ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಹರ್ಷ

[01/02, 1:12 PM] Cm Ps: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದಲ್ಲಿ‌ ನೂತನವಾಗಿ ನಿರ್ಮಾಣವಾಗಿರುವ ಮುಕ್ತೇಶ್ವರ ಮಂದಿರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಹಾವೇರಿಯ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿಗಳು, ಶಾಸಕರಾದ ನೆಹರೂ ಓಲೆಕಾರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹಾಗೂ ಮತ್ತಿತರ ಗಣ್ಯರು ಹಾಜರಿದ್ದರು.
[01/02, 1:59 PM] Cm Ps: ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಹರ್ಷ

ಹಾವೇರಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತಪಡಿಸಿದರು.

ಇಂದು ಬೆಂಗಳೂರಿನಿಂದ ಬ್ಯಾಡಗಿ ತಾಲ್ಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ  ಪ್ತಸ್ತಾವನೆ ಕಳಿಸಿದ್ದೆವು. ಹೀಗಾಗಿ 5300 ಕೋಟಿ ನೀಡಿದ್ದು ಸ್ವಾಗತಾರ್ಹ ಎಂದರು.

ಕರ್ನಾಟಕದ ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುನಾದ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

*ರೈತರ ಫಲವತ್ತಾದ ಭೂಮಿಯಲ್ಲಿ ಕಾರಿಡಾರ್ ಬೇಡ*
ಬ್ಯಾಡಗಿ ಇಂಡಸ್ಟ್ರಿಯಲ್  ಕಾರಿಡಾರ್ ಭೂ ಸ್ವಾದೀನಕ್ಕೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತದೆ, ಅದನ್ನು ತೆಗೆದುಕೊಳ್ಳದೆ ಬಂಜರು ಭೂಮಿ ತಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಗೆ ಭೂ ಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆ ಎಲ್ಲಿ ಕಾರಿಡಾರ್ ಮಾಡಬೇಕು ಎಂಬುದರ ಬಗ್ಗೆ ಜಮೀನು ಹುಡುಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
[01/02, 2:41 PM] Cm Ps: *ನಾನು ಎನ್ನುವ ಅಹಂನ್ನು ಬಿಟ್ಟು ದೇವರಿಗೆ ತಲೆ ಬಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

*ಮುಕ್ತೇಶ್ವರ ದೇವಸ್ಥಾನ ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ*

ಹಾವೇರಿ: ಧಾರ್ಮಿಕ ಕಾರ್ಯಗಳನ್ನು ಬೇದ-ಭಾವವಿಲ್ಲದೇ, ಮೇಲು-ಕೀಳು ಎನ್ನದೇ, ಎಲ್ಲೂರು ಒಂದಾಗಿ ಮಾಡಬೇಕು ಎನ್ನುವ ಕಾರಣಕ್ಕೆ ನಮ್ಮ ಹಿರಿಯರು ದೇವಸ್ಥಾನಗಳನ್ನು ನಿರ್ಮಾಣ ಮಾಡಿದ್ದಾರೆ. ದೇವಸ್ಥಾನಕ್ಕೆ ಹೋಗಿ ನಾನು ಎನ್ನುವ ಅಹಂನ್ನು ಬಿಟ್ಡು ದೇವರಿಗೆ ತಲೆ ಬಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಶಿಡೇನೂರು ಗ್ರಾಮದಲ್ಲಿ ಮುಕ್ತೇಶ್ವರ ದೇವಸ್ಥಾನ ಉದ್ಘಾಟನೆ ಮಾಡಿದ ಬಳಿಕ ಅವರು ಮಾತನಾಡಿದರು.

ನೆಹರೂ ಓಲೆಕಾರ್ ಅವರ ಹುಟ್ಟೂರು ಶಿಡೇನೂರು. ಅವರು ತಮ್ಮ ಹುಟ್ಟೂರನ್ನು ಮರೆತಿಲ್ಲ ಎನ್ನುವುದನ್ನು ಅವರು ಸಾಬೀತು ಮಾಡಿದ್ದಾರೆ. ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ಅವರು ಕೃಷಿಕರಾಗಿ, ಸಾರ್ವಜನಿಕ ಸಂಘ ಸಂಸ್ಥೆಗಳಲ್ಲಿ ಯಶಸ್ವಿಯಾಗಿ ಕೆಲಸ ಮಾಡಿದ ಬಳಿಕ ಶಾಸಕರಾಗಿ ಈ ಭಾಗದ ಸೇವೆ ಮಾಡುತ್ತಿದ್ದಾರೆ. ತಮ್ಮ ಹುಟ್ಟೂರಿನಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಮಾಡುವ ಮೂಲಕ ಈ ಊರಿನ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿ ಯಶಸ್ವಿಯಾಗಿದ್ದಾರೆ ಎಂದರು.

