ಈ ಬಾರಿಯ ಬಜೆಟ್ ರೈತರು, ಬಡವರ ಜನಪರವಾಗಿರುತ್ತದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌*

[29/01, 12:17 AM] Cm Ps: *ಈ ಬಾರಿಯ ಬಜೆಟ್ ರೈತರು, ಬಡವರ ಜನಪರವಾಗಿರುತ್ತದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌*

*ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ: ಸಿಎಂ  ಬಸವರಾಜ ಬೊಮ್ಮಾಯಿ*

ಹಾವೇರಿ: ಈ ವರ್ಷದ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ, ಜನಪರವಾಗಿರುತ್ತದೆ. ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

ಇಂದು ಶಿಗ್ಗಾಂವನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶಿಗ್ಗಾಂವ ಸವಣೂರು ಕ್ಷೇತ್ರದ ಜನತೆ ಬಹಳ ದೊಡ್ಡ ಪ್ರಮಾಣದಲ್ಲಿ ಸೇರಿ ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಿ ಹಾರೈಸಿದ್ದಾರೆ. ಅವರ ಆಶೀರ್ವಾದದಿಂದ ನಾನು ಇವತ್ತು ರಾಜ್ಯದಲ್ಲಿ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ. ಅದಕ್ಕಾಗಿ ನನ್ನ ಕ್ಷೇತ್ರದ ಜನತೆಗೆ ವಿಶೇಷವಾದ ಕೋಟಿ ಕೋಟಿ ನಮನಗಳನ್ನು, ಕೃತಜ್ಞತೆಯನ್ನು ಹೇಳುತ್ತೇನೆ.

ಈ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ತೆಗೆದುಕೊಂಡಾಗ 5 ಸಾವಿರ ಕೋಟಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು  ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ.‌ 72 ಸಾವಿರ ಕೋಟಿ ಸಾಲ ತೆಗೆದುಕೊಳ್ಳುವ ಅವಕಾಶ ಇದ್ದರೂ ನಾವು ಕೇವಲ 61 ಸಾವಿರ ಕೋಟಿಗೆ ಮಿತಿಗೊಳಿಸಿದ್ದೇವೆ.‌ ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ.  ನಾವು ಈ ವರ್ಷ 61 ಸಾವಿರಕ್ಕೆ ಮಿತಿಗೊಳಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.

ಹತ್ತು ಹಲವಾರು ವರ್ಷಗಳಿಂದ ಸರ್ಕಾರಗಳು ಮಾಡಿರುವ ಸಾಲವನ್ನು ತೀರಿಸುವ ಹೊಣೆಗಾರಿಕೆ ನಮ್ಮ ಮೇಲೆ ಇದೆ. ಕೇವಲ 9% ರಾಜ್ಯದ ಅಭಿವೃದ್ಧಿ ಆಗುತ್ತಿದೆ. ಅದರ ಗತಿಯನ್ನಿಟ್ಟುಕೊಂಡು ಸಾಮಾಜಿಕವಾಗಿ ಅಭಿವೃದ್ಧಿ ಮಾಡಿ ಸಮತೋಲನ ಮಾಡಿಕೊಳ್ಳುವ ಅವಶ್ಯಕತೆಯಿದೆ. ಮುಂದಿನ ಎರಡು, ಮೂರು ವರ್ಷ ಸಮತೋಲನ ಕಾಪಾಡಿಕೊಂಡರೆ ಇನ್ನಷ್ಟು ಆದಾಯ ಬರುವ ನಿರೀಕ್ಷೆಯಿದೆ.

 ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯವನ್ನು ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ.  ಈ ವರ್ಷ 8101 ಶಾಲಾ ಕಟ್ಟಡ ನಿರ್ಮಾಣಕ್ಕೆ ಕ್ರಮ ತೆಗೆದುಕೊಂಡಿದ್ದೇವೆ. ಅವೆಲ್ಲವೂ ಮೇ, ಜೂನ್ ವೇಳೆಗೆ ನಿರ್ಮಾಣ ಆಗುತ್ತವೆ. ಅದೇ ವೇಗವನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಹೋಗುತ್ತೇವೆ. ಆರೋಗ್ಯ ಕ್ಷೇತ್ರದಲ್ಲಿ ನಾವು ಪ್ರಗತಿಯಲ್ಲಿ ಹೋಗುತ್ತಿದ್ದೇವೆ. ನಮ್ಮ ಪ್ರಾತಿನಿಧ್ಯ ಆರೋಗ್ಯ, ಶಿಕ್ಷಣದ ಮತ್ತು ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲದಕ್ಕೂ ಇರುತ್ತದೆ. 

