ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್:ನಳಿನ್‍ಕುಮಾರ್ ಕಟೀಲ್ ಸ್ವಾಗತ



ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್:
ನಳಿನ್‍ಕುಮಾರ್ ಕಟೀಲ್ ಸ್ವಾಗತ
ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೂಲಸೌಕರ್ಯ ಕ್ಷೇತ್ರದಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡಿದ್ದು, ಮನೆಮನೆಗೆ ನಳ್ಳಿ ನೀರು (ಹರ್ ಘರ್ ಜಲ್) ಯೋಜನೆಯ ವೇಗವರ್ಧನೆಗೆ ಕಾರಣ ಆಗಲಿದೆ ಎಂದು ತಿಳಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಕೋವಿಡ್ ನಂತರವೂ ಭಾರತವು ತನ್ನ ಆರ್ಥಿಕತೆಯ ವೇಗದಿಂದಾಗಿ ಜಗತ್ತಿನ ಗಮನ ಸೆಳೆದಿದೆ. ರೈಲ್ವೆ ಇಲಾಖೆಯಲ್ಲಿ ಹೆಚ್ಚಿನ ಹಣ ಹೂಡಿಕೆ, ಯುವ ಉದ್ಯಮಿಗಳು, ಕೃಷಿ ಸ್ಟಾರ್ಟಪ್‍ಗಳಿಗೆ ಉತ್ತೇಜನ, ಪ್ರವಾಸೋದ್ಯಮಕ್ಕೆ ಒತ್ತು ಕೊಟ್ಟಿದ್ದು, ಒಂದು ಜಿಲ್ಲೆ- ಒಂದು ಉತ್ಪನ್ನಕ್ಕೆ ಪ್ರೋತ್ಸಾಹ ಕೊಟ್ಟ ಆಯವ್ಯಯ ಪತ್ರ ಇದಾಗಿದೆ ಎಂದು ತಿಳಿಸಿದ್ದಾರೆ.
ಮಧ್ಯಮ ವರ್ಗದವರಿಗೆ ನೀಡಿರುವ ತೆರಿಗೆ ವಿನಾಯಿತಿ ಬಗ್ಗೆ ಅವರು ಸಂತಸ ಸೂಚಿಸಿದ್ದಾರೆ. ದೇಶವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಕಾಲಘಟ್ಟದಲ್ಲಿದೆ. ದೇಶವನ್ನು ಸ್ವಾತಂತ್ರ್ಯೋತ್ಸವದ ಶತಮಾನೋತ್ಸವದತ್ತ ಸದೃಢವಾಗಿ ಒಯ್ಯುವ ನಿಟ್ಟಿನಲ್ಲಿ ಇದೊಂದು ನೀಲನಕ್ಷೆಯಂತಿದೆ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ. 



