿ ತಂದು 9ನೇ ಶೆಡ್ಯುಲ್ ಗೆ ಸೇರಿಸಬೇಕಾಗಿತ್ತು, ಸಂಸತ್ತಿನಲ್ಲಿ ಕೇಂದ್ರ ಸಚಿವರು ಕೇಂದ್ರದ ಮುಂದೆ ಮೀಸಲಾತಿ ಹೆಚ್ಚಿಸುವ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದಾರೆ' ಎಂದರು.

ನೀವು ಮೀಸಲಾತಿ ಗೊಂದಲ ಬಗೆಹರಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ, “ನಾವು ನುಡಿದಂತೆ ನಡೆಯುತ್ತೇವ. ನಮ್ಮ ಮೇಲೆ ವಿಶ್ವಾಸ ಇಡಲಿ' ಎಂದರು.

ಪಂಚಮಸಾಲಿ ಮೀಸಲಾತಿಗೆ ಕಾಂಗ್ರೆಸ್‌ ನವರೇ ಪರೋಕ್ಷವಾಗಿ ಅಡ್ಡಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, 'ಪಂಚಮಸಾಲಿ ಹೊಸ ಮಠ ಸ್ಥಾಪನೆಗೆ ಅನುದಾನ ಕೊಟ್ಟಿದ್ದು ಯಾರು? ಧರ್ಮ, ಸಮಾಜ ಉಳಿಯಲು ಅವರು ಮಠ ಕಟ್ಟಲಿ, ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಾವು ಎಲ್ಲರನ್ನು ಒಟ್ಟುಗೂಡಿಸಿ, ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ಜನಸಂಖ್ಯೆ ಆಧಾರದ ಮೇಲೆ ಎಲ್ಲ ಸಮಾಜದವರಿಗೆ ನ್ಯಾಯ ಸಿಗಬೇಕು ಎಂದು ಪ್ರತಿಪಾದಿಸುತ್ತದೆ' ಎಂದು ತಿಳಿಸಿದರು.

ಎಸ್‌.ಆರ್ ಪಾಟೀಲ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ, ಎಸ್‌.ಆರ್. ಪಾಟೀಲ್‌ ಅವರು ಹಿರಿಯ ನಾಯಕರು, ಅವರ ಗೌರವಕ್ಕೆ ಧಕ್ಕೆಯಾಗದಂತೆ, ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ' ಎಂದು ತಿಳಿಸಿದರು.
[18/01, 5:04 PM] Kpcc official: ಒಂದೆಡೆ @nalinkateel ಅವರ ತರದವರು ಅಭಿವೃದ್ಧಿಪರ ಚರ್ಚೆ ಬಿಟ್ಟು ಲವ್ ಜಿಹಾದ್ ಚರ್ಚೆಗೆ ಒತ್ತು ಕೊಡಿ ಕಾರ್ಯಕರ್ತರಿಗೆ ಹೇಳುತ್ತಾರೆ.

ಮತ್ತೊಂದೆಡೆ @narendramodi ಅವರು ಮುಸ್ಲಿಮರ ವಿರುದ್ಧ ದ್ವೇಷ ಕಾರುವುದನ್ನು ಬಿಡಿ ಎಂದು ಬಿಜೆಪಿ ನಾಯಕರಿಗೆ ಹೇಳುತ್ತಾರೆ.

ಬಿಜೆಪಿ ಜಾತ್ಯತೀತ ವೇಷ ತೊಡುವುದು, ತೋಳ ಗೋವಿನ ವೇಷ ಹಾಕುವುದು ಎರಡೂ ಒಂದೇ!
[18/01, 5:04 PM] Kpcc official: ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕುವುದು,
ಭಾರತದ ಮಾನ ಹೋದಮೇಲೆ ಎಚ್ಚರಾಗುವುದು,
ದ್ವೇಷ ಬಿತ್ತಿದಮೇಲೆ ಬಿಟ್ಟುಬಿಡಿ ಎನ್ನುವುದು,
ಉಪಯೋಗಕ್ಕೆ ಬರುವುದೇ @narendramodi ಅವರೇ?

ಕೋಮುವಾದ, ದ್ವೇಷ ಬಿತ್ತುವುದೇ ಬಿಜೆಪಿಯ ಜೀವವಾಗಿದೆ, ಈಗ ಅವುಗಳನ್ನೇ ಬಿಡಿ ಎನ್ನುವುದು ಬಿಜೆಪಿಗರಿಗೆ "ಜೀವ ಬಿಡಿ" ಎನ್ನುವಂತಾಗುವುದಿಲ್ಲವೇ!!
[18/01, 5:40 PM] Kpcc official: *ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು*

*ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ*

2018ರಲ್ಲಿ ನಮ್ಮ ಸರ್ಕಾರದ ಕಡೇ ಬಜೆಟ್ ಅನ್ನು ಮಂಡಿಸಿದ್ದೆ, ಅದರಲ್ಲಿ ನಾವು ಅಧಿಕಾರಕ್ಕೆ ಬರುವ ಪೂರ್ವದಲ್ಲಿ ನೀಡಿದ್ದ ಭರವಸೆಗಳು ಹಾಗೂ ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ ಭರವಸೆಗಳು ಯಾವುವು ಹಾಗೂ ಮುಂದೆ ಏನು ಮಾಡುತ್ತೇವೆ ಎಂಬುದನ್ನು ಹೇಳಿದ್ದೆ. 2013ರ ಚುನಾವಣೆಯಲ್ಲಿ ರಾಜ್ಯದ ಜನರಿಗೆ 165 ಭರವಸೆಗಳನ್ನು ನೀಡಿದ್ದೆ, ಅವುಗಳಲ್ಲಿ 158 ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಆದರೆ ರಾಜ್ಯ ಬಿಜೆಪಿ ಅವರು 2018ರಲ್ಲಿ ಜನರಿಗೆ 600 ಭರವಸೆಗಳನ್ನು ನೀಡಿದ್ದರು. ಇದರಲ್ಲಿ 50 ರಿಂದ 60 ಭರವಸೆಗಳನ್ನು ಕೂಡ ಈಡೇರಿಸಲು ಅವರಿಂದ ಸಾಧ್ಯವಾಗಿಲ್ಲ. ಈಗ ಮತ್ತೆ ಚುನಾವಣೆ ಹತ್ತಿರ ಬಂದಿರುವುದರಿಂದ ಬೊಮ್ಮಾಯಿ ಅವರು ಫೆಬ್ರವರಿ 17ಕ್ಕೆ ಬಜೆಟ್‌ ಮಂಡಿಸುವ ಘೋಷಣೆ ಮಾಡಿದ್ದಾರೆ, ಇದರಲ್ಲಿ ಏನೆಲ್ಲ ಘೋಷಣೆ ಮಾಡಲು ಸಾಧ್ಯ ಅವೆಲ್ಲವನ್ನು ಘೋಷಿಸಿ, ಒಂದನ್ನೂ ಈಡೇರಿಸಲ್ಲ. ಇಂಥಾ ಭರವಸೆಗಳನ್ನು ನೀವು ನಂಬಬೇಡಿ.

ಬಿಜೆಪಿ ಅವರು 2018ರಲ್ಲಿ ಮಹಿಳೆಯರಿಗೆ 21 ಭರವಸೆಗಳನ್ನು ನೀಡಿ, ಅವರನ್ನು ಉದ್ಧಾರ ಮಾಡುವುದಾಗಿ ಹೇಳಿದ್ದರು, ಈಗ ಬಿಜೆಪಿ ಆಡಳಿತದ ಮೂರುವರೆ ವರ್ಷಗಳಲ್ಲಿ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ಈ ವಿಚಾರವನ್ನು ಅವರು ತಮ್ಮ ಪ್ರಣಾಳಿಕೆಯೊಂದಿಗೆ ಬರಲಿ, ನಾನು ನಮ್ಮ ಪ್ರಣಾಳಿಕೆಯೊಂದಿಗೆ ಬರುತ್ತೇನೆ, ಒಂದೇ ವೇದಿಕೆಯಲ್ಲಿ ಚರ್ಚೆ ಮಾಡೋಣ. ಬೇರೆಯವರಿಗೆ ಧಮ್‌, ತಾಕತ್‌ ಪ್ರಶ್ನೆ ಮಾಡುವ ಬೊಮ್ಮಾಯಿ ಅವರು ಒಂದೇ ವೇದಿಕೆ ಮೇಲೆ ಚರ್ಚೆಗೆ ಬರಲಿ. 

ಮೊನ್ನೆ 16ರಂದು ಕಾಂಗ್ರೆಸ್‌ ಪಕ್ಷ “ನಾ ನಾಯಕಿ” ಸಮಾವೇಶವನ್ನು ಏರ್ಪಾಡು ಮಾಡಿತ್ತು, ಇದಕ್ಕೆ ಪ್ರಿಯಾಂಕ ಗಾಂಧಿ ಅವರು ಆಗಮಿಸಿದ್ದರು. ನಾವು ಪ್ರತೀ ಕುಟುಂಬದ ಯಜಮಾನಿಗೆ 2000 ರೂ. ನೀಡುತ್ತೇವೆ ಎಂಬ ಭರವಸೆ ನೀಡಿದ ಮೇಲೆ ಬಿಜೆಪಿಯವರು ಜಾಹೀರಾತು ನೀಡಿ, ಮಹಿಳೆಯರಿಗೆ ಅದನ್ನು ಮಾಡುತ್ತೇವೆ, ಇದನ್ನು ಮಾಡುತ್ತೇವೆ ಎಂದು ಪುಂಕಾನುಪುಂಕವಾಗಿ ಸುಳ್ಳು ಆಶ್ವಾಸನೆ ನೀಡಿದ್ದಾರೆ. ಅಧಿಕಾರಕ್ಕೆ ಬಂದು ಮೂರುವರೆ ವರ್ಷವಾಯಿತಲ್ಲ ಬೊಮ್ಮಾಯಿ ಅವರು ಯಾಕೆ ಇಷ್ಟು ದಿನ ಮಹಿಳೆಯರಿಗಾಗಿ ಒಂದು ಯೋಜನೆಯನ್ನು ಜಾರಿ ಮಾಡಿಲ್ಲ? ನಿಮ್ಮ ಕೈಹಿಡಿದುಕೊಂಡವರು ಯಾರು ಬೊಮ್ಮಾಯಿ? 