ಚುನಾವಣೆಯ ಪ್ರಭಾವ ಬಜೆಟ್ ಮೇಲೆ ಇರುತ್ತದೆ. ನಾವು ಕೋವಿಡ್ ನಂತರದಲ್ಲಿ ಏನು ಆರ್ಥಿಕವಾಗಿ ಮುಂದೆ ಹೋಗುತ್ತಿದ್ದೇವೆ. ಅದನ್ನು ಮುಂದುವರೆಸಿಕೊಂಡು ಹೋಗುವುದು ರಾಜ್ಯದ ಅಭಿವೃದ್ಧಿಯ  ದೃಷ್ಟಿಯಿಂದ ಬಹಳ ಮುಖ್ಯ. ಆರ್ಥಿಕ ಶಿಸ್ತು ತಂದು ರಾಜ್ಯದ ಹಿತದೃಷ್ಟಿಯನ್ನು ನಮ್ಮ ಗಮನದಲ್ಲಿಟ್ಟುಕೊಂಡಿದ್ದೇವೆ ಎಂದರು.

*ಶಿಗ್ಗಾಂವ ಮತ್ತು ಸವಣೂರು ಕ್ಷೇತ್ರದ ಅಭಿವೃದ್ಧಿಗೆ ಪಣ*

ರಾಜ್ಯದಲ್ಲಿ ಒಂದು ಮಾದರಿ ಕ್ಷೇತ್ರವನ್ನಾಗಿ ಶಿಗ್ಗಾಂವ ಮತ್ತು ಸವಣೂರು ಮಾಡಲು ನಾನು ಪಣ ತೊಟ್ಟಿದ್ದು, ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ  ಶಿಕ್ಷಣ, ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಾನು ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಿದ್ದೇನೆ ಎಂದರು.

*ಅಮಿತ್ ಶಾ ಭೇಟಿ ಉಕ ಭಾಗದಲ್ಲಿ ಬಜೆಪಿ ಅಲೆ ಹೆಚ್ಚಿಸಿದೆ*

ಕಿತ್ತೂರು ಕರ್ನಾಟಕ ಭಾಗಕ್ಕೆ‌ ಅಮಿತ ಶಾ ಅವರು ನೀಡಿದ ಭೇಟಿಯಿಂದ ಅಲೆ ಹೆಚ್ಚಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ಈ ಅಲೆ ಸುನಾಮಿಯಾಗಿ, ನಾವು ಕಳೆದ ಭಾರಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸೀಟು ಗೆಲ್ಲುತ್ತೇವೆ ಎಂದರು.
[29/01, 11:13 AM] Cm Ps: *ಕರ್ನಾಟಕದಲ್ಲಿ ಬಿಜೆಪಿ ಅಲೆ ಎದ್ದಿದೆ*:  *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹುಬ್ಬಳ್ಳಿ, ಜನವರಿ 29: 

ಕೇಂದ್ರ್ ಗೃಹ ಸಚಿವ ಅಮಿತ್ ಶಾ ಅವರ  ಒಂದು ದಿನದ ಭೇಟಿ  ಸಂಚಲನ‌ ಉಂಟು ಮಾಡಿದ್ದು ಕರ್ನಾಟಕದಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 


ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಬಹಳ ಗಟ್ಟಿ ಹಾಗೂ ಪ್ರಬಲವಾಗಿದೆ.  
ಅದಕ್ಕೆ ಇನ್ನಷ್ಟು ಶಕ್ತಿ ಹುರುಪು ಹುಮ್ಮಸ್ಸನ್ನು ಅಮಿತ್ ಷಾ ನೀಡಿದ್ದಾರೆ.  ಸಾರ್ವಜನಿಕರಲ್ಲಿ ಇರುವ ಭಾವನೆಗಳು ಎಲ್ಲಾ ಸಭೆಗಳಲ್ಲಿ ವ್ಯಕ್ತವಾಗಿದೆ ಎಂದರು. 