(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ
[01/02, 5:48 PM] Bjp Media: 1-2-2023
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಸ್ವಾಗತಾರ್ಹ
ಮೋದಿ ಸರ್ಕಾರದಿಂದ ಸಾವಯವ ಕೃಷಿಗೆ ಒತ್ತು: ಸಂಸದ ಈರಣ್ಣ ಕಡಾಡಿ
ಬೆಂಗಳೂರು: ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5,300 ಕೋಟಿ ರೂ.ಗಳ ಅನುದಾನ ನೀಡಿರುವುದು ರಾಜ್ಯದ ರೈತರಿಗೆ ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಬಜೆಟ್‍ನ್ನು ಸ್ವಾಗತಿಸಿದ್ದಾರೆ.
ಇಂದು ಕೇಂದ್ರ ಸರ್ಕಾರ ಮಂಡಿಸಿರುವ ಅಮೃತ ಕಾಲ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಈರಣ್ಣ ಕಡಾಡಿ ಅವರು, 2023-24ನೇ ಸಾಲಿನ ಬಜೆಟ್ ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ  ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದಿದ್ದಾರೆ.
ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಕ್ರಮ ವಹಿಸಲಾಗಿದೆ. ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ ‘ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಮಿಲೆಟ್ ರೀಸರ್ಚ್’ ಸಂಸ್ಥೆಗೆ ಅಗತ್ಯ ನೆರವು ನೀಡಲಾಗಿದೆ. ತೋಟಗಾರಿಕೆ ಬೆಳೆಗಳ ಇಳುವರಿ ಹೆಚ್ಚಳ ಹಾಗೂ ಬೆಳೆಪದ್ಧತಿ ಸುಧಾರಣೆಗಾಗಿ ‘ಶುದ್ಧ ಸಸಿ ಕಾರ್ಯಕ್ರಮ’, ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ ಮಾಡುವ ಗುರಿ, ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟಪ್‍ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿ ಸ್ಥಾಪನೆ, ಅಗ್ರಿ ಸ್ಟಾರ್ಟಪ್‍ಗಳನ್ನು ಉತ್ತೇಜಿಸಲು ಹೊಸ ನಿಧಿಯ ಘೋಷಣೆ ಮಾಡಿದ್ದಾರೆ. ಮುಂದಿನ 3 ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ನೆರವು ಸಿಗಲಿದೆ. ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡುವ ಮೂಲಕ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಪ್ರಸ್ತಾಪಿಸಿದೆ. ಕಳೆದ ಆರು ವರ್ಷಗಳಲ್ಲಿ ದೇಶದ ಕೃಷಿ ಕ್ಷೇತ್ರವು ಸರಾಸರಿ ವಾರ್ಷಿಕ ಶೇ.4.6 ಬೆಳವಣಿಗೆ ದರದಲ್ಲಿ ಬೆಳೆಯುತ್ತಿದೆ ಎಂದು ತಿಳಿಸಿದ್ದಾರೆ.
63,000 ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿಗಳನ್ನು 2,561 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಗಣಕೀಕರಣಗೊಳಿಸಲಾಗುತ್ತಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ರೂ 2 ಲಕ್ಷದಷ್ಟು ಸಾಲವನ್ನು ನಗದು ರೂಪದಲ್ಲಿ ನೀಡಲು ಮತ್ತು ರೂ 2 ಲಕ್ಷದಷ್ಟು ಹಣವನ್ನು ನಗದು ರೂಪದಲ್ಲಿ ಕಟ್ಟಿಸಿಕೊಳ್ಳಲು ಅವಕಾಶ. ಒಂದು ಜಿಲ್ಲೆ ಒಂದು ಉತ್ಪನ್ನಕ್ಕೆ ಪೆÇ್ರೀತ್ಸಾಹ, ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಪಿಎಂ ಮತ್ಸ್ಯ ಸಂಪದ ಯೋಜನೆಯಡಿ ರೂ. 6,000 ಕೋಟಿ ಅನುದಾನ. "ದೇಖೋ ಅಪ್ನಾ ದೇಶ್" ಪ್ರವಾಸೋದ್ಯಮಕ್ಕೆ ಹೊಸ ಯೋಜನೆ. ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್-ಪಾರಂಪರಿಕ ಕುಶಲಕರ್ಮಿಗಳಿಗೆ ಸಹಾಯದ ಪ್ಯಾಕೇಜ್. ವಸತಿ ಕ್ಷೇತ್ರಕ್ಕೆ ಈ ವರ್ಷ ರೂ 79,000 ಕೋಟಿ ಅನುದಾನ ಘೋಷಣೆ. ರೈಲ್ವೆ ಇಲಾಖೆಯಲ್ಲಿ ರೂ 2.40 ಲಕ್ಷ ಕೋಟಿ ಬಂಡವಾಳ ಹೂಡಿಕೆ. ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯತಿ ನೀಡಿ, ಮಹಿಳೆಯರು, ಎಸ್‍ಸಿ, ಎಸ್‍ಟಿ ವರ್ಗದವರಿಗೆ, ಯುವಕರಿಗೆ ಪ್ರಮುಖ ಆದ್ಯತೆ ನೀಡಿ ಸಶಕ್ತ, ಸ್ವಾವಲಂಬಿ ನವಭಾರತ ನಿರ್ಮಾಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಅಮೃತ ಕಾಲ ಬಜೆಟ್ ಅತ್ಯಂತ ಆಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.
(ಪೆÇೀಟೋ ಶೀರ್ಷಿಕೆ: ಕರ್ನಾಟಕದ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ರೂ 5,300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಲೋಕಸಭೆಯಲ್ಲಿ ಭೇಟಿಯಾಗಿ ಅಭಿನಂದಿಸಿದರು).