ಮುಕ್ತೇಶ್ವರ ಈ ಭಾಗದ ಅತ್ಯಂತ ಪ್ರಮುಖವಾಗಿರುವ ಆರಾಧ್ಯ ದೈವ. ಈ ದೇವಸ್ಥಾನಕ್ಕೆ ತನ್ನದೇಯಾದ ಇತಿಹಾಸವಿದ್ದು, ಇದು ಮುಂದಿನ ದಿನಗಳಲ್ಲಿ ಪ್ರಸಿದ್ದಿ ಪಡೆಯಲಿದೆ. ನಮ್ಮ ಹಿರಿಯರು ಸತ್ ಸಂಪ್ರದಾಯ ಹಾಕಿದ್ದಾರೆ. ಒಂದೆಡೆ ಬಸವಣ್ಣನವರು ನಮ್ಮ ದೇಹವೇ ದೇಗುಲ ಅಂತ ಹೇಳಿದ್ದಾರೆ. ನಮ್ಮ ಆತ್ಮ ಪರಿಶುದ್ದತೆಯಿಂದ ಕೂಡಿರಬೇಕು. ಈ ದೇಹ ನಿರಂತರ ಪರಿಶುದ್ದವಾಗಿರಬೇಕು ಎಂದು ವಚನಗಳಲ್ಲಿ ಹೇಳಿದ್ದಾರೆ. ಅದನ್ನು ಪರಿಪಾಲನೆ ಮಾಡಬೇಕು ಎಂದು ಹೇಳಿದರು.

ಸಾಮೂಹಿಕವಾಗಿ ಎಲ್ಲರೂ ಶುದ್ದವಾಗಿ, ಪರಿಶುದ್ದವಾಗಿರಬೇಕು ಎನ್ನುವ ಕಾರಣಕ್ಕೆ ದೇವಸ್ಥಾನಗಳನ್ನು ನಿರ್ಮಾಣ ಮಾಡಲಾಗುತ್ತದೆ. ದೇವಸ್ಥಾನಕ್ಕೆ ಹೋದರೆ ಮನಸು ಶಾಂತವಾಗಿರುತ್ತದೆ. ಊರಲ್ಲಿ ಒಂದು ತೇರು ಇರುತ್ತದೆ. ತೇರನ್ನು ಯಾವದೇ ಬಡವ ಎಂಬ ಜಾತಿ, ಮತ, ಭೇದ-ಭಾವವಿಲ್ಲದೇ ತೇರು ಎಳೆಯಬೇಕು ಎನ್ನುವ ಕಾರಣಕ್ಕೆ ದೊಡ್ಡ ತೇರು ಮಾಡಿರುತ್ತಾರೆ.  ದೇವಸ್ಥಾನದ ದ್ವಾರ ಬಾಗಿಲು ದೊಡ್ಡದಾಗಿರುತ್ತದೆ. ಅದು ಎಲ್ಲರನ್ನು ಸ್ವಾಗತಿಸುತ್ತದೆ. ಆದರೆ ದೇವಸ್ಥಾನದ ಗರ್ಭಗುಡಿ ಚಿಕ್ಕದಿರುತ್ತದೆ. ಅಲ್ಲಿ ನಾನು ಎನ್ನುವ ಅಹಂನ್ನು ಬಿಟ್ಟು ದೇವರಿಗೆ ತಲೆ ಬಾಗಬೇಕು ಎನ್ನುವ ಕಾರಣಕ್ಕೆ ನಮ್ಮ ಹಿರಿಯರು ಈ ರೀತಿ ಮಾಡಿದ್ದಾರೆ ಎಂದರು.