ನಾವು ಕೊಟ್ಟ ಮಾತಿನಂತೆ ನಡೆದುಕೊಂಡರೆ, ಬಿಜೆಪಿ ವಚನ ಭ್ರಷ್ಟರು. ರಾಜ್ಯದ ಪ್ರತೀ ಕುಟುಂಬದ ಯಜಮಾನಿಗೆ ತಿಂಗಳಿಗೆ 2000 ರೂ. ನಂತೆ ವರ್ಷಕ್ಕೆ 24,000 ರೂ. ನೀಡುವ ಭರವಸೆಗೆ ನಾನು, ಡಿ.ಕೆ ಶಿವಕುಮಾರ್‌ ಸಹಿ ಮಾಡಿದ್ದೇವೆ. ಇದನ್ನು ಅಕ್ಷರಶಃ ಜಾರಿಗೆ ತಂದೇ ತರುತ್ತೇವೆ. ಪ್ರತೀ ಮನೆಗೆ ಬಂದು ಮನೆಯ ಯಜಮಾನಿಯನ್ನು ಗುರುತಿಸಿ ಅವರಿಗೆ 2000 ರೂ. ತಿಂಗಳಿಗೆ ನೀಡುವ ಕೆಲಸ ಮಾಡುತ್ತೇವೆ. ಈ ಹಿಂದೆ ಗರ್ಭೀಣಿ ಮತ್ತು ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಅಡಿ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುತ್ತೇವೆ ಎಂದು ಹೇಳಿ, ಅದನ್ನು ಜಾರಿ ಮಾಡಿದ್ದೆವು. ಈಗ ಅದು ಬಂದ್‌ ಆಗಿದೆ. 

ರಾಜ್ಯದ ಎಲ್ಲಾ ಮನೆಗಳಿಗೆ 200 ಯುನಿಟ್‌ ವಿದ್ಯುತ್‌ ಅನ್ನು ಉಚಿತವಾಗಿ ನೀಡುವ ಘೋಷಣೆ ಮಾಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ತೇವೆ. ಇದೇ ಬಿಜೆಪಿ ಪಕ್ಷ ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಕೆಲಸವನ್ನು ಪೂರ್ಣಗೊಳಿಸುತ್ತೇವೆ ಮತ್ತು 5 ವರ್ಷಗಳಲ್ಲಿ ಒಂದೂವರೆ ಲಕ್ಷ ಕೋಟಿ ರೂಪಾಯಿಯನ್ನು ನೀರಾವರಿಗೆ ಖರ್ಚು ಮಾಡುವುದಾಗಿ ಹೇಳಿತ್ತು. ಕಳೆದ ಮೂರುವರೆ ವರ್ಷಗಳಲ್ಲಿ 45,000 ಕೋಟಿ ರೂ. ಮಾತ್ರ ಖರ್ಚು ಮಾಡಿದ್ದಾರೆ. ಇದೇ ಕಾರಣಕ್ಕೆ ನಾವು ಬಿಜಾಪುರದಲ್ಲಿ ಸಮಾವೇಶ ಮಾಡಿ, ನಾವು ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 2 ಲಕ್ಷ ಕೋಟಿ ರೂ. ಖರ್ಚು ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಬಿಜಾಪುರದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ, ಪುನರ್ವಸತಿ ಕಲ್ಪಿಸಿ ಕೊಟ್ಟಿಲ್ಲ. ನಾವು ಅಧಿಕಾರಕ್ಕೆ ಬಂದರೆ ಎಲ್ಲ ಸಂತ್ರಸ್ತರಿಗೆ ಪರಿಹಾರ ನೀಡಿ, ಪುನರ್ವಸತಿ ಕಾರ್ಯ ಮಾಡುತ್ತೇವೆ. ತುಂಗಭದ್ರಾ ಅಣೆಕಟ್ಟಿನಲ್ಲಿ 37 ಟಿಎಂಸಿ ನೀರು ಶೇಖರಣೆಯಾಗುವಷ್ಟು ಹೂಳು ತುಂಬಿದೆ, ನಮ್ಮ ಪಾಲಿನ 200 ಟಿಎಂಸಿ ನೀರು ಆಂದ್ರಪ್ರದೇಶಕ್ಕೆ ಹೋಗುತ್ತಿದೆ. ಇದನ್ನು ಸರಿಪಡಿಸಲು ತುಂಗಭದ್ರಾ ಅಣೆಕಟ್ಟಿಗೆ ಸಮನಾಂತರವಾಗಿ ಇನ್ನೊಂದು ಅಣೆಕಟ್ಟು ನಿರ್ಮಾಣ ಮಾಡುತ್ತೇವೆ. ಹೀಗೆ ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ, ಮೇಕೆದಾಟು ಎಲ್ಲಾ ನೀರಾವರಿಗೆ ಯೋಜನೆಗಳನ್ನು 2 ಲಕ್ಷ ಕೋಟಿ ಹಣದಲ್ಲಿ ಪೂರ್ಣಗೊಳಿಸುತ್ತೇವೆ. 2012ರಲ್ಲಿ ನಾವು ಹೊಸಪೇಟೆಯಿಂದ ಕೂಡಲಸಂಗಮದ ವರೆಗೆ ಪಾದಯಾತ್ರೆ ಮಾಡಿ, ನಾವು ಅಧಿಕಾರಕ್ಕೆ ಬಂದರೆ ನೀರಾವರಿಗೆ 50,000 ಕೋಟಿ ರೂ. ಖರ್ಚು ಮಾಡುತ್ತೇವೆ ಎಂದು ಹೇಳಿದ್ದೆವು. ಅಧಿಕಾರಕ್ಕೆ ಬಂದ ನಂತರ 50,000 ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಿದ್ದೇವೆ. 