(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ
[01/02, 6:40 PM] Bjp Media: ದೇಶದ ಭವಿಷ್ಯಕ್ಕೆ ಅಮೃತವಾಗಲಿರುವ ಅಮೃತಕಾಲದ ಬಜೆಟ್...
1-2-2023
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ


ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಕೂಡ ದೂರದೃಷ್ಟಿ, ದೇಶದ ಹಿತದೃಷ್ಟಿಯುಳ್ಳ ಬಜೆಟ್ ಮಂಡಿಸಿದ್ದಾರೆ. ಬಜೆಟ್‍ನಲ್ಲಿ 7 ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಕಟ್ಟಕಡೆಯ ಮನುಷ್ಯನಿಗೆ ತಲುಪುವ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡಿದ್ದು, ಮನೆಮನೆಗೆ ನಳ್ಳಿ ನೀರು (ಹರ್ ಘರ್ ಜಲ್) ಯೋಜನೆಯ ವೇಗವರ್ಧನೆಗೆ ಕಾರಣ ಆಗಲಿದೆ ಎಂದು ತಿಳಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಕೃತಜ್ಞತೆಗಳು ತಿಳಿಸಿದ್ದಾರೆ.
ಇಂದಿನ ಕೇಂದ್ರ ಬಜೆಟ್ ಯುವ ಸಮುದಾಯ, ಮೂಲಸೌಕರ್ಯ, ಪರಿಸರ ಸ್ನೇಹಿ ಬಜೆಟ್ ಆಗಿದೆ. ಆದಾಯ ತೆರಿಗೆ ರಿಯಾಯಿತಿ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ನೀಡಲಾಗಿದೆ. ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದ್ದು, ಪ್ರಧಾನ ಮಂತ್ರಿಗಳಿಗೆ, ಕೇಂದ್ರ ಹಣಕಾಸು ಖಾತೆ ಸಚಿವೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿ.ಟಿ ರವಿ ಅವರು ಹೇಳಿದ್ದಾರೆ.
ಒಬ್ಬ ಸ್ಟೇಟ್ಸ್ ಮ್ಯಾನ್ ಅಧಿಕಾರ ನಡೆಸುತ್ತಿರುವುದಕ್ಕೆ ಜಗತ್ತಿನಲ್ಲಿ ನಾವು ಗೌರವ ಸಂಪಾದಿಸುವ ಸ್ಥಿತಿಗೆ ಬಂದಿದ್ದೇವೆ. ಹಾಗೆ ಆಗದೇ ಇದ್ದಿದ್ದರೆ ನಾವು ಕೂಡ ಪಾಕಿಸ್ಥಾನದ ರೀತಿಯಲ್ಲಿ ಭಿಕ್ಷೆ ಎತ್ತುವ ಸ್ಥಿತಿಗೆ ಬರುತ್ತಿದ್ದೆವು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರದ ಕಳೆದ ಒಂಬತ್ತು ಬಜೆಟ್‍ಗಳನ್ನು ಗಮನಿಸಿದರೆ ದೂರದೃಷ್ಟಿ, ಆತ್ಮನಿರ್ಭರ ಭಾರತ್ ಕಡೆ ಹೆಜ್ಜೆ ಹಾಕುವ ಬಜೆಟ್ ಇದು, ಪ್ರಧಾನಿ ಮೋದಿಜಿ, ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುತ್ತೇನೆ ಎಂದು ಸಿ.ಟಿ ರವಿ ಅವರು ಹೇಳಿದ್ದಾರೆ.


(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
   ಬಿಜೆಪಿ ಕರ್ನಾಟಕ

Post a Comment

Previous Post Next Post