ಪ್ರತಿ ಕ್ಷಣವೂ ನಮ್ಮಲ್ಲಿ ನಾನು ಎನ್ನುವ ಭಾವನೆ ಇರುತ್ತದೆ. ನಾನು ಎನ್ನುವುದನ್ನು ಮರೆತರೆ, ಆ ಕ್ಷಣ ಭಕ್ತಿಭಾವದಿಂದ ಕೂಡುತ್ತದೆ. ಭಕ್ತಿ ಎಂದರೆ ಉತ್ಕೃಷ್ಟವಾದ ಪ್ರೀತಿ, ದೇವರ ಬಳಿ ಬಂಗಾರ ಬೇಡಿಕೊಳ್ಳುವುದು ವ್ಯವಹಾರವಾಗುತ್ತದೆ. ಭಕ್ತಿಯಿಂದ ದೇವರ ಬಳಿ ಬೇಡಿಕೊಂಡಾಗ ದೇವರು ವರ ನೀಡುತ್ತಾನೆ. ದೇವರು ಕೇಳಿದ್ದಲ್ಲವನ್ನು ಕೊಡುವುದಿಲ್ಲ. ಭಕ್ತಿಯ ಸಮರ್ಪಣೆಯಾದರೆ, ದೇವರು ಬೇಡಿಕೊಳ್ಳದಿದ್ದರೂ ನೀಡುತ್ತಾನೆ. ನೆಹರು ಓಲೆಕಾರ ಅವರು ಒಳ್ಳೆಯ ಕಾರ್ಯ ಮಾಡಿದ್ದಾರೆ. ಮುಕ್ತೇಶ್ವರ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ನೆಹರು ಓಲೆಕಾರ, ಸದಾಶಿವ ಮಹಾಸ್ವಾಮಿಜೀ, ಮಹೇಶ ತೆಂಗಿನಕಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
[01/02, 6:00 PM] Cm Ps: ವಿಜಯಪುರ ( *ಮುದ್ದೇಬಿಹಾಳ* ), ಫೆಬ್ರವರಿ 01: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ತಂಗಡಗಿಯ ಶ್ರೀ ಹಡಪದ* *ಅಪ್ಪಣ್ಣ ದೇವರ* *ಮಹಾಸಂಸ್ಥಾನ ಮಠ ಟ್ರಸ್ಟ್ (ರಿ)* ಅಖಿಲ ಕರ್ನಾಟಕ ಹಡಪದ *ಅಪ್ಪಣ್ಣ ಸಮಾಜ ಸೇವಾ ಸಂಘ* ಹಾಗೂ *ಹಡಪದ* ಗ್ರಾಮಸ್ಥರುಗಳ ಸಹಯೋಗದೊಂದಿಗೆ *ತಂಗಡಗಿಯ* ಸುಕ್ಷೇತ್ರದಲ್ಲಿ ಆಯೋಜಿಸಿರುವ ಶ್ರೀ ಹಡಪದ *ಅಪ್ಪಣ್ಣ ಸಮುದಾಯ ಭವನ* ಉದ್ಘಾಟನೆ, ನೂತನ ಕಟ್ಟಡಗಳ ಅಡಿಗಲ್ಲು ಸಮಾರಂಭ ಹಾಗೂ *ಹಡಪದ ಸಮಾಜದ ರಾಜ್ಯಮಟ್ಟದ* *ಬೃಹತ್* *ಸಮಾವೇಶದಲ್ಲಿ ಪಾಲ್ಗೊಂಡು* ಮಾತನಾಡಿದರು.
[01/02, 7:18 PM] Cm Ps: *ಬ್ಯಾಡಗಿ ತಾಲ್ಲೂಕಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಎಲ್ಲಾ ಮೂಲಸೌಕರ್ಯ:*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹಾವೇರಿ, (ಬ್ಯಾಡಗಿ) ಫೆಬ್ರವರಿ 01: ಬ್ಯಾಡಗಿ ತಾಲ್ಲೂಕಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಎಲ್ಲಾ ಮೂಲಸೌಕರ್ಯ ವ್ಯವಸ್ತೆಗಳನ್ನು ಕಲ್ಪಿಸಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು  ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಶ್ರೀ ಜಗದ್ಗುರು ಜಯದೇವ ಮುರುಘಾರಾಜೇಂದ್ರ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಆಣೂರು, ಬುಡಪನಹಳ್ಳಿ ಹಾಗೂ ಆಸುಂಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ, ಆಣೂರು ಮತ್ತು ಕಬ್ಬೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ, ಕಾಗಿನೆಲೆಯ ಕನಕ ಮ್ಯೂಸಿಯಂ ಹಾಗೂ ನಿಸರ್ಗ ಚಿಕಿತ್ಸಾ ಕೇಂದ್ರದ ಉದ್ಘಾಟನೆ, ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ಸಂಕೀರ್ಣ, ಕೃಷಿ ವಸ್ತುಸಂಗ್ರಾಹಲಯ, ಇ-ಸಂಪನ್ಮೂಲ ಮತ್ತು ಮಾಹಿತಿ ಕೇಂದ್ರ ಕಟ್ಟಡ ಶಂಕಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯವನ್ನು ನೆರವೇರಿಸಿ ಮಾತನಾಡಿದರು.

ಬ್ಯಾಡಗಿ ತಾಲ್ಲೂಕಿನಲ್ಲಿ ಮೆಣಸಿನಕಾಯಿ ಜೊತೆಗೆ ತರಕಾರಿ, ಜೋಳ, ಹತ್ತಿಯನ್ನು ಬೆಳೆಯುತ್ತಾರೆ. ಇವುಗಳಿಗೆ ಸಂಸ್ಕರಣಾ ಘಟಕವನ್ನು ನಿರ್ಮಿಸಿ ಅದರ ಮೌಲ್ಯವೃದ್ಧಿ ಮಾಡುವ ಅಗತ್ಯವಿದೆ. ಇದಕ್ಕೆ ಸರ್ಕಾರ ಎಲ್ಲಾ ಉತ್ತೇಜನವನ್ನು ನೀಡಲಿದೆ ಎಂದರು.