ನರೇಂದ್ರ ಮೋದಿ ಅವರು 2016ರಲ್ಲಿ ಈ ದೇಶದ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ಭರವಸೆ ನೀಡಿದ್ದರು. 2023 ಬಂದಿದೆ, ಈಗಲಾದರೂ ರೈತರ ಆದಾಯ ದುಪ್ಪಟ್ಟಾಗಿದೆಯಾ? ಇದರ ಬದಲು ರೈತರು ಕೃಷಿಗೆ ಹಾಕುವ ಬಂಡವಾಳದ ಹಣ ದುಪ್ಪಟ್ಟಾಗಿದೆ. ರಸಗೊಬ್ಬರ, ಕಳೆನಾಶಕ, ಕೀಟನಾಶಕ, ಕೃಷಿ ಯಂತ್ರೋಪಕರಣಗಳ ಬೆಲೆ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ಮಾತನ್ನು ಕೇಳಿ ಎಪಿಎಂಸಿ ಮಸೂದೆಗೆ ತಿದ್ದುಪಡಿ ಮಸೂದೆ ಜಾರಿ ಮಾಡಲಾಯಿತು. ಕೇಂದ್ರ ಸರ್ಕಾರ ಇದನ್ನು ವಾಪಾಸು ಪಡೆದರೂ ಕೂಡ ರಾಜ್ಯ ಸರ್ಕಾರ ಇನ್ನೂ ವಾಪಸು ಪಡೆದಿಲ್ಲ. ನಾವು ಅಧಿಕಾರಕ್ಕೆ ಬಂದ ತಕ್ಷಣ ಈ ತಿದ್ದುಪಡಿ ಮಸೂದೆಯನ್ನು ವಾಪಾಸು ಪಡೆದು ಹಿಂದಿನ ಪದ್ಧತಿಯನ್ನು ಮುಂದುವರೆಸುತ್ತೇವೆ. 

2014ರಲ್ಲಿ ಕಬ್ಬಿನ ಬೆಲೆ ಬಿದ್ದುಹೋಗಿತ್ತು. ಒಂದು ಟನ್‌ ಗೆ 350 ರೂ. ಅಂತೆ 1800 ಕೋಟಿ ಹಣವನ್ನು ಸರ್ಕಾರದ ಖಜಾನೆಯಿಂದ ನಾವು ನೀಡಿದ್ದೆವು. ಈಗಲೂ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ನರೇಂದ್ರ ಮೋದಿ ಅಥವಾ ಬೊಮ್ಮಾಯಿ ಒಂದು ರೂಪಾಯಿ ಆದ್ರೂ ಕೊಟ್ಟಿದ್ದಾರ? ಇದೇನಾ ರೈತರ ಆದಾಯ ದುಪ್ಪಟ್ಟು ಮಾಡುವ ರೀತಿ? ನಾನು 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆ, ಈಗ 5 ಕೆ.ಜಿ ಮಾಡಿದ್ದಾರೆ. ನಾವು ಮತ್ತೆ ಅಧಿಕಾರಕ್ಕೆ ಬಂದರೆ 10 ಕೆ.ಜಿ ಉಚಿತವಾಗಿ ಅಕ್ಕಿಯನ್ನು ನೀಡುತ್ತೇವೆ. 