*ಬಿಜೆಪಿ ಗೆಲವು ಖಂಡಿತ*
ಕಾಂಗ್ರೆಸ್ ನವರು ನಾವೇ ಅಧಿಕಾರಕ್ಕೆ ಬಂದೇಬಿಟ್ಟಿದ್ದೇವೆ ಎಂದು  ಫೋಜ್ ಕೊಡುತ್ತಿದ್ದಾರೆ. ಯಾರ ಏನೇ ಹೇಳಲಿ, ಸತ್ಯ  ಬೇರೆಯೇ ಇದೆ.  ನಮ್ಮ ನಾಯಕರು ಬಂದ ಸಂದರ್ಭದಲ್ಲಿ ಅದು ಅಭಿವ್ಯಕ್ತವಾಗುತ್ತಿದೆ. ಜನ ದೊಡ್ಡ ಸಂಖ್ಯೆಯಲ್ಲಿ ಬರುವುದಷ್ಟೇ ಅಲ್ಲ , ಹುರುಪು, ಸ್ಫೂರ್ತಿ ವ್ಯಕ್ತವಾಗುತ್ತಿರುವುದರಿಂದ ನಮ್ಮ ಗೆಲವು ಖಂಡಿತ. ಪಕ್ಷದ ಸಂಘಟನೆ ಬೂತ್ ಮಟ್ಟದಿಂದ ಪ್ರಬಲವಾಗಿದೆ. ಅದೇ ನಮ ಆಧಾರ ಮತ್ತು ಶಕ್ತಿ ಎಂದರು. 

*ಚುನಾವಣೆ ತಯಾರಿಗೆ ಸೂಚನೆ*
ಬೆಳಗಾವಿ ಸಭೆಯಲ್ಲಿ ರಾಜ್ಯದ  ನಾಯಕರಿಗೆ ವಿಶೇಷ  ಸೂಚನೆ ಕೊಟ್ಟಿಲ್ಲ. ಆದರೆ ರಾಜ್ಯ ಮಟ್ಟದಲ್ಲಿ ಚುನಾವಣೆಗೆ ತಯಾರಿ ‌ಮಾಡಿಕೊಳ್ಳಲು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದರು. 

*ಕರ್ನಾಟಕದ ರಾಜಕೀಯ ಸಂಸ್ಕೃತಿ  ವ್ಯಕ್ತಿ ಆಧಾರಿತವಲ್ಲ*
ಕಳೆದ ಒಂದೂವರೆ ವರ್ಷಗಳಿಂದ ಆರೋಪ ಪ್ರತ್ಯಾರೋಪವನ್ನು  ಮಾಡಿಲ್ಲ.  ನನ್ನ ಮೇಲೆ ಹಲವಾರು ಇಲ್ಲಸಲ್ಲದ ಮಾತುಗಳನ್ನಾಡಿದಾಗಲೂ ಕೂಡ  ನಾನು ಅತ್ಯಂತ ಸಂಯಮದಿಂದ ಉತ್ತರ ಕೊಟ್ಟಿದ್ದೇನೆ.  ಕರ್ನಾಟಕದ ರಾಜಕೀಯ ಸಂಸ್ಕೃತಿ  ವ್ಯಕ್ತಿ ಆಧಾರಿತವಲ್ಲ, ಅಥವಾ ದ್ವೇಷಾಧಾರಿತವಲ್ಲ. ವಿಷಯಾಧಾರಿತ ಹಾಗೂ ಅಭಿವೃದ್ಧಿಯಾಧಾರಿತವಾಗಿದೆ. ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಇಟ್ಟು ಕೊಂಡೇ ಜನರ ಮುಂದೆ  
ಹೋಗುತ್ತಿದ್ದೇವೆ. ನೀವು ನಮ್ಮ ಅಭಿಯಾನಗಳಲ್ಲಿ ಇದನ್ನು ಕಾಣಬಹುದು. ನಾವು ಯಾವುದೇ ಟೀಕೆ ಟಿಪ್ಪಣಿಗಳನ್ನು ಮಾಡದೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳ ಸಾಧನೆಗಳನ್ನು ಆಧಾರಿಸಿಯೇ ಹೋಗುತ್ತಿದ್ದೇವೆ. ನಕಾರಾತ್ಮಕ ವಿಚಾರಗಳಿಲ್ಲ.  ಕಾಂಗ್ರೆಸ್ ಪಕ್ಷ ವಿಶೇಷವಾಗಿ 
ಬಹಳ ಹತಾಶರಾಗಿದ್ದಾರೆ.  ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗ್ತಿದೆ. 
ಕರ್ನಾಟಕದ ರಾಜಕಾರಣದಲ್ಲಿ ಎಂದೆಂದೂ  ಬಳಸದ  ಭಾಷೆ ಬಳಸುವುದನ್ನು ನಾವು ಕಾಣುತ್ತಿದ್ದೇವೆ. ಇದು ಹತಾಶೆಯ ಸಂಕೇತ ಎಂದರು. 