ಹಾವೇರಿಯಲ್ಲಿ ಒಂದು ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿಯಾಗುತ್ತಿದೆ. ಶಾಶ್ವತವಾಗಿರುವ ಕೆಲಸಗಳಿಗೆ ನಮ್ಮ ಸರ್ಕಾರ ಅತ್ಯಂತ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದೆ.  ರೈತಶಕ್ತಿ ಯೋಜನೆಯಡಿ ಸುಮಾರು 392.51 ಕೋಟಿ ಹಣವನ್ನು ಡಿಬಿಟಿ ಮೂಲಕ ಖಾತೆಗಳಿಗೆ ಒದಗಿಸಲಾಗಿದೆ. 11 ಲಕ್ಷ ವಿದ್ಯಾರ್ಥಿಗಳಿಗೆ 460 ಕೋಟಿ ರೂ.ಗಳನ್ನು ಈಗಾಗಲೇ ರೈತ ವಿದ್ಯಾನಿಧಿಯಡಿ ನೀಡಲಾಗಿದೆ. ಯಾವುದೇ ಅರ್ಜಿಯಿಲ್ಲದೇ ಈ ಸೌಲಭ್ಯವನ್ನು ಒದಗಿಸಲಾಗಿದೆ. 6 ಲಕ್ಷ  ರೈತ ಕೂಲಿಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಪೈಕಿ 2 ಲಕ್ಷ ಮಕ್ಕಳು ವಿವಿಧ ಹಂತದ ವಿಧ್ಯಾಭ್ಯಾಸದಲ್ಲಿ ತೊಡಗಿದ್ದಾರೆ. 47,747 ಮಕ್ಕಳಿಗೆ ವಿದ್ಯಾನಿಧಿ ಬಿಡುಗಡೆ ಮಾಡಲಾಗಿದೆ. ರೈತರಿಗೆ ಶಕ್ತಿ ತುಂಬಿದರೆ ಅನ್ನ ನೀಡುತ್ತಾನೆ. ಆಹಾರಭದ್ರತೆ ಇರಯವ ದೇಶ ಸ್ವಾಭಿಮಾನಿ, ಸ್ವಾವಲಂಬಿ ದೇಶವಾಗುತ್ತದೆ. ಕೃಷಿಗೆ ಉತ್ತೇಜನ ನೀಡುವ ಕೇಂದ್ರ ಬಜೆಟ್ ಇಂದು ಮಂಡಿಸಲಾಗಿದೆ. ಸುಮಾರು ಒಂದೂವರೆ ಲಕ್ಷ ಕೋಟಿ ರೂ.ಗಳನ್ನು  ಕೃಷಿವಲಯಕ್ಕೆ  ಮೀಸಲಿಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ  5300  ಕೋಟಿ ರೂ.ಗಳ ಅನುದಾನವನ್ನು ಘೋಷಿಸಿದ್ದಾರೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ. ಬರಗಾಲಪೀಡಿತರಾದವರಿಗೆ ಕೇಂದ್ರ ಸರ್ಕಾರ ದೊಡ್ಡ ಸಹಾಯವನ್ನು ಮಾಡಿದೆ. ಸಮಸ್ತ ಕನ್ನಡಿಗರ ವಿಶೇಷವಾಗಿ ಮಧ್ಯ ಕರ್ನಾಟಕದ ಜನರ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

*ಬೆಳೆಗಳ ಸಂಸ್ಕರಣಾ ಘಟಕಕ್ಕೆ ಸಹಾಯಧನ*
ಸುಮಾರು 750  ಕೋಟಿ ರೂ.ಗಳ ವಿಮೆ ಹೆಚ್ಚುವರಿ ಕಂತನ್ನು ರೈತರ ಪರವಾಗಿ ರಾಜ್ಯ ಸರ್ಕಾರ ಕಟ್ಟಿದೆ. ಈ ಪ್ರಸ್ತಾವನೆಗೆ ಮಂಜೂರಾತಿ ಕೊಟ್ಟು ಇಲ್ಲಿಗೆ ಬಂದಿದ್ದೇನೆ. ಇಂದು ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ 15000 ಕೋಟಿ ರೂ.ಗಳಷ್ಟು ಹಣ ರೈತರಿಗೆ ಒದಗಿಸಲಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ರೈತಾಪಿ ವರ್ಗಕ್ಕೆ ಸಹಾಯ ಮಾಡಲಾಗುವುದು. ರೈತ ಅಭಿವೃದ್ಧಿಯಾದಾಗ ಸಾರ್ಥಕತೆ ಕಾಣಬಹುದು. ಬ್ಯಾಡಗಿ  ತಾಲ್ಲೂಕಿನಲ್ಲಿ ಶಿಕ್ಷಣ, ಆರೋಗ್ಯ, ರಸ್ತೆ, ಕೆರೆ ನಿರ್ಮಾಣ ಸೇರಿದಂತೆ  ಎಲ್ಲಾ ರಂಗಗಳಲ್ಲಿ ಅಭಿವೃದ್ಧಿಗೆ ಮಂಜೂರಾತಿ ನೀಡಲಾಗಿದೆ. ಮೋಟೆಬೆನ್ನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸಬೇಕು ಎಂಬ ಬಹಳ ದಿನಗಳ ಬೇಡಿಕೆಗೆ ಸ್ಪಂದಿಸಿ ಈ ಬಾರಿಯ ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗುವುದು. ಈ ಭಾಗದ ಬೆಳೆಗಳ ಸಂಸ್ಕರಣಾ ಘಟಕಕ್ಕಾಗಿ ವಿಶೇಷ ಸಹಾಯಧನ ನೀಡಲು ಉತ್ತೇಜನ ನೀಡಲು ಸಿದ್ಧವಿದ್ದೇವೆ ಎಂದರು.