ರಾಜ್ಯದ ಮಹಿಳೆಯರು, ಯುವಜನರು, ರೈತರು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆದು ಕಾಂಗ್ರೆಸನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕು. ನಾವು ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ನ್ಯಾಯಸಮ್ಮತವಾದ ಪರಿಹಾರವನ್ನು ನೀಡುತ್ತೇವೆ. ಈ ಬಿಜೆಪಿಯವರ ಯೋಗ್ಯತೆಗೆ ಮೊನ್ನೆ ಮೊನ್ನೆವರೆಗೂ ಒಂದು ನೋಟಿಫಿಕೇಷನ್‌ ಹೊರಡಿಸಲು ಸಾಧ್ಯವಾಗಿರಲಿಲ್ಲ. 

ನಾವು ಅಧಿಕಾರಕ್ಕೆ ಬಂದರೆ ಬ್ಯಾಂಕು ಮತ್ತು ಸಹಕಾರಿ ಬ್ಯಾಂಕುಗಳಲ್ಲಿ 1 ಲಕ್ಷದ ವರೆಗೆ ಸಾಲ ಮನ್ನಾ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಒಂದು ರೂಪಾಯಿಯಾದ್ರೂ ಮನ್ನಾ ಮಾಡಿದ್ರಾ? ನಾನು ಚುನಾವಣೆಗೆ ಮೊದಲು ಭರವಸೆ ನೀಡದಿದ್ದರೂ ರೈತರು ಕಷ್ಟದಲ್ಲಿದ್ದಾರೆ ಎಂಬ ಕಾರಣಕ್ಕಾಗಿ 50,000 ವರೆಗಿನ ಸಹಕಾರಿ ಬ್ಯಾಂಕುಗಳ 8,165 ಕೋಟಿ ಸಾಲವನ್ನು ಮನ್ನಾ ಮಾಡಿದ್ದೆ. ಮನಮೋಹನ್‌ ಸಿಂಗ್‌ ಅವರು 78,000 ಕೋಟಿ ರೂ. ರೈತರ ಸಾಲವನ್ನು ಮನ್ನಾ ಮಾಡಿದ್ದರು. ನರೇಂದ್ರ ಮೋದಿ ಅವರು 14 ಲಕ್ಷ ಕೋಟಿ ಅಂಬಾನಿ, ಅದಾನಿಯಂತಹ ಕೈಗಾರಿಕೋದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ. ನಮ್ಮ ಪಕ್ಷ ಬಡವರು, ಕಾರ್ಮಿಕರ, ರೈತರ ಪರವಾಗಿತ್ತು. 

ಇಂದು ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಗಗನಕ್ಕೆ ಹೋಗಿದೆ. ಮನಮೋಹನ್‌ ಸಿಂಗ್‌ ಅವರ ಸರ್ಕಾರ ಇದ್ದಾಗ ಡೀಸೆಲ್‌ ಬೆಲೆ 54 ರೂ. ಇತ್ತು, ಇಂದು 96 ರೂ. ಆಗಿದೆ. ಪೆಟ್ರೋಲ್‌ ಬೆಲೆ 76 ರೂ. ಇತ್ತು, ಇಂದು 102 ರೂ. ಆಗಿದೆ. ಗ್ಯಾಸ್‌ ಬೆಲೆ 414 ರೂ. ಇತ್ತು, ಈಗದು 1150 ರೂ. ಆಗಿದೆ. ಮೋದಿ ಅವರು ಅಚ್ಚೇದಿನ್‌ ಆಯೇಗಾ ಎಂದು ಹೇಳಿ ಜನರನ್ನು ಲೂಟಿ ಮಾಡಿದ್ದಾರೆ. 

ಬೊಮ್ಮಾಯಿ ಅವರ ಸರ್ಕಾರ 40% ಕಮಿಷನ್‌ ಸರ್ಕಾರ. ಸಬ್‌ ಇನ್ಸ್‌ ಪೆಕ್ಟರ್‌ ನೇಮಕಾತಿಯಲ್ಲಿ ಒಬ್ಬೊಬ್ಬ ಅಭ್ಯರ್ಥಿಯಿಂದ 70, 80 ಲಕ್ಷದವರೆಗೆ ಲಂಚ ತಿಂದಿದ್ದಾರೆ. ನೇಮಕಾತಿ ವಿಭಾಗದ ಎಡಿಜಿಪಿ ಅಧಿಕಾರಿಯೊಬ್ಬರು ಜೈಲು ಸೇರಿದ್ದಾರೆ. ಇವರ ಜೊತೆ ಭ್ರಷ್ಟಾಚಾರದಲ್ಲಿ ಪಾಲುದಾರರಾಗಿದ್ದ ಮಂತ್ರಿಗಳು ಯಾರಾದರೂ ಜೈಲು ಸೇರಿದ್ದಾರ? ನಮ್ಮ ಪಕ್ಷದ ನಾಯಕರಾದ ಕಾಶಪ್ಪನವರು ನಿರಾಣಿಯವರ ಮೇಲೆ ಅನೇಕ ಆರೋಪಗಳನ್ನು ಮಾಡಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಒಂದು ತನಿಖಾ ಸಮಿತಿಯನ್ನು ರಚನೆ ಮಾಡಿ, ಯಾರ ಮೇಲೆಲ್ಲಾ ಆರೋಪಗಳಿವೆ ಅದನ್ನು ತನಿಖೆ ಮಾಡಿಸಿ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ. 

