ಹಣಕಾಸು ಸಚಿವಾಲಯವು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ।। ಸಾಮಾಜಿಕ ಭದ್ರತಾ ಯೋಜನೆಗಳ ಪ್ರಗತಿಯನ್ನು ಪರಿಶೀಲನೆ

ಜನವರಿ 19, 2023
7:29PM

ಹಣಕಾಸು ಸಚಿವಾಲಯವು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ।। ಸಾಮಾಜಿಕ ಭದ್ರತಾ ಯೋಜನೆಗಳ ಪ್ರಗತಿಯನ್ನು ಪರಿಶೀಲನೆ

AIR ನಿಂದ ಟ್ವೀಟ್ ಮಾಡಲಾಗಿದೆ
ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯು ಗುರುವಾರ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಪರಿಶೀಲನಾ ಸಭೆ ನಡೆಸಿತು. ಸಭೆಯಲ್ಲಿ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಮತ್ತು ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಸಭೆಯಲ್ಲಿ, ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಪ್ರಸಕ್ತ ಹಣಕಾಸು ವರ್ಷದ ಯೋಜನೆಗಳ ಅಡಿಯಲ್ಲಿ ಅವರಿಗೆ ನಿಗದಿಪಡಿಸಿದ ಗುರಿಗಳನ್ನು ಸಾಧಿಸಲು ಕೇಳಿಕೊಳ್ಳಲಾಯಿತು. ವಿವಿಧ ಹಣಕಾಸು ಸೇರ್ಪಡೆ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಬ್ಯಾಂಕ್‌ಗಳು ಆರ್ಥಿಕ ಸಾಕ್ಷರತಾ ಶಿಬಿರಗಳನ್ನು ಆಯೋಜಿಸಬೇಕು ಎಂದು ಒತ್ತಿ ಹೇಳಿದರು.

Post a Comment

Previous Post Next Post