*ಅತಿ ಶೀಘ್ರದಲ್ಲಿ ವೈದ್ಯಕೀಯ ಕಾಲೇಜು ಉದ್ಘಾಟನೆ*
ರಾಜ್ಯದಲ್ಲ 12 ಶೀತಾಗಾರಗಳನ್ನು  ಸ್ಥಾಪಿಸಲಾಗಿದ್ದು, ಜನರೇಟರ್‍ಗಳಿಗಾಗಿ ಹೆಚ್ಚುವರಿ ಅನುದಾನವನ್ನು ಕೋರಲಾಗಿದೆ. ಅದಕ್ಕೂ ಮಂಜೂರಾತಿ ನೀಡಲಾಗುವುದು. ಬ್ಯಾಡಗಿ ನಗರ ಬೆಳೆಯಬೇಕು.  ಬಸವೇಶ್ವರನಗರ ಹಾಗೂ  ಮುಖ್ಯ ರಸ್ತೆಗೆ ಕೆಲಸವನ್ನು ಮಾಡಲಾಗುವುದು ಎಂದು  ಭಾರವಸೆ ನೀಡಿದರು. ಅಭಿವೃದ್ಧಿಯ ಚಕ್ರ ನಿರಂತರವಾಗಿ ನಡೆಯಬೇಕು. ಹಾವೇರಿ  ಜಿಲ್ಲೆಯ ವೈದ್ಯಕೀಯ ಕಾಲೇಜನ್ನು ಅತಿ ಶೀಘ್ರದಲ್ಲಿಯೇ ಉದ್ಘಾಟಿಸಲಾಗುವುದು. ವೈದ್ಯಕೀಯ,  ಇಂಜಿನಿಯರಿಂಗ್ ಕಾಲೇಜು, ನೀರಾವರಿ ಯೋಜನೆ, ಹಾವೇರಿ ಅಭಿವೃದ್ಧಿ, ಮೆಗಾ ಡೈರಿ, ಮೆಗಾ ಎಪಿಎಂಸಿ , ಜವಳಿ ಪಾರ್ಕ್ ಮಾಡಿದ್ದು ನಮ್ಮ ಸರ್ಕಾರ. ಅಭಿವೃದ್ಧಿಯ ಬಗ್ಗೆ  ನೈತಿಕತೆಯಿಂದ ನಾವು ಮಾತ್ರ ಮಾತನಾಡಲು ಸಾಧ್ಯ ಎಂದರು.

*ಬ್ಯಾಡಗಿಯಲ್ಲಿ 438 ಕೋಟಿ ರೂ. ನೀರಾವರಿ ಯೋಜನೆಗಳು :*

ನಾನು ಪ್ರತಿಪಕ್ಷದ ಶಾಸಕ ಆಗಿದ್ದಾಗ ರೈತ ಸಂಘದವರು ಮನವಿ ಕೊಟ್ಡು ಬ್ಯಾಡಗಿ ತಾಲೂಕಿನಲ್ಲಿ ನೀರಾವರಿ ಮಾಡುವಂತೆ ಮನವಿ ಮಾಡಿದ್ದರು. ಆಗ ಆಡಳಿತ ಪಕ್ಷದ ಸಚಿವರು ಒಂದೇ ತಿಂಗಳಲ್ಲಿ ಮಾಡುವ ಭರವಸೆ ನೀಡಿ ಹೋದರು. ಒಂದು ತಿಂಗಳಲ್ಲಿ ಅಧಿಕಾರದಿಂದಲೇ ಹೋದರು.ನಮ್ಮ ಸರ್ಕಾರ ಬಂದ ಮೇಲೆ ಯಡಿಯೂರಪ್ಪ ಅವರು ಸಿಎಂ ಆಗಿ ನಾನು ಗೃಹ ಸಚಿವನಾಗಿ ಅವರಿಗೆ ಈ ಯೋಜನೆಗಳಿಗೆ ಒಪ್ಪಿಗೆ ಪಡೆದು, ಅವರಿಂದಲೇ ಯೋಜನೆಗೆ ಅಡಿಗಲ್ಲು ಹಾಕಲಾಯಿತು. ಬ್ಯಾಡಗಿ ತಾಲ್ಲೂಕಿನಲ್ಲಿ 438 ಕೋಟಿ ರೂ. ನೀರಾವರಿ ಯೋಜನೆಗಳು  ಉದ್ಘಾಟನೆಯಾಗಿರುವುದಕ್ಕೆ ನಮಗೆ ಹೆಮ್ಮೆಯಿದೆ.  ಜಲಜೀವನ್ ಮಿಷನ್ ಅಡಿ 51 ಗ್ರಾಮಗಳ ಕುಡಿಯುವ ನೀರಿನ ಯೋಜನೆ ಪ್ರಾರಂಭಿಸಲಾಗಿದೆ.  ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ 150 ಕೋಟಿ ರೂ.ಗಳಲ್ಲಿ ಕಾಮಗಾರಿ ಪ್ರಾರಂಭವಾಗಿದೆ. ಬ್ಯಾಡಗಿಯಲ್ಲಿ ಆರಂಭವಾಗಿರುವ ಈ ಕಾಮಗಾರಿ ಮುಂದಿನ 12 ತಿಂಗಳಲ್ಲಿ ಮುಗಿಸುವ ಸೂಚನೆ ನೀಡಿರುವುದಾಗಿ ತಿಳಿಸಿದರು.
 