ದುರಾಡಳಿತದಿಂದ ಗಬ್ಬೆದ್ದು ಹೋಗಿರುವ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆದು ಭ್ರಷ್ಟಾಚಾರ ರಹಿತವಾದ, ಪಾರದರ್ಶಕ ಆಡಳಿತ ನೀಡಲು ರಾಜ್ಯದ ಜನ ಕಾಂಗ್ರೆಸ್‌ ಗೆ ಬೆಂಬಲ ನೀಡಬೇಕು ಎಂದು ಈ ಮೂಲಕ ಮನವಿ ಮಾಡುತ್ತೇನೆ.


*ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್*

ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಬಿಜೆಪಿಯ ನಾಲ್ಕು ವರ್ಷಗಳ ದುರಾಡಳಿತ, ಭ್ರಷ್ಟಾಚಾರ, ಮಹಿಳೆಯರ ಮೇಲೆ ದೌರ್ಜನ್ಯ, ನಿರುದ್ಯೋಗ ಸಮಸ್ಯೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದಲ್ಲಿ ಎಲ್ಲ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಜನಜಾಗೃತಿ ಹಮ್ಮಿಕೊಂಡಿದೆ.

ಬಿಜೆಪಿ ಸರ್ಕಾರ ಯಾವ ರೀತಿಯ ಆಡಳಿತವನ್ನು ಕೊಟ್ಟಿದೆ ಎಂದು ಅಗ್ನಿ ಪರೀಕ್ಷೆಯಾಗಿರುವ ಈ ಚುನಾವಣೆಯಲ್ಲಿ ಸರ್ಕಾರ ಎಲ್ಲಿ ವಿಫಲವಾಗಿದೆ, ಎಲ್ಲಿ ಜನ ವಿರೋಧಿ ನೀತಿ ತಾಳಿದ್ದಾರೆ ಎಂದು ಈ ಕಾರ್ಯಕ್ರಮದ ಮೂಲಕ ಜನರ ಮುಂದೆ ಇಡಲಾಗುತ್ತಿದೆ.  

ಈಗಾಗಲೇ ಕೃಷ್ಣ, ಮಹದಾಯಿ, ದಲಿತರು, ಮಹಿಳೆಯರ ವಿಚಾರವಾಗಿ ಸಮಾವೇಶಗಳನ್ನು ಮಾಡಿ ಕಾಂಗ್ರೆಸ್ ಪಕ್ಷ ಈ ವಿಚಾರವಾಗಿ ತನ್ನ ನಿಲುವುಗಳನ್ನು ತಿಳಿಸಿದೆ. ಬಿಜಾಪುರದಲ್ಲಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ  ಗೃಹಜ್ಯೋತಿ ಹಾಗೂ ಪ್ರತಿ ಮನೆಯೊಡತಿಗೆ ತಿಂಗಳಿಗೆ 2 ಸಾವಿರ ಭತ್ಯೆ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಮತ್ತಷ್ಟು ಕಾರ್ಯಕ್ರಮಗಳನ್ನು ಘೋ,ಣೆ ಮಾಡಲಾಗುವುದು. 

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇಡೀ ರಾಷ್ಟ್ರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಾಗ ನಮ್ಮ ನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರ ಪ್ರವಾಸ ಮಾಡಿ ರೈತರಿಗೆ ಧೈರ್ಯ ತುಂಬಿದರು. ಆಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಯಾವ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದು ಜನರಿಗೆ ಭರವಸೆ ನೀಡಲಾಯಿತು. ನಂತರ ಯುಪಿಎ ಸರ್ಕಾರ ಬಂದಾಗ ಮಾಡಿದ ಮೊದಲ ಕಾರ್ಯಕ್ರಮ ದೇಶದಲ್ಲಿದ್ದ ನಿರುದ್ಯೋಗ ಸಮಸ್ಯೆಗೆ ಅದರಲ್ಲೂ ಗ್ರಾಮೀಣ ಪ್ರದೇಶ ಜನರಿಗೆ ನರೇಗಾ ಯೋಜನೆ ಮೂಲಕ ವರ್ಷಕ್ಕೆ 100  ದಿನ ಉದ್ಯೋಗ ನೀಡುವ ಕಾರ್ಯಕ್ರಮ ಮಾಡಲಾಯಿತು. ಇದೊಂದು ಕಾರ್ಯಕ್ರಮ ಅಷ್ಟೇ ಆಗಿರಲಿಲ್ಲ. ಉದ್ಯೋಗ ಯುವಕರ ಹಕ್ಕಾಗಿದ್ದು, ಅದನ್ನು ಪಡೆಯಲು ಕಾನೂನು ಮಾಡಿದರು.

