ಜನವರಿ 19, 2023 | , | 8:49PM |
ಪ್ರಧಾನಿ ಮೋದಿ ಕರ್ನಾಟಕ, ಮಹಾರಾಷ್ಟ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು
@ನರೇಂದ್ರ ಮೋದಿಪ್ರಧಾನಿಯವರು SVanidhi ಪ್ರಮಾಣಪತ್ರಗಳನ್ನು ವ್ಯಾಪಾರಿಗಳಿಗೆ ನೀಡಿದರು ಮತ್ತು ಡಿಜಿಟಲ್ ಪಾವತಿಗಳನ್ನು ಮಾಡಲು ಅವರನ್ನು ಒತ್ತಾಯಿಸಿದರು.
ಕರ್ನಾಟಕದಲ್ಲಿ, ಕಲ್ಬುರ್ಗಿ ಜಿಲ್ಲೆಯ ಮಳಖೇಡ್ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯವರು ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿದರು. ಈ ವೇಳೆ ಮಾತನಾಡಿದ ಅವರು, 1993ರಲ್ಲಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ನಿರ್ಣಯ ಕೈಗೊಂಡಿದ್ದು, ಅಂದಿನಿಂದ ಈ ಹಿಂದಿನ ಎಲ್ಲ ಸರಕಾರಗಳು ಸಮುದಾಯವನ್ನು ವಂಚಿತರನ್ನಾಗಿ ಮಾಡಿ ಇಷ್ಟು ದಿನ ಕಾಯುವಂತೆ ಮಾಡಿದೆ. ಬಂಜಾರರ ತಾಂಡಾಗಳಿಗೆ ಕಂದಾಯ ಗ್ರಾಮ ಸ್ಥಾನಮಾನ ನೀಡುವ ಮೂಲಕ ಇಲ್ಲಿನ ನಿವಾಸಿಗಳಿಗೆ ಹಲವಾರು ಕಲ್ಯಾಣ ಯೋಜನೆಗಳ ಅಡಿಯಲ್ಲಿ ನೀರು, ವಿದ್ಯುತ್, ಶೌಚಾಲಯ, ಮನೆಗಳಂತಹ ಮೂಲಭೂತ ಸೌಕರ್ಯಗಳು ದೊರೆಯಲಿವೆ. ಸಮಾಜದ ವಂಚಿತ ವರ್ಗಗಳ ಸಬಲೀಕರಣ ಮತ್ತು ಕಲ್ಯಾಣವು ಸರ್ಕಾರದ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಹೇಳಿದರು.
ಬಂಜಾರ ಮತ್ತು ಲಂಬಾಣಿ ಸಮುದಾಯದ ಮನೆಗಳಿಗೆ ಹಕ್ಕುಪತ್ರ ವಿತರಣೆಗೂ ಪ್ರಧಾನಿ ಚಾಲನೆ ನೀಡಿದರು. ಕಲಬುರ್ಗಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ 3000 ತಾಂಡಾಗಳಲ್ಲಿ ವಾಸಿಸುವ ಸಮುದಾಯಕ್ಕೆ ಒಟ್ಟು 52,072 ಹಕ್ಕುಪತ್ರಗಳನ್ನು ನೀಡಲಾಗಿದೆ.
ಇದಕ್ಕೂ ಮೊದಲು ಉತ್ತರ ಕರ್ನಾಟಕದ ಯಾದಗಿರಿಯಲ್ಲಿ ಆಧುನಿಕ ನೀರಾವರಿ ವ್ಯವಸ್ಥೆಯೊಂದಿಗೆ ನಾರಾಯಣಪುರ ಎಡದಂಡೆ ಕಾಲುವೆಯನ್ನು ಶ್ರೀ ಮೋದಿ ಉದ್ಘಾಟಿಸಿದರು. ಈ ಯೋಜನೆಯನ್ನು 4699 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿದೆ. ಹಿಂದುಳಿದ ಪ್ರದೇಶಗಳಾದ ಯಾದಗಿರಿ, ರಾಯಚೂರು ಮತ್ತು ಕಲ್ಬುರ್ಗಿಯಲ್ಲಿ ಐದು ಲಕ್ಷ ಹೆಕ್ಟೇರ್‌ಗೂ ಹೆಚ್ಚು ನೀರಾವರಿಗೆ ಇದು ಸಹಾಯ ಮಾಡುತ್ತದೆ. ಪ್ರಧಾನಮಂತ್ರಿಯವರು 10,863 ಕೋಟಿ ರೂಪಾಯಿಗಳ ಇತರ ನಾಲ್ಕು ರಸ್ತೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.
Post a Comment