*ಹಾವೇರಿಗೆ 1614 ಕೋಟಿ ರೂ. ಯೋಜನೆ :*

ಹಿಂದಿನ ಮುಖ್ಯಮಂತ್ರಿಗಳು ಬೊಮ್ಮಾಯಿಯವರು ಹಾವೇರಿಗೆ ಏನೂ ಕೊಟ್ಡಿಲ್ಲ ಅಂತ ಹೇಳಿದ್ದಾರೆ. ರಾಜಕೀಯವಾಗಿ ಉತ್ತರ ನೀಡಲು ನನಗೂ ಬರುತ್ತದೆ. ಅವರ ಅವಧಿಯಲ್ಲಿ  ಇಡೀ ಹಾವೇರಿ ಜಿಲ್ಲೆಗೆ 271 ಕೋಟಿ  ರೂ. ನೀರಾವರಿಗೆ ಅನುಮೋದನೆ ನೀಡಿದ್ದು, ಅದರಲ್ಲಿ 200 ಕೋಟಿ ಹಣ ಬರಲೇ‌ ಇಲ್ಲ. ನಮ್ಮ ಸರ್ಕಾರ ಬಂದ ನಂತರ 1614 ಕೋಟಿ ರೂ. ನೀರಾವರಿ ಯೋಜನೆಗಳಿಗೆ ನೀಡಲಾಗಿದೆ. ಹಾವೇರಿ ಜಿಲ್ಲೆಯ ಪ್ರದೇಶದ ಮಣ್ಣು ಫಲವತ್ತಾಗಿದೆ. ಇದಕ್ಕೆ ನೀರಾವರಿ ಮಾಡಿದರೆ ಉತ್ತಮ ಬೆಳೆ ಬರುತ್ತದೆ. ತುಂಗಾ ಮೇಲ್ದಂಡೆ ಯೋಜನೆ 1994 ರಲ್ಲಿಯೇ ಆರಂಭವಾಗಿತ್ತು. ಆಗಿನ ನೀರಾವರಿ ಸಚಿವರು ಎಚ್ ಕೆ ಪಾಟೀಲರು ಈ ಯೋಜನೆ ಮುಗಿಸಿದ ನಂತರವೇ ಹಾವೇರಿ ದಾಟುತ್ತೇನೆ ಅಂದಿದ್ದರು. ಆದರೆ 2008 ರ ವರೆಗೂ ಯೋಜನೆ ಆರಂಭವಾಗಲೇ‌ ಇಲ್ಲ. ನಾನು ನೀರಾವರಿ ಸಚಿವನಾಗಿ ಅಧಿಕಾರಿಗಳ ಸಭೆ ಕರೆದಾಗ ಈ ಯೋಜನೆ ಪೂರ್ಣಗೊಳಿಸಲು 2 ವರ್ಷ ಬೇಕಾಗಬಹುದು ಎಂದು ತಿಳಿಸಿದರು.
[01/02, 7:58 PM] Cm Ps: *ಹಡಪದ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಸಿಎಂ ಭರವಸೆ*

ವಿಜಯಪುರ, (ತಂಗಡಗಿ) ಫೆಬ್ರವರಿ 1 :

ಹಡಪದ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ವೃತ್ತಿ ಆಧಾರಿತವಾದ ಕುಲಕಸುಬುಗಳ ಕಾರ್ಮಿಕರಿಗೆ ವಿಶೇಷ ಕಾರ್ಯಕ್ರಮ ರೂಪಿಸಿ, ನಿಮಗದ ಮುಖಾಂತರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಮಾಜದ ಕುಲಶಾಸ್ತ್ರ ಅಧ್ಯಯನ ಮಾಡಿ ಸಮಾಜಕ್ಕೆ ನ್ಯಾಯ ದೊರಕಿಸಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಮಾಜದ ನಿಗಮದಲ್ಲಿ ಹಡಪದ ಸಮುದಾಯ ಒಳಗೊಂಡಿಲ್ಲ.  ಶಿವಶರಣ ಹಡಪದ ಅಪ್ಪಣ್ಣ ಅವರ ಜನ್ಮಸ್ಥಳ ಮಸಬಿನಾಳ, ಹಡಪದ ಅಪ್ಪಣ್ಣನವರ ಶರಣ ಲಿಂಗಮ್ಮ ತಾಯಿಯವರ ಜನ್ಮಸ್ಥಳ ದೇಗಿನಾಳ ಗ್ರಾಮವನ್ನು ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸುವ ತಮ್ಮ ಬೇಡಿಕೆಯನ್ನು ಪರಿಶೀಲಿಸಲಾಗುವುದು. ಶ್ರೀ ಕ್ಷೇತ್ರದ ಅಭಿವೃದ್ದಿಗೆ  1 ಕೋಟಿ ರೂ. ನೀಡಲಾಗಿತ್ತು. ನನ್ನ ಅವಧಿಯಲ್ಲಿ 3 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದ್ದು, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಗಲ್ಲು ಹಾಕಲಾಗಿದೆ ಎಂದರು.