ಅದೇ ರೀತಿ, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಆರೋಗ್ಯ ಮಿಷನ್, ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಸರ್ವಶಿಕ್ಷಣ ಅಭಿಯಾನ ಮೂಲಕ 1-10ನೇ ತರಗತಿವರೆಗೂ ಉಚಿತ ಶಿಕ್ಷಣ, ಮಾಹಿತಿ ಹಕ್ಕು, ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಯೋಜನೆಗೆ ರಾಜೀವ್ ಗಾಂಧಿ ಉಜ್ವಲ ಯೋಜನೆ ನೀಡಿದರು. 

2014ರಲ್ಲಿ ಮೋದಿ ಸರ್ಕಾರ ಬಂದಾಗ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದರು. ಯುವಕರು ಅವರ ಮಾತು ನಂಬಿ ಅವರ ಹಿಂದೆ ಹೋದರು. ಈಗ ಅವರು ಅಧಿಕಾರಕ್ಕೆ ಬಂದು 9 ವರ್ಷವಾಗಿದ್ದು, 18 ಕೋಟಿ ಉದ್ಯೋಗ ಸೃಷ್ಟಿಸಬೇಕಾಗಿತ್ತು. ಆದರೆ ಸಿಕ್ಕಿಲ್ಲ. ಈ ಭಾಗದಲ್ಲಿ ಸೇನೆಗೆ ಸೇರುವ ಯುವಕರು ಹೆಚ್ಚು. ಈ ಭಾಗದಲ್ಲಿ ಯಾವುದೇ ಉದ್ಯೋಗ ಅವಕಾಶ ನೀಡುತ್ತಿಲ್ಲ. ಆದರೆ ಅಗ್ನಿಪಥ್ ಜಾರಿ ಮಾಡಿ 16ನೇ ವಯಸ್ಸಲ್ಲಿ ಸೇನೆಗೆ ಸೇರಿ 22ನೇ ವಯಸ್ಸಿನಲ್ಲಿ ನಿವೃತ್ತಿಯಾಗುತ್ತಾನೆ. ನಿವೃತ್ತಿಯಾದ ಮೇಲೆ ಯಾರಾದರೂ ಹೆಣ್ಣು ಕೊಡುತ್ತಾರಾ? ಕಾಂಗ್ರೆಸ್ ಮಾಡಿದ ತತ್ವಿರುದ್ಧವಾಗಿ ಮಾಡುತ್ತಿದ್ದಾರೆ.

ಅವರು ಆರಂಭದಲ್ಲಿ ಕೊಟ್ಟ ಸ್ಕಿಲ್ ಇಂಡಿಯಾ, ಕಿಲ್ ಇಂಡಿಯಾ ಆಯಿತು. ಯಾವುದೇ ಯುವಕರಿಗೆ ಉದ್ಯೋಗ ಸಿಗಲಿಲ್ಲ, ಮೇಕ್ ಇನ್ ಇಂಡಿಯಾ ಎಂದು ಹೇಳಿದರು, ತಿಂಗಳಿಗೊಮ್ಮೆ ಮನ್ ಕಿ ಬಾತ್ ಎಂದು ಹೇಳುವ ಮೋದಿ ಅವರು ಎಂದಾದರೂ ರೈತರು, ಕಾರ್ಮಿಕರು, ಉದ್ಯೋಗ, ಮಹಿಳೆಯರ ಮೇಲಿನ ದೌರ್ಜನ್ಯ, ಕೋವಿಡ್ ವಿಚಾರವಾಗಿ ಮಾತನಾಡಿದ್ದಾರಾ? ಸ್ವಯಂ ಘೋಷಿತ ವಿಶ್ವಗುರು ವಿಚಾರವನ್ನು ಮಾತನಾಡುತ್ತಾರೆ.