*ಭಿನ್ನಮತವಿಲ್ಲ*
ಬಿ.ಎಲ್. ಸಂತೋಷ್ ಅವರು ಪಕ್ಷದ   ಸಂಘಟಾನತ್ಮಕ ವಿಷಯವಾಗಿ ಕೋಲಾರ,.ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ , ಬಾಗಲಕೋಟೆ, ಬಿಜಾಪುರಕ್ಕೆ ಭೇಟಿ ನೀಡಿದ್ದಾರೆ ಎಂದರು.
ನಮ್ಮ ಪಕ್ಷದಲ್ಲಿ ಯಾವುದೇ ವಿಚಾರವಿದ್ದರೂ ಅಂತಿಮವಾಗಿ ಪಕ್ಷದ ಹಿರಿಯರು ಹೇಳುವುದನ್ನು ನಾವು ಕೇಳುತ್ತೇವೆ. ಅದೇ ಆಗಿರೋದು. ಬೆಳಗಾವಿಯಲ್ಲಿ ಭಿನ್ನಮತ ಇಲ್ಲ ಎಂದರು.  
 
*ಅಧಿಕೃತವಾಗಿವಾಗಿಲ್ಲ*
ಚುನಾವಣೆ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ  ಪ್ರತಿಕ್ರಿಯೆ ನೀಡಿ 
ಸಮೀಕ್ಷಾ  ಕಾರ್ಯಗಳು  ನಡೆಯುತ್ತಿವೆ.  
ಆದರೆ ಯಾವುದೂ ಅಧಿಕೃತವಾಗಿ ಆಗಿಲ್ಲ ಎಂದರು. 

ಮಂಡ್ಯ ಉಸ್ತುವಾರಿ ಬಡಲಾವಣೆಯಾಗಿರುವುದಕ್ಕೆ ಗೋ ಬ್ಯಾಕ್ ಅಶೋಕ್ ಪ್ರತಿಭಟನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ 
ಯಾರೋ ನಾಲ್ಕ ಜನ ಮಾಡ್ತಾರೆ,ಅದನ್ನು ಮಾಧ್ಯಮಗಳು  ದೊಡ್ಡದು ಮಾಡುವ ಅಗತ್ಯವಿಲ್ಲ ಎಂದರು.
[29/01, 12:28 PM] Cm Ps: ಬೆಂಗಳೂರು, ಜನವರಿ 29:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯದ ಕ್ಷತ್ರಿಯ ಒಕ್ಕೂಟಗಳ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿರುವ “ಬೃಹತ್ ಕ್ಷತ್ರಿಯ ಸಮಾವೇಶ”ವನ್ನು ಉದ್ಘಾಟಿಸಿದರು. 

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಕ್ಷತ್ರಿಯ ಸಂಘದ ಅಧ್ಯಕ್ಷ ಉದಯ್ ಸಿಂಗ್ ಹಾಗೂ ಸಮುದಾಯದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[29/01, 2:19 PM] Cm Ps: ಮೈಸೂರು (ಹೆಚ್.ಡಿ. ಕೋಟೆ), ಜನವರಿ 29:  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಡಾ. ವಿಷ್ಣುವರ್ಧನ್ ಪ್ರತಿಷ್ಠಾನ (ರಿ) ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹೆಚ್.ಡಿ. ಕೋಟೆಯ ಹಾಲಾಳು ಗ್ರಾಮ, ಉದ್ಬೂರು ಕ್ರಾಸ್ ಬಳಿ ಆಯೋಜಿಸಿರುವ ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೊಳಿಸಿದರು.

ಹಿರಿಯ ನಟಿ  ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ್, . ಶಾಸಕ ಜಿ.ಟಿ. ದೇವೇಗೌಡ,  ಶಾಸಕ ಎಲ್.ನಾಗೇಂದ್ರ, ಸಂಸದ ಪ್ರಾತಾಪ್ ಸಿಂಹ, ಮತ್ತಿತರರು ಉಪಸ್ಥಿತರಿದ್ದರು.
[29/01, 3:14 PM] Cm Ps: *ಕ್ಷತ್ರಿಯರಿಗೆ ಕತ್ತಿ ಹಿಡಿದೂ ಗೊತ್ತಿದೆ, ಜ್ಞಾನದ ಕತ್ತಿ ಹಿಡಿದೂ ಗೊತ್ತಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