*ಕುಲಕಸುಬುಗಳಿಗೆ ಮನ್ನಣೆ :*
ಶೈಕ್ಷಣಿಕವಾಗಿ ಶಾಲೆ, ವಿದ್ಯಾರ್ಥಿನಿಲಯ ಸ್ಥಾಪಿಸಬೇಕೆಂಬ ಇಚ್ಛೆ ಯಿದ್ದು, ಈಗಾಗಲೇ ಒದಗಿಸಿರುವ ಮೂರು ಕೋಟಿ ರೂ.ಗಳನ್ನು ಖರ್ಚು ಮಾಡಿದರೆ, ಹೆಚ್ಚುವರಿಯಾಗಿ ಅಗತ್ಯವಿರುವ ಮೊತ್ತವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಕಾಯಕ ಯೋಜನೆಯಡಿ  ಅನುದಾನ ನೀಡಲಾಗುತ್ತಿದೆ. ಅವರ ಕುಲಕಸುಬುಗಳನ್ನು ಉನ್ನತೀಕರಿಸುವ ಯೋಜನೆ ಇದಾಗಿದೆ. ಪ್ರಥಮ ಬಾರಿಗೆ ಅವರ ಕುಲಕಸುಬುಗಳ ಬಗ್ಗೆ ಮನ್ನಣೆ ನೀಡಿ, ಚಿಂತಿಸಿರುವುದು ನಮ್ಮ ಸರ್ಕಾರ ಎಂದರು.
ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

*ಹಡಪದ ಸಮಾಜದವರು ಸಂಘಟಿತರಾಗಬೇಕು :*
ಹಡಪದ ಸಮಾಜ ಹಿಂದೆ ಸಂಘಟನೆಯಾಗಿರಲಿಲ್ಲ. ಆದರೆ ನಾನು ಮುಖ್ಯಮಂತ್ರಿಯಾದಾಗಲೇ ಈ ಸಮುದಾಯ ಸಂಘಟಿತವಾಗಿರುವುದು ದೈವೇಚ್ಛೆ. 2016ರ ಪೂರ್ವದಲ್ಲಿ ಈ ಸಮುದಾಯ ‘ನಾಯಿಂದ’ ಸಮಾಜದಿಂದ ವಿಂಗಡಿಸಿದ್ದರು. ಆ ಸಂದರ್ಭದಲ್ಲಿಯೇ ನೀವು ಸಂಘಟನೆಯಾಗಬೇಕಿತ್ತು. ಸಾಮಾಜಿಕ ಹಿತಾಸಕ್ತಿಯಿಂದ ಹಡಪದ ಸಮಾಜದವರು ಸಂಘಟಿತರಾಗಲು ಅವಕಾಶ ನೀಡಲಿಲ್ಲ. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಇಂತಹ ಸಣ್ಣ ಸಣ್ಣ ಸಮುದಾಯಗಳಿಗೆ ಧ್ವನಿ ಸಿಕ್ಕಿದೆ. ಸಮಾಜದಲ್ಲಿ  ಬದಲಾವಣೆ ತರಬೇಕಾದ ಪರವಿರೋಧಗಳು ಬರುವುದು ಸಹಜ. ಈ ವಿರೋಧಗಳನ್ನು ಮೆಟ್ಟಿನಿಂತಾಗ ಮಾತ್ರ ಕ್ರಾಂತಿಕಾರಿ ಬದಲಾವಣೆಗಳನ್ನು ತರಲು ಸಾಧ್ಯವಾಗುತ್ತದೆ ಎಂದರು.

*ಹಡಪದ ಸಮಾಜದ ಆಶೋತ್ತರಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ :*
12ನೇ ಶತಮಾನದಲ್ಲಿ ಹಡಪದ ಅಪ್ಪಣ್ಣನವರು ಬಸವಣ್ಣನವರಿಗೆ ಅತ್ಯಂತ ಆತ್ಮೀಯರಾಗಿದ್ದರು. ಶ್ರೀಗುರುಗಳು ಮೇಧಾವಿಗಳು , ಕಾಯಕನಿಷ್ಠರು.ಅವರ ವಚನಗಳು ಇಂದಿಗೂ ನಮಗೆ ಮಾರ್ಗದರ್ಶನ ನೀಡುತ್ತವೆ ಹಡಪದ ಅಪ್ಪಣ್ಣರು ಅತ್ಯಂತ ಮುಗ್ಧ ಗುರುಗಳು.ಅವರ ಮುಗ್ಧತೆಯಲ್ಲಿಯೇ ಅವರ ಪ್ರೀತಿ ವಿಶ್ವಾಸವಿದೆ. ತಮ್ಮ ಸಮಾಜದ ಬಗ್ಗೆ ಅತೀವವಾದ ಕಳಕಳಿಯಿದೆ. ಸಮಾಜದ ಒಳಿತಿಗೆ ನಿರಂತರವಾಗಿ ಶ್ರಮಿಸುತ್ತಿರುವವರ ಶ್ರೀಗುರುಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಸಮಾಜದ ಜನರ ಸ್ಥಿತಿಗತಿ ಬಗ್ಗೆ ನನಗೆ ಅರಿವಿದೆ. ಹಡಪದ ಸಮಾಜದ ಆಶೋತ್ತರಗಳನ್ನು ಈಡೇರಿಸುವುದು ನಮ್ಮೆರ ಕರ್ತವ್ಯವಾಗಿದೆ ಎಂದರು.