ನಂತರ ಆತ್ಮನಿರ್ಭರ ಎಂದು ಹೇಳಿದರು. ಅವರು ಅರ್ಥವಿಲ್ಲದ ಭಾಷಣ, ಸುಳ್ಳು ಘೋಷಣೆ ಮಾಡುವ ಸುಳ್ಳಿನ ಸರದಾರ ಇದ್ದರೆ ಅದು ನರೇಂದ್ರ ಮೋದಿ. ರೈತರ ಬಗ್ಗೆ ಕಾಳಜಿ ಇದ್ದರೆ, ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ದೆಹಲಿ ಗಡಿಯಲ್ಲಿ ರೈತರು 1 ವರ್ಷಗಳ ಕಾಲ ಚಳುವಳಿ ಮಾಡದರು. ಆವರನ್ನು ಭೇಟಿಯಾಗುವ ಸೌಜನ್ಯವನ್ನು ಮೋದಿ ತೋರಲಿಲ್ಲ. ಅವರ ಮಂತ್ರಿಗಳು ಸೌಜನ್ಯ ತೋರಲಿಲ್ಲ. ರೈತರು, ರಾಹುಲ್ ಗಾಂಧಿ ಅವರ ಹೋರಾಟ ಮಾಡಿದಾಗ ವರ್ಷದ ನಂತರ ಕಾಯ್ದೆ ಹಿಂಪಡೆದರು. ಈ ಹೋಪಾಟದಲ್ಲಿ 800 ರೈತರು ಪ್ರಾಣಾರ್ಪಣೆ ಮಾಡಿದರು. ಅವರಿಗಾಗಿ ಮೋದಿ ಕಣ್ಣೀರು ಹಾಕುವುದಿಲ್ಲ. ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು 8 ಗಂಟೆಗಳ ಕಾಲ ಕೆಲಸ ಮಾಡುವ ಕಾರ್ಮಿಕರು 12 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಮಾಡಿದರು. ಖಾಸಗಿಯವರಿಗೆ ಸಹಾಯ ಮಾಡಲು ಸರ್ಕಾರ ಬಡವರ ಬಗ್ಗೆ ಯೋಚಿಸುವುದಿಲ್ಲ. ಇಂದಿರಾ ಗಾಂಧಿ, ದೇವರಾಜ ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳಿದರು. ಆದರೆ ಮೋದಿ ಈ ಕರಾಳ ಕಾಯ್ದೆಯಿಂದ ಉಳ್ಳವನಿಗೆ ಮಾತ್ರ ಭೂಮಿ ಎಂಬಂತೆ ಮಾಡಿದ್ದಾರೆ. ಮೋದಿ ಸರ್ಕಾರ ಶ್ರೀಮಂತರನ್ನು ಶ್ರೀಮಂತರನ್ನಾಗಿ, ಬಡವರನ್ನು ಕಡುಬಡವರನ್ನಾಗಿ ಮಾಡಲು ಮುಂದಾಗಿದೆ.

ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಪ್ರತಿ ಮನೆಯೊಡತಿಗೆ ತಿಂಗಳಿಗೆ 2 ಸಾವಿರ ನೀಡುವ ಯೋಜನೆ ಘೋಷಿಸಿದ್ದಾರೆ. ಇದು ಯಾಕೆ ಎಂದರೆ, ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಅಡುಗೆ ಅನಿಲ 410 ರೂ ಇತ್ತು, ಇಂದು 1200 ಆಗಿದೆ. ಮಹಿಳೆಯರು ಇಷ್ಟು ಮೊತ್ತವನ್ನು ಎಲ್ಲಿಂದ ತರುತ್ತಾರೆ? ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮೊದಲು ಕಾಂಗ್ರೆಸ್ ಈ ಕಾರ್ಯಕ್ರಮ ತರುತ್ತಿದೆ. ಬಿಜೆಪಿ ಘೋಷಣೆ ಮಾಡುವುದರಲ್ಲಿ ನಿಪುಣರು. ಅವರು ಉಜ್ವಲ ಯೋಜನೆ ಹೆಸರಲ್ಲಿ ಜನರನ್ನು ಮರಳು ಮಾಡಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ, ನೀವು ರಸ್ತೆ, ನೀರು, ಚರಂಡಿ, ಮಹಿಳೆಯರ ಸುರಕ್ಷತೆ ವಿಚಾರವಾಗಿ ಮಾತನಾಡಬೇಡಿ, ಲವ್ ಜಿಹಾದ್, ಘರ್ ವಾಪಸಿ, ಕಬರಸ್ಥಾನ್ ಶಂಶಾನ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ. ಈ ಗಾಂಪರ ಮೂರ್ಖರಿಗೆ ನೀವು ಬುದ್ಧಿ ಕಲಿಸದಿದ್ದರೆ ಇವರು ಸಂವಿಧಾನವನ್ನೇ ಬದಲಿಸುತ್ತಾರೆ. ಅಂಬೇಡ್ಕರ್ ಅವರು ಎಲ್ಲರೂ ಸಮಾನರು ಎಂಬ ಸಂವಿಧಾನ ನೀಡಿದರೆ ಅದನ್ನು ಬುಡಮೇಲು ಮಾಡುವ ಹುನ್ನಾರ ನಡೆಯುತ್ತಿದೆ. 75 ವರ್ಷಗಳ ಕಾಲ ಸ್ವತಂತ್ರ್ಯವಾಗಿ ಜೀವನ ಮಾಡಿದ್ದ ನೀವು ಅದನ್ನು ಮುಂದುವರಿಸಬೇಕಾದರೆ, ಪ್ರಜಾಪ್ರಭುತ್ವ ಸಂವಿಧಾನ, ಜಾತ್ಯಾತೀತ ತತ್ವವನ್ನು ಕಾಪಾಡಿಕೊಳ್ಳಬೇಕು.

Post a Comment

Previous Post Next Post