*ಹಿಂದೂ ಸಮಾಜ ಸುರಕ್ಷಿತವಾಗಿರಲು ಕ್ಷತ್ರಿಯರು ಕಾರಣ : ಸಿಎಂ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜನವರಿ 29-
ಕ್ಷತ್ರಿಯರಿಗೆ ಯುದ್ಧಕ್ಕಾಗಿ ಕತ್ತಿ ಹಿಡಿದೂ ಗೊತ್ತಿದೆ, ಜ್ಞಾನದ ಕತ್ತಿ ಹಿಡಿದೂ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಕ್ಷತ್ರಿಯ ಸಮಾಜದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. 
ಕ್ಷತ್ರಿಯ ಸಮಾಜ ಇಲ್ಲದಿದ್ದರೆ ಭಾರತೀಯರು ಒಗ್ಗಟ್ಟಿನಿಂದ ಇರಲು ಸಾಧ್ಯವಾಗುತ್ತಿರಲಿಲ್ಲ. ಹಿಂದೂ ಸಮಾಜ ಸುರಕ್ಷಿತವಾಗಿರಲು ಕ್ಷತ್ರಿಯ ಸಮಾಜ ಕಾರಣ ಎಂದು ಮುಖ್ಯಮಂತ್ರಿಗಳು ನುಡಿದರು. ಶ್ರೀರಾಮ, ಕೃಷ್ಣ, ಸಾಮ್ರಾಟ್ ಅಶೋಕ, ರಾಣಾ ಪ್ರತಾಪ್ ಸಿಂಗ್ , ಶಿವಾಜಿ ಮಹಾರಾಜ್ ಮೊದಲಾದ ನೂರಾರು ಧೀರರು ಶೂರರು ಆಳಿದ್ದಾರೆ. ಅಂತೆಯೇ ಸ್ವಾಮಿ ವಿವೇಕಾನಂದರೂ ಕ್ಷತ್ರಿಯರು. ಕ್ಷತ್ರಿಯರಿಗೆ ಜ್ಞಾನದ ಕತ್ತಿಯನ್ನೂ ಹಿಡಿಯಲು ಗೊತ್ತಿದೆ ಎಂದು ಜಗತ್ತಿಗೇ ತೋರಿಸಿಕೊಟ್ಟರು ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಇಂದಿನ ಸಮಾವೇಶವು ಕ್ಷತ್ರಿಯ ಸಮಾಜದ 38 ಪಂಗಡಗಳನ್ನು ಒಗ್ಗೂಡಿಸಿರುವುದು ಸ್ವಾಗತಾರ್ಹ. ಕ್ಷತ್ರಿಯ ಸಮಾಜದವರು ವಿವಿಧ ಕುಲಕಸುಬುಗಳಲ್ಲಿ ತೊಡಗಿಕೊಂಡಿದ್ದು, ತಮ್ಮ ಕಸುಬನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಮುಂದಿನ ಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸುವ ಕಾಳಜಿ ಹೊಂದಿದ್ದಾರೆ. 21ನೇ ಶತಮಾನದಲ್ಲಿ ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಮುಂದುವರೆಯಬೇಕು ಎಂದು ತಿಳಿಸಿದರು.
ಕ್ಷತ್ರಿಯ ಸಮಾಜಗಳ ಒಕ್ಕೂಟವು ಸಣ್ಣ ಪುಟ್ಟ ಪಂಗಡಗಳ ಅಭ್ಯುದಯ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಕಾನೂನು ರೀತ್ಯ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕ್ಷತ್ರಿಯರ ನಿಗಮ ಸ್ಥಾಪಿಸುವ ಕುರಿತಂತೆ ಪರಿಶೀಲಿಸಲಾಗುವುದು. ಕ್ಷತ್ರಿಯ ಸಮಾಜದ ಸಮುದಾಯ ಭವನಕ್ಕೆ ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕ್ಷತ್ರಿಯರು ಸದಾ ದೇಶಪ್ರೇಮಿಗಳಾಗಿದ್ದರು. ಭಾರತದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯ ಸಂದರ್ಭದಲ್ಲಿ ಕ್ಷತ್ರಿಯ ವಂಶಗಳ ನೂರಾರು ರಾಜರು ತಮ್ಮ ರಾಜತ್ವವನ್ನು ತೊರೆದು ಭಾರತ ಒಕ್ಕೂಟದ ಮುಖ್ಯವಾಹಿನಿಯಲ್ಲಿ ಸೇರ್ಪಡೆಗೊಳ್ಳುವ ಬಹುದೊಡ್ಡ ತ್ಯಾಗ ಮಾಡಿದ್ದಾರೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.
ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್, ಸಂಸದ ಪಿ.ಸಿ. ಮೋಹನ್ ಹಾಗೂ ಕ್ಷತ್ರಿಯ ಸಮುದಾಯದ ಮುಖಂಡರು ಭಾಗವಹಿಸಿದ್ದರು.
[29/01, 3:26 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

Post a Comment

Previous Post Next Post