ಅರುಣ್ ಸಿಂಗ್ ಅವರ ಪ್ರವಾಸ ವಿವರ



ಅರುಣ್ ಸಿಂಗ್ ಅವರ ಪ್ರವಾಸ ವಿವರ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಜನವರಿ 4ರಂದು ಬೆಂಗಳೂರಿಗೆ ಆಗಮಿಸಲಿದ್ದು, ಅವರ ಪ್ರವಾಸ ವಿವರ ಹೀಗಿದೆ.
4ರಂದು ಸಂಜೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಡಲಿದ್ದಾರೆ. ನಂತರ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕುಮಾರಕೃಪ ಗೆಸ್ಟ್ ಹೌಸಿಗೆ ತೆರಳುವರು.
5ರಂದು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಸಂಜೆ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಬಳಿಕ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸುವರು.
6ರಂದು ಅವರು ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಬಳಿಕ ಬೆಂಗಳೂರಿನಿಂದ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.

  

(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ

Post a Comment

Previous Post Next Post