*ಹಡಪದ ಸಮುದಾಯಕ್ಕೆ ಸರ್ಕಾರದ ಸೌಲಭ್ಯಗಳು :*
ವಿಜಯನಗರದ ಕೊನೆಯ  ರಕ್ಕಸತಂಗಡಿ ಯುದ್ಧದ ಬಗ್ಗೆ ಓದಿ ತಿಳಿದುಕೊಂಡಿದ್ದೇನೆ. ತಂಗಡಗಿ, ರಕ್ಕಸತಂಗಡಗಿ, ತಾಳಿಕೋಟೆ ಐತಿಹಾಸಿಕ ಸ್ಥಳಗಳನ್ನು ಸಂರಕ್ಷಿಸಿ ಅಭಿವೃದ್ಧಿ ಮಾಡುತ್ತೇವೆ. ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಈ ಬಾರಿಯ ಬಜೆಟ್ ನಲ್ಲಿ ಮೀಸಲಿಡಲಾಗುವುದು ಎಂದು ಭರವಸೆ ನೀಡಿದರು. ಹಡಪದ ಸಮುದಾಯಕ್ಕೆ ಸೌಲಭ್ಯಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.
[01/02, 8:09 PM] Cm Ps: *ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ,  ಮಧ್ಯಕರ್ನಾಟಕಕ್ಕೆ ವರ:*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ವಿಜಯಪುರ, (ಮುದ್ದೇಬಿಹಾಳ)ಫೆ.01:  ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ನೀಡಿದ್ದು,  ಬರಗಾಲಪೀಡಿತ ಪ್ರದೇಶವಾದ ಮಧ್ಯಕರ್ನಾಟಕಕ್ಕೆ ದೊಡ್ಡ ಕೊಡುಗೆ  ನರೇಂದ್ರ ಮೋದಿಯವರ ಸರ್ಕಾರ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುದ್ದೇಬಿಹಾಳದಲ್ಲಿ ಅವರು ಇಂದು ಕೇಂದ್ರ ಬಜೆಟ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ರೈತರಿಗೆ ಬಹಳಷ್ಟು ಒತ್ತು ನೀಡಿ ಅನುದಾನವನ್ನೂ ಒದಗಿಸಿದ್ದಾರೆ. ಯುವಕರ ಕೈಗಳಿಗೆ ಉದ್ಯೋಗ ನೀಡಲು ಅತಿ ಹೆಚ್ಚಿನ ಉತ್ತೇಜನ ನೀಡಿ ವಿಶೇಷ ಅನುದಾನ ಮೀಸಲಿಟ್ಟಿದ್ದಾರೆ. ಕೈಗಾರಿಕಾ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ದಿಗೆ, ರೈಲ್ವೆಗೆ ಅತಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವ  ದೃಷ್ಟಿಯಿಂದ ಎಲ್ಲರನ್ನೂ ಒಳಗೊಂಡಿರುವ ಅಭಿವೃದ್ಧಿಯಾಗಲು ಒತ್ತು ನೀಡಲಾಗಿದೆ. ಪ್ರಧಾನಮಂತ್ರಿಗಳಿಗೆ  ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರಿಗೆ ಧನ್ಯವಾದಗಳನ್ನು ಅರ್ಪಿಸಬಯಸುತ್ತೇನೆ ಎಂದರು. 
--
[01/02, 8:20 PM] Cm Ps: ಸಿಡಿ ಪ್ರಕರಣ, ಕಾನೂನು ತನ್ನ ಕೆಲಸ ಮಾಡಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರು ನನ್ನ ಜತೆಗೆ ಎರಡು ದಿನಗಳಿಂದ ಇದ್ದದ್ದು ನಿಜ. ಆದರೆ ಹಲವಾರು ಕಾರ್ಯಕ್ರಮಗಳು ಇದ್ದರಿಂದ ಅವರ ಜತೆಗೆ ಮಾತುಕತೆ ಆಗಿಲ್ಲ. ಸಿಡಿ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶಾಸಕ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಹಲವಾರು ಅರೋಪಗಳನ್ನು ಮಾಡಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಾಗಿ ಹೇಳಿರುವ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ರಮೇಶ ಜಾರಕಿಹೊಳಿ ಅವರು ಬಂದಾಗ ಅವರ ಜೊತೆಗೆ ಮಾತನಾಡುತ್ತೇನೆ ಎಂದರು.

Post a Comment

Previous Post Next Post